Tag: malaika vasupal

  • ಕಲ್ಟ್ ಸಿನಿಮಾದ ಅಯ್ಯೊ ಶಿವನೇ ಹಾಡಿನ ರಿಲೀಸ್ ಡೇಟ್ ಫಿಕ್ಸ್

    ಕಲ್ಟ್ ಸಿನಿಮಾದ ಅಯ್ಯೊ ಶಿವನೇ ಹಾಡಿನ ರಿಲೀಸ್ ಡೇಟ್ ಫಿಕ್ಸ್

    ನಾರಸ್ (Banaras) ಚಿತ್ರದ ನಂತರ ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಉಪಾಧ್ಯಕ್ಷ ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ “ಕಲ್ಟ್” (Cult) ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಝೈದ್ ಖಾನ್, ರಚಿತರಾಮ್ ಹಾಗೂ ಮಲೈಕ ಈ ಚಿತ್ರದ ಪ್ರಮುಖ ತಾರಾಬಳಗದಲ್ಲಿದ್ದಾರೆ.

    ಈಗಾಗಲೇ ಫಸ್ಟ್ ಲುಕ್ ಹಾಗೂ ಟೀಸರ್ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರದ ಮೊದಲ ಹಾಡು “ಅಯ್ಯೊ ಶಿವನೇ” ಇದೇ ಸೆಪ್ಟೆಂಬರ್ 10 ರಂದು ಆನಂದ್ ಆಡಿಯೋ (Anand Audio) ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾಗಲಿದೆ. ನಿರ್ದೇಶಕ ಅನಿಲ್ ಕುಮಾರ್ ಅವರೇ ಬರೆದಿರುವ ಈ ಹಾಡನ್ನು ಜನಪ್ರಿಯ ಗಾಯಕ – ಗಾಯಕಿ ಜಸ್ಕರಣ್ ಸಿಂಗ್ ಹಾಗೂ ಪೃಥ್ವಿ ಭಟ್ ಹಾಡಿದ್ದಾರೆ.ಇದನ್ನೂ ಓದಿ: ಯಶ್ ನಟನೆಯ ರಾಮಾಯಣ-2 ಚಿತ್ರಕ್ಕೆ VFX ಗಾಗಿ ಗಾಡ್ಜಿಲ್ಲ ತಂತ್ರಜ್ಞರು ಎಂಟ್ರಿ

    ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಮಲೈಕ ಅಭಿನಯಿಸಿದ್ದಾರೆ. ಈಗಾಗಲೇ ಈ ಮೊದಲ ಹಾಡಿನ ಪ್ರೋಮೋ ಬಿಡುಗಡೆಯಾಗಿದ್ದು, ಎಲ್ಲರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಪ್ರೋಮೋದಲ್ಲೇ ಗಮನ ಸೆಳೆದಿರುವ “ಅಯ್ಯೋ ಶಿವನೇ” ಹಾಡನ್ನು ಆಲಿಸಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

    ಕೆ.ವಿ.ಎನ್ ಪ್ರೊಡಕ್ಷನ್ಸ್ ಅರ್ಪಿಸುವ, ಲೋಕಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ “ಕಲ್ಟ್” ಚಿತ್ರದ ರಚನೆ ಹಾಗೂ ನಿರ್ದೇಶನ ಅನಿಲ್ ಕುಮಾರ್ ಅವರದು. ಜೆ.ಎಸ್ ವಾಲಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.ಇದನ್ನೂ ಓದಿ: ಪವನ್ ಕಲ್ಯಾಣ್ ಅಭಿಮಾನಿಗಳಿಂದ ಸರ್ ಎಂ.ವಿಶ್ವೇಶ್ವರಯ್ಯ ವಿದ್ಯಾಭ್ಯಾಸ ಮಾಡಿದ ಶಾಲೆಯ ನವೀಕರಣ

  • ವಿದ್ಯಾಪತಿಗೆ ನಡುಕ ಹುಟ್ಟಿಸಿದ ‘ಕೆಜಿಎಫ್’ ಗರುಡ!

    ವಿದ್ಯಾಪತಿಗೆ ನಡುಕ ಹುಟ್ಟಿಸಿದ ‘ಕೆಜಿಎಫ್’ ಗರುಡ!

    ನಂಜಯ ನಿರ್ಮಾಣ ಮಾಡಿರುವ ‘ವಿದ್ಯಾಪತಿ’ ಚಿತ್ರ ಇಂದು (ಏ.10) ಬಿಡುಗಡೆಯಾಗಿದೆ. ಸಾಕಷ್ಟು ಪಾತ್ರಗಳಲ್ಲಿ ಅಭಿನಯಿಸುತ್ತಾ, ಇತ್ತೀಚಿನ ದಿನಗಳಲ್ಲಿ ನಾಯಕ ನಟನಾಗಿ ಚಾಲ್ತಿಯಲ್ಲಿರುವ ನಾಗಭೂಷಣ್ (Nagabhushan) ಈ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ. ನಾಗಭೂಷಣ್ ಈ ಸಿನಿಮಾ ನಾಯಕ ಎಂಬ ಸುದ್ದಿ ಹೊರ ಬಿದ್ದಾಕ್ಷಣವೇ ಬಹುತೇಕರ ಕಲ್ಪನೆ ಹಾಸ್ಯದ ಚೌಕಟ್ಟಿನಲ್ಲಿಯೇ ಗಿರಕಿ ಹೊಡೆದಿತ್ತು. ಆದರೆ ಟ್ರೈಲರ್ ಬಿಡುಗಡೆಗೊಳ್ಳುತ್ತಲೇ ಒಂದಿಡೀ ಚಿತ್ರಣವೇ ಬದಲಾಗಿ ಹೋಗಿತ್ತು. ಯಾಕೆಂದರೆ, ಅಲ್ಲಿ ಸುಳಿದಿದ್ದು ಭಿನ್ನ ಕಥನ, ಅದಕ್ಕೆ ತಕ್ಕುದಾದ ಪಾತ್ರಗಳ ಸುಳಿವು. ಹಾಸ್ಯವೆಂಬುದು ಈ ಸಿನಿಮಾದ ಕಥೆಯ ಆತ್ಮವೆಂಬುದು ನಿಜ. ಆದರೆ, ಅದರಾಚೆಗೂ ಹಬ್ಬಿಕೊಂಡಿರುವ ಬೆರಗಿನ ದೃಶ್ಯಗಳನ್ನು ಕಂಡು ಪ್ರೇಕ್ಷಕರು ಥ್ರಿಲ್ ಆಗಿದ್ದಾರೆ.

    ಇಶಾಂ ಹಾಗೂ ಹಸೀಮ್ ಸಿದ್ಧಪಡಿಸಿದ್ದ ಕಥೆ ಕೇಳಿಯೇ ಡಾಲಿ ಧನಂಜಯ ಈ ಸಿನಿಮಾವನ್ನು ನಿರ್ಮಾಣ ಮಾಡಲು ಮುಂದಾಗಿದ್ದರು. ತನ್ನ ಗೆಳೆಯ ನಾಗಭೂಷಣ್ ನಾಯಕನಾಗಿ ನಟಿಸುತ್ತಿರೋದರಿಂದ ನಿರ್ಮಾಣದಾಚೆಗಿನ ಕಾಳಜಿಯೂ ಡಾಲಿಗಿತ್ತು. ಕಡೆಗೂ ನಿರ್ದೇಶಕರು ನಿರೀಕ್ಷೆಗೂ ಮೀರಿ ಈ ಚಿತ್ರವನ್ನು ಕಟ್ಟಿಕೊಟ್ಟಿದ್ದರ ಬಗೆಗಿನ ಹೆಮ್ಮೆಯ ಭಾವ ಧನಂಜಯ ಮಾತುಗಳಲ್ಲಿ ಧ್ವನಿಸುತ್ತಿತ್ತು. ಅಂಥಾದ್ದೊಂದು ಮೆಚ್ಚುಗೆಯೀಗ ಸಿನಿಮಾ ನೋಡಿದವರೆಲ್ಲರಲ್ಲೂ ಮೂಡಿಕೊಂಡಿದೆ. ಅದುವೇ ‘ವಿದ್ಯಾಪತಿ’ಯ ಯಶಸ್ಸಿನ ಮುನ್ಸೂಚನೆಯಂತೆಯೂ ಕಾಣಿಸುತ್ತಿದೆ. ಇದನ್ನೂ ಓದಿ:ಹೆಂಡತಿ ಕಾಸಲ್ಲಿ ಶೋಕಿ ಮಾಡ್ತಾರಾ ನಟ ನಾಗಭೂಷಣ್?


    ಈ ಸಿನಿಮಾದಲ್ಲಿ ಹಲವಾರು ಆಕರ್ಷಣೆಗಳಿದ್ದಾವೆ. ಅದರಲ್ಲಿ ಪ್ರಧಾನವಾಗಿ ಹಾಸ್ಯದೊಂದಿಗೆ ಮಾಸ್ ಸನ್ನಿವೇಶಗಳೂ ಕೂಡ ಸ್ಥಾನ ಪಡೆದುಕೊಳ್ಳುತ್ತವೆ. ಅದರಲ್ಲಿಯೂ ವಿಶೇಷವಾಗಿ ಕೆಜಿಎಫ್ ಚಿತ್ರದ ಗರುಡ ಪಾತ್ರಧಾರಿಯಾಗಿ ಪ್ರಸಿದ್ಧಿ ಪಡೆದುಕೊಂಡಿರುವ ಗರುಡ ರಾಮ್ (Garuda Ram) ಈ ಸಿನಿಮಾದಲ್ಲಿ ವಿಲನ್ ಆಗಿ ಅಬ್ಬರಿಸಿದ್ದಾರೆ. ಆ ಪಾತ್ರದ ಮೂಲಕವೇ ವಿದ್ಯಾಪತಿಯ ಕಥನ ಮತ್ತೊಂದು ಆಯಾಮದತ್ತ ಹೊರಳಿಕೊಳ್ಳುತ್ತದೆ. ಅದನ್ನು ಪ್ರೇಕ್ಷಕರೆಲ್ಲ ಸಂಭ್ರಮಿಸಿದ್ದಾರೆ. ಈ ಪಾತ್ರದ ಬಗ್ಗೆ, ಅದರ ಇರುವಿಕೆಯ ದೃಶ್ಯಾವಳಿಗಳನ್ನು ಸಿನಿಮಾ ಮಂದಿರಗಳಲ್ಲಿಯೇ ಹೋಗಿ ನೋಡಿದರೆ ನೈಜ ಅನುಭೂತಿ ದಕ್ಕಲು ಸಾಧ್ಯ. ಇದನ್ನೂ ಓದಿ: ಹಿಟ್ಲರ್ ಸಖಿ ಮಲೈಖಾ ಈಗ ಸೂಪರ್ ಸ್ಟಾರ್ ವಿದ್ಯಾ!

     

    View this post on Instagram

     

    A post shared by Garuda Ram (@garuda_ram_official)

    ಇಶಾಂ ಹಾಗೂ ಹಸೀಮ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಸಂಕಲನದ ಜವಾಬ್ದಾರಿಯನ್ನೂ ಅವರೇ ನಿಭಾಯಿಸಿದ್ದಾರೆ. ಲವಿತ್ ಛಾಯಾಗ್ರಹಣ, ಡಾಸ್ಮೋಡ್ ಸಂಗೀತ ನಿರ್ದೇಶನ ಮತ್ತು ಮುರಳಿ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ನಾಗಭೂಷಣ್, ಮಲೈಕಾ ವಸುಪಾಲ್ (Malaika Vasupal), ರಂಗಾಯಣ ರಘು, ಕಾರ್ತಿಕ್ ರಾವ್ ತಾರಾಗಣವಿದೆ. ಸಿನಿಮಾ ಬಗ್ಗೆ ಓರ್ವ ನಟನಾಗಿ ಅತೀವ ಪ್ರೀತಿ ಹೊಂದಿರುವ ಡಾಲಿ ಧನಂಜಯ, ಹೊಸಾ ಪ್ರತಿಭೆಗಳು ಮತ್ತು ತನ್ನ ವಲಯದವರನ್ನು ಬೆಳೆಸುವ ಗುಣ ಹೊಂದಿದ್ದಾರೆ. ಹಾಗಾಗಿ ಅವರು ‘ವಿದ್ಯಾಪತಿ’ (Vidyapati) ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದೀಗ ಮೊದಲ ದಿನವೇ ಪ್ರೇಕ್ಷಕರ ಕಡೆಯಿಂದ ಸಿಗುತ್ತಿರುವ ಭರಪೂರ ಮೆಚ್ಚುಗೆ ಕಂಡು ಚಿತ್ರತಂಡ ಖುಷಿಗೊಂಡಿದೆ. ಬೇಸಿಗೆ ರಜೆಯ ಮಜಕ್ಕೆ ಮತ್ತಷ್ಟು ಮೆರುಗು ತುಂಬಬಲ್ಲ ಈ ಸಿನಿಮಾ ಕುಟುಂಬ ಸಮೇತರಾಗಿ ನೋಡಿಸಿಕೊಳ್ಳುವ ಗುಣಗಳೊಂದಿಗೆ ಗಮನ ಸೆಳೆಯುತ್ತಿದೆ.

  • ಹಿಟ್ಲರ್ ಸಖಿ ಮಲೈಖಾ ಈಗ ಸೂಪರ್ ಸ್ಟಾರ್ ವಿದ್ಯಾ!

    ಹಿಟ್ಲರ್ ಸಖಿ ಮಲೈಖಾ ಈಗ ಸೂಪರ್ ಸ್ಟಾರ್ ವಿದ್ಯಾ!

    ‘ಉಪಾಧ್ಯಕ್ಷ’ ಚಿತ್ರದ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದವರು ಮಲೈಕಾ ವಸುಪಾಲ್. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯ ನಾಯಕಿಯಾಗಿ ಪ್ರಸಿದ್ಧಿ ಪಡೆದುಕೊಂಡಿದ್ದ ಅವರು ಇದೀಗ ಡಾಲಿ ಧನಂಜಯ ನಿರ್ಮಾಣ ಮಾಡಿರುವ ‘ವಿದ್ಯಾಪತಿ’ ಚಿತ್ರದ ಮೂಲಕ ಎರಡನೇ ಬಾರಿ ನಾಯಕಿಯಾಗಿ ಪ್ರೇಕ್ಷಕರನ್ನು ಮುಖಾಮುಖಿಯಾಗಲಿದ್ದಾರೆ. ಈ ಬಾರಿ ಮತ್ತೊಂದು ತೆರನಾದ ಚೆಂದದ ಪಾತ್ರ ಸಿಕ್ಕ ಖುಷಿಯೂ ಮಲೈಕಾರಲ್ಲಿದೆ. ಮೊದಲ ಹೆಜ್ಜೆಯಲ್ಲಿಯೇ ಸಿನಿಮಾ ರಂಗದಲ್ಲಿ ನೆಲೆ ಕಂಡುಕೊಳ್ಳುವ ಭರವಸೆ ಮೂಡಿಸಿಕೊಂಡಿದ್ದ ಮಲೈಕಾ, ಆ ನಂತರದಲ್ಲಿ ಭಿನ್ನ ಬಗೆಯ ಪಾತ್ರಕ್ಕಾಗಿ ಅನ್ವೇಷಣೆ ಆರಂಭಿಸಿದ್ದರು. ಆ ಹಾದಿಯಲ್ಲಿ ಅನೇಕ ಕಥೆಗಳೂ ಕೂಡಾ ಅವರನ್ನು ಅರಸಿ ಬಂದಿತ್ತು. ಅದೆಲ್ಲದರ ನಡುವೆ, ವರ್ಷದ ಹಿಂದೆ ಬಹುವಾಗಿ ಕಾಡಿದ್ದದ್ದು ‘ವಿದ್ಯಾಪತಿ’ (Vidyapati) ಚಿತ್ರದ ಪಾತ್ರ. ಆ ಕಾರಣದಿಂದಲೇ ಒಪ್ಪಿ ನಟಿಸಿರುವ ಮಲೈಕಾಗೀಗ (Malaika Vasupal) ಒಂದೊಳ್ಳೆ ಸಿನಿಮಾದ ಭಾಗವಾದ ತೃಪ್ತಿ ದೊರಕಿದೆ. ಇದನ್ನೂ ಓದಿ: ಏಪ್ರಿಲ್ 10ರಂದು ತೆರೆಗಾಣಲು ಸಜ್ಜಾದ ‘ವಿದ್ಯಾಪತಿ’!

    ‘ಹಿಟ್ಲರ್ ಕಲ್ಯಾಣ’ ಎಂಬ ಧಾರಾವಾಹಿಯ ಲವಲವಿಕೆಯ ಪಾತ್ರದ ಮೂಲಕ ಕಿರುತೆರೆ ಪ್ರೇಕ್ಷಕರ ಮನ ಗೆದ್ದವರು ಮಲೈಕಾ. ಪಕ್ಕಾ ಮಾಸ್ ಲುಕ್ಕಿನಲ್ಲಿಯೂ ಮಿಂಚಿದ್ದ ಈಕೆ ನಾಯಕಿಯಾಗಿ ಮಿಂಚುವ ಎಲ್ಲ ಲಕ್ಷಣಗಳನ್ನೂ ಹೊಂದಿದ್ದದ್ದು ನಿಜ. ಇಂಥಾ ಮಲೈಕಾ ವಿದ್ಯಾಪತಿ ಚಿತ್ರದ ನಾಯಕಿಯಾಗಬೇಕೆಂದು ಆರಂಭದಲ್ಲಿಯೇ ಚಿತ್ರತಂಡ ನಿರ್ಧರಿಸಿತ್ತಂತೆ. ಈ ಕುರಿತಾಗಿ ಕರೆ ಬಂದಾಗ ಆರಂಭಿಕವಾಗಿ ಮಲೈಕಾ ಒಪ್ಪಿಕೊಳ್ಳಲು ಕಾರಣವಾದದ್ದು ಅದು ಡಾಲಿ ನಿರ್ಮಾಣ ಮಾಡುತ್ತಿರೋ ಸಿನಿಮಾ ಅನ್ನೋದು. ಆ ನಂತರ ಒಂದಿಡೀ ಕಥೆ ಮತ್ತು ಪಾತ್ರದ ಬಗ್ಗೆ ಕೇಳಿದಾಗ ಮಲೈಕಾ ಅಕ್ಷರಶಃ ಥ್ರಿಲ್ ಆಗಿದ್ದರಂತೆ. ಇದನ್ನೂ ಓದಿ:ಹೆಂಡತಿ ಕಾಸಲ್ಲಿ ಶೋಕಿ ಮಾಡ್ತಾರಾ ನಟ ನಾಗಭೂಷಣ್?

    ಇಲ್ಲಿ ಅವರು ಸೂಪರ್ ಸ್ಟಾರ್ ನಟಿ ವಿದ್ಯಾ ಎಂಬ ಪಾತ್ರಕ್ಕೆ ಜೀವ ತುಂಬಿದ್ದಾರೆ. ಆ ಪಾತ್ರದ ಒಂದಷ್ಟು ಝಲಕ್ಕುಗಳು ಟ್ರೈಲರ್ ಮೂಲಕ ಅನಾವರಣಗೊಂಡಿವೆ. ಹಾಗಂತ ಅದರ ಚಹರೆ ಅಷ್ಟಕ್ಕೆ ಮಾತ್ರವೇ ಸೀಮಿತವಾಗಿಲ್ಲ. ಮಲೈಕಾ ಪಾತ್ರದ ಮತ್ತೊಂದಷ್ಟು ರಹಸ್ಯಗಳು ಚಿತ್ರಮಂದಿರದಲ್ಲಿ ಪ್ರೇಕ್ಷಕರ ಮುಂದೆ ತೆರೆದುಕೊಳ್ಳಲಿದೆ. ಇದೀಗ ಪ್ರತಿಭಾನ್ವಿತರ ತಂಡದೊಂದಿಗೆ, ಒಂದೊಳ್ಳೆ ಪಾತ್ರ ನಿರ್ವಹಿಸಿರುವ ಖುಷಿ ಹೊಂದಿರುವ ಮಲೈಕಾಗೆ, ವಿದ್ಯಾಪತಿ ಚಿತ್ರ ತನ್ನ ವೃತ್ತಿ ಬದುಕಿನ ದಿಕ್ಕುದೆಸೆ ಬದಲಿಸುತ್ತದೆಂಬ ಗಾಢ ನಂಬಿಕೆಯಿದೆ. ಈಗಾಗಲೇ ಅವರ ಪಾತ್ರದ ಬಗ್ಗೆ ಮೆಚ್ಚುಗೆಗಳು ಕೇಳಿ ಬರುತ್ತಿವೆ. ಈ ಬಾರಿ ನಾಗಭೂಷಣ್ ಮತ್ತು ಮಲೈಕಾ ಜೋಡಿ ಮೋಡಿ ಮಾಡುವ ಎಲ್ಲ ಲಕ್ಷಣಗಳೂ ಕಾಣಿಸಲಾರಂಭಿಸಿವೆ.

    ಇಶಾಂ ಹಾಗೂ ಹಸೀಮ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಸಂಕಲನದ ಜವಾಬ್ದಾರಿಯನ್ನೂ ಅವರೇ ನಿಭಾಯಿಸಿದ್ದಾರೆ. ಲವಿತ್ ಛಾಯಾಗ್ರಹಣ, ಡಾಸ್ಮೋಡ್ ಸಂಗೀತ ನಿರ್ದೇಶನ ಮತ್ತು ಮುರಳಿ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ನಾಗಭೂಷಣ್, ಮಲೈಕಾ ವಸುಪಾಲ್, ರಂಗಾಯಣ ರಘು, ಕಾರ್ತಿಕ್ ರಾವ್ ತಾರಾಗಣವಿದೆ. ಸಿನಿಮಾ ಬಗ್ಗೆ ಓರ್ವ ನಟನಾಗಿ ಅತೀವ ಪ್ರೀತಿ ಹೊಂದಿರುವ ಡಾಲಿ ಧನಂಜಯ, ಹೊಸಾ ಪ್ರತಿಭೆಗಳು ಮತ್ತು ತನ್ನ ವಲಯದವರನ್ನು ಬೆಳೆಸುವ ಗುಣ ಹೊಂದಿದ್ದಾರೆ. ಅಂತಾದ್ದೊಂದು ಅಕ್ಕರಾಸ್ಥೆಯಿಂದಲೇ ವಿದ್ಯಾಪತಿ ಚಿತ್ರವನ್ನವರು ನಿರ್ಮಾಣ ಮಾಡಿದ್ದಾರೆ. ಇಂದು (ಏ.10) ಸಿನಿಮಾ ರಿಲೀಸ್‌ ಆಗಿದೆ.

  • ಹೆಂಡತಿ ಕಾಸಲ್ಲಿ ಶೋಕಿ ಮಾಡ್ತಾರಾ ನಟ ನಾಗಭೂಷಣ್?

    ಹೆಂಡತಿ ಕಾಸಲ್ಲಿ ಶೋಕಿ ಮಾಡ್ತಾರಾ ನಟ ನಾಗಭೂಷಣ್?

    ಟ ನಾಗಭೂಷಣ್‌ (Nagabhushan) ನಟನೆಯ ‘ವಿದ್ಯಾಪತಿ’ (Vidyapati) ಸಿನಿಮಾ ಇಂದು (ಏ.10) ಬಿಡುಗಡೆಯಾಗಿದೆ. ಡಾಲಿ ಧನಂಜಯ ನಿರ್ಮಾಣ ಮಾಡಿರುವ ಈ ಸಿನಿಮಾದ ಟ್ರೈಲರ್ ಈಗಾಗಲೇ ಸಂಚಲನ ಸೃಷ್ಟಿಸಿದೆ. ಬಹುತೇಕ ಎಲ್ಲಾ ಅಭಿರುಚಿಯ ಪ್ರೇಕ್ಷಕರು ಕೂಡ ‘ವಿದ್ಯಾಪತಿ’ಯನ್ನು ಮೊದಲ ದಿನವೇ ಕಣ್ತುಂಬಿಕೊಳ್ಳಲು ಚಿತ್ರಮಂದಿರಕ್ಕೆ ಬರುತ್ತಿದ್ದಾರೆ. ಇಂಥಾ ಸಕಾರಾತ್ಮಕ ವಾತಾವರಣದಲ್ಲಿ ಬಿಡುಗಡೆಗೆ ಸಜ್ಜುಗೊಂಡಿರುವ ‘ವಿದ್ಯಾಪತಿ’ ಭಿನ್ನ ಕಥಾನಕವನ್ನೊಳಗೊಂಡಿರೋ ಚಿತ್ರ. ಇದನ್ನೂ ಓದಿ:‘ಕಪಟ ನಾಟಕ ಸೂತ್ರಧಾರಿ’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನಾವರಣಗೊಳಿಸಿದರು ಡಾಲಿ!

    ಇಶಾಂ ಹಾಗೂ ಹಸೀಂ ನಿರ್ದೇಶನ ಮಾಡಿರುವ ಈ ಸಿನಿಮಾದ ಅಸಲಿ ಸ್ವಾದದ ಸುಳಿವು ಟ್ರೈಲರ್ ಮೂಲಕವೇ ಜಾಹೀರಾಗಿತ್ತು. ಒಟ್ಟಾರೆ ಕಥನದ ಕೊಂಬೆ ಕೋವೆಗಳ ಸೂಕ್ಷ್ಮಗಳೂ ಕೂಡ ಇದರೊಂದಿಗೆ ಜಾಹೀರಾದಂತಾಗಿತ್ತು. ಈ ಬಗ್ಗೆ ನಾಯಕ ನಟ ನಾಗಭೂಷಣ್ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಅದರನ್ವಯ ಹೇಳೋದಾದರೆ, ನಾಗಭೂಷಣ್ ಅವರಿಗೆ ಈ ಸಿನಿಮಾದಲ್ಲಿ ಅತ್ಯಪರೂಪದ ಪಾತ್ರ ಸಿಕ್ಕಿದೆ. ಸೂಪರ್ ಸ್ಟಾರ್ ವಿದ್ಯಾಳ ಪತಿ ಎಂಬುದನ್ನೇ ಬಲವಾಗಿಸಿಕೊಂಡು, ಅತೀವ ಹಣದ ವ್ಯಾಮೋಹದ ಪಾತ್ರದಲ್ಲಿ ಅವರು ನಟಿಸಿದ್ದಾರಂತೆ. ಅದರಾಚೆಗೆ ಪಕ್ಕಾ ಮಾಸ್ ಅವತಾರದಲ್ಲಿಯೂ ಕೂಡ ನಾಗಭೂಷಣ್ ಕಾಣಿಸಿಕೊಂಡಿದ್ದಾರಾ? ಇಂಥಾದ್ದೊಂದು ಪ್ರಶ್ನೆ ಟ್ರೈಲರ್ ನೋಡಿದ ಎಲ್ಲರನ್ನೂ ಕಾಡುತ್ತಿದೆ. ಅದಕ್ಕೆ ಇಂದು ಮಜವಾದ ಉತ್ತರ ಸಿಗಲಿದೆ. ಇದನ್ನೂ ಓದಿ:ಕೊಲೆ ಕೇಸ್ ಸಾಕ್ಷ್ಯಿಧಾರನ ಜೊತೆ ಪ್ರಭಾವ ಬೀರುತ್ತಿದ್ದಾರಾ ದರ್ಶನ್?

    ಸೂಪರ್ ಸ್ಟಾರ್ ವಿದ್ಯಾಳ ಪತಿಯಾಗಿ, ಆ ಪ್ರಭೆಯಲ್ಲಿ ಶೋಕಿ ಮಾಡೋ ನಾಯಕನ ಪಾತ್ರಕ್ಕಿಲ್ಲ ಒಂದಷ್ಟು ಚಹರೆಗಳಿದ್ದಾವೆ. ಈ ಹಾದಿಯಲ್ಲಿ ಎಂತೆಂಥಾ ವಿಚಾರಗಳು ಘಟಿಸುತ್ತವೆಂಬುದೇ ಸಿನಿಮಾದ ಜೀವಾಳ. ಅನೇಕ ಟ್ವಿಸ್ಟುಗಳೊಂದಿಗೆ, ಭರಪೂರ ಮನೋರಂಜನಾತ್ಮಕವಾಗಿ ಈ ಸಿನಿಮಾವನ್ನು ರೂಪಿಸಲಾಗಿದೆ. ಆರಂಭ ಕಾಲದಲ್ಲಿ ಸಣ್ಣಪುಟ್ಟ ಪಪಾತ್ರಗಳನ್ನು ಮಾಡುತ್ತಾ ಬಂದಿದ್ದ ನಾಗಭೂಷಣ್ ಅವರ ಪಾಲಿಗೆ ನಾಯಕ ನಟನಾಗಬೇಕೆಂಬ ಯಾವ ಇರಾದೆಯೂ ಇರಲಿಲ್ಲ. ಸಿಕ್ಕ ಪಾತ್ರಗಳನ್ನು ಚೆಂದಗೆ ಬಳಸಿಕೊಂಡು ಉತ್ತಮ ನಟನಾಗಿ ನೆಲೆ ಕಂಡುಕೊಳ್ಳಬೇಕೆಂಬುದಷ್ಟೇ ಅವರ ಗುರಿಯಾಗಿತ್ತು. ಆದರೆ, ಅಚಾನಕ್ಕಾಗಿ ನಾಯಕನಾಗೋ ಅವಕಾಶ ಒಲಿದು ಬಂದು, ಆ ಹಾದಿಯಲ್ಲಿ ಮುಂದುವರೆಯುತ್ತಾ ಬಂದಿರುವ ನಾಗಭೂಷಣ್ ಪಾಲಿಗೆ ‘ವಿದ್ಯಾಪತಿ’ ರೋಮಾಂಚಕ ತಿರುವು ಕೊಡುವ ಲಕ್ಷಣಗಳು ಕಾಣಿಸುತ್ತಿವೆ.


    ಡಾಲಿ ಧನಂಜಯ (Daali Dhananjay) ಅತ್ಯಂತ ಮಹತ್ವಾಕಾಂಕ್ಷೆಯಿಂದ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಈ ಮೂಲಕ ತಮ್ಮ ಗೆಳೆಯ ನಾಗಭೂಷಣ್ ಅವರಿಗೆ ಬೆಂಬಲವಾಗಿ ನಿಂತಿದ್ದಾರೆ. ಒಂದು ಪ್ರತಿಭಾನ್ವಿತ ತಂಡದೊಂದಿಗೆ ಇಶಾಂ ಹಾಗೂ ಹಸೀಮ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಸಂಕಲನದ ಜವಾಬ್ದಾರಿಯನ್ನೂ ಅವರೇ ನಿಭಾಯಿಸಿದ್ದಾರೆ. ಲವಿತ್ ಛಾಯಾಗ್ರಹಣ, ಡಾಸ್ಮೋಡ್ ಸಂಗೀತ ನಿರ್ದೇಶನ ಮತ್ತು ಮುರಳಿ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ನಾಗಭೂಷಣ್, ಮಲೈಕಾ ವಸುಪಾಲ್ (Malaika Vasupal), ರಂಗಾಯಣ ರಘು, ಕಾರ್ತಿಕ್ ರಾವ್ ತಾರಾಗಣವಿದೆ. ಡಾಲಿ ಧನಂಜಯ ನಿರ್ಮಾಣ ಮಾಡಿರುವ ಈ ಸಿನಿಮಾ ಇಂದು ರಾಜ್ಯಾದ್ಯಂತ ಅದ್ದೂರಿಯಾಗಿ ರಿಲೀಸ್‌ ಆಗಿದೆ.

  • ‘ಅರಗಿಣಿ ಮೇಲೆ ‘ವಿದ್ಯಾಪತಿ’ಗೆ ಲವ್- ನಾಗಭೂಷಣ್‌, ಮಲೈಕಾ ರೊಮ್ಯಾಂಟಿಕ್‌ ಸಾಂಗ್‌ ಔಟ್

    ‘ಅರಗಿಣಿ ಮೇಲೆ ‘ವಿದ್ಯಾಪತಿ’ಗೆ ಲವ್- ನಾಗಭೂಷಣ್‌, ಮಲೈಕಾ ರೊಮ್ಯಾಂಟಿಕ್‌ ಸಾಂಗ್‌ ಔಟ್

    ಶಾಂ ಮತ್ತು ಹಸೀಂ ಖಾನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ವಿದ್ಯಾಪತಿ’ (Vidyapati) ಸಿನಿಮಾ ಸ್ಯಾಂಪಲ್ ಗಳಿಂದಲೇ ಸುದ್ದಿ ಮಾಡುತ್ತಿದೆ. ಧನಂಜಯ ಅವರ ಡಾಲಿ ಪಿಕ್ಚರ್ಸ್‌ನಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾದಲ್ಲಿ ನಾಗಭೂಷಣ್ ಕರಾಟೆ‌ ಕಿಂಗ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕಿಯಾಗಿ ಸಾಥ್‌ ನೀಡಿರೋ ಮಲೈಕಾ ಮತ್ತು ನಾಗಭೂಷಣ್‌ (Nagabhushan) ಲವ್ಲಿ ರೊಮ್ಯಾಂಟಿಕ್‌ ಸಾಂಗ್‌ ಅನ್ನು ಚಿತ್ರತಂಡ ರಿಲೀಸ್‌ ಮಾಡಿದೆ. ಇದನ್ನೂ ಓದಿ:ಸಿನಿಮಾದವರು ಬಾಯಿಮುಚ್ಚಿಕೊಂಡು ಇರಬೇಕು – ರಶ್ಮಿಕಾ ವಿರುದ್ಧ ಕೆಂಡ ಕಾರಿದ ಗಣಿಗ ರವಿ

    ಚಿತ್ರದಲ್ಲಿ ನಾಯಕಿ ಸೂಪರ್ ಸ್ಟಾರ್ ವಿದ್ಯಾಳಾಗಿ ಮಲೈಕಾ ವಸುಪಾಲ್ (Malaika Vasupal) ನಟಿಸುತ್ತಿದ್ದಾರೆ. ನಾಗಭೂಷಣ್ ಹಾಗೂ ಮಲೈಕಾ ಜೋಡಿಯ ಪ್ರೇಮಗೀತೆ ಡಾಲಿ ಪಿಕ್ಚರ್ಸ್ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ. ವಿದ್ಯಾ ಪ್ರೀತಿಯಲ್ಲಿ ಬೀಳುವ ವಿದ್ಯಾಪತಿ ಲವ್ ನಂಬರ್ ಗೆ ಸುಜಿತ್ ವೆಂಕಟರಾಮಯ್ಯ ಸಾಹಿತ್ಯ ಒದಗಿಸಿದ್ದು, ಡಾಸ್ಮೋಡ್ ಟ್ಯೂನ್ ಹಾಕಿದ್ದು, ವಾಸುಕಿ ವೈಭವ್ ಹಾಗೂ ಸುಪ್ರಿಯಾ ರಾಮ್ ಧ್ವನಿಯಾಗಿದ್ದಾರೆ.

     

    View this post on Instagram

     

    A post shared by Daali Pictures (@daalipictures)

    ‘ವಿದ್ಯಾಪತಿ’ ಚಿತ್ರಕ್ಕೆ ಇಶಾಂ ಹಾಗೂ ಹಸೀಂ ಖಾನ್ ಅವರು ನಿರ್ದೇಶನ ಮಾಡಿದ್ದಾರೆ. ಕಥೆ ಬರೆದು, ಸಂಕಲನವನ್ನೂ ಅವರೇ ಮಾಡುತ್ತಿದ್ದಾರೆ. ಲವಿತ್ ಅವರ ಛಾಯಾಗ್ರಹಣ, ಡಾಸ್ಮೋಡ್ ಅವರ ಸಂಗೀತ ನಿರ್ದೇಶನ, ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಸುಜಿತ್ ವೆಂಕಟರಾಮಯ್ಯ ಅವರು ಸಾಹಿತ್ಯ ಬರೆದಿದ್ದಾರೆ. ಅರ್ಜುನ್ ಮಾಸ್ಟರ್ ಅವರು ಸಾಹಸ ನಿರ್ದೇಶನ ಮಾಡಿದ್ದಾರೆ.

    ಆಕ್ಷನ್ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ರಂಗಾಯಣ ರಘು ಕರಾಟೆ ಮಾಸ್ಟರ್ ಆಗಿ ಅಭಿನಯಿಸಿದ್ದಾರೆ. ಈ ಸಿನಿಮಾದ ಪಾತ್ರವರ್ಗದಲ್ಲಿ ಇನ್ನೂ ಅನೇಕ ಕಲಾವಿದರು ನಟಿಸಿದ್ದು, ಆ ಬಗ್ಗೆ ಸದ್ಯದಲ್ಲೇ ಚಿತ್ರತಂಡ ಹೆಚ್ಚಿನ ಮಾಹಿತಿ ನೀಡಲಿದೆ.

  • ಝೈದ್ ಖಾನ್‌ಗೆ ಮಲೈಕಾ ವಸುಪಾಲ್ ಹೀರೋಯಿನ್

    ಝೈದ್ ಖಾನ್‌ಗೆ ಮಲೈಕಾ ವಸುಪಾಲ್ ಹೀರೋಯಿನ್

    ಕಿರುತೆರೆ ನಟಿ ಮಲೈಕಾ ವಸುಪಾಲ್ (Malaika Vasupal) ‘ಉಪಾಧ್ಯಕ್ಷ’ ಸಿನಿಮಾ ಮೂಲಕ ಜನರ ಮನ ಗೆದ್ದ ಮೇಲೆ ಹೊಸ ಸಿನಿಮಾಗಳ ಆಫರ್‌ಗಳು ಅರಸಿ ಬರುತ್ತಿವೆ. ‘ಬನಾರಸ್’ ಹೀರೋ ಝೈದ್ ಖಾನ್ (Zaid Khan) ನಟನೆಯ ಹೊಸ ಚಿತ್ರಕ್ಕೆ ಮಲೈಕಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

    ಮುದ್ದು ಮುಖದ ಚೆಲುವೆ ಮಲೈಕಾ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ನಟಿಸುತ್ತಾ ಬ್ಯುಸಿಯಾಗಿದ್ದಾರೆ. ಸದ್ಯ ಅನಿಲ್ ಕುಮಾರ್ ನಿರ್ದೇಶಿಸುತ್ತಿರುವ ‘ಕಲ್ಟ್’ ಚಿತ್ರ ಫಸ್ಟ್ ಲುಕ್ ಪೋಸ್ಟರ್‌ನಿಂದಲೇ ವೈರಲ್ ಆಗಿತ್ತು. ಇದೀಗ ಝೈದ್ ಖಾನ್ ಅವರ ‘ಬ್ಲಡ್ಡೀ ಲವ್’ಗೆ ರಚಿತಾ ರಾಮ್ ಬಳಿಕ ಮತ್ತೋರ್ವ ನಾಯಕಿಯಾಗಿ ಮಲೈಕಾ ಬಣ್ಣ ಹಚ್ಚುತ್ತಿದ್ದಾರೆ.

     

    View this post on Instagram

     

    A post shared by malaikatvasupal (@malaika_t_vasupal)

    ‘ಕಲ್ಟ್’ ಆ್ಯಕ್ಷನ್ ರೊಮ್ಯಾಂಟಿಕ್ ಜಾನರ್ ಚಿತ್ರವಾಗಿದ್ದು, ಈ ಪ್ರಾಜೆಕ್ಟ್ ಕುರಿತು ಇನ್ನಷ್ಟು ಮಾಹಿತಿ ಒಂದೊಂದಾಗೇ ಹೊರಬೀಳಲಿದೆ. ಒಂದೇ ಸಿನಿಮಾದಲ್ಲಿ ಝೈದ್ ಖಾನ್ ಜೊತೆ ರಚಿತಾ ರಾಮ್ (Rachita Ram) ಮತ್ತು ಮಲೈಕಾ ಈ ಮೂವರ ರೊಮ್ಯಾಂಟಿಕ್ ಸ್ಟೋರಿ ಇರುತ್ತದೆ ಎಂದು ಕೇಳಿಯೇ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಅಭಿಮಾನಿಗಳು ಈ ಸಿನಿಮಾಗಾಗಿ ಎದುರು ನೋಡ್ತಿದ್ದಾರೆ. ಇದನ್ನೂ ಓದಿ:ನಾನು ನಿರಪರಾಧಿ ಅಂತ ಸಾಬೀತುಪಡಿಸಲು ಯಾವ ಹಂತಕ್ಕೆ ಬೇಕಾದ್ರೂ ಹೋಗ್ತೀನಿ: ನಟ ನಿವಿನ್ ಪೌಲಿ

    ಅಂದಹಾಗೆ, ‘ಹಿಟ್ಲರ್ ಕಲ್ಯಾಣ’ ಸೀರಿಯಲ್ ಮೂಲಕ ಲೀಲಾ ಆಗಿ ಗುರುತಿಸಿಕೊಂಡ ಮಲೈಕಾ ಅವರು ಚಿಕ್ಕಣ್ಣಗೆ ನಾಯಕಿಯಾಗಿ ‘ಉಪಾಧ್ಯಕ್ಷ’ ಚಿತ್ರದಲ್ಲಿ ಮಿಂಚಿದರು. ಪ್ರಸ್ತುತ ‘ವಿದ್ಯಾಪತಿ’ ಮತ್ತು ‘ಕಲ್ಟ್’ ಸಿನಿಮಾ ಸೇರಿದಂತೆ ಹಲವು ಸಿನಿಮಾಗಳನ್ನು ನಟಿ ಒಪ್ಪಿಕೊಂಡಿದ್ದಾರೆ.

  • ಬ್ಯಾಕ್‌ಲೆಸ್ ಬ್ಲೌಸ್ ಜೊತೆ ಸೀರೆಯುಟ್ಟು ಮಿಂಚಿದ ‘ಉಪಾಧ್ಯಕ್ಷ’ ನಟಿ

    ಬ್ಯಾಕ್‌ಲೆಸ್ ಬ್ಲೌಸ್ ಜೊತೆ ಸೀರೆಯುಟ್ಟು ಮಿಂಚಿದ ‘ಉಪಾಧ್ಯಕ್ಷ’ ನಟಿ

    ಟಿ ಮಲೈಕಾ ವಸುಪಾಲ್ (Malaika Vasupal)  ‘ಉಪಾಧ್ಯಕ್ಷ’ ಸಿನಿಮಾದ ಸಕ್ಸಸ್ ನಂತರ ಹೊಸ ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಹೊಸದೊಂದು ಫೋಟೋಶೂಟ್ ಮಾಡಿಸಿದ್ದಾರೆ. ಬ್ಯಾಕ್‌ಲೆಸ್ ಬ್ಲೌಸ್ ಜೊತೆ ಸೀರೆಯುಟ್ಟು ಸಖತ್ ಗ್ಲ್ಯಾಮರಸ್ ಆಗಿ ನಟಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ಭಾವಿ ಪತ್ನಿ ಶೋಭಿತಾ ಜೊತೆ ಸಿನಿಮಾ ಮಾಡಲ್ಲ: ನಾಗಚೈತನ್ಯ

    ಚೆಂದದ ಫೋಟೋಶೂಟ್ ಹಂಚಿಕೊಳ್ಳುವ ಮೂಲಕ ಪಡ್ಡೆಹುಡುಗರ ನಿದ್ದೆಕದ್ದಿದ್ದಾರೆ ಮಲೈಕಾ. ನಟಿ ಧರಿಸಿರುವ ಟ್ರೆಡಿಷನಲ್ ಸೀರೆಗೆ ವೆಸ್ಟರ್ನ್ ಲುಕ್ ಕೊಟ್ಟಿದ್ದಾರೆ. ವಿವಿಧ ಭಂಗಿಯಲ್ಲಿ ಫೋಟೋಗೆ ಪೋಸ್ ನೀಡಿದ್ದಾರೆ. ಕೆಂಪು ಮತ್ತು ಗೋಲ್ಡ್ ಮಿಶ್ರಿತ ಬಣ್ಣದ ಸೀರೆಯಲ್ಲಿ ನಟಿ ಕಂಗೊಳಿಸಿದ್ದಾರೆ.

    ದಿಲೀಪ್ ರಾಜ್‌ಗೆ ಜೋಡಿಯಾಗಿ ಮಲೈಕಾ ಕಿರುತೆರೆಗೆ ಎಂಟ್ರಿ ಕೊಟ್ಟರು. ‘ಹಿಟ್ಲರ್ ಕಲ್ಯಾಣ’ (Hitler Kalyana) ಎಂಬ ಸೀರಿಯಲ್‌ನಲ್ಲಿ ಹೀರೋಯಿನ್ ಆಗಿ ನಟಿಸಿದರು.‌ ಇದನ್ನೂ ಓದಿ:ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್: ಅಭಿಮಾನಿಗಳಿಂದ ವಿಶೇಷ ಪೂಜೆ

    ನಟಿಸಿದ ಮೊದಲ ಸೀರಿಯಲ್ ಸೂಪರ್ ಹಿಟ್ ಆಗಿತ್ತು. ಮಲೈಕಾ ಅವರು ಎಡವಟ್ಟು ಲೀಲಾ ಎಂದೇ ಫೇಮಸ್ ಆಗಿದ್ದರು. ಅಷ್ಟರ ಮಟ್ಟಿಗೆ ಎಜೆ ಪತ್ನಿ ಲೀಲಾ ಆಗಿ ನಟಿ ಎಲ್ಲರ ಗಮನ ಸೆಳೆದಿದ್ದರು. ಹಿಟ್ಲರ್‌ ಕಲ್ಯಾಣ ಮೊದಲ ಪ್ರಾಜೆಕ್ಟ್‌ ನಟಿಯ ವೃತ್ತಿ ಬದುಕಿಗೆ ಬ್ರೇಕ್‌ ನೀಡಿತ್ತು.

    ಬಳಿಕ ಕಳೆದ ವರ್ಷ ಚಿಕ್ಕಣ್ಣ (Chikkanna) ನಟನೆಯ ‘ಉಪಾಧ್ಯಕ್ಷ’ ಸಿನಿಮಾದಲ್ಲಿ ನಾಯಕಿಯಾಗಿ ಮಲೈಕಾ ನಟಿಸಿದ್ದರು. ಈ ಸಿನಿಮಾಗೂ ಕೂಡ ಮೆಚ್ಚುಗೆ ಸಿಕ್ಕಿತ್ತು. ‘ಉಪಾಧ್ಯಕ್ಷ’ ಚಿತ್ರವನ್ನು ಉಮಾಪತಿ ಶ್ರೀನಿವಾಸ್ ನಿರ್ಮಾಣ ಮಾಡಿದ್ದರು.

    ಪ್ರಸ್ತುತ ಡಾಲಿ ಧನಂಜಯ (Daali Dhananjay) ನಿರ್ಮಾಣದ ‘ವಿದ್ಯಾಪತಿ’ ಸಿನಿಮಾದಲ್ಲಿ ನಾಗಭೂಷಣ್‌ಗೆ ಜೋಡಿಯಾಗಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಮಲೈಕಾ ಪಾತ್ರಕ್ಕೆ ಸ್ಕೋಪ್ ಇದೆ. ವಿಭಿನ್ನವಾಗಿರುವ ಕಥೆಯನ್ನೇ ನಟಿ ಒಪ್ಪಿಕೊಂಡಿದ್ದಾರೆ. ಹಿರಿಯ ನಟ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

  • ಶುರುವಾಯ್ತು ‘ವಿದ್ಯಾಪತಿಗೆ’ ಶೂಟಿಂಗ್-ಹೊಸ ಅವತಾರದಲ್ಲಿ ನಾಗಭೂಷಣ್,ರಂಗಾಯಣ ರಘು

    ಶುರುವಾಯ್ತು ‘ವಿದ್ಯಾಪತಿಗೆ’ ಶೂಟಿಂಗ್-ಹೊಸ ಅವತಾರದಲ್ಲಿ ನಾಗಭೂಷಣ್,ರಂಗಾಯಣ ರಘು

    ಪ್ರತಿಭಾನ್ವಿತ ನಿರ್ದೇಶಕರಿಗೆ ವೇದಿಕೆಯಾಗಿರುವ ಡಾಲಿ ಪಿಕ್ಚರ್ಸ್ ಮತ್ತೊಂದು ಹೊಸ ಕಥೆ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗುತ್ತಿದೆ. ಡಾಲಿ ಪಿಕ್ಚರ್ಸ್ 4ನೇ ಕೊಡುಗೆ ನಾಗಭೂಷಣ್‌ ನಟನೆಯ ‘ವಿದ್ಯಾಪತಿ’ (Vidyapati Film) ಶೂಟಿಂಗ್‌ಗೆ ಕಿಕ್ ಸ್ಟಾರ್ಟ್ ಸಿಕ್ಕಿದೆ. ಅದ್ಧೂರಿ ಸೆಟ್ ಹಾಕಿ ಚಿತ್ರೀಕರಣ ನಡೆಸಲಾಗ್ತಿದೆ.

    ವಿದ್ಯಾಪತಿಯಾಗಿ ನಾಗಭೂಷಣ್ (Nagabhushan) ಬಣ್ಣ ಹಚ್ಚಿದ್ದು, ಅವರು ಕರಾಟೆ ಕಿಂಗ್ ಅವತಾರ ತಾಳಿದ್ದಾರೆ. ರಂಗಾಯಣ ರಘು ಕೂಡ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ವಿದ್ಯಾಪತಿ ಶೂಟಿಂಗ್ ಮೇಕಿಂಗ್ ವಿಡಿಯೋ ತುಣುಕನ್ನು ಚಿತ್ರತಂಡ ರಿವೀಲ್ ಮಾಡಿದೆ. 1 ನಿಮಿಷ ಮೇಕಿಂಗ್ ಝಲಕ್ ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಇದನ್ನೂ ಓದಿ:ಬೇಸಿಗೆಯಲ್ಲಿ ಪುಟ್ಟಗೌರಿ ಮತ್ತಷ್ಟು ಹಾಟ್: ಕೂರ್ಗಿನಲ್ಲಿ ಸಾನ್ಯಾ ಅಯ್ಯರ್

     

    View this post on Instagram

     

    A post shared by Daali Pictures (@daalipictures)

    ಇಕ್ಕಟ್ ಕಥೆ ಹೇಳಿದ್ದ ಇಶಾಂ ಮತ್ತು ಹಸೀಂ ಖಾನ್ ‘ವಿದ್ಯಾಪತಿ’ ಸಿನಿಮಾಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಜೊತೆಗೆ ಸಿನಿಮಾವನ್ನು ಇವರೇ ಬರೆದು, ಸಂಕಲನದ ಜವಾಬ್ದಾರಿಯನ್ನು ತಾವೇ ಹೊತ್ತುಕೊಂಡಿದ್ದಾರೆ. ಆ್ಯಕ್ಷನ್ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಾಗಭೂಷಣ್‌ಗೆ ನಾಯಕಿಯಾಗಿ ‘ಉಪಾಧ್ಯಕ್ಷ’ ಬ್ಯೂಟಿ ಮಲೈಕಾ ವಸೂಪಾಲ್ (Malaika Vasupal) ಕಾಣಿಸಿಕೊಳ್ಳಲಿದ್ದಾರೆ.

    ಲವಿತ್ ಛಾಯಾಗ್ರಹಣ, ಡಾಸ್ಮೋಡ್ ಸಂಗೀತ ನಿರ್ದೇಶನ, ಮುರುಳಿ ನೃತ್ಯ ನಿರ್ದೇಶನ, ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಅರ್ಜುನ್ ಮಾಸ್ಟರ್ ಆ್ಯಕ್ಷನ್ ‘ವಿದ್ಯಾಪತಿ’ ಸಿನಿಮಾಕ್ಕಿದೆ. ‘ಟಗರು ಪಲ್ಯ’ ಮೂಲಕ ಮಸ್ತ್ ಮನರಂಜನೆ ನೀಡಿದ್ದ ನಾಗಭೂಷಣ್ ಮತ್ತೊಮ್ಮೆ ಡಾಲಿ ಜೊತೆ ಕೈ ಜೋಡಿಸಿದ್ದಾರೆ.

  • ಡಾಲಿ ನಿರ್ಮಾಣದ ಸಿನಿಮಾದಲ್ಲಿ ಮಲೈಕಾ ವಸುಪಾಲ್ ನಾಯಕಿ

    ಡಾಲಿ ನಿರ್ಮಾಣದ ಸಿನಿಮಾದಲ್ಲಿ ಮಲೈಕಾ ವಸುಪಾಲ್ ನಾಯಕಿ

    ಕಿರುತೆರೆಯ ಜನಪ್ರಿಯ ‘ಹಿಟ್ಲರ್ ಕಲ್ಯಾಣ’ (Hitler Kalyana) ಸೀರಿಯಲ್ ನಟಿ ಮಲೈಕಾ ವಸುಪಾಲ್ (Malaika Vasupal) ಇದೀಗ ಬಂಪರ್ ಆಫರ್‌ವೊಂದನ್ನು ಗಿಟ್ಟಿಸಿಕೊಂಡಿದ್ದಾರೆ. ‘ಉಪಾಧ್ಯಕ್ಷ’ ಚಿತ್ರ ರಿಲೀಸ್ ಆಗಿ ಪ್ರೇಕ್ಷಕರ ಮೆಚ್ಚುಗೆ ಗಿಟ್ಟಿಸಿಕೊಳ್ತಿದ್ದಂತೆ ಇತ್ತ ಮಲೈಕಾಗೆ ಡಾಲಿ ನಿರ್ಮಾಣದ ಸಿನಿಮಾದಲ್ಲಿ ನಟಿಸಲು ಅವಕಾಶ ಸಿಕ್ಕಿದೆ. ಇದನ್ನೂ ಓದಿ:ಪೊಲೀಸ್ ಜೊತೆ ನಟಿಯ ರಂಪಾಟ: ಸೌಮ್ಯ ವಿರುದ್ಧ ದೂರು ದಾಖಲು

    ವಿದ್ಯಾಪತಿಯಾಗಿರುವ ನಾಗಭೂಷಣ್‌ಗೆ (Nagabhushan) ಜೋಡಿ ಸಿಕ್ಕಾಗಿದೆ. ‘ಉಪಾಧ್ಯಕ್ಷ’ ಸುಂದರಿ ಈಗ ಡಾಲಿ ಬಳಗ ಸೇರ್ಪಡೆಯಾಗಿದ್ದಾರೆ. ನಟರಾಕ್ಷಸ ಡಾಲಿ ಧನಂಜಯ್ ಒಡೆತನದ ಡಾಲಿ ಪಿಕ್ಚರ್ಸ್ (Daali Pictures) ‘ಟಗರು ಪಲ್ಯ’ ಸಕ್ಸಸ್ ಬಳಿಕ ಮತ್ತೊಂದು ಸಿನಿಮಾ ಕೈಗೆತ್ತಿಕೊಂಡಿರುವುದು ಗೊತ್ತೇ ಇದೆ. ಮತ್ತೊಮ್ಮೆ ಡಾಲಿ (Daali) ಹಾಗೂ ನಾಗಭೂಷಣ್ ಕೈ ಜೋಡಿಸಿದ್ದು, ಈ ಚಿತ್ರಕ್ಕೆ ವಿದ್ಯಾಪತಿ (Vidyapathi) ಎಂಬ ಟೈಟಲ್ ಇಡಲಾಗಿದೆ. ಸಂಕ್ರಾಂತಿ ಹಬ್ಬಕ್ಕೆ ಫಸ್ಟ್ ಲುಕ್ ರಿಲೀಸ್ ಮಾಡಿದ್ದ ಚಿತ್ರತಂಡ ಇಂದು ನಾಯಕಿಯನ್ನು ಪ್ರೇಕ್ಷಕರಿಗೆ ಪರಿಚಯಿಸಿದೆ.

    ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿದ ಚಿಕ್ಕಣ್ಣನಿಗೆ ‘ಉಪಾಧ್ಯಕ್ಷ’ ಸಿನಿಮಾದಲ್ಲಿ ನಾಯಕಿ ಮಿಂಚಿದ್ದ ಮಲೈಕಾ ಈಗ ವಿದ್ಯಾಪತಿಗೆ ಜೋಡಿಯಾಗಿದ್ದಾರೆ. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಮೂಲಕ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದ್ದ ಮಲೈಕಾ ‘ಉಪಾಧ್ಯಕ್ಷ’ ಚಿತ್ರದ ಮೂಲಕ ಬೆಳ್ಳಿಪರದೆಗೆ ಎಂಟ್ರಿ ಕೊಟ್ಟಿದ್ದರು. ಮೊದಲ ಸಿನಿಮಾವೇ ಅವರಿಗೆ ದೊಡ್ಡ ಸಕ್ಸಸ್ ತಂದು ಕೊಟ್ಟಿದೆ. ಉಪಾಧ್ಯಕ್ಷ ಸಿನಿಮಾದಲ್ಲಿ ಇವ್ರ ನಟನೆ ನೋಡಿ ಮೆಚ್ಚಿಕೊಂಡಿರುವ ‘ವಿದ್ಯಾಪತಿ’ ಟೀಂ ತಮ್ಮ ತಂಡಕ್ಕೆ ಅವರನ್ನು ಸ್ವಾಗತಿಸಿದೆ.

    ವಿದ್ಯಾಪತಿ ಸಿನಿಮಾದಲ್ಲಿ ಮಲೈಕಾ ವಿದ್ಯಾ ಎಂಬ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದು, ಸಿಂಪಲ್ ಆಗಿರುವ ಹೋಮ್ಲಿ ಹುಡುಗಿಯಾಗಿ ಕಾಣಿಸಿಕೊಳ್ಳಲಿದ್ದಾರಂತೆ. ಈ ಹಿಂದೆ ‘ಇಕ್ಕಟ್’ ಸಿನಿಮಾ ಮೂಲಕ ಭರವಸೆ ಹುಟ್ಟಿಸಿದ್ದ ಇಶಾಂ ಮತ್ತು ಹಸೀಂ ಖಾನ್ ವಿದ್ಯಾಪತಿ ಸಿನಿಮಾಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಜೊತೆಗೆ ಸಿನಿಮಾವನ್ನು ಇವರೆ ಬರೆದು, ಸಂಕಲನದ ಜವಾಬ್ದಾರಿಯನ್ನು ತಾವೇ ಹೊತ್ತುಕೊಂಡಿದ್ದಾರೆ.

    ಆ್ಯಕ್ಷನ್ ಕಾಮಿಡಿ ಕಥಾಹಂದರ ಹೊಂದಿರುವ ‘ವಿದ್ಯಾಪತಿ’ ಚಿತ್ರದಲ್ಲಿ ನಾಗಭೂಷಣ್ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಲವಿತ್ ಛಾಯಾಗ್ರಹಣ, ಡಾಸ್ಮೋಡ್ ಸಂಗೀತ ನಿರ್ದೇಶನ, ಮುರುಳಿ ನೃತ್ಯ ನಿರ್ದೇಶನ, ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಅರ್ಜುನ್ ಮಾಸ್ಟರ್ ಆ್ಯಕ್ಷನ್ ವಿದ್ಯಾಪತಿ ಸಿನಿಮಾಕ್ಕಿದೆ. ಮಾರ್ಚ್ ತಿಂಗಳಿನಿಂದ ವಿದ್ಯಾಪತಿ ನಾಯಕಿ ಮಲೈಕಾ ಶೂಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ.