Tag: Male Mahadeshwar

  • ಮಲೆ ಮಾದಪ್ಪ ಮತ್ತೆ ಕೋಟಿ ಒಡೆಯ – 34 ದಿನದಲ್ಲಿ 15 ವಿದೇಶಿ ಕರೆನ್ಸಿ ಸೇರಿ 2.6 ಕೋಟಿ ಸಂಗ್ರಹ

    ಮಲೆ ಮಾದಪ್ಪ ಮತ್ತೆ ಕೋಟಿ ಒಡೆಯ – 34 ದಿನದಲ್ಲಿ 15 ವಿದೇಶಿ ಕರೆನ್ಸಿ ಸೇರಿ 2.6 ಕೋಟಿ ಸಂಗ್ರಹ

    -ಇ-ಹುಂಡಿ ಮೂಲಕ 6.6 ಲಕ್ಷ ಸಂಗ್ರಹ

    ಚಾಮರಾಜನಗರ: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಮಾಡಲಾಗಿದ್ದು, 15 ವಿದೇಶಿ ಕರೆನ್ಸಿಗಳು ಸೇರಿ 2.6 ಕೋಟಿ ರೂ. ಸಂಗ್ರಹವಾಗಿದೆ. ಈ ಮೂಲಕ ಮಾದಪ್ಪ ಮತ್ತೆ ಕೋಟಿ ಒಡೆಯನಾಗಿದ್ದಾನೆ.

    ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು (ಜೂ.19) ಹುಂಡಿ ಹಣ ಎಣಿಕೆ ಮಾಡಲಾಯಿತು. ಈ ಬಾರಿ ಕೇವಲ 34 ದಿನಗಳಲ್ಲಿ 2.65 ಕೋಟಿ ರೂ. ಸಂಗ್ರಹವಾಗಿದೆ.ಇದನ್ನೂ ಓದಿ: ಬಸ್‍ನಲ್ಲಿ ಕಿಟಕಿ ಪಕ್ಕದ ಸೀಟಿಗಾಗಿ ಯುವಕನಿಗೆ ಚಾಕು ಇರಿತ – ಇಬ್ಬರು ಅಪ್ರಾಪ್ತರು ಅರೆಸ್ಟ್

    ಸರ್ಕಾರಿ ರಜಾ ದಿನ, ಅಮಾವಾಸ್ಯೆ ಸೇರಿದಂತೆ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಹೀಗಾಗಿ 2,65,04,712 ರೂ. ನಗದು, 58 ಗ್ರಾಂ ಚಿನ್ನ ಹಾಗೂ 2.7 ಕೆಜಿ ಬೆಳ್ಳಿ ಸಂಗ್ರಹವಾಗಿದೆ. ಇದಲ್ಲದೇ ಇ-ಹುಂಡಿಯಿಂದ 6,66,104 ರೂ. ಹಾಗೂ 15 ವಿದೇಶಿ ಕರೆನ್ಸಿಗಳು ಬಂದಿವೆ.

    ಇದಕ್ಕೂ ಮುನ್ನ ಏಪ್ರಿಲ್ ತಿಂಗಳಲ್ಲಿ ಸಾಲೂರು ಶ್ರೀಗಳ ನೇತೃತ್ವದಲ್ಲಿ ಹುಂಡಿ ಎಣಿಕೆ ಮಾಡಲಾಗಿತ್ತು. ಆ ವೇಳೆ 35 ದಿನಗಳ ಅವಧಿಯಲ್ಲಿ ಬರೋಬ್ಬರಿ 3.26 ಕೋಟಿ ಕೋಟಿ ರೂ. ಸಂಗ್ರಹವಾಗಿತ್ತು. ಅಲ್ಲದೇ 47 ಗ್ರಾಂ ಚಿನ್ನ, 2 ಕೆಜಿ 200 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿತ್ತು. ಇದರೊಂದಿಗೆ 11 ವಿದೇಶಿ ನೋಟುಗಳು, 2,000 ರೂ. ಮುಖಬೆಲೆಯ 20 ನೋಟುಗಳು ಹುಂಡಿಯಲ್ಲಿ ಸಿಕ್ಕಿದ್ದವು. ಇದನ್ನೂ ಓದಿ: ಮುನೀರ್‌ಗೆ ಟ್ರಂಪ್‌ ಡಿನ್ನರ್‌ – ಪಾಕ್‌ ನೆಲದಿಂದ ಅಮೆರಿಕ ಇರಾನ್‌ ಮೇಲೆ ದಾಳಿ ಮಾಡುತ್ತಾ?

  • ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಗೃಹ ಇಲಾಖೆಗೆ ಸೂಚನೆ – ಸಿಎಂ

    ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಗೃಹ ಇಲಾಖೆಗೆ ಸೂಚನೆ – ಸಿಎಂ

    ಚಾಮರಾಜನಗರ: ಕರ್ನಾಟಕದಲ್ಲಿ (Karnataka) ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ತಿಳಿಸಿದರು.

    ಮಲೆ ಮಹದೇಶ್ವರ (Male Mahadeshwar) ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನೆಲೆಸಿರುವ ವಿದೇಶಿಗಳ ಬಗ್ಗೆ ಕಣ್ಗಾವಲು ಇರಿಸಲು ಕೇಂದ್ರ ಗೃಹ ಸಚಿವರು ಸೂಚಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಉಗ್ರರು ಯಾವುದೇ ರಾಜ್ಯದಲ್ಲಿರಲಿ ಅವರನ್ನು ಮಟ್ಟಹಾಕಬೇಕಾಗಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.ಇದನ್ನೂ ಓದಿ: ನನ್ನನ್ನೂ ಶೂಟ್ ಮಾಡು ಅಂದೆ, ಅವ್ನು ಹೋಗಿ ಮೋದಿಗೆ ಹೇಳು ಅಂದ: ಮಂಜುನಾಥ್ ಪುತ್ರ

    ಉಗ್ರರ ಚಟುವಟಿಕೆಗಳಿಗೆ ಅವಕಾಶ ಕೊಡಬಾರದು. ಪಹಲ್ಗಾಮ್ (Pahalgam) ಘಟನೆ ಅತ್ಯಂತ ಖಂಡನೀಯವಾದ ಹಾಗೂ ಅಮಾನುಷವಾದ ಘಟನೆ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಪುಲ್ವಾಮಾ ಘಟನೆಯೂ ಇದೇ ಜಿಲ್ಲೆಯಲ್ಲಿ ನಡೆದಿದ್ದರಿಂದ ಎಚ್ಚರಿಕೆಯಿಂದ ಇರಬೇಕಾಗಿತ್ತು. ಬಂದೋಬಸ್ತ್ ಸಡಿಲಗೊಳಿಸಬಾರದಿತ್ತು. ಇಲ್ಲಿ ಗುಪ್ತಚರ ವ್ಯವಸ್ಥೆಯ ವೈಫಲ್ಯವಾಗಿದೆ ಎಂದರು.

    ಉಗ್ರರನ್ನು ಮಟ್ಟ ಹಾಕಲು ಎಲ್ಲ ಸಹಕಾರ:
    ಘಟನೆ ನಡೆದ ಬಳಿಕ ಕ್ರಮ ತೆಗೆದುಕೊಳ್ಳುವುದು ಬೇರೆ. ಘಟನೆಯಾಗದಂತೆ ತೆಗೆದುಕೊಳ್ಳುವ ಕ್ರಮಗಳು ಬೇರೆ. ಅದನ್ನು ಕೇಂದ್ರ ಸರ್ಕಾರ ಮಾಡಬೇಕಿತ್ತು. ಪುಲ್ವಾಮಾ ದಾಳಿಯಲ್ಲಿ 40 ಸೈನಿಕರು ಪ್ರಾಣತೆತ್ತರು. ಈ ಘಟನೆಯಲ್ಲಿ 28 ಜನ ನಾಗರಿಕರು ಮೃತರಾಗಿದ್ದಾರೆ. ಇದನ್ನು ತಪ್ಪಿಸಲು ಕ್ರಮ ವಹಿಸಬೇಕಿತ್ತು. ಇಂಥ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕು. ಉಗ್ರರು ಯಾವುದೇ ಧರ್ಮಕ್ಕೆ ಸೇರಿರಲಿ ಅವರೆಲ್ಲರನ್ನೂ ಮಟ್ಟ ಹಾಕಬೇಕಿರುವುದು ಸರ್ಕಾರದ ಜವಾಬ್ದಾರಿ. ಅದಕ್ಕೆ ಬೇಕಾಗಿರುವ ಎಲ್ಲಾ ಸಹಕಾರ, ಬೆಂಬಲವನ್ನು ನಾವು, ನಮ್ಮ ಸರ್ಕಾರ ಹಾಗೂ ಪಕ್ಷ ಕೊಡುತ್ತದೆ ಎಂದರು.

    10 ಲಕ್ಷ ರೂ. ಪರಿಹಾರ:
    ಉಗ್ರರ ದಾಳಿಯಲ್ಲಿ ಮೃತಪಟ್ಟ ರಾಜ್ಯದ ಮೂವರು ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಪೊಲೀಸ್ ಗೌರವದಿಂದ ಅಂತ್ಯಕ್ರಿಯೆ ನಡೆಯಲಿದೆ ಎಂದರು.

    ಕೇಂದ್ರ ಸರ್ಕಾರದ ರಾಜಕೀಯ ದ್ವೇಷ:
    ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಿದರೆ ತಕ್ಷಣವೇ ಯೋಜನೆಯನ್ನು ಜಾರಿಗೆ ತರಲಾಗುವುದು. ಈ ಬಗ್ಗೆ ಪ್ರಧಾನಿ, ಗೃಹ ಸಚಿವರನ್ನು ಭೇಟಿ ಮಾಡಿದ್ದರೂ ಏನು ಪ್ರಯೋಜನ ಆಗಿಲ್ಲ. ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದ ಅನುದಾನವನ್ನು ಕೊಡುತ್ತಿಲ್ಲ. 2023-24ರಲ್ಲಿ ಕೇಂದ್ರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ್ದ 5,300 ಕೋಟಿ ರೂ. ಅನುದಾನವನ್ನು ಈವರೆಗೆ ಕೊಟ್ಟಿಲ್ಲ. ಇದು ರಾಜಕೀಯ ದ್ವೇಷದಂತೆ ಕಾಣುತ್ತದೆ ಎಂದರು.

    ಪ್ರಮುಖ ಯೋಜನೆಗಳ ಬಗ್ಗೆ ಸಂಪುಟದಲ್ಲಿ ಚರ್ಚೆ:
    ಬಜೆಟ್‌ನಲ್ಲಿ ಜಿಲ್ಲೆಗೆ ಯಾವುದೇ ಅನುದಾನ ಘೋಷಣೆಯಾಗಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳು ಹಾಗೂ ಚಾಮರಾಜನಗರ ಜಿಲ್ಲೆಗೆ ಅಗತ್ಯವಿರುವ ಪ್ರಮುಖ ಯೋಜನೆಗಳ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಲಾಗುವುದು ಎಂದರು.ಇದನ್ನೂ ಓದಿ: SRH Vs MI – ಇಶಾನ್ ಕಿಶನ್ ವಿವಾದಿತ `ಔಟ್’ – ಮ್ಯಾಚ್ ಫಿಕ್ಸಿಂಗ್ ಚರ್ಚೆ!

  • ಮಾದಪ್ಪನ ದರ್ಶನ ಪಡೆದ ಡ್ರೋನ್ ಪ್ರತಾಪ್

    ಮಾದಪ್ಪನ ದರ್ಶನ ಪಡೆದ ಡ್ರೋನ್ ಪ್ರತಾಪ್

    ಬಿಗ್ ಬಾಸ್ ಮನೆಯಿಂದ ಬಂದ ನಂತರ ಡ್ರೋನ್ ಪ್ರತಾಪ್ (Drone Pratap) ಬಿಡುವಿಲ್ಲದ ದಿನಗಳನ್ನು ಕಳೆಯುತ್ತಿದ್ದಾರೆ. ಮನೆಯಿಂದ ಹೊರ ಬರುತ್ತಿದ್ದಂತೆಯೇ ಮತ್ತೊಂದು ರಿಯಾಲಿಟಿ ಶೋ ನಲ್ಲಿ ಭಾಗಿಯಾದರು. ಇದೀಗ ಕೊಂಚ ಬಿಡುವು ಮಾಡಿಕೊಂಡು ಹುಟ್ಟೂರಿಗೆ ಹೋಗಿದ್ದಾರೆ. ಜೊತೆಗೆ ದೇವಸ್ಥಾನಗಳಿಗೂ ಭೇಟಿ ನೀಡುತ್ತಿದ್ದಾರೆ.

    ಮೂರ್ನಾಲ್ಕು ವರ್ಷಗಳಿಂದ ಹುಟ್ಟೂರಿಗೆ ಹೋಗಿಲ್ಲ ಎಂದು ಅವರು ಈ ಹಿಂದೆ ಹೇಳಿಕೊಂಡಿದ್ದರು. ತಂದೆ ತಾಯಿ ಮುಖವನ್ನೂ ನೋಡಿಲ್ಲ ಎಂದರು. ಅದಕ್ಕೆ ಕಾರಣ ಅಪಮಾನ. ಬಿಗ್ ಬಾಸ್ ಮನೆ ಎಲ್ಲ ಅಪಮಾನವನ್ನೂ ತೊಳೆದು ಹಾಕಿದೆ. ಹೀಗಾಗಿಯೇ ಅವರು ಹುಟ್ಟೂರಿಗೆ ಹೋಗಿದ್ದಾರೆ. ತಂದೆ ಮಾಡಿಕೊಟ್ಟ ಮುದ್ದೆಯನ್ನು ಸವಿದಿದ್ದಾರೆ.

    ನಿನ್ನೆಯಷ್ಟೇ ಮಲೆ ಮಹಾದೇಶ್ವರ (Male Mahadeshwar) ಬೆಟ್ಟಕ್ಕೂ ಡ್ರೋನ್ ಪ್ರತಾಪ್ ಭೇಟಿ ನೀಡಿದ್ದು, ಮಾದಪ್ಪನ ದರ್ಶನ (Darshana) ಪಡೆದಿದ್ದಾರೆ. ಡ್ರೋನ್ ನೋಡಲೆಂದೇ ಸಾಕಷ್ಟು ಅಭಿಮಾನಿಗಳು ಅಲ್ಲಿಗೆ ಬಂದಿದ್ದರು. ಪ್ರತಾಪ್ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಗಿ ಬಿದ್ದಿದ್ದಾರೆ. ಶಾಂತವಾಗಿಯೇ ಎಲ್ಲರೊಂದಿಗೂ ಪ್ರತಾಪ್ ಫೋಟೋ ತೆಗೆಸಿಕೊಂಡಿದ್ದಾರೆ.

     

    ಡ್ರೋನ್ ಬದುಕು ಒಂದು ರೀತಿಯಲ್ಲಿ ಕತ್ತಲಲ್ಲಿತ್ತು. ಇದೀಗ ಬೆಳಕಿಗೆ ಬಂದಿದೆ. ಅಸಂಖ್ಯಾತ ಜನರು ಅವರನ್ನು ಪ್ರೀತಿಸುತ್ತಿದ್ದಾರೆ. ಪ್ರತಾಪ್ ತಾವು ಮಾಡಿದ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಕೇಳಿದ್ದಾರೆ. ಡ್ರೋನ್ ಪ್ರತಾಪ್ ಈ ಕಾರಣದಿಂದಾಗಿಯೇ ಎಲ್ಲರ ಮೆಚ್ಚಿಗೆಗೂ ಪಾತ್ರವಾಗಿದ್ದಾರೆ.

  • ಕುಟುಂಬ ಸಮೇತ ಮಹದೇಶ್ವರ ಬೆಟ್ಟಕ್ಕೆ ಬಂದ ರಾಘವೇಂದ್ರ ರಾಜ ಕುಮಾರ್

    ಕುಟುಂಬ ಸಮೇತ ಮಹದೇಶ್ವರ ಬೆಟ್ಟಕ್ಕೆ ಬಂದ ರಾಘವೇಂದ್ರ ರಾಜ ಕುಮಾರ್

    ಡಾ.ರಾಜಕುಮಾರ್ ಅವರ ಪುತ್ರ ನಟ ರಾಘವೇಂದ್ರ ರಾಜಕುಮಾರ್ (Raghavendra Rajkumar) ಇಂದು ಕುಟುಂಬ ಸಮೇತ ಮಲೆ ಮಹದೇಶ್ವರ ಬೆಟ್ಟಕ್ಕೆ (Male Mahadeshwar) ಆಗಮಿಸಿದ್ದರು. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಈ ಸುಪ್ರಸಿದ್ಧ ದೇವಸ್ಥಾನಕ್ಕೆ ರಾಜ್ ಕುಟುಂಬ ಆಗಾಗ್ಗೆ ಬರುತ್ತೆ. ಈ ಬಾರಿ ಕುಟುಂಬ ಸಮೇತ ರಾಘವೇಂದ್ರ ರಾಜಕುಮಾರ್ ಆಗಮಿಸಿದ್ದರು.

    ಮಾದಪ್ಪನ ಸನ್ನಿಧಿಯಲ್ಲಿ ರಾಘವೇಂದ್ರ ರಾಜಕುಮಾರ್‍ ಅವರ ಕಿರಿಯ ಪುತ್ರ ಯುವ ರಾಜಕುಮಾರ್ (Yuvarajkumar), ಪತ್ನಿ ಮಂಗಳಾ ಕೂಡ ದೇವಸ್ಥಾನಕ್ಕೆ ಭೇಟಿ ಕೊಟ್ಟು ಮಾದಪ್ಪನ ದರ್ಶನ ಪಡೆದರು. ಎಲ್ಲರೂ ಪೂಜೆ ಸಲ್ಲಿಸಿ ದಾಸೋಹ ಭವನದಲ್ಲಿ ಪ್ರಸಾದ ಸೇವಿಸಿದರು.

     

    ಈ ವೇಳೆ ಮಾತನಾಡಿದ ನಟ ರಾಘವೇಂದ್ರ ರಾಜಕುಮಾರ್ ‘ನಮ್ಮ ತಂದೆ ರಾಜಕುಮಾರ್ ಅವರು ಒಂದು ಸಲ ಇಲ್ಲಿಗೆ ಕರೆದುಕೊಂಡು ಬಂದಿದ್ದರು. ಆ ಮೇಲೆ ಇಲ್ಲಿಗೆ ನಾನು ಬಂದಿರಲಿಲ್ಲ. ಪುತ್ರ ಯುವ ರಾಜಕುಮಾರ್ ನಟನೆಯ ಸಿನಿಮಾ ಶೂಟಿಂಗ್ ಮೈಸೂರಿನಲ್ಲಿ ನಡೀತಿದೆ. ಅದಕ್ಕಾಗಿ ಮಾದಪ್ಪನ ದರ್ಶನ ಪಡೆಯಲು ಬಂದಿದ್ದೇವೆ. ಈ ಜಾಗ ತುಂಬಾ ಚೆನ್ನಾಗಿದೆ. ಮಲೆ ಮಹದೇಶ್ವರ ತಾಣ ಸ್ವರ್ಗದಂತೆ ಭಾಸವಾಗುತ್ತಿದೆ. ವರ್ಷಕ್ಕೆ ಒಂದು ಸಲವಾದರೂ ಇಲ್ಲಿಗೆ ಬರಬೇಕು ಅಂತ ಅನ್ನಿಸಿದೆ. ಇನ್ಮೇಲೆ ಮಾದಪ್ಪನ ದರ್ಶನ ಪಡೆಯಲು ಬರ್ತಿನಿ’ ಎಂದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]