Tag: male mhadeshwara hills

  • ಮಲೆ ಮಹದೇಶ್ವರ ಬೆಟ್ಟದಲ್ಲಿ ಎಡವಟ್ಟು- ಲಡ್ಡು ಜೊತೆಗೆ ಭಕ್ತನ ಕೈ ಸೇರಿದ 2.19 ಲಕ್ಷ ರೂ.!

    ಮಲೆ ಮಹದೇಶ್ವರ ಬೆಟ್ಟದಲ್ಲಿ ಎಡವಟ್ಟು- ಲಡ್ಡು ಜೊತೆಗೆ ಭಕ್ತನ ಕೈ ಸೇರಿದ 2.19 ಲಕ್ಷ ರೂ.!

    ಚಾಮರಾಜನಗರ: ಲಡ್ಡು ಜೊತೆಗೆ 2.19 ಲಕ್ಷ ರೂ. ಭಕ್ತನ ಕೈ ಸೇರುವ ಮೂಲಕ ಮಲೆ ಮಹದೇಶ್ವರ ಬೆಟ್ಟದಲ್ಲಿ ಎಡವಟ್ಟು ನಡೆದಿದೆ.

    ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿಬ್ಬಂದಿ ಕಣ್ತಪ್ಪಿನಿಂದ ಪ್ರಸಾದದ ಜೊತೆಗೆ 2 ಲಕ್ಷ ರೂಪಾಯಿ ಭಕ್ತನ ಪಾಲಾಗಿದೆ. ಇದನ್ನೂ ಓದಿ: ಈ ಕಾರಣಕ್ಕಾಗಿ ಅನುಷ್ಕಾ ಶೆಟ್ಟಿ ಕ್ಯಾಮೆರಾ ಕಣ್ಣಿಂದ ದೂರವಿದ್ದಾರೆ

    ವಿಶೇಷ ದರ್ಶನಕ್ಕೆ ಟಿಕೆಟ್ ನೀಡಲು ಕುಳಿತಿದ್ದ ಸಿಬ್ಬಂದಿ ಭಕ್ತನಿಗೆ ಲಾಡು ಜೊತೆಗೆ ಹಣದ ಚೀಲ ನೀಡಿದ್ದಾರೆ. ಲಾಡು ಪ್ರಸಾದ ಇಟ್ಟಿದ್ದ ಬ್ಯಾಗ್ ಸಮೀಪ ಹಣವನ್ನು ಸಹ ಇಡಲಾಗಿದ್ದ ಹಿನ್ನೆಲೆ ಹಣ ಸಹಿತ ಬ್ಯಾಗ್ ಅನ್ನು ಸಿಬ್ಬಂದಿ ಭಕ್ತನಿಗೆ ನಿಡಿದ್ದಾರೆ.

    ಜನದಟ್ಟಣೆ ಹೆಚ್ಚಾಗಿ ಗಾಬರಿಯಲ್ಲಿ ಯಾಮಾರಿದ ಸಿಬ್ಬಂದಿ ಈ ಎಡವಟ್ಟು ಮಾಡಿದ್ದು, ವಿಚಾರ ತಿಳಿದು ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಲಾಗಿದೆ. ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಯುಗಾದಿ ಹಬ್ಬದ ನಾಲ್ಕು ದಿನದ ಜಾತ್ರೆಗೆ ಮಾದಪ್ಪನ ಬೆಟ್ಟಕ್ಕೆ ಭಕ್ತರಿಗೆ ನಿರ್ಬಂಧ

    ಯುಗಾದಿ ಹಬ್ಬದ ನಾಲ್ಕು ದಿನದ ಜಾತ್ರೆಗೆ ಮಾದಪ್ಪನ ಬೆಟ್ಟಕ್ಕೆ ಭಕ್ತರಿಗೆ ನಿರ್ಬಂಧ

    ಚಾಮರಾಜನಗರ: ಏಪ್ರಿಲ್ 10 ರಿಂದ 13 ರವರೆಗೆ ನಡೆಯುವ ಯುಗಾದಿ ಜಾತ್ರೆಗೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.

    ಹೌದು. ಸಾರ್ವಜನಿಕರು ಹಾಗೂ ಭಕ್ತಾದಿಗಳ ಸುರಕ್ಷತೆ ಹಾಗೂ ಆರೋಗ್ಯದ ಹಿತದೃಷ್ಟಿಯಿಂದ ಕೊರೊನಾ ವೈರಸ್ ಹರಡದಂತೆ ತಡೆಯುವ ಮುಂಜಾಗ್ರತಾ ಕ್ರಮವಾಗಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಮಲೆ ಮಹದೇಶ್ವರ ಬೆಟ್ಟದಲ್ಲಿ ಈ ನಿಷೇಧ ಹೇರಲಾಗಿದೆ.

    ಜಾತ್ರಾ ಮಹೋತ್ಸವದ ವಿಶೇಷ ಪೂಜಾ ಕಾರ್ಯಗಳಿಗೆ ದೇವಾಲಯದ ಅರ್ಚಕರು, ಸಿಬ್ಬಂದಿ, ಸ್ಥಳೀಯರು, ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಹೊರತುಪಡಿಸಿ ಜಿಲ್ಲಾ ಹಾಗೂ ಅಂತರ ಜಿಲ್ಲಾ, ಹೊರ ರಾಜ್ಯದ ಸಾರ್ವಜನಿಕರು ಮತ್ತು ಭಕ್ತಾದಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ಮೂಲಕ ಜಾತ್ರಾ ಮಹೋತ್ಸವವನ್ನು ಸರಳ ಹಾಗೂ ಸಾಂಪ್ರದಾಯಿಕವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಆದೇಶ ಹೊರಡಿಸಿದ್ದಾರೆ.

  • ಜನತಾ ಕರ್ಫ್ಯೂಗೆ ಚಾಮರಾಜನಗರದಲ್ಲಿ ಬೆಂಬಲ- ಭಕ್ತರಿಲ್ಲದೆ ಬಿಕೋ ಎನ್ನುತ್ತಿದೆ ಮಾದಪ್ಪನ ಸನ್ನಿಧಿ

    ಜನತಾ ಕರ್ಫ್ಯೂಗೆ ಚಾಮರಾಜನಗರದಲ್ಲಿ ಬೆಂಬಲ- ಭಕ್ತರಿಲ್ಲದೆ ಬಿಕೋ ಎನ್ನುತ್ತಿದೆ ಮಾದಪ್ಪನ ಸನ್ನಿಧಿ

    ಚಾಮರಾಜನಗರ: ಕೊರೊನಾ ಹರಡುವುದನ್ನು ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಜನತಾ ಕರ್ಫ್ಯೂಗೆ ಗಡಿನಾಡು ಚಾಮರಾಜನಗರದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಎಲ್ಲ ವರ್ಗದ ಜನತೆ ಬೆಂಬಲ ವ್ಯಕ್ತಪಡಿಸಿದ್ದು ಇಡೀ ಚಾಮರಾನಗರ ಬಹುತೇಕ ಸ್ತಬ್ಧವಾಗಿದೆ. ಅಂಗಡಿಮುಂಗಟ್ಟುಗಳು ಸಂಪೂರ್ಣವಾಗಿ ಬಂದ್ ಆಗಿವೆ. ಹೋಟೆಲ್ ಗಳು ಮುಚ್ಚಿವೆ. ಕೆ.ಎಸ್.ಆರ್.ಟಿ.ಸಿ ಹಾಗೂ ಖಾಸಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದ್ದು ಬಸ್ ಕೆಎಸ್‍ನಿಲ್ದಾಣ ಬಿಕೋ ಎನ್ನುತ್ತಿದೆ.

    ಇನ್ನೊಂದೆಡೆ ಚಾಮರಾಜನಗರದಿಂದ ಹೊರಡುವ ಎಲ್ಲಾ ಆರು ರೈಲುಗಳನ್ನು ರದ್ದುಪಡಿಸಲಾಗಿದ್ದು, ರೈಲು ನಿಲ್ದಾಣವೂ ಬಿಕೋ ಎನ್ನುತ್ತಿದೆ. ಆಟೋಗಳು ಸಹ ರಸ್ತೆಗಿಳಿದಿಲ್ಲ. ಎಪಿಎಂಸಿ ಮಾರುಕಟ್ಟೆಯಲ್ಲಿ ಕೂಡ ವ್ಯಾಪಾರ ವಹಿವಾಟು ಸ್ಥಗಿತಗೊಂಡಿದೆ. ಒಟ್ಟಾರೆ ಬಹುತೇಕ ಎಲ್ಲ ವರ್ಗದ ಜನತೆ ಜನತಾ ಕರ್ಫ್ಯೂಗೆ ಬೆಂಬಲ ವ್ಯಕ್ತಪಡಿಸುವ ಮೂಲಕ ಕೊರೊನಾ ಹರಡುವುದನ್ನು ತಡೆಗಟ್ಟುವುದಕ್ಕೆ ಸಹಕಾರ ನೀಡಿದ್ದಾರೆ.

    ಬಿಕೋ ಎನ್ನುತ್ತಿದೆ ಮಾದಪ್ಪನ ಸನ್ನಿಧಿ:
    ಜನತಾ ಕರ್ಫ್ಯೂ ಹಿನ್ನಲೆಯಲ್ಲಿ ಇತಿಹಾಸ ಪ್ರಸಿದ್ಧ ಮಲೆಮಹದೇಶ್ವರಬೆಟ್ಟ ಸಂಪೂರ್ಣ ಸ್ತಬ್ಧವಾಗಿದೆ. ಸದಾ ಸಾವಿರಾರು ಭಕ್ತರಿಂದ ತುಂಬಿ ತುಳುಕುತ್ತಿದ್ದ ಮಾದಪ್ಪನ ಸನ್ನಿಧಿ ಇಂದು ಭಕ್ತರಿಲ್ಲದೆ ಬಿಕೋ ಎನ್ನುತ್ತಿದೆ. ಮಲೆಮಹದೇಶ್ಚರನ ದರ್ಶನಕ್ಕೆ ರಾಜ್ಯದ ನಾನಾ ಮೂಲೆಗಳಿಂದ ಹಾಗೂ ನೆರೆಯ ತಮಿಳುನಾಡಿನಿಂದ ನಿತ್ಯ ಸಾವಿರಾರು ಭಕ್ತರು ಬರುತ್ತಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿ ಕರೆನೀಡಿರುವ ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ಯಾವುದೇ ಭಕ್ತರು ಮಹದೇಶ್ವರ ಬೆಟ್ಟದತ್ತ ಸುಳಿದಿಲ್ಲ.

    ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಹದೇಶ್ವರ ದೇವಾಲಯ ಬಂದ್ ಆಗಿದ್ದು ದೇವಾಲಯದ ಪ್ರಮುಖ ದ್ವಾರಗಳಿಗೆ ಬೀಗ ಹಾಕಲಾಗಿದೆ. ಜನತಾ ಕರ್ಫ್ಯೂಗೆ ಮಹದೇಶ್ವರನ ಬೆಟ್ಟದಲ್ಲೂ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.