Tag: mallikarjun kharge

  • ಡಿಕೆಶಿ, ಜಾರಕಿಹೊಳಿ ಅಲ್ಲ.. ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಸಿಎಂ ಆಗ್ತಾರೆ: ಯತ್ನಾಳ್ ಬಾಂಬ್

    ಡಿಕೆಶಿ, ಜಾರಕಿಹೊಳಿ ಅಲ್ಲ.. ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಸಿಎಂ ಆಗ್ತಾರೆ: ಯತ್ನಾಳ್ ಬಾಂಬ್

    – ವಿಜಯೇಂದ್ರ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಆದ್ರೆ ಹೊಸ ಪಕ್ಷ ಕಟ್ತೀನಿ ಎಂದ ಶಾಸಕ

    ಬೆಳಗಾವಿ: ಡಿಕೆಶಿ, ಸತೀಶ್ ಜಾರಕಿಹೊಳಿ ಇಬ್ಬರೂ ಸಿಎಂ ಆಗಲ್ಲ. ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಬೆಳಗಾವಿಯಲ್ಲಿ ಕನೇರಿ ಮಠದ ಸ್ವಾಮೀಜಿ ಬೆಂಬಲಿಸಿ ನಡೆದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಯತ್ನಾಳ್, ಕಾಂಗ್ರೆಸ್‌ನಲ್ಲಿ ಸ್ಪರ್ಧೆಯಲ್ಲಿರುವ ಯಾವ ನಾಯಕರೂ ಸಿಎಂ ಆಗಲ್ಲ. ರಾಜ್ಯದ ಸಾರಥ್ಯ ಬ್ಲ್ಯಾಕ್ ಹಾರ್ಸ್ ಕೈಗೆ ಸಿಗಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ. ಡಿಕೆಶಿಯೂ ಸಿಎಂ ಆಗಲ್ಲ, ಸತೀಶ್ ಜಾರಕಿಹೊಳಿ ಕೂಡ ಸಿಎಂ ಆಗಲ್ಲ. ಒಮ್ಮೆ ಸಿಎಂ ಆಗಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಕಾಯುತ್ತಿದ್ದಾರೆ. ಸಿಎಂ ಪುತ್ರ ಕೂಡ ಬೆಳಗಾವಿಗೆ ಬಂದು ಸತೀಶ್ ಜಾರಕಿಹೊಳಿ ಹೆಸರು ಹೇಳಿ ಹೋಗಿದ್ದಾರೆ. ಆದರೆ, ನಾಯಕತ್ವ ಬದಲಾವಣೆ ಆಗಲಿದೆ. ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲಿದ್ದಾರೆ ಎಂದು ಭವಿಷ್ಯ ನುಡಿದರು. ಇದನ್ನೂ ಓದಿ: ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆಶಿ ಟಾಂಗ್‌

    ಡಿಕೆಶಿಯನ್ನ ಸಿಎಂ ಮಾಡ್ತೀನಿ ಅಂತ ನೀವು ಡಿಸೈಡ್ ಮಾಡಿದ್ರೆ, ನಾನು ಸತೀಶ್ ಪರವಾಗಿ ನಿಲ್ತೀನಿ ಅಂತ ಸಿದ್ದರಾಮಯ್ಯ ಸಂದೇಶ ಕೊಟ್ಟಿದ್ದಾರೆ. ತಮ್ಮ ಮಗನನ್ನು ಕಳಿಸಿ ಸಂದೇಶ ಸಾರಿದ್ದಾರೆ ಸಿಎಂ ಸಿದ್ದರಾಮಯ್ಯ ಯತ್ನಾಳ್ ಆರೋಪ ಮಾಡಿದ್ದಾರೆ.

    ವಿಜಯೇಂದ್ರ ಮರಳಿ ರಾಜ್ಯ ಬಿಜೆಪಿ ಅಧ್ಯಕ್ಷರಾದ್ರೆ ನಾನು ಹೊಸ ಪಕ್ಷ ಕಟ್ಟುತ್ತೇನೆ. ಕರ್ನಾಟಕ ರಾಜ್ಯದಲ್ಲಿ ಜೆಸಿಬಿ ಹೆಸರಲ್ಲಿ ಹೊಸ ಪಕ್ಷ ಕಟ್ಟುತ್ತೇನೆ. ಜೆ ಅಂದ್ರೆ ಜೆಡಿಎಸ್‌ನಲ್ಲಿ, ಸಿ ಅಂದ್ರೆ ಕಾಂಗ್ರೆಸ್ ಹಾಗೂ ಬಿ ಅಂದ್ರೆ ಬಿಜೆಪಿಯಲ್ಲಿ ನೊಂದವರು ನಮ್ಮ ಪಕ್ಷ ಸೇರುತ್ತಾರೆ. ಈಗ ಬಿಜೆಪಿಯಲ್ಲಿರುವ 50 ಕ್ಕೂ ಅಧಿಕ ಶಾಸಕರ ಬೆಂಬಲ ನನಗಿದೆ. ಹೆಚ್ಚಿನ ಸಂಖ್ಯೆಯ ಸಂಸದರ ಬೆಂಬಲವೂ ನನಗಿದೆ. ಹೀಗಾಗಿ, ಯಾವುದೇ ಕಾರಣಕ್ಕೂ ಬಿಜೆಪಿ ಹೈಕಮಾಂಡ್ ವಿಜಯೇಂದ್ರರನ್ನು ಅಧ್ಯಕ್ಷ ಮಾಡಬಾರದು. ಒಂದು ವೇಳೆ ವಿಜಯೇಂದ್ರ ಅಧ್ಯಕ್ಷರಾದ್ರೆ ನಾನು ಜೆಸಿಬಿ ಪಕ್ಷ ಕಟ್ಟುವೆ. ಜೆಸಿಬಿ ಪಾರ್ಟಿ ರಚನೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿದ್ದೇವೆ. ವಿಜಯೇಂದ್ರ ನೇಮಿಸಿದ ಮರುದಿನವೇ ಪಕ್ಷ ಆ್ಯಕ್ಟಿವ್ ಆಗಲಿದೆ. ನಾನು ಹೋದ ಕಡೆಗಳಲ್ಲಿ ಜನಬೆಂಬಲ ಸಿಗ್ತಿದೆ. ಹಿಂದುತ್ವದ ಆಧಾರದ ಮೇಲೆ ಪಕ್ಷ ಕಟ್ಟುವೆ ಎಂದು ತಿಳಿಸಿದರು. ಇದನ್ನೂ ಓದಿ: ಹಣೆಯಲ್ಲಿ ಬರೆದಿದ್ದರೆ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ, ಇಲ್ಲದಿದ್ದರೆ ಇಲ್ಲ: ಡಿ.ಕೆ.ಸುರೇಶ್

    ನರೇಂದ್ರ ಮೋದಿ ಜನರಿಂದ ಆದ ನಾಯಕ. ದೇಶದಲ್ಲಿ ಒಂದು ಸಂಚಲನ ಆಯ್ತು. ಮೋದಿಯವರ ನಂತರ ಯೋಗಿ ಆದಿತ್ಯನಾಥ್ ಪಿಎಂ ಆಗಬೇಕು ಎಂದು ಜನ ಬಯಸಿದ್ದಾರೆ. ಹಾಗೆಯೇ ರಾಜ್ಯದ ಜನರ ಆಶಾವಾದವಿದೆ. ಜನರಲ್ಲಿ ಯತ್ನಾಳ್ ಸಿಎಂ ಆಗಬೇಕು ಎನ್ನುವುದಿದೆ. ಇಲ್ಲಾವಾದರೆ ನಂದು ಜೆಸಿಬಿ ಪಾರ್ಟಿ ರೆಡಿ ಇದೆ. ಮುಂದಿನ ಚುನಾವಣೆವಣೆಯೊಳಗೆ ಹೈಕಮಾಂಡ್ ಕರೆಯಲಿ. ಕರೆಯದಿದ್ದರೆ ನಂದು ಜೆಸಿಪಿ ಪಾರ್ಟಿ ರೆಡಿ ಇದೆ ಎಂದು ಹೇಳಿದರು.

  • ಪಕ್ಷ‌ ನಿಷ್ಠೆಗೆ ಫಲ ಸಿಗಲಿದೆ ತಾಳ್ಮೆಯಿಂದಿರಿ – ಡಿಕೆಶಿಗೆ ಖರ್ಗೆ ಅಭಯ, 1 ಗಂಟೆಗೂ ಹೆಚ್ಚುಕಾಲ ಮಾತುಕತೆ

    ಪಕ್ಷ‌ ನಿಷ್ಠೆಗೆ ಫಲ ಸಿಗಲಿದೆ ತಾಳ್ಮೆಯಿಂದಿರಿ – ಡಿಕೆಶಿಗೆ ಖರ್ಗೆ ಅಭಯ, 1 ಗಂಟೆಗೂ ಹೆಚ್ಚುಕಾಲ ಮಾತುಕತೆ

    – ತಡರಾತ್ರಿ ಎಐಸಿಸಿ ಅಧ್ಯಕ್ಷರನ್ನ ಭೇಟಿಯಾದ ಡಿಕೆಶಿ

    ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿಯ ಚರ್ಚೆ ನಡೀತಿದೆ. ಪವರ್ ಶೇರಿಂಗ್, ಸಂಪುಟ ಪುನಾರಚನೆ ಸೇರಿ ಹಲವಾರು ಮಾತುಗಳು ಕೇಳಿ ಬರುತ್ತಿವೆ. ಈ ನಡುವೆ ತಡರಾತ್ರಿ ಡಿಸಿಎಂ ಡಿಕೆ ಶಿವಕುಮಾರ್‌, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರನ್ನ ಭೇಟಿಯಾಗಿದ್ದಾರೆ.

    ಸದಾಶಿವನಗರದಲ್ಲಿರುವ ಖರ್ಗೆ ಅವರ ನಿವಾಸದಲ್ಲಿ ತಡರಾತ್ರಿ ಡಿಕೆಶಿ (DK Shivakumar) ಭೇಟಿಯಾಗಿದ್ದು, ಸುಮಾರು 1 ಗಂಟೆಗೂ ಹೆಚ್ಚುಕಾಲ ಮಾತುಕತೆ ನಡೆಸಿದ್ದಾರೆ. ಹೀಗಾಗಿ ನವೆಂಬರ್‌ ಕ್ರಾಂತಿ ಬದಲಿಗೆ ಈ ಶಾಂತಿಯ ಬೆಳವಣಿಗೆ ಹೆಚ್ಚು ಮಹತ್ವ ಪಡೆದುಕೊಂಡಿದೆ. ಇದನ್ನೂ ಓದಿ: 24 ಗಂಟೆಯಲ್ಲಿ 300 ನಕ್ಸಲರ ಶರಣಾಗತಿ – ಭಯೋತ್ಪಾದನೆ ಮುಕ್ತ ಪ್ರದೇಶಗಳಲ್ಲಿ ಈ ಬಾರಿ ಶಾಂತಿಯ ದೀಪಾವಳಿ: ಮೋದಿ

    ಮಾತುಕತೆ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ಡಿಕೆಶಿಗೆ ಅಭಯ ನೀಡಿದ್ದಾರೆಂದು ತಿಳಿದುಬಂದಿದೆ. ಪಕ್ಷ‌ ನಿಷ್ಠೆ ಹೈಕಮಾಂಡ್ ನಿಷ್ಠೆಗೆ ತಕ್ಕ ಪ್ರತಿಫಲ ಸಿಗಲಿದೆ. ಸೂಕ್ತ ಸಮಯದವರೆಗೆ ತಾಳ್ಮೆಯಿಂದ ಇರಿ ಎಂದು ಸಹಲಗೆ ನೀಡಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನೆಫ್ರೋ ಯೂರೋಲಜಿ ಸಂಸ್ಥೆಗೆ ರಾಷ್ಟ್ರೀಯ ಮಾನ್ಯತೆ; ಸೇವೆ ಶ್ಲಾಘಿಸಿದ ಸಿಎಂ ಸಿದ್ದರಾಮಯ್ಯ

    ಹೈಕಮಾಂಡ್‌ ರಾಜ್ಯದ ಎಲ್ಲಾ ಬೆಳವಣಿಗೆಗಳನ್ನ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ. ಬಿಹಾರ ಚುನಾವಣೆ ಮುಗಿದ ಬಳಿಕ ಎಲ್ಲರೂ ಕುಳಿತು ಮಾತನಾಡೋಣ. ಎಲ್ಲಾ ವಿಚಾರದ ಬಗ್ಗೆ ಒಂದು ಕ್ಲ್ಯಾರಿಟಿಗೆ ಬರೋಣ. ನಿಮ್ಮ ಪಕ್ಷ‌ ನಿಷ್ಠೆ ಹೈಕಮಾಂಡ್ ನಿಷ್ಠೆಗೆ ತಕ್ಕ ಪ್ರತಿಫಲ ಸಿಗಲಿದೆ. ಸೂಕ್ತ ಸಮಯದವರೆಗೆ ತಾಳ್ಮೆಯಿಂದ ಇರಿ. ಹೈಕಮಾಂಡ್ ಮನಸ್ಸಿನಲ್ಲೂ ಒಂದಷ್ಟು ವಿಚಾರಗಳಿವೆ ಎಲ್ಲವೂ ಬಿಹಾರ ಚುನಾವಣೆ ಬಳಿಕ ಮಾತನಾಡೋಣ ಎಂದು ಖರ್ಗೆ ಅವರು ಅಭಯ ನೀಡಿದ್ದಾರೆ.  ಇದನ್ನೂ ಓದಿ: ಶಕ್ತಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರ – ಬೆಂಗಳೂರು To ಹಾಸನ ಬಸ್ ಸಂಚಾರ ಸ್ಥಗಿತ

    ಯೆಸ್‌. ಬಿಹಾರ ವಿಧಾನಸಭಾ ಎಲೆಕ್ಷನ್ ಮುಗಿದ ಮೇಲೆ ಕಾಂಗ್ರೆಸ್ ಹೈಕಮಾಂಡ್ ಸಂಧಾನ ಸೂತ್ರಕ್ಕೆ ಮುಂದಾಗೋ ಸಾಧ್ಯತೆಗಳಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಬ್ಬರೂ ಒಪ್ಪಿದ ಪಕ್ಷದಲ್ಲಿ ಸಂಪುಟ ಪುನಾರಚನೆ ಮಾಡೋ ಸಾಧ್ಯತೆಗಳಿವೆ. ಸುಮಾರು 17ರಿಂದ 18 ಸಚಿವರನ್ನು ಸಂಪುಟದಿಂದ ಕೈಬಿಟ್ಟು ಪ್ರಾದೇಶಿಕ ಸಮಾನತೆ, ಶಾಸಕರ ಹಿರಿತನ, ಜಾತಿ ಲೆಕ್ಕಾಚಾರ, ಸ್ಥಳಿಯ ನಾಯಕತ್ವ ಎಲ್ಲವನ್ನೂ ಪರಿಗಣಿಸಿ ಹಿರಿಯ ಶಾಸಕರಿಗೆ ಆದ್ಯತೆ ಕೊಡೋ ಸಾಧ್ಯತೆಗಳಿವೆ.

  • ಮಲ್ಲಿಕಾರ್ಜುನ ಖರ್ಗೆಯವರೇ ನಿಮ್ಮ ಮಕ್ಕಳಿಗೆ ಸರಿಯಾಗಿ ಪಾಠ ಹೇಳಿಕೊಡಿ: ಗೋವಿಂದ ಕಾರಜೋಳ

    ಮಲ್ಲಿಕಾರ್ಜುನ ಖರ್ಗೆಯವರೇ ನಿಮ್ಮ ಮಕ್ಕಳಿಗೆ ಸರಿಯಾಗಿ ಪಾಠ ಹೇಳಿಕೊಡಿ: ಗೋವಿಂದ ಕಾರಜೋಳ

    ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆಯವರೇ (Mallikarjun Kharge) ನಿಮ್ಮ ಮನೆ ಮಕ್ಕಳಿಗೆ ಸರಿಯಾಗಿ ಪಾಠ ಹೇಳಿಕೊಡಿ ಎಂದು ಸಂಸದ ಗೋವಿಂದ ಕಾರಜೋಳ (Govinda Karajola) ಹೇಳಿದ್ದಾರೆ.

    ಆರ್‌ಎಸ್‌ಎಸ್ (RSS) ಚಟುವಟಿಕೆ ನಿಷೇಧದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪತ್ರ ವಿಚಾರವಾಗಿ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೀವು ಎದುರಿಸಬೇಕಿರೋದು ಆರ್‌ಎಸ್‌ಎಸ್ ಅಲ್ಲ, ಬಿಜೆಪಿಯನ್ನು. ನೀವು ಎದುರಿಸಬೇಕಿರೋದು ಮೋದಿಯನ್ನು, ಮೋಹನ್ ಭಾಗವತ್ ಅವರನ್ನು ಅಲ್ಲ. ಸೋನಿಯಾ ಗಾಂಧಿಯವರನ್ನು ಮೆಚ್ಚಿಸೋಕೆ ಆರ್‌ಎಸ್‌ಎಸ್ ಟೀಕೆ ಟಿಪ್ಪಣಿ ಮಾಡೋದು ಬಿಡಿ. ಇದನ್ನು ದೇಶದ ಜನರು ಸಹಿಸೋದಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ದೊಡ್ಡಗೌಡ್ರ ಆರೋಗ್ಯದಲ್ಲಿ ಚೇತರಿಕೆ – ಆಸ್ಪತ್ರೆಯಿಂದ ಡಿಸ್ಚಾರ್ಜ್

    ಯಾರನ್ನೋ ಮೆಚ್ಚಿಸೋದಕ್ಕೆ ಹೋಗಿ ಈ ರೀತಿ ಹೇಳಿಕೆ ಕೊಡಬೇಡಿ. ಆರ್‌ಎಸ್‌ಎಸ್‌ನಲ್ಲಿ ಜಾತಿ ಪದ್ಧತಿ ಇಲ್ಲ. ನೀವು ಇದೇ ರೀತಿ ಮಾತು ಆಡುತ್ತಿದ್ದರೆ ರಸ್ತೆಯಲ್ಲಿ ಓಡಾಡೋದು ಕಷ್ಟ ಆಗುತ್ತದೆ. ಆರ್‌ಎಸ್‌ಎಸ್ ರಾಜಕೀಯ ಪಕ್ಷ ಅಲ್ಲ, ಮೋಹನ್ ಭಾಗವತ್ ರಾಜಕಾರಣಿ ಅಲ್ಲ. ರಾಹುಲ್ ಗಾಂಧಿ ಎದುರಿಸಬೇಕಾಗಿರುವುದು ಬಿಜೆಪಿಯನ್ನು, ಪ್ರಧಾನಿ ಮೋದಿಯವರನ್ನು. ನೀವು ಸೋನಿಯಾ, ರಾಹುಲ್ ಗಾಂಧಿಯನ್ನು ಮೆಚ್ಚಿಸಲು ಮಾತಾಡುವುದನ್ನು 140 ಕೋಟಿ ಜನ ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಸಿಎಂ ಡಿನ್ನರ್ ಪಾರ್ಟಿಗೂ ಅಧಿಕಾರ ಹಸ್ತಾಂತರಕ್ಕೂ ಸಂಬಂಧ ಇಲ್ಲ – ಪರಮೇಶ್ವರ್‌

    ನಾನೂ ಸಿಎಂ ಯಾಕಾಗಬಾರದು ಎಂಬ ಡಾ. ಪರಮೇಶ್ವರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಸಿಎಂ ಆದ ದಿನದಿಂದಲೇ ಸಿಎಂ ಕುರ್ಚಿ ಬಗ್ಗೆ ಚರ್ಚೆ ಆಗುತ್ತಿದೆ. ಎರಡೂವರೆ ವರ್ಷದಲ್ಲಿ ಆಡಳಿತ ಕುಸಿದು ರೈತರ ಸಾವಿನಲ್ಲಿ ರಾಜ್ಯ ದೇಶದಲ್ಲೇ ಎರಡನೇ ಸ್ಥಾನಕ್ಕೆ ಹೋಗಿದೆ. ಇಂದು ಸಿದ್ದರಾಮಯ್ಯ ಜಾತಿ ಗಣತಿ, ಆಹಾರ ಕಿಟ್ ಹೀಗೆ ಬೇರೆ ಬೇರೆ ನಾಟಕ ಮಾಡುತ್ತಿದ್ದಾರೆ. ಬಡವರ ಹಣವನ್ನು ವೋಟ್ ಬ್ಯಾಂಕ್ ರಾಜಕಾರಣಕ್ಕೆ ಬಳಸುತ್ತಿದ್ದಾರೆ. ಇಂದು ಸಿಎಂ ಡಿನ್ನರ್ ಮೀಟಿಂಗ್ ಸಮಾಧಾನ ಮಾಡಲು ಅಲ್ಲ. ಊಟ ಹಾಕಿ ಬಿಹಾರ ಚುನಾವಣೆಗೆ ಟಾರ್ಗೆಟ್ ಫಿಕ್ಸ್ ಮಾಡಲು ಕರೆದಿದ್ದಾರೆ ಹೊರತು ಮೇಯಿಸಲು ಅಲ್ಲ ಎಂದರು. ಇದನ್ನೂ ಓದಿ: ಶಾಸಕರ ಅಭಿಪ್ರಾಯ ಪಡೆದೇ ಹೈಕಮಾಂಡ್ ಸಿಎಂ ಆಯ್ಕೆ ಮಾಡೋದು: ಡಿಕೆಶಿಗೆ ಪರಮೇಶ್ವರ್ ತಿರುಗೇಟು

  • ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಆರೋಗ್ಯ ವಿಚಾರಿಸಿದ ರಮ್ಯಾ

    ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಆರೋಗ್ಯ ವಿಚಾರಿಸಿದ ರಮ್ಯಾ

    ಬೆಂಗಳೂರು: ನಟಿ ರಮ್ಯಾ (Ramya) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

    ಬಳಿಕ ಮಾಧ್ಯಮಗಳ ಜೊತೆ ಅವರು ಮಾಹಿತಿ ಹಂಚಿಕೊಂಡಿದ್ದು, ಮಲ್ಲಿಕಾರ್ಜುನ ಖರ್ಗೆ ಸರ್ ಆರೋಗ್ಯವಾಗಿದ್ದಾರೆ. ಅವರಿಗೆ ವಿಶ್ರಾಂತಿ ಬೇಕಿದೆ. ಆರೋಗ್ಯವಾಗಿದ್ದಾರೆ ಅಷ್ಟೇ ಸಾಕು. ಡಾಕ್ಟರ್ ಜಾಸ್ತಿ ಪ್ರಯಾಣ ಮಾಡದಂತೆ ಅವರಿಗೆ ಸಲಹೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರವಾಗಿದೆ: ಸಿದ್ದರಾಮಯ್ಯ

    ಅವರು ನಮಗೆಲ್ಲಾ ಸ್ಪೂರ್ತಿ, ಈ ವಯಸ್ಸಲ್ಲಿ ದೇಶಾದ್ಯಂತ ಟೂರ್ ಮಾಡ್ತಾರೆ. ದೈಹಿಕ ಶಕ್ತಿಗಿಂತ ಅವರ ಇಚ್ಛಾಶಕ್ತಿ ದೊಡ್ಡದು. ನನ್ನ ಬಗ್ಗೆ ಕೇಳಿದ್ರು, ಏನು ಮಾಡ್ತಿದ್ದೀರಿ ಅಂತ. ರಾಜಕೀಯಕ್ಕೆ ಬರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ, ಆ ಬಗ್ಗೆ ನಾನು ಯೋಚಿಸಿಲ್ಲ. ಆ ರೀತಿ ಇದ್ದರೆ ನಿಮಗೆ ತಿಳಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

  • AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

    AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

    – ಫೋನ್ ಕಾಲ್ ಮೂಲಕ ಖರ್ಗೆ ಜೊತೆ ಮಾತು

    ನವದೆಹಲಿ/ಬೆಂಗಳೂರು: ಪೇಸ್‌ಮೇಕರ್ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿ (PM Modi) ಆರೋಗ್ಯ ವಿಚಾರಿಸಿದ್ದಾರೆ.

    ಈ ಕುರಿತು ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಇಂದು ಖರ್ಗೆ ಅವರೊಂದಿಗೆ ಮಾತನಾಡಿದೆ. ಅವರ ಆರೋಗ್ಯ ವಿಚಾರಿಸಿ, ಆದಷ್ಟು ಬೇಗ ಗುಣಮುಖರಾಗುವಂತೆ ಹಾರೈಸಿದ್ದೇನೆ. ಅವರ ಆರೋಗ್ಯ ಹಾಗೂ ದೀರ್ಘಾಯುಷ್ಯಕ್ಕಾಗಿ ದೇವರಲ್ಲಿ ಪಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: ಕಾಫಿನಾಡಿಗೆ ಹರಿದು ಬಂದ ಪ್ರವಾಸಿಗರ ದಂಡು – ಮುಳ್ಳಯ್ಯನಗಿರಿ ಬಳಿ 5 ಕಿ.ಮೀ ಸಾಲುಗಟ್ಟಿ ನಿಂತ ವಾಹನಗಳು

    ಉಸಿರಾಟದ ಸಮಸ್ಯೆಯಿಂದಾಗಿ ಬುಧವಾರ (ಅ.1) ಮಲ್ಲಿಕಾರ್ಜುನ ಖರ್ಗೆಯವರನ್ನು ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿ, ಮಲ್ಲಿಕಾರ್ಜುನ ಖರ್ಗೆ ಅವರು ಪೇಸ್‌ಮೇಕರ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಯಶಸ್ವಿಯಾಗಿ ಪೂರ್ಣಗೊಂಡಿದೆ. ಸದ್ಯ ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದರು.

  • ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರವಾಗಿದೆ: ಸಿದ್ದರಾಮಯ್ಯ

    ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರವಾಗಿದೆ: ಸಿದ್ದರಾಮಯ್ಯ

    ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಆರೋಗ್ಯ ಸ್ಥಿರವಾಗಿದ್ದು, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ.

    ಅನಾರೋಗ್ಯದಿಂದ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಾಖಲಾಗಿರೋ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದರು. ಇದನ್ನೂ ಓದಿ: ಬಿಜೆಪಿ ಅವರಿಗೆ ಸಮಾಜದಲ್ಲಿ ಅಸಮಾನತೆ ಇರಬೇಕು ಅನ್ನೋ ಮನಸ್ಥಿತಿ ಇದೆ: ಸಿಎಂ ಕಿಡಿ

    ಬಳಿಕ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಆರಾಮವಾಗಿ ಇದ್ದಾರೆ. ಸ್ವಲ್ಪ ಆಯಾಸ ಇತ್ತು. ಅದಕ್ಕೆ ಚೆಕಪ್ ಮಾಡಿದ್ರು. ಈಗ ಸರಿ ಹೋಗಿದ್ದಾರೆ. ಚೆನ್ನಾಗಿ ಮಾತನಾಡಿದರು. ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: RSS ಶತಮಾನೋತ್ಸವ – ಭಾರತ ಮಾತೆಯ ಚಿತ್ರವಿರುವ 100 ರೂ. ನಾಣ್ಯ ಬಿಡುಗಡೆ

  • AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

    AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

    ಬೆಂಗಳೂರು: ಅನಾರೋಗ್ಯದ ಹಿನ್ನೆಲೆ ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ (MS Ramaiah Hospital) ದಾಖಲಾಗಿದ್ದಾರೆ.

    ಬಿಹಾರ ಚುನಾವಣೆ, ಸರಣಿ ಪ್ರವಾಸದಿಂದಾಗಿ ಉಸಿರಾಟದ ಸಮಸ್ಯೆ ಉಂಟಾದ ಹಿನ್ನೆಲೆ ಜನರಲ್ ಚೆಕಪ್‌ಗಾಗಿ ಆಸ್ಪತ್ರೆ ದಾಖಲಾಗಿದ್ದು, ವೈದ್ಯರು ನಿತ್ಯದ ಚೆಕಪ್ ನಡೆಸಿರುವುದಾಗಿ ತಿಳಿದುಬಂದಿದೆ.ಇದನ್ನೂ ಓದಿ: ಹಾಸನದಲ್ಲಿ ನಿಗೂಢ ಸ್ಫೋಟ ಕೇಸ್‌ – ಗಂಭೀರ ಗಾಯಗೊಂಡಿದ್ದ ದಂಪತಿ ಸಾವು; ಅನಾಥವಾದ 14 ತಿಂಗಳ ಮಗು

    ಇನ್ನೂ ಇದೇ ವೇಳೆ ವೈದ್ಯರು ಇಸಿಜಿ ಪರೀಕ್ಷೆ ಮಾಡಿದ್ದು, ಬುಧವಾರ ರಾತ್ರಿ ಖರ್ಗೆಯವರು ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ.

  • ನಿನ್ನದು 4 ಎಕ್ರೆ, ನನ್ನದು 40 ಎಕ್ರೆ ಹಾಳಾಗಿದೆ – ಕಷ್ಟ ಹೇಳಿದ ರೈತನಿಗೆ ಗದರಿದ ಖರ್ಗೆ

    ನಿನ್ನದು 4 ಎಕ್ರೆ, ನನ್ನದು 40 ಎಕ್ರೆ ಹಾಳಾಗಿದೆ – ಕಷ್ಟ ಹೇಳಿದ ರೈತನಿಗೆ ಗದರಿದ ಖರ್ಗೆ

    – ಮೋದಿಗೆ ಅಹಂಕಾರ ಜಾಸ್ತಿ, ಆ ಅಹಂಕಾರವೇ ಅವರನ್ನ ತಿನ್ನುತ್ತೆ ಅಂತ ಲೇವಡಿ
    – ಕಳೆದ ಚುನಾವಣೆಯಲ್ಲಿ ಮಹಾಮೋಸ ನಡೆದಿದೆ – ಇವಿಎಂ ನಿಷೇಧ ಸ್ವಾಗತಿಸಿದ ಖರ್ಗೆ

    ಕಲಬುರಗಿ: ಸಮಸ್ಯೆ ಹೇಳಿಕೊಂಡು ಬಂದ ವ್ಯಕ್ತಿ ವಿರುದ್ಧ ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಗರಂ ಆದ ಘಟನೆ ಕಲಬುರಗಿಯಲ್ಲಿ ನಡೆದಿದೆ.

    ಕಲಬುರಗಿಯ (Kalaburagi) ತಮ್ಮ ನಿವಾಸದಲ್ಲಿ ಖರ್ಗೆ ಮಾಧ್ಯಮದವರೊಂದಿಗೆ ಮಾತನಾಡಬೇಕಾದ್ರೆ ರೈತರೊಬ್ಬರು (Farmer) ಬಂದು ಸರ್ ತೊಗರಿ ಬೆಳೆ ಹಾನಿಯಾಗಿದೆ. ನಷ್ಟ ಉಂಟಾಗಿದೆ ಎಂದು ಅಳಲುತೊಡಿಕೊಂಡಿದ್ದಾರೆ. ಈ ವೇಳೆ, ಗರಂ ಆದ ಖರ್ಗೆ, ನಿನ್ನದು 4 ಎಕ್ರೆ ಹಾಳಾಗಿದೆ. ನನ್ನದು 40 ಎಕ್ರೆ ಹಾಳಾಗಿದೆ. ಪ್ರಚಾರಕ್ಕಾಗಿ ತೊಗರಿ ತೆಗೆದುಕೊಂಡು ಬಂದ್ದಿದ್ದೀಯಾ? ತೊಗರಿ ಅಷ್ಟೆ ಅಲ್ಲ, ಉದ್ದು, ಹೆಸರು ಕೂಡ ಹಾಳಾಗಿದ್ದು ನನಗೆ ಗೊತ್ತಿದೆ. 6 ಹಡೆದವಳ ಮುಂದೆ ಮೂರು ಹಡೆದವಳು ಹೇಳಿದಂತಾಯಿತು ಎಂದು ವ್ಯಕ್ತಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಹೋಗಿ ಮೋದಿ, ಶಾಗೆ ಕೇಳಿ ಅಂತ ಹೇಳಿದ್ದಾರೆ. ಖರ್ಗೆ ನಡೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

    ಕೇಂದ್ರ ನಮ್ಮ ಬೇಡಿಕೆಗೆ ಕಿವಿಗೊಡಲಿಲ್ಲ
    ಇದೇ ವೇಳೆ ಕೇಂದ್ರ ಸರ್ಕಾರ 2 ಸ್ಲ್ಯಾಬ್‌ಗಳಲ್ಲಿ ಜಿಎಸ್‌ಟಿ (GST) ಕಡಿತದ ಬಗ್ಗೆ ಮಾತನಾಡಿದ ಖರ್ಗೆ, ಕಳೆದ ಎಂಟು ವರ್ಷಗಳಿಂದ ನಾವು ಜಿಎಸ್‌ಟಿ ಕಡಿತಕ್ಕಾಗಿ ಹೋರಾಟ ಮಾಡುತ್ತಾ ಬಂದಿದ್ದೇವೆ. ಕೇಂದ್ರ ಸರ್ಕಾರ ನಮ್ಮ ಬೇಡಿಕೆಗೆ ಕಿವಿಗೊಡಲಿಲ್ಲ. ಸದ್ಯ ಏಕಾಏಕಿ ಕಡಿತ ಮಾಡಿದ್ದಾರೆ. ಇದಕ್ಕೆ ನಿಜವಾದ ಕಾರಣ ಮೋದಿಗೇ ಗೊತ್ತು ಅಂತಾ ಮೋದಿ (Narendra Modi) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಮೋದಿಗೆ ಅಹಂಕಾರ ಜಾಸ್ತಿ
    ಕೇಂದ್ರ ಹಾಗೂ ರಾಜ್ಯದ ಹಲವು ಪ್ರಮುಖ ವಿಚಾರಗಳ ಬಗ್ಗೆ ಮಾತನಾಡಿ, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಮೋದಿಗೆ ಅಹಂಕಾರ ಜಾಸ್ತಿ. ನಾವು ಏನು ಮಾಡಿದರೂ ನಡೆಯುತ್ತದೆ ಅನ್ನೋ ಮನೋಭಾವ ಅವರದ್ದು. ಆದರೆ, ಆ ಅಹಂಕಾರವೇ ಅವರನ್ನ ತಿನ್ನಲಿದೆ ಎಂದು ಲೇವಡಿ ಮಾಡಿದರು.

    ವಿದೇಶಾಂಗ ನೀತಿಯಲ್ಲಿ ಮೋದಿ ನಡೆಸುತ್ತಿರುವ ತಂತ್ರಗಳ ಕುರಿತು ವ್ಯಂಗ್ಯವಾಡಿದ ಖರ್ಗೆ, ಮಾತ್ತೆತಿದ್ರೆ ಟ್ರಂಪ್ ಟ್ರಂಪ್ ಅಂತಾರೆ. ಟ್ರಂಪ್ ಬೆಳಗಾದರೆ ಫೋನ್ ಮಾಡ್ತಾರೆ ಎಂದು ಹೇಳುತ್ತಾರೆ. ಆದರೆ, ಇವತ್ತು ಏನಾಗಿದೆ? ಚೀನಾವನ್ನು ಇಷ್ಟು ದಿನ ನೇಗ್ಲೆಕ್ಟ್ ಮಾಡಿ, ಈಗ ಅದೇ ದೇಶಕ್ಕೆ ಮೋದಿ ಹೋಗಿ ಬಂದಿದ್ದಾರೆ. ದೇಶಕ್ಕೆ ಸಮಸ್ಯೆ ಬಂದಾಗ ನಾವೆಲ್ಲ ಒಂದಾಗಿ ಬೆಂಬಲ ನೀಡಿದ್ದೇವೆ. ಪೆಹಲ್ಗಾಮ್ ದಾಳಿ ಸಂದರ್ಭದಲ್ಲೂ ನಾವು ಕೇಂದ್ರಕ್ಕೆ ಬೆಂಬಲ ನೀಡಿದ್ದೇವೆ. ಆದರೆ, ಬಿಜೆಪಿ ನಾಯಕರು ಪ್ರತಿಬಾರಿ ‘ಮೋದಿ ಹೈ, ಮೋದಿ ಹೈ’ ಅಂತಾರೆ ಎಂದು ಆರೋಪಿಸಿದರು.

    ಇನ್ನೂ ದ್ವೀಭಾಷಾ ಪದ್ಧತಿಯ ಕುರಿತಂತೆ ಮಾತನಾಡಿದ ಖರ್ಗೆ, ಇದು ಯಾವ ರಾಜ್ಯ, ಯಾವ ಇಲಾಖೆಯ ನಿರ್ಧಾರವೋ ಅದಕ್ಕೆ ಅವರಿಗೆ ಅಧಿಕಾರವಿದೆ. ಒಂದೊಂದು ರಾಜ್ಯದಲ್ಲಿ ಒಂದೊಂದು ರೀತಿಯಾಗಿದೆ. ತಮಿಳುನಾಡು, ಕೇರಳದಲ್ಲಿ ಈ ವ್ಯವಸ್ಥೆಯನ್ನು ಒಪ್ಪಿಕೊಳ್ಳುವುದಿಲ್ಲ. ಆದರೆ, ನಾವು ಕೇಂದ್ರದಲ್ಲಿ ಸರ್ಕಾರದಲ್ಲಿದ್ದಾಗ ರಾಷ್ಟ್ರೀಯ ಮಟ್ಟದಲ್ಲಿ ದ್ವಿಭಾಷಾ ಪದ್ಧತಿ ಅಳವಡಿಕೆ ಕುರಿತು ಚಿಂತನೆ ನಡೆಸಿದ್ದೆವು ಎಂದು ಹೇಳಿದರು.

    ಇವಿಎಮ್ ನಿಷೇಧ ಶ್ಲಾಘನೀಯ:
    ರಾಜ್ಯ ಸರ್ಕಾರ ಇವಿಎಮ್ ನಿಷೇಧಿಸಿ ಬ್ಯಾಲೆಟ್ ಪೇಪರ್ ಮರುಬಳಕೆಗೆ ಮುಂದಾಗಿರುವ ನಿರ್ಧಾರದ ಬಗ್ಗೆ ಮಾತನಾಡಿ, ಕಳೆದ ಚುನಾವಣೆಯಲ್ಲಿ ಇವಿಎಮ್‌ನಲ್ಲಿ ಮಹಾಮೋಸ ನಡೆದಿದೆ. ನಾನು ಕೂಡ ಸೋತಾಗ ಮತಗಳ್ಳತನವಾಗಿದೆ. ನನ್ನ ಅಭಿವೃದ್ಧಿ ಕಾರ್ಯಗಳಿಗೆ ಜನಮನ್ನಣೆ ಸಿಗುತ್ತದೆ ಎಂಬ ವಿಶ್ವಾಸವಿತ್ತು. ಆದರೆ, ಕಲಬುರಗಿ ಲೋಕಸಭೆಯ ಐದಾರು ಕ್ಷೇತ್ರಗಳಲ್ಲಿ ಅಸಹಜವಾಗಿ ಕಡಿಮೆ ಮತಗಳು ಬಂದಿವೆ. ನಮ್ಮ ಕಣ್ಣೆದುರೇ ಮೋಸವಾಗಿದೆ. ಅಲ್ಲದೇ, ಪಾರ್ಲಿಮೆಂಟ್‌ನಲ್ಲೇ ಪ್ರಧಾನಿ ಮೋದಿ ‘ಖರ್ಗೆ ಬಹುತ್ ಬಾರ್ ಜಿತ್ರೆ’ ಎಂದಿದ್ದರು. ಮೋದಿ ಅವರ ಈ ಮಾತಿನ ಬಳಿಕ ನನಗೆ ಬಲವಾದ ಅನುಮಾನ ಬಂದಿದೆ. ಬಿಹಾರ, ಕಲಬುರಗಿ ಸೇರಿದಂತೆ ರಾಜ್ಯದ ಅನೇಕ ಕಡೆ ವೋಟ್ ಚೋರಿ ನಡೆದಿದೆ ಎಂದು ಆರೋಪಿಸಿದರು.

  • ಖರ್ಗೆ ಕುಟುಂಬಕ್ಕೆ ನಾಯಿಮರಿ ಗಿಫ್ಟ್ ಕೊಟ್ಟ ರಾಹುಲ್ ಗಾಂಧಿ

    ಖರ್ಗೆ ಕುಟುಂಬಕ್ಕೆ ನಾಯಿಮರಿ ಗಿಫ್ಟ್ ಕೊಟ್ಟ ರಾಹುಲ್ ಗಾಂಧಿ

    ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ನಾಯಿಮರಿ ಗಿಫ್ಟ್ ಕೊಟ್ಟಿದ್ದಾರೆ.

    ‘ವೋಟ್ ಚೋರಿ’ (ಮತಗಳ್ಳತನ) ವಿರೋಧಿ ಅಭಿಯಾನದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ, ಖರ್ಗೆಯವರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿದ್ದರು. ಇದನ್ನೂ ಓದಿ: ಸೆ.9ಕ್ಕೆ ಪಂಜಾಬ್‌ಗೆ ಪ್ರಧಾನಿ ಮೋದಿ ಭೇಟಿ – ವಿಶೇಷ ಪ್ಯಾಕೇಜ್ ಘೋಷಿಸುವ ಸಾಧ್ಯತೆ

    ಭೇಟಿ ಸಂದರ್ಭದಲ್ಲಿ ಖರ್ಗೆ (Mallikarjun Kharge) ಕುಟುಂಬಕ್ಕೆ ಮುದ್ದಾದ ನಾಯಿಮರಿಯನ್ನು ಗಿಫ್ಟ್ ಆಗಿ ರಾಹುಲ್ ಗಾಂಧಿ ನೀಡಿದ್ದಾರೆ. ಖರ್ಗೆ ಕುಟುಂಬದ ಮಕ್ಕಳು ನಾಯಿಮರಿ ಜೊತೆ ಆಟವಾಡಿದರು.

    ಆಗಸ್ಟ್ 8 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ ಪಾಲ್ಗೊಂಡಿದ್ದರು. ಇದನ್ನೂ ಓದಿ: 800 ವರ್ಷ ಹಳೆಯ ಸೂಗೂರೇಶ್ವರ ದೇವಸ್ಥಾನಕ್ಕೆ ತಟ್ಟದ ಗ್ರಹಣ ದೋಷ – ವಿಶಿಷ್ಟ ವಾಸ್ತುಶಿಲ್ಪವೇ ಇಲ್ಲಿ ಶ್ರೀರಕ್ಷೆ

  • ವರುಣಾರ್ಭಟಕ್ಕೆ ಉತ್ತರ ಭಾರತ ತತ್ತರ – ವಿಶೇಷ ಪ್ಯಾಕೇಜ್ ಘೋಷಿಸಲು ಖರ್ಗೆ ಆಗ್ರಹ

    ವರುಣಾರ್ಭಟಕ್ಕೆ ಉತ್ತರ ಭಾರತ ತತ್ತರ – ವಿಶೇಷ ಪ್ಯಾಕೇಜ್ ಘೋಷಿಸಲು ಖರ್ಗೆ ಆಗ್ರಹ

    – ಮೇಘಸ್ಫೋಟ, ಭೂಕುಸಿತ, ಪ್ರವಾಹಕ್ಕೆ ನೂರಕ್ಕೂ ಅಧಿಕ ಜನರು ಬಲಿ

    ನವದೆಹಲಿ: ಉತ್ತರ ಭಾರತದಾದ್ಯಂತ ಮಳೆಯಬ್ಬರ ಮುಂದುವರೆದಿದ್ದು, ಜನಜೀವನ ತತ್ತರಿಸಿ ಹೋಗಿದೆ. ಮೇಘಸ್ಫೋಟ, ಭೂಕುಸಿತ, ಪ್ರವಾಹದಿಂದಾಗಿ 100ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, ಇನ್ನೂ ಹಲವರು ಕಾಣೆಯಾಗಿದ್ದಾರೆ. ಈ ಹಿನ್ನೆಲೆ ವಿಶೇಷ ಪ್ಯಾಕೇಜ್ ಘೋಷಿಸಲು ಕೇಂದ್ರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಆಗ್ರಹಿಸಿದ್ದಾರೆ.

    ಇತ್ತೀಚಿಗೆ ಉತ್ತರಾಖಂಡದಲ್ಲಿ (Uttarakhand) ಸಂಭವಿಸಿದ ಮೇಘಸ್ಫೋಟದಿಂದಾಗಿ (Cloudburst) ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಇದಕ್ಕೂ ಮುನ್ನ ಆಗಸ್ಟ್‌ನಲ್ಲಿ ಉಂಟಾದ ಸರಣಿ ಮೇಘಸ್ಫೋಟ, ಭೂಕುಸಿತ ಮತ್ತು ಹಠಾತ್ ಪ್ರವಾಹದಿಂದಾಗಿ 69 ಜನರು ಕಾಣೆಯಾಗಿದ್ದಾರೆ. ಹಲವು ಮನೆಗಳು ನಾಶವಾಗಿ ಪ್ರಾಣಿಗಳು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿವೆ. ಸದ್ಯ ಹವಾಮಾನ ಇಲಾಖೆ (IMD) ಉತ್ತರಾಖಂಡಕ್ಕೆ ರೆಡ್ ಅಲರ್ಟ್ ಘೋಷಿಸಿದೆ.ಇದನ್ನೂ ಓದಿ: ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿ ಕಿಡ್ನ್ಯಾಪ್ – ನಿರ್ದೇಶಕ ನಂದಕಿಶೋರ್‌ಗೆ ಹಣ ಕೊಡಿಸಿದ್ದ ರೌಡಿಶೀಟರ್‌

    ಕಳೆದ ಹದಿನೈದು ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu Kashmir) ಭಾರೀ ಮಳೆ ಹಾಗೂ ಹಠಾತ್ ಪ್ರವಾಹದಿಂದಾಗಿ 50ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಜೊತೆಗೆ ಜಮ್ಮು-ಶ್ರೀನಗರ ಹೆದ್ದಾರಿ ಕಳೆದ ಎಂಟು ದಿನಗಳಿಂದ ಬಂದ್ ಆಗಿದೆ. ಸೋಮವಾರ (ಸೆ.1) ಸುರಿದ ನಿರಂತರ ಮಳೆಯ ನಂತರ ರಾಜೌರಿ ಮತ್ತು ಸಾಂಬಾ ಜಿಲ್ಲೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಅಧಿಕಾರಿಗಳು 19 ಕುಟುಂಬಗಳನ್ನು ಸ್ಥಳಾಂತರಿಸಿದ್ದಾರೆ. ಇನ್ನೂ ದೋಡಾದಲ್ಲಿ ಮಳೆ ಮತ್ತು ಹಠಾತ್ ಪ್ರವಾಹದಿಂದಾಗಿ 500 ಮನೆಗಳಿಗೆ ಹಾನಿಯಾಗಿದೆ.

    ದೆಹಲಿ, ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ ಮತ್ತು ಹರಿಯಾಣ ಸೇರಿದಂತೆ ವಾಯುವ್ಯ ಭಾರತದಲ್ಲಿ ಸೆ.7ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರ (ಸೆ.2) ದೆಹಲಿ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರಾಖಂಡ, ರಾಜಸ್ಥಾನ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.ಇದನ್ನೂ ಓದಿ: ದೆಹಲಿಯಲ್ಲಿ ಭಾರೀ ಮಳೆ; ಪ್ರವಾಹ ಸ್ಥಿತಿಯಲ್ಲಿ ಯಮುನಾ ನದಿ – ಪಂಜಾಬ್‌ನಲ್ಲಿ ನಾಳೆವರೆಗೆ ಶಾಲಾ-ಕಾಲೇಜುಗಳಿಗೆ ರಜೆ

    ವಿಶೇಷ ಪ್ಯಾಕೇಜ್ ಘೋಷಿಸಲು ಕೇಂದ್ರಕ್ಕೆ ಖರ್ಗೆ ಆಗ್ರಹ:
    ಉತ್ತರ ಭಾರತದಲ್ಲಿ ಮಳೆಯಿಂದ ಅಪಾರ ಪ್ರಮಾಣದ ಹಾನಿಯಾದ ಹಿನ್ನೆಲೆ ವಿಶೇಷ ಪ್ಯಾಕೇಜ್ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಆಗ್ರಹಿಸಿದ್ದಾರೆ.

    ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಉತ್ತರ ಭಾರತದ ಪ್ರವಾಹ ಪೀಡಿತ ರಾಜ್ಯಗಳಿಗೆ ಕೇಂದ್ರ ಸರ್ಕಾರ ಹೆಚ್ಚಿನ ಹಣಕಾಸು ನೆರವು ಒದಗಿಸಬೇಕು. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಉತ್ತರಾಖಂಡ ಮತ್ತು ಹರಿಯಾಣ ರಾಜ್ಯಗಳಿಗೆ ಬೇಡಿಕೆಗೆ ಅನುಗುಣವಾಗಿ ಮೀಸಲಾದ ಪ್ಯಾಕೇಜ್‌ನ್ನು ತಕ್ಷಣವೇ ನೀಡಬೇಕು ಎಂದಿದ್ದಾರೆ.

    ನೈಸರ್ಗಿಕ ವಿಕೋಪದ ಹಿನ್ನೆಲೆ ಯಾವುದೇ ರಾಜಕೀಯ ಮಾಡಬಾರದು, ಎಲ್ಲಾ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಅಗತ್ಯ ಪರಿಹಾರವನ್ನು ನೀಡಲು ಪಿಎಂ ಕೇರ್ಸ್‌ ನಿಧಿಯನ್ನು ಬಳಸಿಕೊಳ್ಳಬೇಕು, ಅಗತ್ಯ ನೆರವು ನೀಡುವಂತೆ ಖರ್ಗೆ ಕರೆ ನೀಡಿದ್ದಾರೆ.ಇದನ್ನೂ ಓದಿ: ಆನೆಯ ಮೇಲೆ ಅಂಬಾರಿ ಕಂಡೆ.. ಅಂಬಾರಿಯೊಳಗೆ ಗಣೇಶನ ಕಂಡೆ..!