Tag: Mallikarjana Kharge

  • ಅಗ್ನಿಪಥ್ ಯೋಜನೆ ವಾಪಸ್ ಪಡೆಯುವಂತೆ ರಾಷ್ಟ್ರಪತಿಗೆ ಕಾಂಗ್ರೆಸ್ ನಾಯಕರ ಮನವಿ

    ಅಗ್ನಿಪಥ್ ಯೋಜನೆ ವಾಪಸ್ ಪಡೆಯುವಂತೆ ರಾಷ್ಟ್ರಪತಿಗೆ ಕಾಂಗ್ರೆಸ್ ನಾಯಕರ ಮನವಿ

    ನವದೆಹಲಿ: ಕೇಂದ್ರ ಸರ್ಕಾರದಿಂದ ಜಾರಿಗೊಳಿಸಲಾಗಿರುವ ಅಗ್ನಿಪಥ್ ಯೋಜನೆಯನ್ನು ಕೂಡಲೇ ಹಿಂಪಡೆಯುವಂತೆ ಕಾಂಗ್ರೆಸ್‌ನ ಇಬ್ಬರು ನಾಯಕರು ಇಂದು ರಾಷ್ಟ್ರತಿಗೆ ಮನವಿ ಸಲ್ಲಿಸಿದ್ದಾರೆ.

    ಕಾಂಗ್ರೆಸ್ ನಾಯಕರಾದ ಜಯರಾಮ್ ರಮೇಶ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರಿಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಮನಾಥ್ ಕೋವಿಂದ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್ – ಜೂನ್ 23ಕ್ಕೆ ED ಮುಂದೆ ಹಾಜರ್? 

    ಈ ವೇಳೆ ಮಾತನಾಡಿರುವ ಕಾಂಗ್ರೆಸ್ ನಾಯಕರು, ಸಶಸ್ತ್ರ ಪಡೆಗಳ ನೇಮಕಾತಿಯಲ್ಲಿ ಬದಲಾವಣೆ ಘೋಷಿಸುವ ಮೊದಲು ಸರ್ಕಾರವು ವ್ಯಾಪಕವಾದ ಸಮಾಲೋಚನೆಗಳನ್ನು ಅಳವಡಿಸಿಕೊಂಡಿಲ್ಲ. ರಕ್ಷಣಾ ಸ್ಥಾಯಿ ಸಮಿತಿಯಲ್ಲಿ ಯೋಜನೆ ಬಗ್ಗೆ ಚರ್ಚಿಸಿಲ್ಲ. ರಾಜಕೀಯ ಪಕ್ಷಗಳು ಪಾಲುದಾರರ ಸಲಹೆಗಳನ್ನೂ ಪಡೆದಿಲ್ಲ. ತಜ್ಞರ ಸಲಹೆ ಪರಿಗಣಿಸಲಾಗಿದೆ ಎಂಬುದಕ್ಕೆ ಯಾವುದೇ ಆಧಾರವಿಲ್ಲ. ಈ ಯೋಜನೆ ಕೆಟ್ಟದ್ದಾಗಿ ಪ್ರಯೋಗಿಸುವ ಮುನ್ನ ಪ್ರಾಯೋಗಿಕವಾಗಿ ಪರೀಕ್ಷಿಸಬೇಕಿತ್ತು ಎಂದು ರಾಷ್ಟ್ರಪತಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಎರಡು ವಾರ ಶಟ್‍ಡೌನ್ – ತುರ್ತು ಸೇವೆಗಳು ಮಾತ್ರ ಲಭ್ಯ

    ಈ ಯೋಜನೆಯಲ್ಲಿ ಅತ್ಯಂತ ಕಡಿಮೆ ತರಬೇತಿ ಅವಧಿ ನಿಗದಿ ಮಾಡಲಾಗಿದೆ. ಸೇವೆಯ ಅವಧಿಯೂ ಕಡಿಮೆಯಿದೆ. ಇದರಿಂದ ಸಶಸ್ತ್ರ ಪಡೆಗಳ ಗುಣಮಟ್ಟ, ದಕ್ಷತೆ ಮೇಲೆ ಋಣಾತ್ಮಕ ಪರಿಣಾಮ ಬೀರಬಹುದು ಎಂದು ಹೇಳಿದ್ದಾರೆ.

    Live Tv

  • ಡಿಸೆಂಬರ್ 9ರ ಬಳಿಕ ಗುಡ್‍ನ್ಯೂಸ್-ಮೈತ್ರಿಯ ಸುಳಿವು ನೀಡಿದ ಖರ್ಗೆ

    ಡಿಸೆಂಬರ್ 9ರ ಬಳಿಕ ಗುಡ್‍ನ್ಯೂಸ್-ಮೈತ್ರಿಯ ಸುಳಿವು ನೀಡಿದ ಖರ್ಗೆ

    ಬೆಂಗಳೂರು: ಡಿಸೆಂಬರ್ 9ರ ಬಳಿಕ ಗುಡ್‍ನ್ಯೂಸ್ ನೀಡುತ್ತೇವೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮೈತ್ರಿಯ ಸುಳಿವು ನೀಡಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ. ಇತ್ತೀಚೆಗೆ ರಾಜ್ಯ ಮತ್ತು ರಾಷ್ಟ್ರದಲ್ಲಿ ಅಧಿಕಾರದ ದುರುಪಯೋಗ ನಡೆದಿದೆ. ಪ್ರತಿಯೊಂದು ಚುನಾವಣೆಗಳಲ್ಲಿ ಅಧಿಕಾರವನ್ನ ದುರುಪಯೋಗ ಮಾಡಿಕೊಂಡು ಅಭ್ಯರ್ಥಿಗಳಿಗೆ ಹೆದರಿಸಲಾಗುತ್ತಿದೆ. ಕರ್ನಾಟಕದಲ್ಲಿ ಬಿಜೆಪಿಗೆ ಹೋಗಿರುವ ಅಭ್ಯರ್ಥಿಗಳು ನೂರಕ್ಕೆ ನೂರರಷ್ಟು ಸೋಲುತ್ತಾರೆ. ಅನರ್ಹರಿಗೆ ರಾಜ್ಯದ ಜನರು ಬುದ್ಧಿ ಕಲಿಸಲಿದ್ದಾರೆ. ಎನ್‍ಸಿಪಿ ಮತ್ತು ಕಾಂಗ್ರೆಸ್ ನಿಂದ ಬಿಜೆಪಿಗೆ ಹೋಗಿ ಸ್ಪರ್ಧೆ ಮಾಡಿದ್ದ ಶೇ.79ರಷ್ಟು ಅಭ್ಯರ್ಥಿಗಳು ಸೋತಿದ್ದಾರೆ. ಮಹಾರಾಷ್ಟ್ರದಲ್ಲಿ ಆದಂತೆ ಇಲ್ಲಿಯೂ ಪಕ್ಷಾಂತರಿಗಳಿಗೆ ಜನರು ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

    ಉಪಚುನಾವಣೆ ಕರ್ನಾಟಕಕ್ಕೆ ಮಾತ್ರವಲ್ಲ, ಬೇರೆ ರಾಜ್ಯಗಳ ಮೇಲೂ ಪರಿಣಾಮ ಬೀರುತ್ತದೆ. ಕ್ಷುಲ್ಲಕ ಕಾರಣಗಳಿಗಾಗಿ ಪಕ್ಷ ಬಿಟ್ಟು ಹೋಗಿದ್ದಾರೆ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಹೆಚ್ಚಿನ ಕೆಲಸ ಪಡೆದವರೇ ಈ ರೀತಿ ಕೆಲಸ ಆಗಿಲ್ಲ ಅಂತಾ ಮಾತನಾಡಿ ಹೋಗಿದ್ದಾರೆ. ಅದಕ್ಕೆ ಏನ್ ಹೇಳಬೇಕು ಹೇಳಿ. ನಾನು ಕೂಡ ಇನ್ನೆರಡ್ಮೂರು ದಿನ ಪ್ರಚಾರ ಮಾಡ್ತೀನಿ, ಸತ್ಯವನ್ನ ಜನರಿಗೆ ತಿಳಿಸುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

    ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಪ್ರಶ್ನಿಸಿದಾಗ ಡಿಸೆಂಬರ್ 9ರವರೆಗೂ ತಾಳ್ಮೆಯಿಂದಿರಿ. ನಂತರ ಗುಡ್‍ನ್ಯೂಸ್ ನೀಡುತ್ತೇವೆ. ಸಿದ್ದರಾಮಯ್ಯ ಮುಂದಿನ ಸಿಎಂ ಎಂಬ ಪ್ರಚಾರ ವಿಚಾರದ ಆ ಪ್ರಶ್ನೆ ಉದ್ಭವಿಸುವುದಿಲ್ಲ. ಮುಂದೆ ಸಿಎಂ ಯಾರು? ನಾಯಕತ್ವದ ಜವಾಬ್ದಾರಿ ಯಾರು ತೆಗೆದುಕೊಳ್ಳಬೇಕು ಎಂಬುದನ್ನು ಹೈಕಮಾಂಡ್ ನಾಯಕರು ನಿರ್ಧಾರ ಮಾಡುತ್ತಾರೆ. ಈಗ ಕಾಂಗ್ರೆಸ್ ರಿಯಾಲಿಟಿ ಬಗ್ಗೆ ಮಾತ್ರ ಯೋಚನೆ ಮಾಡುತ್ತಿದೆ. ಪ್ರತಿ ಸಾರಿ ನಾನು ಸಿಎಂ, ಎಐಸಿಸಿ ಅಧ್ಯಕ್ಷ ಎಂದು ಹೇಳಿಯೇ ನನ್ನ ಹೀಗೆ ಮಾಡಿ ಕೂರಿಸಿದ್ದೀರಾ ಎಂದು ಖರ್ಗೆ ಹಾಸ್ಯ ಚಟಾಕಿ ಹಾರಿಸಿದರು.

    ಹಣ ಬಲದ ಮೇಲೆ ಬಿಜೆಪಿ ಚುನಾವಣೆ ಗೆಲ್ಲುವ ಪ್ರಯತ್ನ ಸಾಕಷ್ಟು ಮಾಡಿದ್ದಾರೆ, ಈಗಲೂ ಮಾಡುತ್ತಿದ್ದಾರೆ. ಇಂತಹ ಪ್ರಯತ್ನಗಳಲ್ಲಿ ಕೆಲವು ಸಹ ಯಶಸ್ವಿಯಾಗಿದ್ದಾರೆ. ಹಣ ನಡೆಯಲಿಲ್ಲ ಅಂದ್ರೆ ಧರ್ಮ ಜಾತಿ ಮಾತುಗಳನ್ನಾಡಿ ಜನರನ್ನ ಭಾವುಕರನ್ನಾಗಿ ಮಾಡಿ ಸಿಂಪಥಿ ಮೂಲಕ ಮತ ಪಡೆಯಲು ಮುಂದಾಗುತ್ತಾರೆ. ಧರ್ಮದ ಹೆಸರಲ್ಲಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

    ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದರೆ ಹಣದ ಹೊಳೆ ಹರಿಯುತ್ತೆ ಎಂದು ಬಿಜೆಪಿಯವರು ಪ್ರಚಾರ ಮಾಡಿದರು. ನೆರೆ ಹಾನಿಗೆ ಕೇಂದ್ರ ಸರ್ಕಾರ ಸ್ಪಂದಿಸಲಿಲ್ಲ. ಪ್ರಧಾನಿಗಳಾದ ಮೋದಿ ಅವರು ಕರ್ನಾಟಕಕ್ಕೇ ಬರಲಿಲ್ಲ. ಕರ್ನಾಟಕವನ್ನು ಮೂಸಿಯೂ ನೋಡಲಿಲ್ಲ. ಪ್ರಧಾನಿಗಳು ಯಡಿಯೂರಪ್ಪರ ಮೇಲಿನ ಸಿಟ್ಟನ್ನು ಕರ್ನಾಟಕದ ಜನರ ಮೇಲೆ ತೀರಿಸಿಕೊಳ್ಳುತ್ತಿದ್ದಾರೋ ಗೊತ್ತಿಲ್ಲ. ಪ್ರವಾಹಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಹಣ ತರಲು ರಾಜ್ಯದ ಬಿಜೆಪಿ ನಾಯಕರು ಪ್ರಯತ್ನಿಸಲಿಲ್ಲ. ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದ್ದು, ಬರೀ ಸರ್ಕಾರವನ್ನ ಹೇಗೆ ಉಳಿಸಿಕೊಳ್ಳಬೇಕು ಅನ್ನೋದ್ರಲ್ಲೇ ತೊಡಗಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಸಂವಿಧಾನ ಉಳಿಸುವುದಕ್ಕೋಸ್ಕರ ಮೈತ್ರಿ ಪಕ್ಷಗಳ ಜತೆ ಮಾತುಕತೆಗೆ ಸಿದ್ಧವಾಗಿದ್ದೇವೆ. ಮಹಾರಾಷ್ಟ್ರದಲ್ಲಿ ಎನ್‍ಸಿಪಿ, ಕಾಂಗ್ರೆಸ್, ಶಿವಸೇನೆ ಹೊಂದಾಣಿಕೆಗೆ ನಮ್ಮ ಅಧ್ಯಕ್ಷರಿಗೆ ಇಷ್ಟ ಇರಲಿಲ್ಲ. ವಿರೋಧ ಪಕ್ಷದ ಸ್ಥಾನದಲ್ಲಿ ಕೂರುವುದಾಗಿ ಹೇಳಿದ್ದರು. ಆದರೆ ಬಿಜೆಪಿಯನ್ನ ಅಧಿಕಾರದಿಂದ ದೂರ ಇಡಬೇಕೆಂದು ಬಹುತೇಕ ಪಕ್ಷಗಳು ಮನವಿ ಮಾಡಿದ್ದವು. ಸಂವಿಧಾನ ಉಳಿವಿವಾಗಿ ಯುಪಿಎ ಮೈತ್ರಿಕೂಟದ ಪಕ್ಷಗಳು ಒಟ್ಟಾಗಿ ಹೋಗುತ್ತೇವೆ ಎಂದು ತಿಳಿಸಿದರು.

    https://www.youtube.com/watch?v=_U7Ge3cF018

  • ಖರ್ಗೆಗೆ ಪುತ್ರ ವ್ಯಾಮೋಹ – ನಾವು ನಿಮ್ಮ ಮಕ್ಕಳಂತೆ ಅಲ್ವಾ ಎಂದ್ರು ಉಮೇಶ್ ಜಾಧವ್

    ಖರ್ಗೆಗೆ ಪುತ್ರ ವ್ಯಾಮೋಹ – ನಾವು ನಿಮ್ಮ ಮಕ್ಕಳಂತೆ ಅಲ್ವಾ ಎಂದ್ರು ಉಮೇಶ್ ಜಾಧವ್

    – ಹೊಟ್ಟೆ ಕಿಚ್ಚಿಗೆ ಔಷಧಿ ಇಲ್ಲ ಎಂದಿದ್ದ ಖರ್ಗೆಗೆ ತಿರುಗೇಟು!

    ಕಲಬುರಗಿ: ಹೊಟ್ಟೆ ಕಿಚ್ಚಿಗೆ ಔಷಧಿ ಇಲ್ಲ ಎಂದು ಕಿಡಿಕಾರಿದ್ದ ಸಂಸದ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಚಿಂಚೋಳಿ ಶಾಸಕ ಡಾ. ಉಮೇಶ್ ಜಾಧವ್ ತಿರುಗೇಟು ನೀಡಿದ್ದು, ಜಾಧವ್ ಡೈರಿಯಲ್ಲಿ ಹೊಟ್ಟೆ ಕಿಚ್ಚಿನ ಶಬ್ದ ಇಲ್ಲ. ಖರ್ಗೆ ಅವರು ಪುತ್ರ ವ್ಯಾಮೋಹದಿಂದ ಪ್ರಿಯಾಂಕ್ ಖರ್ಗೆ ಅವರನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.

    ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಾಸಕರು, ಖರ್ಗೆಯವರು ಪುತ್ರ ವ್ಯಾಮೋಹದಿಂದ ಪ್ರಿಯಾಂಕ್ ಖರ್ಗೆಯವರನ್ನು ರಕ್ಷಿಸುತ್ತಿದ್ದಾರೆ. ಆದರೆ ಉಮೇಶ್ ಜಾಧವ್ ಮತ್ತು ಅಜಯ್ ಸಿಂಗ್ ಇಬ್ಬರು ಕೂಡ ನಿಮ್ಮ ಮಕ್ಕಳ ಇದ್ದಂತೆ. ಸಾಮಾಜಿಕ ನ್ಯಾಯದ ಪರವಾಗಿ ಮಾತಾಡುವ ಖರ್ಗೆಯವರಿಗೆ ನಾನು, ಅಜಯ್ ಸಿಂಗ್, ಖನೀಜ್ ಫಾತಿಮಾ ಕಾಣಿಸಲಿಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ.

    ತಮ್ಮ ಹೇಳಿಕೆಯಲ್ಲಿ ಅಜಯ್ ಸಿಂಗ್ ಅವರ ಹೆಸರನ್ನು ಪ್ರಸ್ತಾಪ ಮಾಡುವ ಮೂಲಕ ತಮ್ಮ ಬೆಂಬಲಕ್ಕೆ ಅಜಯ್ ಇದ್ದಾರೆ ಎಂದು ಪರೋಕ್ಷವಾಗಿ ಸುಳಿವು ನೀಡಿದ್ದಾರೆ. ಅಲ್ಲದೇ ಹಲವರು ನಾಯಕರು ದೈಹಿಕವಾಗಿ ಕಾಂಗ್ರೆಸ್ ಪಕ್ಷದಲ್ಲಿ ಇದ್ದರೂ ಕೂಡ ನನ್ನ ಜೊತೆ ಮಾನಸಿಕವಾಗಿ ಇದ್ದಾರೆ. ಜಾರಕಿಹೊಳಿ ಅವರು ನನ್ನ ಸ್ನೇಹಿತರು ನಿಜ. ಆದರೆ ಸದ್ಯಕ್ಕೆ ನನ್ನ ಜೊತೆ ಯಾರು ಸಂಪರ್ಕ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

    ಜಾಧವ್ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿರುವ ಖರ್ಗೆ ಅವರೆ ಮತ್ತೆ ನನ್ನ ಬಗ್ಗೆ ಮಾತನಾಡುತ್ತಾರೆ. ದೆಹಲಿಯಲ್ಲಿ ಕೂತು ತಮಗೆ ಬೇಕಾದವರಿಗೆ ಸಚಿವ ಸ್ಥಾನ ಕೊಡಿಸುತ್ತಾರೆ. ಕೇಳಿದರೆ ನನಗೆ ಅಷ್ಟು ಶಕ್ತಿ ಇಲ್ಲ ಎನ್ನುತ್ತಾರೆ. ಆದರೆ ನಮ್ಮ ಜಿಲ್ಲೆಯಲ್ಲಿ ಸೇರಿದಂತೆ ಬಳ್ಳಾರಿ ಬೇರೆ ಜಿಲ್ಲೆಗಳಲ್ಲಿ ಯಾರು ಎಂಎಲ್‍ಸಿ, ಸಚಿವರು ಆಗಿದ್ದಾರೆ ಎನ್ನುವುದು ತಿಳಿದಿದೆ. ಬೇರೆ ನಾಯಕರು ಏಕೆ ಸಚಿವ ಸ್ಥಾನ ಪಡೆಯಲಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಅವಗಿಂತ ಮೇಲಿನ ಅಧಿಕಾರಕ್ಕೆ ಬರಲು ಬೇರೆ ಯಾರಿಗೂ ಅವಕಾಶವಿಲ್ಲ ಎಂಬುವುದು ಎಲ್ಲರಿಗೂ ತಿಳಿದಿದೆ ಎಂದರು.

    ಇದೇ ವೇಳೆ ತಮ್ಮ ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಕುರಿತು ಸ್ಪಷ್ಟನೆ ನೀಡಿದ ಅವರು, ವಿಧಾನಸಭಾ ಸ್ಪೀಕರ್ ಅವರ ಮೇಲೆ ನನಗೆ ಸಂಪೂರ್ಣ ಭರವಸೆ ಇದೆ. ಹೀಗಾಗಿ ನನ್ನ ರಾಜೀನಾಮೆ ಅಂಗಿಕಾರ ಆಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv