Tag: managaluru

  • ಶಾರಿಕ್‌ನನ್ನು ವಶಕ್ಕೆ ಪಡೆದ NIA ಅಧಿಕಾರಿಗಳು

    ಶಾರಿಕ್‌ನನ್ನು ವಶಕ್ಕೆ ಪಡೆದ NIA ಅಧಿಕಾರಿಗಳು

    ಮಂಗಳೂರು : ಮಂಗಳೂರಿನ (Mangaluru) ಕುಕ್ಕರ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಶಂಕಿತ ಉಗ್ರ ಶಾರಿಕ್‌ನನ್ನು NIA ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ (Mangaluru Cooker Bomb Blast) ಬಳಿಕ ಶಾರಿಕ್‌ ಗಂಭೀರವಾಗಿ ಗಾಯಗೊಂಡಿದ್ದ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಕಮಕನಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಉಗ್ರ ಶಾರಿಕ್ (Shariq) ಚಿಕಿತ್ಸೆ ಪಡೆಯುತ್ತಿದ್ದ. ಅಷ್ಟೇ ಅಲ್ಲದೇ ಆತನಿಗೆ NIA ಅಧಿಕಾರಿಗಳು ಭದ್ರತೆಯನ್ನು ನೀಡಿದ್ದರು. ಮೊನ್ನೆಯಷ್ಟೇ ಶಾರಿಕ್‌ ನಡೆಯುವ ಸ್ಥಿತಿಗೆ ತಲುಪಿದ್ದ. ಈ ವೇಳೆ ಆಸ್ಪತ್ರೆಯಲ್ಲೇ NIA ಅಧಿಕಾರಿಗಳು ಶಾರಿಕ್‌ನನ್ನು ವಿಚಾರಣೆ ನಡೆಸಿದ್ದರು.

    ಆದರೆ ಇಂದು ಬೆಳ್ಳಂ ಬೆಳಿಗ್ಗೆ ಶಾರಿಕ್‌ನನ್ನು NIA ಅಧಿಕಾರಿಗಳು ವಶಕ್ಕೆ ಪಡೆದು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಇನ್ನೂ ಮಂಗಳೂರಿನಲ್ಲಿ ನಡೆದ ಕುಕ್ಕರ್‌ ಬ್ಲಾಸ್ಟ್‌ಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ NIA ಅಧಿಕಾರಿಗಳು ವಿಚಾರಣೆ ಮುಂದುವರಿಸಲಿದ್ದಾರೆ.

    ಘಟನೆಯೇನು?: ಇತ್ತೀಚೆಗೆ ಮಂಗಳೂರಿನಲ್ಲಿ ರಿಕ್ಷಾದಲ್ಲಿ ಸ್ಫೋಟಗೊಂಡು ಕುಕ್ಕರ್‌ ಮುಚ್ಚಳ ಶಾರಿಕ್‌ ಕುತ್ತಿಗೆಗೆ ಬಡಿದಿತ್ತು. ಇದರಿಂದಾಗಿ ಶಾರಿಕ್‌ನ ಕೈ, ದೇಹಕ್ಕೆ ಬೆಂಕಿ ಬಿದ್ದರಿಂದ ಯಾವುದೇ ಕ್ಷಣದಲ್ಲಿ ಸೋಂಕು ತಗುಲಿ ಆರೋಗ್ಯ ಏರುಪೇರಾಗುವ ಸಾಧ್ಯತೆಯಿತ್ತು. ಇನ್ನು ವಿಧಿ ವಿಜ್ಞಾನ ಪ್ರಯೋಗಾಲಯ (FSL) ಪ್ರಾಥಮಿಕ ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿತ್ತು. ಇದನ್ನೂ ಓದಿ: ಉಗ್ರನನ್ನು ಉಗ್ರ ಎನ್ನದೇ ಡಿಕೆಶಿಯವರ ಹಾಗೆ ʼನಮ್ಮ ಬ್ರದರ್ಸ್ʼ ಎನ್ನಬೇಕಿತ್ತೇ – ಬಿಜೆಪಿ

    ಶಾರಿಕ್ ತಂದಿದ್ದು ಅಂತಿಂಥ ಬಾಂಬ್ ಅಲ್ಲ. ಆ ಕುಕ್ಕರ್ ಬಾಂಬ್‍ಗೆ ಇಡೀ ಬಸ್ಸನ್ನೇ ಸ್ಫೋಟಿಸುವ ಪವರ್ ಇತ್ತಂತೆ. 3 ಲೀಟರ್ ಕುಕ್ಕರ್ ತುಂಬಾ ಸ್ಫೋಟಕದ ಜೆಲ್ ತಂದಿದ್ದ. ಡಿಟೋನೆಟರ್ ಕೂಡ ಇದ್ದು ಪ್ಲಸ್ ಮತ್ತು ಮೈನಸ್ ಕನೆಕ್ಟಿಂಗ್ ಕೂಡ ಇತ್ತಂತೆ, ಪ್ಲಸ್ ಮತ್ತು ಮೈನಸ್ ಕನೆಕ್ಟ್ ಆಗದೆ ಶಾರ್ಟ್ ಸರ್ಕ್ಯೂಟ್ ಆಗಿ ಜೆಲ್‍ಗೆ ಬೆಂಕಿ ಹೊತ್ತಿಕೊಂಡು ಘಟನೆ ಸಂಭವಿಸಿದೆ. ಒಂದ್ವೇಳೆ ಡಿಟೊನೇಟರ್ ಮತ್ತು ಜೆಲ್ ಎರಡೂ ಒಂದೇ ಬಾರಿಗೆ ಸ್ಫೋಟಿಸಿದರೆ ಭಯಾನಕ ಘಟನೆಯೇ ನಡೆದು ಹೋಗ್ತಿತ್ತು ಎಂಬ ಮಾಹಿತಿ ಬೆಳಕಿಗೆ ಬಂದಿತ್ತು. ಇದನ್ನೂ ಓದಿ: ಶಾರೀಕ್ ಆರೋಗ್ಯದಲ್ಲಿ ಶೇ.80ರಷ್ಟು ಚೇತರಿಕೆ – ನಡೆದಾಡುವ ಸ್ಥಿತಿಗೆ ಬಂದ ಉಗ್ರ

    Live Tv
    [brid partner=56869869 player=32851 video=960834 autoplay=true]

  • ಯಕ್ಷರಂಗದ ಅಪ್ರತಿಮ ಕಲಾವಿದ ಕುಂಬ್ಳೆ ಸುಂದರ್ ರಾವ್ ಇನ್ನಿಲ್ಲ

    ಯಕ್ಷರಂಗದ ಅಪ್ರತಿಮ ಕಲಾವಿದ ಕುಂಬ್ಳೆ ಸುಂದರ್ ರಾವ್ ಇನ್ನಿಲ್ಲ

    ಮಂಗಳೂರು: ಯಕ್ಷಗಾನದ ಅಪ್ರತಿಮ ಕಲಾವಿದ (Yakshagana Artist), ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ (Kumble Sundar Rao) (90) ವಿಧಿವಶರಾಗಿದ್ದಾರೆ.

    ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ರ ಮಾರ್ಚ್ 20ರಲ್ಲಿ ಕೇರಳ ರಾಜ್ಯದ ಕುಂಬ್ಳೆಯಲ್ಲಿ ಸುಂದರ್ ರಾವ್ ಜನಿಸಿದರು.

    ಯಕ್ಷಗಾನ ಮತ್ತು ತಾಳ-ಮದ್ದಳೆ (ಸಾಂಪ್ರದಾಯಿಕ ನೃತ್ಯ) ಕಲಾವಿದರಾಗಿದ್ದ ಸುಂದರ್ ರಾವ್ ಮಂಗಳೂರಿನ (Managaluru) ಆಗಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದಾರೆ. 1994 ರಿಂದ 1999ರ ವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಇದನ್ನೂ ಓದಿ: ಟೊಯೊಟಾ ಕಿರ್ಲೋಸ್ಕರ್‌ ಮೋಟಾರ್‌ ಉಪಾಧ್ಯಕ್ಷ ವಿಕ್ರಮ್‌ ಕಿರ್ಲೋಸ್ಕರ್‌ ಹೃದಯಾಘಾತದಿಂದ ನಿಧನ

    ಇವರು ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕಾರ್ಯ ನಿರ್ವಹಿಸಿದ್ದರು. ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಇವರು ಯಕ್ಷಗಾನ ಕಲಾವಿದರೊಬ್ಬರು ನೇರವಾಗಿ ಮತದಾರರಿಂದಲೇ ಆರಿಸಲ್ಪಟ್ಟ ಪ್ರಪ್ರಥಮ ಶಾಸಕರೆಂಬ ಹೆಗ್ಗಳಿಕೆಯನ್ನೂ ಪಡೆದಿದ್ದಾರೆ.

    ಅದ್ಭುತ ವಾಕ್ ಚಾತುರ್ಯದಿಂದ ಪ್ರಸಿದ್ಧರಾಗಿದ್ದ ಕುಂಬ್ಳೆ ಸುಂದರ್ ರಾವ್ ಪ್ರಾಸಬದ್ಧ ಸಂಭಾಷಣೆಯಿಂದಲೇ ಹೆಸರುವಾಸಿಯಾಗಿದ್ದರು. ರಾವ್ 50ಕ್ಕೂ ಅಧಿಕ ವರ್ಷಗಳ ಕಾಲ ಯಕ್ಷಗಾನದಲ್ಲಿ ಸೇವೆ ಸಲ್ಲಿಸಿದ್ದಾರೆ.

    ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕುಂಬ್ಳೆ ಸುಂದರ್ ರಾವ್ ಮಂಗಳೂರಿನ ಪಂಪ್‌ವೆಲ್‌ನಲ್ಲಿರುವ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಸುಂದರ್ ರಾವ್ ನಿಧನಕ್ಕೆ ಯಕ್ಷಕಲಾರಂಗ ಸಂತಾಪ ವ್ಯಕ್ತಪಡಿಸಿದೆ. ಇದನ್ನೂ ಓದಿ: ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಅಗ್ನಿ ಅವಘಡ – 3 ಮಕ್ಕಳು ಸೇರಿ ಕುಟುಂಬದ 6 ಮಂದಿ ಸಾವು

    Live Tv
    [brid partner=56869869 player=32851 video=960834 autoplay=true]

  • ಮಂಗಳೂರಿನಲ್ಲಿ ಹಾಡಹಗಲೇ ಹೆಡ್ ಕಾನ್ಸ್ ಟೇಬಲ್‍ ಮೇಲೆ ಕತ್ತಿಯಿಂದ ದಾಳಿ

    ಮಂಗಳೂರಿನಲ್ಲಿ ಹಾಡಹಗಲೇ ಹೆಡ್ ಕಾನ್ಸ್ ಟೇಬಲ್‍ ಮೇಲೆ ಕತ್ತಿಯಿಂದ ದಾಳಿ

    – ಗೋಲಿಬಾರ್ ಗೆ ಪ್ರತಿಕಾರದ ಶಂಕೆ

    ಮಂಗಳೂರು: ಕರ್ತವ್ಯ ನಿರತ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಓರ್ವರಿಗೆ ಹಾಡಹಗಲೇ ದುಷ್ಕರ್ಮಿಯೋರ್ವ ಕತ್ತಿಯಿಂದ ದಾಳಿ ನಡೆಸಿ ಪರಾರಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

    ಮಂಗಳೂರಿನ ಬಂದರು ಠಾಣಾ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಹಾಗೂ ಮಹಿಳಾ ಸಿಬ್ಬಂದಿಯೋರ್ವರು ನಗರದ ನ್ಯೂಚಿತ್ರ ಸರ್ಕಲ್ ನಲ್ಲಿ ಕರ್ತವ್ಯದಲ್ಲಿದ್ದರು. ಈ ವೇಳೆ ಬೈಕ್ ನಲ್ಲಿ ಬಂದ ಇಬ್ಬರಲ್ಲಿ ಓರ್ವ ಬೈಕ್ ನಿಂದ ಇಳಿದು ಪೊಲೀಸರು ಕುಳಿತುಕೊಂಡಲ್ಲಿಗೆ ಹೋಗಿ ಗಣೇಶ್ ಕಾಮತ್ ಗೆ ಕತ್ತಿಯಿಂದ ಒಂದು ಬಾರಿ ಕಡಿದು ಓಡಿ ಬೈಕ್ ಏರಿ ಪರಾರಿಯಾಗಿದ್ದಾರೆ.

    ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಅವರ ಕೈಗೆ ಗಾಯವಾಗಿದ್ದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಲ್ಲೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಕಳೆದ ವರ್ಷ ಮಂಗಳೂರಿನಲ್ಲಿ ನಡೆದ ಎನ್.ಆರ್.ಸಿ ಪ್ರತಿಭಟನೆ ವೇಳೆ ಗಲಭೆ ನಡೆದು ಇಬ್ಬರು ಪೊಲೀಸರ ಗೋಲಿಬಾರ್ ಗೆ ಬಲಿಯಾಗಿದ್ದರು. ಈ ಗೊಲೀಬಾರ್ ಗೆ ಪ್ರತಿಕಾರವಾಗಿ ಪೊಲೀಸರ ಮೇಲೆ ಈ ಹಲ್ಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

     

  • ಕಾರಿನಲ್ಲಿ ಹಸುಗಳ ಸಾಗಾಟ- ಪೊಲೀಸರಿಂದ ಗಾಳಿಯಲ್ಲಿ ಗುಂಡು

    ಕಾರಿನಲ್ಲಿ ಹಸುಗಳ ಸಾಗಾಟ- ಪೊಲೀಸರಿಂದ ಗಾಳಿಯಲ್ಲಿ ಗುಂಡು

    -ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆಸಲು ಆರೋಪಿಗಳು ಯತ್ನ

    ಮಂಗಳೂರು: ಅಕ್ರಮ ಗೋಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಬೆನ್ನಟ್ಟಿ ಹೋದ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಮೂಡುಕೊಣಾಜೆ ಎಂಬಲ್ಲಿ ನಡೆದಿದೆ.

    ಇಂದು ಬೆಳಗಿನ ಜಾವ ಗೋಕಳ್ಳರು ಮೂಡುಬಿದ್ರೆಯ ಶಿರ್ತಾಡಿಯಿಂದ 6 ಗೋವುಗಳನ್ನು ರಿಟ್ಸ್ ಕಾರಿನಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಹೀಗಾಗಿ ಮೂಡಬಿದ್ರೆ ಠಾಣೆಯ ಇನ್‍ಸ್ಪೆಕ್ಟರ್ ಬಿ.ಎಸ್.ದಿನೇಶ್ ಕುಮಾರ್ ತಂಡ ಆರೋಪಿಗಳು ಹಸುಗಳನ್ನು ಸಾಗಿಸುತ್ತಿದ್ದ ರಿಟ್ಸ್ ಕಾರನ್ನು ಹಿಂಬಾಲಿಸಿಕೊಂಡು ಹೋದರು. ಈ ವೇಳೆ ಆರೋಪಿಗಳು ಪೊಲೀಸ್ ಜೀಪ್ ಗೆ ಡಿಕ್ಕಿ ಹೊಡೆಯಲು ಯತ್ನಿಸಿದ್ದು, ಇನ್‍ಸ್ಪೆಕ್ಟರ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

    ಇದರಿಂದ ಹೆದರಿದ ಆರೋಪಿಗಳು ಕಾರ್ ಹಾಗೂ ಹಸುಗಳನ್ನು ಅಲ್ಲೇ ಬಿಟ್ಟು ಓಡಿ ಪರಾರಿಯಾಗಿದ್ದಾರೆ. ಕಾರು ಹಾಗೂ ಹಸುಗಳನ್ನು ವಶಪಡಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಈ ಬಗ್ಗೆ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಕೇಸ್: ಕೊಲೆ ಮಾಡಿದ್ದು ಯಾಕೆ? ಆರೋಪಿಗಳು ಯಾರು?

    ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಕೇಸ್: ಕೊಲೆ ಮಾಡಿದ್ದು ಯಾಕೆ? ಆರೋಪಿಗಳು ಯಾರು?

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ತಲ್ಲಣ ಮೂಡಿಸಿದ್ದ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಗೈದಿದ್ದ ಆರೋಪಿಗಳು ಕೊನೆಗೂ ಮಂಗಳೂರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇಬ್ಬರು ಆರೋಪಿಗಳನ್ನು ಹೆಡೆಮುರಿ ಕಟ್ಟಿರುವ ಪೊಲೀಸರು ಮುಚ್ಚಿ ಹೋಗುತ್ತದೆ ಎನ್ನುವ ಆರೋಪಕ್ಕೆ ಗುರಿಯಾಗಿದ್ದ ಪ್ರಕರಣಕ್ಕೆ ಜೀವ ತುಂಬಿದ್ದಾರೆ.

    ಚಾಮರಾಜನಗರ ಪಿಎಫ್‍ಐ ಜಿಲ್ಲಾ ಅಧ್ಯಕ್ಷ ಖಲೀಲುಲ್ಲಾ ಹಾಗೂ ಬಂಟ್ವಾಳದ ಸಜಿಪ ನಿವಾಸಿ ಪಿಎಫ್‍ಐ ಕಾರ್ಯಕರ್ತ ಅಬ್ದುಲ್ ಶಾಫಿ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಇನ್ನುಳಿದ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

    ಕಳೆದ ಜುಲೈ 4ರಂದು ರಾತ್ರಿ 9.30ಕ್ಕೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನಲ್ಲಿ ಲಾಂಡ್ರಿ ಶಾಪ್‍ಗೆ ಬಾಗಿಲು ಹಾಕುತ್ತಿದ್ದ ಶರತ್ ಮಡಿವಾಳನನ್ನು ಮೂವರು ಆಗಂತುಕರು ಬೈಕಿನಲ್ಲಿ ಬಂದು ಹತ್ಯೆಗೈದಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಶರತ್ ದೇಹವನ್ನು ಸ್ಥಳೀಯರು ಸೇರಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದರು. ಮೂರು ದಿನಗಳ ಬಳಿಕ ಜುಲೈ 7ರಂದು ಶರತ್ ಸಾವನ್ನಪ್ಪಿರುವುದನ್ನು ಪೊಲೀಸರು ಘೋಷಿಸಿದ್ದರು.

    ಘಟನೆಗೆ ಸಂಬಂಧಿಸಿದಂತೆ ಬಿ.ಸಿ.ರೋಡಿನಲ್ಲಿ ನಿಷೇಧಾಜ್ಞೆ ನಡುವೆಯೇ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ನಾಲ್ಕು ಸಾವಿರಕ್ಕೂ ಹೆಚ್ಚು ಮಂದಿ ಸೇರಿ ಪ್ರತಿಭಟನೆ ನಡೆಸಿದ್ದು ಪೊಲೀಸ್ ಇಲಾಖೆಗೆ ಎಚ್ಚರಿಕೆ ರವಾನಿಸಿದಂತಾಗಿತ್ತು. ಆ ಬಳಿಕ ಪೊಲೀಸರು ಶರತ್ ಹತ್ಯೆ ಪ್ರಕರಣದ ತನಿಖೆಗೆ ಏಳು ಪ್ರತ್ಯೇಕ ಪೊಲೀಸರ ತಂಡಗಳನ್ನು ರಚಿಸಿ, ಮುಂಬೈ, ಬೆಂಗಳೂರು, ಕೇರಳಕ್ಕೂ ಕಳಿಸಿದ್ದರು. ಆದರೆ ಎರಡು ವಾರಗಳ ಹಿಂದೆ ಪೊಲೀಸ್ ತಂಡಗಳು ಬರಿಗೈಲಿ ವಾಪಸಾಗಿದ್ದರಿಂದ ಪ್ರಕರಣ ಇನ್ನೇನು ಮುಚ್ಚಿ ಹೋಗುತ್ತದೆ ಎನ್ನುವ ಅನುಮಾನ ಕೇಳಿಬಂದಿತ್ತು.

    ಈ ನಡುವೆ, ಖಚಿತ ಮಾಹಿತಿ ಆಧರಿಸಿ ಸ್ಥಳೀಯ ಕೆಲವರನ್ನ ಪೊಲೀಸರು ವಶಕ್ಕೆ ಪಡೆದಿದ್ದರು. ಇದೀಗ ಪಶ್ಚಿಮ ವಲಯ ಐಜಿಪಿ ಸ್ಥಾನದಿಂದ ನಿರ್ಗಮಿಸುತ್ತಿರುವ ಹರಿಶೇಖರನ್, ಹಠಾತ್ತಾಗಿ ಶರತ್ ಹತ್ಯೆ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿದ್ದಾಗಿ ಮಾಹಿತಿ ನೀಡಿದ್ದಾರೆ. ಏಳು ತಂಡಗಳಲ್ಲಿ 30 ಪೊಲೀಸರು ಕಾರ್ಯನಿರ್ವಹಿಸಿದ್ದು ಸವಾಲಾಗಿದ್ದ ಪ್ರಕರಣವನ್ನು ಬೇಧಿಸಿದ್ದಾರೆ, ಒಟ್ಟು ಐದು ಮಂದಿ ಪ್ರಕರಣದ ಆರೋಪಿಗಳಾಗಿದ್ದು, ಉಳಿದ ಮೂವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.

    ಹತ್ಯೆಗೆ ಕಾರಣ ಏನು?
    ಶರತ್ ಹತ್ಯೆಯ ಎರಡು ವಾರಗಳ ಹಿಂದೆ ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿ ಎಸ್‍ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಕೊಲೆ ಮಾಡಲಾಗಿತ್ತು. ಕಲ್ಲಡ್ಕದಲ್ಲಿ ಕಲ್ಲು ತೂರಾಟ, ಚೂರಿ ಇರಿತದ ಕಾರಣದಿಂದ ತಿಂಗಳ ಪರ್ಯಂತ ಸೆಕ್ಷನ್ ಇದ್ದರೂ ಈ ಕೊಲೆ ನಡೆದಿದ್ದು ಈ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಅಶ್ರಫ್ ಹತ್ಯೆಯ ಪ್ರತೀಕಾರಕ್ಕಾಗಿ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿಯೂ ಹೊರಬಿದ್ದಿದೆ.

    ಆರೋಪಿಗಳು ಪಿಎಫ್‍ಐ ಸಂಘಟನೆಯ ಸಕ್ರಿಯ ಸದಸ್ಯರಾಗಿದ್ದು ಮತೀಯ ದ್ವೇಷಕ್ಕೆ ಅಮಾಯಕ ಶರತ್‍ನ ರಕ್ತ ಹೀರಿದ್ದಾರೆ. ಪ್ರಕರಣ ಪ್ರಮುಖ ಆರೋಪಿ ಚಾಮರಾಜನಗರ ಜಿಲ್ಲೆಯ ಪಿಎಫ್‍ಐ ಅಧ್ಯಕ್ಷ ಖಲೀಲುಲ್ಲಾ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದು, ಪರೋಕ್ಷ ಭಾಗಿಯಾದವರ ಮಾಹಿತಿಗಾಗಿ ಪೊಲೀಸರು ಕಠಿಣ ವಿಚಾರಣೆ ನಡೆಸುತ್ತಿದ್ದಾರೆ ಎಂದು ಹರಿಶೇಖರನ್ ಹೇಳಿದ್ದಾರೆ.

    ಆರೋಪಿಗಳ ಬಂಧನದಿಂದ 43 ದಿನಗಳಿಂದ ಮಗನ ಸಾವಿನ ನ್ಯಾಯಕ್ಕಾಗಿ ಹಂಬಲಿಸುತ್ತಿದ್ದ ಶರತ್ ಹೆತ್ತವರಲ್ಲಿ ಸಮಾಧಾನ ಮೂಡಿದೆ. ಆದರೆ ಮತೀಯವಾದಿಗಳ ರಕ್ತ ದಾಹಕ್ಕೆ ಅಮಾಯಕರು ಬಲಿಯಾಗುತ್ತಿರುವುದು ದುರಂತ.

     

     

     

    https://www.youtube.com/watch?v=o40hIeKFh8E