ಬೆಂಗಳೂರು: ಸುಮಾರು ಒಂದೂವರೆ ತಿಂಗಳ ನಂತರ ಕರ್ನಾಟಕ ಲಾಕ್‍ಡೌನ್‍ನಿಂದ ಸಡಿಲಿಕೆ ಆಗಿದೆ. ಆದರೆ ಲಾಕ್‍ಡೌನ್ ಸಡಿಲಿಕೆ ಮೊದಲ ದಿನವೇ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಅಪಘಾತ ಸಂಭವಿಸಿದೆ.
ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 45 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಫ್ಲಾಟ್ ಫಾರಂ ನಂಬರ್ 15ರಲ್ಲಿ ಈ ಅಪಘಾತ ಸಂಭವಿಸಿದ್ದು, ಕೊಪ್ಪಳ ಘಟಕ ಬಸ್‍ನಿಂದ ಅಪಘಾತವಾಗಿದೆ.
ಲಾಕ್‍ಡೌನ್ ಸಡಿಲಿಕೆಯಾದ ಪರಿಣಾಮ ಸಾವಿರಾರು ಜನರು ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಜಮಾಯಿಸಿದ್ದಾರೆ. ಹೀಗಾಗಿ ಜನಸಂಖ್ಯೆ ಜಾಸ್ತಿ ಆದ ಪರಿಣಾಮ ಬಸ್ ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹೊರಡುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಗೆ ಬಸ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಡಿಕ್ಕಿಯ ರಭಸಕ್ಕೆ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನೂ ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಬಂದು ಸ್ಥಳದಿಂದ ಮೃತದೇಹವನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಅಪಘಾತವಾಗಿ ರಕ್ತ ಚೆಲ್ಲಿದ ಜಾಗಕ್ಕೆ ಮಣ್ಣು ಹಾಕಿ ಮುಚ್ಚಲಾಗಿದೆ. ಇತ್ತ ಅಪಘಾತವಾಗುತ್ತಿದ್ದಂತೆ ಚಾಲಕ ಬಸ್ ಬಿಟ್ಟು ಓಡಿ ಹೋಗಿದ್ದಾನೆ.
ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದ ಅನೇಕ ಕಾರ್ಮಿಕರು ತಮ್ಮ ತಮ್ಮ ಗ್ರಾಮಕ್ಕೆ ಹೋಗಲು ಸಾಧ್ಯವಾಗದೆ ಬೆಂಗಳೂರಿನಲ್ಲಿ ಲಾಕ್ ಆಗಿದ್ದರು. ಆದರೆ ಇಂದು ಲಾಕ್‍ಡೌನ್ ಸಡಿಲಿಕೆ ಆಗಿದ್ದೇ ತಡ ಮೆಜೆಸ್ಟಿಕ್‍ನಲ್ಲಿ ಜನಸಾಗರವೇ ಸೇರಿದೆ.
ಮೆಜೆಸ್ಟಿಕ್‍ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಗುಂಪು ಸೇರಿದ್ದಾರೆ. ಮೆಜೆಸ್ಟಿಕ್ ಶಾಂತಲಾ ಸಿಲ್ಕ್ ಹೌಸ್ ರಸ್ತೆ ಬಳಿ ಜನಸಾಗರವೇ ಸೇರಿದ್ದು, ಕಣ್ಣಾಯಿಸಿದಷ್ಟು ದೂರ ಮೆಜೆಸ್ಟಿಕ್‍ನಲ್ಲಿ ಜನರು ಕಾಣುತ್ತಿದ್ದಾರೆ. ಕನಿಷ್ಠ 2 ಸಾವಿರಕ್ಕೂ ಅಧಿಕ ಪ್ರಯಾಣಿಕರು ಒಂದೆಡೆ ಸೇರಿದ್ದಾರೆ. ಜನರ ಗುಂಪು ನೋಡಿ ಪೊಲೀಸರು ಫುಲ್ ಕನ್‍ಫ್ಯೂಶನ್ ಆಗಿದ್ದು, ಇಡೀ ಮೆಜೆಸ್ಟಿಕ್ ನಿಲ್ದಾಣಕ್ಕೆ ಔಷಧಿ ಸಿಂಪಡನೆ ಮಾಡಲಾಗಿದೆ.
ಕೊರೊನಾ ಲಾಕ್‍ಡೌನ್ ಪರಿಣಾಮದಿಂದ ಮಾಡಲು ಕೆಲಸವಿಲ್ಲದೆ ಕಾರ್ಮಿಕರು ಬೆಂಗಳೂರಿನಲ್ಲಿ ಲಾಕ್ ಆಗಿದ್ದರು. ಸರ್ಕಾರ ಮೂರು ದಿನ ಕಾರ್ಮಿಕರಿಗೆ ಉಚಿತ ಬಸ್ ಸಂಚಾರದ ವ್ಯವಸ್ಥೆ ಮಾಡಿದ್ದಾರೆ. ಹೀಗಾಗಿ ಮುಂಜಾನೆಯಿಂದಲೇ ಲಾಕ್‍ಡೌನ್ ಪ್ರಯಾಣಿಕರು ತಮ್ಮ ತಮ್ಮ ಲಗೇಜ್‍ಗಳನ್ನು ತುಂಬಿಕೊಂಡು ಮೆಜೆಸ್ಟಿಕ್‍ಗೆ ಬಂದಿದ್ದಾರೆ. ಉಚಿತ ಪ್ರಯಾಣ ಎಂದು ಪತ್ನಿ, ಮಕ್ಕಳು ಮನೆಯವರೆಲ್ಲ ಊರಿಗೆ ವಾಪಸ್ ಹೋಗುತ್ತಿದ್ದಾರೆ.
ಪ್ರಯಾಣಿಕರು ಊರಿಗೆ ಹೋಗುವಾಗ ಅಕ್ಕಿ, ಬೇಳೆ, ಗೋದಿ ಸೇರಿದಂತೆ ಎಲ್ಲಾ ರೇಷನ್ ಸಹ ಜೊತೆಯಲ್ಲಿ ತೆಗೆದುಕೊಂಡು ಹೋಗುತ್ತಿದ್ದಾರೆ. ಪುಟಾಣಿ ಕಂದಮ್ಮ ತೊಡೆಯ ಮೇಲೆ ಹಾಕಿಕೊಂಡು ಬಸ್‍ಗಾಗಿ ಸಾವಿರಾರು ಪ್ರಯಾಣಿಕರು ಕಾದು ಕುಳಿತಿದ್ದಾರೆ. ಹೀಗಾಗಿ ಮೆಜೆಸ್ಟಿಕ್ ಒಳಗೆ ಟ್ರಾಫಿಕ್ ಜಾಮ್ ಉಂಟಾಗಿದೆ.
ಆಶಾ ಕಾರ್ಯಕರ್ತೆಯರು, ವೈದ್ಯರು, ಡಾಕ್ಟರ್ ಮೆಜೆಸ್ಟಿಕ್‍ನಲ್ಲಿ ಕೆಲಸ ಆರಂಭಿಸಿದ್ದಾರೆ. ಬಸ್ ಹತ್ತುವ ಮುನ್ನ ಡ್ರೈವರ್, ಕಂಡೆಕ್ಟರ್ ಮತ್ತು ಪ್ರಯಾಣಿಕರು ತಪಾಸಣೆಗೆ ಒಳಪಡಬೇಕು. ಹೀಗಾಗಿ ಪ್ಲಾಟ್ ಫಾರಂ ಬಸ್ ಏರಿ ಟೆಂಪರೇಚರ್ ಚೆಕ್ ಅಪ್ ಮಾಡುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಮೆಜೆಸ್ಟಿಕ್ ಎಲ್ಲಾ ಭಾಗಗಳಿಗೂ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಕೊರೊನಾ ಲಾಕ್‍ಡೌನ್ ಬಂದ್ ಸಡಲಿಕೆ ಹಿನ್ನೆಲೆಯಲ್ಲಿ ಇಂದು ಮೆಜೆಸ್ಟಿಕ್ ತುಂಬ ಬಸ್ಸುಗಳದ್ದೇ ಕಾರುಬಾರು ಆಗಿದೆ. ಈ ಮೂಲಕ ಮೆಜೆಸ್ಟಿಕ್ ನಿಲ್ದಾಣ ಸಹಜ ಸ್ಥಿತಿಯತ್ತ ಬರುತ್ತಿದೆ. ಇಷ್ಟು ದಿನ ಖಾಲಿ ಇದ್ದ ರಸ್ತೆಗಳು ಇಂದು ಬಸ್ಸುಗಳಿಂದ ತುಂಬಿ ಹೋಗಿದೆ. ನೂರಾರು ಕೆಎಸ್‌ಆರ್‌ಟಿಸಿ ಬಸ್ಸುಗಳು ಶೆಡ್ಯೂಲ್ ಪ್ರಕಾರ ಸಂಚಾರಕ್ಕೆ ಸಜ್ಜಾಗಿದೆ. ಇನ್ನೂ ಆಟೋ, ದ್ವಿಚಕ್ರ ವಾಹನ, ಕ್ಯಾಬ್ ಕೂಡ ತಮ್ಮ ತಮ್ಮ ಸಂಚಾರ ಆರಂಭಿಸಿದೆ.
ಅರಮನೆ ಮೈದಾನದಲ್ಲಿ ರಾಜಸ್ಥಾನದ ಜನರು ತುಂಬಿ ತುಳುಕುತ್ತಿದ್ದಾರೆ. ಲಾಕ್‍ಡೌನ್ ಪರಿಣಾಮ ಬೆಂಗಳೂರಿನಲ್ಲಿ ಬೀಡು ಬಿಟ್ಟದ್ದ ರಾಜಸ್ಥಾನದ ಜನರು ಊರಿಗೆ ಹೋಗಲು ಪ್ಯಾಲೇಸ್ ಗ್ರೌಂಡ್ ಮುಂಭಾಗ ಬಂದಿದ್ದಾರೆ. ಬೆಂಗಳೂರು ಟು ಜೈಪರ್ ಟ್ರೈನ್‍ನಿಂದ ಬರುವಂತೆ ಸೂಚಿಸಿದ್ದಾರೆ. ಹೀಗಾಗಿ ಅರಮನೆ ಮೈದಾನದಿಂದ ಬಸ್ ಮೂಲಕ ಬೆಂಗಳೂರು ರೈಲ್ವೇ ಸ್ಟೇಷನ್‍ಗೆ ಹೋಗುತ್ತಾರೆ. ಹೀಗಾಗಿ ಸಾವಿರಾರು ಜನರು ಒಂದು ಕಿಲೋ ಮೀಟರ್‌ವರೆಗೂ ಕ್ಯೂ ನಿಂತಿದ್ದಾರೆ.
ಬೆಂಗಳೂರು: ಕೊರೊನಾ ವೈರಸ್ ಸೃಷ್ಟಿಸಿದ ಆತಂಕದಲ್ಲಿ ಪೊಲೀಸರು ಜನರು ನಿಯಮ ಪಾಲಿಸುವಂತೆ ಕರ್ತವ್ಯ ನಿರ್ವಹಿಸುವುದರ ಜೊತೆಗೆ ಹಸಿದವರಿಗೆ ಅನ್ನ, ನೀರು ನೀಡಿ ಮಾನವೀಯತೆ ಮೆರೆಯುತ್ತಿದ್ದಾರೆ. ಇಂತಹದ್ದೇ ದೃಶ್ಯಗಳು ಶನಿವಾರ ರಾತ್ರಿ ಮೆಜೆಸ್ಟಿಕ್‍ನ ಬಿಎಂಟಿಸಿ ನಿಲ್ದಾಣದಲ್ಲಿ ಕಂಡು ಬಂದವು.
ಬೆಂಗಳೂರಿನ ವಿವಿಧ ಪ್ರದೇಶಗಳಿಂದ ನೂರಾರು ಜನರು ಶನಿವಾರ ರಾತ್ರಿಯೇ ಮೆಜೆಸ್ಟಿಕ್‍ಗೆ ಬಂದು ತಲುಪಿದ್ದರು. ಉತ್ತರ ಕರ್ನಾಟಕದ ವಲಸೆ ಕಾರ್ಮಿಕರು ಊಟ, ನಿದ್ದೆಯಿಲ್ಲದೆ ಈಡೀ ರಾತ್ರಿ ಜಾಗರಣೆ ಮಾಡಿದರು. ಅವರ ಹಸಿವಿನ ಸಂಕಟಕ್ಕೆ ಸ್ಪಂದಿಸಿದ ಪೊಲೀಸರು ಬಿಸ್ಕೇಟ್, ನೀರು ಹಂಚಿದರು. ಜೊತೆಗೆ ಮಕ್ಕಳು ಮತ್ತು ವಯೋವೃದ್ಧರಿಗೆ ಸ್ಯಾನಿಟೈಸರ್ ಹಾಕಿ ಮಾನವೀಯತೆ ಮೆರೆದರು. ಇದನ್ನೂ ಓದಿ: ಮೆಜೆಸ್ಟಿಕ್‍ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಜನ ಜಾತ್ರೆ- ಸಾಮಾಜಿಕ ಅಂತರ ಮರೆತ ಜನ
ಓರ್ವ ಪೊಲೀಸ್ ಸಿಬ್ಬಂದಿ ಮಗುವನ್ನು ಎತ್ತಿಕೊಂಡು ಕುಳಿತಿದ್ದ ಮಹಿಳೆ ಬಳಿ ಹೋಗಿ ಆಹಾರ ನೀಡಿದರು. ಜೊತೆಗೆ ‘ಹುಷಾರಾಗಿ ನಿಮ್ಮೂರಿಗೆ ಹೋಗಿ. ಪುಟ್ಟ ಮಗು ಇದೆ’ ಎಂದು ಧೈರ್ಯ ತುಂಬಿದ ದೃಶ್ಯಗಳು ಕಂಡು ಮೆಜೆಸ್ಟಿಕ್‍ನಲ್ಲಿ ಕಂಡು ಬಂದವು. ಇದನ್ನೂ ಓದಿ: ಯಾವ ಜಿಲ್ಲೆಯಲ್ಲಿ ಎಷ್ಟು ಕಂಟೈನ್‍ಮೆಂಟ್ ಝೋನ್?
ವಲಸೆ ಕಾರ್ಮಿಕರು, ತಮ್ಮ ಊರುಗಳಿಗೆ ಹೋಗಲು ಮೆಜಸ್ಟಿಕ್‍ಗೆ ಬಂದಿದ್ದ ಜನರು ರಾತ್ರಿಯಲ್ಲಾ ನರಕಯಾತನೆ ಅನುಭವಿಸುವಂತಾಗಿತ್ತು. ಮಹಿಳೆಯರಿಗೆ ಬಯಲು ಶೌಚವೇ ಗತಿಯಾಗಿತ್ತು. ಕೆಲವರು ಮಕ್ಕಳನ್ನು ತಮ್ಮ ಪಕ್ಕದಲ್ಲೇ ಮಲಗಿಸಿಕೊಂಡು ರಾತ್ರಿ ಕಳೆದರು.
ಬೆಂಗಳೂರು: ತಮ್ಮ ಊರುಗಳಿಗೆ ಹೋಗಲು ಮುಂದಾಗಿದ್ದ ವಲಸೆ ಕಾರ್ಮಿಕರಿಂದ ದುಪ್ಪಟ್ಟು ಬಸ್ ಟಿಕೆಟ್ ದರವನ್ನು ಪಡೆಯಲಾಗುತ್ತಿರುವ ಕುರಿತು ಪಬ್ಲಿಕ್ ಟಿವಿ ವರದಿ ಮಾಡಿತ್ತು. ಈ ಬೆನ್ನಲ್ಲೇ ಎಚ್ಚೆತ್ತುಕೊಂಡ ಸರ್ಕಾರ, ದುಪ್ಪಟ್ಟು ದರ ವಸೂಲಿ ಮಾಡದಂತೆ ಆದೇಶ ಹೊರಡಿಸಿದೆ.
ವಲಸೆ ಕಾರ್ಮಿಕರಿಂದ ದುಪಟ್ಟು ಹಣ ಪಡೆಯಬೇಡಿ. ಒನ್ ಸೈಡ್ ಬಸ್ ಟಿಕೆಟ್ ದರವನ್ನು ಮಾತ್ರ ತೆಗೆದುಕೊಳ್ಳಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರಿಂದಾಗಿ ಸಂಕಷ್ಟದಲ್ಲಿ ಸಿಲುಕಿದ್ದ ಕಾರ್ಮಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಇದನ್ನೂ ಓದಿ: ವಲಸೆ ಕಾರ್ಮಿಕರಿಗೆ ಬಿಗ್ ಶಾಕ್- ಬೆಂಗ್ಳೂರಿನಿಂದ ಹೊರಟವ್ರಿಗೆ ಡಬಲ್ ದರದ ಬಿಸಿ
ಈ ಕುರಿತು ಟ್ವೀಟ್ ಮಾಡಿರುವ ಸಚಿವ ಸುರೇಶ್ ಕುಮಾರ್, ಕೆಎಸ್ಆರ್‌ಟಿಸಿ ಬಸ್‍ಗಳ ಮೂಲಕ ತಮ್ಮ-ತಮ್ಮ ಸ್ಥಳಗಳಿಗೆ ಹೋಗಲು ಬೆಂಗಳೂರಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಕಾದಿರುವ ಕಾರ್ಮಿಕರಿಗೆ ಹಳೇ ದರದಲ್ಲಿ ಹೋಗಲು ಅನುವು ಮಾಡಿಕೊಡಲು ಮುಖ್ಯಮಂತ್ರಿಗಳು ಹಸಿರು ನಿಶಾನೆ ತೋರಿದ್ದಾರೆ ಎಂದು ತಿಳಿಸಿದ್ದಾರೆ.
ಕೆಎಸ್ಆರ್ ಟಿ ಸಿ ಬಸ್ ಗಳ ಮೂಲಕ ತಮ್ಮ-ತಮ್ಮ ಸ್ಥಳಗಳಿಗೆ ಹೋಗಲು ಬೆಂಗಳೂರಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಕಾದಿರುವ "ಕಾರ್ಮಿಕ" ರಿಗೆ Single Fare ದರದಲ್ಲಿ ಹೋಗಲು ಅನುವು ಮಾಡಿಕೊಡಲು ಮುಖ್ಯಮಂತ್ರಿಗಳು ಹಸಿರು ನಿಶಾನೆ ತೋರಿದ್ದಾರೆ.
ಇದಕ್ಕೂ ಮುನ್ನ ಮಾತನಾಡಿದ್ದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೂಲಿ ಕಾರ್ಮಿಕರಿಗೆ ಕೆಲಸ ಇಲ್ಲದೇ ಕೈಯಲ್ಲಿ ಹಣ ಇಲ್ಲದಂತೆ ಆಗಿದೆ. ಅವರ ಬಳಿ ಟಿಕೆಟ್‍ಗೆ ಹಣ ಕೇಳುವುದು ಬೇಡ. ಉಚಿತವಾಗಿ ಅವರವರ ಊರುಗಳಿಗೆ ಕಳಿಸಿಕೊಡುವ ಕೆಲಸ ಸರ್ಕಾರ ಮಾಡಲಿ. ನಾನು ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ ಎಂದು ಹೇಳಿದ್ದರು.
ಈ ಮೊದಲು ಎಲ್ಲಿಗೆ, ಎಷ್ಟು ದರ ಇತ್ತು?
ಬಾಗಲಕೋಟೆಗೆ ಈ ಹಿಂದೆ ನಿಗದಿಯಾಗಿದ್ದ 700 ರೂ. ಬದಲು 1,311 ರೂ. ಪಡೆಯಲಾಗುತ್ತಿದೆ. ಅಂತೆಯೇ ಬಳ್ಳಾರಿಗೆ ತೆರಳಲು 450 ರೂ. ಬದಲು 884 ರೂ., ಬೆಳಗಾವಿಗೆ ಹೋಗಲು 800 ರೂ. ಬದಲು 1,478 ರೂ., ವಸೂಲಿ ಮಾಡಲಾಗುತ್ತಿದೆ. ಬೆಳಗಾವಿಗೆ ಹೋಗಲು 800 ರೂ. ಬದಲು 1,478 ರೂ., ಚಿತ್ರದುರ್ಗಕ್ಕೆ ತೆರಳಲು 300 ರೂ. ಬದಲು 602 ರೂ., ಕೊಪ್ಪಳಕ್ಕೆ ತೆರಳಲು 600 ರೂಪಾಯಿ ಬದಲು 1,000 ರೂ., ಕಲಬುರಗಿಗೆ ತೆರಳಲು 900 ರೂಪಾಯಿ ಬದಲು 1,619 ರೂ. ಪಡೆಯಲಾಗುತ್ತಿದೆ. ಹೀಗೆ ವಿವಿಧ ಪ್ರದೇಶಗಳಿಗೆ ಹೋಗಲು ಸಿದ್ಧರಾದ ವಲಸೆ ಕಾರ್ಮಿಕರಿಗೆ ಬಸ್ ಟಿಕೆಟ್ ದರ ಆಘಾತ ನೀಡಿದೆ.
– ಬೇಕಾಬಿಟ್ಟಿ ಹಣ ವಸೂಲಿಗೆ ಕಾರ್ಮಿಕರ ಆಕ್ರೋಶ
– ಎಲ್ಲಿಗೆ ಎಷ್ಟು ದರ..?
ಬೆಂಗಳೂರು: ಲಾಕ್‍ಡೌನ್ ಘೋಷಣೆಯಿಂದ ಇಕ್ಕಟ್ಟಿಗೆ ಸಿಲುಕಿದ್ದ ವಲಸೆ ಕಾರ್ಮಿಕರು ಹಾಗೂ ಇತರರಿಗೆ ಗುಡ್‍ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ ಜೊತೆಗೆ ಶಾಕ್ ಕೂಡ ನೀಡಿದೆ.
ಹೌದು. ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಪ್ರಯಾಣ ಆರಂಭಿಸಿದ ಬಸ್ಸುಗಳಿಗೆ ಡಬಲ್ ದರವನ್ನು ಪಡೆಯಲಾಗುತ್ತಿದೆ. ಒಂದೂವರೆ ತಿಂಗಳಿಂದ ಸಂಬಳವೂ ಇಲ್ಲದೆ, ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿರುವ ಕಾರ್ಮಿಕರಿಗೆ ಬಸ್ಸುಗಳ ಟಿಕೆಟ್ ದರ ಗಾಯದ ಮೇಲೆ ಬರೆ ಹಾಕಿದಂತಾಗಿದೆ.
ಬಸ್ ಸಂಚಾರ ಆರಂಭದ ಸುದ್ದಿ ಕೇಳುತ್ತಿದ್ದಂತೆಯೇ ನೂರಾರು ವಲಸೆ ಕಾರ್ಮಿಕರು ಮೆಜೆಸ್ಟಿಕ್‍ನ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಜಮಾಯಿಸಿದರು. ಹೀಗಾಗಿ ಅಲ್ಲಿಯೇ ವಲಸೆ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಕೂಡ ಮಾಡಲಾಗುತ್ತಿದೆ. ಪ್ರತಿಯೊಬ್ಬರನ್ನೂ ಥರ್ಮಲ್ ಸ್ಕ್ರೀನಿಂಗ್ ಮಾಡಿ ನಂತರ ಬಸ್ ಹತ್ತಲು ಸೂಚನೆ ನೀಡಲಾಗುತ್ತಿದೆ. ಆದರೆ ಯಾವುದೇ ಮಾಹಿತಿ ನೀಡದೆ ಬಸ್ ಟಿಕೆಟ್ ದರವನ್ನು ದುಪ್ಪಟ್ಟು ಮಾಡಿರುವುದು ಪ್ರಯಾಣಿಕರಿಗೆ ಬಿಗ್ ಶಾಕ್ ನೀಡಿದಂತಾಗಿದೆ.
ರಾಯಚೂರು, ಬೆಳಗಾವಿ, ಬಾಗಲಕೋಟೆ, ಕಲಬುರಗಿ, ಶಿವಮೊಗ್ಗ, ಮೈಸೂರು ಸೇರಿದಂತೆ 28 ಜಿಲ್ಲೆಗಳಿಗೆ ಬಸ್ ಸಂಚಾರ ಆರಂಭವಾಗಲಿದೆ. 55 ಸೀಟ್‍ಗಳುಳ್ಳ ಬಸ್ಸಿನಲ್ಲಿ ಕೇವಲ 30 ಜನರಿಗೆ ಮಾತ್ರ ಪ್ರಯಾಣ ಮಾಡಲು ಅವಕಾಶವನ್ನ ನೀಡಲಾಗಿದೆ. ಟಿಕೆಟ್ ದರ ನಿಗದಿತ ಬೆಲೆಗಿಂತ ಒಂದು ಪಟ್ಟು ಹೆಚ್ಚು ಮಾಡಲಾಗಿದ್ದು, ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಡ್ಡಾಯ ಮಾಡಲಾಗಿದೆ.
ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಒಂದು ಬಸ್ಸಿನಲ್ಲಿ ಕೇವಲ 30 ಜನ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಅಷ್ಟೇ ಅಲ್ಲದೆ ಬೆಂಗಳೂರಿನಿಂದ ಬೇರೆ ಜಿಲ್ಲೆಗಳಿಗೆ ಹೊರಟ ಬಸ್ಸುಗಳು ವಾಪಸ್ ಬರುವಾಗ ಖಾಲಿ ಬರುತ್ತವೆ. ಹೀಗಾಗಿ ಟಿಕೆಟ್ ಏರಿಕೆ ಮಾಡಲಾಗಿದೆ ಎಂದು ಸಿಬ್ಬಂದಿ ಹೇಳುತ್ತಾರೆ. ಈ ಸಂಬಂಧ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರನ್ನು ಸಂಪರ್ಕಿಸಲು ಯತ್ನಿಸಿದರೆ ಮೊಬೈಲ್ ಸ್ವಿಚ್ ಆಫ್ ಬರುತ್ತಿದೆ.
ಎಲ್ಲಿಗೆ, ಎಷ್ಟು ದರ..?
ಬಾಗಲಕೋಟೆಗೆ ಈ ಹಿಂದೆ ನಿಗದಿಯಾಗಿದ್ದ 700 ರೂ. ಬದಲು 1,311 ರೂ. ಪಡೆಯಲಾಗುತ್ತಿದೆ. ಅಂತೆಯೇ ಬಳ್ಳಾರಿಗೆ ತೆರಳಲು 450 ರೂ. ಬದಲು 884 ರೂ., ಬೆಳಗಾವಿಗೆ ಹೋಗಲು 800 ರೂ. ಬದಲು 1,478 ರೂ., ವಸೂಲಿ ಮಾಡಲಾಗುತ್ತಿದೆ. ಬೆಳಗಾವಿಗೆ ಹೋಗಲು 800 ರೂ. ಬದಲು 1,478 ರೂ., ಚಿತ್ರದುರ್ಗಕ್ಕೆ ತೆರಳಲು 300 ರೂ. ಬದಲು 602 ರೂ., ಕೊಪ್ಪಳಕ್ಕೆ ತೆರಳಲು 600 ರೂಪಾಯಿ ಬದಲು 1,000 ರೂ., ಕಲಬುರಗಿಗೆ ತೆರಳಲು 900 ರೂಪಾಯಿ ಬದಲು 1,619 ರೂ. ಪಡೆಯಲಾಗುತ್ತಿದೆ. ಹೀಗೆ ವಿವಿಧ ಪ್ರದೇಶಗಳಿಗೆ ಹೋಗಲು ಸಿದ್ಧರಾದ ವಲಸೆ ಕಾರ್ಮಿಕರಿಗೆ ಬಸ್ ಟಿಕೆಟ್ ದರ ಆಘಾತ ನೀಡಿದೆ.
ಬೆಂಗಳೂರು: ಕೊರೊನಾ ವೈರೆಸ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಸಂಪೂರ್ಣವಾಗಿ ಲಾಕ್‍ಡೌನ್ ಆಗಿದೆ. ಈ ಹಿನ್ನೆಲೆಯಲ್ಲಿ ಪರಿವಾಳಗಳು ಆರಾಮಾಗಿ ವಿಹಾರಿಸುತ್ತಿವೆ.
ಹೌದು..ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಸದಾ ಸಾವಿರಾರು ಜನರು ಓಡಾಡುತ್ತಿದ್ದರು. ಜೊತೆಗೆ ಬೈಕ್, ಕಾರ್, ಬಸ್ ಎಂದು ರಸ್ತೆಗಳು ಯಾವಾಗಲೂ ಜಾಮ್ ಆಗಿರುತ್ತಿತ್ತು. ಆದರೆ ಕೊರೊನಾ ಭೀತಿಯಿಂದ ಪ್ರಧಾನಿ ಮೋದಿ ಅವರು 21 ದಿನ ಲಾಕ್‍ಡೌನ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಇಂದು ಸಂಪೂರ್ಣ ಸ್ತಬ್ಧವಾಗಿದೆ.
ಆದ್ದರಿಂದ ಮೆಜೆಸ್ಟಿಕ್‍ನಲ್ಲಿ ಪಾರಿವಾಳಗಳು ವಿಹಾರಿಸುತ್ತಿವೆ. ಪಾರಿವಾಳಗಳು ವಿಹಾರಿಸುಷ್ಟೂ ಮೆಜೆಸ್ಟಿಕ್‍ನಲ್ಲಿ ಪ್ರಶಾಂತತೆ ಇದೆ. ಈ ಮೂಲಕ ಜನರ ಬದಲಿಗೆ ಪಾರಿವಾಳಗಳು ರಸ್ತೆಗಿಳಿದಿವೆ. ವಿರಳ ಸಂಖ್ಯೆಯಲ್ಲಿ ಆಟೋ ಮತ್ತು ಬೈಕ್ ಮೆಜೆಸ್ಟಿಕ್‍ನಲ್ಲಿ ಓಡಾಡುತ್ತಿವೆ.
ಮಹಾಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಆತಂಕ ಹೆಚ್ಚಿಸುತ್ತಿದೆ. ಬುಧವಾರ 51 ಇದ್ದ ಕೊರೊನಾ ಪ್ರಕರಣ ಗುರುವಾರ ದಿಢೀರನೇ 55ಕ್ಕೆ ಏರಿಕೆಯಾಗಿದೆ. ಕಳೆದ ಒಂದೇ ದಿನ ನಾಲ್ಕು ಪಾಸಿಟಿವ್ ಪ್ರಕರಣಗಳ ಪತ್ತೆಯಾಗಿವೆ. ಇದನ್ನ ಗಮನಿಸಿದರೆ ದೇಶದಲ್ಲಿ ಕೊರೊನಾ 3ನೇ ಹಂತಕ್ಕೆ ಕಾಲಿಟ್ಟಿದ್ಯಾ ಎಂಬ ಅನುಮಾನ ಮೂಡಲು ಶುರುವಾಗಿದೆ.
ಬೆಂಗಳೂರು: ಯಾವಾಗಲೂ ಜನ ಸಂದಣಿಯಿಂದ ಕೂಡಿರುತ್ತಿದ್ದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲೋದಕ್ಕೆ ಬಿಡುತ್ತಿರಲಿಲ್ಲ ಜನ ಓಡೋಡಿ ಬರುತ್ತಿದ್ದರು. ಆದರೆ ಇಂದು ಬಸ್‍ಗಳ ಸಂಚಾರವಿದ್ದರೂ ಪ್ರಯಾಣಿಕರು ಮಾತ್ರ ಬೆರಳೆಣಿಕೆಯಷ್ಟು ಮಾತ್ರ ಕಾಣಸಿಗುತ್ತಿದ್ದಾರೆ.
ಹೌದು. ಇಂದು ಸರೋಜಿನ ಮಹಿಷಿ ವರದಿಯನ್ನ ಜಾರಿಗೆ ತರುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ಕೊಟ್ಟಿದೆ. ಈ ಹಿನ್ನೆಲೆ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದ್ದು, ನಾವು ಅರ್ಧ ಗಂಟೆಯಿಂದ ಕಾದರೂ ಜನ ಬರುತ್ತಿಲ್ಲ ಬಂದ್ ಅಂತ ಜನ ಭಯಪಡುತ್ತಿದ್ದಾರೆ. ವೋಲ್ವೋದಲ್ಲಂತೂ ಎರಡು ಪ್ರಯಾಣಿಕರು ಇದ್ದರೆ ಹೆಚ್ಚು ಎಂದು ಬಿಎಂಟಿಸಿ ಬಸ್ ಚಾಲಕ, ನಿರ್ವಾಹಕರು ಅಳಲು ತೋಡಿಕೊಂಡರು. ಬಂದ್ ಪರಿಣಾಮ ಬಿಎಂಟಿಸಿ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೆ ಸಂಪೂರ್ಣ ಭಣಗುಟ್ಟುತ್ತಿದೆ.
ಇತ್ತ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಎಲ್ಲೆಡೆ ಪೊಲೀಸರ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ. ಪ್ರತಿ ಸರ್ಕಲ್‍ಗೂ ಪೊಲೀಸರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೆ ಬಸ್ ಸಂಚಾರ ಯಥಾಸ್ಥಿತಿಯಿದ್ದು, ಎಂದಿನಂತೆ ಬಿಎಂಟಿಸಿ, ಕೆಎಸ್ಆರ್‌ಟಿಸಿ ಬಸ್‍ಗಳು ಸಂಚರಿಸುತ್ತಿದೆ. ಆದರೆ ಜನರಿಲ್ಲದೆ ಮೆಜೆಸ್ಟಿಕ್ ಬಸ್ ನಿಲ್ದಾಣ ಮಾತ್ರ ಖಾಲಿ ಖಾಲಿ ಕಾಣಿಸುತ್ತಿದೆ.
ಡಿಸಿಪಿ ರಮೇಶ್ ಬಾನೋತ್ ನೇತೃತ್ವದಲ್ಲಿ ಭದ್ರತೆ ನಿಯೋಜಿಸಲಾಗಿದೆ. ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ಕೂಡ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಮೆಜೆಸ್ಟಿಕ್‍ನಿಂದ ಫ್ರೀಡಂ ಪಾರ್ಕ್ ವರೆಗೂ ರ‍್ಯಾಲಿ ನಡೆಯಲಿರುವ ಹಿನ್ನೆಲೆ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ಭಧ್ರತೆ ಒದಗಿಸಲಾಗಿದೆ. 1 ಕೆಎಸ್‌ಆರ್‌ಪಿ ತುಕಡಿ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಹೊಯ್ಸಳ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಹಾಗೆಯೇ ರೈಲ್ವೆ ಸಂಚಾರದಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ. ಎಂದಿನಂತೆ ರೈಲುಗಳು ಸಂಚರಿಸಲಿದೆ. ಆದರೆ ಪ್ರಯಾಣಿಕರ ಸಂಖ್ಯೆಯಲ್ಲಿ ಶೇಕಡಾ 50ರಷ್ಟು ಇಳಿಕೆಯಾಗಿದೆ.
ಬೆಂಗಳೂರು: ಸಾರಿಗೆ ಜನರ ಸಂಪರ್ಕ ಕೊಂಡಿ. ಅದರಲ್ಲೂ ಜನ ಸಾಮಾನ್ಯರ ಪ್ರಮುಖ ಸಾರಿಗೆ ಎಂದರೆ ಸರ್ಕಾರಿ ಬಸ್ಸುಗಳು. ಹೀಗಾಗಿ ರಾಜ್ಯದ ಬಸ್ ಇತಿಹಾಸದ ಕುರಿತು ವಸ್ತು ಸಂಗ್ರಹಾಲಯ ನಿರ್ಮಿಸಲು ಸಾರಿಗೆ ಇಲಾಖೆ ಮುಂದಾಗಿದೆ.
ರಾಜ್ಯ ರಸ್ತೆ ಸಾರಿಗೆ ವ್ಯವಸ್ಥೆಯ ಇತಿಹಾಸ ಸಾರುವ ಅತ್ಯಾಕರ್ಷಕ ವಸ್ತು ಸಂಗ್ರಹಾಲಯವನ್ನು ಸಾರಿಗೆ ಇಲಾಖೆಯಿಂದ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಶೀಘ್ರದಲ್ಲೇ ನಿರ್ಮಾಣ ಮಾಡಲು ಮುಂದಾಗಿದೆ.
ಕೆಂಪೇಗೌಡ ಬಸ್ ನಿಲ್ದಾಣ(ಮೆಜೆಸ್ಟಿಕ್) ಅರ್ಧ ಶತಮಾನ ಪೂರೈಸಿದ ಸವಿ ನೆನಪಿಗಾಗಿ ಈ ವಸ್ತು ಸಂಗ್ರಹಾಲಯ ಸ್ಥಾಪಿಸಲಾಗಿತ್ತಿದ್ದು, ಕೆಸ್‍ಆರ್‍ಟಿಸಿ ಬಸ್ಸುಗಳು ಯಾವಾಗ ರಸ್ತೆಗಳಿದವು, ವಾಯುವ್ಯ, ಈಶಾನ್ಯ, ನೈಋತ್ಯ ಸೇರಿದಂತೆ ಇತರೆ ವಿಭಾಗಗಳು ಹೇಗೆ ರೂಪುಗೊಂಡವು? ಈ ಸಂಸ್ಥೆಗಳ ಉಗಮಕ್ಕೂ ಮುನ್ನ, ರಾಜ್ಯದಲ್ಲಿ ಸಾರಿಗೆ ವ್ಯವಸ್ಥೆ ಹೇಗಿತ್ತು ಎಂಬುದರ ಕುರಿತು ಬಹುತೇಕರಿಗೆ ತಿಳಿದಿಲ್ಲ. ತಿಳಿದುಕೊಳ್ಳೋಣ ಅಂದುಕೊಂಡರೂ, ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡುವ ಯಾವುದೇ ಕೋಶ ಇಲ್ಲ. ಹೀಗಾಗಿ ವಸ್ತು ಸಂಗ್ರಹಾಲಯ ನಿರ್ಮಿಸಲು ಸಾರಿಗೆ ಇಲಾಖೆ ಚಿಂತಿಸಿದೆ.
ದೇಶದಲ್ಲಿ ರೈಲ್ವೆ ಮ್ಯೂಸಿಯಂ ಇದೆ. ಆದರೆ ಬಸ್ ಸಾರಿಗೆ ವ್ಯವಸ್ಥೆಯ ಇತಿಹಾಸ ಹೇಳುವ ಮ್ಯೂಸಿಯಂ ಎಲ್ಲೂ ಇಲ್ಲ. ಈ ಕೊರತೆಯನ್ನು ನೀಗಿಸಲು ಮೊದಲ ಬಾರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಈ ಪ್ರಯತ್ನಕ್ಕೆ ಕೈ ಹಾಕಿದೆ.
ಕೆಂಪೇಗೌಡ ಬಸ್ ನಿಲ್ದಾಣ(ಮೆಜೆಸ್ಟಿಕ್) ಅರ್ಧ ಶತಮಾನ ಪೂರೈಸಿದ ಸವಿ ನೆನಪಿಗಾಗಿ, ಸುಮಾರು 3 ಸಾವಿರ ಚದರ ಅಡಿ ವಿಸ್ತೀರ್ಣದಲ್ಲಿ ವಸ್ತು ಸಂಗ್ರಹಾಲಯ ಜನ್ಮ ತಾಳಲಿದೆ. ಮ್ಯೂಸಿಯಂ ನಿರ್ಮಿಸಲು ಅನಾವಶ್ಯಕವಾಗಿ ದುಡ್ಡು ವೆಚ್ಚ ಮಾಡುತ್ತಿಲ್ಲ. ಬದಲಾಗಿ ಹಳೆಯ ಹಾಗೂ ಗುಜರಿ ಬಸ್‍ಗಳೇ, ಮ್ಯೂಸಿಯಂ ಆಗಿ ಪರಿವರ್ತನೆಗೊಂಡು, ಸಾರಿಗೆ ಇತಿಹಾಸ ಸಾರಲಿವೆ. ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ ಬಳಸಿಕೊಂಡು, ವಿಶೇಷ ವಿನ್ಯಾಸದ ವಸ್ತು ಸಂಗ್ರಹಾಲಯ ನಿರ್ಮಿಸಲು ನಿರ್ಧರಿಸಲಾಗಿದೆ. ಹಳೇ ಬಸ್ ಗಳಿಗೆ ಆಕರ್ಷಕ ರೂಪ ಕೊಟ್ಟು ಮ್ಯೂಸಿಯಂ ನಿರ್ಮಿಸಲು, ಅನೇಕ ವಿನ್ಯಾಸಕರು ಮುಂದೆ ಬಂದಿದ್ದಾರೆ. ಮೆಜೆಸ್ಟಿಕ್‍ನಲ್ಲಿನ ಒಟ್ಟು 5 ಹಳೆಯ ಬಸ್ಸುಗಳು ಮ್ಯೂಸಿಯಂ ರೂಪ ತಾಳಲಿವೆ.
ಬೆಂಗಳೂರು: ಸಿಲಿಕಾನ್ ಸಿಟಿಯ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಪ್ಲಾಸ್ಟಿಕ್ ಬಾಟಲ್ ಕ್ರಷ್ ಮಾಡಿ ಮರುಬಳಕೆ ಮಾಡುವ ಯಂತ್ರವನ್ನು ಇದೇ ಮೊದಲ ಬಾರಿಗೆ ಇಡಲಾಗಿದೆ.
ಈ ಮೆಷಿನ್ ಅನ್ನು ಕೆ.ಎಸ್.ಆರ್.ಟಿ.ಸಿಯ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಇತ್ತೀಚಿಗೆ ಉದ್ಘಾಟಿಸಿದ್ದಾರೆ. ಈ ಯಂತ್ರವು ಪ್ರತಿ ದಿನ ಕನಿಷ್ಠ 4500 ಪ್ಲಾಸ್ಟಿಕ್ ಬಾಟಲಿಗಳನ್ನು ಕ್ರಷ್ ಮಾಡಲಿದೆ. ಅಂದರೆ ಒಂದು ವರ್ಷಕ್ಕೆ 17.2 ಟನ್ ಪ್ಲಾಸ್ಟಿಕ್ ತ್ಯಾಜ್ಯ ಈ ಯಂತ್ರದಿಂದ ಮರುಬಳಕೆ ಆಗಲಿದೆ.
ಈ ಯಂತ್ರವು 4.3 ಲಕ್ಷ ಬೆಲೆಯದ್ದಾಗಿದೆ. ಗ್ರೀನ್ ಸೈಕ್ಲೋ ಪಾಸ್ಟ್ ಮತ್ತು ಸ್ಪರ್ಶ ಮಸಾಲಾ ರವರ ಸಿ.ಎಸ್.ಆರ್ (ಸಾಮಾಜಿಕ ಹೊಣೆಗಾರಿಕೆ)ಯಡಿ ಕಾರ್ಯಗತಗೊಳಿಸಲಾಗಿದೆ. ನಿಗಮವು ಇದಕ್ಕಾಗಿ ಉಚಿತ ಸ್ಥಳಾವಕಾಶ ಮತ್ತು ವಿದ್ಯುತ್ ವೆಚ್ಚವನ್ನು ಭರಿಸಲಿದೆ. ಕೆ.ಎಸ್.ಆರ್.ಟಿ.ಸಿ ಪರಿಸರ ಸ್ನೇಹಿ ಕಾರ್ಯಕ್ರಮಗಳ ಅಡಿಯಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತಂದಿದೆ.
ಇದರಿಂದ ಬಸ್ ನಿಲ್ದಾಣ, ರಸ್ತೆ, ಶೌಚಾಲಯದ ಕ್ಯಾಬಿನ್, ಕಸದ ಬುಟ್ಟಿಗಳು, ದಿನಚರಿ ಪುಸ್ತಕ, ಟಿ ಶರ್ಟ್ ಗಳನ್ನು ತಯಾರಿಸಲಾಗುತ್ತದೆಯೆಂದು ಹೇಳಲಾಗುತ್ತಿದೆ.
– ರೈಲ್ವೇ ಇಲಾಖೆ ವಿರುದ್ಧ ಭಕ್ತರ ಆಕ್ರೋಶ
– ಹೈಕೋರ್ಟ್ ಆದೇಶದಂತೆ ಶನೇಶ್ವರ ಶಿಫ್ಟ್
ಬೆಂಗಳೂರು: ಸಾಮಾನ್ಯವಾಗಿ ಭಕ್ತರು ಶನಿವಾರ ಬಂದ್ರೆ ಶನೇಶ್ವರ ದೇವಸ್ಥಾನಕ್ಕೆ ಹೋಗುತ್ತಾರೆ. ಮೆಜೆಸ್ಟಿಕ್ ಸಮೀಪದ ಶನೇಶ್ವರ ದೇಗುಲಕ್ಕೂ ಸಾಕಷ್ಟು ಜನ ಬರುತ್ತಿದ್ದರು. ಆದರೆ ದೇವಸ್ಥಾನವನ್ನು ರೈಲ್ವೇ ಇಲಾಖೆಯವರು ಏಕಾಏಕಿ ತೆರವುಗೊಳಿಸಿದ್ದಾರೆ.
ಹೈಕೋರ್ಟ್ ಆದೇಶದಂತೆ ರೈಲ್ವೇ ಇಲಾಖೆಯ ಸಿಬ್ಬಂದಿ ಇಲಾಖೆಯ ಜಾಗದಲ್ಲಿದ್ದ ಶನೇಶ್ವರ ದೇವಸ್ಥಾನವನ್ನು ಶಿಫ್ಟ್ ಮಾಡಿದ್ದಾರೆ. ಆದರೆ ಈ ಬಗ್ಗೆ ಮಾಹಿತಿ ಇರದ ಭಕ್ತರು ಇಂದು ಶನೇಶ್ವರ ದೇವಸ್ಥಾನಕ್ಕೆ ಬಂದಿದ್ದಾರೆ. ದೇಗುಲ, ದೇವರ ಮೂರ್ತಿ ಇರದಿದ್ದನ್ನು ಕಂಡ ಭಕ್ತರು ರೈಲ್ವೇ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈಲ್ವೇ ಇಲಾಖೆ ಸಿಬ್ಬಂದಿಯು ಶನೇಶ್ವರನ ಮೂರ್ತಿಯನ್ನು ಶ್ರೀರಾಮಪುರದ ಅಯ್ಯಪ್ಪ ದೇಗುಲದಲ್ಲಿ ಇಟ್ಟಿದ್ದಾರೆ. ಆದರೆ ದೇವರ ಪಾದವನ್ನು ಮಾತ್ರ ಅಲ್ಲಿಯೇ ಬಿಟ್ಟಿದ್ದಾರೆ. ಇದನ್ನು ನೋಡಿದ ಭಕ್ತರು ರೈಲ್ವೇ ಇಲಾಖೆ ಸಿಬ್ಬಂದಿ ವಿರುದ್ಧ ಕಿಡಿಕಾರಿದ್ದಾರೆ.
ನಲವತ್ತು ವರ್ಷಗಳಿಂದ ಶನೇಶ್ವರ ಇದೆ. ಆದರೆ ಅದನ್ನು ಪದೇ ಪದೇ ರೈಲ್ವೇ ಇಲಾಖೆಯವರು ಶಿಫ್ಟ್ ಮಾಡುತ್ತಿದ್ದಾರೆ. ಹೀಗೆ ಮಾಡಿದರೆ ಹೇಗೆ. ಇಲ್ಲಿಗೆ ಬಂದು ದೇವರ ದರ್ಶನ ಪಡೆದರೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇತ್ತು. ಇಷ್ಟು ಜಾಗ ಖಾಲಿ ಇದೆ. ಇದರಲ್ಲಿ ದೇವಸ್ಥಾನಕ್ಕೆ ಒಂದಿಷ್ಟು ಜಾಗ ಬಿಟ್ಟಿದ್ದರೆ ಏನಾಗುತ್ತಿತ್ತು ಎಂದು ಭಕ್ತರು ಆಕ್ರೋಶ ಹೊರ ಹಾಕಿದ್ದಾರೆ.
ಮೂರನೇ ಬಾರಿ ಶನೇಶ್ವರ ಶಿಫ್ಟಿಂಗ್:
ಇದವರೆಗೂ ಮೂರು ಬಾರಿ ಶನೇಶ್ವರ ದೇವಸ್ಥಾನವನ್ನು ಶಿಫ್ಟ್ ಮಾಡಲಾಗಿದೆ. ಈ ಹಿಂದೆ ಶ್ರೀರಾಮಪುರದಿಂದ ಓಕಳಿಪುರಂಗೆ ದೇಗುಲವನ್ನು ಶಿಫ್ಟ್ ಮಾಡಲಾಗಿತ್ತು. ಬಳಿಕ ರಸ್ತೆ ಅಗಲೀಕರಣಕದ ಉದ್ದೇಶದಿಂದ ರೈಲ್ವೇ ಇಲಾಖೆಯು ಆರು ತಿಂಗಳ ಹಿಂದಷ್ಟೇ ಮೆಜೆಸ್ಟಿಕ್ ಸಮೀಪದ ಸ್ಥಳಕ್ಕೆ ಶಿಫ್ಟ್ ಮಾಡಿತ್ತು. ಇದೀಗ ಅಲ್ಲಿಂದಲೂ ಶನೇಶ್ವರನನ್ನು ಓಕಳೀಪುರಂನಲ್ಲಿರುವ ಅಯ್ಯಪ್ಪ ದೇಗುಲಕ್ಕೆ ಶಿಫ್ಟ್ ಮಾಡಿದ್ದಾರೆ.