Tag: Mahua Moitra

  • ಅಮಿತ್ ಶಾ ತಲೆ ಕತ್ತರಿಸಿ ಪ್ರದರ್ಶನಕ್ಕಿಡಬೇಕು – TMC ಸಂಸದೆ ಮಹುವಾ ಮೊಯಿತ್ರಾ ಶಾಕಿಂಗ್ ಹೇಳಿಕೆ

    ಅಮಿತ್ ಶಾ ತಲೆ ಕತ್ತರಿಸಿ ಪ್ರದರ್ಶನಕ್ಕಿಡಬೇಕು – TMC ಸಂಸದೆ ಮಹುವಾ ಮೊಯಿತ್ರಾ ಶಾಕಿಂಗ್ ಹೇಳಿಕೆ

    – ಗಡಿ ಕಾಯುವಲ್ಲಿ, ನುಸುಳುವಿಕೆ ತಡೆಯುವಲ್ಲಿ ಶಾ ವಿಫಲ ಅಂತ ವಾಗ್ದಾಳಿ

    ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರಿಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಭಾರೀ ವಿವಾದಕ್ಕೆ ಕಾರಣರಾಗಿದ್ದಾರೆ.

    ಭಾರತಕ್ಕೆ ಬಾಂಗ್ಲಾ ಪ್ರದೇಶಗಳ ಒಳನುಸುಳುವಿಕೆ (Bangladeshi immigrants) ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಹುವಾ ಮೊಯಿತ್ರಾ, ಅಮಿತ್‌ ಶಾ ತಲೆಯನ್ನು ಕತ್ತರಿಸಿ, ಪ್ರದರ್ಶನಕ್ಕಾಗಿ ಟೇಬಲ್‌ ಮೇಲೆ ಇಡಬೇಕು ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿಗಳಿಗೆ ಬಂದ ರಹಸ್ಯ ಪತ್ರದಿಂದ ಭಾರತ, ಚೀನಾ ಸಂಬಂಧ ಸುಧಾರಣೆ!

    ಒಂದು ವೇಳೆ ಭಾರತದ ಗಡಿಯನ್ನ (Indian Border) ರಕ್ಷಣೆ ಮಾಡಲು ಸಾಧ್ಯವಾಗದಿದ್ರೆ, ನೂರಾರು ಸಂಖ್ಯೆಯಲ್ಲಿ ನುಸುಳುಕೋರರು ಒಳನುಸುಳುತ್ತಿದ್ದರೆ, ನಮ್ಮ ಮಹಿಳೆಯರನ್ನ ಅಗೌರವಿಸುತ್ತಿದ್ದರೆ ಅಥವಾ ನಮ್ಮ ಭೂಮಿಯನ್ನ ಅತಿಕ್ರಮಿಸಿಕೊಳ್ಳುತ್ತಿದ್ದರೆ? ಅಮಿತ್‌ ಶಾ (Amit Shah) ಅವರ ತಲೆ ಕತ್ತರಿಸಿ ಟೇಬಲ್‌ ಮೇಲೆ ಪ್ರದರ್ಶನಕ್ಕಿಡುವುದು ನಿಮ್ಮ ಕರ್ತವ್ಯ. ಏಕೆಂದರೆ ಗಡಿ ಕಾಯಲು, ನುಸುಳುವಿಕೆ ತಡೆಯಲು ಅಮಿತ್ ಶಾ ವಿಫಲರಾಗಿದ್ದಾರೆ ಎಂದು ಲೇವಡಿ ಮಾಡಿದರು.

    ಸ್ವಾತಂತ್ರ್ಯ ದಿನಾಚರಣೆ ವೇಳೆ ಪ್ರಧಾನಿ ಮೋದಿಯ ಕೆಂಪುಕೋಟೆ ಭಾಷಣ ಉಲ್ಲೇಖಿಸಿದ ಮಹುವಾ, ʻಮೋದಿ ಕೆಂಪು ಕೋಟೆಯಲ್ಲಿ ನಿಂತು ನುಸುಳುಕೋರು ಜನಸಂಖ್ಯಾ ಬದಲಾವಣೆ ಮಾಡುತ್ತಿದ್ದಾರೆ ಅಂತ ಹೇಳುತ್ತಿದ್ದರು. ಇದನ್ನ ಗಂಭೀರವಾಗಿ ಪರಿಗಣಿಸದೇ ಗೃಹಸಚಿವರು ಮುಂದಿನ ಸಾಲಿನಲ್ಲಿ ನಿಂತು ಚಪ್ಪಾಳೆ ತಟ್ಟುತ್ತಿದ್ದರು. ಗಡಿಯಲ್ಲಿ ಭದ್ರತಾ ಪಡೆಗಳಿದ್ದೂ ಒಳನುಸುಳುವಿಕೆ ಏಕೆ ಮುಂದುವರಿಯುತ್ತಿದೆ? ಅದರಲ್ಲೂ ಪಶ್ಚಿಮ ಬಂಗಾಳದ ಗಡಿಯಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನ ತಡೆಯುವಲ್ಲಿ ಶಾ ವಿಫಲರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಜಿಎಸ್‌ಟಿ ಸರಳೀಕರಣದಿಂದ ರಾಜ್ಯಗಳ ಆದಾಯ 2.5 ಲಕ್ಷ ಕೋಟಿ ನಷ್ಟ ಸಾಧ್ಯತೆ: ಸಚಿವ ಕೃಷ್ಣ ಬೈರೇಗೌಡ ಕಳವಳ

    ಕೆರಳಿದ ಕೇಸರಿ ಪಡೆ
    ಇನ್ನೂ ಮಹುವಾ ಮೊಯಿತ್ರಾ ಅವರ ಹೇಳಿಕೆಯಿಂದ ಕೇಸರಿ ಪಡೆ ಕೆರಳಿ ಕೆಂಡವಾಗಿದೆ. ಮೊಯಿತ್ರಾ ಲಜ್ಜೆಗೆಟ್ಟ ಹೇಳಿಕೆ ನೀಡಿದ್ದಾರೆ. ಎಕ್ಸ್‌ನಲ್ಲಿ ಆಕ್ರೋಶ ಹೊರಹಾಕಿರುವ ಹಿರಿಯ ನಾಯಕ ಪ್ರದೀಪ್‌ ಭಂಡಾರಿ, ಇದು ರಾಜಕೀಯ ಮೀರಿದ ಅಪ್ಪಟ ದ್ವೇಷ ಭಾಷಣ, ಇದರಲ್ಲಿ ವಿಷ ತುಂಬಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಅಭಿಮಾನಿಗಳ ಹೃದಯ ಗೆದ್ದ ಮೆಗಾ ಸ್ಟಾರ್ – ಚಿರಂಜೀವಿ ರಿಯಲ್ ಹೀರೋ ಎಂದ ಫ್ಯಾನ್ಸ್

  • ಬಿಜೆಡಿ ಮಾಜಿ ಸಂಸದನ ಮದುವೆಯಾದ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ – ಜರ್ಮನಿಯಲ್ಲಿ ಮದುವೆಯಾಗಿರುವ ಫೋಟೋ ವೈರಲ್

    ಬಿಜೆಡಿ ಮಾಜಿ ಸಂಸದನ ಮದುವೆಯಾದ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ – ಜರ್ಮನಿಯಲ್ಲಿ ಮದುವೆಯಾಗಿರುವ ಫೋಟೋ ವೈರಲ್

    – ಮದುವೆ ಬಗ್ಗೆ ಇನ್ನೂ ತುಟಿ ಬಿಚ್ಚದ ಸಂಸದೆ

    ನವದೆಹಲಿ: ತೃಣಮೂಲ ಕಾಂಗ್ರೆಸ್ (Trinamool Congress) ಸಂಸದೆ ಮಹುವಾ ಮೋಯಿತ್ರಾ (Mahua Moitra) ಅವರು ಬಿಜೆಡಿ ಮಾಜಿ ಸಂಸದ ಪಿನಾಕಿ ಮಿಶ್ರಾ (Pinaki Misra) ಅವರನ್ನು ಜರ್ಮನಿಯಲ್ಲಿ ಮದುವೆಯಾಗಿದ್ದಾರೆ. ಮದುವೆಯಾಗಿರುವ ಫೋಟೋವನ್ನು ಸಂಸದೆ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

    50 ವರ್ಷದ ಮೊಯಿತ್ರಾ ಮತ್ತು 65 ವರ್ಷದ ಮಿಶ್ರಾ ಇಬ್ಬರೂ ಕೇಕ್‌ ಕತ್ತರಿಸಿ ಹೊಸಬಾಳಿಗೆ ಕಾಲಿಟ್ಟಿರುವ ಸಂಭ್ರಮದ ಫೋಟೊವನ್ನು ಸ್ವತಃ ಮೊಯಿತ್ರಾ ಹಂಚಿಕೊಂಡಿದ್ದಾರೆ. ಫೋಟೊ ಜೊತೆಗೆ, ಪ್ರೀತಿ ಮತ್ತು ಶುಭ ಹಾರೈಕೆಗಳಿಗಾಗಿ ಎಲ್ಲರಿಗೂ ಧನ್ಯವಾದಗಳು. ತುಂಬಾ ಕೃತಜ್ಞತೆಗಳು ಎಂದು ಸಂಸದೆ ಬರೆದುಕೊಂಡಿದ್ದಾರೆ. ಇದನ್ನೂ ಓದಿ: Chinnaswamy Stampede Case – ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ FIR

    ಸಂಸತ್ತಿನಲ್ಲಿ ಜೋರು ಭಾಷಣಗಳ ಮೂಲಕ ಹೆಸರುವಾಸಿಯಾಗಿರುವ ಮೊಯಿತ್ರಾ, ಪಶ್ಚಿಮ ಬಂಗಾಳದ ಕೃಷ್ಣನಗರ ಕ್ಷೇತ್ರದಿಂದ ಎರಡನೇ ಬಾರಿಗೆ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಮೊದಲ ಅವಧಿಯಲ್ಲಿ ಅವರ ವಿರುದ್ಧ ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಹಣ ಪಡೆದ ಆರೋಪ ಕೇಳಿಬಂದಿತ್ತು. ಈ ಆರೋಪದ ಮೇಲೆ ಅವರನ್ನು ಅನರ್ಹಗೊಳಿಸಲಾಗಿತ್ತು.

    ಮಹುವಾ ಮೊಯಿತ್ರಾ ಯಾರು?
    ಮಹುವಾ ಮೊಯಿತ್ರಾ ಅಕ್ಟೋಬರ್ 12, 1974 ರಂದು ಅಸ್ಸಾಂನಲ್ಲಿ ಜನಿಸಿದರು. ಅವರು ಅರ್ಥಶಾಸ್ತ್ರ ಮತ್ತು ಗಣಿತಶಾಸ್ತ್ರದಲ್ಲಿ ಬಿಎ ಪದವಿಯನ್ನು ಪಡೆದಿದ್ದಾರೆ. ಅಮೆರಿಕದ ಮ್ಯಾಸಚೂಸೆಟ್ಸ್‌ನ ಮೌಂಟ್ ಹೋಲಿಯೋಕ್ ಕಾಲೇಜಿನಲ್ಲಿ ಮ್ಯಾಗ್ನಾ ಕಮ್ ಲಾಡ್ ಪದವಿ ಪಡೆದಿದ್ದಾರೆ. 2010 ರಲ್ಲಿ, ಅವರು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸೇರಿದರು. 2019 ರಲ್ಲಿ ಪಶ್ಚಿಮ ಬಂಗಾಳದ ಕರಿಂಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಗೆದ್ದಿದ್ದರು.

    ಪಿನಾಕಿ ಮಿಶ್ರಾ ಯಾರು?
    ಪಿನಾಕಿ ಮಿಶ್ರಾ ಅಕ್ಟೋಬರ್ 23, 1959 ರಂದು ಒಡಿಶಾದ ಪುರಿಯಲ್ಲಿ ಜನಿಸಿದರು. ಇವರು, ಸೇಂಟ್ ಸ್ಟೀಫನ್ಸ್ ಕಾಲೇಜಿನಿಂದ ಇತಿಹಾಸದಲ್ಲಿ ಬಿಎ (ಆನರ್ಸ್) ಪದವಿ ಮತ್ತು ದೆಹಲಿ ವಿಶ್ವವಿದ್ಯಾಲಯದಲ್ಲಿ ಎಲ್‌ಎಲ್‌ಬಿ ಪದವಿ ಪಡೆದಿದ್ದಾರೆ.

    ಮಿಶ್ರಾ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನೊಂದಿಗೆ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. 1996ರಲ್ಲಿ ಪುರಿ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಗೆಲುವು ಪಡೆದರು. ನಂತರ ಅವರು ನವೀನ್ ಪಟ್ನಾಯಕ್ ಅವರ ಬಿಜು ಜನತಾದಳ (ಬಿಜೆಡಿ) ಸೇರಿದರು. 2009, 2014 ಮತ್ತು 2019ರಲ್ಲಿ ಮರು ಆಯ್ಕೆಯಾಗಿದ್ದರು.

    ಅವರ ಅಧಿಕಾರಾವಧಿಯಲ್ಲಿ, ಹಣಕಾಸು ಸ್ಥಾಯಿ ಸಮಿತಿ, ವ್ಯವಹಾರ ಸಲಹಾ ಸಮಿತಿ, ರಕ್ಷಣಾ ಸಚಿವಾಲಯದ ಸಮಾಲೋಚನಾ ಸಮಿತಿ, ನಾಗರಿಕ ವಿಮಾನಯಾನ ಸ್ಥಾಯಿ ಸಮಿತಿ ಸೇರಿದಂತೆ ಕಾನೂನು ಮತ್ತು ನ್ಯಾಯ ಸಚಿವಾಲಯದ ಸಮಾಲೋಚನಾ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಬೆಳಗ್ಗಿನ ಜಾವ 4 ಗಂಟೆ ವರೆಗೆ ಕೆಲಸ ಮಾಡಿದ್ದ ಪೊಲೀಸರಿಗೆ ಮತ್ತೆ ಬಂದೋಬಸ್ತ್‌ ನೀಡಲು ಆಗ್ತಿತ್ತಾ? – ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

    ಮೊಯಿತ್ರಾ ಈ ಹಿಂದೆ ಡ್ಯಾನಿಶ್ ಫೈನಾನ್ಸಿಯರ್ ಲಾರ್ಸ್ ಬ್ರೋರ್ಸನ್ ಅವರನ್ನು ವಿವಾಹವಾಗಿದ್ದರು. ಈ ವಿಚಾರವನ್ನು ಸಾಕಷ್ಟು ಖಾಸಗಿಯಾಗಿ ಇಟ್ಟುಕೊಂಡಿದ್ದರು. ಆದರೆ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಮದುವೆ ಮತ್ತು ಅಂತಿಮವಾಗಿ ಇಬ್ಬರು ದೂರಾದ ಬಗ್ಗೆ ಸಂಸದೆ ದೃಢಪಡಿಸಿದ್ದರು.

  • ಹೊಸ ಕ್ರಿಮಿನಲ್‌ ಕಾನೂನಿನಡಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಕೇಸ್‌ ದಾಖಲು

    ಹೊಸ ಕ್ರಿಮಿನಲ್‌ ಕಾನೂನಿನಡಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಕೇಸ್‌ ದಾಖಲು

    ನವದೆಹಲಿ: ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಖ್ಯಸ್ಥೆ ರೇಖಾ ಶರ್ಮಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಕ್ಕೆ ಟಿಎಂಸಿ (TMC) ಸಂಸದೆ ಮಹುವಾ ಮೊಯಿತ್ರಾ (Mahua Moitra) ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

    ಶರ್ಮಾ ಅವರ ದೂರಿನ ಆಧಾರದ ಮೇಲೆ ಹೊಸ ಕ್ರಿಮಿನಲ್ ಕಾನೂನಿನ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 79 ಅಡಿಯಲ್ಲಿ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಇದನ್ನೂ ಓದಿ: ಜಾರ್ಖಂಡ್‌ನಲ್ಲಿ 2 ಅಂತಸ್ತಿನ ಕಟ್ಟಡ ಕುಸಿತ – ಮೂವರು ಸಾವು, 3 ಮಂದಿಗೆ ಗಾಯ

    ಲೋಕಸಭೆಯಲ್ಲಿ ಪ್ರಶ್ನೆ ಕೇಳುವುದಕ್ಕೆ ಲಂಚ ಪಡೆದ ಆರೋಪದಲ್ಲಿ ಪಶ್ಚಿಮ ಬಂಗಾಳದ ಕೃಷ್ಣನಗರದ ಸಂಸದೆ ಮೊಯಿತ್ರಾ ಅವರನ್ನು ಅನರ್ಹಗೊಳಿಸಲಾಗಿತ್ತು. ನಂತರ ಈಚೆಗೆ ನಡೆದ ಚುನಾವಣೆಯಲ್ಲಿ ಸುಮಾರು 56,000 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

    ಗುರುವಾರ ಮಹಿಳಾ ಆಯೋಗದ ವೀಡಿಯೊಗಳಿಗೆ ಪ್ರತಿಕ್ರಿಯೆಯಾಗಿ ಹೇಳಿಕೆ ನೀಡಿದ್ದರು. ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಶುಕ್ರವಾರದ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ಮೊಯಿತ್ರಾ ವಿರುದ್ಧ ಪ್ರಕರಣ ದಾಖಲಿಸಲು ಕೋರಿತ್ತು. ಇದನ್ನೂ ಓದಿ: BMW ಡಿಕ್ಕಿ ಹೊಡೆದು ಮಹಿಳೆ ಸಾವು – ಸಿಎಂ ಏಕನಾಥ್‌ ಶಿಂಧೆ ಬಣದ ನಾಯಕನ ಪುತ್ರ ಆರೋಪಿ

  • ಸೋಮವಾರ 4ನೇ ಹಂತದ ಚುನಾವಣೆ – ಯಾವ ರಾಜ್ಯ, ಎಷ್ಟು ಕ್ಷೇತ್ರಗಳಲ್ಲಿ ಮತದಾನ? ಕಣದಲ್ಲಿರೋ ಪ್ರಮುಖರು ಯಾರು?

    ಸೋಮವಾರ 4ನೇ ಹಂತದ ಚುನಾವಣೆ – ಯಾವ ರಾಜ್ಯ, ಎಷ್ಟು ಕ್ಷೇತ್ರಗಳಲ್ಲಿ ಮತದಾನ? ಕಣದಲ್ಲಿರೋ ಪ್ರಮುಖರು ಯಾರು?

    ನವದೆಹಲಿ: ಸೋಮವಾರ (ಮೇ 12) 4ನೇ ಹಂತದ ಲೋಕಸಭೆ ಚುನಾವಣೆ (Lok Sabha Elections 2024) ನಡೆಯಲಿದ್ದು, ಸುಗಮ ಮತದಾನಕ್ಕೆ ಕೇಂದ್ರ ಚುನಾವಣಾ ಆಯೋಗ ಸಂಪೂರ್ಣ ಸಜ್ಜಾಗಿದೆ.

    9 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ 96 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಇದನ್ನೂ ಓದಿ: ಕೇಜ್ರಿವಾಲ್‌ಗೆ ಹುಚ್ಚು, ಬಿಜೆಪಿಯಲ್ಲಿ ವಯಸ್ಸಿನ ಮಿತಿ ಬಗ್ಗೆ ನಿರ್ಧಾರ ಕೈಗೊಂಡಿಲ್ಲ: ಆರ್‌.ಅಶೋಕ್

    ಆಂಧ್ರ ಪ್ರದೇಶದ 25, ತೆಲಂಗಾಣದ 17, ಉತ್ತರಪ್ರದೇಶದ 13, ಮಹಾರಾಷ್ಟ್ರದ 11, ಬಂಗಾಳದ 8, ಬಿಹಾರದ 5, ಒಡಿಶಾ, ಜಾರ್ಖಂಡ್‌ನ ತಲಾ 4 ಹಾಗೂ ಜಮ್ಮು ಮತ್ತು ಕಾಶ್ಮೀರದ 1 ಸ್ಥಾನಕ್ಕೆ ಮತದಾನ ನಡೆಯಲಿದ್ದು, 1717 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆ ಮಾಡಿಕೊಳ್ತಿದ್ದಾರೆ. ಇದನ್ನೂ ಓದಿ: ಭಾರತವನ್ನು ಅಭಿವೃದ್ಧಿಪಡಿಸಬೇಕಾದರೆ, ಪೂರ್ವ ಭಾರತವನ್ನು ಅಭಿವೃದ್ಧಿಪಡಿಸಬೇಕು – ಮೋದಿ

    ಕೇಂದ್ರ ಸಚಿವರಾದ ನಿತ್ಯಾನಂದ ರೈ, ಅಜಯ್ ಮಿಶ್ರಾ, ಮಾಜಿ ಸಿಎಂ ಅಖಿಲೇಶ್ ಯಾದವ್, ಅಧೀರ್ ರಂಜನ್ ಚೌಧರಿ, ಮಹುವಾ ಮೊಯಿತ್ರಾ, ಮಾಜಿ ಕ್ರಿಕೆಟಿಗ ಯುಸೂಫ್ ಪಠಾಣ್, ನಟ ಶತ್ರುಜ್ಞ ಸಿನ್ಹಾ, ಹೈದ್ರಾಬಾದ್‌ನಲ್ಲಿ ಅಸಾದುದ್ದೀನ್ ಓವೈಸಿ (Asaduddin Owaisi), ಮಾಧವಿಲತಾ ಸೇರಿ ಹಲವು ಪ್ರಮುಖರು ಕಣದಲ್ಲಿದ್ದಾರೆ.

    ಇದೇ ವೇಳೆ, ಆಂಧ್ರಪ್ರದೇಶ ವಿಧಾನಸಭೆಗೂ ಸೋಮವಾರವೇ ಚುನಾವಣೆ ನಡೆಯಲಿದೆ. ಸಿಎಂ ಜಗನ್ ನೇತೃತ್ವದ ವೈಎಸ್‌ಆರ್ ಪಾರ್ಟಿ ಏಕಾಂಗಿಯಾಗಿ ಸ್ಪರ್ಧೆ ಮಾಡಿದೆ. ಜಗನ್ ವಿರುದ್ಧ ಚಂದ್ರಬಾಬು ನಾಯ್ಡು, ಪವನ್ ಕಲ್ಯಾಣ್ ಮತ್ತು ಬಿಜೆಪಿ ಜಂಟಿ ಹೋರಾಟ ನಡೆಸುತ್ತಿದೆ. ಕಾಂಗ್ರೆಸ್ ಕೂಡ ಕಣದಲ್ಲಿ ಕಾಣಿಸಿಕೊಂಡಿದೆ.

  • ಮಹುವಾ ಮೊಯಿತ್ರಾ ವಿರುದ್ಧ ಅಕ್ರಮ ಹಣ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

    ಮಹುವಾ ಮೊಯಿತ್ರಾ ವಿರುದ್ಧ ಅಕ್ರಮ ಹಣ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

    ನವದೆಹಲಿ: ತೃಣಮೂಲ ಕಾಂಗ್ರೆಸ್‌ ನಾಯಕಿ ಮಹುವಾ ಮೊಯಿತ್ರಾ ವಿರುದ್ಧ ಜಾರಿ ನಿರ್ದೇಶನಾಲಯ (Enforcement Directorate) ಅಕ್ರಮ ಹಣ ವರ್ಗಾವಣೆ ಕೇಸ್‌ (Money Laundering Case) ದಾಖಲಿಸಿದೆ.

    ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ (CBI) ದಾಖಲಿಸಿದ ಎಫ್‌ಐಆರ್‌ ಆಧರಿಸಿ, ಪ್ರಕರಣ ದಾಖಲಿಸಲಾಗಿದೆ. ವಿಚಾರಣೆಗಾಗಿ ತನ್ನ ದೆಹಲಿ ಕಚೇರಿಗೆ ಹಾಜರಾಗುವಂತೆ ನೀಡಿದ್ದ ಏಜೆನ್ಸಿಯ ಸಮನ್ಸ್ ಅನ್ನು ಮಹುವಾ ಮೊಯಿತ್ರಾ ತಪ್ಪಿಸಿಕೊಂಡ ಹಿನ್ನೆಲೆಯಲ್ಲಿ ಇ.ಡಿ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘನೆ ಪ್ರಕರಣದಲ್ಲಿ ವಿಚಾರಣೆಗಾಗಿ ಮೊಯಿತ್ರಾ ಮತ್ತು ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಗೆ ಇಡಿ ಸಮನ್ಸ್ ನೀಡಿತ್ತು. ಈ ಸಮನ್ಸ್‌ ಅನ್ನು ಮೊಯಿತ್ರ ನಿರಾಕರಿಸಿದ್ದರು ಎಂದು ಹೇಳಲಾಗಿದೆ.

    ಏನಿದು ಕೇಸ್‌?
    ಬಿಜೆಪಿ ಲೋಕಸಭಾ ಸದಸ್ಯ ನಿಶಿಕಾಂತ್ ದುಬೆ ಅವರು ಮೊಯಿತ್ರಾ ವಿರುದ್ಧ ಪ್ರಶ್ನೆಗಾಗಿ ಹಣ ಪಡೆದ ಆರೋಪ ಮಾಡಿದ್ದರು. ನಂತರ ಮೊಯಿತ್ರಾ ವಿರುದ್ಧ ಲೋಕಪಾಲ್ ನಿರ್ದೇಶನದ ಮೇರೆಗೆ ಎಫ್‍ಐಆರ್ ದಾಖಲಿಸಲಾಗಿತ್ತು. ಪ್ರಶ್ನೆಗಾಗಿ ಹಣ ಪಡೆದ ಆರೋಪದ ಮೇಲೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹುವಾ ಅವರಿಗೆ ಸಂಬಂಧಿಸಿದ ಕೋಲ್ಕತ್ತಾದ ಹಲವು ಸ್ಥಳಗಳಲ್ಲಿ ಕೇಂದ್ರೀಯ ತನಿಖಾ ದಳ (CBI) ಶೋಧ ಕಾರ್ಯ ನಡೆಸಿ ಎಫ್‍ಐಆರ್ ಸಹ ದಾಖಲಿಸಲಾಗಿತ್ತು. ಇದನ್ನೂ ಓದಿ: ಬಾವನನ್ನು ಗೆಲ್ಲಿಸಲು ಪಣ – ಬೆಂಗಳೂರು ಗ್ರಾಮಾಂತರವನ್ನು ಪ್ರತಿಷ್ಠೆಯಾಗಿ ಹೆಚ್‌ಡಿಕೆ ತೆಗೆದುಕೊಂಡಿದ್ದು ಯಾಕೆ?

    ಕೈಗಾರಿಕೋದ್ಯಮಿ ಗೌತಮ್ ಅದಾನಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಪ್ರಶ್ನೆಗಳ ದಾಳಿ ಮಾಡಲು ದುಬೈ ಮೂಲದ ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ನಗದು ಮತ್ತು ಉಡುಗೊರೆಗಳನ್ನು ಪಡೆದು ಟಿಎಂಸಿ ನಾಯಕಿ ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ನಿಶಿಕಾಂತ್ ದುಬೆ ಆರೋಪಿಸಿದ್ದರು. ಈ ಆರೋಪಗಳನ್ನು ಮೊಯಿತ್ರಾ ಅವರು ನಿರಾಕರಿಸಿದ್ದರು. ಇದನ್ನೂ ಓದಿ: ಆಸ್ತಿ ತೆರಿಗೆ ಪಾವತಿದಾರರಿಗೆ ಬಂಪರ್‌ – ಏಪ್ರಿಲ್‌ 30ರ ವರೆಗೆ 5% ರಿಯಾಯಿತಿ ನೀಡಿದ ಹು-ಧಾ ಪಾಲಿಕೆ

    ನಂತರ ಲೋಕಪಾಲ್ ಸಿಬಿಐನಿಂದ ಆರು ತಿಂಗಳೊಳಗೆ ತನಿಖಾ ವರದಿ ಕೇಳಿತ್ತು. ತನಿಖೆಯ ಸ್ಥಿತಿಗತಿ ಕುರಿತು ಮಾಸಿಕ ವರದಿ ಸಲ್ಲಿಸುವಂತೆ ಸಿಬಿಐಗೆ ಸೂಚಿಸಲಾಗಿತ್ತು. ಮಹುವಾ ಮೊಯಿತ್ರಾ ಅವರನ್ನು ಕಳೆದ ವರ್ಷ ಲೋಕಸಭೆಯಿಂದ ಉಚ್ಛಾಟನೆ ಮಾಡಲಾಗಿತ್ತು. ಉಚ್ಚಾಟನೆಯನ್ನು ಪ್ರಶ್ನಿಸಿ ಮಹುವಾ ಮೊಯಿತ್ರಾ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ. ಈ ನಡುವೆಯೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಈ ಹಿಂದೆ ಗೆದ್ದಿದ್ದ ಕೃಷ್ಣನಗರ ಕ್ಷೇತ್ರದಿಂದ ಟಿಎಂಸಿಯಿಂದ ಅವರನ್ನು ಕಣಕ್ಕಿಳಿಸಲಾಗಿದೆ. ಇದನ್ನೂ ಓದಿ: ಡೇನಿಯಲ್ ಬಾಲಾಜಿ ನಿಧನದ ಬಳಿಕ ಮತ್ತೊಂದು ಶಾಕ್- ವಿಶ್ವೇಶ್ವರ ರಾವ್ ವಿಧಿವಶ

  • ಕನಿಷ್ಠ 200 ಸ್ಥಾನಗಳನ್ನು ಗೆಲ್ಲಿ – ಬಿಜೆಪಿಗೆ ಮಮತಾ ಸವಾಲು

    ಕನಿಷ್ಠ 200 ಸ್ಥಾನಗಳನ್ನು ಗೆಲ್ಲಿ – ಬಿಜೆಪಿಗೆ ಮಮತಾ ಸವಾಲು

    ಕೋಲ್ಕತ್ತಾ: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಕನಿಷ್ಠ 200 ಸ್ಥಾನಗಳನ್ನು ಗೆಲ್ಲಿ ಎಂದು ಮಮತಾ ಬ್ಯಾನರ್ಜಿ (Mamata Banerjee) ಬಿಜೆಪಿಗೆ (BJP) ಸವಾಲು ಎಸೆದಿದ್ದಾರೆ.

    ಮಮತಾ ಬ್ಯಾನರ್ಜಿ ಇಂದು ಕೃಷ್ಣನಗರ ಲೋಕಸಭಾ ಕ್ಷೇತ್ರದಲ್ಲಿ ಸಂಸದೆ ಮಹುವಾ ಮೊಯಿತ್ರಾ (Mahua Moitra) ಪರ ಪ್ರಚಾರ ಮಾಡಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.  ಇದನ್ನೂ ಓದಿ: ಕಚ್ಚತೀವು ಪ್ರದೇಶವನ್ನು ಕಾಂಗ್ರೆಸ್‌ ಶ್ರೀಲಂಕಾಗೆ ನೀಡಿದೆ – ತಮಿಳುನಾಡಿನಲ್ಲಿ ಬಿರುಗಾಳಿ ಎಬ್ಬಿಸಿದ RTI ಉತ್ತರ

     

    ಈ ಬಾರಿ 400 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹಾಕಿರುವ ಎನ್‌ಡಿಎ (NDA) ಒಕ್ಕೂಟಕ್ಕೆ ನಾನು ಸವಾಲು ಎಸೆಯುತ್ತೇನೆ. ಬಿಜೆಪಿಯವರು 400 ಪಾರ್ ಎಂದು ಹೇಳುತ್ತಿದ್ದಾರೆ. ನಾನು ಮೊದಲು 200 ಸೀಟುಗಳ ಮಾನದಂಡವನ್ನು ದಾಟಿ ಎಂದು ಸವಾಲು ಹಾಕುತ್ತೇನೆ. 2021 ರ ವಿಧಾನಸಭಾ ಚುನಾವಣೆಯಲ್ಲಿ ಅವರು 200 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದ್ದರು. ಆದರೆ 77 ಸ್ಥಾನದಲ್ಲಿ ಮಾತ್ರ ಜಯಗಳಿಸಿದರು ಎಂದು ವ್ಯಂಗ್ಯವಾಡಿದರು.

    ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲು ತಾನು ಅನುಮತಿಸುವುದಿಲ್ಲ. ಸಿಎಎಗೆ ಅರ್ಜಿ ಸಲ್ಲಿಸುವುದರಿಂದ ಅರ್ಜಿದಾರರನ್ನು ವಿದೇಶಿಯನ್ನಾಗಿ ಪರಿವರ್ತಿಸುತ್ತದೆ. ಹೀಗಾಗಿ ಯಾರೂ ಅರ್ಜಿ ಸಲ್ಲಿಸಬಾರದು ಎಂದು ಮನವಿ ಮಾಡಿದರು.

    ಪಶ್ಚಿಮ ಬಂಗಾಳದಲ್ಲಿ INDIA ಒಕ್ಕೂಟ ಇಲ್ಲ. ಸಿಪಿಎಂ ಮತ್ತು ಕಾಂಗ್ರೆಸ್‌ ಬಿಜೆಪಿ ಜೊತೆ ಕೈಜೋಡಿಸಿ ಕೆಲಸ ಮಾಡುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಅಪ್ಪ-ಮಗಳನ್ನು ದೂರ ಮಾಡಿದ ಅಪಕೀರ್ತಿ ಬೇಡ ಎಂದು ಸುಮ್ಮನಿದ್ದೇನೆ: ಡಿಕೆಶಿ

  • ಪ್ರಶ್ನೆಗಾಗಿ ಹಣ ಪಡೆದ ಆರೋಪ – ಮಹುವಾ ಮೊಯಿತ್ರಾ ಮನೆಯಲ್ಲಿ ಸಿಬಿಐ ಶೋಧ

    ಪ್ರಶ್ನೆಗಾಗಿ ಹಣ ಪಡೆದ ಆರೋಪ – ಮಹುವಾ ಮೊಯಿತ್ರಾ ಮನೆಯಲ್ಲಿ ಸಿಬಿಐ ಶೋಧ

    ನವದೆಹಲಿ: ಪ್ರಶ್ನೆಗಾಗಿ ಹಣ ಪಡೆದ ಆರೋಪದ ಮೇಲೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‍ನ (Trinamool Congress) ಮಾಜಿ ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರಿಗೆ ಸಂಬಂಧಿಸಿದ ಕೋಲ್ಕತ್ತಾದ ಹಲವು ಸ್ಥಳಗಳಲ್ಲಿ ಕೇಂದ್ರೀಯ ತನಿಖಾ ದಳ (CBI) ಶೋಧ ಕಾರ್ಯ ನಡೆಸುತ್ತಿದೆ. ಮಹುವಾ ಮೊಯಿತ್ರಾ ವಿರುದ್ಧ ಎಫ್‍ಐಆರ್ ದಾಖಲಾದ ಬಳಿಕ ಈ ಬೆಳವಣಿಗೆ ನಡೆದಿದೆ.

    ಬಿಜೆಪಿ ಲೋಕಸಭಾ ಸದಸ್ಯ ನಿಶಿಕಾಂತ್ ದುಬೆ ಅವರು ಮೊಯಿತ್ರಾ ವಿರುದ್ಧ ಪ್ರಶ್ನೆಗಾಗಿ ಹಣ ಪಡೆದ ಆರೋಪ ಮಾಡಿದ್ದರು. ಇದೀಗ ಮೊಯಿತ್ರಾ ವಿರುದ್ಧ  ಲೋಕಪಾಲ್ ನಿರ್ದೇಶನದ ಮೇರೆಗೆ ಎಫ್‍ಐಆರ್ ದಾಖಲಿಸಲಾಗಿದ್ದು, ಪ್ರಕರಣದ ವಿರುದ್ಧ ತನಿಖೆ ಆರಂಭಗೊಂಡಿದೆ.

    ಕೈಗಾರಿಕೋದ್ಯಮಿ ಗೌತಮ್ ಅದಾನಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಪ್ರಶ್ನೆಗಳ ದಾಳಿ ಮಾಡಲು ದುಬೈ ಮೂಲದ ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ನಗದು ಮತ್ತು ಉಡುಗೊರೆಗಳನ್ನು ಪಡೆದು ಟಿಎಂಸಿ ನಾಯಕಿ ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ನಿಶಿಕಾಂತ್ ದುಬೆ ಆರೋಪಿಸಿದ್ದರು. ಈ ಆರೋಪಗಳನ್ನು ಮೊಯಿತ್ರಾ ಅವರು ನಿರಾಕರಿಸಿದ್ದಾರೆ.

    ಲೋಕಪಾಲ್ ಸಿಬಿಐನಿಂದ ಆರು ತಿಂಗಳೊಳಗೆ ತನಿಖಾ ವರದಿ ಕೇಳಿದೆ. ತನಿಖೆಯ ಸ್ಥಿತಿಗತಿ ಕುರಿತು ಮಾಸಿಕ ವರದಿ ಸಲ್ಲಿಸುವಂತೆ ಸಿಬಿಐಗೆ ಸೂಚಿಸಲಾಗಿದೆ. ಮಹುವಾ ಮೊಯಿತ್ರಾ ಅವರನ್ನು ಕಳೆದ ವರ್ಷ ಲೋಕಸಭೆಯಿಂದ ಉಚ್ಛಾಟನೆ ಮಾಡಲಾಗಿತ್ತು. ಉಚ್ಚಾಟನೆಯನ್ನು ಪ್ರಶ್ನಿಸಿ ಮಹುವಾ ಮೊಯಿತ್ರಾ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಈ ಹಿಂದೆ ಗೆದ್ದಿದ್ದ ಕೃಷ್ಣನಗರ ಕ್ಷೇತ್ರದಿಂದ ಟಿಎಂಸಿಯಿಂದ ಅವರನ್ನು ಕಣಕ್ಕಿಳಿಸಲಾಗಿದೆ.

  • ಈ ಕೂಡಲೇ ಸರ್ಕಾರಿ ಬಂಗಲೆ ಖಾಲಿ ಮಾಡಿ – ಮಹುವಾ ಮೊಯಿತ್ರಾಗೆ ಸೂಚನೆ

    ಈ ಕೂಡಲೇ ಸರ್ಕಾರಿ ಬಂಗಲೆ ಖಾಲಿ ಮಾಡಿ – ಮಹುವಾ ಮೊಯಿತ್ರಾಗೆ ಸೂಚನೆ

    ನವದೆಹಲಿ: ಕಳೆದ ತಿಂಗಳು ಲೋಕಸಭೆಯಿಂದ ಉಚ್ಚಾಟಿತರಾದ ಟಿಎಂಸಿ ಮಾಜಿ ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರಿಗೆ, ಸರ್ಕಾರಿ ಬಂಗಲೆಯನ್ನು ಈ ಕೂಡಲೇ ಖಾಲಿ ಮಾಡುವಂತೆ ನೋಟಿಸ್‌ ನೀಡಲಾಗಿದೆ.

    ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಮೊಯಿತ್ರಾ ಅವರಿಗೆ ಎಸ್ಟೇಟ್‌ ನಿರ್ದೇಶನಾಲಯ ನೋಟಿಸ್‌ ನೀಡಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ

    MOITRA

    ತೃಣಮೂಲ ಕಾಂಗ್ರೆಸ್ ನಾಯಕಿ ಅವರಿಗೆ ಸಂಸದೆಯಾಗಿ ನೀಡಲಾಗಿದ್ದ ಬಂಗಲೆಯನ್ನು ಕೂಡಲೇ ತೆರವು ಮಾಡುವಂತೆ ಸೂಚಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಸರ್ಕಾರಿ ಬಂಗಲೆ ಖಾಲಿ ಮಾಡಿಸಲು ಎಸ್ಟೇಟ್ ನಿರ್ದೇಶನಾಲಯದ ಅಧಿಕಾರಿಗಳ ತಂಡವನ್ನು ಕಳುಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

    ಸಂಸತ್‌ನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ 2023 ರ ಡಿಸೆಂಬರ್ 8 ರಂದು ಉಚ್ಚಾಟನೆ ಮಾಡಲಾಗಿತ್ತು. ಅಲ್ಲದೇ ಜನವರಿ 7 ರ ಒಳಗಾಗಿ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಸೂಚಿಸಲಾಗಿತ್ತು. ಇದನ್ನೂ ಓದಿ: ಮಹುವಾ ಮೊಯಿತ್ರಾ ಲೋಕಸಭಾ ಸದಸ್ಯತ್ವ ರದ್ದು – ನೈತಿಕ ಸಮಿತಿ ವರದಿಯಲ್ಲಿ ಏನಿದೆ?

    ಸರ್ಕಾರಿ ವಸತಿಯನ್ನು ಏಕೆ ಖಾಲಿ ಮಾಡಿಲ್ಲ ಎಂಬುದಕ್ಕೆ ಮೂರು ದಿನಗಳಲ್ಲಿ ಉತ್ತರವನ್ನು ಕೋರಿ ಜನವರಿ 8 ರಂದು ನೋಟಿಸ್ ನೀಡಲಾಗಿತ್ತು. ಜನವರಿ 12 ರಂದು ಮೊಯಿತ್ರಾ ಅವರಿಗೆ ಮತ್ತೊಂದು ನೋಟಿಸ್ ಕೂಡ ಜಾರಿ ಮಾಡಲಾಗಿತ್ತು.

  • ಸಂಸತ್ ಸ್ಥಾನದಿಂದ ಮಹುವಾ ಉಚ್ಛಾಟನೆ- ಜನವರಿ 3ಕ್ಕೆ ವಿಚಾರಣೆ ಮುಂದೂಡಿಕೆ

    ಸಂಸತ್ ಸ್ಥಾನದಿಂದ ಮಹುವಾ ಉಚ್ಛಾಟನೆ- ಜನವರಿ 3ಕ್ಕೆ ವಿಚಾರಣೆ ಮುಂದೂಡಿಕೆ

    ನವದೆಹಲಿ: ಪ್ರಶ್ನೆಗಾಗಿ ನಗದು ಪಡೆದು ಪ್ರಕರಣದಲ್ಲಿ ಸಂಸತ್ ಸ್ಥಾನದಿಂದ ಉಚ್ಛಾಟನೆಗೊಂಡಿರುವ ಟಿಎಂಸಿ (TMC) ನಾಯಕಿ ಮಹುವಾ ಮೊಯಿತ್ರಾ (Mahua Moitra) ಅರ್ಜಿಯನ್ನು ಜನವರಿ 3ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. ಉಚ್ಛಾಟನೆಯನ್ನು ಪ್ರಶ್ನೆ ಮಾಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸಂಜೀವ್ ಖನ್ನಾ (Snajeev Khanna) ನೇತೃತ್ವ ಪೀಠ ಪ್ರಕರಣದ ಬಗ್ಗೆ ಅಧ್ಯಯನ ಮಾಡಲು ಸಮಯ ಸಿಕ್ಕಿಲ್ಲ ಎಂದು ಹೇಳಿದೆ.

    ಇತರೆ ಹಲವು ಪ್ರಕರಣಗಳ ಅರ್ಜಿಗಳನ್ನು ಅಧ್ಯಯನ ಮಾಡಬೇಕಿದ್ದು, ಈ ಪ್ರಕರಣದ ಫೈಲ್ ಅನ್ನು ಓದಲು ನನಗೆ ಸಮಯ ಸಿಕ್ಕಿಲ್ಲ. ಹೀಗಾಗಿ ವಿಚಾರಣೆ ದಿನಾಂಕ ಬದಲಾಯಿಸಲಾಗುತ್ತಿದೆ. ಜನವರಿ 3 ರಂದು ವಿಚಾರಣೆ ನಡೆಸುವುದಾಗಿ ವಿಚಾರಣೆ ವೇಳೆ ನ್ಯಾ. ಸಂಜೀವ್ ಖನ್ನಾ ಹೇಳಿದರು.

    ಡಿಸೆಂಬರ್ 22ಕ್ಕೆ ಕಲಾಪ ಅಂತ್ಯವಾಗುತ್ತಿರುವ ಹಿನ್ನೆಲೆ ಸುಪ್ರೀಂಕೋರ್ಟ್ (Supreme Court) ಈ ನಿರ್ಧಾರದಿಂದ ಮಧ್ಯಂತರ ರಿಲೀಫ್ ಪಡೆದು ಮಹುವಾ ಮೊಯಿತ್ರಾ ಪ್ರಸಕ್ತ ಅಧಿವೇಶನದಲ್ಲಿ ಭಾಗಿಯಾಗಲು ಸಾಧ್ಯವಾಗುವುದಿಲ್ಲ. ಇದನ್ನೂ ಓದಿ: 30 ದಿನಗಳ ಒಳಗಡೆ ಮನೆ ಖಾಲಿ ಮಾಡಿ: ಮೊಯಿತ್ರಾಗೆ ನೋಟಿಸ್‌

    ತಮ್ಮ ಸಂಸತ್ತಿನ ಲಾಗಿನ್ ಐಡಿಯನ್ನು ಉದ್ಯಮಿ ದರ್ಶನ್ ಹಿರಾನಂದನಿ ಅವರೊಂದಿಗೆ ಹಂಚಿಕೊಂಡಿದ್ದಾರೆ ಮತ್ತು ಸದನದಲ್ಲಿ ಪ್ರಶ್ನೆಗಳನ್ನು ಕೇಳಲು ಅವರಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಸಮಿತಿ ಕೂಡಾ ವರದಿ ನೀಡಿ ಉಚ್ಛಾಟನೆಗೆ ಶಿಫಾರಸ್ಸು ಮಾಡಿತ್ತು.

    ಶಿಫಾರಸ್ಸು ಅನ್ವಯ ಡಿಸೆಂಬರ್ 8 ರಂದು ಟಿಎಂಸಿ ನಾಯಕಿ ನಾಯಕಿ ಮಹುವಾ ಮೊಯಿತ್ರಾ ಉಚ್ಛಾಟನೆ ಮಾಡಲಾಗಿತ್ತು. ಆದರೆ ತಮ್ಮ ಹೇಳಿಕೆ ಪಡೆಯದೇ ಏಕ ಪಕ್ಷೀಯವಾಗಿ ನಿರ್ಣಯ ಕೈಗೊಂಡಿದೆ ಎಂದು ಅವರು ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ.

  • 30 ದಿನಗಳ ಒಳಗಡೆ ಮನೆ ಖಾಲಿ ಮಾಡಿ: ಮೊಯಿತ್ರಾಗೆ ನೋಟಿಸ್‌

    30 ದಿನಗಳ ಒಳಗಡೆ ಮನೆ ಖಾಲಿ ಮಾಡಿ: ಮೊಯಿತ್ರಾಗೆ ನೋಟಿಸ್‌

    ನವದೆಹಲಿ: ಪ್ರಶ್ನೆ ಕೇಳಲು (Cash for Query) ಲಂಚ ಪಡೆದ ಆರೋಪದ ಹಿನ್ನೆಲೆಯಲ್ಲಿ ಲೋಕಸಭೆಯಿಂದ ಉಚ್ಛಾಟನೆಯಾಗಿರುವ ಟಿಎಂಸಿ (TMC) ಸಂಸದೆ ಮಹುವಾ ಮೊಯಿತ್ರಾ (Mahua Moitra) ಶ್ರೀಘ್ರವೇ ತಮ್ಮ ಅಧಿಕೃತ ನಿವಾಸವನ್ನು ತೊರೆಯಲಿದ್ದಾರೆ.

    ಲೋಕಸಭೆಯ (Lok Sabha) ವಸತಿ ಸಮಿತಿಯು ನಗರಾಭಿವೃದ್ಧಿ ಸಚಿವಾಲಯಕ್ಕೆ ಪತ್ರ ಬರೆದಿದ್ದು 30 ದಿನಗಳ ಒಳಗಡೆ ತನ್ನ ಅಧಿಕೃತ ನಿವಾಸವನ್ನು ಖಾಲಿ ಮಾಡುವಂತೆ ಕೇಳಿಕೊಳ್ಳುವಂತೆ ಸೂಚಿಸಿದೆ.

    ಮೊಯಿತ್ರಾ ಅವರಿಗೆ ವಿಶೇಷ ಕೋಟಾದ ಅಡಿಯಲ್ಲಿ ಸಚಿವಾಲಯವು ಮನೆಯನ್ನು ಮಂಜೂರು ಮಾಡಿದೆ. ಲೋಕಸಭೆಯಿಂದ ಉಚ್ಛಾಟನೆ ಮಾಡಿದ್ದನ್ನು ಪ್ರಶ್ನಿಸಿ ಮೊಯಿತ್ರಾ ಸುಪ್ರೀಂ ಕೋರ್ಟ್‌ನಲ್ಲಿ (Suprme Court) ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಹೊಸ ಟ್ರಕ್‌ಗಳಲ್ಲಿ ಚಾಲಕರಿಗೆ ಎಸಿ ಕ್ಯಾಬಿನ್‌ ಕಡ್ಡಾಯ – ಅಧಿಸೂಚನೆ ಪ್ರಕಟ

    ನೀತಿ ಸಮಿತಿ ನೀಡಿದ ವರದಿಯ ಆಧಾರದ ಮೇಲೆ ಲೋಕಸಭೆಯಿಂದ ಮಹುವಾ ಮೊಯಿತ್ರಾ ಅವರನ್ನು ಉಚ್ಛಾಟನೆ ಮಾಡಲಾಗಿದೆ.

    ಮೊಯಿತ್ರಾ ಅವರು ಸಂಸತ್ತಿನಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳುವ ಸಲುವಾಗಿ ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ 2 ಕೋಟಿ ರೂ. ನಗದು ಮತ್ತು ಐಷಾರಾಮಿ ಉಡುಗೊರೆ ವಸ್ತುಗಳು ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದರು.

    ಮಹುವಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸುವಂತೆ ಶಿಫಾರಸು ಮಾಡಿರುವ ವರದಿಯನ್ನು ಬಿಜೆಪಿ ಸಂಸದ ವಿನೋದ್‌ ಕುಮಾರ್‌ ಸೋನಕರ್‌ ನೇತೃತ್ವದ ನೀತಿ ಸಮಿತಿಯು ನ.9 ರಂದು ಅಂಗೀಕರಿಸಿತ್ತು

    ದರ್ಶನ್ ಹಿರಾನಂದಾನಿ (Darshan Hiranandani) ಅವರು ಸಂಸತ್ತಿನ ನೈತಿಕ ಸಮಿತಿಗೆ ಅಫಿಡವಿಟ್‌ ಸಲ್ಲಿಸಿ ಟಿಎಂಸಿ ಲೋಕಸಭೆ ಸಂಸದೆ ಮಹುವಾ ಮೊಯಿತ್ರಾ ಅವರು ಸಂಸತ್ತಿನ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ಅನ್ನು ಹಂಚಿಕೊಂಡಿದ್ದರು ಎಂದು ಹೇಳಿದ್ದರು.