Tag: Mamata Banerjees

  • ರಣಜಿಯಲ್ಲಿ ಶತಕ ಸಿಡಿಸಿದ ಮಮತಾ ಬ್ಯಾನರ್ಜಿ ಸರ್ಕಾರದ ಸಚಿವ ಮನೋಜ್ ತಿವಾರಿ

    ರಣಜಿಯಲ್ಲಿ ಶತಕ ಸಿಡಿಸಿದ ಮಮತಾ ಬ್ಯಾನರ್ಜಿ ಸರ್ಕಾರದ ಸಚಿವ ಮನೋಜ್ ತಿವಾರಿ

    ಕೋಲ್ಕತ್ತಾ: ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದಲ್ಲಿ ಕ್ರೀಡಾ ಸಚಿವರಾಗಿರುವ ಮನೋಜ್ ತಿವಾರಿ ರಣಜಿ ಟ್ರೋಫಿಯಲ್ಲಿ ಬಂಗಾಳ ತಂಡದ ಪರ ಆಡಿ ಶತಕ ಸಿಡಿಸಿ ಸುದ್ದಿಯಾಗಿದ್ದಾರೆ.

    ಪಶ್ಚಿಮ ಬಂಗಾಳದ ಕ್ರೀಡಾ ಸಚಿವರಾಗಿರುವ ಮನೋಜ್ ತಿವಾರಿ ತಮ್ಮ ರಾಜ್ಯ ರಣಜಿ ತಂಡದಲ್ಲಿ ಆಟಗಾರನಾಗಿ ಆಡುತ್ತಿದ್ದಾರೆ. ರಣಜಿ ಟ್ರೋಫಿ ಕ್ವಾರ್ಟರ್‌ ಫೈನಲ್‌ನಲ್ಲಿ  ಜಾರ್ಖಂಡ್ ವಿರುದ್ಧದ ಪಂದ್ಯದಲ್ಲಿ ಬಂಗಾಳ ಪರ ಮೊದಲ ಇನ್ನಿಂಗ್ಸ್‌ನಲ್ಲಿ 78 ರನ್ (124 ಎಸೆತ, 6 ಬೌಂಡರಿ, 2 ಸಿಕ್ಸ್) ಮತ್ತು ದ್ವಿತೀಯ ಇನ್ನಿಂಗ್ಸ್‌ನಲ್ಲಿ 136 ರನ್ (185 ಎಸೆತ, 19 ಬೌಂಡರಿ, 2 ಸಿಕ್ಸ್) ಸಿಡಿಸಿ ಮಿಂಚಿದ್ದಾರೆ. ಕೊನೆಯಲ್ಲಿ ಪಂದ್ಯ ಡ್ರಾದಲ್ಲಿ ಮುಕ್ತಾಯಗೊಂಡಿದೆ. ಈ ನಡುವೆ ಕ್ರೀಡಾ ಸಚಿವರ ಆಟಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಐಪಿಎಲ್ ಹರಾಜಿನ ಅಂತಿಮ ಪಟ್ಟಿಯಲ್ಲಿ ಕಾಣಿಸಿಕೊಂಡ ಪಶ್ಚಿಮ ಬಂಗಾಳದ ಕ್ರೀಡಾ ಸಚಿವ

    2021ರಲ್ಲಿ ರಾಜಕೀಯಕ್ಕೆ ಎಂಟ್ರಿಕೊಟ್ಟ ತಿವಾರಿ, ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಅಭ್ಯರ್ಥಿಯಾಗಿ ಶಿಬ್‍ಪುರ್ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. ಬಳಿಕ ಇದೀಗ ಕ್ರೀಡಾ ಸಚಿವರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ತಿವಾರಿ ಈ ಹಿಂದೆ ಭಾರತದ ಪರ ಮತ್ತು ಐಪಿಎಲ್‍ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌, ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಪುಣೆ ಸೂಪರ್ ಜೈಂಟ್ಸ್ ಪರ ಆಡಿದ್ದರು. ಇದನ್ನೂ ಓದಿ: ಐಪಿಎಲ್ ಮಾಧ್ಯಮ ಪ್ರಸಾರ ಹಕ್ಕು ಹರಾಜಿನಿಂದ ಹಿಂದೆ ಸರಿದ ಅಮೆಜಾನ್