Tag: Majesteta Kishida Fumio

  • ಜಪಾನ್ ನೂತನ ಪ್ರಧಾನಿಗೆ ಮೋದಿ ಅಭಿನಂದನೆ

    ಜಪಾನ್ ನೂತನ ಪ್ರಧಾನಿಗೆ ಮೋದಿ ಅಭಿನಂದನೆ

    ನವದೆಹಲಿ: ಜಪಾನ್‍ನ ನೂತನ ಪ್ರಧಾನಿಯಾಗಿ ಆಯ್ಕೆಯಾದ ಕಿಶಿದಾ ಫುಮಿಯೊ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

    ನರೇಂದ್ರ ಮೋದಿ ಅವರು, ಜಪಾನ್ ಪ್ರಧಾನಿಯಾಗಿ ಆಯ್ಕೆಯಾದ ಘನತೆವೆತ್ತ ಕಿಶಿದಾ ಫುಮಿಯೊ ಅವರನ್ನು ಅಭಿನಂದಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಜಪಾನ್‍ನ ನೂತನ ಪ್ರಧಾನಿ ಘನತೆವೆತ್ತ ಕಿಶಿದಾ ಫುಮಿಯೊ ಅವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು. ಭಾರತ-ಜಪಾನ್ ನಡುವೆ ವಿಶೇಷ ವ್ಯೂಹಾತ್ಮಕ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ನಮ್ಮ ಪ್ರದೇಶ, ಅದರಾಚೆಗೆ ಶಾಂತಿ ಮತ್ತು ಸಮೃದ್ಧಿಯನ್ನು ಮುಂದುವರಿಸಲು ಅವರೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಬರೆದಿದ್ದಾರೆ.

    ಈ ಹಿಂದೆ ಮೋದಿ ಅವರು ಟೀಕೆಗಳ ಕುರಿತು ಮಾತನಾಡಿದ್ದು, ಟೀಕೆಗಳಿಗೆ ತುಂಬಾ ಪ್ರಾಮುಖ್ಯತೆ ನೀಡುತ್ತೇನೆ. ಆದರೆ ಇಂದು ಟೀಕೆಗಳು ಆರೋಪಗಳಿಗೆ ಮಾತ್ರ ಸೀಮಿತವಾಗಿವೆ. ಈಗ ಜನ ಆರೋಪಗಳನ್ನು ಮಾತ್ರ ಮಾಡುತ್ತಾರೆ. ಆದರೆ ಟೀಕೆಗೆ ಕಠಿಣ ಪರಿಶ್ರಮ, ಸಂಶೋಧನೆ ಅಗತ್ಯವಿದೆ ಎಂದು ಹೇಳುವ ಮೂಲಕ ಟೀಕೆ ಹಾಗೂ ಆರೋಪಗಳ ನಡುವೆ ಗೆರೆ ಎಳೆದ್ದಿದ್ದರು.