Tag: Major Dhyan Chand Khel Ratna Award

  • ರಾಜೀವ್ ಗಾಂಧಿ ಖೇಲ್ ರತ್ನ ಅಲ್ಲ ಇನ್ನು ಮುಂದೆ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ’ ಪ್ರಶಸ್ತಿ

    ರಾಜೀವ್ ಗಾಂಧಿ ಖೇಲ್ ರತ್ನ ಅಲ್ಲ ಇನ್ನು ಮುಂದೆ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ’ ಪ್ರಶಸ್ತಿ

    ನವದೆಹಲಿ: ದೇಶದಲ್ಲಿ ಕ್ರೀಡಾ ಪಟುಗಳಿಗೆ ನೀಡುವ ಅತ್ಯುನ್ನತ ಪುರಸ್ಕಾರ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರು ಬದಲಾವಣೆಯಾಗಿದೆ. ಇನ್ನು ಮುಂದೆ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ’ ಪ್ರಶಸ್ತಿಯೆಂದು ಮರುನಾಮಕರಣ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.

    ದೇಶದಾದ್ಯಂತ ಹಲವು ಜನ ನನಗೆ ಇನ್ನು ಮುಂದೆ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಅವರ ಹೆಸರಿನಲ್ಲಿ ನೀಡಿ ಎಂದು ಮನವಿ ಸಲ್ಲಿಸಿದ್ದರು. ಅವರ ಅಭಿಪ್ರಾಯವನ್ನು ಗೌರವಿಸಿ ಖೇಲ್ ರತ್ನ ಪ್ರಶಸ್ತಿಯನ್ನು ಇನ್ನು ಮುಂದೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಮರು ನಾಮಕರಣ ಮಾಡಲಾಗಿದೆ ಎಂದು ಘೋಷಿಸಿದ್ದಾರೆ. ಇದನ್ನೂ ಓದಿ: ಗಾಲ್ಫ್ ನಲ್ಲಿ ಅದಿತಿ ಮಿಂಚು – ಭಾರತಕ್ಕೆ ಮತ್ತೊಂದು ಪದಕ?

    ಭಾರತಕ್ಕೆ ಹಾಕಿ ಕ್ರೀಡೆಯ ಮೂಲಕ ಗೌರವ ತಂದುಕೊಟ್ಟ ಮೇಜರ್ ಧ್ಯಾನ್ ಚಂದ್ ಕ್ರೀಡಾ ಕ್ಷೇತ್ರದ ದಂತಕಥೆ, ಭಾರತದ ಹೆಮ್ಮೆಯ ಕ್ರೀಡಾಪಟು ಅವರು. ನಮ್ಮ ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯನ್ನು ಅವರ ಹೆಸರಿನಲ್ಲಿ ನೀಡುವುದು ನಿಜಕ್ಕೂ ಗೌರವ, ಹೆಮ್ಮೆಯ ವಿಷಯ ಎಂದು ಪ್ರಧಾನಿ ಟ್ವೀಟ್ ಮೂಲಕ ಅಭಿಪ್ರಾಯಪಟ್ಟಿದ್ದಾರೆ.

    1991-92 ರಲ್ಲಿ ಈ ಖೇಲ್ ರತ್ನ ಪ್ರಶಸ್ತಿಯನ್ನು ನೀಡಲು ಆರಂಭಿಸಿದ್ದು, ಕ್ರೀಡಾ ಸಾಧಕರಿಗೆ 25 ಲಕ್ಷ ರೂ. ನಗದು ಹಣವನ್ನು ಬಹುಮಾನವಾಗಿ ನೀಡಲಾಗುತ್ತದೆ.