Tag: Majestic Railway Station

  • ಬೆಂಗಳೂರು, ಬೋಪಾಲ್ ರೈಲು ನಿಲ್ದಾಣದಲ್ಲಿ ಅಧಿಕಾರಿಗಳ ದಾಳಿ – 72 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್

    ಬೆಂಗಳೂರು, ಬೋಪಾಲ್ ರೈಲು ನಿಲ್ದಾಣದಲ್ಲಿ ಅಧಿಕಾರಿಗಳ ದಾಳಿ – 72 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್

    ಬೆಂಗಳೂರು: ನಗರದ ಮೆಜೆಸ್ಟಿಕ್ ರೈಲು ನಿಲ್ದಾಣದ ಹಾಗೂ ಬೋಪಾಲ್‌ನಲ್ಲಿ ಡಿಆರ್‌ಐ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿ 72 ಕೋಟಿ ರೂ. ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.

    ಎರಡು ಕಡೆ ಡಿಆರ್‌ಐ ಅಧಿಕಾರಿಗಳು ಒಟ್ಟು 72 ಕೋಟಿ ರೂ. ಮೌಲ್ಯದ 72 ಕೆ.ಜಿ ಮಾದಕ ವಸ್ತು ಸೀಜ್ ಮಾಡಲಾಗಿದೆ. ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಬಂದಿದ್ದ ಪ್ರಯಾಣಿಕನ ಬಳಿ 29.88 ಕೆ.ಜಿ ಸೀಜ್ ಮಾಡಲಾಗಿದೆ. ಬೋಪಾಲ್ ಜಂಕ್ಷನ್‌ನಲ್ಲಿ 24 ಕೆ.ಜಿ ಸೀಜ್ ಮಾಡಲಾಗಿದೆ.

    ಬೆಂಗಳೂರಿನಿಂದ ಕೆಲ ಹುಡುಗರನ್ನು ಉಚಿತವಾಗಿ ಬ್ಯಾಂಕಾಂಕ್ ಟ್ರಿಫ್ ಕಳುಹಿಸಿ, ಬರುವಾಗ ಬ್ಯಾಗ್‌ನಲ್ಲಿ ಗಾಂಜಾ ತುಂಬಿ ಕಳಿಸುತ್ತಿದ್ದರು. ಹೀಗೆ ಮರಳಿ ಬರುತ್ತಿದ್ದ ಆರೋಪಿಗಳು ಏರ್‌ಪೋರ್ಟ್‌ಲ್ಲಿ ಬಚಾವ್ ಆಗಿ ರೈಲ್ವೆ ನಿಲ್ದಾಣದಲ್ಲಿ ಅರೆಸ್ಟ್ ಹಾಕಿದ್ದಾರೆ.

  • ಮೆಜೆಸ್ಟಿಕ್ ರೈಲ್ವೆ ಸ್ಟೇಷನ್‌ನಲ್ಲಿ ಟಿಕೆಟ್ ದಂಧೆ – ಹಣ ಕೊಟ್ರೆ ವೇಟಿಂಗ್ ಲಿಸ್ಟ್ ಇದ್ರೂ ಕನ್ಫರ್ಮ್ ಆಗುತ್ತೆ!

    ಮೆಜೆಸ್ಟಿಕ್ ರೈಲ್ವೆ ಸ್ಟೇಷನ್‌ನಲ್ಲಿ ಟಿಕೆಟ್ ದಂಧೆ – ಹಣ ಕೊಟ್ರೆ ವೇಟಿಂಗ್ ಲಿಸ್ಟ್ ಇದ್ರೂ ಕನ್ಫರ್ಮ್ ಆಗುತ್ತೆ!

    -ಟ್ರಾವೆಲ್ ಏಜೆನ್ಸಿಯ 9 ಸಿಬ್ಬಂದಿಗಳು ಪೊಲೀಸರ ವಶಕ್ಕೆ

    ಬೆಂಗಳೂರು: ಮೆಜೆಸ್ಟಿಕ್‌ನ ರೈಲ್ವೆ ಸ್ಟೇಷನ್‌ನಲ್ಲಿ (Majestic Railway Station) ರಿಸರ್ವೇಷನ್ ಟಿಕೆಟ್ ಹೆಸರಲ್ಲಿ ದಂಧೆ ನಡೀತಿದೆ. ವೇಟಿಂಗ್ ಲಿಸ್ಟ್‌ನಲ್ಲಿರುವ ಟಿಕೆಟ್‌ಗಳನ್ನು ಕನ್ಫರ್ಮ್ ಮಾಡಿಸಿಕೊಡ್ತೀನಿ ಎಂದು ಹಣ ಪೀಕುತ್ತಿದ್ದ ಟ್ರಾವೆಲ್ ಏಜೆನ್ಸಿಗಳ ಮೇಲೆ ಆರ್‌ಪಿಎಫ್ ಟೀಂ (RPF Team) ದಾಳಿ ನಡೆಸಿದೆ.

    ಹೌದು, ವೇಟಿಂಗ್ ಲಿಸ್ಟ್‌ನಲ್ಲಿರುವ ಟಿಕೆಟ್‌ನ್ನು ರಿಸರ್ವೇಷನ್ ಮಾಡಿಕೊಡ್ತೀವಿ ಎಂದು ಪ್ರಯಾಣಿಕರ ಬಳಿ ವನ್ ಟು ಡಬಲ್ ಹಣ ಪಡೆಯುತ್ತಿದ್ದರು. ಟಿಕೆಟ್ ಕೌಂಟರ್‌ಗಳ ಬಳಿ ನಿಂತು ವೇಟಿಂಗ್ ಲಿಸ್ಟ್ ಇರುವ ಪ್ರಯಾಣಿಕರನ್ನ ಟಾರ್ಗೆಟ್ ಮಾಡಿ, ತಮ್ಮ ಟ್ರಾವೆಲ್ ಏಜೆನ್ಸಿ ಅಂಗಡಿಗಳಿಗೆ ಕರೆದುಕೊಂಡು ಹೋಗಿ ಟಿಕೆಟ್ ಕನ್ಫರ್ಮ್ ಮಾಡಿಸಿಕೊಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆರ್‌ಪಿಎಫ್‌ನ ಕ್ರೈಮ್ ಇನ್ವೆಸ್ಟಿಗೇಷನ್ ಬ್ರ‍್ಯಾಂಚ್ ಹಾಗೂ ಡಿವಿಷನಲ್ ಸ್ಟೆಷಲ್ ಟೀಂ ದಾಳಿ ನಡೆಸಿದ್ದಾರೆ. ಈ ವೇಳೆ ಅನುಮಾನಸ್ಪಾದ ಓಡಾಟ ಹಾಗೂ ಟಿಕೆಟ್ ಕನ್ಫರ್ಮ್ ಮಾಡಿಸಿಕೊಡುತ್ತಿದ್ದ ಟ್ರಾವೆಲ್ ಏಜೆನ್ಸಿಯ 9 ಸಿಬ್ಬಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ದೋಣಿ ಮುಳುಗಿ ಮೂವರು ಮೀನುಗಾರರು ನಾಪತ್ತೆ

    ಟ್ರಾವೆಲ್ ಏಜೆನ್ಸಿ ಸಿಬ್ಬಂದಿಯೇ ಟಿಕೆಟ್ ಬುಕ್ ಮಾಡಿ, ಕನ್ಫರ್ಮ್ ಮಾಡಿಕೊಡುತ್ತಿದ್ದರು. ಇನ್ನೂ ಕೆಲವರ ಬಳಿ ವೇಟಿಂಗ್ ಇರುವ ಟಿಕೆಟ್ ಪಿಎನ್‌ಆರ್ ನಂಬರ್ ಪಡೆದು, ಟಿಕೆಟ್ ರಿಸರ್ವ್ ಮಾಡಿಕೊಡ್ತಿವಿ ಎಂದು ರಿಸರ್ವೇಷನ್ ಕೌಂಟರ್ ಬಳಿಯೇ ಗ್ರಾಹಕರ ಜೊತೆ ವ್ಯವಹಾರ ನಡೆಸುತ್ತಿದ್ದರು. ಹೀಗೆ ಪ್ರತಿದಿನ ಟಿಕೆಟ್ ಕೌಂಟರ್ ಬಳಿ ಗ್ರಾಹಕರ ಜೊತೆ ನಡೆಸ್ತಿದ್ದ ಮಾತುಕತೆ, ಅನುಮಾನಸ್ಪಾದ ಓಡಾಟ ನೋಡಿ, ರೈಲ್ವೆ ಬೆಂಗಳೂರು ವಿಭಾಗದ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ದಾಳಿ ನಡೆಸಲಾಗಿದೆ.

    ಒಂಬತ್ತು ಜನರನ್ನ ವಶಕ್ಕೆ ಪಡೆದು ರೈಲ್ವೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಈ ಹಿಂದೆಯೂ ನಕಲಿ ಟಿಕೆಟ್ ಹಾಗೂ ರಿಸರ್ವೇಷನ್ ಟಿಕೆಟ್ ನೆಪದಲ್ಲಿ ಜನರಿಗೆ ವಂಚನೆ ಮಾಡ್ತಿದ್ದ ಗ್ಯಾಂಗ್‌ನ ಬಂಧಿಸಲಾಗಿತ್ತು. ಉತ್ತರ ಭಾರತದ ಪ್ರಯಾಣಿಕರಿಗೂ ವಂಚನೆ ಮಾಡಿದ್ದು, ಇನ್ನೊಮ್ಮೆ ಈ ರೀತಿಯ ಅಕ್ರಮವೆಸಗಿದ್ರೆ ಐಆರ್‌ಸಿಟಿಸಿ ಐಡಿ ಬಂದ್ ಮಾಡಲಾಗುವುದು ಎಂದು ಎಚ್ಚರಿಸಿದ್ದರು. ಇನ್ನೂ ರೈಲ್ವೆ ಸೀಟು ಚಾರ್ಟ್ ತಯಾರಿಸುವ ಸಿಬ್ಬಂದಿ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.ಇದನ್ನೂ ಓದಿ: ರಾಯಚೂರಿನಲ್ಲಿ ಮಳೆಯಬ್ಬರ – ಪಾಯ ಕುಸಿದು ಪಕ್ಕಕ್ಕೆ ವಾಲಿದ 4 ಅಂತಸ್ತಿನ ಕಟ್ಟಡ

  • ಏರ್‌ಪೋರ್ಟ್‌ ಮಾದರಿಯಲ್ಲಿ ಮೆಜೆಸ್ಟಿಕ್ ರೈಲ್ವೇ  ನಿಲ್ದಾಣ ಅಭಿವೃದ್ಧಿ: ಸೋಮಣ್ಣ

    ಏರ್‌ಪೋರ್ಟ್‌ ಮಾದರಿಯಲ್ಲಿ ಮೆಜೆಸ್ಟಿಕ್ ರೈಲ್ವೇ ನಿಲ್ದಾಣ ಅಭಿವೃದ್ಧಿ: ಸೋಮಣ್ಣ

    ಬೆಂಗಳೂರು: ಮೆಜೆಸ್ಟಿಕ್ ರೈಲ್ವೇ ನಿಲ್ದಾಣವನ್ನು ವಿಮಾನ ನಿಲ್ದಾಣದ ಮಾದರಿಯಲ್ಲಿ ಅಭಿವೃದ್ಧಿ ಮಾಡುವುದಾಗಿ ಕೇಂದ್ರ ರೈಲ್ವೆ ರಾಜ್ಯ ಖಾತೆಯ ಸಚಿವ ಸೋಮಣ್ಣ ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾತಾನಾಡಿದ ಅವರು, ಮೆಜೆಸ್ಟಿಕ್ ರೈಲ್ವೇ ನಿಲ್ದಾಣವನ್ನ ಅಭಿವೃದ್ಧಿ ಪಡಿಸಲು‌ ನಿರ್ಧಾರ ಮಾಡಲಾಗಿದೆ. ವಿಮಾನ ನಿಲ್ದಾಣ ಮಾದರಿಯಲ್ಲಿ ಮೆಜೆಸ್ಟಿಕ್ ರೈಲ್ವೇ ನಿಲ್ದಾಣ ಅಭಿವೃದ್ಧಿ ಮಾಡುತ್ತೇವೆ. ಇದಕ್ಕಾಗಿ 1500 ಕೋಟಿ ರೂ. ವೆಚ್ಚವಾಗಲಿದ್ದು ಈಗಾಗಲೇ ಸಮಗ್ರ ಯೋಜನಾ ವರದಿ (ಡಿಪಿಆರ್‌) ರಚಿಸಲಾಗಿದೆ ಎಂದರು. ಇದನ್ನೂ ಓದಿ: ಬಿಜೆಪಿಗೆ ಕಾಂಗ್ರೆಸ್‌ ಶಾಸಕರನ್ನು ಕಳುಹಿಸಿದ್ದೇ ಸಿದ್ದರಾಮಯ್ಯ: ಜೋಶಿ ಬಾಂಬ್‌

     

    ಯೋಜನೆಯ ಬಗ್ಗೆ ಬೋರ್ಡ್ ಮುಂದೆ ಇಟ್ಟಾಗ ಕೆಲವೊಂದು ಸ್ಪಷ್ಟನೆ ಕೇಳಿದ್ದರು. ಹೀಗಾಗಿ ಮುಂದಿನ ರೈಲ್ವೇ ಬೋರ್ಡ್ ಸಂಬಂಧ ಚರ್ಚೆ ಮಾಡುತ್ತೇವೆ. ಪ್ರಧಾನಿ ಮೋದಿ ಅವರು ಗ್ರೀನ್ ಸಿಗ್ನಲ್ ನೀಡಿದ್ದಕ್ಕೆ ಕೆಲಸ ಆಗುತ್ತಿದೆ. 3-4 ದಿನಗಳಲ್ಲಿ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮಾತನಾಡಿ ಆದಷ್ಟು ಬೇಗ ಕೆಲಸ ಆರಂಭ ಮಾಡುತ್ತೇವೆ. ನಾನೇ ಬೆಂಗಳೂರಿಗೆ ಬಂದು ಘೋಷಣೆ ಮಾಡುತ್ತೇನೆ ಎಂದು ಹೇಳಿದರು.

     

  • ಮುಂಬೈನಿಂದ ಮೆಜೆಸ್ಟಿಕ್‍ಗೆ ಆಗಮಿಸಿದ್ದ ರೈಲಿನಲ್ಲಿ ಬೆಂಕಿ – 2 ಬೋಗಿಗಳು ಸಂಪೂರ್ಣ ಭಸ್ಮ

    ಮುಂಬೈನಿಂದ ಮೆಜೆಸ್ಟಿಕ್‍ಗೆ ಆಗಮಿಸಿದ್ದ ರೈಲಿನಲ್ಲಿ ಬೆಂಕಿ – 2 ಬೋಗಿಗಳು ಸಂಪೂರ್ಣ ಭಸ್ಮ

    ಬೆಂಗಳೂರು: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ  (Majestic Railway Station) ನಿಂತಿದ್ದ ರೈಲಿನಲ್ಲಿ ಬೆಂಕಿ (Fire) ಕಾಣಿಸಿಕೊಂಡ ಘಟನೆ ನಡೆದಿದೆ. ರೈಲಿನ ಬಿ1 ಬಿ2 ಕೋಚ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಎರಡು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

    ಉದ್ಯಾನ್ ಎಕ್ಸ್‌ಪ್ರೆಸ್ ರೈಲು ಮುಂಜಾನೆ 6:30ಕ್ಕೆ ಮುಂಬೈನಿಂದ ಮೆಜೆಸ್ಟಿಕ್‍ನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಬಂದು ನಿಂತಿತ್ತು. ಈ ವೇಳೆ ಇಂಜಿನ್‍ನಿಂದ ಐದು ಬೋಗಿಗಳ ದೂರದಲ್ಲಿದ್ದ ಎರಡು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಸ್ಥಳೀಯ ಪೊಲೀಸರು ಬೆಂಕಿ ನಂದಿಸಲಿಕ್ಕೆ ಪ್ರಯತ್ನ ಪಟ್ಟಿದ್ದಾರೆ. ಆದರೆ ಬೆಂಕಿ ನಂದಿಸಲು ಸಾಧ್ಯವಾಗಿಲ್ಲ. ಇದನ್ನೂ ಓದಿ: ಬಾಗಿನ ಅರ್ಪಣೆಗೂ ಮುನ್ನವೇ ಖಾಲಿಯಾಗ್ತಿದೆ ಕಬಿನಿಯ ಒಡಲು

    ಕೂಡಲೇ ಎರಡು ಅಗ್ನಿಶಾಮಕ ವಾಹನ ಕರೆಸಿಕೊಳ್ಳಲಾಯಿತು. ನಂತರ ಅಗ್ನಿಶಾಮಕ ಸಿಬ್ಬಂದಿ ಸತತ ಅರ್ಧ ಗಂಟೆ ಬೆಂಕಿ ನಂದಿಸಲು ಪ್ರಯತ್ನ ಪಟ್ಟರೂ 2 ಎಸಿ ಕೋಚ್‍ಗಳು ಸಂಪೂರ್ಣ ಸುಟ್ಟು ಹೋಗಿವೆ. ಬಳಿಕ ಸತತ ಪ್ರಯತ್ನದ ನಂತರ ಬೆಂಕಿಯನ್ನು ನಂದಿಸಲಾಗಿದೆ. ಬೆಂಕಿ ಸಂಪೂರ್ಣ ಹತೋಟಿಗೆ ಬಂದ ನಂತರ ಹಾನಿಗೊಳಗಾದ ಬೋಗಿಗಳನ್ನು ಬೇರೆಡೆ ಸ್ಥಳಾಂತರಿಸಲಾಗುತ್ತಿದೆ.

    ಘಟನೆ ವೇಳೆ ಯಾರು ಪ್ರಯಾಣಿಕರು ಇರಲಿಲ್ಲ. ಇದರಿಂದಾಗಿ ಯಾವುದೇ ಪ್ರಯಾಣಿಕರಿಗೆ ಹಾನಿಯಾಗಿಲ್ಲ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ನೈರುತ್ಯ ರೈಲ್ವೇ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.‌ ಇದನ್ನೂ ಓದಿ: ವಿದ್ಯುತ್ ಸರಿಯಾಗಿ ನೀಡುತ್ತಿಲ್ಲ ಎಂದು ಲೈನ್‍ಮೆನ್ ಮೇಲೆ ಹಲ್ಲೆ ನಡೆಸಿದ ಪುಂಡರು!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ನುಗ್ಗಿ ಮಸಿ ಬಳಿದ ಕನ್ನಡ ಹೋರಾಟಗಾರ

    ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ನುಗ್ಗಿ ಮಸಿ ಬಳಿದ ಕನ್ನಡ ಹೋರಾಟಗಾರ

    ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಕನ್ನಡವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಕನ್ನಡ ಸಂಘಟನೆಯ ರೂಪೇಶ್ ರಾಜಣ್ಣ, ರೈಲ್ವೆ ನಿಲ್ದಾಣದಲ್ಲಿರುವ ಇಂಗ್ಲೀಷ್ ಹಾಗೂ ಹಿಂದಿ ಅಕ್ಷರಗಳಿಗೆ ಮಸಿ ಬಳಿದಿದ್ದಾರೆ.

    ಮೆಜೆಸ್ಟಿಕ್ ರೈಲ್ವೆ ನಿಲ್ದಾಣದೊಳಗೆ ಬೆಂಗಳೂರು ಸಿಟಿ ಎಂದು ಇಂಗ್ಲೀಷ್ ಹಾಗೂ ಹಿಂದಿಯಲ್ಲಿ ಬರೆಯಲಾಗಿದೆ. ಕನ್ನಡವನ್ನು ಕಡೆಗಣಿಸಿ ಹಿಂದಿ ಹೇರಿಕೆ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಕನ್ನಡವನ್ನು ಅವಮಾನ ಮಾಡಲಾಗುತ್ತಿದೆ ಎಂದು ರೈಲ್ವೆ ನಿಲ್ದಾಣಕ್ಕೆ ನುಗ್ಗಿ ಮಸಿ ಬಳಿದಿದ್ದಾರೆ.

    ತಕ್ಷಣಕ್ಕೆ ಹಿಂದಿ, ಇಂಗ್ಲೀಷ್ ಇರುವ ಜಾಗದಲ್ಲಿ ಕನ್ನಡ ಪದಗಳನ್ನು ಸೇರ್ಪಡೆ ಮಾಡದಿದ್ದರೆ, ರೈಲು ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.