Tag: Mahisha Dasara

  • ಮೈಸೂರಿನಲ್ಲಿ ಮಹಿಷ ದಸರಾಕ್ಕೆ ಅನುಮತಿ

    ಮೈಸೂರಿನಲ್ಲಿ ಮಹಿಷ ದಸರಾಕ್ಕೆ ಅನುಮತಿ

    ಮೈಸೂರು: ಭಾರೀ ಚರ್ಚೆಯಾಗುತ್ತಿರುವ ಮಹಿಷ ದಸರಾದ (Mahisha Dasara) ವೇದಿಕೆ ಕಾರ್ಯಕ್ರಮಕ್ಕೆ ಮಾತ್ರ ಪೊಲೀಸ್ ಇಲಾಖೆ ಅನುಮತಿ ನೀಡಿದೆ. ಅಲ್ಲದೇ ಕಾರ್ಯಕ್ರಮದಲ್ಲಿ ಯಾವುದೇ ಪ್ರಚೋದನಕಾರಿ ಭಾಷಣ ಮಾಡದಂತೆ ಪೊಲೀಸ್ ಆಯುಕ್ತ ಡಾ.ರಮೇಶ್ ಎಚ್ಚರಿಕೆ ನೀಡಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪುರಭವನದಲ್ಲಿ ಬೆ.10 ರಿಂದ 12ರವರೆಗೆ ಮಹಿಷ ದಸರಾ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಪುರಭವನದ ಒಳಗಿನ ಸಭಾಂಗಣ ಬಿಟ್ಟು ನಗರದ ಎಲ್ಲಾ ಕಡೆ 144 ಸೆಕ್ಷನ್ ಜಾರಿ ಮಾಡಲಾಗುತ್ತದೆ. ಇದರಿಂದಾಗಿ ಮೆರವಣಿಗೆ ಹಾಗೂ ಬೈಕ್ ರ‍್ಯಾಲಿ ನಡೆಸಬಾರದು. ಪರ ಹಾಗೂ ವಿರೋಧ ಘೋಷಣೆ ಕೂಗಬಾರದು. ಅಲ್ಲದೇ ಪ್ರಚೋದನಕಾರಿ ಹೇಳಿಕೆ ನೀಡಬಾರದು ಎಂದಿದ್ದಾರೆ. ಇದನ್ನೂ ಓದಿ: ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡ ಬಿಜೆಪಿ ಮಾಜಿ ಶಾಸಕ ರಾಮಪ್ಪ ಲಮಾಣಿ

    ಭದ್ರತೆಗೆ 2 ಸಾವಿರ ಪೊಲೀಸರ (Police) ನಿಯೋಜನೆ ಮಾಡಲಾಗಿದೆ. ಮಹಿಷ ದಸರಾ ವಿಚಾರವಾಗಿ ಪ್ರಚೋದನಕಾರಿಯಾಗಿ ಹೇಳಿಕೆ ಹಾಗೂ ಪೋಸ್ಟ್ ಹಾಕಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಮಹಿಷಾ ದಸರಾ ಪರ, ವಿರೋಧ – ಮೈಸೂರಿನಲ್ಲಿ ಸೆಕ್ಷನ್ 144 ಜಾರಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಹಿಷಾ ದಸರಾ ಪರ, ವಿರೋಧ – ಮೈಸೂರಿನಲ್ಲಿ ಸೆಕ್ಷನ್ 144 ಜಾರಿ

    ಮಹಿಷಾ ದಸರಾ ಪರ, ವಿರೋಧ – ಮೈಸೂರಿನಲ್ಲಿ ಸೆಕ್ಷನ್ 144 ಜಾರಿ

    ಮೈಸೂರು: ಮಹಿಷಾ ದಸರಾ (Mahisha Dasara) ಆಚರಣೆ ವಿಚಾರವಾಗಿ ಪರ ವಿರೋಧಗಳು ವ್ಯಕ್ತವಾಗುತ್ತಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೈಸೂರು (Mysuru) ನಗರ ಪೊಲೀಸ್ ಆಯುಕ್ತರು ಸೆಕ್ಷನ್ 144 ಜಾರಿ ಮಾಡಿದ್ದಾರೆ.

    ಚಾಮುಂಡಿ ಬೆಟ್ಟ (Chamundi Hill) ಸೇರಿ (ಟೌನ್ ಹಾಲ್ ಹೊರತುಪಡಿಸಿ) ಮೈಸೂರು ನಗರದ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಿ ಪೊಲೀಸ್ ಕಮೀಷನರ್ ರಮೇಶ್.ಬಿ ಆದೇಶಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಅ.12ರಂದು ಮಧ್ಯರಾತ್ರಿ 12 ಗಂಟೆಯಿಂದ ಅ.14ರ ಬೆಳಗ್ಗೆ 06 ಗಂಟೆಯವರೆಗೆ ನಿರ್ಬಂಧ ಹೇರಲಾಗಿದೆ. ಈ ಹಿನ್ನೆಲೆ ಯಾವುದೇ ಸಭೆ-ಸಮಾರಂಭ, ರ‍್ಯಾಲಿ ನಡೆಸುವುದನ್ನು ನಿಷೇಧಿಸಲಾಗಿದೆ. ಇದನ್ನೂ ಓದಿ: ಭಾಷಣದ ವೇಳೆ Emergency Alert Message- ಬಿಜೆಪಿಯವ್ರೂ ಅಲರ್ಟ್ ಆಗ್ಲಿ ಅಂತಾ ನಕ್ಕ ಡಿಕೆಶಿ

    ಯಾವುದೇ ಸಂಘಟನೆ ಅಥವಾ ಸಾರ್ವಜನಿಕರು ಈ ಆದೇಶವನ್ನು ಉಲ್ಲಂಘಿಸಿ ಸಭೆ-ಸಮಾರಂಭ ಮೆರವಣಿಗೆ, ಪ್ರತಿಭಟನೆ, ರ‍್ಯಾಲಿ ನಡೆಸಲು ಪ್ರಯತ್ನಿಸಿದಲ್ಲಿ ಅಲ್ಲಿ ಸೇರಿರುವ ಜನರ ಕೂಟವನ್ನು ಅಕ್ರಮ ಕೂಟವೆಂದು ಪರಿಗಣಿಸಿ, ಆದೇಶ ಉಲ್ಲಂಘನೆ ಕುರಿತಂತೆ ಕಾನೂನು ಕ್ರಮಕೈಗೊಳ್ಳಲಾಗುವುದು. ಈ ಆದೇಶವು ಮದುವೆ ಸಮಾರಂಭಗಳಿಗೆ ಮತ್ತು ಶವಸಂಸ್ಕಾರಗಳಿಗೆ ಹಾಗೂ ಶಾಲಾ, ಕಾಲೇಜು ಮತ್ತು ಪರೀಕ್ಷೆಗಳಿಗೆ ತೆರಳುವವರಿಗೆ ಅನ್ವಯಿಸುವುದಿಲ್ಲ. ಇದನ್ನೂ ಓದಿ: ನಗರಸಭೆ ಕಚೇರಿಯಲ್ಲೇ ಕೈ ಕೈ ಮಿಲಾಯಿಸಿದ ಸದಸ್ಯರು

    ಯಾವುದೆಲ್ಲಾ ನಿಷೇಧ?
    1) ಯಾವುದೇ ಮೆರವಣಿಗೆ, ಪ್ರತಿಭಟನೆ, ಬೈಕ್ ರ‍್ಯಾಲಿ  ನಡೆಸುವುದು.
    2) ಪರ ವಿರೋಧ ಘೋಷಣೆ ಕೂಗುವುದು.
    3) ಪಟಾಕಿ ಸಿಡಿಸಿ ಸಂಭ್ರಮಾಚರಣೆ ಆಚರಿಸುವುದು.
    4) 5 ಜನರಿಗಿಂತ ಹೆಚ್ಚಿನ ಜನ ಗುಂಪು ಸೇರುವುದು.
    5) ಯಾವುದೇ ಬಹಿರಂಗ ಸಭೆ ಸಮಾರಂಭಗಳನ್ನು ನಡೆಸುವುದು.
    6) ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಪ್ರಚಾರ, ಧ್ವನಿವರ್ಧಕ ಬಳಸುವುದು, ಫ್ಲೆಕ್ಸ್ ಬ್ಯಾನರ್ ಅಳವಡಿಸುವುದು, ಕರಪತ್ರಗಳನ್ನು ಹಂಚುವುದು, ಮೂರ್ತಿ ಮೆರವಣಿಗೆ ಮಾಡುವುದು. ಇದನ್ನೂ ಓದಿ: ಕೆಲಸ ಮಾಡ್ಬೇಕು ಅಂದ್ರೆ ವೋಟ್ ಹಾಕ್ಬೇಕು ಅನ್ನೋದರಲ್ಲಿ ತಪ್ಪೇನಿದೆ?: ಬಾಲಕೃಷ್ಣ ಸಮರ್ಥನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಾಮುಂಡೇಶ್ವರಿ ಬಳಿ ಬೇಡಿಕೊಳ್ಳುವ ಪ್ರತಿಯೊಬ್ಬರು ಮಹಿಷಾ ದಸರಾ ವಿರೋಧ ಮಾಡಬೇಕು: ಪ್ರತಾಪ್ ಸಿಂಹ

    ಚಾಮುಂಡೇಶ್ವರಿ ಬಳಿ ಬೇಡಿಕೊಳ್ಳುವ ಪ್ರತಿಯೊಬ್ಬರು ಮಹಿಷಾ ದಸರಾ ವಿರೋಧ ಮಾಡಬೇಕು: ಪ್ರತಾಪ್ ಸಿಂಹ

    ಮೈಸೂರು: ಮಹಿಷಾ ದಸರಾ (Mahisha Dasara) ಹೆಸರಿನಲ್ಲಿ ತಾಯಿ ಚಾಮುಂಡೇಶ್ವರಿಗೆ ಅವಾಚ್ಯ ಶಬ್ದಗಳಿಂದ ಅಪಮಾನ ಮಾಡುತ್ತಾರೆ. ಈ ಕಾರಣಕ್ಕೆ ನಾನು ಮಹಿಷಾ ದಸರಾ ವಿರೋಧ ಮಾಡುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ (Pratap Simha) ಹೇಳಿದ್ದಾರೆ.

    ಫೇಸ್ ಬುಕ್ ಲೈವ್‌ನಲ್ಲಿ ಮಹಿಷಾ ದಸರಾ ಆಚರಣೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸಂಸದ ಪ್ರತಾಪ್ ಸಿಂಹ, ಬೆಟ್ಟಕ್ಕೆ ಬಂದು ಮಹಿಷಾ ಒಳ್ಳೆಯವನು ಅಂದಷ್ಟೇ ಹೇಳಿ ಹೋಗುವುದಿಲ್ಲ. ಚಾಮುಂಡಿಗೆ ರವಿಕೆ ಹಾಕೋನು ಗಂಡಸು, ಸೀರೆ ಉಡಿಸೋನು ಗಂಡಸು ಅಂತ ಕೆಟ್ಟದಾಗಿ ಮಾತನಾಡುತ್ತಾರೆ. ನಿಮ್ಮ ತಾಯಿ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ ಯಾರಾದರೂ ಒಪ್ಪಿಕೊಳ್ಳುತ್ತೀರಾ? ಮಹಿಷಾನನ್ನು ಒಳ್ಳೆಯವನನ್ನಾಗಿ ಮಾಡಲು ಚಾಮುಂಡೇಶ್ವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಇಂತಹವರನ್ನು ತಡೆಯಲು ನಾನು ವಿರೋಧ ಮಾಡುತ್ತಿದ್ದೇನೆ ಎಂದರು.

    ಚಾಮುಂಡೇಶ್ವರಿಗೆ ಹೋಗಿ ಬೇಡಿಕೊಳ್ಳುವ ಪ್ರತಿಯೊಬ್ಬರು ಮಹಿಷಾ ದಸರಾಕ್ಕೆ ವಿರೋಧ ಮಾಡಬೇಕು. ಇಲ್ಲದಿದ್ದರೆ ತಾಯಿ ಚಾಮುಂಡಿ ಮುಂದೆ ಬೇಡಿಕೊಳ್ಳಲು ನಿಮಗೆ ಯಾವ ನೈತಿಕ ಹಕ್ಕು ಇರುವುದಿಲ್ಲ. ನನ್ನ ದಲಿತ ವಿರೋಧಿ ಅಂತ ಹೇಳುತ್ತಾರೆ. ವಿಚಾರ ಇಲ್ಲದಾಗ ಈ ರೀತಿ ಉಗುಳುತ್ತಾರೆ. ಮಹಿಷಾನ ಬಗ್ಗೆ ಯಾವುದೇ ದಾಖಲೆ ಇಲ್ಲ. ಈಗ ದಲಿತ ಅಂತ ಬೋರ್ಡ್ ಹಾಕಿಕೊಂಡು ಓಡಾಡುತ್ತಿರೋರು ಯಾರು ಅಂತಾನು ಮೈಸೂರಿಗರಿಗೆ ಗೊತ್ತು ಎಂದು ಗುಡುಗಿದರು. ಇದನ್ನೂ ಓದಿ: ರಾಜ್ಯದಲ್ಲಿ ತೀವ್ರಗೊಂಡ ವಿದ್ಯುತ್ ಅಭಾವ- ಸರ್ಕಾರದಿಂದ ಸದ್ದಿಲ್ಲದೇ ಲೋಡ್ ಶೆಡ್ಡಿಂಗ್

    ಅಶೋಕ್ ಪುರಂನ ಪ್ರತಿಯೊಬ್ಬರ ಮನೆಯಲ್ಲಿರೋದು ಚಾಮುಂಡೇಶ್ವರಿ ಪೋಟೋ. ಮಹಿಷಾನ ಪೋಟೋ ಅಲ್ಲ. ದಲಿತರೆ ಚಾಮುಂಡಿ ಹಬ್ಬವನ್ನು ಜಾಸ್ತಿ ಮಾಡೋದು. ಈಗ ರಾಜಕೀಯಕ್ಕೆ ದಲಿತ ವಿರೋಧಿ ಅನ್ನುತ್ತಾರೆ. ಮಹಿಷಾ ಯಾವಾಗ ದಲಿತನಾದ? ಮಹಿಷಾ ಬೌದ್ಧ ಬಿಕ್ಕು ಆಗಿದ್ದ ಅಂತ ಹೇಳುತ್ತಾರೆ. ತಾಯಿ ಚಾಮುಂಡಿ ಉಲ್ಲೇಖ ಬರೋದು ಕೃತ ಯುಗದಲ್ಲಿ. ಬುದ್ಧ ಬಂದಿದ್ದು ಕಲಿಯುಗದಲ್ಲಿ. ಅಶೋಕ ಇದ್ದಿದ್ದು ಕ್ರಿ.ಪೂ. 3 ನೇ ಶತಮಾನದಲ್ಲಿ. ಇವರು ಹೇಳುವ ವಿಚಾರ ಸಮಯಕ್ಕೆ ತಾಳ ಮೇಳ ಇಲ್ಲ. ಇದೆಲ್ಲ ಕಪೋಲ ಕಲ್ಪಿತ ವಿಚಾರಗಳು ಎಂದರು.

    ಹಿಂದೂ ಧರ್ಮ ಒಡೆಯುವ ಪ್ರಯತ್ನಕ್ಕೆ ಇದೆಲ್ಲ ಮಾಡುತ್ತಿದ್ದಾರೆ. ಕೆಲವರು ನನ್ನ ಬಗ್ಗೆ ವಿರೋಧ ಮಾಡುತ್ತಿದ್ದಾರೆ. ಇದೆಲ್ಲ ವೈಯಕ್ತಿಕ ಲಾಭ ನಷ್ಟದಿಂದ ಆಗಿರೋದು. ನಿಜವಾದ ದಲಿತ ವಿರೋಧಿಗಳು ನೀವುಗಳು. ಲಲಿತ ನಾಯಕರಿಂದ ಉದ್ಘಾಟನೆ ಮಾಡಿಸಲು ಮುಂದಾದ್ರಿ. ಆಕೆಯ ಪುತ್ರ ಅಂಬೇಡ್ಕರ್ ಪುತ್ಥಳಿಗೆ ಮದ್ಯ ಕುಡಿಸಿದ್ದ. ನೀವು ಅಂಬೇಡ್ಕರ್ ವಾದಿಗಳು ಅಂತೀರಾ. ಆದರೆ ಅಂಬೇಡ್ಕರ್ ಪುತ್ಥಳಿಗೆ ಹೆಂಡ ಕುಡಿಸಿದ ತಾಯಿಯಿಂದ ಉದ್ಘಾಟನೆ ಮಾಡಿಸುತ್ತಿದ್ದೀರಿ ಎಂದು ಕಿಡಿಕಾರಿದರು. ಇದನ್ನೂ ಓದಿ: Breaking: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ 15 ಕಡೆ IT ದಾಳಿ

    ಸುಮ್ಮನೆ ನನ್ನ ದಲಿತ ವಿರೋಧಿ ಅಂತ ಹೇಳೋದು ಬೇಡ. ಮೈಸೂರಿಗರ ಬಳಿ ಹೋರಾಟದ ಗುಣ ಇಲ್ಲ ಅಂತ ಅಂದುಕೊಳ್ಳಬೇಡಿ. ನಿಮ್ಮ ಮನೆಯಲ್ಲಿ ನಿಮ್ಮ ಹೆಂಡತಿ ಮಹಿಷಾ ಪೋಟೋ ಇಟ್ಟುಕೊಳ್ಳೊಕೆ ಬಿಡ್ತಾರ? ನಿಮ್ಮ ಮನೆಯಲ್ಲೇ ಬೇಕಾದರೆ ಮಹಿಷಾ ದಸರಾ ಮಾಡಿಕೊಳ್ಳಿ. ಬೆಟ್ಟಕ್ಕೆ ಹೋಗಿ ಚಾಮುಂಡಿಗೆ ಅಪಮಾನ ಮಾಡಬೇಕು ಅಂತ ನೀವು ಅಲ್ಲಿ ಹೋಗೋದು. ಕೆಲವರಿಗೆ ಅರ್ಥವಾಗಬೇಕು ಅಂತ ನಿಮ್ಮ ಭಾಷೆಯಲ್ಲಿ ಹೇಳಿರೋದು. ಇಂತಹವರನ್ನು ವಿರೋಧಿಸದಿದ್ದರೆ ಮುಂದೆ ಇಸ್ರೇಲ್ ಪರಿಸ್ಥಿತಿ ನಿರ್ಮಾಣ ವಾಗುತ್ತೆ ಎಂದು ಹೇಳಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಧಾರ್ಮಿಕ ಜಿಲ್ಲೆ ಉಡುಪಿಯಲ್ಲಿ ಮಹಿಷಾ ದಸರಾ ಯಾಕೆ?: ಶೋಭಾ ಕರಂದ್ಲಾಜೆ

    ಧಾರ್ಮಿಕ ಜಿಲ್ಲೆ ಉಡುಪಿಯಲ್ಲಿ ಮಹಿಷಾ ದಸರಾ ಯಾಕೆ?: ಶೋಭಾ ಕರಂದ್ಲಾಜೆ

    ಉಡುಪಿ: ದಸರಾದಲ್ಲಿ ದೇವಿಯರನ್ನು ನಾವು ಆರಾಧನೆ ಮಾಡುತ್ತೇವೆ. ಮಹಿಷಾ ದಸರಾ ಮೂಲಕ ನಮ್ಮ ನಂಬಿಕೆಯನ್ನು ಪ್ರಶ್ನೆ ಮಾಡುವ ಶಕ್ತಿಗಳು ಹುಟ್ಟಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವೆ ಸಂಸದೆ ಶೋಭಾ ಕರಂದ್ಲಾಜೆ (Shobha karandlaje) ಹೇಳಿದ್ದಾರೆ.

    ಉಡುಪಿಯಲ್ಲಿ (Udupi) ಮಾತನಾಡಿದ ಅವರು, ನಮ್ಮ ನಂಬಿಕೆ ನಮ್ಮದು ದೇಶದಲ್ಲಿ ಎಲ್ಲರಿಗೂ ಅವಕಾಶ ಇದೆ. ಆಸ್ತಿಕರಿಗೂ ನಾಸ್ತಿಕರಿಗೂ ನಮ್ಮ ದೇಶದಲ್ಲಿ ಅಭಿಪ್ರಾಯ ವ್ಯಕ್ತಪಡಿಸಬಹುದು. ವಿಕೃತವಾದ ಮಹಿಷಾ ದಸರಾದಿಂದ ಹಿಂದುಗಳ ಭಾವನೆಗೆ ಧಕ್ಕೆಯಾಗಯತ್ತದೆ ಎಂದರು. ಯಾವ ಆಧಾರದಲ್ಲಿ ಮಹಿಷಾ ದಸರಾ ಆಚರಣೆ ಮಾಡುತ್ತೀರಿ ಗೊತ್ತಿಲ್ಲ, ಇದರ ಹಿಂದೆ ಇರುವ ಶಕ್ತಿ ಯಾವುದು ಗೊತ್ತಿಲ್ಲ.. ಆದರೆ ಉಡುಪಿ ಎಂಬ ಧಾರ್ಮಿಕ ಜಿಲ್ಲೆಯಲ್ಲಿ ಮಹಿಷಾ ದಸರ ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಡಿಕೆಶಿ ಕಾಲಿಗೆ ಬಿದ್ದ ಶಾಸಕ ಮುನಿರತ್ನ

    ಶ್ರೀ ಕೃಷ್ಣ, ಮಹಾಕಾಳಿ -ಕೊಲ್ಲೂರು ಮೂಕಾಂಬಿಕೆ ಇರುವ ನಾಡು ಉಡುಪಿ. ನಿಮ್ಮ ಮಾನಸಿಕತೆಯನ್ನು ಜಿಲ್ಲೆಯ ಜನ ಅರ್ಥ ಮಾಡಿಕೊಳ್ಳುತ್ತಾರೆ. ನಿಮ್ಮ ವಿಕೃತಿಯನ್ನು ನಿಲ್ಲಿಸಿ ಆಸ್ತಿಕರ ನಂಬಿಕೆಗೆ ಬೆಲೆಕೊಡಿ. ದೇವಿ ದುಷ್ಟರನ್ನು ರಾಕ್ಷಸರನ್ನು ಸಂಹಾರ ಮಾಡಿದವಳು ಎಂಬ ನಂಬಿಕೆಯಿದೆ. ದುಷ್ಟರ ಸಂಹಾರ ಮಾಡಲು ನಿಮಗೆ ಏನು ಸಮಸ್ಯೆ ಆಗಿದೆ ನನಗೆ ಅರ್ಥವಾಗುತ್ತಿಲ್ಲ. ಮಹಿಷಾ ದಸರ ಮಾಡುವವರು ಮರು ಚಿಂತನೆ ಮಾಡಿ ಎಂದು ಶೋಭಾ ಕರಂದ್ಲಾಜೆ ಹೇಳಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಹಿಷ ದಸರಾ, ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮಗಳಿಗೆ ಬ್ರೇಕ್

    ಮಹಿಷ ದಸರಾ, ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮಗಳಿಗೆ ಬ್ರೇಕ್

    ಮೈಸೂರು: ಮಹಿಷ ದಸರಾ, ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮಗಳಿಗೆ ಪೊಲೀಸ್‌ ಇಲಾಖೆ ಬ್ರೇಕ್‌ ಹಾಕಿದೆ. ಎರಡು ಕಾರ್ಯಕ್ರಮಗಳಿಗೂ ಇಲಾಖೆ ಅನುಮತಿ ನಿರಾಕರಿಸಿದೆ.

    ಇದೇ ತಿಂಗಳ 13 ರಂದು ಮಹಿಷ ದಸರಾ ಆಚರಣೆಗೆ ಮಹಿಷ ದಸರಾ ಆಚರಣಾ ಸಮಿತಿ ಕರೆ ಕೊಟ್ಟಿತ್ತು. ಚಾಮುಂಡಿ ಬೆಟ್ಟಕ್ಕೆ ತೆರಳಿ ಮಹಿಷನ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಮಹಿಷ ದಸರಾಗೆ ಚಾಲನೆ ನೀಡಲು ನಿರ್ಧರಿಸಿತ್ತು. ಇದನ್ನೂ ಓದಿ: ಮಹಿಷ ದಸರಾ ಆಚರಣೆಗೆ 50 ವರ್ಷ; ಚರ್ಚೆ ಹುಟ್ಟುಹಾಕಿದ ಆಹ್ವಾನ ಪತ್ರಿಕೆ

    ಮಹಿಷ ದಸರಾ ವಿರುದ್ಧ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದರು. ಮಹಿಷ ದಸರಾ ಆಚರಣೆ ವಿರೋಧಿಸಿ ಅದೇ ದಿನ (ಅ.13) ಚಲೋ ಚಾಮುಂಡಿ ಬೆಟ್ಟ ಹಮ್ಮಿಕೊಳ್ಳಲಾಗಿದೆ. ಪ್ರತಾಪ್‌ ಸಿಂಹ ನೇತೃತ್ವದಲ್ಲಿ ಬಿಜೆಪಿ ಮೈಸೂರಿನಲ್ಲಿ ಈ ಚಲೋ ಚಾಮುಂಡಿ ಬೆಟ್ಟ ಕರೆ ನೀಡಿತ್ತು.

    ಎರಡು ಕಾರ್ಯಕ್ರಮದ ಆಯೋಜಕರು ಪೊಲೀಸ್ ಅನುಮತಿ ಕೇಳಿದ್ದರು. ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡೂ ಕಾರ್ಯಕ್ರಮಗಳಿಗೂ ಪೊಲೀಸ್‌ ಇಲಾಖೆ ಅನುಮತಿ ನಿರಾಕರಿಸಿದೆ. ಇದನ್ನೂ ಓದಿ: ವೀರಪ್ಪನ್‌ ದೇವರು, ಮಲೆ ಮಹದೇಶ್ವರ ದೆವ್ವ ಅಂತಾರೆ: ಪ್ರತಾಪ್ ಸಿಂಹ ಕಿಡಿ

    ಎರಡೂ ಕಾರ್ಯಕ್ರಮಗಳಿಗೆ ಅನುಮತಿ ನೀಡಿಲ್ಲ. ದಸರಾ ಸಂದರ್ಭದಲ್ಲಿ ಮೈಸೂರು ನಗರದ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಕಾರ್ಯಕ್ರಮಗಳಿಗೆ ಅನುಮತಿ ನಿರಾಕರಿಸಲಾಗಿದೆ ಎಂದು ಮೈಸೂರು ನಗರದ ಪೊಲೀಸ್ ಅಯುಕ್ತ ರಮೇಶ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವೀರಪ್ಪನ್‌ ದೇವರು, ಮಲೆ ಮಹದೇಶ್ವರ ದೆವ್ವ ಅಂತಾರೆ: ಪ್ರತಾಪ್ ಸಿಂಹ ಕಿಡಿ

    ವೀರಪ್ಪನ್‌ ದೇವರು, ಮಲೆ ಮಹದೇಶ್ವರ ದೆವ್ವ ಅಂತಾರೆ: ಪ್ರತಾಪ್ ಸಿಂಹ ಕಿಡಿ

    – ಸಂಘರ್ಷಕ್ಕೂ ಸೈ.. ಹೊಡೆದಾಟಕ್ಕೂ ಸೈ ಎಂದ ಸಂಸದ
    – ಮಹಿಷ ದಸರಾ ವಿರುದ್ಧ ಆಕ್ರೋಶ

    ಮೈಸೂರು: ಮಹಿಷಾ ದಸರಾದಂತಹ (Mahisha Dasara) ವಿಕೃತಿಗಳನ್ನು ಈಗಲೇ ಸದೆ ಬಡಿಯಬೇಕು. ಇಲ್ಲದಿದ್ದರೆ ವೀರಪ್ಪನ್ ನಮ್ಮ ದೇವರು. ಮಲೆ ಮಹದೇಶ್ವರ ದೆವ್ವ ಎನ್ನುತ್ತಾರೆ ಎಂದು ಮಹಿಷ ದಸರಾ ಆಚರಿಸುವವರ ವಿರುದ್ಧ ಸಂಸದ ಪ್ರತಾಪ್ ಸಿಂಹ (Pratap Simha) ಕಿಡಿಕಾರಿದರು.

    ನಗರದಲ್ಲಿ ಚಾಮುಂಡಿ ಬೆಟ್ಟ ಚಲೋ (Chamundi Betta Chalo) ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಮಹಿಷ ದಸರಾದಂಥ ವಿಕೃತಿಗಳನ್ನು ಈಗಲೇ ಸದೆಬಡಿಯಬೇಕು. ಇಲ್ಲದೆ ಇದ್ದರೆ ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗಿ ವೀರಪ್ಪನ್ ನಮ್ಮ ದೇವರು. ನಮ್ಮ ಮೂಲ ಪುರುಷ ಅಂತ ಹೇಳಿ ಮಲೈ ಮಹದೇಶ್ವರನನ್ನು ದೆವ್ವ ಮಾಡುತ್ತಾರೆ. ವೀರಪ್ಪನ್ ನಮ್ಮ ಮೂಲ ನಿವಾಸಿ. ಅವನು ಪ್ರಕೃತಿ ರಕ್ಷಕ ಅಂತ ಕಥೆ ಕಟ್ಟಿ ಮಲೆ ಮಹದೇಶ್ವರನನ್ನು ದೆವ್ವ ಮಾಡಿ ಬಿಡುತ್ತಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಮಹಿಷ ದಸರಾ ಆಚರಣೆಗೆ 50 ವರ್ಷ; ಚರ್ಚೆ ಹುಟ್ಟುಹಾಕಿದ ಆಹ್ವಾನ ಪತ್ರಿಕೆ

    ಅ.13 ರಂದು ಬೆಳಗ್ಗೆ 8 ಗಂಟೆಗೆ ಚಲೋ ಚಾಮುಂಡಿ ಬೆಟ್ಟ ಜಾಥಾ ನಡೆಸಲಾಗುವುದು. ಐದು ಸಾವಿರಕ್ಕೂ ಹೆಚ್ಚು ಜನ ಜಾಥಾದಲ್ಲಿ ಭಾಗಿಯಾಗಲಿದ್ದಾರೆ. ಚಾಮುಂಡಿಗೆ ಪೂಜೆ ಮಾಡಿ ಮಹಿಷಾಸುರನ ಮುಂದೆ ಕುಳಿತುಕೊಳ್ಳುತ್ತೇವೆ ಎಂದು ತಿಳಿಸಿದರು.

    ಬಿ.ಟಿ.ಲಲಿತಾ ನಾಯಕ್ ಅವರ ಮಗ ಅಂಬೇಡ್ಕರ್ ಪ್ರತಿಮೆಗೆ ಮದ್ಯ ಹಾಕಿದ್ದ. ಲಲಿತಾ ನಾಯಕ್ ಸಚಿವೆ ಆಗಿದ್ದಾಗ ಆಕೆ ಮಗ ಅಂಬೇಡ್ಕರ್ ಪ್ರತಿಮೆಗೆ ಮದ್ಯ ಕುಡಿಸಲು ಹೋಗಿದ್ದ. ಅಂಬೇಡ್ಕರ್‌ಗೆ ಅಪಮಾನ ಮಾಡಿದ ವ್ಯಕ್ತಿಯ ತಾಯಿಯನ್ನು ಮಹಿಷ ದಸರಾ ಉದ್ಘಾಟನೆಗೆ ಕೆಲವು ದಲಿತರು ಕರೆದುಕೊಂಡು ಬರುತ್ತಿರುವುದು ಸರಿನಾ? 50 ವರ್ಷದಿಂದ ಯಾವತ್ತೂ ಮಹಿಷಾ ದಸರಾ ಎಲ್ಲಿ ಮಾಡಿದ್ದಾರೆ? ಯಾರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಜಂಬೂ ಸವಾರಿಗೆ ಬರಲಿದ ಗತವೈಭವ – ರಾಜ ಪೋಷಾಕಿನಲ್ಲಿ ಪೊಲೀಸರು

    ಸಂಘರ್ಷಕ್ಕೂ ಸೈ ಹೊಡೆದಾಟಕ್ಕೂ ಸೈ. ಸಂಘರ್ಷಕ್ಕೆ ಸಿದ್ಧರಾಗಿಯೇ ಚಾಮುಂಡಿ ಬೆಟ್ಟ ಚಲೋ ಮಾಡುತ್ತಿರುವುದು. ಸಂಘರ್ಷ ಆದರೂ ಪರವಾಗಿಲ್ಲ. ಇವರನ್ನು ಹೊಸಕಿ ಹಾಕಲೇಬೇಕು. ನಾವು ತೀರ್ಮಾನ ಮಾಡಿಯೇ ಚಾಮುಂಡಿ ಚಲೋ ಮಾಡುತ್ತಿರುವುದು ಎಂದು ಸ್ಪಷ್ಟಪಡಿಸಿದರು.

    ದೇಶ, ಧರ್ಮ ರಕ್ಷಣೆಗೆ ನಾವು ಸಂಘರ್ಷಕ್ಕೆ ಸಿದ್ಧ. ನಮ್ಮ ಪಕ್ಷವೂ ಅದೇ ರೀತಿ ಬೆಳೆದಿದ್ದು, ಚಾಮುಂಡಿ ತಾಯಿಗೆ ಅವಮಾನ ಮಾಡುವುದನ್ನು ನಿಲ್ಲಿಸಲು ಸಂಘರ್ಷ ಹಾಗೂ ಹೊಡೆದಾಟಕ್ಕೂ ಸಿದ್ಧ. ಧರ್ಮೋರಕ್ಷತಿ ರಕ್ಷಿತಃ ಎಂಬ ಮಾತನ್ನು ಉಲ್ಲೇಖಿಸಿ ಹೇಳಿದರು.

    ಚೀನಾ, ಪಾಕಿಸ್ತಾನ ಗಡಿಯಲ್ಲಿ ಸಂಘರ್ಷವನ್ನೇ ಮಾಡಬೇಕು. ಇಲ್ಲಿ ಧರ್ಮ ಉಳಿಸಲು ಸಂಘರ್ಷ ಮಾಡಬೇಕು. ಸಂಘರ್ಷ ಮಾಡಿಯೇ ನಾವು ಪಕ್ಷ ಕಟ್ಟಿರುವುದು. ಧರ್ಮ ರಕ್ಷಣೆಗೆ ಸಂಘರ್ಷ ತಪ್ಪಲ್ಲ ಎಂದರು. ಇದನ್ನೂ ಓದಿ: ಬಂದೇ ಬಿಡ್ತು ದಸರಾ – ಮೈಸೂರು ಅರಮನೆಯಲ್ಲಿ ಯಾವ ದಿನ ಏನು ಕಾರ್ಯಕ್ರಮ?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಹಿಷ ದಸರಾ ಆಚರಣೆಗೆ 50 ವರ್ಷ; ಚರ್ಚೆ ಹುಟ್ಟುಹಾಕಿದ ಆಹ್ವಾನ ಪತ್ರಿಕೆ

    ಮಹಿಷ ದಸರಾ ಆಚರಣೆಗೆ 50 ವರ್ಷ; ಚರ್ಚೆ ಹುಟ್ಟುಹಾಕಿದ ಆಹ್ವಾನ ಪತ್ರಿಕೆ

    ಮೈಸೂರು: ವಿವಾದಕ್ಕೆ ಕಾರಣವಾಗಿರುವ ಮಹಿಷ ದಸರಾ (Mahisha Dasara) ವಿಚಾರ ಈಗ ಮತ್ತೆ ಸುದ್ದಿಯಾಗಿದೆ. ಮಹಿಷ ದಸರಾ ಆಚರಣೆಗೆ 50 ವರ್ಷ ಎಂದು ದಿಢೀರನೇ ಇತಿಹಾಸ ಸೃಷ್ಟಿಸಲಾಗಿದೆ.

    ಹೌದು, ವಿಶ್ವವಿಖ್ಯಾತ ಮೈಸೂರು ದಸರಾಗೆ (Mysuru Dasara) ಪರ್ಯಾಯವೆಂಬಂತೆ ಇತ್ತೀಚಿನ ವರ್ಷಗಳಲ್ಲಿ ಪ್ರಗತಿಪರರ ನೇತೃತ್ವದಲ್ಲಿ ಮಹಿಷ ದಸರಾ ಆಚರಣೆ ನಡೆಸಲಾಗುತ್ತಿದೆ. ಕಳೆದ ವರ್ಷ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಮಹಿಷ ದಸರಾ ಆಚರಣೆಗೆ ಅವಕಾಶ ನೀಡಿರಲಿಲ್ಲ. ಆದರೆ ಈ ವರ್ಷ ಮೈಸೂರಿನಲ್ಲಿ ಮಹಿಷ ದಸರಾ ಆಚರಣೆಗೆ ವೇದಿಕೆ ಸಿದ್ಧವಾಗುತ್ತಿದೆ. 50ನೇ ವರ್ಷದ ಮಹಿಷ ದಸರಾ ಆಚರಣೆ ಎಂದು ಪೋಸ್ಟರ್ ಕೂಡ ಬಿಡುಗಡೆ ಮಾಡಲಾಗಿದೆ. ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಜಂಬೂ ಸವಾರಿಗೆ ಬರಲಿದ ಗತವೈಭವ – ರಾಜ ಪೋಷಾಕಿನಲ್ಲಿ ಪೊಲೀಸರು

    ಮಹಿಷ ದಸರಾ ಆಚರಣೆ ಸಮಿತಿಯಿಂದ ಈ ಪೋಸ್ಟರ್ ಬಿಡುಗಡೆ ಮಾಡಿದೆ. ಸದ್ಯ ಸಾಮಾಜಿಕ ಜಾಲಾತಾಣದಲ್ಲಿ ಈ ಪೋಸ್ಟರ್ ಹರಿದಾಡುತ್ತಿದೆ. ಈ ಬಾರಿ ಚಾಮುಂಡಿ ಬೆಟ್ಟದಲ್ಲೇ ಮಹಿಷ ದಸರಾಗೆ ಚಾಲನೆ ನೀಡಲು ಮೈಸೂರು ದಸರಾ ಆಚರಣಾ ಸಮಿತಿ ಸಜ್ಜಾಗಿದೆ. ವಿರೋಧಗಳನ್ನು ಬದಿಗೊತ್ತಿ ನಿಗದಿತ ಸ್ಥಳದಲ್ಲೇ ಮಹಿಷ ದಸರಾ ಆಚರಿಸಲು ಸಿದ್ಧವಾಗಿದೆ.

    ಆಹ್ವಾನ ಪತ್ರಿಕೆಯಲ್ಲಿ ಚಾಮುಂಡಿ ಬೆಟ್ಟದ ಮಹಿಷ ಮೂರ್ತಿಗೆ ಪುಷ್ಪಾರ್ಚನೆ ಬಗ್ಗೆ ಮಾಹಿತಿ ನೀಡಲಾಗಿದೆ. ಅಕ್ಟೋಬರ್ 13 ರಂದು ಮಹಿಷ ದಸರಾ ನಡೆಯಲಿದೆ. ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಉದ್ಘಾಟನೆ ಮಾಡಲಿದ್ದಾರೆ. ಇದನ್ನೂ ಓದಿ: ಬಂದೇ ಬಿಡ್ತು ದಸರಾ – ಮೈಸೂರು ಅರಮನೆಯಲ್ಲಿ ಯಾವ ದಿನ ಏನು ಕಾರ್ಯಕ್ರಮ?

    ಅಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಬೆಂಬಲಿಗರು ಪಾಲ್ಗೊಳ್ಳುವಂತೆ ಕರೆ ನೀಡಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಸಂಸದ ಪ್ರತಾಪ್ ಸಿಂಹ ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ಅಂದೇ ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

    2015 ರಲ್ಲಿ ಮಹಿಷ ದಸರಾ ವಿವಾದ ಪ್ರಾರಂಭವಾಯಿತು. ಐತಿಹಾಸಿಕ ಸಾಂಸ್ಕೃತಿಕ ಪರಂಪರೆಯಾದ ಮೈಸೂರು ದಸರಾಗೆ ಕಪ್ಪುಚುಕ್ಕೆ ಎಂದು ಕೆಲವರು ಮಹಿಷ ದಸರಾಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಮಹಿಷ ದಸರಾ ಪರವಾದಿಗಳು, ಮೈಸೂರು ಹಿಂದೆ ಮಹಿಷ ಮಂಡಲವಾಗಿತ್ತು. ಮೈಸೂರಿನ ಮೂಲಪುರುಷ ಮಹಿಷ. ಆತನನ್ನು ರಾಕ್ಷಸ ಎಂದು ಬಿಂಬಿಸಲಾಗುತ್ತಿದೆ. ಮಹಿಷನ ಮಹತ್ವವನ್ನು ಸಾರಲು ಹಾಗೂ ನಿಜವಾದ ಇತಿಹಾಸವನ್ನು ಹೇಳಲು ಮಹಿಷ ದಸರಾ ಆಚರಿಸಲಾಗುತ್ತಿದೆ ಎಂದು ಹೇಳುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಹಿಷಾ ದಸರಾ ದಿನವೇ ಚಾಮುಂಡಿ ಬೆಟ್ಟಕ್ಕೆ ಬಿಜೆಪಿಯಿಂದ ಜಾಥಾ – 5 ಸಾವಿರ ಮಂದಿ ಭಾಗಿ

    ಮಹಿಷಾ ದಸರಾ ದಿನವೇ ಚಾಮುಂಡಿ ಬೆಟ್ಟಕ್ಕೆ ಬಿಜೆಪಿಯಿಂದ ಜಾಥಾ – 5 ಸಾವಿರ ಮಂದಿ ಭಾಗಿ

    ಮೈಸೂರು: ಮಹಿಷಾ ದಸರಾ (Mahisha Dasara) ಒಂದು ರೀತಿ ಅಸಹ್ಯ, ಅನಾಚಾರ. ಮಹಿಷಾ ದಸರಾ ಮೂಲಕ ದೆವ್ವವನ್ನು ದೇವರು ಮಾಡಲು ಹೊರಟ್ಟಿದ್ದಾರೆ. ಮಹಿಷಾ ದಸರಾ ಆಸ್ತಿಕರ ಭಾವನೆಗೆ ನೋವು ತರುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ (Pratap Simha) ಕಿಡಿಕಾರಿದ್ದಾರೆ.

    ನಾಡಹಬ್ಬದ ಹಿನ್ನೆಲೆ ಅಕ್ಟೋಬರ್ 13 ರಂದು ಚಾಮುಂಡಿ ಬೆಟ್ಟದಲ್ಲಿ (Chamundi Hill) ಮಹಿಷಾಸುರನ ಪ್ರತಿಮೆ ಮುಂದೆ ಮಹಿಷಾ ದಸರಾ ಆಯೋಜನೆ ಮಾಡಲಾಗಿದೆ. ಇದಕ್ಕೆ ತಿರುಗೇಟಾಗಿ ಬಿಜೆಪಿ ಚಲೋ ಚಾಮುಂಡಿ ಬೆಟ್ಟ ಜಾಥಾ ಹಮ್ಮಿಕೊಂಡಿದೆ. ಮಹಿಷಾ ದಸರಾ ದಿನವೇ ಚಾಮುಂಡಿ ಬೆಟ್ಟಕ್ಕೆ ಜಾಥಾ ಹಮ್ಮಿಕೊಳ್ಳಲಾಗಿದೆ.

    ಮಹಿಷಾ ದಸರಾ ವಿರೋಧಿಸಿ ಮಾತನಾಡಿರುವ ಪ್ರತಾಪ್ ಸಿಂಹ, ಬಿಜೆಪಿ (BJP) ಸರ್ಕಾರದಲ್ಲಿ ಮಹಿಷಾ ದಸರಾ ಎಂಬ ಅಸಹ್ಯವನ್ನು ನಿಲ್ಲಿಸಿದ್ದೆವು. ಈಗ ಸಿದ್ದರಾಮಯ್ಯ ಸರ್ಕಾರ ಮತ್ತೆ ಮಹಿಷಾ ದಸರಾ ಮಾಡಲು ಹೊರಟಿದೆ. ಅಕ್ಟೋಬರ್ 13 ರಂದು ಚಲೋ ಚಾಮುಂಡಿ ಬೆಟ್ಟ ಮಾಡುತ್ತೇವೆ. ಬೆಳಗ್ಗೆ 8 ಗಂಟೆಗೆ ಚಲೋ ಚಾಮುಂಡಿ ಬೆಟ್ಟ ಆರಂಭವಾಗುತ್ತದೆ. ಕನಿಷ್ಠ 5,000 ಜನ ಈ ಜಾಥಾದಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ಈದ್‌ ಮಿಲಾದ್‌ ಹಬ್ಬಕ್ಕೆ 5 ಕೋಟಿ ಸಂಗ್ರಹ – ಫಂಡಿಂಗ್‌ ಮಾಡಿದವರ ಹಿಂದೆ ಬಿದ್ದ ಖಾಕಿ

    ಇದು ಬಿಜೆಪಿ ಕಾರ್ಯಕ್ರಮವಲ್ಲ. ಇದು ಮೈಸೂರಿನ ಜನರ ಜಾಥಾ. ಅಕ್ಟೋಬರ್ 13 ರಂದು ಮಹಿಷಾ ದಸರಾ ತಡೆಯುವುದೇ ನಮ್ಮ ಜಾಥಾದ ಉದ್ದೇಶ. ಇದು ಪಕ್ಷಾತೀತ ಹೋರಾಟ. ನಾವು ಸಂಘರ್ಷಕ್ಕೂ ಸಿದ್ಧರಿದ್ದೇವೆ. ಅಕ್ಟೋಬರ್ 13 ರಂದು ಚಾಮುಂಡಿಗೆ ಅವಮಾನ ಮಾಡಿ, ಅಕ್ಟೋಬರ್ 15 ರಂದು ಚಾಮುಂಡಿ ತಾಯಿಗೆ ಪೂಜೆ ಮಾಡಿದರೆ ಅದು ಅನೈತಿಕ ಕೆಲಸ. ಮಹಿಷಾ ದಸರಾ ಎಂಬ ಅನಾಚಾರ ನಡೆಯಕೂಡದು ಎಂದು ಪ್ರತಾಪ್ ಸಿಂಹ ಗುಡುಗಿದ್ದಾರೆ. ಇದನ್ನೂ ಓದಿ: 34 ದಿನಗಳ ಬಳಿಕ 100 ಅಡಿಯ ಗಡಿ ದಾಟಿದ ಕೆಆರ್‌ಎಸ್ ನೀರಿನ ಮಟ್ಟ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವೇದಿಕೆ ತೆಗ್ದು ಹಾಕದಿದ್ರೆ ಅರಮನೆಯಿಂದ ಓಡಿಸ್ತೀನಿ: ಶಾಮಿಯಾನ ಮಾಲೀಕನಿಗೆ ಪ್ರತಾಪ್ ಸಿಂಹ ಅವಾಜ್

    ವೇದಿಕೆ ತೆಗ್ದು ಹಾಕದಿದ್ರೆ ಅರಮನೆಯಿಂದ ಓಡಿಸ್ತೀನಿ: ಶಾಮಿಯಾನ ಮಾಲೀಕನಿಗೆ ಪ್ರತಾಪ್ ಸಿಂಹ ಅವಾಜ್

    – ಪೊಲೀಸರ ಮೇಲೂ ಆಕ್ರೋಶ

    ಮೈಸೂರು: ದಸರಾ ಹೊಸ್ತಿಲಲ್ಲಿ ಮೈಸೂರಿನಲ್ಲಿ ಚಾಮುಂಡಿ ದಸರಾ ವರ್ಸಸ್ ಮಹಿಷ ದಸರಾ ಎಂಬ ಸೈದ್ಧಾಂತಿಕ ಸಮರ ಶುರುವಾಗಿದೆ. ಈ ಕಾರಣಕ್ಕಾಗಿ ಚಾಮುಂಡಿ ಬೆಟ್ಟದಲ್ಲಿ ಪೊಲೀಸರಿಗೆ ಸಂಸದ ಪ್ರತಾಪ್ ಸಿಂಹ ತರಾಟೆ ತೆಗೆದುಕೊಂಡಿದ್ದಾರೆ.

    ಬೆಟ್ಟದ ಮೇಲಿನ ಮಹಿಷಾಸುರ ಮೂರ್ತಿ ಬಳಿ ಮಹಿಷ ದಸರಾ ನಡೆಸುವ ಸಲುವಾಗಿ ಶಾಮಿಯಾನ, ವೇದಿಕೆ ಹಾಕಿ ತಯಾರಿ ಮಾಡಲಾಗುತ್ತಿತ್ತು. ಈ ಬಗ್ಗೆ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪ್ರತಾಪ್ ಸಿಂಹ, ಇಲ್ಲಿ ವೇದಿಕೆ ಹಾಕೋದಕ್ಕೆ ಯಾರು ನಿಮಗೆ ಅನುಮತಿ ಕೊಟ್ಟರು? ಇದನ್ನು ಮೊದಲು ಇಲ್ಲಿಂದ ತೆಗೆಯಿರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನು ಹಾಕುವಾಗ ನೀವು ಏನು ಮಾಡುತ್ತಿದ್ರಿ ಪೊಲೀಸರೇ, ನಿಮ್ಮಿಂದ ಇಂತಹ ಕೆಲಸ ನಿರೀಕ್ಷೆ ಮಾಡಿರಲಿಲ್ಲ ಎಂದು ಅಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಪೊಲೀಸ್ ಕಮೀಷನರ್ ಹಾಗೂ ಡಿಸಿಪಿ ವಿರುದ್ಧ ಕೂಗಾಡಿದ್ದಾರೆ.

    ಆಗ ನಮಗೂ ಇದಕ್ಕೂ ಸಂಬಂಧವಿಲ್ಲ. ಇದು ಗ್ರಾಮ ಪಂಚಾಯಿತಿ ಅವರು ಮಾಡಿರುವ ಕೆಲಸ ಎಂದು ಪೊಲೀಸ್ ಆಯುಕ್ತರು ಸ್ಪಷ್ಟನೆ ನೀಡಿದರು. ದಸರಾ ಉತ್ಸವ ಕಾರ್ಯಕ್ರಮಗಳಿಗೆ ವೇದಿಕೆ ಹಾಕುವ ಶಾಮಿಯಾನ ಮಾಲೀಕ ಶಫಿ ನೇತೃತ್ವದಲ್ಲಿ ಈ ವೇದಿಕೆ ಹಾಕಲಾಗಿತ್ತು. ಹೀಗಾಗಿ ಕೂಡಲೇ ಟ್ರಕ್ ತಂದು ಇದನ್ನು ತೆರವುಗೊಳಿಸಬೇಕು. ಇಲ್ಲವಾದರೆ ಅರಮನೆ ಆವರಣದಿಂದ ನಿನ್ನ ಓಡಿಸುತ್ತೇನೆಂದು ಶಾಮಿಯಾನ ಮಾಲೀಕರಿಗೆ ಪ್ರತಾಪ್ ಸಿಂಹ ಅವಾಜ್ ಹಾಕಿದ್ದಾರೆ.

  • ಮೈಸೂರಿನಲ್ಲಿ ಪ್ರಗತಿಪರರಿಂದ ಮಹಿಷಾ ದಸರಾ!- ವಿಡಿಯೋ ನೋಡಿ

    ಮೈಸೂರಿನಲ್ಲಿ ಪ್ರಗತಿಪರರಿಂದ ಮಹಿಷಾ ದಸರಾ!- ವಿಡಿಯೋ ನೋಡಿ

    ಮೈಸೂರು: ದಸರಾ ತಯಾರಿ ದಿನದಿಂದಕ್ಕೆ ರಂಗು ಪಡೆದುಕೊಳ್ಳುತ್ತಿದೆ. ಇದರ ಬೆನ್ನಲ್ಲೇ ಪ್ರಗತಿಪರ ಒಕ್ಕೂಟಗಳಿಂದ ಮಹಿಷ ದಸರಾವನ್ನು ಇಂದು ಅದ್ಧೂರಿಯಾಗಿ ಆಚರಿಸಿ, ಮಹಿಷ ಒಬ್ಬ ಜನಪರ ನಾಯಕ. ಆದರೆ ಇತಿಹಾಸಲ್ಲಿ ಆತನ ಬಗ್ಗೆ ತಪ್ಪಾಗಿ ಬಿಂಬಿಸಲಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

    ಮೈಸೂರಿನ ಪುರಭವನದಿಂದ ಆಕರ್ಷಕ ರಥದಲ್ಲಿ ಮಹಿಷಾಸುರ ಭಾವಚಿತ್ರ ಮೆರವಣಿಗೆ ಮಾಡಿದ ಪ್ರಗತಿಪರರು, ವಿವಿಧ ಕಲಾತಂಡಗಳೊಂದಿಗೆ ನಗರದ ರಸ್ತೆಗಳಲ್ಲಿ ಹೆಜ್ಜೆ ಹಾಕಿದರು. ಮೆರವಣಿಗೆಯಲ್ಲಿ ಮಾಜಿ ಸಚಿವ ಸತೀಶ್ ಜಾರಕಿಹೋಳಿ ಸೇರಿದಂತೆ ಸಾಹಿತಿಗಳಾದ ಪ್ರೊ.ಮಹೇಶ್‍ಚಂದ್ರ ಗುರು, ಪ್ರೊ.ಕೆ.ಎಸ್ ಭಗವಾನ್, ಉರಿಲಿಂಗಿ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಭಾಗಿಯಾದ್ದರು.

    ಪುರಭವನದಿಂದ ಆರಂಭವಾದ ಮೆರವಣಿಗೆ ನಗರದ ಪ್ರಮುಖ ರಸ್ತೆಯ ಮೂಲಕ ಸಾಗಿ ಚಾಮುಂಡಿ ಬೆಟ್ಟ ತಲುಪಿ, ಮಹಿಷಾಸುರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.

    ಮೆರವಣಿಗೆ ಚಾಮುಂಡಿ ಬೆಟ್ಟ ತಲುಪಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು, ಮಹಿಷ ಜನಪರವಾಗಿದ್ದ, ಆದರೆ ಇತಿಹಾಸದಲ್ಲಿ ಅವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲಾಗಿದೆ. ಕಳೆದ 7 ವರ್ಷಗಳಿಂದ ಮಹಿಷ ದಸರಾವನ್ನು ಆಚರಿಸಲಾಗುತ್ತಿದೆ. ಉರಿಲಿಂಗಿ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಹಾಗೂ ಅನೇಕ ಚಿಂತಕರ ನೇತೃತ್ವದಲ್ಲಿ ವಿಶೇಷ ಕಾರ್ಯಕ್ರ ಆಯೋಜನೆ ಮಾಡಲಾಗಿದೆ. ಅವರ ವಿಚಾರಗಳನ್ನು ನಾನು ಪ್ರೋತ್ಸಾಹಿಸುತ್ತಾ ಬಂದಿರುವೆ ಎಂದು ಹೇಳಿದರು.

    ಪ್ರೊ.ಕೆ.ಎಸ್.ಭಗವಾನ್ ಮಾತನಾಡಿ, ವಲಸೆ ಸಂಸ್ಕೃತಿಯವರು ಉದ್ದೇಶಪೂರ್ವಕವಾಗಿ ನಮ್ಮ ಸಂಸ್ಕೃತಿಯ ಮೂಲ ಪ್ರತಿಪಾದಕ ಮಹಿಷನನ್ನು ರಾಕ್ಷಸ ಅಂತಾ ಮಾಡಿ, ಇವರೇ ರಾಕ್ಷಸರಾದರು. ಮಹಿಷ ಕೆಟ್ಟ ಮನುಷ್ಯನಾಗಿದ್ದರೆ ಅವನ ಹೆಸರನ್ನು ಈ ಪ್ರದೇಶಕ್ಕೆ ಇಡುತ್ತಿರಲಿಲ್ಲ. ಕೆಟ್ಟ ವ್ಯಕ್ತಿಯ ಹೆಸರನ್ನು ಊರಿಗೆ, ಪ್ರದೇಶಕ್ಕೆ ಇಡುವುದನ್ನು ಎಲ್ಲಿಯೂ ಕೇಳಿಲ್ಲ. ಮಹಿಷ ರಾಜನಾಗಿದ್ದವನು, ಆದರೆ ಆತನ ಬಗ್ಗೆ ಇತಿಹಾಸದಲ್ಲಿ ತಪ್ಪಾಗಿ ಬಿಂಬಿಸಲಾಗಿದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://youtu.be/rCdHN3PwRNQ