Tag: Malehadeshwara Hill

  • ಮಲೆಮಹದೇಶ್ವರ ಬೆಟ್ಟದಲ್ಲಿ ಅಗ್ನಿ ನರ್ತನ

    ಮಲೆಮಹದೇಶ್ವರ ಬೆಟ್ಟದಲ್ಲಿ ಅಗ್ನಿ ನರ್ತನ

    ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ನಂತರ ಇದೀಗ ಚಾಮರಾಜಪೇಟೆಯ ಮಲೆಮಹದೇಶ್ವರ ಬೆಟ್ಟದ ಕಾವೇರಿ ವನ್ಯ ಜೀವಿ ಧಾಮದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

    ಹನೂರು ತಾಲೂಕಿನ ಪೊನ್ನಾಚಿಯ ಬೆಟ್ಟ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಳೆದ 2 ದಿನಗಳ ಹಿಂದೆ ಅಲ್ಪ ಪ್ರಮಾಣದಲ್ಲಿ ಕಾಣಿಸಿಕೊಂಡ ಬೆಂಕಿ ಇಂದು 25 ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಬೆಂಕಿಯನ್ನು ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರ ಹರಸಾಹಸ ಪಡುತ್ತಿದ್ದಾರೆ.

    ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಬೆಂಕಿಗೆ 15 ಸಾವಿರ ಎಕರೆಗೂ ಅಧಿಕ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿತ್ತು. ಈ ವೇಳೆ ಅರಣ್ಯ ಇಲಾಖೆ ಹೆಲಿಕಾಪ್ಟರ್ ಬಳಸಿ ಬೆಂಕಿ ನಂದಿಸುವ ಕಾರ್ಯ ನಡೆದಿತ್ತು. ಆ ಬಳಿಕವಷ್ಟೇ ಬೆಂಕಿ ಆತೋಟಿಗೆ ಬಂದಿತ್ತು. ಆದರೆ ಆ ವೇಳೆಗಾಗಲೇ ಸಾವಿರಾರರು ಎಕರೆ ಅರಣ್ಯ ಪ್ರದೇಶ ನಾಶವಾಗಿತ್ತು.