ಮಲೆ: ಪ್ರಧಾನಿ ಮೋದಿ ಅವರ ಲಕ್ಷದ್ವೀಪ ಭೇಟಿ ಕುರಿತು ಮಾಲ್ಡೀವ್ಸ್ (Maldives) ಸಚಿವರು ನೀಡಿದ್ದ ಹೇಳಿಕೆ ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಸಂಬಂಧವನ್ನು ಮತ್ತಷ್ಟು ಹದಗೆಡಿಸಿದೆ. ಸಚಿವರ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಅವರನ್ನು ಅಮಾನತುಗೊಳಿಸಿ ಮಾಲ್ಡೀವ್ಸ್ ಸರ್ಕಾರ ಆದೇಶ ಹೊರಡಿಸಿದೆ.
ಸಚಿವರಾದ ಮರಿಯಮ್ ಶಿಯುನಾ (Mariyam Shiuna), ಮಲ್ಶಾ ಮತ್ತು ಹಸನ್ ಜಿಹಾನ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ನೆರೆಯ ಭಾರತವನ್ನು ಅವಮಾನಿಸುವಂತಹ ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿದ್ದಕ್ಕೆ ಈ ಬೆಳವಣಿಗೆ ನಡೆದಿದೆ. ಇದನ್ನೂ ಓದಿ: ಮೋದಿ ಭೇಟಿ ಬಳಿಕ ಲಕ್ಷದ್ವೀಪ ಪ್ರವಾಸದತ್ತ ಭಾರತೀಯರ ಚಿತ್ತ – #BoycottMaldives ಫುಲ್ ಟ್ರೆಂಡ್

ಸರ್ಕಾರಿ ಹುದ್ದೆಗಳಲ್ಲಿದ್ದಾಗ ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಪೋಸ್ಟ್ ಮಾಡಿದವರನ್ನು ಈಗ ಅಮಾನತುಗೊಳಿಸಲಾಗಿದೆ ಎಂದು ಅಮಾನತುಗೊಂಡವರ ಹೆಸರನ್ನು ಬಹಿರಂಗಪಡಿಸದೆ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi ) ಅವರು ಲಕ್ಷದ್ವೀಪಕ್ಕೆ (Lakshadweep) ಭೇಟಿ ನೀಡಿದ್ದರು. ಬೀಚ್‌ನಲ್ಲಿ ತಾವು ಕಳೆದ ಸುಂದರ ಕ್ಷಣಗಳ ವೀಡಿಯೋ ಹಾಗೂ ಫೋಟೋಗಳನ್ನು ಹಂಚಿಕೊಂಡಿದ್ದರು. ಮೋದಿ ಭೇಟಿ ಕುರಿತಂತೆ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಮಾಲ್ಡೀವ್ಸ್ ಸಚಿವರು, ಭಾರತ ಮಾಲ್ಡೀವ್ಸ್ ಅನ್ನು ಗುರಿಯಾಗಿಸಿಕೊಂಡಿದೆ ಎಂದು ಬರೆದುಕೊಂಡಿದ್ದರು. ಇದನ್ನೂ ಓದಿ: ಲಕ್ಷದ್ವೀಪಕ್ಕೆ ಮೋದಿ ಭೇಟಿ: ಮಾಲ್ಡೀವ್ಸ್‌ಗೆ ಬಿಗ್ ಶಾಕ್
ಮಾಲ್ಡೀವ್ಸ್ ಸಚಿವರ ಈ ಹೇಳಿಕೆಗಳಿಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಮಾಲ್ಡೀವ್ಸ್‌ಗೆ ಹೋಗುವ ತಮ್ಮ ಪ್ರವಾಸವನ್ನು ರದ್ದುಗೊಳಿಸುವುದಾಗಿ ಭಾರತೀಯ ಪ್ರವಾಸಿಗರು ಹೇಳಿಕೊಂಡಿದ್ದಾರೆ. ಮಾಲ್ಡೀವ್ಸ್ ಪ್ರವಾಸದ ವಿಮಾನದ ಟಿಕೆಟ್ ರದ್ದುಗೊಳಿಸಿರುವ ಸ್ಕ್ರೀನ್ ಶಾಟ್ ತೆಗೆದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡು ‘#BoycottMaldives’ ಅಭಿಯಾನ ನಡೆಸುತ್ತಿದ್ದಾರೆ.





ಮಾಲ್ಡೀವ್ಸ್‌ನಲ್ಲಿ (Maldives) ಮೋಜು ಮಸ್ತಿ ಮಾಡ್ತಿರುವ ಸೋನು ಗೌಡ, ಬಿಕಿನಿ (Bikini) ಫೋಟೋ ಹಂಚಿಕೊಂಡು ಪಡ್ಡೆಹುಡುಗರ ನಿದ್ದೆಕೆಡಿಸಿದ್ದರು. ಸೋನು ಹಾಟ್ ಅವತಾರಕ್ಕೆ ಹುಡುಗರು ಫಿದಾ ಆಗಿದ್ದರು. ಈಗ ನೋಡಿದ್ರೆ, ಬೆಡ್‍ರೂಮ್ ಫೋಟೋ ಹಂಚಿಕೊಂಡಿದ್ದಾರೆ. ಹಳದಿ ಬಣ್ಣದ ಮಾಡ್ರನ್ ಡ್ರೆಸ್‍ನಲ್ಲಿರುವ ವಿವಿಧ ಭಂಗಿಗಳ ಫೋಟೋಗಳನ್ನ ಶೇರ್ ಮಾಡಿದ್ದಾರೆ. ಈ ಫೋಟೋಗಳು ಕೂಡ ಸದ್ಯ ಸಖತ್ ವೈರಲ್ ಆಗುತ್ತಿವೆ. ಇದನ್ನೂ ಓದಿ:
ಇನ್ನೂ ಸೋನು ಈ ಹಿಂದೆ ಶೇರ್ ಮಾಡಿರುವ ಬಿಕಿನಿ ವಿಡಿಯೋ 19 ಮಿಲಿಯನ್‍ಗೂ ಅಧಿಕ ಅಂದರೆ 1 ಕೋಟಿ 90 ಲಕ್ಷ ವಿವ್ ಕಂಡಿದೆ. 10 ಲಕ್ಷ ಇನ್ಸ್ಟಾಗಾಂ ಫಾಲೋವರ್ಸ್ ಪಡೆದಿರುವ ಸೋನು ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಹವಾ ಕ್ರಿಯೇಟ್ ಮಾಡಿದ್ದಾರೆ. ಇದನ್ನೂ ಓದಿ:
ಈ ಹಿಂದೆ ಇವರ ಕೆಲ ಖಾಸಗಿ ಫೋಟೋ- ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿತ್ತು. ಹಸಿಬಿಸಿ ದೃಶ್ಯಗಳನ್ನು ನೋಡಿ ಪಡ್ಡೆ ಹುಡುಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡಿದ್ದರು. ಜೊತೆಗೆ ಮೊನ್ನೆಯಷ್ಟೇ ಸೋನು ಹೊಸ ವೀಡಿಯೋವೊಂದನ್ನು ಶೇರ್ ಮಾಡಿದ್ದರು, ಹುಡುಗಿಯರಿಗೆ ಮಾತ್ರ ಹುಡುಗರು ನೋಡಬೇಡ ಎಂದು ಹಾಕಿ ಕುತೂಹಲ ಹೆಚ್ಚಿಸಿದ್ದರು.
ಕಂಪನಿಯೊಂದರ ಜಾಹೀರಾತಿಗೆ ಸೋನು ಗೌಡ ಬ್ರಾ ಹೇಗೆ ಧರಿಸುವುದು ಎಂಬ ವೀಡಿಯೋ ಮಾಡಿದ್ದರು. ಹೆಣ್ಣುಮಕ್ಕಳು ಹೇಗೆ ಬ್ರಾ ಹಾಕಬೇಕು, ಯಾವ ರೀತಿಯ ಬ್ರಾ ತೆಗೆದುಕೊಳ್ಳಬೇಕು ಎಂಬುವುದು ಸ್ಪಷ್ಟವಾಗಿ ವಿಡಿಯೋದಲ್ಲಿ ಸೂಚಿಸಿದ್ದರು. ಜೊತೆಗೆ ಅದನ್ನು ಯಾವ ರೀತಿ ಹಾಕಬೇಕು ಎಂಬುವುದರ ಬಗ್ಗೆ ಕೂಡ ವೀಡಿಯೋ ಮೂಲಕ ತಿಳಿಸಿದ್ದರು. ಆ ವಿಡಿಯೋ ಕೂಡ ವೈರಲ್ ಆಗಿತ್ತು.























