Tag: mallikarjuna kharge

  • ಉಮೇಶ್ ಜಾಧವ್ ಬಿಜೆಪಿಯವರಿಗೆ ಮೊದಲೇ ಫಿಕ್ಸ್ ಆಗಿದ್ದ: ಶಾಮನೂರು ಕಿಡಿ

    ಉಮೇಶ್ ಜಾಧವ್ ಬಿಜೆಪಿಯವರಿಗೆ ಮೊದಲೇ ಫಿಕ್ಸ್ ಆಗಿದ್ದ: ಶಾಮನೂರು ಕಿಡಿ

    ದಾವಣಗೆರೆ: ಚಿಂಚೋಳಿ ಶಾಸಕ ಉಮೇಶ್ ಜಾಧವ್ ಬಿಜೆಪಿಯವರಿಗೆ ಮೊದಲೇ ಫಿಕ್ಸ್ ಆಗಿದ್ದ. ಮುಂಚಿತವಾಗಿಯೇ ದುಡ್ಡು ಪಡೆದಿದ್ದ ಅದಕ್ಕಾಗಿಯೇ ರಾಜೀನಾಮೆ ನೀಡಿದ್ದಾನೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಕಿಡಿಕಾರಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಮೇಶ್ ಜಾಧವ್ ಮೊದಲೇ ಬಿಜೆಪಿ ಅವರೊಂದಿಗೆ ಕೈ ಜೋಡಿಸಿದ್ದಾನೆ. ಜಾಧವ್ ಹಣ ಪಡೆದು ಬಿಜೆಪಿಗೆ ಸೇರಿದ್ದಾನೆ ಎಂದರು. ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಟಿಕೆಟ್ ಗೊಂದಲ ಶೀಘ್ರ ಬಗೆಹರಿಯುತ್ತದೆ. ಲೋಕಸಭೆ ಚುನಾವಣೆಗೆ ದಾವಣಗೆರೆಯಲ್ಲಿ ಜೆಡಿಎಸ್‍ನವರಿಗೆ ಟಿಕೆಟ್ ಸಿಗುವುದಿಲ್ಲ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಸ್ಪರ್ಧಿಸುತ್ತಾರೆ ಎಂದು ತಿಳಿಸಿದ್ದಾರೆ.

    ಮಲ್ಲಿಕಾರ್ಜುನ ಖರ್ಗೆ ಇದು ನನ್ನ ಕೊನೆ ಚುನಾವಣೆ ಎಂದ ವಿಚಾರವಾಗಿ ಪ್ರತಿಕ್ರಿಯಿಸಿ, ರಾಜಕಾರಣಿಗಳು ಅದನ್ನು ಹೇಳುತ್ತಿರುತ್ತಾರೆ, ಕೊನೆ ಚುನಾವಣೆ ಅಂತ ಮತ್ತೆ ಚುನಾವಣೆಗೆ ನಿಲ್ಲುತ್ತಾರೆ. ಜಿ.ಎಂ ಸಿದ್ದೇಶ್ವರ ಅವರು ಕೂಡ ಕೊನೆ ಚುನಾವಣೆ ಎಂದಿದ್ದಾರೆ. ಇದು ಅವರ ಕೊನೆ ಚುನಾವಣೆ ಆಗಬಹುದು, ಇಲ್ಲ ಜನರೇ ಅವರನ್ನು ಮನೆಗೆ ಕಳುಹಿಸಬಹುದು ಎಂದು ಶಾಮನೂರು ಶಿವಶಂಕರಪ್ಪ ಕುಟುಕಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಧಾನಿ ಮೋದಿಗೆ ಸಚಿವ ಪ್ರಿಯಾಂಕ್ ಖರ್ಗೆ ಪಂಥಾಹ್ವಾನ

    ಪ್ರಧಾನಿ ಮೋದಿಗೆ ಸಚಿವ ಪ್ರಿಯಾಂಕ್ ಖರ್ಗೆ ಪಂಥಾಹ್ವಾನ

    ಮಂಡ್ಯ: ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಮೋದಿಯವರೇ ಬಂದು ನಿಲ್ಲಲಿ. ಅವರಿಗೂ ಸ್ವಾಗತ ಮಾಡುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಂಡ್ಯದ ಮದ್ದೂರಿನಲ್ಲಿ ಪಂಥಾಹ್ವಾನ ನೀಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಉಮೇಶ್ ಜಾಧವ್ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಾರೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದರು. ಇದು ಪ್ರಜಾಪ್ರಭುತ್ವ ಯಾರೂ ಬೇಕಾದ್ರು ಸ್ಪರ್ಧೆ ಮಾಡಬಹುದು. ನೀವು ಬೇಕಾದ್ರು ಸ್ಪರ್ಧೆ ಮಾಡಬಹುದು. ಬೇಕಾದ್ರೆ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಮೋದಿಯವರೇ ಸ್ಪರ್ಧೆ ಮಾಡಲಿ. ಅವರಿಗೂ ಆಹ್ವಾನ ನೀಡುತ್ತೇವೆ ಎಂದು ಹೇಳಿದ್ದಾರೆ.

    ಇದೇ ವೇಳೆ ಮಂಡ್ಯ ಕ್ಷೇತ್ರದಿಂದ ಸುಮಲತಾ ಅವರಿಗೆ ಟಿಕೆಟ್ ನೀಡುವ ಬಗ್ಗೆ ಪ್ರತಿಕ್ರಿಯಿಸಿ, ಸುಮಲತಾ ಅವರ ಸ್ಪರ್ಧೆ ಹೈ ಕಮಾಂಡ್‍ಗೆ ಬಿಟ್ಟ ವಿಚಾರ. ಟಿಕೆಟ್ ನಿರ್ಧರಿಸುವ ಮಟ್ಟಕ್ಕೆ ನಾನು ಬೆಳೆದಿಲ್ಲ. ಆದ್ರೆ ಮಂಡ್ಯದಲ್ಲಿ ಈಗಾಗ್ಲೇ ಜೆಡಿಎಸ್ ಸಂಸದರಿದ್ದಾರೆ ಅನ್ನೋ ಮೂಲಕ ಜೆಡಿಎಸ್ ಗೆ ಟಿಕೆಟ್ ನೀಡುವ ಸಾಧ್ಯತೆಯನ್ನು ಪರೋಕ್ಷವಾಗಿ ಹೇಳಿದ್ದಾರೆ.

    ಬಡ್ತಿ ಮೀಸಲಾತಿ ವಿಚಾರದ ಬಗ್ಗೆ ಮಾತನಾಡುತ್ತ, ಈ ಬಗ್ಗೆ ರಾಜ್ಯ ಸರ್ಕಾರದಿಂದ ನ್ಯಾಯ ಒದಗಿಸೋ ಕೆಲಸ ಮಾಡಿದ್ದೇವೆ. ಯಾರಿಗೂ ಅನ್ಯಾಯವಾಗದ ರೀತಿಯಲ್ಲಿ ಪ್ರಯತ್ನ ಮಾಡಿದ್ದೇವೆ. ಅಹಿಂಸಾ, ಎಸ್ಸಿ, ಎಸ್ಟಿ ಪಂಗಡ ಸೇರಿ ಯಾರಿಗೂ ಅನ್ಯಾಯವಾಗದಂತೆ ಕಾನೂನು ಮಂತ್ರಿ ಹಾಗೂ ಸಿಎಂ ಚರ್ಚೆ ನಡೆಸ್ತಾರೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕ್ಷೇತ್ರದಲ್ಲಿ ನನ್ನನ್ನು ಬಲಿಕಾ ಬಕ್ರಾ ಮಾಡಲಾಗ್ತಿದೆ: ಪ್ರಿಯಾಂಕ್ ಖರ್ಗೆ

    ಕ್ಷೇತ್ರದಲ್ಲಿ ನನ್ನನ್ನು ಬಲಿಕಾ ಬಕ್ರಾ ಮಾಡಲಾಗ್ತಿದೆ: ಪ್ರಿಯಾಂಕ್ ಖರ್ಗೆ

    ಯಾದಗಿರಿ: ಕ್ಷೇತ್ರದಲ್ಲಿ ನನ್ನನ್ನು ಬಲಿಕಾ ಬಕ್ರಾ ಮಾಡಲಾಗುತ್ತಿದೆ. ಪಕ್ಷ ಬಿಟ್ಟು ಹೋಗಲು ಸದ್ಯ ಎಲ್ಲರಿಗೂ ಒಂದು ಕಾರಣ ಬೇಕಾಗಿದ್ದಕ್ಕೆ ನನ್ನನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ಹೊರಹಾಕಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಮೇಶ್ ಜಾಧವ್ ಬಗ್ಗೆ ಪ್ರತಿಕ್ರಿಯೆ ನೀಡಿದರು. ಇಲ್ಲಿಯವರೆಗೆ ಉಮೇಶ್ ಜಾದವ್ ನನ್ನ ಕೈಗೆ ಸಿಕ್ಕಿಲ್ಲ ಮತ್ತು ಕರೆ ಮಾಡಿದ್ರು ಸಂಪರ್ಕ ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್ ನಾಯಕರು ಪಕ್ಷ ಬಿಟ್ಟು ಹೋಗಲು ನನ್ನನ್ನು ಬಳಸಿಕೊಳ್ಳುತ್ತಿದ್ದಾರೆ. ನನ್ನನ್ನು ಬಲಿಕಾ ಬಕ್ರಾ ಮಾಡುತ್ತಿದ್ದಾರೆ. ಶಾಸಕರು ಕಾಂಗ್ರೆಸ್ ಬಿಟ್ಟು ಹೋಗಿರೋದಕ್ಕೆ ಅವರ ಕೆಲಸದ ಭಾರವನ್ನು ನಾವು ಹೊತ್ತುಕೊಂಡು ಕರ್ತವ್ಯ ನಿರ್ವಸುತ್ತಿದ್ದೇವೆ. ಪಕ್ಷದಿಂದ ಹೊರಹೋಗಲು ಏನಾದರೂ ಕಾರಣ ಬೇಕಲ್ಲ ಅದಕ್ಕಾಗಿ ನನ್ನನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

    ಮಲ್ಲಿಕಾರ್ಜುನ ಖರ್ಗೆಗೆ ಸೋಲಿನ ಭೀತಿ ವಿಚಾರವಾಗಿ ಪ್ರತಿಕ್ರಿಯಿಸಿ, ಯಾದಗಿರಿಯಲ್ಲಿ ನಮ್ಮ ತಂದೆ ಅವರಿಗೆ ಅಪಾರ ಸಂಖ್ಯೆಯ ಬೆಂಬಲಿಗರಿದ್ದಾರೆ. ಅವರಿಗ್ಯಾಕೆ ಸೋಲಿನ ಭೀತಿ ಬರುತ್ತದೆ. ಅವರಿಂದ ಬಿಜೆಪಿಯವರಿಗೆ ಸೋಲಿನ ಭೀತಿ ಇದೆ. ಆದರಿಂದ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

    ಯಾದಗಿರಿ ಜಿಲ್ಲೆಯಲ್ಲಿ ಸಂಪುಟ ಉಪ ಸಮಿತಿ ತಂಡ ಬರ ಅಧ್ಯಯನ ಪ್ರವಾಸ ನಡೆಸುತ್ತಿದ್ದು, ಜಿಲ್ಲೆಯ ಚಕ್ರ ಗ್ರಾಮದಲ್ಲಿ ಸಚಿವ ಬಂಡೆಪ್ಪ ಕಾಂಶೆಂಪುರ, ಪ್ರಿಯಾಂಕ್ ಖರ್ಗೆ ಹಾಗೂ ರಾಜಶೇಖರ ಬಿ ಪಾಟೀಲ್ ಒಳಗೊಂಡ ಸಚಿವರ ತಂಡ ಮತ್ತು ಇತರೆ ಅಧಿಕಾರಿಗಳು ಭೇಟಿ ನೀಡಿ ಬರ ಪರಿಶೀಲನೆ ನಡೆಸಿದ್ದಾರೆ. ಚಕ್ರ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ, ಬೋರವೆಲ್, ಜೋಳದ ಬೆಳೆ ಪರಿಶೀಲಿಸಿದ ತಂಡ, ಇದೇ ಫೆ.4 ರಂದು ಬರ ಪರಿಶೀಲನೆ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಮಿತಿ ಸಲ್ಲಿಸುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಪ್ರಧಾನಿ ಹೇಳಿಕೆಗೆ ಸಿಡಿದೆದ್ದ ರಾಜ್ಯ ನಾಯಕರು..!

    ಪ್ರಧಾನಿ ಹೇಳಿಕೆಗೆ ಸಿಡಿದೆದ್ದ ರಾಜ್ಯ ನಾಯಕರು..!

    ಬೆಂಗಳೂರು: ಬಿಜೆಪಿ ಸಭೆಯಲ್ಲಿ ಕಾಂಗ್ರೆಸ್ ಪಕ್ಷದವರು ಸಿಎಂ ಕುಮಾರಸ್ವಾಮಿ ಅವರನ್ನು ಕ್ಲರ್ಕ್ ರೀತಿ ನೋಡಿಕೊಳ್ಳುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಈ ವಿಚಾರಕ್ಕೆ ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರು ಗರಂ ಆಗಿದ್ದಾರೆ.

    ಈ ವಿಚಾರವಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಇದು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಕ್ಕೆ ಸಂಬಂಧಪಟ್ಟ ವಿಚಾರ. ನಮ್ಮ ಉಸಾಬರಿ ಮೋದಿಯವರಿಗೆ ಯಾಕೆ? ಅವರು ಯಾರು ಹೇಳೋದಕ್ಕೆ. ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರ ಮಾಡಿಕೊಂಡಿರೋದು, ಮೋದಿ ಅವರು ಮೈತ್ರಿಯಲ್ಲಿ ಇದ್ದಾರಾ? ಮೋದಿಯವರು ರಾಜಕೀಯವಾಗಿ ಹೀಗೆ ಹೇಳಿದ್ದಾರೆ. ಅವರಿಗೇನು ಗೊತ್ತಿಲ್ಲಾ. ಸುಮ್ಮನೆ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಅವರನ್ನು ಎತ್ತಿಕಟ್ಟುವ ಕೆಲಸ ಮಾಡ್ತಿದ್ದಾರೆ ಅಂತಾ ಕಿಡಿಕಾರಿದರು.

    ಮೋದಿಯವರ ಹೇಳಿಕೆಗೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿ, ಮೋದಿಯವರ ಪಾರ್ಟಿಯಲ್ಲಿ ಯಾರೂ ಹೇಳೋರಿಲ್ಲ, ಕೇಳೋರಿಲ್ಲ. ಇಂತಹವರ ಸಲಹೆಗಳನ್ನ ನಾವು ತೆಗೆದುಕೊಳ್ತೀವಾ? ಕ್ಯಾಬಿನೆಟ್‍ನಲ್ಲಿ ಅವರ ಪಕ್ಷದವರ ಮಾತನ್ನೇ ಅವರು ಕೇಳಲ್ಲ. ಸುಮ್ಮನೆ ಆರೋಪ ಮಾಡ್ತಾರೆ ಅಂತ ಪ್ರಧಾನಿಗೆ ತಿರುಗೇಟು ನೀಡಿದ್ದಾರೆ.

    ಘಟಬಂಧನ ಕಳ್ಳರ ಸಂತೆ ಎಂಬ ಮೋದಿ ಆರೋಪ ವಿಚಾರ ಮಾತನಾಡಿ, ಪ್ರಧಾನಿ ನಾಲಗೆ ಬಿಗಿ ಹಿಡಿದು ಮಾತನಾಡಬೇಕು. ಅವರ ಸ್ಥಾನಕ್ಕೆ ಘನತೆಗೆ ತಕ್ಕಂತೆ ನಡೆದುಕೊಳ್ಳಬೇಕು. ಅವರ ತೂಕಕ್ಕೆ ಸರಿಯಾಗಿ ಮಾತನಾಡಬೇಕು. ಎನ್‍ಡಿಎ ಯಾವುದು, ಅದೂ ಘಟಬಂಧನ ಅಲ್ಲವೇ? ಯುಪಿಎ ಕೂಡ ಘಟಬಂಧನವೇ ಎಂದು ಹರಿಹಾಯ್ದಿದ್ದಾರೆ. ಅಷ್ಟೇ ಅಲ್ಲದೆ ರಫೇಲ್ ವಿಚಾರದಲ್ಲಿ ಯಾಕೆ ಚರ್ಚೆಗೆ ಬರುತ್ತಿಲ್ಲ. ಜವಾಬ್ದಾರಿಯುತವಾಗಿ ಪ್ರಧಾನಿ ನಡೆದುಕೊಳ್ಳಬೇಕು ಎಂದು ಪ್ರಧಾನಿ ಹೇಳಿಕೆಯನ್ನು ವಿರೋಧಿಸಿದ್ದಾರೆ.

    ಈ ಸಂಬಂಧ ಸಿಎಂ ಕುಮಾರಸ್ವಾಮಿಯವರು ಪ್ರತಿಕ್ರಿಯಿಸಿ, ನನ್ನ ಬಗ್ಗೆ ಕೆಲವು ಸುಳ್ಳು ಸುದ್ದಿಗಳು ಓಡಾಡುತ್ತಿದೆ. ಅದನ್ನೇ ನಂಬಿ ಪ್ರಧಾನಿ ಮೋದಿ ಅವರು ನನ್ನ ಬಗ್ಗೆ ತಪ್ಪಾಗಿ ಹೇಳುತ್ತಿದ್ದಾರೆ. ಸಾಲ ಮನ್ನಾ ವಿಚಾರ ಆದ ಮೇಲೆ ಇದು ಎರಡನೇ ಬಾರಿ ಪ್ರಧಾನಿ ಅವರು ಸುಳ್ಳು ಮಾಹಿತಿಗಳಿಗೆ ಪ್ರತಿಕ್ರಿಯಿಸಿದ್ದು. ಇಂತಹ ಹೇಳಿಕೆಗಳು ಮೈತ್ರಿ ಸರ್ಕಾರ ಅಥವಾ ಸರ್ಕಾರದ ಅಭಿವೃದ್ಧಿಯನ್ನು ಬೀಳಿಸಲು ಸಾಧ್ಯವಿಲ್ಲ ಅಂತ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೈ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದ ಖರ್ಗೆ

    ಕೈ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದ ಖರ್ಗೆ

    ಕಲಬುರಗಿ: ಸಚಿವ ಸ್ಥಾನ ಹಂಚಿಕೆ ಮಾಡಿದವರೆ ಪಕ್ಷದಲ್ಲಿ ಉಂಟಾಗಿರುವ ಅಸಮಾಧಾನವನ್ನು ಸರಿಪಡಿಸಬೇಕು ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಹೇಳುವ ಮೂಲಕ ಪರೋಕ್ಷವಾಗಿ ‘ಕೈ’ ನಾಯಕರ ವಿರುದ್ಧ ಸಂಸದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ, ವೇಣುಗೋಪಾಲ್, ದಿನೇಶ್ ಗುಂಡುರಾವ್ ಸಚಿವ ಸ್ಥಾನ ಹಂಚಿದ್ದಾರೆ. ಅವರೇ ಪಕ್ಷದಲ್ಲಿ ಉಂಟಾಗಿರುವ ಅಸಮಾಧಾನವನ್ನ ಸರಿಪಡಿಸಬೇಕು. ಆದರೆ ನಾನು ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಹೇಳಿದರು.

    ಕಲಬುರಗಿ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನಕ್ಕಾಗಿ ಪ್ರಯತ್ನ ಮಾಡಿದ್ದೆ. ಆದರೆ ಕೊನೆ ಘಳಿಗೆಯಲ್ಲಿ ವಿಫಲವಾಗಿದೆ. ಇದರ ಬಗ್ಗೆ ನನಗೂ ನೋವಾಗಿದೆ. ಒತ್ತಾಯದ ಮೇಲೆ ಶಾಸಕ ಡಾ. ಅಜಯ್ ಸಿಂಗ್ ಅವರಿಗೆ ದೆಹಲಿ ವಿಶೇಷ ಪ್ರತಿನಿಧಿ ಸ್ಥಾನ ನೀಡಿದ್ದಾರೆ. ಈ ಬಗ್ಗೆ ರಾಜ್ಯ ನಾಯಕರನ್ನ ಕೇಳಿದ್ದೆ. ಆದರೆ ನಾವು ಹೈಕಮಾಂಡ್‍ಗೆ ಕೇಳಿಯೇ ಸಂಪುಟ ವಿಸ್ತರಣೆ ಮಾಡಿದ್ದೇವೆ ಎಂದು ಹೇಳಿದ್ದಾರೆ. ಅದ್ದರಿಂದ ಹೈ ಕಮಾಂಡ್ ತೆಗೆದುಕೊಂಡ ನಿರ್ಣಯಕ್ಕೆ ಬದ್ಧರಾಗಿರಬೇಕು ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜಾರಕಿಹೊಳಿ ಸಹೋದರರ ಸಂಧಾನಕ್ಕೆ ಮುಂದಾದ ಖರ್ಗೆ

    ಜಾರಕಿಹೊಳಿ ಸಹೋದರರ ಸಂಧಾನಕ್ಕೆ ಮುಂದಾದ ಖರ್ಗೆ

    ಬೆಂಗಳೂರು: ಬೆಳಗಾವಿಯ ಸತೀಶ್ ಜಾರಕಿಹೊಳಿ ಹಾಗೂ ರಮೇಶ್ ಜಾರಕಿಹೊಳಿ ಸಹೋದರರ ಸಮಸ್ಯೆಯನ್ನು ದಮನ ಮಾಡಲು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮುಂದಾಗಿದ್ದಾರೆ.

    ಈ ಕುರಿತು ಸದಾಶಿವನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಬೆಳಗಾವಿಯ ಸಮಸ್ಯೆಯಿಂದಾಗಿ ಎದ್ದಿರುವ ಸಮಸ್ಯೆಯನ್ನು ಕುರಿತು ಚರ್ಚಿಸಿ, ರಮೇಶ್ ಜಾರಕಿಹೊಳಿ ಬಗ್ಗೆ ಮಾತನಾಡುತ್ತೇನೆ. ಅಲ್ಲದೇ ಅವರ ಗೊಂದಲ ಏನೆಂಬುದು ಸರಿಯಾಗಿ ನನಗೆ ಗೊತ್ತಿಲ್ಲ. ಅವರ ಜೊತೆ ಮಾತನಾಡಿ ಎಲ್ಲಾ ಬಗೆಹರಿಸುತ್ತೇನೆ. ರಮೇಶ್ ಜಾರಕಿಹೊಳಿಯವರು ಮೊದಲಿನಿಂದಲೂ ಕಾಂಗ್ರೆಸ್ಸಿನಲ್ಲಿಯೇ ಇದ್ದವರು, ಅವರು ಪಕ್ಷದ ನಿಷ್ಟಾವಂತ ಕಾರ್ಯಕರ್ತರು ಎಂದು ಹೇಳಿದರು.

    ಬೆಳಗಾವಿಯ ಸಮಸ್ಯೆಯನ್ನು ಮಾಧ್ಯಮಗಳು ವೈಭವಿಕರಿಸಿ ಸೃಷ್ಟಿಸುತ್ತಿವೆ. ಬಿಜೆಪಿಯವರು ಸರ್ಕಾರ ರಚಿಸುವ ಹಗಲು ಕನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪ್ರಜಾಪ್ರಭುತ್ವ ಉಳಿಬೇಕಾದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು, ರಾಹುಲ್ ಪ್ರಧಾನಿಯಾಗ್ಲೇಬೇಕು: ಖರ್ಗೆ

    ಪ್ರಜಾಪ್ರಭುತ್ವ ಉಳಿಬೇಕಾದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು, ರಾಹುಲ್ ಪ್ರಧಾನಿಯಾಗ್ಲೇಬೇಕು: ಖರ್ಗೆ

    ಬೀದರ್: ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ, ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು ಹಾಗೂ ರಾಹುಲ್ ಗಾಂಧಿ ಅವರನ್ನು ಪ್ರಧಾನಿಯಾಗಿ ಮಾಡಬೇಕೆಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ.

    ನಗರದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ಸಿನ ಬೃಹತ್ ಜನಸ್ಪಂದನಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸನ್ನು ಮುಗಿಸೋದು ಹಾಗೂ ಅಳಿಸುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಇಂದು ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾಗಿದೆ. ಹೀಗಾಗಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಬೇಕು. ನಮ್ಮ ಅಧ್ಯಕ್ಷರಾದ ರಾಹುಲ್ ಗಾಂಧಿಯವರನ್ನು ನಾವು ಪ್ರಧಾನಿಯಾಗಿ ಮಾಡಲೇಬೇಕೆಂದು ತಿಳಿಸಿದರು.

    ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಏನೋ ಹೇಳಿಕೊಂಡು ಹೋಗುತ್ತಿದ್ದಾರೆ. ಅವರ ಮಾತನ್ನು ಕೇಳುವ ಅವಶ್ಯಕತೆ ನಮಗಿಲ್ಲ, ನಾವೆಲ್ಲರೂ ಇಂದು ದೇಶ ಉಳಿಸುವ ಅಗತ್ಯತೆ ಎದುರಾಗಿದೆ. ಈ ಕುರಿತು ಎಲ್ಲರೂ ಹೋರಾಟ ನಡೆಸಬೇಕಾಗಿದೆ. ಕಾರ್ಯಕರ್ತರು ಎಚ್ಚೆತ್ತು ಕಾಂಗ್ರೆಸ್ ಬಲಪಡಿಸಲು ಸಿದ್ದರಾಗಬೇಕು ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಕೇಳುವುದು ಸರಿಯಲ್ಲ: ಮಲ್ಲಿಕಾರ್ಜುನ ಖರ್ಗೆ

    ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಕೇಳುವುದು ಸರಿಯಲ್ಲ: ಮಲ್ಲಿಕಾರ್ಜುನ ಖರ್ಗೆ

    ಕಲಬುರಗಿ: ಬಹಳ ಕಷ್ಟಪಟ್ಟು ದೇಶ ಮತ್ತು ಭಾಷಾವಾರು ಪ್ರಾಂತ ರಚನೆಯಾಗಿದೆ. ಹೀಗಾಗಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಕೇಳುವುದು ಸರಿಯಲ್ಲ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

    ಜಿಲ್ಲೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿಯಲ್ಲಿ ದಕ್ಷಿಣ ಕರ್ನಾಟಕ ಎ ಕ್ಲಾಸ್, ಬಾಂಬೆ ಕರ್ನಾಟಕ ಬಿ ಕ್ಲಾಸ್, ಹೈದ್ರಾಬಾದ್ ಕರ್ನಾಟಕ ಸಿ ಕ್ಲಾಸ್ ನಲ್ಲಿದೆ. ನಿಜಾಮರ ಆಳ್ವಿಕೆ ಈ ಭಾಗದಲ್ಲಿ ಇದ್ದಿದ್ದರಿಂದ ಹೈದರಾಬಾದ್ ಕರ್ನಾಟಕ ಭಾಗ ಅಷ್ಟೊಂದು ಅಭಿವೃದ್ಧಿ ಆಗಲಿಲ್ಲ. ಆದ್ರೆ ಇದೀಗ 371 ಜೆ ವಿಧಿಯಡಿ ವಿಶೇಷ ಸ್ಥಾನಮಾನ ಸಿಕ್ಕ ನಂತರ ಅಭಿವೃದ್ಧಿ ಕೆಲಸಗಳು ಹೆಚ್ಚಾಗಿವೆ ಎಂದು ತಿಳಿಸಿದರು.

    ಕನ್ನಡ ಮಾತನಾಡುವಂತಹ ಜನ ಒಂದೇ ಕಡೆ ಇರಬೇಕು ಎನ್ನುವ ದೃಷ್ಠಿಯಿಂದ ಅಖಂಡ ಕರ್ನಾಟಕದ ಒಂದು ಕನಸನ್ನು ನನಸು ಮಾಡ್ಕೊಂಡು ನಾವು ಎಲ್ಲರೂ ಇವತ್ತು ಒಂದಾಗಿದ್ದೇವೆ. ಇಂತಹ ಸಂದರ್ಭದಲ್ಲಿ ಅಪಸ್ವರ ತೆಗೆದರೆ ಯಾರಿಗೂ ಒಳ್ಳೆಯದು ಆಗುವುದಿಲ್ಲ ಎಂದು ಎಚ್ಚರಿಸಿದರು.

    ಇನ್ನು ಅಭಿವೃದ್ಧಿಯಲ್ಲಿ ಅನ್ಯಾಯವಾದ್ರೆ ಮುಖ್ಯಮಂತ್ರಿಯನ್ನು ಕೇಳಬೇಕು. ಆದ್ರೆ ರಾಜ್ಯವನ್ನು ಇಬ್ಭಾಗ ಮಾಡುವ ಕೆಲಸವನ್ನು ಯಾರು ಮಾಡಬಾರದು. ನಮ್ಮ ಹಿರಿಯರು ಸಾಕಷ್ಟು ಕಷ್ಟಪಟ್ಟು ರಾಜ್ಯವನ್ನು ಒಗ್ಗೂಡಿಸಿದ್ದಾರೆ, ಅದಕ್ಕಾಗಿ ಸಾಕಷ್ಟು ತ್ಯಾಗ ಮಾಡಿದ್ದಾರೆ. ಈಗ ನಾವು ಮತ್ತೆ ಬೇರೆಯಾಗುತ್ತೇವೆ ಎಂದರೆ ಅದು ಸರಿಯಲ್ಲ. ಹಾಗಾಗಿ ಸಮಸ್ಯೆಯನ್ನು ಮಾತಾಡಿಕೊಂಡು ಸರಿಪಡಿಸಿಕೊಳ್ಳಬೇಕು ಎಂದು ಖರ್ಗೆ ಸೂಚಿಸಿದರು.

    ಲೋಕಸಭಾ ಚುನಾವಣೆ ಬಗ್ಗೆ ಮಾತನಾಡಿದ ಅವರು ನಾನು ಕಾಂಗ್ರೆಸ್‍ನವನಾದ ಕಾರಣ ರಾಹುಲ್ ಗಾಂಧಿಯವರೇ ಪ್ರಧಾನ ಮಂತ್ರಿಯಾಗಬೇಕು. ಪ್ರತಿಯೊಬ್ಬರಿಗೂ ಅವರವರ ಪಕ್ಷದ ನಿಯಮ, ಕಾನೂನುಗಳಿರುತ್ತವೆ. ರಾಷ್ಟ್ರೀಯ ಪಕ್ಷವಾಗಿ ಬಿಜೆಪಿಯ ಯೋಜನೆಗಳಿಗೆ, ತತ್ವಗಳಿಗೆ ವಿರುದ್ಧವಾಗಿ ನಿಲ್ಲುವಂತಹ ಪಕ್ಷ ಕಾಂಗ್ರೆಸ್ ಒಂದೇ. ಅಷ್ಟೇ ಅಲ್ಲದೇ ಅಭಿವೃದ್ಧಿ ಮಾಡುವ ಹಾಗೂ ಎಲ್ಲರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವ ಪಕ್ಷ ಕಾಂಗ್ರೆಸ್. ಹಾಗಾಗಿ ರಾಹುಲ್ ಗಾಂಧಿಯವರೇ ಪ್ರಧಾನಿಯಾದರೇ ಒಳ್ಳೆಯದು ಎಂದು ತಿಳಿಸಿದರು.

  • ಮನ್ ಕಿ ಬಾತ್ ಬಿಟ್ಟು ಕಾಮ್ ಕಿ ಬಾತ್ ಆರಂಭಿಸಿ- ಪ್ರಧಾನಿಗೆ ಖರ್ಗೆ ಕಿವಿಮಾತು

    ಮನ್ ಕಿ ಬಾತ್ ಬಿಟ್ಟು ಕಾಮ್ ಕಿ ಬಾತ್ ಆರಂಭಿಸಿ- ಪ್ರಧಾನಿಗೆ ಖರ್ಗೆ ಕಿವಿಮಾತು

    ಕಲಬುರಗಿ: ಮನ್ ಕಿ ಬಾತ್ ಬಿಟ್ಟು ಕಾಮ್ ಕಿ ಬಾತ್ ಆರಂಭಿಸಿ (ಮನದ ಮಾತು ಬಿಟ್ಟು ಕೆಲಸದ ಮಾತು ಆರಂಭಿಸಿ) ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿವಿ ಮಾತು ಹೇಳಿದ್ದಾರೆ.

    ಕಲಬುರಗಿಯಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಖರ್ಗೆ, ಒಂದು ರಾಜ್ಯದ ಚುನಾವಣೆಯ ಹಿನ್ನೆಲೆಯಲ್ಲಿ ಓರ್ವ ಪ್ರಧಾನಿಯಾಗಿ ಗಲ್ಲಿ ಗಲ್ಲಿಯಲ್ಲಿ ಚುನಾವಣಾ ಪ್ರಚಾರ ಮಾಡೋದು ನಗೆಪಾಟಲಿಗೀಡು ಮಾಡಿದೆ. ನನ್ನ ಹೆಸರು ಹೇಳಿದ್ರೆ ಮತ ಹಾಕ್ತಾರೆ ಅನ್ನೊ ಭ್ರಮೆಯಲ್ಲಿದ್ದಾರೆ ಪ್ರಧಾನಿಯವರು. ಜಿಡಿಪಿ ಹೆಚ್ಚಳದ ಅಂಕಿ ಅಂಶಗಳು ಸುಳ್ಳಿನ ಕಂತೆ. ಗುರಿ ಕಡಿಮೆ ಮಾಡಿಕೊಂಡು ಜಿಡಿಪಿ ಬೆಳವಣಿಗೆ ಹೆಚ್ಚಳ ತೋರಿಸಿದ್ದಾರೆ. ಕೇಂದ್ರ ಸರ್ಕಾರ ಚುನಾವಣೆಗೋಸ್ಕರ ತಯಾರಿಸಿದ ಅಂಕಿ ಅಂಶ ಇದಾಗಿದೆ ಅಂತಾ ಗುಡುಗಿದ್ರು.

    ಭಾರತೀಯರ ಮೇಲಿನ ದಾಳಿಗೆ ಖಂಡನೆ: ಅಮೆರಿಕದಲ್ಲಿ ಭಾರತೀಯರ ಮೇಲಿನ ದಾಳಿಗೆ ತೀವ್ರ ಕಳವಳ ವ್ಯಕ್ತಪಡಿಸಿದ ಖರ್ಗೆ, ಈ ಕುರಿತು ಪ್ರಧಾನಿ ತಕ್ಷಣವೇ ಅಮೆರಿಕ ಅಧ್ಯಕ್ಷರ ಜೊತೆ ಮಾತನಾಡಬೇಕು. ಭಾರತೀಯರ ಮೇಲೆ ಪದೇ ಪದೇ ದಾಳಿ ನಡೆಯುತ್ತಿರುವುದು ಖಂಡನೀಯ. ಈ ವಿಷಯದಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸಬಾರದು. ಇದೇ ರೀತಿ ವಿದೇಶದಲ್ಲಿ ಭಾರತೀಯ ಪ್ರಜೆಗಳ ಮೇಲೆ ದಾಳಿ ಮುಂದುವರೆದರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಯುದ್ಧಕ್ಕೆ ನಾಂದಿ ಹಾಡಲಿದೆ ಅಂತಾ ಖರ್ಗೆ ಎಚ್ಚರಿಕೆ ನೀಡಿದ್ರು.