Tag: mallikarjuna kharge

  • ಮಲ್ಲಿಕಾರ್ಜುನ ಖರ್ಗೆ ಪುತ್ರ ಮಿಲಿಂದ್‌ ಖರ್ಗೆ ಆರೋಗ್ಯ ಸ್ಥಿತಿ ಗಂಭೀರ – ಬೆಂಗಳೂರು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ

    ಮಲ್ಲಿಕಾರ್ಜುನ ಖರ್ಗೆ ಪುತ್ರ ಮಿಲಿಂದ್‌ ಖರ್ಗೆ ಆರೋಗ್ಯ ಸ್ಥಿತಿ ಗಂಭೀರ – ಬೆಂಗಳೂರು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ

    ಬೆಂಗಳೂರು/ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಅವರ ಪುತ್ರ ಮಿಲಿಂದ್ ಖರ್ಗೆ (Milind Kharge) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕ್ಯಾನ್ಸರ್‌ನಿಂದ ಬಳಲುತ್ತಿರುವ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ (ತೀವ್ರ ನಿಗಾ ಘಟಕ) ಚಿಕಿತ್ಸೆ ಮುಂದುವರಿಸಲಾಗಿದೆ.

    ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಮತ್ತು ಮೂವರು ಗಂಡು ಮಕ್ಕಳಿದ್ದಾರೆ. ಮಿಲಿಂದ್ ಯುನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾದ ವಾರ್ಟನ್ ಸ್ಕೂಲ್‌ನಲ್ಲಿ ಎಂಬಿಎ ಪದವಿ ಪಡೆದಿದ್ದಾರೆ. ವಿದೇಶದಲ್ಲಿದ್ದ ಮಿಲಿಂದ್‌ ಅವರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮಿಲಿಂದ್ ಸಾರ್ವಜನಿಕವಾಗಿ ಹೆಚ್ಚಾಗಿ ಕಾಣಿಸಿಕೊಂಡಿಲ್ಲ. ಇದನ್ನೂ ಓದಿ: ಈಗಲೂ ಅದೇ ಖದರ್‌ – 15 ಫೋರ್‌, 8 ಸಿಕ್ಸ್‌, ಆಸೀಸ್‌ ವಿರುದ್ಧ ತೂಫಾನ್‌ ಶತಕ ಸಿಡಿಸಿದ ಎಬಿಡಿ

    ಅನಾರೋಗ್ಯದಿಂದ ಬಳಲುತ್ತಿದ್ದ ಮಿಲಿಂದ್‌ ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ (ಜು.27) ಸಂಜೆ ಬಳಿಕ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಟೇಕಾಫ್‌ ವೇಳೆ ಕೈಕೊಟ್ಟ ಲ್ಯಾಂಡಿಂಗ್‌ ಗೇರ್‌ – ಬೋಯಿಂಗ್ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ

    ಮಿಲಿಂದ್‌ ಕ್ಯಾನರ್‌ನಿಂದ ಬಳಲುತ್ತಿದ್ದು, ಸಕ್ರಾ ಆಸ್ಪತ್ರೆಯಲ್ಲಿ ಐಸಿಯು ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಕಷ್ಟ ಪಟ್ಟಿದ್ದು ನಾನು, ಕೃಷ್ಣ ಸಿಎಂ ಆದ್ರು – ಮುಖ್ಯಮಂತ್ರಿ ಸ್ಥಾನ ಸಿಗದಿದ್ದಕ್ಕೆ ಖರ್ಗೆ ಬಹಿರಂಗ ಬೇಸರ

  • ವಿಮಾನ ದುರಂತ ಸ್ಥಳಕ್ಕೆ ಭೇಟಿ – ಗಾಯಾಳುಗಳ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ ಮಲ್ಲಿಕಾರ್ಜುನ ಖರ್ಗೆ

    ವಿಮಾನ ದುರಂತ ಸ್ಥಳಕ್ಕೆ ಭೇಟಿ – ಗಾಯಾಳುಗಳ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ ಮಲ್ಲಿಕಾರ್ಜುನ ಖರ್ಗೆ

    – ಗೃಹ ಸಚಿವರು ಅಪಘಾತಗಳು ನಡೆಯುತ್ತಿರುತ್ತವೆ ಎಂಬರ್ಥದಲ್ಲಿ ಮಾತನಾಡಿದ್ದಾರೆ: ಖರ್ಗೆ ಬೇಸರ

    ಅಹಮದಾಬಾದ್‌: ಜೂನ್‌ 12ರಂದು ಏರ್‌ ಇಂಡಿಯಾ ವಿಮಾನ ದುರಂತ (Air India Plane Crash) ನಡೆದ ಅಹಮದಾಬಾದ್‌ನ ಮೇಘನಿ ನಗರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹಾಗೂ ಕರ್ನಾಟಕ ಡಿಸಿಎಂ ಡಿ.ಕೆ ಶಿವಕುಮಾರ್‌ ಕಾಂಗ್ರೆಸ್‌ ನಾಯಕರೊಂದಿಗೆ ಭೇಟಿ ನೀಡಿದ್ದರು. ಇಲ್ಲಿನ ಸಿವಿಲ್‌ ಆಸ್ಪತ್ರೆಗೆ ಭೇಟಿ ನೀಡಿದ ಖರ್ಗೆ ಅವರು ದುರಂತದಲ್ಲಿ ಗಾಯಗೊಂಡವರ ಯೋಗಕ್ಷೇಮ ವಿಚಾರಿಸಿದರು. ಅಲ್ಲದೇ ಶೀಘ್ರ ಗುಣಮುಖರಾಗುವುದಾಗಿ ಗಾಯಾಳುಗಳಿಗೆ ಧೈರ್ಯತುಂಬಿದರು.

    ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಅಹಮದಾಬಾದ್ ಇತಿಹಾಸದಲ್ಲಿ ಮರೆಯಲಾಗದ ದುರ್ಘಟನೆ. ಹಲವಾರು ಜನ ಸಾವನ್ನಪ್ಪಿದ್ದಾರೆ. ಮೃತಪಟ್ಟ ಎಲ್ಲರಿಗೂ ಶ್ರದ್ಧಾಂಜಲಿ ಅರ್ಪಿಸುತ್ತೇನೆ. ಆಸ್ಪತ್ರೆ ವೈದ್ಯ ಡಾ. ವಿಠ್ಠಲ್ ಜೊತೆ ಚರ್ಚಿಸಿ ಗಾಯಾಳುಗಳ ಬಗ್ಗೆ ಮಾಹಿತಿ ಪಡೆದಿದ್ದೇನೆ. ಅವರ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದ್ದೇನೆ. ಈ ದುರಂತದಲ್ಲಿ ಏಕೈಕ ವ್ಯಕ್ತಿ ವಿಶ್ವಾಸ್ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ, ಅವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು. ಇದನ್ನೂ ಓದಿ: Ahmedabad Tragedy | ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಮಧ್ಯಂತರ ಪರಿಹಾರ ಘೋಷಿಸಿದ ಏರ್‌ ಇಂಡಿಯಾ

    ಸರ್ಕಾರ ಗಂಭಿರವಾಗಿ ಪರಿಗಣಿಸಬೇಕು
    ಮೃತರ ಕುಟುಂಬಗಳಿಗೆ ದೇವರು ದುಃಖ ಭರಿಸುವ ಶಕ್ತಿ ಕೊಡಲಿ. ದುರ್ಘಟನೆಯನ್ನ ಸರ್ಕಾರ ಗಂಭಿರವಾಗಿ ಪರಿಗಣಿಸಬೇಕು. ಇಂತಹದೆಲ್ಲ ನಡೆಯತ್ತವೆ ಎನ್ನುವಂತೆ ಹಗುವರಾಗಿ ಪರಿಗಣಿಸಬಾರದು. ನಮ್ಮ ಹಿರಿಯ ಮುಖಂಡರು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ದುರಂತಕ್ಕೂ ಮುನ್ನ ಇದೇ ವಿಮಾನ ಪ್ಯಾರಿಸ್‌ನಿಂದ ದೆಹಲಿಗೆ ಹಾರಾಟ ನಡೆಸಿತ್ತು!

    ಕೇಂದ್ರ ಸರ್ಕಾರ ಯಾವುದನ್ನೂ ಲಘುವಾಗಿ ಪರಿಗಣಿಸಬಾರದು. ಗೃಹ ಸಚಿವರು ಅಪಘಾತಗಳು ನಡೆಯುತ್ತಿರುತ್ತವೆ, ತಪ್ಪಿಸಲಾಗಲ್ಲ ಎಂಬರ್ಥದಲ್ಲಿ ಮಾತಾಡಿದ್ದಾರೆ. ನಾವು ಈಗಲೇ ಏನು ಹೇಳಲು ಸಾಧ್ಯವಿಲ್ಲ. ಸುಮ್ಮನೆ ಆರೋಪ ಮಾಡೋದಕ್ಕೂ ಸಾಧ್ಯವಿಲ್ಲ. ಬ್ಲ್ಯಾಕ್‌ಬಾಕ್ಸ್‌ನಲ್ಲಿ ಏನಿದೆ ಅಂತ ಗೊತ್ತಾಗಬೇಕು. ಸೂಕ್ತ ತನಿಖೆ ನಂತರ ಯಾರು ಹೊಣೆಗಾರರು ಗೊತ್ತಾಗುತ್ತೆ ಎಂದು ವಿವರಿಸಿದರು. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ದುರಂತ ತನಿಖೆಗೆ ಉನ್ನತ ಮಟ್ಟದ ಸಮಿತಿ – 3 ತಿಂಗಳ ಡೆಡ್‌ಲೈನ್: ಸಚಿವ ರಾಮಮೋಹನ್ ನಾಯ್ಡು

    ಆರೋಪ ಮಾಡುವ ಸಮಯವಲ್ಲ
    ಇದೇ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್‌ (DK Shivakumar) ಮಾತನಾಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದೇವೆ. ಘಟನೆಯಿಂದ ಬಹಳ ದುಃಖ ಆಗ್ತಿದೆ. ಯಾವುದೇ ದುರಂತ ಆಗಬಾರದು. ಟೆಕ್ನಿಕಲ್ ಸಮಸ್ಯೆಯೋ.. ಏನು ಅಂತಾ ಹೇಳಕ್ಕಾಗಲ್ಲ. ಬೇರೆ ಅವರ ಮೇಲೆ ಆರೋಪ ಮಾಡುವ ಸಮಯವೂ ಇದಲ್ಲ ಎಂದು ನುಡಿದರು. ಇದನ್ನೂ ಓದಿ: Plane Crash | ಇಂಜಿನಿಯರ್‌ ಆಗುವ ಕನಸು ಕಂಡಿದ್ದ ಆಟೋ ಚಾಲಕನ ಮಗಳ ದುರಂತ ಅಂತ್ಯ

  • ಇದು ರಾಜಕೀಯ ಮಾಡುವ ಸಮಯವಲ್ಲ, ಅಮಾಯಕರಿಗೆ ನ್ಯಾಯ ಕೊಡಿಸುವ ಸಮಯ: ಮಲ್ಲಿಕಾರ್ಜುನ ಖರ್ಗೆ

    ಇದು ರಾಜಕೀಯ ಮಾಡುವ ಸಮಯವಲ್ಲ, ಅಮಾಯಕರಿಗೆ ನ್ಯಾಯ ಕೊಡಿಸುವ ಸಮಯ: ಮಲ್ಲಿಕಾರ್ಜುನ ಖರ್ಗೆ

    – ಉಗ್ರರ ವಿರುದ್ಧ ಹೋರಾಟದಲ್ಲಿ ಕೇಂದ್ರದ ಪರ ಇರುತ್ತೇವೆ; ಎಐಸಿಸಿ ಅಧ್ಯಕ್ಷ

    ನವದೆಹಲಿ: ಇದು ರಾಜಕೀಯ ಮಾಡುವ ಸಮಯವಲ್ಲ. ಮೃತಪಟ್ಟ ಅಮಾಯಕರಿಗೆ ನ್ಯಾಯ ಕೊಡಿಸುವ ಸಮಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಹೇಳಿದ್ದಾರೆ.

    ಪಹಲ್ಗಾಮ್‌ನಲ್ಲಿ (Pahalgam) ನಡೆದ ದಾಳಿಯ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ಪ್ರವಾಸಿಗರ ಹತ್ಯೆಯನ್ನು ಖಂಡಿಸಿದ್ದಾರೆ. ಉಗ್ರರು ಪ್ರವಾಸಿಗರನ್ನು ಹತ್ಯೆ ಮಾಡಿರುವ ದುರದೃಷ್ಟಕರ ಘಟನೆ ನಡೆದಿದೆ. ಉಗ್ರರು ಅಮಾಯಕರನ್ನ ಕೊಂದಿದ್ದಾರೆ. ಇದು ತುಂಬಾ ದುಃಖಕರ ಸಂಗತಿ, ಕಾಂಗ್ರೆಸ್ (Congress) ಪಕ್ಷ ಉಗ್ರರ ಈ ಕೃತ್ಯವನ್ನ ಉಗ್ರವಾಗಿ ಖಂಡಿಸುತ್ತದೆ. ಈ ಘಟನೆ ದೇಶದ ಒಗ್ಗಟ್ಟು, ಐಕ್ಯತೆ ಮೇಲಿನ ದಾಳಿ ಎಂದಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್ ಉಗ್ರರ ದಾಳಿ ಪ್ರಪಂಚಕ್ಕೇ ದೊಡ್ಡ ಆಘಾತ, ಇಂತಹ ಉಗ್ರ ಸಂಘಟನೆಗಳನ್ನು ಸದೆಬಡೆಯಬೇಕು – ಡಿಕೆಶಿ

    ಬುಧವಾರ ರಾತ್ರಿ ನಾನು ಅಮಿತ್ ಶಾ (Amit Shah) ಜೊತೆ ಹಾಗೂ ಒಮರ್ ಅಬ್ದುಲ್ಲಾರೊಂದಿಗೆ ಮಾತನಾಡಿದ್ದೇನೆ. ಜಮ್ಮು ಮತ್ತು ಕಾಶ್ಮೀರದ ನಾಯಕರ ಜೊತೆಯೂ ಮಾತಾಡಿದ್ದೇನೆ. ಯಾರು ಈ ಕೃತ್ಯದ ಹಿಂದಿದ್ದಾರೆ ಅವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಅಮಿತ್ ಶಾ ನನಗೆ ಹೇಳಿದ್ದಾರೆ. ಇದು ರಾಜಕೀಯ ಮಾಡುವ ಸಮಯ ಅಲ್ಲ. ಮೃತರಾದ ಅಮಾಯಕರಿಗೆ ನ್ಯಾಯ ಕೊಡಿಸುವ ಸಮಯ. ಹಾಗಾಗಿ ಈ ವಿಚಾರದಲ್ಲಿ ಒಟ್ಟಾಗಿ ಹೋರಾಡಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಾಲಾಕೋಟ್‌ ಏರ್‌ಸ್ಟ್ರೈಕ್‌ನಂತೆ ದಾಳಿ ಭೀತಿ – ಗಡಿಗೆ ವಿಮಾನಗಳನ್ನು ಸಾಗಿಸುತ್ತಿದೆ ಪಾಕ್‌

    ಕರ್ನಾಟಕದ ಮಂಜುನಾಥ್ ರಾವ್, ಭರತ್ ಭೂಷಣ್ ಮೃತರಾಗಿದ್ದಾರೆ. ಅವರ ಪತ್ನಿಯರಾದ ಪಲ್ಲವಿ, ಸುಜಾತ ಅವರೊಂದಿಗೆ ಮಾತನಾಡಿದ್ದೇನೆ. ಘಟನಾ ಸ್ಥಳಕ್ಕೆ ಸಂತೋಷ್ ಲಾಡ್ ಕೂಡ ಹೋಗಿದ್ದಾರೆ. ಅವರ ಜೊತೆಯೂ ಮಾತನಾಡಿದ್ದೇನೆ. ಕರ್ನಾಟಕದಿಂದ 200 ಟೂರಿಸ್ಟ್ ಹೋಗಿದ್ದಾರೆ ಎನ್ನಲಾಗಿದೆ. ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ಸರ್ಕಾರ ಕ್ರಮ ಕೈಗೊಂಡಿದೆ ಎಂದಿದ್ದಾರೆ.

    ಘಟನೆಯ ಬಗ್ಗೆ ಓಮರ್ ಅಬ್ದುಲ್ಲಾ ಅವರ ಜೊತೆಯೂ ಮಾತಾಡಿದ್ದೇನೆ. ಕೇಂದ್ರ ಸರ್ಕಾರದ ಜವಾಬ್ದಾರಿಯೂ ಹೆಚ್ಚಿದೆ. ಉಗ್ರರನ್ನ ಬಗ್ಗುಬಡಿಯಬೇಕು. ಮೃತರಿಗೆ ಸಂತಾಪ ಸೂಚಿಸುತ್ತೇವೆ. ಕಾಂಗ್ರೆಸ್ ಪಕ್ಷ ಕುಟುಂಬದವರ ಜೊತೆ ಇದೆ. ಇದು ಭಾರತದ ಮೇಲಿನ ನೇರ ದಾಳಿಯಾಗಿದೆ. ಪಾಕಿಸ್ತಾನಿ ಪ್ರಾಯೋಜಿತ ಉಗ್ರ ಚಟುವಟಿಕೆಗಳನ್ನ ಬಗ್ಗು ಬಡಿಯಬೇಕು ಎಂದು ಬರೆದಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್ ಉಗ್ರರ ದಾಳಿ; ಮಾಹಿತಿ ಕೊರತೆ, ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ: ಸಿಎಂ

    ಕಾಶ್ಮೀರದಲ್ಲಿ ಟೂರಿಸ್ಟ್‌ಗಳಿಗೆ ರಕ್ಷಣೆ ಒದಗಿಸಬೇಕು. ಕೇಂದ್ರ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಅಮರನಾಥ ಯಾತ್ರೆಯ ಸೆಕ್ಯೂರಿಟಿ ಕೂಡಾ ಟೈಟ್ ಮಾಡಬೇಕು. ಉಗ್ರರ ವಿರುದ್ಧ ಹೋರಾಟದಲ್ಲಿ ಕೇಂದ್ರ ಸರ್ಕಾರದ ಜೊತೆ ನಾವು ಇರುತ್ತೇವೆ. ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದು ಎಲ್ಲರ ಅಭಿಪ್ರಾಯ ಪಡೆಯಲಿ. ಇದು ರಾಜಕೀಯ ಮಾಡಲು ಅಲ್ಲ. ಆದರೆ ಎಲ್ಲರಿಂದಲೂ ಸಲಹೆ ಪಡೆಯಿರಿ. ಎಲ್ಲರೂ ಒಂದಾಗಿದ್ದೇವೆ ಎಂಬ ಸಂದೇಶವನ್ನು ರವಾನಿಸಿ ಎಂದಿದ್ದಾರೆ. ಇದನ್ನೂ ಓದಿ: Pahalgam Terror Attack | ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ

    ಸಂಪುಟದಲ್ಲಿ ನಾವು ಒಟ್ಟಾಗಿದ್ದೇವೆ. ನಾಳೆ ಕಾಂಗ್ರೆಸ್ ವಿಶೇಷ ಸಿಡಬ್ಲೂಸಿ ಸಭೆ ನಡೆಸಲಿದೆ. ನಾಳೆ 11ಗಂಟೆಗೆ ದೆಹಲಿಯಲ್ಲಿ ಕಾಂಗ್ರೆಸ್ ಸಿಡಬ್ಲೂಸಿ ಸಭೆ ನಡೆಯಲಿದ್ದು, ಉಗ್ರರ ಕೃತ್ಯ, ಭದ್ರತೆ ಸೇರಿದಂತೆ ಅನೇಕ ವಿಚಾರಗಳು ಚರ್ಚೆಯಾಗಲಿದೆ ಎಂದು ಹೇಳಿದ್ದಾರೆ.

  • ಮಗನನ್ನ ಸಿಎಂ ಮಾಡೋಕೆ ಖರ್ಗೆಯವರೇ ಸರ್ಕಾರ ಬೀಳಿಸುತ್ತಾರೆ: ಶ್ರೀರಾಮುಲು

    ಮಗನನ್ನ ಸಿಎಂ ಮಾಡೋಕೆ ಖರ್ಗೆಯವರೇ ಸರ್ಕಾರ ಬೀಳಿಸುತ್ತಾರೆ: ಶ್ರೀರಾಮುಲು

    – ಸಿಎಂ ಕುರ್ಚಿಗೆ ಕಂಟಕ ಬಂದಾಗ ಜಾತಿಗಣತಿ ಪ್ರಸ್ತಾಪ ಎಂದು ಕಿಡಿ

    ಕಲಬುರಗಿ: ತಮ್ಮ ಮಗನನ್ನ ಸಿಎಂ ಮಾಡಲು ಮಲ್ಲಿಕಾರ್ಜುನ ಖರ್ಗೆಯವರೇ (Mallikarjuna Kharge) ಈ ಸರ್ಕಾರ ಬಿಳಿಸುತ್ತಾರೆ ಎಂದು ಮಾಜಿ ಸಚಿವ ಶ್ರೀರಾಮುಲು (Sriramulu) ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಕಲಬುರಗಿಯಲ್ಲಿ (Kalaburagi) ನಡೆದ ಜನಾಕ್ರೋಶ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿ.ಕೆ.ಶಿವಕುಮಾರ್ (D K Shivakumar) ಈಗಾಗಲೇ ಸಿಎಂ ಗಾದಿಗೆ ಫೈಟ್ ಮಾಡುತ್ತಿದ್ದಾರೆ. ಇದರ ನಡುವೆಯೇ ಮೂರನೇ ವ್ಯಕ್ತಿ ಪ್ರವೇಶ ಮಾಡುತ್ತಾರೆ. ಮಲ್ಲಿಕಾರ್ಜುನ ಖರ್ಗೆ ತಮ್ಮ ಮಗನನ್ನು ಸಿಎಂ ಮಾಡಲು ಅವರೇ ಸರ್ಕಾರವನ್ನ ಬೀಳಿಸುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಮಂಡ್ಯ | ಜೀವನೋಪಾಯಕ್ಕಿದ್ದ ಗೂಡ್ಸ್ ಆಟೋಗೆ ದುಷ್ಕರ್ಮಿಗಳಿಂದ ಬೆಂಕಿ – 7 ಲಕ್ಷ ನಷ್ಟ

    ಮೊನ್ನೆ ಖರ್ಗೆ ಅವರು ಸರ್ಕಾರ ಬೀಳುವ ಬಗ್ಗೆ ಮಾತನಾಡಿದ್ದಾರೆ. ಮೋದಿಯವರು ಈ ಸರ್ಕಾರ ಬಿಳಿಸುತ್ತಾರೆ ಎಂದು ಹೇಳಿದ್ದಾರೆ. ಮೋದಿಯವರಿಗೆ ಏನು ಕರ್ಮ ಈ ಸರ್ಕಾರ ಬಿಳಿಸೋಕೆ. ಇಬ್ಬರ ಕಾದಾಟದಲ್ಲಿ ತಮ್ಮ ಮಗನನ್ನ ಸಿಎಂ ಮಾಡಲು ಖರ್ಗೆಯವರೇ ಪ್ಲ್ಯಾನ್‌ ಮಾಡಿದ್ದಾರೆ ಎಂದು ಗುಡುಗಿದರು. ಇದನ್ನೂ ಓದಿ: ಮೋದಿ, ಎಲಾನ್ ಮಸ್ಕ್ ಸಂಭಾಷಣೆ – ಸ್ಟಾರ್‌ಲಿಂಕ್ ಭಾರತಕ್ಕೆ ಬರುತ್ತಾ?

    ತಂದೆ, ಮಕ್ಕಳು ಸೇರಿ ರಿಪಬ್ಲಿಕ್ ಆಫ್ ಕಲಬುರಗಿಯನ್ನಾಗಿ ಮಾಡಿದ್ದಾರೆ. ನಮ್ಮ ರಾಜ್ಯಾಧ್ಯಕ್ಷರು ಅಲ್ಲಿಗೆ ಭೇಟಿ ಕೊಟ್ಟರೇ ಅವರ ಕಾರ್ಯಕರ್ತರು ದಬ್ಬಾಳಿಕೆ ಮಾಡುತ್ತಾರೆ. ಅದಕ್ಕೆ ತಕ್ಕ ಉತ್ತರ ನೀಡುತ್ತೇವೆ. ನಿನ್ನೆ ಜಾತಿಗಣತಿ ಬಗ್ಗೆ ನಿರ್ಧಾರ ಮಾಡುವುದಿಲ್ಲ ಎಂದು ಗೊತ್ತಿತ್ತು. ಹೀಗಾಗಿ ಪಲಾಯನ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಂಗಳೂರು, ಬೆಂಗಳೂರಲ್ಲಿ ಅದ್ದೂರಿ ಪಸ್ಕ ಹಬ್ಬ ಆಚರಣೆ – ಮಂಜೂಷ ಪೆಟ್ಟಿಗೆ ಸ್ಥಾಪನೆ

    ಸಿಎಂ ಕುರ್ಚಿಗೆ ಕಂಟಕ ಬಂದಾಗ ಜಾತಿಗಣತಿ ಪ್ರಸ್ತಾಪ ಮಾಡುತ್ತಾರೆ. ಅವರ ಕೈಯಲ್ಲಿ ಆಗೋದು ಅಷ್ಟೇ. ಮುಂದೆ ಒಂದು ಕಮಿಟಿ ನೇಮಕ ಮಾಡಿ ವರದಿ ತರಿಸಿಕೊಳ್ಳುತ್ತೇವೆ ಎನ್ನುತ್ತಾರೆ. ಈ ಸರ್ಕಾರ ಸುಮ್ಮನೇ ಕಾಲಹರಣ ಮಾಡುತ್ತದೆ ಎಂದು ವಾಗ್ದಾಳಿ ನಡೆಸಿದರು.

  • ಜಾತಿಗಣತಿ ರಾಜ್ಯ ಸರ್ಕಾರಕ್ಕೆ ಬಿಟ್ಟಿದ್ದು: ಮಲ್ಲಿಕಾರ್ಜುನ ಖರ್ಗೆ

    ಜಾತಿಗಣತಿ ರಾಜ್ಯ ಸರ್ಕಾರಕ್ಕೆ ಬಿಟ್ಟಿದ್ದು: ಮಲ್ಲಿಕಾರ್ಜುನ ಖರ್ಗೆ

    ಕಲಬುರಗಿ: ಆಯಾ ರಾಜ್ಯ ಸರ್ಕಾರಗಳು ಸಾಮಾನ್ಯವಾಗಿ ಜಾತಿಗಣತಿ ನಡೆಸುವುದು ವಾಡಿಕೆ. ಹಾಗಾಗಿ, ಈಗ ನಡೆಸಲಾಗಿರುವ ಜಾತಿಗಣತಿ ರಾಜ್ಯ ಸರ್ಕಾರಕ್ಕೆ ಬಿಟ್ಟಿದ್ದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಹೇಳಿದರು.

    ಕಲಬುರಗಿಯಲ್ಲಿ (Kalaburagi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ರಾಜ್ಯದಲ್ಲಿ ಸರ್ಕಾರಗಳು ಜಾತಿಗಣತಿ ಮಾಡಿಕೊಳ್ಳುತ್ತವೆ. ಇದು ಕೇಂದ್ರ ಸರ್ಕಾರದಿಂದ ಮಾಡಿರುವಂಥದ್ದಲ್ಲ. ಹಾಗಾಗಿ ರಾಜ್ಯದ ಸಚಿವ ಸಂಪುಟದಲ್ಲಿ ಏನು ಹೊರಗೆ ಬರುತ್ತದೋ ಎಂಬುದನ್ನು ನೋಡಬೇಕಿದೆ ಎಂದರು. ಇದನ್ನೂ ಓದಿ: ಜಾತಿಗಣತಿ ‘ಪಬ್ಲಿಕ್ ಟಿವಿ’ ರಿಯಾಲಿಟಿ ಚೆಕ್ – ಮನೆ ಮನೆಗೆ ಹೋಗಿ ಸರ್ವೆ ಮಾಡಿದ್ರಾ?- ಜನರು ಹೇಳಿದ್ದೇನು?

    ಇಷ್ಟಕ್ಕೂ ರಾಜ್ಯದ ಜಾತಿಗಣತಿ ವರದಿಯಲ್ಲಿ (Caste Census Report) ಏನೆಲ್ಲಾ ಅಂಶಗಳಿವೆ ಎಂಬುದು ಇನ್ನೂ ನಿಖರವಾಗಿ ನನಗೆ ಗೊತ್ತಿಲ್ಲ. ನಾನೂ ಸಹ ವರದಿ ನೋಡಿಲ್ಲ. ಜಾತಿಗಣತಿ ವರದಿ ಬಗ್ಗೆ ವಿರೋಧ ವ್ಯಕ್ತವಾಗುತ್ತಿದೆ. ಆದರೆ ಇದು ನನ್ನ ಅಭಿಪ್ರಾಯ ಅಷ್ಟೇ ಎಂದು ಸಮಜಾಯಿಷಿ ನೀಡಿದರು. ಇದನ್ನೂ ಓದಿ: ಪೀಣ್ಯ ಫ್ಲೈಓವರ್ ಮೇಲೆ ಹೊತ್ತಿ ಉರಿದ ಲಾರಿ – ಚಾಲಕ ಪಾರು

  • ನಮ್ಮ ಸರ್ಕಾರ ತೆಗೆಯಲು ಪ್ಲ್ಯಾನ್‌ ನಡೆದಿದೆ ಒಗ್ಗಟ್ಟಾಗಿ ಇರಿ: ಖರ್ಗೆ ಶಾಕಿಂಗ್ ಹೇಳಿಕೆ

    ನಮ್ಮ ಸರ್ಕಾರ ತೆಗೆಯಲು ಪ್ಲ್ಯಾನ್‌ ನಡೆದಿದೆ ಒಗ್ಗಟ್ಟಾಗಿ ಇರಿ: ಖರ್ಗೆ ಶಾಕಿಂಗ್ ಹೇಳಿಕೆ

    – ಏನೇ ಮನಸ್ತಾಪ ಇದ್ರೂ ಒಗ್ಗಟ್ಟಾಗಿರಬೇಕು; ಸಿಎಂ, ಡಿಸಿಎಂಗೆ ಕಿವಿಮಾತು
    – ಗಾಂಧಿ ಕುಟುಂಬ ದೇಶಕ್ಕಾಗಿ ಪ್ರಾಣ ಕೊಟ್ಟಿದೆ, ಮೋದಿಯವರೇ ನೀವೇನು ಮಾಡಿದ್ದೀರಿ?

    ಕಲಬುರಗಿ: ರಾಜ್ಯದಲ್ಲಿನ ನಮ್ಮ ಸರ್ಕಾರ ತೆಗೆಯಲು ಪ್ಲ್ಯಾನ್‌ ನಡೆದಿದೆ. ಒಗ್ಗಟ್ಟಾಗಿ ಇರದೇ ಹೋದರೆ ಸರ್ಕಾರ ಉರುಳಬಹುದು ಎನ್ನುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ವೇದಿಕೆಯಲ್ಲೇ ಸಿಎಂ ಹಾಗೂ ಡಿಸಿಎಂಗೆ ಎಚ್ಚರಿಕೆ ನೀಡಿದರು.

    ಕಲಬುರಗಿಯಲ್ಲಿ (Kalaburagi) ನಡೆದ ಉದ್ಯೋಗ ಮೇಳದಲ್ಲಿ ವೇದಿಕೆಯಲ್ಲಿ ಮಾತನಾಡಿದ ಅವರು, ನೀವು ಹುಷಾರಾಗಿರಬೇಕು. ಮೋದಿ, ಅಮಿತ್ ಶಾ (Amit Shah) ನಿಮ್ಮ ಸರ್ಕಾರ ಬಿಳಿಸುತ್ತಾರೆ. ನಿಮ್ಮಲ್ಲಿ ಏನೇ ಮನಸ್ಥಾಪವಿದ್ದರೂ ಒಗ್ಗಟ್ಟಾಗಿರಬೇಕು ಎಂದು ವೇದಿಕೆಯಲ್ಲಿದ್ದ ಸಿಎಂ ಹಾಗೂ ಡಿಸಿಎಂಗೆ ಕಿವಿಮಾತು ಹೇಳಿದರು. ಇದನ್ನೂ ಓದಿ: ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ – ರಾಷ್ಟ್ರಪತಿಗಳ ಅಂಗಳಕ್ಕೆ ಮಸೂದೆ

    ಕೇಂದ್ರದ ವಿರುದ್ಧ ಖರ್ಗೆ ಕಿಡಿ
    ಮೋದಿ ಸರ್ಕಾರ ಈ ಭಾಗಕ್ಕೆ ಯಾವುದೇ ಕೆಲಸ ಮಾಡಿಲ್ಲ. ನಾನು 1 ವರ್ಷದಲ್ಲಿ ಮಾಡಿದ ಕೆಲಸ, ಅವರು 10 ವರ್ಷವಾದರೂ ಮಾಡುವುದಿಲ್ಲ. ಅವರು ಒಂದೇ ಒಂದು ರೈಲು ಸಹ ಇಲ್ಲಿಯವರೆಗೆ ಬಿಟ್ಟಿಲ್ಲ. ಕಲಬುರಗಿ ಏರ್‌ಪೋರ್ಟ್‌ಗೆ ಸರ್ಕಾರದಿಂದಲೇ ಜಮೀನು ಹಾಗೂ ಹಣ ಕೊಟ್ಟಿದ್ದೇವೆ. ಆದರೆ ನಮಗೆ ಒಂದು ವಿಮಾನ ಸಹ ಬರಲ್ಲ. ಅವರ ಕಿವಿ ಹಿಂಡಿ ಒಂದೆರಡು ಫ್ಲೈಟ್‌ ಇಲ್ಲಿಗೆ ಕೊಡಬೇಕಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: Amur Falcon | ಸೈಬೀರಿಯಾ To ಆಫ್ರಿಕಾ 22 ಸಾವಿರ ಕಿ.ಮೀ ಪ್ರಯಾಣ – ವಿಶೇಷ ಆಹಾರಕ್ಕೆ ಭಾರತದಲ್ಲಿ ನಿಲುಗಡೆ!

    ವಿರೋಧ ಪಕ್ಷದವರು ಮಾತಾಡಿದರೆ ಇಡಿ ಮೂಲಕ ಹೆಣೆಯುತ್ತಾರೆ. 1937ರಲ್ಲಿ ನೆಹರೂ ಅವರು ಜನರ ಹೋರಾಟಕ್ಕಾಗಿ 3 ಭಾಷೆಯಲ್ಲಿ ಪತ್ರಿಕೆ ಆರಂಭ ಮಾಡಿದ್ದರು. ಈಗ ಇಡಿಯನ್ನು ಕೂರಿಸಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮೇಲೆ ಚಾರ್ಜ್‌ಶೀಟ್‌ ಹಾಕಿಸಿದ್ದಾರೆ. ಇವರಿಗೆ ನಾಚಿಕೆ ಆಗಬೇಕು. ಏನು ನೀವು ಅದಕ್ಕೆ ಹಣ ಕೊಟ್ಟಿದ್ರಾ? ಎಂದು ಪ್ರಶ್ನಿಸಿದರು.

    ಕ್ರಿಶ್ಚಿಯನ್ನರ ಆಸ್ತಿ ಮೇಲೂ ಕೇಂದ್ರದ ಕಣ್ಣು
    ಕೇಂದ್ರ ಸರ್ಕಾರಕ್ಕೆ ವಕ್ಫ್ ಬೋರ್ಡ್ (Waqf Board) ತಂದಿದ್ದಾರೆ. ಮುಂದಿನ ದಿನಗಳಲ್ಲಿ ಯಾರ ಜಮೀನು ಜಾಸ್ತಿ ಇದೆ ಅವರ ಮೇಲೆ ಕಣ್ಣಿಡುತ್ತದೆ. ಮುಸ್ಲಿಮರ ನಂತರ ಕ್ರಿಶ್ಚಿಯನ್ನರ ಆಸ್ತಿ ಮೇಲೆ ಕೇಂದ್ರದ ಕಣ್ಣು ಬಿದ್ದಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ

    ಅಂಬೇಡ್ಕರ್ ಜಯಂತಿ ದಿನ ಅಂಬೇಡ್ಕರ್‌ರನ್ನ ಕಾಂಗ್ರೆಸ್ ಅವಮಾನ ಎಂದು ಮೋದಿ ಹೇಳಿದ್ದಾರೆ. ಮೋದಿಯವರೇ ಅಂಬೇಡ್ಕರ್ ಅವರನ್ನು ಸಂವಿಧಾನ ಬರೆಯಲಿ ಎಂದು ಅಧ್ಯಕ್ಷ ಮಾಡಿದ್ದು ಕಾಂಗ್ರೆಸ್. ಅದೇ ಅಂಬೇಡ್ಕರ್ ಬರೆದ ಸಂವಿಧಾನ ಇನ್ನೂ ಜೀವಂತವಿದೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಮುರ್ಷಿದಾಬಾದ್ ಹಿಂಸಾಚಾರ| ಬಿಜೆಪಿ, ಬಿಎಸ್‌ಎಫ್ ಕೈವಾಡವಿದೆ: ಮಮತಾ ಬ್ಯಾನರ್ಜಿ

    ಇಡಿ, ಐಟಿ ಬಿಟ್ಟರೇ ಕಾಂಗ್ರೆಸ್ ಬಗ್ಗುತ್ತದೆ ಎಂದು ಅಂದುಕೊಂಡಿದ್ದೀರಿ. ಆದರೆ ಕಾಂಗ್ರೆಸ್ ಯಾವತ್ತು ಬಗ್ಗೋದಿಲ್ಲ. ರಾಹುಲ್ ಗಾಂಧಿ ಯಾವುದಕ್ಕೂ ಹೆದರುವುದಿಲ್ಲ. ಗಾಂಧಿ ಕುಟುಂಬ ದೇಶಕ್ಕಾಗಿ ಪ್ರಾಣ ಕೊಟ್ಟಿದೆ. ಮೋದಿಯವರೇ ನೀವೇನು ಮಾಡಿದ್ದೀರಿ ಎಂದು ವಾಗ್ದಾಳಿ ನಡೆಸಿದರು.

  • ಲೋಕಸಭೆ ಚುನಾವಣೆ 2024 – ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿಯಲ್ಲಿ ಸಿದ್ದರಾಮಯ್ಯಗೆ ಸ್ಥಾನ

    ಲೋಕಸಭೆ ಚುನಾವಣೆ 2024 – ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿಯಲ್ಲಿ ಸಿದ್ದರಾಮಯ್ಯಗೆ ಸ್ಥಾನ

    ನವದೆಹಲಿ: 2024ರ ಲೋಕಸಭಾ ಚುನಾವಣೆಗೆ (Lok Sabha Elections) ತಯಾರಿ ಶುರು ಮಾಡಿರುವ ಕಾಂಗ್ರೆಸ್‌ (Congress) ಪಕ್ಷವು ಹಿರಿಯ ನಾಯಕ ಪಿ.ಚಿದಂಬರಂ ನೇತೃತ್ವದಲ್ಲಿ 16 ಜನರ ಪ್ರಣಾಳಿಕೆ ಸಮಿತಿಯನ್ನ ಪ್ರಕಟ ಮಾಡಿದೆ. ಪ್ರಣಾಳಿಕೆಯಲ್ಲಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡಲಾಗಿದೆ.

    ಛತ್ತೀಸ್‌ಗಢದ ಮಾಜಿ ಉಪಮುಖ್ಯಮಂತ್ರಿ ಟಿ.ಎಸ್ ಸಿಂಗ್‌ದೇವ್ ಅವರನ್ನು ಚುನಾವಣಾ ಪ್ರಣಾಳಿಕೆ ಸಮಿತಿಯ ಸಂಚಾಲಕರನ್ನಾಗಿ ಮಾಡಲಾಗಿದೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಶಶಿ ತರೂರ್, ಜೈರಾಮ್ ರಮೇಶ್, ಆನಂದ್ ಶರ್ಮಾ, ರಂಜಿತ್ ರಂಜನ್, ಜಿಗ್ನೇಶ್ ಮೇವಾನಿ ಸೇರಿದಂತೆ ಹಲವು ನಾಯಕರನ್ನು ಸಮಿತಿಯಲ್ಲಿ ಸೇರಿಸಲಾಗಿದೆ. ಇದನ್ನೂ ಓದಿ: ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ದಾಳಿಯ ಮಾಸ್ಟರ್‌ ಮೈಂಡ್‌ ಮೈಸೂರಿಗ ಮನೋರಂಜನ್‌: ದೆಹಲಿ ಪೊಲೀಸರು

    ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಮಹತ್ವದ ಸಭೆಯ ನಂತರ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ (KC Venugopal) ಅವರು, ಚುನಾವಣಾ ಸಿದ್ಧತೆಗಳನ್ನು ಚುರುಕುಗೊಳಿಸಲು ಪಕ್ಷವು ಶೀಘ್ರದಲ್ಲೇ ಸಮಿತಿಗಳನ್ನು ರಚಿಸಲಿದೆ ಎಂದು ಹೇಳಿದ್ದರು. ಲೋಕಸಭೆ ಸ್ಥಾನಕ್ಕೆ ವೀಕ್ಷಕರನ್ನು ನೇಮಿಸುವುದರ ಜೊತೆಗೆ ಅಭ್ಯರ್ಥಿಗಳ ಆಯ್ಕೆಗಾಗಿ ಪಕ್ಷವು ಸ್ಕ್ರೀನಿಂಗ್ ಸಮಿತಿ ಸಹ ರಚಿಸುವುದಾಗಿ ಅವರು ತಿಳಿಸಿದ್ದರು. ಇದನ್ನೂ ಓದಿ: ಲೋಕಸಭಾ ಚುನಾವಣೆ ವೇಳೆಗೆ ಬಿಜೆಪಿ ಸೇರ್ತಾರಾ ಜನಾರ್ದನ ರೆಡ್ಡಿ?

  • INDIA ಒಕ್ಕೂಟಕ್ಕೆ ಅಶೋಕ ಚಕ್ರವಿಲ್ಲದ ತ್ರಿವರ್ಣ ಧ್ವಜ ಬಳಕೆಗೆ ಚಿಂತನೆ

    INDIA ಒಕ್ಕೂಟಕ್ಕೆ ಅಶೋಕ ಚಕ್ರವಿಲ್ಲದ ತ್ರಿವರ್ಣ ಧ್ವಜ ಬಳಕೆಗೆ ಚಿಂತನೆ

    ನವದೆಹಲಿ: ಇದೇ ಆಗಸ್ಟ್ 31 ರಂದು INDIA ಒಕ್ಕೂಟದ 3ನೇ ಸಭೆ ಮುಂಬೈನಲ್ಲಿ ನಡೆಯಲಿದ್ದು, ಈ ಸಭೆಯಲ್ಲಿ ಒಕ್ಕೂಟಕ್ಕೆ ಸಾಮಾನ್ಯ ಧ್ವಜ (National Flag) ಹೊಂದುವ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.

    ಮೂಲಗಳ ಪ್ರಕಾರ, ಅಶೋಕ ಚಕ್ರವಿಲ್ಲದ ತ್ರಿವರ್ಣ ಧ್ವಜವನ್ನು ಆಯ್ಕೆ ಮಾಡುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ. ಒಕ್ಕೂಟದಲ್ಲಿರುವ ಎಲ್ಲ ಪಕ್ಷಗಳು ತಮ್ಮದೇ ಆದ ಚಿಹ್ನೆ ಮತ್ತು ಧ್ವಜವನ್ನ ಹೊಂದಿವೆ. ಆದರೆ ಒಕ್ಕೂಟಕ್ಕೆ ಒಂದು ಸಾಮಾನ್ಯ ಧ್ವಜ ಹೊಂದಿವ ಬಗ್ಗೆ ಚರ್ಚೆ ನಡೆದಿದೆ. ಒಕ್ಕೂಟದ ಹೆಸರು INDIA ಆಗಿರುವ ಹಿನ್ನೆಲೆ ಅದಕ್ಕೆ ಪೂರಕ ಎನ್ನುವಂತೆ ರಾಷ್ಟ್ರಧ್ವಜವನ್ನೇ ಹೋಲುವ ಧ್ವಜದ ಮೇಲೆ ಆಸಕ್ತಿ ಹೆಚ್ಚಿದೆ. ಇದನ್ನೂ ಓದಿ: ಯುವತಿ ಪ್ರಕರಣ ವಾಪಸ್ ಪಡೆಯದ್ದಕ್ಕೆ ಆಕೆಯ ತಾಯಿಯನ್ನೇ ವಿವಸ್ತ್ರಗೊಳಿಸಿ ಥಳಿಸಿದ್ರು!

    ಮುಂಬೈ ಸಭೆಯ ನಂತರ ಸೆಪ್ಟೆಂಬರ್‌ನಲ್ಲಿ ರಾಷ್ಟ್ರವ್ಯಾಪಿ ರ‍್ಯಾಲಿಗಳು ಪ್ರಾರಂಭವಾಗಲಿದ್ದು, ಬಿಜೆಪಿಯೇತರ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ 6 ರಿಂದ 7 ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ರ‍್ಯಾಲಿಗಳು ಮತ್ತು ಸಭೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನ ವೈಯಕ್ತಿಕ ಗುರಿಯಾಗಿಸುವ ಬದಲು ಸರ್ಕಾರದ ನೀತಿಗಳು, ಜಾತಿ ಆಧಾರಿತ ಜನಗಣತಿ, ಹಣದುಬ್ಬರ, ನಿರುದ್ಯೋಗ ಮತ್ತು ಇತರ ಸಾಮಾಜಿಕ ಕಾಳಜಿಗಳಂತಹ ವಿವಿಧ ವಿಷಯಗಳ ಮೇಲೆ ಟಾರ್ಗೆಟ್‌ ಮಾಡಲು ನಿರ್ಧರಿಸಿದೆ. ಇದನ್ನೂ ಓದಿ: ಬಾಲಕಿಯ ಮೇಲೆ ಸರ್ಕಾರಿ ಅಧಿಕಾರಿ ಅತ್ಯಾಚಾರ – ಸ್ವಯಂ ದೂರು ದಾಖಲಿಸಿಕೊಂಡ ದೆಹಲಿ ಹೈಕೋರ್ಟ್

    ವಿರೋಧ ಪಕ್ಷಕ್ಕೆ ಅಧ್ಯಕ್ಷರು, ಒಬ್ಬರು ಮುಖ್ಯ ಸಂಯೋಜಕರು ಮತ್ತು 4 ರಿಂದ 5 ಪ್ರಾದೇಶಿಕ ಸಂಯೋಜಕರನ್ನ ನೇಮಿಸುವ ಪ್ರಸ್ತಾವನೆ ಇದೆ ಎಂದು ಮೂಲಗಳು ತಿಳಿಸಿವೆ. ಉತ್ತರ ಪ್ರದೇಶದ 80 ಲೋಕಸಭಾ ಸ್ಥಾನಗಳ ಪೈಕಿ 40 ಸ್ಥಾನಗಳಿಗೆ ಬೇಡಿಕೆಯಿಟ್ಟಿರುವ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ನಿಲುವಿನ ಬಗ್ಗೆ ಮುಂಬೈನಲ್ಲಿ ನಡೆಯುವ ಸಭೆಯಲ್ಲಿ ವಿರೋಧ ಪಕ್ಷದ ನಾಯಕರು ಚರ್ಚಿಸಲಿದ್ದಾರೆ. ಕೆಲವು ಸಣ್ಣ ಪಕ್ಷಗಳನ್ನ ವಿರೋಧ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ.

    INDIA ಒಕ್ಕೂಟದ ಮೊದಲ ಸಭೆ ಜೂನ್‌ನಲ್ಲಿ ಪಾಟ್ನಾದಲ್ಲಿ ನಡೆದರೆ, 2ನೇ ಸಭೆ ಜುಲೈ ಮಧ್ಯದಲ್ಲಿ ಬೆಂಗಳೂರಿನಲ್ಲಿ ನಡೆಯಿತು. 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನ (NDA) ಎದುರಿಸಲು 26 ಪಕ್ಷಗಳು ಒಟ್ಟಾಗಿ ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲಯನ್ಸ್‌ (INDIA) ಒಕ್ಕೂಟ ಸ್ಥಾಪಿಸಿಕೊಂಡಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗುಜರಾತ್‍ನ ತೂಗು ಸೇತುವೆ ಕುಸಿತ ವಿಚಾರದಲ್ಲಿ ರಾಜಕೀಯ ಮಾಡಲ್ಲ: ಮಲ್ಲಿಕಾರ್ಜುನ ಖರ್ಗೆ

    ಗುಜರಾತ್‍ನ ತೂಗು ಸೇತುವೆ ಕುಸಿತ ವಿಚಾರದಲ್ಲಿ ರಾಜಕೀಯ ಮಾಡಲ್ಲ: ಮಲ್ಲಿಕಾರ್ಜುನ ಖರ್ಗೆ

    ನವದೆಹಲಿ: ಗುಜರಾತ್ (Gujarat) ಮೋರ್ಬಿ ಸೇತುವೆ (Morbi Bridge) ಕುಸಿತದಿಂದ ಅನೇಕ ಮಂದಿ ಪ್ರಾಣಕಳೆದುಕೊಂಡಿರುವ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಬೇಸರ ವ್ಯಕ್ತಪಡಿಸಿದ್ದು, ಸೇತುವೆ ಕುಸಿತಕ್ಕೆ ಕಾರಣವೇನೆಂಬುವುದರ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

    ಘಟನೆಯಲ್ಲಿ ಮೃತಪಟ್ಟಿದವರಿಗೆ ಸಂತಾಪ ಸೂಚಿಸುತ್ತೇನೆ. ಉದ್ಘಾಟನೆಗೊಂಡ ಕೆಲವೇ ದಿನಗಳಲ್ಲಿ ಸೇತುವೆ ಯಾಕೆ ಕುಸಿದಿದೆ. ಅಲ್ಲಿ ಇಷ್ಟು ಜನರು ಓಡಾಡಲು ಅವಕಾಶ ನೀಡಿದವರು ಯಾರು? ಈ ಎಲ್ಲದರ ಬಗ್ಗೆ ಸುಪ್ರೀಂಕೋರ್ಟ್ (Supreme Court) ಅಥವಾ ಹೈಕೋರ್ಟ್ (High Court) ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಯಬೇಕು. ಮೃತರ ಕುಟುಂಬಕ್ಕೆ ಪರಿಹಾರ ಸೇರಿದಂತೆ ಎಲ್ಲ ಅಗತ್ಯ ನೆರವು ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮಹೇಶ್ ಕಮಾಲ್, ಬಿಜೆಪಿಗೆ ಭರ್ಜರಿ ಗೆಲುವು – 7 ಅನರ್ಹರಲ್ಲಿ 6 ಮಂದಿ ಜಯಭೇರಿ

    ತಮ್ಮ ಪಕ್ಷದ ಕಾಂಗ್ರೆಸ್ ನಾಯಕರು ಕೂಡ ಮೋರ್ಬಿಗೆ ಭೇಟಿ ನೀಡಿ, ಸಂತ್ರಸ್ತ ಕುಟುಂಬಸ್ಥರಿಗೆ ಸಹಾಯ ಮಾಡಲಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಹ ಘಟನಾ ಸ್ಥಳಕ್ಕೆ ಹೋಗಲಿದ್ದಾರೆ. ನಾವು ಕೂಡ ಸಹಾಯ ಮಾಡಲು ಪ್ರಯತ್ನಿಸುತ್ತೇವೆ. ಈ ವಿಚಾರದಲ್ಲಿ ನಾವು ಯಾವುದೇ ರಾಜಕೀಯ ಮಾಡಲು ಬಯಸುವುದಿಲ್ಲ ಮತ್ತು ಈಗಲೇ ಯಾರನ್ನೂ ದೂಷಿಸಲು ಬಯಸುವುದಿಲ್ಲ. ತನಿಖಾ ವರದಿ ಬಂದ ನಂತರ ಏನು ಮಾಡುತ್ತಾರೆ ಅಂತ ನೋಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೊಮ್ಮಗಳು ಮದುವೆ ಆಗದೇ ಮಗು ಮಾಡಿಕೊಂಡರೂ ಓಕೆ: ಜಯಾ ಬಚ್ಚನ್ ಅಚ್ಚರಿ ಹೇಳಿಕೆ

    Live Tv
    [brid partner=56869869 player=32851 video=960834 autoplay=true]

  • ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣ ವಚನ

    ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣ ವಚನ

    ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಇಂದು ಕಾಂಗ್ರೆಸ್ ಅಧ್ಯಕ್ಷರಾಗಿ (Congress President) ಪ್ರಮಾಣ ವಚನ ಸ್ವೀಕರಿಸಿದರು.

    24 ವರ್ಷಗಳ ನಂತರ ಈ ಹುದ್ದೆಯನ್ನು ಅಲಂಕರಿಸುತ್ತಿರುವ ಮೊದಲ ಗಾಂಧಿಯೇತರ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಅವರು ಪಾತ್ರರಾಗಿದ್ದಾರೆ. ಜೊತೆಗೆ ಸುಮಾರು 5 ದಶಕಗಳ ಬಳಿಕ ಕನ್ನಡಿಗರೊಬ್ಬರಿಗೆ ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷವಾದ ಕಾಂಗ್ರೆಸ್‍ನ ನೇತೃತ್ವ ಸಿಕ್ಕಿದೆ.

    ಎಐಸಿಸಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು. ಈ ವೇಳೆ ಕಾರ್ಮಿಕನ ಮಗನಾದ ನಾನು, ಕಾಂಗ್ರೆಸ್ ಕಾರ್ಯಕರ್ತನಾಗಿದ್ದ ನನ್ನನ್ನು ಕಾಂಗ್ರೆಸ್ ಅಧ್ಯಕ್ಷನನ್ನಾಗಿ ನೇಮಿಸಲಾಗಿದೆ. ನನ್ನ ಕೆಲಸದಿಂದ, ನನ್ನ ಅನುಭವದೊಂದಿಗೆ, ಪಕ್ಷವನ್ನು ಮೇಲೆತ್ತಲು ಕೈಲಾದಷ್ಟು ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡುತ್ತೇನೆ ಎಂದು ಖರ್ಗೆ ಪ್ರಮಾಣ ವಚನ ಸ್ವೀಕರಿಸಿದರು.

    ಇದೇ ವೇಳೆ ಸೋನಿಯಾ ಗಾಂಧಿ ಅವರು, ಬಿಕ್ಕಟ್ಟಿನ ಸಮಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿದ್ದಕ್ಕಾಗಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದ ತಿಳಿಸಿದರು. ಅವರ ನಾಯಕತ್ವದಲ್ಲಿ ಎರಡು ಯುಪಿಎ ಸರ್ಕಾರಗಳು ರಚನೆಯಾದವು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇನ್ನೂ ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್‍ಘಾಟ್‍ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸಿದರು.

    Live Tv
    [brid partner=56869869 player=32851 video=960834 autoplay=true]