ಚಾಮರಾಜನಗರ: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwar Hills) ಹುಂಡಿ ಎಣಿಕೆ ಕಾರ್ಯ ನಡೆದಿದೆ. ಕೇವಲ 29 ದಿನಗಳಲ್ಲಿ ಮಾದಪ್ಪ ಕೋಟಿ ಒಡೆಯನಾಗಿದ್ದು, 1.70 ಕೋಟಿ ರೂ. ಸಂಗ್ರಹವಾಗಿದೆ.
ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು (Hanuru) ತಾಲೂಕಿನ ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ (ಸೆ.18) ತಡರಾತ್ರಿವರೆಗೂ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದೆ. ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಹುಂಡಿ ಎಣಿಕೆ ನಡೆಯಿತು.ಇದನ್ನೂ ಓದಿ: ದಸರಾ ಆನೆಗಳ ತಬ್ಬಿಕೊಂಡು ಯುವತಿ ರೀಲ್ಸ್: ದುಡ್ಡಿದ್ದವರ ದರ್ಬಾರ್ಗೆ ಅಧಿಕಾರಿಗಳು ಸಾಥ್?
ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, ಸರ್ಕಾರಿ ರಜಾ ದಿನ, ಅಮಾವಾಸ್ಯೆ, ಜಾತ್ರಾ ಮಹೋತ್ಸವ ಸೇರಿದಂತೆ ವಿವಿಧ ಕಾರಣಗಳಿಂದ ಕಡಿಮೆ ದಿನಗಳಲ್ಲೇ ಅಧಿಕ ಹಣ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ. 30 ಗ್ರಾಂ ಚಿನ್ನ ಹಾಗೂ 1,100 ಬೆಳ್ಳಿ ಸಾಮಾನುಗಳು ಸಂಗ್ರಹವಾಗಿದೆ. ಇನ್ನೂ ಇ-ಹುಂಡಿಯಿಂದ 3.9 ಲಕ್ಷ ರೂ. ಹಣ ಸಂಗ್ರಹವಾಗಿದೆ. ಚಲಾವಣೆಯಲ್ಲಿ ಇಲ್ಲದ 2,000 ಮುಖಬೆಲೆಯ 3 ನೋಟುಗಳು ಹುಂಡಿಯಲ್ಲಿ ಸಿಕ್ಕಿವೆ.










