Tag: mallika rajput

  • 35 ವರ್ಷದ ಗಾಯಕಿ ಮಲ್ಲಿಕಾ ರಜಪೂತ್ ಅನುಮಾನಾಸ್ಪದ ಸಾವು

    35 ವರ್ಷದ ಗಾಯಕಿ ಮಲ್ಲಿಕಾ ರಜಪೂತ್ ಅನುಮಾನಾಸ್ಪದ ಸಾವು

    ಸುಲ್ತಾನ್‌ಪುರದ ಖ್ಯಾತ ಗಾಯಕಿ ಮತ್ತು ನಟಿ ವಿಜಯ ಲಕ್ಷ್ಮಿ ಅಲಿಯಾಸ್ ಮಲ್ಲಿಕಾ ರಜಪೂತ್ (Mallika Rajput) ಅವರು ಫೆ.13ರಂದು ತಮ್ಮ ಸ್ವಗೃಹದಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಕಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದ್ದು, ಅವರ ಮರಣೋತ್ತರ ಪರೀಕ್ಷೆಯ ಬಳಿಕವಷ್ಟೇ ಸ್ಪಷ್ಟನೆ ಸಿಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸಾಕಷ್ಟು ಸಿನಿಮಾಗಳಿಗೆ ಹಾಡಿದ್ದ 35 ವರ್ಷದ ಗಾಯಕಿ ಕಮ್ ನಟಿ ಮಲ್ಲಿಕಾ ರಜಪೂರ್ ಅವರ ಮೃತದೇಹ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಸೀತಾಕುಂಡ್ ಪ್ರದೇಶದ ತನ್ನ ಮನೆಯ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರ ಸಾವು ಅನುಮಾನಾಸ್ಪದವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ:ಕತಾರ್‌ನಿಂದ ನೌಕಾಸೇನಾ ಮಾಜಿ ಅಧಿಕಾರಿಗಳ ಬಿಡುಗಡೆಯಲ್ಲಿ ನನ್ನ ಪಾತ್ರವಿಲ್ಲ- ಶಾರುಖ್ ಖಾನ್

    ಮನೆಯ ಸದಸ್ಯರು ಮಲಗಿದ್ದ ಕಾರಣ ಯಾವಾಗ ಈ ಘಟನೆ ನಡೆದಿದೆ ಎಂಬುದು ಗೊತ್ತಾಗಲಿಲ್ಲ ಎಂದು ಮಲ್ಲಿಕಾ ಅವರ ತಾಯಿ ತಿಳಿಸಿದ್ದಾರೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ತೋರುತ್ತದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಶ್ರೀರಾಮ್ ಪಾಂಡೆ ಹೇಳಿದ್ದಾರೆ. ತನಿಖೆ ನಡೆಯುತ್ತಿದೆ ಸದ್ಯದಲ್ಲೇ ಮಲ್ಲಿಕಾ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ತಿಳಿಸಿದ್ದಾರೆ.