Tag: Mahmoud Abbas

  • ಪ್ಯಾಲೆಸ್ತೀನ್‌ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಿ ಮೋದಿ – ಗಾಜಾ ಪರಿಸ್ಥಿತಿ ಬಗ್ಗೆ ಭಾರತ ಕಳವಳ

    ಪ್ಯಾಲೆಸ್ತೀನ್‌ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಿ ಮೋದಿ – ಗಾಜಾ ಪರಿಸ್ಥಿತಿ ಬಗ್ಗೆ ಭಾರತ ಕಳವಳ

    ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನ್ಯೂಯಾರ್ಕ್‌ನಲ್ಲಿ ಪ್ಯಾಲೆಸ್ತೀನ್‌ ಅಧ್ಯಕ್ಷ ಮಹಮೂದ್‌ ಅಬ್ಬಾಸ್‌ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಸಭೆ ನಡೆಸಿದರು.

    ಗಾಜಾದಲ್ಲಿನ ಮಾನವೀಯ ಪರಿಸ್ಥಿತಿಯ ಬಗ್ಗೆ ಪ್ರಧಾನ ಮಂತ್ರಿಯವರು ಕಳವಳ ವ್ಯಕ್ತಪಡಿಸಿದರು. ಪ್ಯಾಲೆಸ್ತೀನಿಯನ್ ಜನರಿಗೆ ಭಾರತದ ಬೆಂಬಲ ಇರಲಿದೆ ಎಂದು ತಿಳಿಸಿದರು.

    ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ ಪರಿಹಾರಕ್ಕಾಗಿ ಭಾರತವು ದೀರ್ಘಕಾಲ ಪ್ರಯತ್ನಿಸಲಿದೆ. ಅ.7 ರಂದು ಇಸ್ರೇಲ್ ಮೇಲೆ ಹಮಾಸ್ ನಡೆಸಿದ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಮೊದಲ ಜಾಗತಿಕ ನಾಯಕರಲ್ಲಿ ಪಿಎಂ ಮೋದಿ ಒಬ್ಬರು. ಆದರೆ, ಗಾಜಾದಲ್ಲಿ ಹದಗೆಡುತ್ತಿರುವ ಪರಿಸ್ಥಿತಿಯ ಬಗ್ಗೆ ಭಾರತ ಪದೇ ಪದೇ ಕಳವಳ ವ್ಯಕ್ತಪಡಿಸಿದೆ.

    ಭಾರತವು ತನ್ನ ಬದ್ಧತೆಯ ಭಾಗವಾಗಿ ಗಾಜಾದ ಜನರಿಗೆ ಮಾನವೀಯ ನೆರವನ್ನು ಕಳುಹಿಸಿತು. ಜುಲೈನಲ್ಲಿ, ಭಾರತವು 2024-25 ನೇ ವರ್ಷಕ್ಕೆ ಪ್ಯಾಲೆಸ್ತೀನ್ ನಿರಾಶ್ರಿತರಿಗಾಗಿ ಯುನೈಟೆಡ್ ನೇಷನ್ಸ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿ, UNRWA ಗೆ 2.5 ಮಿಲಿಯನ್ ಡಾಲರ್‌ಗಳ ಮೊದಲ ಕಂತನ್ನು ಬಿಡುಗಡೆ ಮಾಡಿತು.

    ಇದಕ್ಕೂ ಮುನ್ನ, ಪ್ರಧಾನಿ ಮೋದಿ ನೇಪಾಳಿ ಪ್ರಧಾನಿ ಕೆಪಿ ಶರ್ಮಾ ಒಲಿ ಮತ್ತು ಕುವೈತ್ ಕ್ರೌನ್ ಪ್ರಿನ್ಸ್ ಶೇಖ್ ಸಬಾಹ್ ಖಲೀದ್ ಅಲ್-ಹಮದ್ ಅಲ್-ಮುಬಾರಕ್ ಅಲ್-ಸಬಾಹ್ ಅವರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಿದ್ದರು.

  • Israel Hamas War: ಸಂಕಷ್ಟದಲ್ಲಿರುವ ಪ್ಯಾಲೆಸ್ತೀನಿಯರಿಗೆ ಭಾರತದಿಂದ ಮಾನವೀಯ ನೆರವು

    Israel Hamas War: ಸಂಕಷ್ಟದಲ್ಲಿರುವ ಪ್ಯಾಲೆಸ್ತೀನಿಯರಿಗೆ ಭಾರತದಿಂದ ಮಾನವೀಯ ನೆರವು

    ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧದ (Israel Hamas War) ನಡುವೆ ಗಾಜಾ ಪಟ್ಟಿಯಲ್ಲಿ ಸಿಲುಕಿ ನಲುಗುತ್ತಿರುವ ಪ್ಯಾಲೆಸ್ತೀನಿಯರಿಗೆ (Palestinian) ಭಾರತ ಭಾನುವಾರ (ಅ.22) ಮಾನವೀಯ ನೆರವು ಕಳುಹಿಸಿದೆ.

    ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು, ಪ್ಯಾಲೆಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಮೊಹಮ್ಮದ್ ಅಬ್ಬಾಸ್ (Mahmoud Abbas) ಅವರೊಂದಿಗೆ ಮಾತನಾಡಿ ಮಾನವೀಯ ನೆರವು ಕಳಿಸುವ ಭರವಸೆ ನೀಡಿದ್ದರು. ಅಲ್ಲದೇ ಈ ನೆರವು ದೀರ್ಘಕಾಲ ಮುಂದುವರಿಯಲಿದೆ ಎಂದು ಭರವಸೆ ನೀಡಿದ್ದರು. ಅದರಂತೆ ಮೊದಲ ಹಂತವಾಗಿ ಸುಮಾರು 6.5 ಟನ್ ವೈದ್ಯಕೀಯ ಸಾಮಗ್ರಿಗಳ ನೆರವು ಮತ್ತು 32 ಟನ್ ವಿಪತ್ತು ಪರಿಹಾರ ಸಾಮಗ್ರಿಗಳನ್ನು ಕಳುಹಿಸಲಾಗಿದೆ. ಅದು ಈಜಿಪ್ಟ್ ಮೂಲಕ ದೇಶವನ್ನು ತಲುಪಲಿದೆ. ಇದನ್ನೂ ಓದಿ: ಹಮಾಸ್‌ ಉಗ್ರರ ಕೃತ್ಯ ಖಂಡಿಸಿದ್ದಕ್ಕೆ ಬಹರೇನ್‌ನಲ್ಲಿ ಮಂಗಳೂರಿನಲ್ಲಿ ಓದಿದ ವೈದ್ಯ ಅರೆಸ್ಟ್‌

    ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. 6.5 ಟನ್ ವೈದ್ಯಕೀಯ ಸಾಮಗ್ರಿಗಳ ನೆರವು ಮತ್ತು 32 ಟನ್ ವಿಪತ್ತು ಪರಿಹಾರ ಸಾಮಗ್ರಿಗಳನ್ನು ಹೊತ್ತ ಭಾರತೀಯ ವಾಯುಪಡೆಯ C-17 ವಿಮಾನವು ಈಜಿಪ್ಟ್‌ನ ಎಲ್-ಅರಿಶ್ ವಿಮಾನ ನಿಲ್ದಾಣಕ್ಕೆ ಹೊರಟಿದೆ. ವಸ್ತುಗಳನ್ನು ಈಜಿಪ್ಟ್ ಮತ್ತು ಗಾಜಾ ನಡುವಿನ ರಫಾ ಗಡಿಯ ಮೂಲಕ ಪ್ಯಾಲೆಸ್ತೀನ್‌ಗೆ ಕಳುಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿಂದು ದಸರಾ ಏರ್‌ಶೋ ರಿಹರ್ಸಲ್‌ – ಸಾರ್ವಜನಿಕರಿಗೆ ಇಂದು ಉಚಿತ, ನಾಳೆ ಪಾಸ್‌ ಖಚಿತ

    ಭಾರತದಿಂದ ನೀಡಲಾಗುತ್ತಿರುವ ಮಾನವೀಯ ನೆರವು ಜೀವ ಉಳಿಸುವ ಅಗತ್ಯ ಔಷಧಗಳು, ಶಸ್ತ್ರಚಿಕಿತ್ಸಾ ಸಾಮಗ್ರಿಗಳು, ಟೆಂಟ್‌ಗಳು, ಮಲಗುವ ಚೀಲಗಳು, ಟಾರ್ಪಾಲಿನ್‌ಗಳು, ನೈರ್ಮಲ್ಯ ಉಪಯುಕ್ತತೆಯ ವಸ್ತುಗಳು ಹಾಗೂ ನೀರು ಶುದ್ಧೀಕರಣ ಮಾತ್ರೆಗಳು ಇತರ ಅಗತ್ಯ ವಸ್ತುಗಳನ್ನು ಒಳಗೊಂದಿದೆ. ಇದನ್ನೂ ಓದಿ: ಇಶಾನ್‌ಗೆ ಜೇನುಹುಳು ಕಂಟಕ, ಸೂರ್ಯನಿಗೆ ಮೊಣಕೈ ಗಾಯ – ಪಂದ್ಯ ಆರಂಭಕ್ಕೂ ಮುನ್ನವೇ ಭಾರತಕ್ಕೆ ತ್ರಿಬಲ್‌ ಶಾಕ್‌

    ಇತ್ತೀಚೆಗೆ ಗಾಜಾ ಪಟ್ಟಿಯ ಆಸ್ಪತ್ರೆಯೊಂದರ ಮೇಲೆ ನಡೆದ ಬಾಂಬ್ ದಾಳಿಗೆ ಸಾಕಷ್ಟು ಜೀವಗಳು ಬಲಿಯಾಗಿದ್ದವು. ದಾಳಿಯಲ್ಲಿ ಮೃತರಿಗೆ ಸಂತಾಪ ಸೂಚಿಸಿದ್ದ ಪ್ರಧಾನಿ ಮೋದಿ ಅವರು, ಮಾನವೀಯ ನೆರವು ನೀಡುವುದಾಗಿ ಭರವಸೆ ನೀಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]