Tag: Male Mahadeshwara Hills

  • ಮಾದಪ್ಪನ ಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ಮುಂದೂಡಿಕೆ – ಬದಲಾಗುತ್ತಲೇ ಇದೆ ದಿನಾಂಕ!

    ಮಾದಪ್ಪನ ಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ಮುಂದೂಡಿಕೆ – ಬದಲಾಗುತ್ತಲೇ ಇದೆ ದಿನಾಂಕ!

    ಚಾಮರಾಜನಗರ: ಫೆ.17 ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwara Hills) ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು (Cabinet Meeting) ಮುಂದೂಡಲಾಗಿದೆ.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಫೆ.16 ರಂದು ಚಾಮರಾಜನಗರದ (Chamarajanagar) ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ ಜಿಲ್ಲೆಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶ ಮತ್ತು ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮ ಸಹ ಮುಂದೂಡಿಕೆಯಾಗಿದೆ.

    ಈ ಕುರಿತು ಜಿಲ್ಲಾಧಿಕಾರಿ ಶಿಲ್ಪಾನಾಗ್ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಕಾರಣಾಂತರಗಳಿಂದ ದಿನಾಂಕ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.

    ಚಾಮರಾಜನಗರದಲ್ಲಿ ಈಗಾಗಲೇ ಸಮಾವೇಶಕ್ಕಾಗಿ ಭರದಿಂದ ಸಿದ್ಧತೆ ನಡೆಯುತ್ತಿದ್ದು, ಭಾಗಶಃ ಶಾಮಿಯಾನ ಹಾಕುವ ಕಾರ್ಯ ಮುಕ್ತಾಯಗೊಂಡಿದೆ. ಸುಮಾರು 30 ಸಾವಿರಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆ ಸಹ ಇತ್ತು. ಮಲೆ ಮಹದೇಶ್ವರ ಬೆಟ್ಟದಲ್ಲೂ ಕ್ಯಾಬಿನೆಟ್ ಸಭೆಗೆ ಸಿದ್ಧತೆ ನಡೆಯುತ್ತಿದ್ದು ಜರ್ಮನ್ ಟೆಂಟ್ ಹಾಕಲಾಗಿದೆ. ತಾತ್ಕಾಲಿಕ ಹೆಲಿಪ್ಯಾಡ್, ರಸ್ತೆಗಳು, ಮೂಲಸೌಕರ್ಯವನ್ನೂ ಅಚ್ಚುಕಟ್ಟಾಗಿ ಮಾಡಲಾಗುತ್ತಿದೆ. ಈ ಹೊತ್ತಿನಲ್ಲಿ ಸಭೆ ಮುಂದೂಡಿಕೆಯಾಗಿದೆ.

    ಒಟ್ಟಾರೆ ಕ್ಯಾಬಿನೆಟ್ ಸಭೆ ಮೂರು ಬಾರಿ ಮುಂದೂಡಿಕೆ ಆದಂತಾಗಿದೆ. ಜನವರಿ ಮೊದಲನೇ ವಾರ ಬಳಿಕ ಫೆ.14,15 ಅದಾದ ಬಳಿಕ ಫೆ.17,18 ನಿಗದಿಯಾಗಿತ್ತು‌. ನಂತರ, ಫೆ.16 ರಂದು ಚಾಮರಾಜನಗರದಲ್ಲಿ ಸಮಾವೇಶ ,ಫೆ 17 ಕ್ಕೆ ಸಂಪುಟ ಸಭೆ ಎಂದು ನಿರ್ಧಾರ ಮಾಡಲಾಗಿತ್ತು. ಈಗ, ಈ ದಿನಾಂಕವೂ ಮುಂದೂಡಿಕೆ ಆಗಿದೆ.

  • ಫೆ.15 ಕ್ಕೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಸಭೆ

    ಫೆ.15 ಕ್ಕೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಸಭೆ

    ದಿನಾಂಕ, ಸ್ಥಳದಲ್ಲಿ ಯಾವುದೇ ಬದಲಾವಣೆ ಇಲ್ಲ: ಸರ್ಕಾರ ಸ್ಪಷ್ಟನೆ

    ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರ ನಿರ್ಧರಿಸಿದಂತೆ ಬರುವ ಫೆ.15 ರಂದು ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯದ ಸಚಿವ ಸಂಪುಟ ಸಭೆ ಜರುಗಲಿದೆ. ಇದರಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ ಎಂದು ಸರ್ಕಾರದ ಅಪರ ಕಾರ್ಯದರ್ಶಿ (ಸಚಿವ ಸಂಪುಟ) ಆರ್.ಚಂದ್ರಶೇಖರ್ ತಿಳಿಸಿದ್ದಾರೆ.

    ಕೆಲವು ಮಾಧ್ಯಮಗಳಲ್ಲಿ ಸಚಿವ ಸಂಪುಟ ಸಭೆಯು ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟಕ್ಕೆ ಸ್ಥಳಾಂತರಿಸಲಾಗಿದೆ ಎಂದು ಸುದ್ದಿ ಪ್ರಕಟವಾಗಿದೆ. ಆದರೆ ಯಾವುದೇ ಬದಲಾವಣೆಗಳಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಪೂರ್ವ ನಿರ್ಧಾರದಂತೆ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿಯೇ ಸಚಿವ ಸಂಪುಟ ಸಭೆ ಜರುಗಲಿದೆ ಎಂದು ಅವರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

  • ಮಲೆ ಮಹದೇಶ್ವರ ಬೆಟ್ಟದಲ್ಲಿ ಸಮರ್ಪಕ ತ್ಯಾಜ್ಯ ನಿರ್ವಹಣೆಗೆ ಮಾಸ್ಟರ್ ಪ್ಲ್ಯಾನ್‌ – ತ್ರಿಪಕ್ಷೀಯ ಒಡಂಬಡಿಕೆ

    ಮಲೆ ಮಹದೇಶ್ವರ ಬೆಟ್ಟದಲ್ಲಿ ಸಮರ್ಪಕ ತ್ಯಾಜ್ಯ ನಿರ್ವಹಣೆಗೆ ಮಾಸ್ಟರ್ ಪ್ಲ್ಯಾನ್‌ – ತ್ರಿಪಕ್ಷೀಯ ಒಡಂಬಡಿಕೆ

    ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂರು ವರ್ಷಗಳ ಅವಧಿಯಲ್ಲಿ ಸಮಗ್ರ ತ್ಯಾಜ್ಯ ನಿರ್ವಹಣೆ ಉದ್ದೇಶದಿಂದ ‘ಹಸಿರು ನಾಳೆ, ಮಲೆ ಮಹದೇಶ್ವರ ಬೆಟ್ಟ’ (Green Tomorrow, Male Mahadeshwara Hills) ಎಂಬ ಯೋಜನೆ ಅನುಷ್ಠಾನಕ್ಕೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.

    ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್‌, ಮೈಸೂರು ಕಾವೇರಿ ಪ್ರದೇಶಿಕ ಸಂಸ್ಥೆ ಹಾಗೂ ಜಿಲ್ಲಾ ಪಂಚಾಯಿತಿ ನೇತೃತ್ವದಲ್ಲಿ ಯೋಜನೆ ಅನುಷ್ಠಾನಕ್ಕೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಇದನ್ನೂ ಓದಿ: ಬಿಪಿಎಲ್, ಎಪಿಎಲ್‌ ಕಾರ್ಡ್‌ದಾರರಿಗೆ ಬಿಗ್‌ ಶಾಕ್!

    ಮೂರು ವರ್ಷಗಳ ಯೋಜನೆ ಇದಾಗಿದ್ದು, ತ್ಯಾಜ್ಯ ನಿರ್ವಹಣೆಯ ಎಲ್ಲಾ ವಿಭಾಗಗಳಲ್ಲಿ ಸಮರ್ಪಕವಾಗಿ ಯೋಜನೆ ಅನುಷ್ಠಾನವಾಗಲಿದೆ. ಎಲ್‌ಐಸಿ ಹೆಚ್‌ಎಫ್‌ಎಲ್‌ ಸಂಸ್ಥೆಯು ಯೋಜನೆಗೆ ಅಗತ್ಯ ಅನುದಾನ ನೆರವು ನೀಡಲಿದೆ. ಮೈಕಾಪ್ಸ್‌ ಸಂಸ್ಥೆ ಯೋಜನೆ ಅನುಷ್ಠಾನದ ಹೊಣೆ ಹೊತ್ತಿದೆ. ಮಲೆ ಮಹದೇಶ್ವರ ಬೆಟ್ಟವನ್ನು ಹಸಿರುಮಯವಾಗಿರುವುದು ಮತ್ತು ವೈಜ್ಞಾನಿಕವಾಗಿ ತ್ಯಾಜ್ಯ ನಿರ್ವಹಣೆ ಮಾಡುವ ಉದ್ದೇಶ ಹೊಂದಿದೆ.

    ಪ್ರಸಿದ್ಧ ಯಾತ್ರಾ ಸ್ಥಳವಾಗಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ (Male Mahadeshwara Hills) ವಿಶೇಷ ಜಾತ್ರಾ ಮಹೋತ್ಸವ ಸೇರಿದಂತೆ ಅಮವಾಸ್ಯೆ ದಿನಗಳಂದು ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುತ್ತಾರೆ. ಬರುವಂತಹ ಭಕ್ತರು ಪ್ಲಾಸ್ಟಿಕ್ ವಸ್ತುಗಳು ಸೇರಿದಂತೆ ಅನೇಕ ತ್ಯಾಜ್ಯಗಳನ್ನ ಅಲ್ಲಲ್ಲಿ ಎಸೆಯುತ್ತಾರೆ. ಈ ಕಸವನ್ನ ಸಮರ್ಪಕವಾಗಿ ನಿರ್ವಹಣೆ ಮಾಡಲು ಈಗ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರ ಮುಂದಾಗಿದ್ದು, ‘ಗ್ರೀನ್ ಟುಮಾರೋ, ಎಂಎಂ ಹಿಲ್ಸ್’ ಎಂಬ ಶೀರ್ಷಿಕೆಯಲ್ಲಿ ಹೊಸ ಪ್ರಾಜೆಕ್ಟ್‌ಗೆ ಮುಂದಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌, ಬಿಜೆಪಿ ಶಾಸಕರಿಗೂ ತಟ್ಟಿದ ವಕ್ಫ್ ಬಿಸಿ – ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದು

    ತ್ಯಾಜ್ಯ ಮುಕ್ತ ಮಹದೇಶ್ವರ ಬೆಟ್ಟ ಎಂಬ ಶೀರ್ಷಿಕೆಯಡಿ ಮಲೆ ಮಹದೇಶ್ವರ ಬೆಟ್ಟವನ್ನ ಕಸಮುಕ್ತ ಬೆಟ್ಟವನ್ನಾಗಿಸೋದು, ಕಸ ಹಾಗೂ ತ್ಯಾಜ್ಯ ವಿಲೇವಾರಿಯನ್ನ ಸಮರ್ಪಕವಾಗಿ ಮಾಡೋದು, ಮಲೆ ಮಹದೇಶ್ವರ ಬೆಟ್ಟದ ಸುತ್ತಾ ಕಾಡಿದ್ದು ಈ ತ್ಯಾಜ್ಯದಿಂದ ಪ್ರಕೃತಿಯ ಸೌಂದರ್ಯ ಹಾಳು ಮಾಡದೇ ಹಸಿರನ್ನಾಗಿ ಇರಿಸುವುದರ ಜೊತೆಗೆ ಕಾಡು ಪ್ರಾಣಿಗಳಿಗೆ ತ್ಯಾಜ್ಯದಿಂದ ಹಾನಿಯಾಗದಂತೆ ನೋಡಿಕೊಳ್ಳುವುದಾಗಿದು ಮುಖ್ಯ ಉದ್ದೇಶವಾಗಿದೆ. ಶೇಖರಣೆಯಾದ ತ್ಯಾಜ್ಯವನ್ನು ಹೊಸ ತಂತ್ರಜ್ಞಾನದ ಮೂಲಕ ತ್ಯಾಜ್ಯವನ್ನು ಬೇರೆಡೆ ಸಮರ್ಪಕವಾಗಿ ನಿರ್ವಹಣೆ ಮಾಡುವುದರ ಜೊತೆಗೆ ಪ್ಲಾಸ್ಟಿಕ್ ಬಾಟಲ್ ಹಾಗೂ ವೇಸ್ಟ್ ಪೇಪರ್‌ಗಳನ್ನ ಸಂಗ್ರಹಿಸಿ ಮರು ಬಳಕೆ ಮಾಡುವುದು ಸಹ ಯೋಜನೆ ಉದ್ದೇಶ.

  • ಮಾದಪ್ಪನ ಬೆಟ್ಟದಲ್ಲಿ ವಿಜೃಂಭಣೆಯಿಂದ ನಡೆದ 101 ಹಾಲರವಿ ಉತ್ಸವಕ್ಕೆ ಭಕ್ತಸಾಗರ

    ಮಾದಪ್ಪನ ಬೆಟ್ಟದಲ್ಲಿ ವಿಜೃಂಭಣೆಯಿಂದ ನಡೆದ 101 ಹಾಲರವಿ ಉತ್ಸವಕ್ಕೆ ಭಕ್ತಸಾಗರ

    ಚಾಮರಾಜನಗರ: ನಾಡಿನ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಪ್ರಯುಕ್ತ ಹಾಲರವಿ ಉತ್ಸವ ನಡೆಯಿತು.

    ಹಾಲರವಿ ಉತ್ಸವವು ದೀಪಾವಳಿ ಜಾತ್ರಾ ಮಹೋತ್ಸವದ ವಿಶೇಷ ಉತ್ಸವವಾಗಿದ್ದು ಬೇಡಗಂಪಣ ಸಮುದಾಯದ 101 ಹೆಣ್ಣು ಮಕ್ಕಳು ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ವಿವಿಧ ವಾದ್ಯ ಮೇಳಗಳೊಂದಿಗೆ ದಟ್ಟ ಕಾನನದ ನಡುವೆ ಹರಿಯುವ ಹಾಲುಹಳ್ಳದಿಂದ 101 ಕುಂಭಗಳಲ್ಲಿ ಹಾಲರವಿ ತಂದು ಉತ್ಸವ ನೆರವೇರಿಸಿದರು.

    ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಾನಿಧ್ಯದಲ್ಲಿ ಮಹಾಮಂಗಳಾರತಿ ಬೆಳಗಿಸಿ ನೈವೇದ್ಯ ಅರ್ಪಿಸಿ ದೀವಟಿಗೆ ಸೇವೆಯನ್ನು ಮಾಡಲಾಯಿತು. ಬಳಿಕ ಸ್ವಾಮಿಯ ಉತ್ಸವ ಮೂರ್ತಿಯನ್ನು ವಿವಿಧ ಪುಷ್ಪಾಲಂಕಾರಗಳಿಂದ ಸಿಂಗರಿಸಲಾಗಿದ್ದ ಪಲ್ಲಕ್ಕಿಯಲ್ಲಿ ಇರಿಸಿ ದೇಗುಲದ ಸುತ್ತ ಪ್ರದಕ್ಷಿಣೆ ಹಾಕಲಾಯಿತು.

    101 ಬಾಲೆಯರು ಉಪವಾಸವಿದ್ದು, ಮಹದೇಶ್ವರ ಬೆಟ್ಟದಿಂದ 7 ಕಿ.ಮೀ. ದೂರವಿರುವ ಹಾಲುಹಳ್ಳದ ಗಂಗೆಯನ್ನು ಪುಟ್ಟ ತಾಮ್ರದ ಬಿಂದಿಗೆಯಲ್ಲಿ ತುಂಬಿ ಪೂಜೆ ನೆರವೇರಿಸಿದ ಬಳಿಕ ಅಲ್ಲಿಂದ ಕಾಲ್ನಡಿಗೆಯಲ್ಲಿ ಮಹದೇಶ್ವರ ಬೆಟ್ಟ ತಂಬಡಿಗೇರಿ ಮುಖ್ಯದ್ವಾರ ತಲುಪಿ ವಿಶೇಷ ಪೂಜೆ ನೆರವೇರಿಸುತ್ತಾರೆ. ಬಳಿಕ ಮಂಗಳ ವಾದ್ಯಗಳ ಸಹಿತ ದೇವಾಲಯ ತಲುಪಿ ದೇವಾಲಯದ ಹೊರ ಹಾಗೂ ಒಳ ಆವರಣದಲ್ಲಿ ಒಂದು ಸುತ್ತು ಪ್ರದಕ್ಷಿಣೆ ಹಾಕುತ್ತಾರೆ. ಬಳಿಕ ಭಕ್ತರಿಗೆ ತೀರ್ಥ ವಿತರಿಸುವುದು ಹಾಲರವಿ ಉತ್ಸವವಾಗಿದೆ.

    ಹಾಲರವಿ ಉತ್ಸವಕ್ಕೆ ಯಾವುದೇ ದೃಷ್ಟಿ ತಾಗದಿರಲೆಂದು ಮಾದಪ್ಪನ ಬೆಟ್ಟದ ತಂಬಡಿಗೇರಿಯ ಪ್ರವೇಶ ದ್ವಾರದಲ್ಲಿ ಗಂಗೆಯನ್ನು ಒಂದೆಡೆ ಇರಿಸಿ ಅದರ ಮುಂದೆ ಕತ್ತಿಯಿಂದ ದೃಷ್ಟಿ ತೆಗೆಯಲಾಯಿತು. ಹಾಲರವಿ ಉತ್ಸವವನ್ನು ಕಾಣಲು ರಾಜ್ಯ ಅಷ್ಟೇ ಅಲ್ಲದೇ ತಮಿಳುನಾಡಿನಿಂದಲೂ‌ ಸಾಗರೋಪಾದಿಯಲ್ಲಿ ಮಾದಪ್ಪನ ಭಕ್ತರು ಆಗಮಿಸಿದ್ದರು. ಮಹಾ ರಥೋತ್ಸವ ನಡೆಯಲಿದ್ದು, ಅಂದೇ ರಾತ್ರಿ ಮಹಾಭಿಷೇಕದ ಬಳಿಕ ಕೊಂಡೋತ್ಸವ ನಡೆಯುವ ಮೂಲಕ‌ ದೀಪಾವಳಿ ಜಾತ್ರೆ ಸಂಪನ್ನಗೊಳ್ಳಲಿದೆ.

  • ಮಳೆಗಾಗಿ ಮಲೆ ಮಹದೇಶ್ವರನ ಮೊರೆ ಹೋದ ಸಿಎಂ; ವಿಶೇಷ ಪೂಜೆ, ಬೆಳ್ಳಿ ರಥ ಸೇವೆ

    ಮಳೆಗಾಗಿ ಮಲೆ ಮಹದೇಶ್ವರನ ಮೊರೆ ಹೋದ ಸಿಎಂ; ವಿಶೇಷ ಪೂಜೆ, ಬೆಳ್ಳಿ ರಥ ಸೇವೆ

    ಚಾಮರಾಜನಗರ: ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ್ದು ಬುಧವಾರ ಬೆಳಗ್ಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಅಲ್ಲದೇ ರಾಜ್ಯದಲ್ಲಿ ಕಾವೇರಿ ಕಿಚ್ಚು ಕೂಡ ಹೆಚ್ಚಾಗಿದ್ದು, ಮಳೆಗಾಗಿ ಮಹದೇಶ್ವರನಲ್ಲಿ ಪ್ರಾರ್ಥಿಸಿದ್ದಾರೆ. ಸುಮಾರು 20 ನಿಮಿಷಗಳ ಕಾಲ ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: ಈಶಾನ್ಯ ರಾಜ್ಯವನ್ನು ‘ಯುದ್ಧಭೂಮಿಯಾಗಿ’ ಪರಿವರ್ತಿಸಲಾಗಿದೆ: ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

    ಸಚಿವರಾದ ಕೆ.ವೆಂಕಟೇಶ್, ಹೆಚ್.ಸಿ.ಮಹದೇವಪ್ಪ ಜೊತೆಗೂಡಿ ಬಂದ ಸಿದ್ದರಾಮಯ್ಯ ಮಹದೇಶ್ವರ ಬೆಟ್ಟದಲ್ಲಿ ಬೆಳ್ಳಿ ದಂಡ ಹಿಡಿದು, ಬೆಳ್ಳಿ ರಥ ಸೇವೆ ನೆರವೇರಿಸಿದ್ದಾರೆ. ಬಳಿಕ, ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನ ಭೇಟಿ ಮಾಡಿ, ನಂತರ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಾಲ ಮಾಡಿ ಅದ್ಧೂರಿ ಮದುವೆ ಮಾಡೋದು ಅನಾರೋಗ್ಯಕಾರಿ: ಸಿದ್ದರಾಮಯ್ಯ

    ಸಾಲ ಮಾಡಿ ಅದ್ಧೂರಿ ಮದುವೆ ಮಾಡೋದು ಅನಾರೋಗ್ಯಕಾರಿ: ಸಿದ್ದರಾಮಯ್ಯ

    – ಮಹದೇಶ್ವರ ಬೆಟ್ಟದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 37 ನವಜೋಡಿ

    ಚಾಮರಾಜನಗರ: ಪ್ರಸಿದ್ಧ ಯಾತ್ರಾ ಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿಂದು (Male Mahadeshwara Hills) ನಡೆದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ 37 ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

    ಮಲೆಮಹದೇಶ್ವರನ ತಪೋ ಭೂಮಿಯಲ್ಲಿ 37 ಮಂದಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನವಜೋಡಿಗಳಿಗೆ ಮಂಗಳಸೂತ್ರ ವಿತರಿಸಿ ಶುಭ ಹಾರೈಸಿದರು‌. ಇದನ್ನೂ ಓದಿ: ಸ್ವದೇಶಿ ಆಯುಧ ನಿರ್ಮಾಣ ತಂತ್ರಜ್ಞಾನದಲ್ಲಿ ಭಾರತದ ಸಾಧನೆ; ಶತ್ರುಗಳ ನಿದ್ದೆಗೆಡಿಸಲಿದೆ ಧ್ರುವಾಸ್ತ್ರ

    ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಸಾಲ ಮಾಡಿ ಅದ್ಧೂರಿ ಮದುವೆ (Marriage) ಮಾಡುವುದು ಅನಾರೋಗ್ಯಕಾರಿ. ಮೊದಲು ವ್ಯವಸಾಯಕ್ಕೆಂದು ಸಾಲ ಮಾಡಿ, ಮದುವೆ ಮಾಡುವುದನ್ನ ನಿಲ್ಲಿಸಿ ಎಂದು ಕರೆ ನೀಡಿದರು.

    ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ಧೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ. ಜೀವನ ಪರ್ಯಂತ ಸಾಲ ತೀರಿಸುತ್ತಾ ಕೂರಬೇಕಾಗುತ್ತದೆ. ಆದ್ದರಿಂದ ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು ಎಂದು ಹೇಳಿದರು. ಇದನ್ನೂ ಓದಿ: ಈಶಾನ್ಯ ರಾಜ್ಯವನ್ನು ‘ಯುದ್ಧಭೂಮಿಯಾಗಿ’ ಪರಿವರ್ತಿಸಲಾಗಿದೆ: ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

    ಮಹದೇಶ್ವರನ ಬೆಟ್ಟ ಆಧ್ಯಾತ್ಮಿಕ ಮಹತ್ವ ಇರುವ ಪುಣ್ಯ ಸ್ಥಳ. ಶೂದ್ರರು, ಶ್ರಮಿಕರು, ಬಡವರು, ಎಲ್ಲಾ ಜಾತಿಯವರ ಆಧ್ಯಾತ್ಮಿಕ ಕೇಂದ್ರವಾಗಿದೆ. ಈ ಕಾರಣಕ್ಕೇ ನನಗೆ ಈ ಕ್ಷೇತ್ರದ ಬಗ್ಗೆ ಅತ್ಯಂತ ಶ್ರದ್ಧೆ ಮತ್ತು ಗೌರವ ಇದೆ. ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ಈಗ ಪ್ರಾಧಿಕಾರದ ಆದಾಯವೂ ಹೆಚ್ಚಾಗಿದೆ. ಶಕ್ತಿ ಯೋಜನೆಯ ಪರಿಣಾಮ ಭಕ್ತರು, ಅದರಲ್ಲೂ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮಹದೇಶ್ವರನ ದರ್ಶನ ಪಡೆಯುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಮುಂದಿನ 5 ವರ್ಷಗಳಲ್ಲಿ ಮಲೆ ಮಹದೇಶ್ವರ ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸ್ತೀವಿ ಎಂದ ಸಿಎಂ, ಇಲ್ಲಿ ಕುಡಿಯುವ ನೀರು ಮತ್ತು ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ರಾಷ್ಟ್ರಪತಿ ಭವನ ಇನ್ಮುಂದೆ ತಪೋಭವನ: ಮಲೆ ಮಹದೇಶ್ವರ ಬೆಟ್ಟದಲ್ಲಿರುವ ರಾಷ್ಟ್ರಪತಿ ಭವನದ ಹೆಸರು ಬದಲಾಗಿದೆ. ಇನ್ನು ಮುಂದೆ ಇದು ತಪೋಭವನ. ಮಹದೇಶ್ವರ ತಪಸ್ಸು ಮಾಡಿದ ಶಕ್ತಿ ಕೇಂದ್ರ ಇದು, ಆದ್ದರಿಂದ ಇದನ್ನು ನಾವು ತಪೋಭವನ ಎಂದು ಕರೆಯಬೇಕು. ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಯ ಸಲಹೆಯಂತೆ ತಪೋ ಭವನ ಎಂದು ಬದಲಾಯಿಸಿದ್ದೇವೆ ಎಂದು ಹೇಳಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋಟ್ಯಧೀಶನಾದ ಮಾದಪ್ಪ- ನಗದು ಜೊತೆ 77 ಗ್ರಾಂ ಚಿನ್ನ, 2 ಕೆ.ಜಿ ಬೆಳ್ಳಿ ಸಂಗ್ರಹ

    ಕೋಟ್ಯಧೀಶನಾದ ಮಾದಪ್ಪ- ನಗದು ಜೊತೆ 77 ಗ್ರಾಂ ಚಿನ್ನ, 2 ಕೆ.ಜಿ ಬೆಳ್ಳಿ ಸಂಗ್ರಹ

    ಚಾಮರಾಜನಗರ: ಎಂದಿನಂತೆ ಈ ಬಾರಿಯೂ ಇತಿಹಾಸ ಪ್ರಸಿದ್ಧ ಮಲೆಮಹದೇಶ್ವರ ಬೆಟ್ಟದ (Malemahadeshwara Hills) ಮೇಲಿರುವ ಮಲೆಮಹದೇಶ್ವರನ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಈ ಬಾರಿಯೂ ಮಾದಪ್ಪ ಕೋಟ್ಯಧೀಶನಾಗಿದ್ದಾನೆ.

    ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ತಡರಾತ್ರಿವರೆಗೂ ಹುಂಡಿ ಎಣಿಕೆ ನಡೆದಿದೆ. ಈ ವೇಳೆ ಮಹದೇಶ್ವರನ ಹುಂಡಿಯಲ್ಲಿ 2.47 ಕೋಟಿ ರೂ. ಗೂ ಹೆಚ್ಚು ಕಾಣಿಕೆ ಹಣ ಸಂಗ್ರಹವಾಗಿದೆ. ಇದನ್ನೂ ಓದಿ: ರಾಹುಲ್ ಗಾಂಧಿಗೆ ಹಿನ್ನಡೆ- ಮಾನನಷ್ಟ ಪ್ರಕರಣದಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ

    ಕಳೆದ 36 ದಿನಗಳ ಅವಧಿಯಲ್ಲಿ ಒಟ್ಟು 2,47,15,655 ರೂ. ನಗದು ಸಂಗ್ರಹವಾಗಿದೆ. ನಗದು ಹಣದ ಜೊತೆಗೆ 77 ಗ್ರಾಂ ಚಿನ್ನ (Gold), 2 ಕೆ.ಜಿ 250 ಗ್ರಾಂ ಬೆಳ್ಳಿಯನ್ನು (Silver) ಭಕ್ತರು ಹುಂಡಿಗೆ ಹಾಕುವ ಮೂಲಕ ಮಾದಪ್ಪನಿಗೆ ಸಮರ್ಪಿಸಿದ್ದಾರೆ. ನಗದು ಹಣದ (Money) ಪೈಕಿ 12 ಲಕ್ಷ ರೂ. ನಾಣ್ಯದ ರೂಪದಲ್ಲೇ ಸಂಗ್ರಹವಾಗಿರೋದು ವಿಶೇಷವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 8 ಸಾವಿರ ಕೋಟಿ ಖರ್ಚು ಮಾಡಿ ದಶಪಥ ರಸ್ತೆ ಮಾಡಿದ್ದೇವೆ, ಎಲ್ಲರೂ ಹೆಮ್ಮೆಪಡಬೇಕು – ಸಿಎಂ

    8 ಸಾವಿರ ಕೋಟಿ ಖರ್ಚು ಮಾಡಿ ದಶಪಥ ರಸ್ತೆ ಮಾಡಿದ್ದೇವೆ, ಎಲ್ಲರೂ ಹೆಮ್ಮೆಪಡಬೇಕು – ಸಿಎಂ

    ಚಾಮರಾಜನಗರ: ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇಗೆ (Bengaluru Mysuru Expressway) 8 ಸಾವಿರ ಕೋಟಿ ರೂ. ಖರ್ಚು ಮಾಡಿದ್ದೇವೆ. ಇದರಿಂದ ಇಡೀ ರಾಷ್ಟ್ರವೇ ಮೈಸೂರನ್ನು ಸಂಪರ್ಕಿಸುತ್ತೆ. ಇದಕ್ಕೆ ಎಲ್ಲರೂ ಹೆಮ್ಮೆಪಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

    ಮಲೆಮಹದೇಶ್ವರ ಬೆಟ್ಟದಲ್ಲಿ (Male Mahadeshwara Hills) 108 ಅಡಿಯ ಮಹದೇಶ್ವರ ಪ್ರತಿಮೆ ಲೋಕಾರ್ಪಣೆಗೊಳಿಸಿದ ನಂತರ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ನಲ್ಲಿ ಮಳೆಯ ಅವಾಂತರದ ಬಗ್ಗೆ ಮಾಧ್ಯಮಗಳೊಂದಿಗೆ ಅವರು ಮಾತನಾಡಿದ್ದಾರೆ.  ಇದನ್ನೂ ಓದಿ: ಮಾ.25ರಂದು ಮತ್ತೆ ಮೋದಿ ರಾಜ್ಯಕ್ಕೆ – ಬೆಂಗಳೂರಿನಲ್ಲಿ ಮೆಗಾ ರೋಡ್‌ ಶೋಗೆ ಮುಹೂರ್ತ ಫಿಕ್ಸ್‌

    ಮಳೆ (Rain) ಬಂದಾಗ ರಸ್ತೆಯಲ್ಲಿ ಸಣ್ಣಪುಟ್ಟ ಸಮಸ್ಯೆ ಕಾಣಿಸಿಕೊಳ್ಳುತ್ತವೆ, ಅದನ್ನೆಲ್ಲ ಸರಿಪಡಿಸುತ್ತೇವೆ. ಒಂದು ಬಾರಿ ಮಳೆಯಾದಾಗಲೇ ಸಮಸ್ಯೆ ಗೊತ್ತಾಗುವುದು ಎಂದು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಅಲ್ಲದೇ ಯಾರೇ ಸ್ಪರ್ಧೆ ಮಾಡಿದ್ರು ನನ್ನ ಗೆಲುವು ಶತಸಿದ್ಧ – ಕೋಲಾರ ಜೆಡಿಎಸ್ ಅಭ್ಯರ್ಥಿ ಶ್ರೀನಾಥ್

    ʻಇಂತಹ ರಸ್ತೆ ಉದ್ಘಾಟನೆ ಮಾಡಲು ಮೋದಿ (Narendra Modi) ಬರಬೇಕಿತ್ತಾ?ʼ ಎಂಬ ಟೀಕೆಗೆ ಉತ್ತರಿಸಿದ ಸಿಎಂ, 8 ಸಾವಿರ ಕೋಟಿ ಖರ್ಚು ಮಾಡಿ ರಸ್ತೆ ಮಾಡಿದ್ದೇವೆ. ಈ ರಸ್ತೆಯಿಂದ ಇಡೀ ರಾಷ್ಟ್ರವೇ ಮೈಸೂರನ್ನು ಸಂಪರ್ಕಿಸುತ್ತೆ. ಎಲ್ಲರೂ ಇದಕ್ಕೆ ಹೆಮ್ಮೆ ಪಡಬೇಕು. ಇಂತಹ ಮಹತ್ವದ ಕೆಲಸಕ್ಕಲ್ಲದೇ ಮತ್ತ್ಯಾವುದಕ್ಕೆ ಪ್ರಧಾನಿ ಅವರನ್ನ ಕರೆಸಬೇಕು? ಎಂದು ತಿರುಗೇಟು ನೀಡಿದ್ದಾರೆ.

    ಎನ್‌‌ಎಚ್‌ಎಂ ನೌಕರರ ಮುಷ್ಕರ ವಿಚಾರದ ಬಗ್ಗೆ ಮಾತನಾಡಿ, ಅವರಿಗೂ ವೇತನ ಹೆಚ್ಚಳ ಮಾಡಬೇಕೆಂಬುದು ನಮ್ಮ ಉದ್ದೇಶ. ಇನ್ನೆರಡು ದಿನಗಳಲ್ಲಿ ಸಭೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದ ಅವರು, ಉರಿಗೌಡ ನಂಜೇಗೌಡ ವಿವಾದ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದರು.

  • ಮುಷ್ಕರದಿಂದ ಜನರಿಗೆ ತೊಂದರೆಯಾದರೆ ನೌಕರರಿಗೆ ಒಳ್ಳೆಯದಾಗುವುದಿಲ್ಲ- ಈಶ್ವರಪ್ಪ

    ಮುಷ್ಕರದಿಂದ ಜನರಿಗೆ ತೊಂದರೆಯಾದರೆ ನೌಕರರಿಗೆ ಒಳ್ಳೆಯದಾಗುವುದಿಲ್ಲ- ಈಶ್ವರಪ್ಪ

    ಚಾಮರಾಜನಗರ: ಸರ್ಕಾರಿ ನೌಕರರ ಮುಷ್ಕರದಿಂದ (Government employees strike) ಜನಸಾಮಾನ್ಯರಿಗೆ ತೊಂದರೆಯಾದರೆ ನೌಕರರಿಗೆ ಒಳ್ಳೆಯದಾಗುವುದಿಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (K.S.Eshwarappa) ಕಿಡಿಕಾರಿದ್ದಾರೆ.

    ಮಲೆಮಹದೇಶ್ವರ ಬೆಟ್ಟದಲ್ಲಿ (Male Mahadeshwara Hills) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ (BJP) ಅಧಿಕಾರಕ್ಕೆ ಬಂದ ನಂತರ ಸರ್ಕಾರಿ ನೌಕರರನ್ನು ಅಣ್ಣ-ತಮ್ಮಂದಿರಂತೆ ನೋಡಿಕೊಂಡಿದೆ. ಯಾವ ಮುಷ್ಕರಕ್ಕೂ ಅವಕಾಶ ನೀಡದೆ, ಎಲ್ಲಾ ಸೌಲಭ್ಯಗಳನ್ನು ನೀಡಲಾಗಿತ್ತು. ಚುನಾವಣಾ ಸಂದರ್ಭದಲ್ಲಿ ಮುಷ್ಕರ ಮಾಡಿದರೆ ಸರ್ಕಾರ ಬಗ್ಗುತ್ತದೆ ಎಂಬುದು ನೌಕರರ ನಂಬಿಕೆ. ಸಮಸ್ಯೆ ಆದಷ್ಟು ಬೇಗ ಪರಿಹಾರವಾಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: ರೈಲುಗಳ ನಡುವೆ ಭೀಕರ ಅಪಘಾತ- 16 ಮಂದಿ ದುರ್ಮರಣ

    ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸರ್ಕಾರಿ ನೌಕರರಿಗೆ ಅನೂಕೂಲಕರ ವಾತಾವರಣ ಮಾಡಿಕೊಟ್ಟಿದ್ದಾರೆ. ಕಾಂಗ್ರೆಸ್ (Congress) ಆರೋಪ ಮಾಡುವಷ್ಟು ಯಡಿಯೂರಪ್ಪ ನೀಚ ಮಟ್ಟಕ್ಕೆ ಹೋಗಲ್ಲ. ಅವರ ಮೇಲೆ ಆರೋಪ ಮಾಡುವವರು ಯಾವ ಪಾಪಕ್ಕೆ ಹೋಗುತ್ತಾರೋ ಗೊತ್ತಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

    ಯಡಿಯೂರಪ್ಪ (B.S.Yediyurappa) ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಸಹೋದರರಂತೆ ಇದ್ದಾರೆ. ಸರ್ಕಾರಿ ನೌಕರರ ಮುಷ್ಕರಕ್ಕೂ ಯಡಿಯೂರಪ್ಪ ಅವರಿಗೂ ಸಂಬಂಧ ಕಲ್ಪಿಸುವ ಮಟ್ಟಕ್ಕೆ ಕಾಂಗ್ರೆಸ್ ಇಳಿಯಬಾರದಿತ್ತು ಎಂದಿದ್ದಾರೆ. ಇದನ್ನೂ ಓದಿ: ಪತ್ನಿಗೆ ಮೆಸೇಜ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಗೆಳೆಯ ಮಟಾಶ್!

  • 30 ವರ್ಷವಾದ್ರೂ ವಧು ಸಿಕ್ಕಿಲ್ಲ ಅಂತಾ `ಬ್ರಹ್ಮಚಾರಿಗಳ ನಡೆ ಮಾದಪ್ಪನ ಕಡೆ’

    30 ವರ್ಷವಾದ್ರೂ ವಧು ಸಿಕ್ಕಿಲ್ಲ ಅಂತಾ `ಬ್ರಹ್ಮಚಾರಿಗಳ ನಡೆ ಮಾದಪ್ಪನ ಕಡೆ’

    ಮಂಡ್ಯ: 30 ವರ್ಷ ದಾಟಿದ ಬ್ರಹ್ಮಚಾರಿಗಳು ಮಲೆ ಮಹದೇಶ್ವರ ಬೆಟ್ಟಕ್ಕೆ (Male Mahadeshwara Hills) ಫೆ.23ರಂದು ಮಂಡ್ಯ (Mandya) ಜಿಲ್ಲೆಯ ಕೆ.ಎಂ ದೊಡ್ಡಿಯಿಂದ `ಬ್ರಹ್ಮಚಾರಿಗಳ ನಡೆ ಮಹದೇಶ್ವರ ಬೆಟ್ಟದ ಕಡೆ’ ಹೆಸರಿನಲ್ಲಿ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.

    30 ವರ್ಷ ದಾಟಿದರೂ ಮದುವೆಯಾಗಿಲ್ಲ (Unmarried) ಅಂತಾ 200ಕ್ಕೂ ಹೆಚ್ಚು ಮಂದಿ ಬ್ರಹ್ಮಚಾರಿಗಳು ಶ್ರೀಘ್ರ ವಧು ಸಿಗಲೆಂದು ಪ್ರಾರ್ಥನೆ ಸಲ್ಲಿಸುವ ಸಲುವಾಗಿ ಮಂಡ್ಯ ಜಿಲ್ಲೆಯ ಕೆ.ಎಂ ದೊಡ್ಡಿಯಿಂದ ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದಾರೆ. ಇದನ್ನೂ ಓದಿ: ʼಸುಪ್ರೀಂʼ ನಿವೃತ್ತ ನ್ಯಾಯಾಧೀಶ ಕನ್ನಡಿಗ ಅಬ್ದುಲ್‌ ನಜೀರ್‌ ಆಂಧ್ರಪ್ರದೇಶ ರಾಜ್ಯಪಾಲರಾಗಿ ನೇಮಕ

    ಈ ಪಾದಯಾತ್ರೆಯಲ್ಲಿ ಕೇವಲ ಮಂಡ್ಯ ಜಿಲ್ಲೆಯವರಲ್ಲದೇ ಮೈಸೂರು, ಬೆಂಗಳೂರು, ರಾಮನಗರ, ಚಿಕ್ಕಬಳ್ಳಾಪುರ, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಬ್ರಹ್ಮಚಾರಿಗಳು ಭಾಗಿಯಾಗಲಿದ್ದಾರೆ. ನೋಂದಣಿ ಮಾಡಿಕೊಂಡವರಿಗೆ ಮಾತ್ರ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಕಲ್ಪಿಸಲಾಗಿದೆ. ಇದನ್ನೂ ಓದಿ: `ನನ್ನ ಹೆಂಡತಿಗಿಂತ ಹೆಚ್ಚಾಗಿ ವಿರಾಟ್ ಕೊಹ್ಲಿಯನ್ನ ಪ್ರೀತಿಸುತ್ತೀನಿ’ – ಅಭಿಮಾನಿ ಪೋಸ್ಟರ್‌ಗೆ ನೆಟ್ಟಿಗರು ಫಿದಾ

    ಈ ಪಾದಯಾತ್ರೆಯಲ್ಲಿ ವಿವಾಹಿತರು ಪಾಲ್ಗೊಳ್ಳುವಂತಿಲ್ಲ, ವಿವಾಹ ನಿಶ್ಚಿತಾರ್ಥ ಆದವರೂ ಬರುವಂತಿಲ್ಲ ಹಾಗೂ 30 ವರ್ಷ ದಾಟಿದ ಬ್ರಹ್ಮಚಾರಿಗಳು ಮಾತ್ರ ಪಾಲ್ಗೊಳ್ಳಬೇಕು ಎಂದು ಆಯೋಜಕರು ಷರತ್ತು ವಿಧಿಸಿದ್ದಾರೆ.

    ವಿವಾಹವಾಗಲು ಹುಡುಗಿ ಸಿಗದೇ ಆತ್ಮಸ್ಥೈರ್ಯ ಕಳೆದುಕೊಳ್ಳದೇ ಧೈರ್ಯವಾಗಿ ಇರಬೇಕೆಂದು ಅವಿವಾಹಿತರನ್ನು ಸಂಘಟಿಸಿ ಆತ್ಮಸ್ಥೈರ್ಯ ತುಂಬುವ ಕೆಲಸ ಇದಾಗಿದೆ ಎಂದು ಆಯೋಜಕರು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k