Tag: malleshwaram

  • ಮೈದಾನದ ಗೇಟ್ ಬಿದ್ದು ಮಗು ಸಾವು – ತನಿಖೆ ನಡೆಸುವಂತೆ ಬಿಬಿಎಂಪಿ ಕಮಿಷನರ್‌ಗೆ ಗುಂಡೂರಾವ್ ಸೂಚನೆ

    ಮೈದಾನದ ಗೇಟ್ ಬಿದ್ದು ಮಗು ಸಾವು – ತನಿಖೆ ನಡೆಸುವಂತೆ ಬಿಬಿಎಂಪಿ ಕಮಿಷನರ್‌ಗೆ ಗುಂಡೂರಾವ್ ಸೂಚನೆ

    ಬೆಂಗಳೂರು: ಮಲ್ಲೇಶ್ವರಂ (Malleshwaram) ಬಿಬಿಎಂಪಿ ಮೈದಾನದ ಗೇಟ್ ಬಿದ್ದು ಮಗು ಸಾವನ್ನಪ್ಪಿರುವ ಘಟನೆಗೆ ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಮೇಲೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ (Dinesh Gundurao) ತಿಳಿಸಿದ್ದಾರೆ.

    ಮಲ್ಲೇಶ್ವರಂ ಬಿಬಿಎಂಪಿ ಆಟದ ಮೈದಾನದಲ್ಲಿ ಗೇಟ್ ಬಿದ್ದು 11 ವರ್ಷದ ಬಾಲಕ ನಿರಂಜನ್ ಸಾವಿಗೀಡಾಗಿದ್ದು, ಈ ಬಗ್ಗೆ ಅಗತ್ಯ ತನಿಖೆ ನಡೆಸಲು ಬಿಬಿಎಂಪಿ ಕಮಿಷನರ್‌ಗೆ ಸೂಚನೆ ನೀಡಿದರು.ಇದನ್ನೂ ಓದಿ: MUDA Scam | ಸಿಎಂಗೆ ಬಿಗ್‌ ಡೇ – ಪ್ರಾಸಿಕ್ಯೂಷನ್‌ ಭವಿಷ್ಯ ನಾಳೆ ನಿರ್ಧಾರ

    ಮೈದಾನಕ್ಕೆ 4 ವರ್ಷದ ಹಿಂದೆ ಗೇಟ್ ಅಳವಡಿಸಲಾಗಿದೆ. ಸಂಬಂಧಪಟ್ಟವರಿಂದ ವರದಿ ತರಿಸಿಕೊಳುತ್ತೇವೆ. ಕಳಪೆ ಮಾಡಿದ್ದಾರೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. ಈ ಕುರಿತು ಯಾರಿಂದಲೂ ದೂರು ಬಂದಿರಲಿಲ್ಲ. ಕಾರ್ಯಕರ್ತರ ಗಮನಕ್ಕೂ ಬಂದಿಲ್ಲ. ಯಾರಿಂದ ಲೋಪ ಆಗಿದೆ ಎಂಬ ಬಗ್ಗೆ ಪರಿಶೀಲಿಸುತ್ತೇವೆ. ಈ ಬಗ್ಗೆ ಬಿಬಿಎಂಪಿ ಕಮಿಷನರ್ ಅವರಿಗೆ ಸೂಚನೆ ನೀಡಲಾಗಿದೆ ಎಂದರು.

    ಇದೇ ವೇಳೆ ಸಚಿವ ದಿನೇಶ್ ಗುಂಡುರಾವ್ ಬಾಲಕನ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಸೂಚಿಸಿ, ದುರಂತಕ್ಕೆ ದುಃಖ ವ್ಯಕ್ತಪಡಿಸಿದರು. ಕುಟುಂಬಕ್ಕೆ ಬಿಬಿಎಂಪಿಯಿಂದ 5 ಲಕ್ಷ ರೂ. ಹಾಗೂ ಗಾಂಧಿ ನಗರ ಬ್ಲಾಕ್ ಕಾಂಗ್ರೆಸ್ (Congress) ವತಿಯಿಂದ 5 ಲಕ್ಷ ರೂ. ಪರಿಹಾರ ಘೋಷಿಸಿದರು. ಅಲ್ಲದೇ ಬಾಲಕನ ಸಹೋದರಿಯ ಸಂಪೂರ್ಣ ವಿದ್ಯಾಭ್ಯಾಸದ ಹೊಣೆಯನ್ನು ಆರ್.ಗುಂಡೂರಾವ್ ಫೌಂಡೇಶನ್ ವಹಿಸಿಕೊಳ್ಳಲಿದೆ ಎಂದು ತಿಳಿಸಿದರು.ಇದನ್ನೂ ಓದಿ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಬೆನ್ನಲ್ಲೇ ದರ್ಶನ್‌ಗೆ ಐಟಿ ಕಂಟಕ

  • ಬೆಂಗಳೂರಲ್ಲಿ ಮೈದಾನದ ಗೇಟ್ ಬಿದ್ದು ಬಾಲಕ ದುರ್ಮರಣ

    ಬೆಂಗಳೂರಲ್ಲಿ ಮೈದಾನದ ಗೇಟ್ ಬಿದ್ದು ಬಾಲಕ ದುರ್ಮರಣ

    ಬೆಂಗಳೂರು: ಮೈದಾನದ ಗೇಟ್ ಮುರಿದು ತಲೆಗೆ ಬಿದ್ದು ಬಾಲಕ ಸಾವಿಗೀಡಾಗಿರುವ ಘಟನೆ ಮಲ್ಲೇಶ್ವರಂ (Malleshwaram) ಬಿಬಿಎಂಪಿ (BBMP) ಗ್ರೌಂಡ್‌ನಲ್ಲಿ ನಡೆದಿದೆ.

    ನಿರಂಜನ್ (10) ಮೃತ ಬಾಲಕ. ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಆಟ ಆಡಲು ಬಾಲಕ ಮೈದಾನಕ್ಕೆ ಬಂದಿದ್ದ. ಈ ವೇಳೆ ಬಾಲಕ ಗೇಟ್ ಬಳಿಯೇ ನಿಂತಿದ್ದು, ಗೇಟ್ ತೆರೆಯುತ್ತಿದ್ದಂತೆ ಆತನ ತಲೆ ಮೇಲೆ ಮುರಿದು ಬಿದ್ದಿದೆ. ಪರಿಣಾಮವಾಗಿ ತಲೆಗೆ ತೀವ್ರ ಗಾಯವಾಗಿ ಬಾಲಕ ಮೃತಪಟ್ಟಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಮಲ್ಲೇಶ್ವರಂ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಹಣಕಾಸು ವಿಚಾರಕ್ಕೆ ವ್ಯಕ್ತಿಗೆ ಜೀವ ಬೆದರಿಕೆ – ಯುಪಿ ಸಂಸದನ ಪುತ್ರನ ವಿರುದ್ಧ ಎಫ್‍ಐಆರ್

    ಮಲ್ಲೇಶ್ವರಂ ಫೈಪ್‌ಲೈನ್‌ನಲ್ಲಿ ವಾಸವಾಗಿದ್ದ ಆಟೋ ಚಾಲಕ ವಿಜಯಕುಮಾರ್ ಮತ್ತು ಪ್ರಿಯಾ ದಂಪತಿಯ ಮೊದಲನೇ ಪುತ್ರ ನಿರಂಜನ್. ಮಲ್ಲೇಶ್ವರಂನ ಬಿಬಿಎಂಪಿ ಶಾಲೆಯಲ್ಲಿ ಬಾಲಕ 5ನೇ ತರಗತಿಯಲ್ಲಿ ಓದುತ್ತಿದ್ದ. ಇದನ್ನೂ ಓದಿ: ತುಂಗಭದ್ರಾ ಜಲಾಶಯಕ್ಕೆ ಸಿಎಂ, ಡಿಸಿಎಂ ಬಾಗಿನ ಅರ್ಪಣೆ

  • ರಸ್ತೆ ಗುಂಡಿ ಮುಚ್ಚಲು ಸೆ.15ರ ವರೆಗೆ ಗಡುವು, ದೂರು ಬಂದ್ರೆ ಅಧಿಕಾರಿಗಳೇ ನೇರ ಹೊಣೆ – ಡಿಕೆಶಿ ವಾರ್ನಿಂಗ್

    ರಸ್ತೆ ಗುಂಡಿ ಮುಚ್ಚಲು ಸೆ.15ರ ವರೆಗೆ ಗಡುವು, ದೂರು ಬಂದ್ರೆ ಅಧಿಕಾರಿಗಳೇ ನೇರ ಹೊಣೆ – ಡಿಕೆಶಿ ವಾರ್ನಿಂಗ್

    – ಎಷ್ಟು ಜನ ಅಧಿಕಾರಿಗಳು ಸಸ್ಪೆಂಡ್ ಆಗ್ತಾರೆ ಗೊತ್ತಿಲ್ಲ

    ಬೆಂಗಳೂರು: ಸೆಪ್ಟೆಂಬರ್‌ 15ರ ವರೆಗೆ ಬೆಂಗಳೂರು ನಗರದ ರಸ್ತೆಗಳಲ್ಲಿ ಎಲ್ಲಾ ಗುಂಡಿಗಳನ್ನು ಮುಚ್ಚಲೇಬೇಕು. ಮುಚ್ಚಿಲ್ಲ ಅಂದರೆ ಕ್ರಮ ತೆಗೆದುಕೊಳ್ಳುತ್ತೇನೆ. ಸಾರ್ವಜನಿಕರಿಂದ ಯಾವುದೇ ದೂರು ಬರಬಾರದು. ಬಂದರೆ ಅಧಿಕಾರಿಗಳೇ ನೇರ ಹೊಣೆ ಎಂದು ಬಿಬಿಎಂಪಿ (BBMP) ಅಧಿಕಾರಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ವಾರ್ನಿಂಗ್ ಮಾಡಿದ್ದಾರೆ. 

    ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೆಪ್ಟಂಬರ್ 15ರ ವರೆಗೆ ಗಡುವು ಕೊಟ್ಟಿದ್ದೇನೆ. ನಂತರ ನಾನೇ ಸಿಟಿ ರೌಂಡ್ ಹಾಕುತ್ತೇನೆ. ಬೇಗ ಗುಂಡಿ ಮುಚ್ಚಬೇಕು. ಏನಾದರೂ ಸಮಸ್ಯೆಯಾದರೆ ಎಷ್ಟು ಜನ ಅಧಿಕಾರಿಗಳು ಸಸ್ಪೆಂಡ್ ಆಗುತ್ತಾರೆ ಗೊತ್ತಿಲ್ಲ ಎಂದರು. ಇದನ್ನೂ ಓದಿ: ರಷ್ಯಾ-ಉಕ್ರೇನ್‌ ನಡುವೆ ಶಾಂತಿ ಮಾತುಕತೆಗೆ ಮೋದಿ ಪ್ರಯತ್ನ; ಮಾಸ್ಕೋಗೆ ಅಜಿತ್‌ ದೋವಲ್‌

    ನೀರು ನಿಲ್ಲುವ ಜಾಗಗಳ ಬಗ್ಗೆ ಗಮನ ಕೊಡಿ. ಅಕ್ಟೋಬರ್ 2ರಂದು ಗಾಂಧಿ ಜಯಂತಿ ಹಿನ್ನೆಲೆ ಎಲ್ಲಾ ಶಾಲೆಗಳಲ್ಲಿ ಸ್ವಚ್ಛತೆ ಕಾಪಾಡುತ್ತೇವೆ ಎಂದು ಪ್ರತಿಜ್ಞೆ ಮಾಡಬೇಕು ಎಂದು ಹೇಳಿದರು. ಇದನ್ನೂ ಓದಿ: ಸಿಎಂ ಸ್ಥಾನಕ್ಕೆ ಸೂಟ್ ಹೊಲಿಸಿಕೊಳ್ಳೋರ ಸಂಖ್ಯೆ ಹೆಚ್ಚಾಗಿದೆ – ಕಾಂಗ್ರೆಸ್‍ಗೆ ಬಿಜೆಪಿ ಟಾಂಗ್

    ಡಿಸಿಎಂ ಅಮೆರಿಕ (America) ಪ್ರವಾಸಕ್ಕೆ ತೆರಳುವ ಮುನ್ನ ಬಿಬಿಎಂಪಿ ಅಧಿಕಾರಿಗಳೊಂದಿಗೆ ಮಲ್ಲೇಶ್ವರಂ (Malleshwaram) ಬಿಬಿಎಂಪಿ ಐಪಿಪಿ ಕಚೇರಿಯಲ್ಲಿ ಸಭೆ ನಡೆಸಿದರು. ಬೆಂಗಳೂರಿನಲ್ಲಿ ಗುಂಡಿ ಮುಚ್ಚಲು ಗಡುವು ನೀಡಿದ ಹಿನ್ನೆಲೆಯಲ್ಲಿ, ಆಗಿರುವ ಪ್ರಗತಿ ಬಗ್ಗೆ ಮಾಹಿತಿ ಪಡೆದರು. ಹೆಚ್ಚಾಗಿರುವ ರಸ್ತೆ ಗುಂಡಿಗಳನ್ನು ಆದಷ್ಟು ಬೇಗ ಮುಚ್ಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹಾಗೂ ಬಿಬಿಎಂಪಿ ವಿಶೇಷ ಆಯುಕ್ತರು ಹಾಜರಿದ್ದರು. ಇದನ್ನೂ ಓದಿ: ಕೈಗಾರಿಕಾ ಸ್ಮಾರ್ಟ್ ಸಿಟಿಯಾಗಿ ಶಿವಮೊಗ್ಗ ಆಯ್ಕೆ ಮಾಡಲು ಹೆಚ್‌ಡಿಕೆಗೆ ಮನವಿ

  • ʻಪಬ್ಲಿಕ್ ಟಿವಿʼ ವಿದ್ಯಾಮಂದಿರ ಪಿಜಿ ಶೈಕ್ಷಣಿಕ ಮೇಳಕ್ಕೆ ಅದ್ಧೂರಿ ತೆರೆ

    ʻಪಬ್ಲಿಕ್ ಟಿವಿʼ ವಿದ್ಯಾಮಂದಿರ ಪಿಜಿ ಶೈಕ್ಷಣಿಕ ಮೇಳಕ್ಕೆ ಅದ್ಧೂರಿ ತೆರೆ

    – ಹಲವು ಕೋರ್ಸ್‌ಗಳ ಬಗ್ಗೆ ಮಾಹಿತಿ, ಗೊಂದಲಗಳಿಗೆ ಪರಿಹಾರ ಕಂಡುಕೊಂಡ ವಿದ್ಯಾರ್ಥಿಗಳು, ಪೋಷಕರು

    ಬೆಂಗಳೂರು: ʻಪಬ್ಲಿಕ್ ಟಿವಿʼ (Public TV) ಪ್ರಸ್ತುತ ಪಡಿಸುವ ವಿದ್ಯಾಮಂದಿರ ಪಿಜಿ ಶೈಕ್ಷಣಿಕ ಮೇಳಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಎರಡನೇ ದಿನವಾದ ಭಾನುವಾರವೂ ಸಾವಿರಾರು ಸಂಖ್ಯೆಯ ವಿದ್ಯಾರ್ಥಿಗಳು, ಪೋಷಕರು ಮೇಳಕ್ಕೆ ಭೇಟಿ ನೀಡಿ, ಡಿಗ್ರಿ ನಂತರ ಮುಂದೇನು? ಅನ್ನೋ ಗೊಂದಲಗಳಿಗೆ ಸೂಕ್ತ ಪರಿಹಾರ ಕಂಡುಕೊಂಡಿದ್ದಾರೆ.

    ʻಪಬ್ಲಿಕ್ ಟಿವಿʼ ಪ್ರಸ್ತುತಪಡಿಸುವ 3ನೇ ಆವೃತ್ತಿಯ, ವಿದ್ಯಾಮಂದಿರ ಮೆಗಾ ಪಿಜಿ ಶೈಕ್ಷಣಿಕ ಮೇಳಕ್ಕೆ (Vidhya Mandira PG Education Expo) ಭಾನುವಾರ ಅದ್ಧೂರಿ ತೆರೆ ಬಿದ್ದಿದೆ. ಮೊದಲ ದಿನದ ಭರ್ಜರಿ ರೆಸ್ಪಾನ್ಸ್‌ನೊಂದಿಗೆ ಆರಂಭವಾದ ಶೈಕ್ಷಣಿಕ ಮೇಳದಲ್ಲಿ 2ನೇ ದಿನವೂ ಸಾವಿರಾರು ವಿದ್ಯಾರ್ಥಿಗಳು (Bengaluru Students) ಭಾಗಿಯಾಗಿದ್ದರು. ಡಿಗ್ರಿ ಬಳಿಕ ಮುಂದೇನು..? ಯಾವ ಕೋರ್ಸ್ ಭವಿಷ್ಯವನ್ನ ರೂಪಿಸುತ್ತೆ? ಅನ್ನೋ ಹಲವು ಗೊಂದಲಗಳಿಗೆ ಪೋಷಕರು, ವಿದ್ಯಾರ್ಥಿಗಳು ಪರಿಹಾರ ಕಂಡುಕೊಂಡರು. ತಮಗಿಷ್ಟದ ಕೋರ್ಸ್‌ಗಳ ಬಗ್ಗೆ ತಿಳಿದುಕೊಂಡು, ಉದ್ಯೋಗಾವಕಾಶಗಳ ಬಗ್ಗೆಯೂ ಮಾಹಿತಿ ಪಡೆದರು. ಇದನ್ನೂ ಓದಿ: ಮೈಸೂರು ದಸರಾ 2024| ಗಜಪಡೆಗೆ ಇಂದಿನಿಂದ ಮರಳು ಮೂಟೆ ಹೊರಿಸುವ ತಾಲೀಮು

    ಮಲ್ಲೇಶ್ವರದ ಕೆ.ಸಿ ಜನರಲ್ ಆಸ್ಪತ್ರೆ ಮುಂಭಾಗದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಎರಡು ದಿನಗಳ ಕಾಲ ನಡೆದ ಮೂರನೇ ಆವೃತ್ತಿಯ ಪಿಜಿ ಶೈಕ್ಷಣಿಕ ಮೇಳದಲ್ಲಿ 42ಕ್ಕೂ ಹೆಚ್ಚು ಶೈಕ್ಷಣಿಕ ಸಂಸ್ಥೆಗಳು ಭಾಗಿಯಾಗಿದ್ದವು. 2ನೇ ದಿನದ ಶೈಕ್ಷಣಿಕ ಮೇಳವು ಬೆಳಗ್ಗೆ 9 ಗಂಟೆಗೆ ಆರಂಭವಾಗಿ ಸಂಜೆ 6 ಗಂಟೆ ವೇಳೆಗೆ ಮುಕ್ತಾಯಗೊಂಡಿತು. ಭಾನುವಾರ ರಜಾದಿನದ ಹಿನ್ನೆಲೆ ವಿದ್ಯಾರ್ಥಿಗಳು, ಪೋಷಕರು ಉತ್ಸಾಹದಿಂದಲೇ ಪಾಲ್ಗೊಂಡಿದ್ದರು. ತಮಗೆ ಯಾವ ಕಾಲೇಜು ಸೂಕ್ತ? ಕೋರ್ಸ್, ಪ್ರವೇಶ ಶುಲ್ಕ ಹೇಗೆ? ಕೋರ್ಸ್ ಬಳಿಕ ಉದ್ಯೋಗಕಾವಕಾಶ ಹೇಗೆ? ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಪಡೆದರು. ಪೋಷಕರು ಸಹ ತಮ್ಮ ಮಕ್ಕಳಿಗೆ ಯಾವ ಶಿಕ್ಷಣ ಸಂಸ್ಥೆಗಳು ಸೂಕ್ತ? ಅನ್ನೋ ಬಗ್ಗೆ ಮಾಹಿತಿ ಪಡೆದುಕೊಂಡರು. ಇದನ್ನೂ ಓದಿ: ಬೆಂಗಳೂರು: ಜಯದೇವ ಹೃದ್ರೋಗ ಆಸ್ಪತ್ರೆ ಇನ್ಮುಂದೆ 24 ಗಂಟೆ ಓಪನ್

    ಅದೃಷ್ಟಶಾಲಿಗಳಿಗೆ ಲಕ್ಕಿ ಡಿಪ್‌:
    ಇದೇ ವೇಳೆ ಶೈಕ್ಷಣಿಕ ಮೇಳದಲ್ಲಿ ಭಾಗಿಯಾದ 14 ಅದೃಷ್ಟಶಾಲಿಗಳಿಗೆ ಲಕ್ಕಿ ಡಿಪ್ ಮೂಲಕ ಆಯ್ಕೆ ಮಾಡಿ ಚಿನ್ನದ ನಾಣ್ಯವಿರುವ ಗಿಫ್ಟ್‌ ಓಚರ್‌ಗಳನ್ನ ನೀಡಲಾಯಿತು. ಇ‌ನ್ನೂ ಮೇಳದಲ್ಲಿ ಭಾಗಿಯಾದ ಪೋಷಕರು ಕೂಡ ಮೇಳದ ಬಗ್ಗೆ ಸಂತಸ ಹಂಚಿಕೊಂಡರು. ಸಾಮಾನ್ಯವಾಗಿ ಡಿಗ್ರಿ ಬಳಿಕ ಸ್ನಾತಕೋತ್ತರ ಪದವಿಗಳಿಗೆ ಮಕ್ಕಳನ್ನ ಸೇರಿಸಲು ಹತ್ತಾರು ಕಾಲೇಜಗಳನ್ನ ಪೋಷಕರು ಸುತ್ತಬೇಕಾದ ಪರಿಸ್ಥಿತಿ ಇರ್ತಾ ಇತ್ತು. ಆದ್ರೆ ʻಪಬ್ಲಿಕ್ ಟಿವಿʼ ಈ ಕಷ್ಟವನ್ನ ತಪ್ಪಿಸಿ ಒಂದೇ ವೇದಿಕೆ ಅಡಿ ನೂರಾರು ಆಯ್ಕೆಗಳನ್ನ ನೀಡಿದೆ. ನಿಜಕ್ಕೂ ಇದು ಅದ್ಭುತ ಕಾರ್ಯಕ್ರಮ ಅಂತ ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಗೌರಿ ಹಬ್ಬದಂದು ಮುಖ್ಯಮಂತ್ರಿಗಳಿಂದ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿ ಉದ್ಘಾಟನೆ – ಡಿಕೆಶಿ

    ಇನ್ನೂ ಎರಡು ದಿನಗಳ ಮೇಳದಲ್ಲಿ ಸುಮಾರು 2 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದ ಅನುಕೂಲವನ್ನ‌ ಪಡೆದುಕೊಂಡ್ರು. ಮೇಳದಲ್ಲಿ ಭಾಗಿಯಾದ ವಿದ್ಯಾಸಂಸ್ಥೆಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಇನ್ನೂ ಕಾರ್ಯಕ್ರಮದ ಆಯೋಜನೆ, ಜನರ ಪ್ರತಿಕ್ರಿಯೆಗೆ ಮೇಳದಲ್ಲಿ ಭಾಗಿಯಾದ ವಿದ್ಯಾಸಂಸ್ಥೆಗಳು ಕೂಡ ಹರ್ಷ ವ್ಯಕ್ತಪಡಿಸಿ, ಈ ರೀತಿಯ ಕಾರ್ಯಕ್ರಮ ಪೋಷಕರ ಒತ್ತಡ, ವಿದ್ಯಾರ್ಥಿಗಳ ಭವಿಷ್ಯಕ್ಕೆ ಅನೂಕೂಲ ಆಗಲಿದೆ. ಕಾರ್ಯಕ್ರಮ ಆಯೋಜನೆ ಮಾಡಿದ ʻಪಬ್ಲಿಕ್ ಟಿವಿʼಗೆ ಧನ್ಯವಾದ ಅರ್ಪಿಸಿದರು.

    ಒಟ್ಟಾರೆ ಎರಡು ದಿನದ ಕಾರ್ಯಕ್ರಮಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಈ ಕಾರ್ಯಕ್ರಮದ ಮೂಲಕ ಸಾವಿರಾರು ಪೋಷಕರು,‌ ವಿದ್ಯಾರ್ಥಿಗಳ‌ ಭವಿಷ್ಯದ ಕನಸಿನ ಗಿಡಕ್ಕೆ ನೀರೆರೆಯುವ ಪ್ರಯತ್ನ ಮಾಡಿದೆ.

  • ಪಬ್ಲಿಕ್ ಟಿವಿಯ ʻವಿದ್ಯಾಮಂದಿರʼ ಪಿಜಿ ಶೈಕ್ಷಣಿಕ ಮೇಳ – ಇಂದು ಕೊನೇ ದಿನ, ಬನ್ನಿ ಸದುಪಯೋಗಪಡಿಸಿಕೊಳ್ಳಿ..

    ಪಬ್ಲಿಕ್ ಟಿವಿಯ ʻವಿದ್ಯಾಮಂದಿರʼ ಪಿಜಿ ಶೈಕ್ಷಣಿಕ ಮೇಳ – ಇಂದು ಕೊನೇ ದಿನ, ಬನ್ನಿ ಸದುಪಯೋಗಪಡಿಸಿಕೊಳ್ಳಿ..

    ಬೆಂಗಳೂರು: AD6 ಅಡ್ವರ್ಟೈಸಿಂಗ್‌ ಸಹಯೋಗದಲ್ಲಿ ‘ಪಬ್ಲಿಕ್‌ ಟಿವಿ’ (PUBLiC TV) ಪ್ರಸ್ತುತ ಪಡಿಸುತ್ತಿರುವ `ವಿದ್ಯಾಮಂದಿರ’ ಶೈಕ್ಷಣಿಕ ಮೇಳ (Vidhya Mandira Education Expo) 3ನೇ ಆವೃತ್ತಿಯು ಇಂದು (ಸೆ.1) ಮುಕ್ತಾಯಗೊಳ್ಳಲಿದೆ. ಆದ್ದರಿಂದ ಡಿಗ್ರಿ ಬಳಿಕ ಮುಂದೇನು ಎಂಬ ಗೊಂದಲದಲ್ಲಿರುವ ವಿದ್ಯಾರ್ಥಿಗಳು ಹಾಗೂ ಪೋಷಕರು ಸೂಕ್ತ ಪರಿಹಾರ ಕಂಡುಕೊಳ್ಳಲು ಇದು ಸೂಕ್ತ ಶೈಕ್ಷಣಿಕ ಮೇಳವಾಗಿದೆ.

    ವಿದ್ಯಾಮಂದಿರ ಪಿಜಿ ಶೈಕ್ಷಣಿಕ ಮೇಳಕ್ಕೆ ಮೊದಲ ದಿನ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ರಾಜ್ಯದ ವಿವಿಧೆಡೆಯಿಂದ ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು, ಪೋಷಕರು ಪದವಿ ನಂತರ ಮುಂದೇನು ಎನ್ನುವ ಗೊಂದಲಗಳಿಗೆ ಸೂಕ್ತ ಪರಿಹಾರ ಕಂಡುಕೊಂಡಿದ್ದಾರೆ. ಇಂದು ಕೊನೆಯ ದಿನವಾಗಿದ್ದು, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

    ಮಲ್ಲೇಶ್ವರಂನ ಕೆ.ಸಿ.ಜನರಲ್‌ ಆಸ್ಪತ್ರೆ ಬಳಿಯ ಸರ್ಕಾರಿ ಪ್ರಾಥಮಿಕ ಶಾಲೆ ಮೈದಾನದಲ್ಲಿ ವಿದ್ಯಾಮಂದಿರ ಶೈಕ್ಷಣಿಕ ಮೇಳ ನಡೆಯುತ್ತಿದೆ. ಭಾನುವಾರವಾದ ಇಂದು ಸಹ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಜುಕೇಷನ್‌ ಎಕ್ಸ್‌ಪೋ ನಡೆಯಲಿದ್ದು, ಉಚಿತ ಪ್ರವೇಶ ಇರಲಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಡಿಗ್ರಿ ಕೋರ್ಸ್ ಬಳಿಕ ಮುಂದೇನು ಎಂಬ ವಿದ್ಯಾರ್ಥಿಗಳು ಮತ್ತು ಪೋಷಕರ ಗೊಂದಲಗಳಿಗೆ ʻಪಬ್ಲಿಕ್ ಟಿವಿʼ ವಿದ್ಯಾಮಂದಿರ ಎಜುಕೇಶನ್ ಎಕ್ಸ್‌ಪೋದಲ್ಲಿ ಪರಿಹಾರ ಕಂಡುಕೊಳ್ಳಬಹುದಾಗಿದೆ.

    42ಕ್ಕೂ ಹೆಚ್ಚು ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಭಾಗಿ:
    ವಿದ್ಯಾ ಮಂದಿರದಲ್ಲಿ ರಾಜ್ಯದ ನಾನಾ ಭಾಗಗಳ 42ಕ್ಕೂ ಹೆಚ್ಚು ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಪಾಲ್ಗೊಳ್ಳಲಿವೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸ್ನಾತಕೋತ್ತರ ಪದವಿ, ವೃತ್ತಿಪರ ಮತ್ತು ಔದ್ಯೋಗಿಕ ಕೋರ್ಸ್‌ಗಳ ಬಗ್ಗೆ ಒಂದೇ ಸ್ಥಳದಲ್ಲಿ ಸಮಗ್ರ ಮಾಹಿತಿ ಸಿಗಲಿದೆ. ಸಂವಾದದ ಮೂಲಕ ಪ್ರಮುಖ ಶಿಕ್ಷಣ ಸಂಸ್ಥೆಗಳ ದಾಖಲಾತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಈ ಮೇಳದಲ್ಲಿ ಅವಕಾಶ ಇದೆ.

    ಲಕ್ಕಿ ಡಿಪ್‌ ಉಡುಗೊರೆ ಪಡೆಯಿರಿ
    ಶೈಕ್ಷಣಿಕ ಮೇಳದಲ್ಲಿ ಸೆಮಿನಾರ್‌ ಸೇರಿದಂತೆ ಹಲವು ಕಾರ್ಯಕ್ರಮಗಳು ಇರಲಿವೆ. ಲಕ್ಕಿ ಡಿಪ್‌ ಮೂಲಕ ಪ್ರತಿ ಒಂದು ಗಂಟೆಗೊಮ್ಮೆ ವಿಜೇತರಿಗೆ ಆಕರ್ಷಕ ಬಹುಮಾನ ನೀಡಲಾಗುವುದು.

    ಪ್ಲಾಟಿನಂ ಪ್ರಾಯೋಜಕರು:
    ರಾಮಯ್ಯ ಯೂನಿವರ್ಸಿಟಿ ಆಫ್ ಅಪ್ಲೈಡ್ ಸೈನ್ಸಸ್, ಕೇಂಬ್ರಿಡ್ಜ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ನಾಗಾರ್ಜುನ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ರೇವಾ ವಿಶ್ವವಿದ್ಯಾಲಯ.

    ಗೋಲ್ಡ್‌ ಪ್ರಾಯೋಜಕರು:
    ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಇನ್‌ಸ್ಟಿಟೂಷನ್ಸ್‌, CMR ವಿಶ್ವವಿದ್ಯಾಲಯ, BGS ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ಚಾಣಕ್ಯ ವಿಶ್ವವಿದ್ಯಾಲಯ, ಪಾರುಲ್ ವಿಶ್ವವಿದ್ಯಾಲಯ, ಸಪ್ತಗಿರಿ NPS ವಿಶ್ವವಿದ್ಯಾಲಯ.

    ಸಿಲ್ವರ್‌ ಪ್ರಾಯೋಜಕರು:
    AIMS ಇನ್‌ಸ್ಟಿಟ್ಯೂಟ್ಸ್‌, ಆಕ್ಸ್‌ಫರ್ಡ್ ಶಿಕ್ಷಣ ಸಂಸ್ಥೆಗಳು, ಈಸ್ಟ್ ವೆಸ್ಟ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಗೋಪಾಲನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಪಿಇಎಸ್ ವಿಶ್ವವಿದ್ಯಾಲಯ, AMITY ಯೂನಿವರ್ಸಿಟಿ, ಬೆಂಗಳೂರು, ರಾಜರಾಜೇಶ್ವರಿ ಕಾಲೇಜ್ ಆಫ್ ಇಂಜಿನಿಯರಿಂಗ್, ಡಾನ್ ಬೋಸ್ಕೋ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸಂಪೂರ್ಣ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಪ್ರೆಸಿಡೆನ್ಸಿ ಯೂನಿವರ್ಸಿಟಿ.

    ಸ್ಪೆಷಲ್‌ ಪೆವಿಲಿಯನ್‌
    ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್.

    ಸ್ಟಾಲ್‌ ಪಾಲುದಾರರು:
    ಆಚಾರ್ಯ ಬೆಂಗಳೂರು ಬಿ ಶಾಲೆ – ಸ್ವಾಯತ್ತ, BMS ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್‌ಮೆಂಟ್, ಶೇಷಾದ್ರಿಪುರಂ ಶಿಕ್ಷಣ ಟ್ರಸ್ಟ್, ಸಿಟಿ ಕಾಲೇಜು, ಏಟ್ರಿಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಎಂಜಿನಿಯರಿಂಗ್‌ ಕಾಲೇಜು, ಆಕಾಶ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಶ್ರೀದೇವಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ – ತುಮಕೂರು, ಪ್ರೆಸಿಡೆನ್ಸಿ ಕಾಲೇಜು, ಇಂಡಿಯನ್ ಅಕಾಡೆಮಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಆರ್ ವಿ ವಿಶ್ವವಿದ್ಯಾಲಯ, www.bangalorestudy.com, ಸೌಂದರ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ಸೈನ್ಸ್, ಎಸ್ – ವ್ಯಾಸ, ಡೀಮ್ಡ್ ವಿಶ್ವವಿದ್ಯಾಲಯ – ಬೆಂಗಳೂರು, ಧನ್ವಂತರಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಹರ್ಷ ಇನ್ಸ್ಟಿಟ್ಯೂಷನ್ಸ್, ಸುರಾನಾ ಶಿಕ್ಷಣ ಸಂಸ್ಥೆಗಳು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ವಿದ್ಯಾವರ್ಧಕ ಕಾಲೇಜ್ ಆಫ್ ಇಂಜಿನಿಯರಿಂಗ್ (ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್).

    ಕ್ರಿಯೆಟಿವ್‌ ಸ್ಪಾನರ್ಸ್‌:
    RR ಸಂಸ್ಥೆಗಳು

    ಇವೆಂಟ್‌ ಪಾರ್ಟ್‌ನರ್‌ :
    AD 6 ಜಾಹೀರಾತು

    ಗಿಫ್ಟ್‌ ಸ್ಪಾನ್ಸರ್ಸ್‌:
    ಜೀನಿ ಮಿಲೆಟ್‌ ಮಿಕ್ಸ್

    (ಕೊನೇ ದಿನ) ದಿನಾಂಕ: ಸೆಪ್ಟೆಂಬರ್‌ 1
    ಸ್ಥಳ: ಸರ್ಕಾರಿ ಶಾಲಾ ಮೈದಾನ, ಕೆಸಿ ಜನರಲ್‌ ಆಸ್ಪತ್ರೆ ಎದುರು, ಮಲ್ಲೇಶ್ವರಂ ಬೆಂಗಳೂರು
    ಸಮಯ: ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ

  • ಪಬ್ಲಿಕ್‌ ಟಿವಿ ವಿದ್ಯಾಮಂದಿರ ಶೈಕ್ಷಣಿಕ ಮೇಳಕ್ಕೆ ಇಂದು ಚಾಲನೆ

    ಪಬ್ಲಿಕ್‌ ಟಿವಿ ವಿದ್ಯಾಮಂದಿರ ಶೈಕ್ಷಣಿಕ ಮೇಳಕ್ಕೆ ಇಂದು ಚಾಲನೆ

    – ಎಜುಕೇಶನ್‌ ಎಕ್ಸ್‌ಪೋದಲ್ಲಿ ಪಿಜಿ ಕಾಲೇಜು, ಕೋರ್ಸ್‌ಗಳ ಬಗ್ಗೆ ಮಾಹಿತಿ
    – ಪಬ್ಲಿಕ್‌ ಟಿವಿ ಮುಖ್ಯಸ್ಥರಾದ ಹೆಚ್‌.ಆರ್‌.ರಂಗನಾಥ್‌ರಿಂದ ಕಾರ್ಯಕ್ರಮಕ್ಕೆ ಚಾಲನೆ
    – ರೇವಾ ವಿವಿ ಕುಲಪತಿ ಶ್ಯಾಮರಾಜು, ಮಾಜಿ ಡಿಸಿಎಂ ಅಶ್ವಥ್‌ ನಾರಾಯಣ್‌ ಮುಖ್ಯ ಅತಿಥಿಗಳಾಗಿ ಭಾಗಿ

    ಬೆಂಗಳೂರು: ‘ಪಬ್ಲಿಕ್‌ ಟಿವಿ’ (PUBLiC TV) ಪ್ರಸ್ತುತ ಪಡಿಸುತ್ತಿರುವ AD6 ಅಡ್ವರ್ಟೈಸಿಂಗ್‌ ಸಹಯೋಗದಲ್ಲಿ ವಿದ್ಯಾಮಂದಿರ ಎಜುಕೇಷನ್‌ ಎಕ್ಸ್‌ಪೋ (Vidhya Mandira Education Expo) 3ನೇ ಆವೃತ್ತಿಗೆ ಇಂದು (ಶನಿವಾರ) ಚಾಲನೆ ದೊರೆಯಲಿದೆ.

    ಮಲ್ಲೇಶ್ವರಂನ ಕೆ.ಸಿ.ಜನರಲ್‌ ಆಸ್ಪತ್ರೆ ಬಳಿಯ ಸರ್ಕಾರಿ ಪ್ರಾಥಮಿಕ ಶಾಲೆ ಮೈದಾನದಲ್ಲಿ ವಿದ್ಯಾಮಂದಿರ ಶೈಕ್ಷಣಿಕ ಮೇಳ ನಡೆಯಲಿದ್ದು, ಇಂದು ಬೆಳಗ್ಗೆ 10:30 ಕ್ಕೆ ಕಾರ್ಯಕ್ರಮಕ್ಕೆ ಪಬ್ಲಿಕ್‌ ಟಿವಿ ಮುಖ್ಯಸ್ಥರಾದ ಹೆಚ್‌.ಆರ್‌.ರಂಗನಾಥ್‌ (H.R.Ranganath) ಅವರು ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ರೇವಾ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಪಿ.ಶ್ಯಾಮರಾಜು ಹಾಗೂ ಮಾಜಿ ಡಿಸಿಎಂ ಮತ್ತು ಮಲ್ಲೇಶ್ವರಂ ಕ್ಷೇತ್ರದ ಶಾಸಕರಾದ ಡಾ. ಸಿ.ಎನ್.ಅಶ್ವಥ್‌ ನಾರಾಯಣ್‌ (C.N.Ashwath Narayan) ಭಾಗವಹಿಸಲಿದ್ದಾರೆ. ಇದನ್ನೂ ಓದಿ: ಪಬ್ಲಿಕ್‌ ಟಿವಿ ವಿದ್ಯಾಮಂದಿರಕ್ಕೆ ನಾಳೆ ಚಾಲನೆ – ಪಿಜಿ ಕಾಲೇಜ್‌, ಕೋರ್ಸ್‌ ವಿವರ ತಿಳಿದುಕೊಳ್ಳಿ

    ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೂ ಎಜುಕೇಷನ್‌ ಎಕ್ಸ್‌ಪೋ ನಡೆಯಲಿದ್ದು, ಉಚಿತ ಪ್ರವೇಶ ಇರಲಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾಹಿತಿ ಪಡೆದುಕೊಳ್ಳಬಹುದು.

    ಡಿಗ್ರಿ ಕೋರ್ಸ್ ಬಳಿಕ ಮುಂದೇನು ಎಂಬ ವಿದ್ಯಾರ್ಥಿಗಳು ಮತ್ತು ಪೋಷಕರ ಗೊಂದಲಗಳಿಗೆ ಪಬ್ಲಿಕ್ ಟಿವಿ ವಿದ್ಯಾಮಂದಿರ ಎಜುಕೇಶನ್ ಎಕ್ಸ್‌ಪೋ ಪರಿಹಾರ ನೀಡಲಿದೆ. ಇದನ್ನೂ ಓದಿ: ಡಿಗ್ರಿ ಬಳಿಕ ಮುಂದೇನು? – ಪಬ್ಲಿಕ್ ಟಿವಿ ವಿದ್ಯಾಮಂದಿರಕ್ಕೆ ಬನ್ನಿ

    ವಿದ್ಯಾ ಮಂದಿರದಲ್ಲಿ ರಾಜ್ಯದ ನಾನಾ ಭಾಗಗಳ 42ಕ್ಕೂ ಹೆಚ್ಚು ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಪಾಲ್ಗೊಳ್ಳಲಿವೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸ್ನಾತಕೋತ್ತರ ಪದವಿ, ವೃತ್ತಿಪರ ಮತ್ತು ಔದ್ಯೋಗಿಕ ಕೋರ್ಸ್‌ಗಳ ಬಗ್ಗೆ ಒಂದೇ ಸ್ಥಳದಲ್ಲಿ ಸಮಗ್ರ ಮಾಹಿತಿ ಸಿಗಲಿದೆ. ಸಂವಾದದ ಮೂಲಕ ಪ್ರಮುಖ ಶಿಕ್ಷಣ ಸಂಸ್ಥೆಗಳ ದಾಖಲಾತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಈ ಮೇಳದಲ್ಲಿ ಅವಕಾಶ ಇದೆ.

    ಉಡುಗೊರೆ ಪಡೆಯಿರಿ
    ಶೈಕ್ಷಣಿಕ ಮೇಳದಲ್ಲಿ ಸೆಮಿನಾರ್‌ ಸೇರಿದಂತೆ ಹಲವು ಕಾರ್ಯಕ್ರಮಗಳು ಇರಲಿವೆ. ಲಕ್ಕಿ ಡ್ರಾ ಮೂಲಕ ಪ್ರತಿ ಒಂದು ಗಂಟೆಗೊಮ್ಮೆ ವಿಜೇತರಿಗೆ ಆಕರ್ಷಕ ಬಹುಮಾನ ನೀಡಲಾಗುವುದು.

    ಪ್ಲಾಟಿನಂ ಪ್ರಾಯೋಜಕರು:
    ರಾಮಯ್ಯ ಯೂನಿವರ್ಸಿಟಿ ಆಫ್ ಅಪ್ಲೈಡ್ ಸೈನ್ಸಸ್, ಕೇಂಬ್ರಿಡ್ಜ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ನಾಗಾರ್ಜುನ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ರೇವಾ ವಿಶ್ವವಿದ್ಯಾಲಯ.

    ಗೋಲ್ಡ್‌ ಪ್ರಾಯೋಜಕರು
    ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಇನ್‌ಸ್ಟಿಟೂಷನ್ಸ್‌, CMR ವಿಶ್ವವಿದ್ಯಾಲಯ, BGS ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ಚಾಣಕ್ಯ ವಿಶ್ವವಿದ್ಯಾಲಯ, ಪಾರುಲ್ ವಿಶ್ವವಿದ್ಯಾಲಯ, ಸಪ್ತಗಿರಿ NPS ವಿಶ್ವವಿದ್ಯಾಲಯ.

    ಸಿಲ್ವರ್‌ ಪ್ರಾಯೋಜಕರು:
    AIMS ಇನ್‌ಸ್ಟಿಟ್ಯೂಟ್ಸ್‌, ಆಕ್ಸ್‌ಫರ್ಡ್ ಶಿಕ್ಷಣ ಸಂಸ್ಥೆಗಳು,
    ಈಸ್ಟ್ ವೆಸ್ಟ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಗೋಪಾಲನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಪಿಇಎಸ್ ವಿಶ್ವವಿದ್ಯಾಲಯ, AMITY ಯೂನಿವರ್ಸಿಟಿ, ಬೆಂಗಳೂರು, ರಾಜರಾಜೇಶ್ವರಿ ಕಾಲೇಜ್ ಆಫ್ ಇಂಜಿನಿಯರಿಂಗ್, ಡಾನ್ ಬೋಸ್ಕೋ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸಂಪೂರ್ಣ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಪ್ರೆಸಿಡೆನ್ಸಿ ಯೂನಿವರ್ಸಿಟಿ,

    ಸ್ಪೆಷಲ್‌ ಪೆವಿಲಿಯನ್‌
    ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್.

    ಸ್ಟಾಲ್‌ ಪಾರ್ಟ್‌ನರ್‌:
    ಆಚಾರ್ಯ ಬೆಂಗಳೂರು ಬಿ ಶಾಲೆ – ಸ್ವಾಯತ್ತ, BMS ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್‌ಮೆಂಟ್, ಶೇಷಾದ್ರಿಪುರಂ ಶಿಕ್ಷಣ ಟ್ರಸ್ಟ್, ಸಿಟಿ ಕಾಲೇಜು, ಏಟ್ರಿಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಎಂಜಿನಿಯರಿಂಗ್‌ ಕಾಲೇಜು, ಆಕಾಶ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಶ್ರೀದೇವಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ – ತುಮಕೂರು, ಪ್ರೆಸಿಡೆನ್ಸಿ ಕಾಲೇಜು, ಇಂಡಿಯನ್ ಅಕಾಡೆಮಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಆರ್ ವಿ ವಿಶ್ವವಿದ್ಯಾಲಯ, www.bangalorestudy.com, ಸೌಂದರ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ಸೈನ್ಸ್, ಎಸ್ – ವ್ಯಾಸ, ಡೀಮ್ಡ್ ವಿಶ್ವವಿದ್ಯಾಲಯ – ಬೆಂಗಳೂರು, ಧನ್ವಂತರಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಹರ್ಷ ಇನ್ಸ್ಟಿಟ್ಯೂಷನ್ಸ್, ಸುರಾನಾ ಶಿಕ್ಷಣ ಸಂಸ್ಥೆಗಳು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ವಿದ್ಯಾವರ್ಧಕ ಕಾಲೇಜ್ ಆಫ್ ಇಂಜಿನಿಯರಿಂಗ್ (ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್).

    ಕ್ರಿಯೆಟಿವ್‌ ಸ್ಪಾನರ್ಸ್‌:
    RR ಸಂಸ್ಥೆಗಳು

    ಇವೆಂಟ್‌ ಪಾರ್ಟ್‌ನರ್‌ :
    AD 6 ಜಾಹೀರಾತು

    ಗಿಫ್ಟ್‌ ಸ್ಪಾನ್ಸರ್ಸ್‌:
    ಜೀನಿ ಮಿಲೆಟ್‌ ಮಿಕ್ಸ್

    ದಿನಾಂಕ: ಆಗಸ್ಟ್‌ 31, ಸೆಪ್ಟೆಂಬರ್‌ 1
    ಸ್ಥಳ: ಸರ್ಕಾರಿ ಶಾಲಾ ಮೈದಾನ, ಕೆಸಿ ಜನರಲ್‌ ಆಸ್ಪತ್ರೆ ಎದುರು, ಮಲ್ಲೇಶ್ವರಂ ಬೆಂಗಳೂರು
    ಸಮಯ: ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ

  • ಮಲ್ಲೇಶ್ವರಂ ಹೊಯ್ಸಳ ಪೊಲೀಸರಿಂದ ಹಫ್ತಾ ವಸೂಲಿ – ವೀಡಿಯೋ ವೈರಲ್

    ಮಲ್ಲೇಶ್ವರಂ ಹೊಯ್ಸಳ ಪೊಲೀಸರಿಂದ ಹಫ್ತಾ ವಸೂಲಿ – ವೀಡಿಯೋ ವೈರಲ್

    ಬೆಂಗಳೂರು: ಮಲ್ಲೇಶ್ವರಂ (Malleshwaram) ಹೊಯ್ಸಳ ಪೊಲೀಸರಿಂದ(Hoysala Police) ರಾಜಾರೋಷವಾಗಿ ಹಫ್ತಾ ವಸೂಲಿ ಮಾಡಿದ್ದು ಇದೀಗ ಸಾಕ್ಷಿ ಸಮೇತ ದಕ್ಷ ಪೊಲೀಸರ ಬಣ್ಣ ಬಯಲಾಗಿದೆ.

    ಪಾನಿಪುರಿ, ಹೋಟೆಲ್, ಬಾರ್, ಬಟ್ಟೆ ಅಂಗಡಿ, ಚಪ್ಪಲಿ ಅಂಗಡಿ ಸೇರಿದಂತೆ ರಸ್ತೆಪಕ್ಕದ ಅಂಗಡಿಗಳಲ್ಲಿ ಪ್ರತಿ ದಿನ ಇಂಚ ವಸೂಲಿ ನಡೆಯುತ್ತಿರು ಫೋಟೋ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.  ಇದನ್ನೂ ಓದಿ: ಬೆಂಗಳೂರಿಗರೇ ಗಮನಿಸಿ – ಇಂದು ನಗರದಲ್ಲಿ ಟ್ರಾಫಿಕ್‌ ಸಮಸ್ಯೆಯಾಗುವ ಸಾಧ್ಯತೆ

    ಎಕ್ಸ್ಕ್ಲೂಸಿವ್ ಮಗಾ ಎನ್ನುವ ಎಕ್ಸ್ ಖಾತೆಯಲ್ಲಿ ವಿಡಿಯೋ ಸಮೇತವಾಗಿ ನಗರ ಕಮಿಷನರ್‌ಗೆ ಟ್ವೀಟ್ ಮಾಡಲಾಗಿದೆ. ರಸ್ತೆಪಕ್ಕದ ಅಂಗಡಿಗಳಲ್ಲಿ ಪ್ರತಿ ದಿನ ಹಣ ವಸೂಲಿ. ಹಲವು ಕಡೆ ನಿಂತಿರುವ ಬೆಂಗಳೂರಿನ ದಕ್ಷ ಪೊಲೀಸರು ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಲಾಗಿದೆ. ಇದನ್ನೂ ಓದಿ: Bengaluru | ನಟ ದರ್ಶನ್‌ಗೆ ಜೈಲಲ್ಲಿ ರೌಡಿಗಳ ನಂಟು – ದರ್ಶನ್‌ ಮೇಲೆ‌ ಮತ್ತೆರಡು ಎಫ್‌ಐಆರ್‌!

    KA02G4721 ಹೊಯ್ಸಳ ವಾಹನ ಪೋಟೋ ವಿಡಿಯೋ ಸಮೇತ ಟ್ವೀಟ್ ಮಾಡಿದ್ದು ಪೊಲೀಸರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ನೆಟ್ಟಿಗರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮೋದಿ ಉದ್ಘಾಟಿಸಿದ್ದ ಶಿವಾಜಿ ಮಹರಾಜ್‌ ಪ್ರತಿಮೆ 1 ವರ್ಷ ಪೂರ್ಣಗೊಳ್ಳುವ ಮುನ್ನವೇ ಕುಸಿತ!

  • ಸ್ಕೂಟರ್‌ಗೆ ಬಿಎಂಟಿಸಿ ಬಸ್ ಡಿಕ್ಕಿ – ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

    ಸ್ಕೂಟರ್‌ಗೆ ಬಿಎಂಟಿಸಿ ಬಸ್ ಡಿಕ್ಕಿ – ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

    ಬೆಂಗಳೂರು: ಸ್ಕೂಟರ್‌ಗೆ ಬಿಎಂಟಿಸಿ (BMTC) ಬಸ್ ಡಿಕ್ಕಿಯಾಗಿ (Accident) ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಸಾವಿಗೀಡಾದ ಘಟನೆ ಮಲ್ಲೇಶ್ವರಂನ (Malleshwaram) ಹರಿಶ್ಚಂದ್ರ ಘಾಟ್ ಬಳಿ ನಡೆದಿದೆ.

    ಡಿಗ್ರಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕುಸುಮಿತ (22) ಸ್ಕೂಟರ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿದೆ. ಕೂಡಲೇ ಆಕೆಯನ್ನು ಸ್ಥಳೀಯ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ, ಚಿಕಿತ್ಸೆ ಫಲಕಾರಿಯಾಗದೇ ಆಕೆ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: 850 ಅಡಿಕೆ ಮರ ಕಡಿದ ಕೇಸ್‌ಗೆ ಟ್ವಿಸ್ಟ್ – ಮಗಳನ್ನ ಮದುವೆ ಮಾಡಿಕೊಡ್ತೀವಿ ಅಂತಾ 25 ಲಕ್ಷ ಪೀಕಿತ್ತು ಕುಟುಂಬ

    ಘಟನೆಯಲ್ಲಿ ಯಾರ ನಿರ್ಲಕ್ಷ್ಯ ನಡೆದಿದೆ ಎಂಬ ಬಗ್ಗೆ ಪೊಲೀಸರಿಂದ ತನಿಖೆ ನಡೆಸುತ್ತಿದ್ದಾರೆ. ಇನ್ನೂ ಘಟನೆಗೆ ವೇಗವಾಗಿ ಬಸ್ ಚಲಾಯಿಸಿದ್ದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಮಲ್ಲೇಶ್ವರಂ ಟ್ರಾಫಿಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: 10ನೇ ತರಗತಿ ಬಾಲಕಿಯನ್ನು ಅಪಹರಿಸಿ ಗ್ಯಾಂಗ್‍ರೇಪ್ – ಸೇತುವೆ ಮೇಲಿಂದ ಎಸೆದ ದುರುಳರು

  • ಮಾರತಹಳ್ಳಿ, ಮಲ್ಲೇಶ್ವರಂನಲ್ಲಿ ಅಗ್ನಿ ದುರಂತ – ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು ಬೆಂಕಿಗಾಹುತಿ

    ಮಾರತಹಳ್ಳಿ, ಮಲ್ಲೇಶ್ವರಂನಲ್ಲಿ ಅಗ್ನಿ ದುರಂತ – ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು ಬೆಂಕಿಗಾಹುತಿ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಅಗ್ನಿ ದುರಂತ ಸಂಭವಿಸಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.

    ಬೆಂಗಳೂರಿನ ಮಲ್ಲೇಶ್ವರಂ (Malleshwaram) ಹಾಗೂ ಮಾರತಹಳ್ಳಿ ಮುಖ್ಯರಸ್ತೆಯಲ್ಲಿ ತಡರಾತ್ರಿ ಅಗ್ನಿ ದುರಂತ ಸಂಭವಿಸಿದೆ. ಇದನ್ನೂ ಓದಿ: ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಸಂಸದರ ಅಮಾನತು – ಯಾವ್ಯಾವ ಅವಧಿಯಲ್ಲಿ ಎಷ್ಟು ಮಂದಿ ಸಸ್ಪೆಂಡ್‌?

    ಮಾರತಹಳ್ಳಿಯ ಮುಖ್ಯರಸ್ತೆಯಲ್ಲಿರುವ ಕಟ್ಟಡವೊಂದರಲ್ಲಿ ತಡರಾತ್ರಿ ಟ್ರಾನ್ಸ್‌ಫಾರ್ಮರ್‌ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಗ್ನಿ ಅವಘಡ (Fire Disaster) ಸಂಭವಿಸಿದೆ. ಈ ವೇಳೆ ಬಿಲ್ಡಿಂಗ್‌ನಲ್ಲಿದ್ದ 4 ಅಂಗಡಿಗಳು ಬೆಂಕಿಗಾಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು ಸುಟ್ಟು ಕರಕಲಾಗಿವೆ.

    ಮಧ್ಯರಾತ್ರಿ ಸತತ 3 ಗಂಟೆಗಳ ಕಾಲ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ. ಅದೃಷ್ಟವಶಾತ್ ಕಟ್ಟಡದಲ್ಲಿ ಮಲಗಿದ್ದ ಮೂವರು ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಚ್‌ಎಎಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ:  28 ಸಾವಿರ ಹಣ ಪಡೆದೂ ಕೆಲಸ ಮಾಡಿಕೊಡದ ಸರ್ವೇಯರ್ – ಮತ್ತೆ ಹಣ ಪಡೆಯುವ ವೇಳೆ ಲೋಕಾ ಬಲೆಗೆ

    ಮಲ್ಲೇಶ್ವರಂನಲ್ಲೂ ಅಗ್ನಿ ಅನಾಹುತ: ಇಲ್ಲಿನ ಸಂಪಿಗೆ ರಸ್ತೆಯ ಸಿಗ್ನಲ್ ಬಳಿಯ ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿಯಲ್ಲಿದ್ದ ಬಟ್ಟೆಗಳು ಸುಟ್ಟುಹೋಗಿವೆ. ಕಂಪ್ಯೂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ (Fire Brigade Employee) ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ತಿಳಿದುಬಂದಿದೆ.

  • ಬೆಂಗಳೂರಿನಲ್ಲಿ ಆಪರೇಷನ್ ಶಾಪಿಂಗ್ ಹಬ್ – ತೆರವು ಖಂಡಿಸಿ ಬೀದಿಬದಿ ವ್ಯಾಪಾರಿಗಳಿಂದ ಪ್ರತಿಭಟನೆ

    ಬೆಂಗಳೂರಿನಲ್ಲಿ ಆಪರೇಷನ್ ಶಾಪಿಂಗ್ ಹಬ್ – ತೆರವು ಖಂಡಿಸಿ ಬೀದಿಬದಿ ವ್ಯಾಪಾರಿಗಳಿಂದ ಪ್ರತಿಭಟನೆ

    ಬೆಂಗಳೂರು: ಕಳೆದ ಒಂದು ವಾರದಿಂದ ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿನ ಬೀದಿಬದಿ ವ್ಯಾಪಾರ ತೆರವು ಕಾರ್ಯಾಚರಣೆ ಮುಂದುವರೆದಿದೆ. ಈ ಬಿಸಿ ಈಗ ಮಲ್ಲೇಶ್ವರಂ ಮಾರ್ಕೆಟ್‌ಗೂ (Malleshwaram Market) ತಟ್ಟಿದ್ದು, ಬೀದಿಬದಿ ವ್ಯಾಪಾರಿಗಳ (Street Vendors) ಗೋಳು ಹೇಳತೀರದಂತಿದೆ.

    ಬೆಂಗಳೂರಿನಲ್ಲಿ (Bengaluru) ಕಳೆದ ಒಂದು ವಾರದಿಂದ ಬಿಬಿಎಂಪಿ ಅಧಿಕಾರಿಗಳಿಂದ ನಡೆಯುತ್ತಿರುವ ಬೀದಿಬದಿ ವ್ಯಾಪಾರ ತೆರವು ಕಾರ್ಯಾಚರಣೆ ಮಲ್ಲೇಶ್ವರಂ ಮಾರ್ಕೆಟ್‌ಗೂ ಕಾಲಿಟ್ಟಿದೆ. ಮಲ್ಲೇಶ್ವರಂ 8ನೇ ಕ್ರಾಸ್‌ನಲ್ಲಿ ನೂರಾರು ಸಂಖ್ಯೆಯ ಬೀದಿಬದಿ ವ್ಯಾಪಾರಿಗಳನ್ನು ವ್ಯಾಪಾರ ಮಾಡದಂತೆ ಅಂಗಡಿಗಳನ್ನು ಎತ್ತಿಸಲಾಗಿದ್ದು, ವ್ಯಾಪಾರಿಗಳು ಸರ್ಕಾರ ಮತ್ತು ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೆಸ್ಕಾಂ ಬಿಲ್ ಹೆಸರಲ್ಲಿ ಸೈಬರ್ ಹ್ಯಾಕ್ – ಬಿಲ್ ಕಟ್ಟೋಕೆ ಹೋದ್ರೆ ಅಕೌಂಟ್‌ನಲ್ಲಿದ್ದ ಹಣ ಮಾಯ

    ನಗರದ ಬೇರೆ ಬೇರೆ ಕಡೆ ಫುಟ್‌ಪಾತ್ ಮೇಲೆ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳ ತೆರವು ಆರಂಭಿಸಿರುವ ಬಿಬಿಎಂಪಿ ಬುಧವಾರ ಸಂಜೆ ದಿಢೀರ್ ಅಂತಾ ಮಲ್ಲೇಶ್ವರಂ 8ನೇ ಕ್ರಾಸ್‌ನ ಮಾರ್ಕೆಟ್‌ನಲ್ಲೂ ಕಾರ್ಯಚರಣೆ ಆರಂಭಿಸಿತ್ತು. ನೂರಾರು ಸಂಖ್ಯೆಯ ಬೀದಿಬದಿ ವ್ಯಾಪಾರಿಗಳನ್ನು ಪೊಲೀಸರು ಮತ್ತು ಮಾರ್ಷಲ್‌ಗಳ ಸಹಾಯದಿಂದ ತೆರವು ಮಾಡಲಾಯಿತು. ಆರಂಭದಲ್ಲಿ ವ್ಯಾಪಾರಿಗಳು ವಿರೋಧ ವ್ಯಕ್ತಪಡಿಸಿದರು. ಆದರೆ ಪೊಲೀಸರು ದೊಡ್ಡ ಮಟ್ಟದ ವಿರೋಧಕ್ಕೆ ಆಸ್ಪದ ನೀಡದೆ ಸಂಪೂರ್ಣ ವ್ಯಾಪಾರವನ್ನು ಸ್ಥಗಿತಗೊಳಿಸಿದರು. ಇದೇ ಸಂದರ್ಭದಲ್ಲಿ ಮಹಿಳಾ ವ್ಯಾಪಾರಿಗಳು ಕೂಡ ಅಧಿಕಾರಿಗಳಿಗೆ ಹಿಡಿ ಶಾಪ ಹಾಕಿದರು. ಇದನ್ನೂ ಓದಿ: ಚೆಕ್‍ನಲ್ಲಿ 3.5 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ – ಅಧಿಕಾರಿ ಅರೆಸ್ಟ್

    ಈ ಮಧ್ಯೆ ವ್ಯಾಪಾರಿಗಳ ತೆರವು ವಿಚಾರ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪ್ರತಿಕ್ರಿಯಿಸಿ, ಜಿಎಸ್‌ಟಿ ವ್ಯಾಪ್ತಿಗೆ ಬರುವ ವಸ್ತುಗಳನ್ನು ಫುಟ್‌ಪಾತ್‌ನಲ್ಲಿ ಮಾರುತ್ತಿದ್ದಾರೆ. ತಾವು ಬೀದಿಬದಿ ವ್ಯಾಪಾರಿ ಅಂತಾ ಗುರುತಿನ ಚೀಟಿ ಇದ್ದರೆ ವ್ಯಾಪಾರ ಮಾಡಬಹುದು. ರಸ್ತೆಯಿಂದ 10 ಮೀಟರ್ ದೂರದಲ್ಲಿ ಪಾದಚಾರಿಗಳಿಗೆ ತೊಂದರೆ ಆಗದಂತೆ ಮಾಡಬಹುದು ಎಂದಿದ್ದಾರೆ. ಆದರೆ, ಈ ಮಧ್ಯೆ ಕಾರ್ಡ್ ಇರುವ ಭಾಗಗಳಲ್ಲೂ ತೆರವು ಕಾರ್ಯ ನಡೆಯುತ್ತಿದ್ದು, ಬಿಬಿಎಂಪಿ ಕಮಿಷನರ್ ಹುಸಿ ಭರವಸೆ ನೀಡುತ್ತಿದ್ದಾರಾ ಎಂಬ ಅನುಮಾನ ಕೂಡ ವ್ಯಕ್ತವಾಗ್ತಿದೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಭಾರೀ ಮಳೆ – 5 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

    ಮಲ್ಲೇಶ್ವರಂ, ಜಯನಗರ (Jayanagar), ಸೇರಿ ಹಲವೆಡೆ ಬೀದಿಬದಿ ವ್ಯಾಪಾರಿಗಳನ್ನು ತೆರವು ಮಾಡಿಸುತ್ತಿರುವುದನ್ನು ಖಂಡಿಸಿ ಇಂದು ಬೀದಿಬದಿ ವ್ಯಾಪಾರಿಗಳ ಸಂಘ ಪ್ರತಿಭಟನೆ ನಡೆಸುತ್ತಿದೆ. ಬೆಳಗ್ಗೆ 11 ಘಂಟೆಗೆ ಜಯನಗರ 4 ಬ್ಲಾಕ್‌ನಲ್ಲಿ ಬಿಡಿಎ ಮಾರ್ಕೆಟ್ ಕಾಂಪ್ಲೆಕ್ಸ್ ಹತ್ತಿರ ಬಿಬಿಎಂಪಿಯ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಒಟ್ಟಾರೆ ಬಿಬಿಎಂಪಿ ನಿರ್ಧಾರ ಬೀದಿಬದಿಯಲ್ಲಿ ಜೀವನ ಮಾಡುತ್ತಿದ್ದ ಬಡ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದಿರುವುದಂತು ಸತ್ಯ. ಇದನ್ನೂ ಓದಿ: ಎಫ್‍ಡಿಎ ಪರೀಕ್ಷೆ ಅಕ್ರಮ ತನಿಖೆ ಚುರುಕು – ಕಿಂಗ್‍ಪಿನ್‍ನಿಂದ ಜಾಮೀನಿನ ಮೊರೆ