ಕಾರವಾರ: ಕಾಶ್ಮೀರದಲ್ಲಿ ಸೈನಿಕರ ಮೇಲೆ ದಾಳಿ ನಡೆದ ನಂತರ ಇಡೀ ದೇಶ ನಮ್ಮ ಸೈನಿಕರ ನೋವಿಗೆ ಸ್ಪಂದಿಸಿದೆ. ಸೈನಿಕರಿಗಾಗಿ ದೇಶದ ಹಲವು ಜನರು ಸಹಾಯ ಮಾಡುವ ಜೊತೆ ಬೆಂಬಲ ಕೂಡ ನೀಡಿದ್ದಾರೆ. ಆದರೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಸೈನಿಕರಿಗೆ ವಿಶೇಷವಾದ ಪ್ರಾಧಾನ್ಯತೆ ನೀಡುವ ಮೂಲಕ ಗೌರವ ಸೂಚಿಸುತ್ತಿದೆ.
ಹೌದು. ಪುರಾಣ ಪ್ರಸಿದ್ದ ಮಹಾಬಲೇಶ್ವರ ದೇವಾಲಯದಲ್ಲಿ ದೇವರ ದರ್ಶನಕ್ಕೆ ಬರುವ ನಿವೃತ್ತ ಮತ್ತು ಸೇವೆಯಲ್ಲಿರುವ ಭಾರತೀಯ ಸೈನಿಕರಿಗೆ ವಿಶೇಷ ಪ್ರಾಶಸ್ತ್ಯವನ್ನು ದೇವಾಲಯದ ಆಡಳಿತ ಮಂಡಳಿ ಕಲ್ಪಿಸಿದೆ.
ಪ್ರವೇಶ ದ್ವಾರದಲ್ಲಿ ನಾಮಫಲಕವನ್ನು ಅಳವಡಿಸಿದ್ದು, ಕರ್ತವ್ಯ ನಿರ್ವಹಿಸುತ್ತಿರುವ ಅಥವಾ ನಿವೃತ್ತ ಹೊಂದಿದ ವೀರಯೋಧರು ದೇವಾಲಯದ ಕಾರ್ಯಾಲಯವನ್ನು ಸಂಪರ್ಕಿಸಿದರೆ, ಶ್ರೀ ದೇವರ ಶೀಘ್ರ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ತಿಳಿಸಿದೆ.
ರಾಮಚಂದ್ರಾಪುರ ಮಠ ದೇವಾಲಯದ ಆಡಳಿತವನ್ನು ವಹಿಸಿಕೊಂಡಾಗಿನಿಂದ ಭಕ್ತರಿಗೆ ವಿವಿಧ ಅನುಕೂಲತೆಗಳನ್ನು ಕಲ್ಪಿಸಿದೆ. ಈಗ ನಮ್ಮ ಹೆಮ್ಮೆಯ ಸೈನಿಕರಿಗೂ ಶೀಘ್ರವೇ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಟ್ಟಿದ್ದು, ಈ ಮೂಲಕ ಗೌರವ ಸೂಚಿಸಿದೆ.
ಬೆಂಗಳೂರು: ರಾಜಕೀಯ ಜಂಜಾಟದಲ್ಲಿ ಕಾವೇರಿ ವಿವಾದವನ್ನು ಮರೆತಿದ್ದ ರಾಜ್ಯದ ಜನಪ್ರತಿನಿಧಿಗಳು ಕೊನೆಗೂ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಕುರಿತಂತೆ ಕರೆದಿದ್ದ ಸರ್ವಪಕ್ಷಗಳ ಸಭೆಯಲ್ಲಿ ಕಾನೂನು ಹೋರಾಟಕ್ಕೆ ನಿರ್ಧರಿಸಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಗಂಣದಲ್ಲಿ ನಡೆದ ಸಭೆಯಲ್ಲಿ, ಜುಲೈ 2ರಂದು ನಡೆಯಲಿರುವ ಪ್ರಾಧಿಕಾರದ ಸಭೆಗೆ ರಾಜ್ಯದ ಪ್ರತಿನಿಧಿಗಳಾದ ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತು ಕಾವೇರಿ ನೀರಾವರಿ ನಿಗಮದ ಎಂಡಿ ಪ್ರಸನ್ನ ಅವರನ್ನ ಕಳುಹಿಸಲು ತೀರ್ಮಾನಿಸಲಾಗಿದೆ.
ಈ ವೇಳೆ ವಿಪಕ್ಷ ನಾಯಕ ಯಡಿಯೂರಪ್ಪ, ಉಭಯ ಸದನಗಳ ನಾಯಕರು, ಕೇಂದ್ರ ಸಚಿವರು, ಸಂಸದರು ಹಾಗೂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸೇರಿದಂತೆ ಕಾವೇರಿ ಜಲಾನಯನ ಭಾಗದ ಶಾಸಕರು ಪಾಲ್ಗೊಂಡು ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ.
ಸಭೆ ಬಳಿಕ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು, ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಗೆ ರಾಜ್ಯದಿಂದ ನಮ್ಮ ಪ್ರತಿನಿಧಿಗಳನ್ನು ಕಳುಹಿಸುತ್ತೇವೆ. ಜುಲೈ 2 ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಇದೆ. ಆ ಸಭೆಯಲ್ಲಿ ನಮ್ಮ ಪ್ರತಿನಿಧಿ ಇರುತ್ತಾರೆ. ಅಷ್ಟೇ ಅಲ್ಲ ನಮಗಾಗಿರುವ ಅನ್ಯಾಯವನ್ನು ಕೇಂದ್ರದ ಮುಂದೆ ಪ್ರತಿಭಟಿಸಲು ಸರ್ವಾನುಮತದಿಂದ ನಿರ್ಧರಿಸಲಾಗಿದೆ. ಅಂತಿಮ ಹಂತದ ನ್ಯಾಯಾಲಯದ ಹೋರಾಟದಲ್ಲಿ ಹೇಗೆ ವಾದ ಮಂಡನೆ ಮಾಡಬೇಕು ಎಂದು ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು.
ಇದೇ ವೇಳೆ ಮತನಾಡಿದ ವಿಪಕ್ಷ ನಾಯಕ ಯಡಿಯೂರಪ್ಪ ಅವರು, ನಿರ್ವಹಣಾ ಮಂಡಳಿ ಬಗ್ಗೆ ಲೋಕಸಭೆ ಅಧಿವೇಶನದಲ್ಲಿ ಚರ್ಚಿಸಲು ತೀರ್ಮಾನ ಮಾಡಲಾಗಿದೆ. ಸಾಧ್ಯವಾದರೆ ಸಂವಿಧಾನ ಪೀಠದಲ್ಲಿ ಪ್ರಶ್ನೆ ಮಾಡಲು ಸಿದ್ಧರಿದ್ದೇವೆ. ಸಭೆಯಲ್ಲಿ ಉತ್ತಮ ಚರ್ಚೆಯಾಗಿದೆ. ಜಲ, ನಾಡು, ನುಡಿ ವಿಚಾರದಲ್ಲಿ ನಾವು ಯಾವಾಗಲೂ ಸರ್ಕಾರದ ಜೊತೆಗೆ ಇದ್ದೇವೆ. ಕಾವೇರಿ ವಿಚಾರದಲ್ಲಿ ಸರ್ಕಾರಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ. ಲೋಕಸಭೆ ಅಧಿವೇಶನದಲ್ಲಿ ಈ ಕುರಿತು ನಾವು ಚರ್ಚಿಸುತ್ತೇವೆ. ಕೇಂದ್ರ ಸಚಿವರು ಕೂಡ ಸಹಕಾರ ಕೊಡುತ್ತಾರೆ. ಅನಂತಕುಮಾರ್ ಕೂಡ ಈ ಕುರಿತು ಹಲವು ಸಲಹೆ ಕೊಟ್ಟಿದ್ದಾರೆ ಎಂದರು.
ಮಾಜಿ ಸಿಎಂ ಗೈರು: ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಬೆಂಗಳೂರಿನಲ್ಲಿದ್ದರೂ ಕೂಡ ಸಭೆಗೆ ಗೈರು ಹಾಜರಾಗಿದ್ದರು. ಕಾವೇರಿಯಂತಹ ಪ್ರಮುಖ ವಿಚಾರದ ಬಗ್ಗೆ ಚರ್ಚೆ ನಡೆಯುತ್ತಿದ್ದರೂ, ತಮ್ಮ ಸ್ವಗೃಹದಲ್ಲಿ ಮಾಜಿ ಸಚಿವ ಎಂ.ಬಿ. ಪಾಟೀಲ್ ಜೊತೆ ರಾಜಕೀಯ ವಿದ್ಯಮಾನಗಳ ಬಗ್ಗೆ ಸಮಾಲೋಚನೆ ನಡೆಸಿದ್ದರು.
ನವದೆಹಲಿ: ಜೀವನದಿ ಕಾವೇರಿ, ಕರ್ನಾಟಕ, ಕನ್ನಡಿಗರ ಕೈ ತಪ್ಪಿ ಹೋಗುತ್ತಾಳ ಎನ್ನುವ ಆತಂಕ ಹೆಚ್ಚಾಗಿದೆ. ಫೆಬ್ರವರಿ 16ರಂದು ಹೆಚ್ಚುವರಿಯಾಗಿ 14.75 ಟಿಎಂಸಿ ಹೆಚ್ಚುವರಿ ನೀರು ಕೊಟ್ಟು ಖುಷಿ ಕೊಟ್ಟಿದ್ದ ಸುಪ್ರೀಂಕೋರ್ಟ್ ನಿರ್ವಹಣಾ ಮಂಡಳಿ ಬಗ್ಗೆ ಪ್ರಸ್ತಾಪಿಸದೇ ಹೊಸದಾಗಿ `ಸ್ಕೀಂ’ ಎನ್ನುವ ಪದವನ್ನ ಹೇಳಿ ಹುಳು ಬಿಟ್ಟಂತೆ ಮಾಡಿತ್ತು. ಇದರ ಬಗ್ಗೆ ಮೇಲ್ಮನವಿ ಸಲ್ಲಿಸಲು 6 ವಾರಗಳ ಕಾಲಾವಕಾಶವನ್ನೂ ನೀಡಿತ್ತು. ಹೆಚ್ಚುವರಿ ನೀರು ಸಿಕ್ಕಿದೆ ಅಂತ ಬೆಂಗಳೂರಿಗರು ಸೇರಿ ದಕ್ಷಿಣ ಕರ್ನಾಟಕದ ಮಂದಿ ಹಿರಿಹಿರಿ ಹಿಗ್ಗಿದ್ದರು.
ಈ `ಸ್ಕೀಂ’ ಎನ್ನುವುದು ನಮ್ಮ ಪಾಲಿನ ತೂಗುಗತ್ತಿ ಎಂದು ಅಂದೇ ಕೇಳಿ ಬಂದಿದ್ದ ವಿಶ್ಲೇಷಣೆ ಈಗ ನಿಜವಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶದ ಕರ್ನಾಟಕ, ತಮಿಳುನಾಡು, ಕೇರಳ, ಪುದುಚೆರಿ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ಜೊತೆ ದೆಹಲಿಯಲ್ಲಿ ಕೇಂದ್ರ ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿ ಉಪೇಂದ್ರ ಪ್ರಸಾದ್ ಸಿಂಗ್ ಶುಕ್ರವಾರ ಸಭೆ ನಡೆಸಿದ್ದಾರೆ.
ಸಭೆಯ ಬಳಿಕ ಮಾತನಾಡಿ ನಿರ್ವಹಣಾ ಮಂಡಳಿ. ಸ್ಕೀಂ ನಡುವೆ ವ್ಯತ್ಯಾಸ ಇಲ್ಲ. ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ನೀರಿನ ನಿರ್ವಹಣೆಗಾಗಿ ಸ್ಕೀಂ ರಚಿಸಲೇ ಬೇಕಿದೆ ಎಂದು ಉಪೇಂದ್ರ ಪ್ರಸಾದ್ ಹೇಳಿದ್ದಾರೆ. ರಾಜ್ಯದ ಮುಖ್ಯಕಾರ್ಯದರ್ಶಿ ರತ್ನಪ್ರಭ ಮಾತನಾಡಿ, ಸ್ಕೀಂ ರಚನೆಗೆ ಎಲ್ಲಾ ಸರ್ಕಾರಗಳು ಸಮ್ಮತಿ ಸೂಚಿಸಿವೆ. ಸ್ಕೀಂ ಸ್ವರೂಪದ ಬಗ್ಗೆ ಮುಂದಿನ ವಾರದೊಳಗೆ ನಾವು ಕಳುಹಿಸುತ್ತೇವೆ ಎಂದು ತಿಳಿಸಿದರು.
ಕಾವೇರಿ `ಸ್ಕೀಂ’ ರಚನೆ ಹೇಗಿರಬಹದು?
* ಸುಪ್ರಿಂಕೊರ್ಟ್ ಆದೇಶದ ಅನ್ವಯ ನೀರು ಹಂಚಿಕೆಗೆ ಯೋಜನೆ ರಚಿಸುವುದು
* ಸ್ಕೀಂಗೆ ಕೇಂದ್ರ, ನಾಲ್ಕು ರಾಜ್ಯಗಳ ಪ್ರತಿನಿಧಿಗಳ ಉಸ್ತುವಾರಿ
* ಡ್ಯಾಮ್‍ಗಳಲ್ಲಿನ ನೀರು ಆಧರಿಸಿ ಪ್ರತಿ ತಿಂಗಳು ಲೆಕ್ಕಾಚಾರ ಹಾಕಿ ನೀರು ಹಂಚಬಹುದು
* ಸಂಕಷ್ಟ ಸಂದರ್ಭ ಸಭೆ ನಡೆಸಿ ನೀರು ಹಂಚಿಕೆ ವಿವಾದ ಇತ್ಯರ್ಥ ಪಡಿಸಬಹುದು
* ಸಮಿತಿ ರಚನೆ, ಸದಸ್ಯರ ಆಯ್ಕೆ ಮತ್ತು ಅಧಿಕಾರ ವ್ಯಾಪ್ತಿ ಇನ್ನು ನಿರ್ಧಾರವಾಗಿಲ್ಲ
* ಕೇಂದ್ರದ ಇವತ್ತಿನ ಹೇಳಿಕೆ ಗಮನಿಸಿದರೆ ಮಂಡಳಿಯನ್ನೇ ಹೋಲುವ ಅಂಶಗಳು ಬಹುತೇಕ ಸಾಧ್ಯತೆ
* ಎಲ್ಲ ರಾಜ್ಯಗಳ ಶಿಫಾರಸು ಪರಿಗಣಿಸಿ ಸ್ಕೀಂಗೆ ಚೌಕಟ್ಟು ನೀಡಲಿರುವ ಕೇಂದ್ರ ಸರ್ಕಾರ
ಕಾವೇರಿ ನ್ಯಾಯಾಧಿಕರಣ ನೀಡಿದ್ದ ನೀರು ನಿರ್ವಹಣಾ ಮಂಡಳಿ ರಚನೆ ಹೇಗಿರುತ್ತೆ?
* ಕೇಂದ್ರವೇ ನೇಮಕ ಮಾಡುವ ಒಬ್ಬ ಪೂರ್ಣಾವಧಿ ಅಧ್ಯಕ್ಷ, ಇಬ್ಬರು ಪೂರ್ಣಾವಧಿ ಸದಸ್ಯರಿರುತ್ತಾರೆ
* ಅಧ್ಯಕ್ಷರಾಗುವವರಿಗೆ ಜಲಸಂಪನ್ಮೂಲ ನಿರ್ವಹಣೆಯಲ್ಲಿ ಕನಿಷ್ಠ 20 ವರ್ಷ ಅನುಭವ ಹೊಂದಿರಬೇಕು (ಚೀಫ್ ಎಂಜಿನಿಯರ್ ದರ್ಜೆಯ ಅಧಿಕಾರಿಯಾಗಿರಬೇಕು.)
* ಕೇಂದ್ರದ ಇಬ್ಬರು ಪ್ರತಿನಿಧಿಗಳು ಅರೆಕಾಲಿಕ ಸದಸ್ಯರಾಗಿರುತ್ತಾರೆ (ಚೀಫ್ ಎಂಜಿನಿಯರ್ ದರ್ಜೆಯ ಈ ಅರೆಕಾಲಿಕ ಸದಸ್ಯರ ಪೈಕಿ ಒಬ್ಬರು ನೀರಾವರಿ ಮತ್ತೊಬ್ಬರು ಕೃಷಿ ಕ್ಷೇತ್ರದಲ್ಲಿ ಪರಿಣಿತರಾಗಿರುತ್ತಾರೆ.
* ನಾಲ್ಕು ರಾಜ್ಯಗಳ ಪ್ರತಿನಿಧಿಗಳ ಆಯಾ ರಾಜ್ಯಗಲು ನಾಮನಿರ್ದೇಶನ ಮಾಡುತ್ತವೆ.(ಇವರೆಲ್ಲರೂ ಚೀಫ್ ಎಂಜಿನಿಯರ್ ದರ್ಜೆಯವರಾಗಿರಬೇಕು. ಎಲ್ಲರೂ ಮಂಡಳಿಯ ಅರೆಕಾಲಿಕ ಸದಸ್ಯರು)
* ಯಾವುದೇ ರಾಜ್ಯಕ್ಕೆ ಸೇರಿಲ್ಲದ ಒಬ್ಬರನ್ನು ಮಂಡಳಿಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗುವುದು (ಮಂಡಳಿಯೇ ಸೂಪರಿಟೆಂಡಿಂಗ್ ಎಂಜಿನಿಯರ್ ದರ್ಜೆಯ ಅಧಿಕಾರಿಯನ್ನ ನೇಮಿಸುತ್ತೆ)
* ಮಂಡಳಿಯ ಸಭೆ ನಿರ್ಧಾರಗಳು ಮತದಾನ ಪ್ರಕ್ರಿಯೆ ಮೂಲಕ ನಡೆಯುತ್ತೆ
* 6 ಮಂದಿ ಸದಸ್ಯರಿದ್ದರೆ ಕೋರಂನ ಎಲ್ಲ ಸದಸ್ಯರು ಮತದಾನದ ಸಮಾನ ಅಧಿಕಾರ ಹೊಂದಿರುತ್ತಾರೆ. ಇದನ್ನೂ ಓದಿ: ಕಾವೇರಿ ನೀರು ಹಂಚಿಕೆ ಸುಪ್ರೀಂ ತೀರ್ಪಿನಲ್ಲಿ ಏನಿದೆ? ಇಲ್ಲಿದೆ 14 ಪ್ರಮುಖ ಅಂಶಗಳು
ಮಂಡಳಿ ಹೇಗೆ.? ಕಾರ್ಯ ವ್ಯಾಪ್ತಿ ಏನು..?
* ಕಾವೇರಿ ಕಣಿವೆಯ ಕೇರಳ, ಕರ್ನಾಟಕ ಹಾಗೂ ತಮಿಳುನಾಡು ತಮ್ಮ ಜಲಾಶಯಗಳನ್ನು ಇದೇ ಮಂಡಳಿಯ ಉಸ್ತುವಾರಿ ಮತ್ತು ಮಾರ್ಗದರ್ಶನದಲ್ಲೇ ನಿರ್ವಹಿಸಬೇಕು.
* ಕಾವೇರಿ ಜಲಾಶಯಗಳನ್ನು ಈ ಮಂಡಳಿ ನೇರ ಸುಪರ್ದಿಗೆ ತೆಗೆದುಕೊಳ್ಳುವ ಪ್ರಸ್ತಾಪ ಇಲ್ಲ. ಆದರೆ ತಮಿಳುನಾಡು, ಕೇರಳ, ಕರ್ನಾಟಕ, ಪುದುಚೆರಿಯ ಪೈಕಿ ಯಾವುದೇ ಸರ್ಕಾರ ನ್ಯಾಯಮಂಡಳಿಯ ಐತೀರ್ಪಿನ ಜಾರಿಗೆ ಸಹಕಾರ ನೀಡದೆ ಹೋದರೆ ಮಂಡಳಿಯು ಕೇಂದ್ರ ಸರ್ಕಾರದ ನೆರವನ್ನು ಕೋರಬಹುದು.
* ಐತೀರ್ಪನ್ನು ಜಾರಿಗೊಳಿಸಲು ಅಗತ್ಯ ಬಿದ್ದರೆ ಮಂಡಳಿ / ಮಂಡಳಿಯ ಪ್ರತಿನಿಧಿ ಕಾವೇರಿ ಕೊಳ್ಳದ ಯಾವುದೇ ಜಲಾಶಯದ ಯಾವುದೇ ಭಾಗವನ್ನು ಪ್ರವೇಶಿಸುವ ಅಧಿಕಾರ ಹೊಂದಿರುತ್ತಾನೆ.
* ನಿರ್ದಿಷ್ಟ ರಾಜ್ಯ ತಾನು ಬಿಡುಗಡೆ ಮಾಡಬೇಕಾದ ಪ್ರಮಾಣದ ನೀರನ್ನು ಬಿಡುಗಡೆ ಮಾಡದೆ ಹೋದರೆ ಮಂಡಳಿಗೆ ಸೂಕ್ತ ಕ್ರಮ ಜರುಗಿಸುವ ಅಧಿಕಾರ ಇದೆ.
* ನಿಗದಿತ ಪ್ರಮಾಣದ ನೀರನ್ನು ಬಿಡುಗಡೆ ಮಾಡದಿದ್ದರೆ, ಬಿಡುಗಡೆ ಮಾಡಿಲ್ಲದ ಪ್ರಮಾಣದ ನೀರನ್ನು ಆಯಾ ರಾಜ್ಯದ ಬೇಡಿಕೆಯಿಂದ ಕಡಿತ ಮಾಡಲಾಗುವುದು.
* ಜಲವರ್ಷದ ಆರಂಭವಾಗುವ ಜೂನ್ 1 ರಂದು ಆ ತಿಂಗಳಿನಲ್ಲಿ ತಮಗೆ ಬೇಕಿರುವ ನೀರಿನ ಪ್ರಮಾಣವನ್ನು ತಮ್ಮ ಪ್ರತಿನಿಧಿಗಳ ಮೂಲಕ ಮಂಡಳಿಯ ಮುಂದೆ ಮಂಡಿಸಬೇಕು.
* ರಾಜ್ಯಗಳ ಬೇಡಿಕೆ ಅನ್ವಯ ನೀರಿನ ಅಗತ್ಯ ನಿಜವಾಗಲೂ ರಾಜ್ಯಗಳಿಗೆ ಇದೆಯೇ ಇಲ್ಲವೇ ಎಂಬುದನ್ನು ಮಂಡಳಿ ಪರಿಶೀಲಿಸುವುದು.
* ಬೆಳೆ ಪದ್ಧತಿ, ನೀರಾವರಿ ಪ್ರದೇಶದ ವಿಸ್ತೀರ್ಣ, ಮಳೆಯ ಪ್ರಮಾಣ, ಜಲಾಶಯಗಳ ಒಳಹರಿವು ಹಾಗೂ ನ್ಯಾಯಮಂಡಳಿ ಮಾಡಿರುವ ಹಂಚಿಕೆಯನ್ನು ಗಮನದಲ್ಲಿ ಇರಿಸಿಕೊಂಡು ರಾಜ್ಯಗಳಿಗೆ ನೀರು ನೀಡಲಾಗುವುದು.
ಮೈಸೂರು: ಇಬ್ಬರು ಮಾನಸಿಕ ರೋಗಿಗಳನ್ನ ಕೊಠಡಿಯಲ್ಲಿ ಕೂಡಿ ಹಾಕಿರುವ ಅಮಾನವೀಯ ಘಟನೆ ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ನಡೆದಿದೆ.
ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ 2ನೇ ಮಹಡಿಯಲ್ಲಿಯ ಕೊಠಡಿಯಲ್ಲಿ ಇಬ್ಬರು ಮಾನಸಿಕ ರೋಗಿಗಳನ್ನು ಬಂಧನದಲ್ಲಿ ಇರಿಸಲಾಗಿದೆ. ಕೊಠಡಿಗಳು ಕೆಆರ್ ಆಸ್ಪತ್ರೆ ನಿರ್ವಹಣೆಗೆ ಒಳಪಟ್ಟಿದೆ.
ಕೊಠಡಿಯಲ್ಲಿ ಕೂಡಿ ಹಾಕಿರುವ ಇಬ್ಬರು ಮಾನಸಿಕ ರೋಗಿಗಳಿಗೂ ಯಾವುದೇ ಶುಶ್ರೂಷೆಯನ್ನು ನೀಡಿಲ್ಲ. ಇನ್ನು ರೋಗಿಗಳಿಗೆ ಯಾರು ವಾರಸುದಾರರಿಲ್ಲದೆ ಇರುವುದರಿಂದ ಪ್ರಾಣಿಗಳಿಗಿಂತ ಹೀನವಾಗಿ ನೋಡಿಕೊಳ್ಳಲಾಗಿದೆ. ರೋಗಿಗಳು ಕುಳಿತಲ್ಲಿಯೇ ಮಲಮೂತ್ರ ವಿಸರ್ಜನೆ ಮಾಡಿಕೊಂಡಿದ್ದು, ಸ್ಪಚ್ಚತೆ ಎಂಬುವುದು ಮರೀಚಿಕೆಯಾಗಿದೆ.