ಕಿರುತೆರೆ ಧಾರಾವಾಹಿ ಹಾಗೂ ಬಿಗ್‌ಬಾಸ್ ಖ್ಯಾತಿಯ ವೈಷ್ಣವಿ ಗೌಡ (Vaishnavi Gowda) 2025ರ ಜೂನ್ ತಿಂಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಅನುಕೂಲ್ ಮಿಶ್ರಾ ಜೊತೆ ಹಸೆಮಣೆ ಏರಿದ್ದ ನಟಿ ವೈಷ್ಣವಿ ಗೌಡ ಸದ್ಯ ಹನಿಮೂನ್ ಟ್ರಿಪ್‌ನಲ್ಲಿದ್ದಾರೆ. ಪತಿ ಜೊತೆ ಇತ್ತೀಚಿಗೆ ಉತ್ತರಾಖಂಡ್ (Uttarakhand) ಋಷಿಕೇಶ್ ಬಳಿಯಿರುವ ಶಿವಪುರಿಯಲ್ಲಿ ಬಂಗೀ ಜಂಪ್ ಮಾಡಿ ಸಂಭ್ರಮಿಸಿದ್ದರು.
ಉತ್ತರಾಖಂಡ್ ಋಷಿಕೇಶ್ ಬಳಿಯಿರುವ ಶಿವಪುರಿಯಲ್ಲಿ ವೈಷ್ಣವಿ ಗೌಡ ಹಾಗೂ ಪತಿ ಅನುಕೂಲ್ ಮಿಶ್ರಾ ಬರೋಬ್ಬರಿ 117 ಅಡಿ ಎತ್ತರದಿಂದ ಜಿಗಿದು ಸಂಭ್ರಮ ಪಟ್ಟಿದ್ದರು. ಉತ್ತರ ಭಾರತದಲ್ಲಿ ಹನಿಮೂನ್ ಪ್ರವಾಸವನ್ನ ಕೈಗೊಂಡಿರುವ ವೈಷ್ಣವಿ ಗೌಡ ಹಾಗೂ ಅನುಕೂಲ್ ಮಿಶ್ರಾ ಮನಾಲಿಯಲ್ಲಿ ಬಗೆ ಬಗೆಯ ಬಟ್ಟೆತೊಟ್ಟು ಪೋಸ್ ಕೊಟ್ಟಿದ್ದರು. ಆ ಫೋಟೋಗಳನ್ನ ಜಾಲತಾಣದಲ್ಲಿ ಹಂಚಿಕೊಂಡಿದ್ದರು ವೈಷ್ಣವಿ.
ವೈಷ್ಣವಿ ಗೌಡ ಹನಿಮೂನ್ ಟ್ರಿಪ್ ಅನ್ನ ಸಖತ್ ಎಂಜಾಯ್ ಮಾಡ್ತಿದ್ದು, ಡ್ಯಾನ್ಸ್ ಮಾಡಿರುವ ವಿಡಿಯೋವನ್ನ ಪೋಸ್ಟ್ ಮಾಡಿದ್ದಾರೆ. ವಿಡಿಯೋ ಕ್ರೆಡಿಟ್ ಹಸ್ಬಂಡ್ ಎಂದು ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋ ನೋಡಿದ ವೈಷ್ಣವಿ ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ಖುಷಿಯಿಂದ ಲೈಕ್ ಮಾಡಿದ್ರೆ ಇನ್ನು ಕೆಲವ್ರು ಈ ಆಷಾಡ ಮಾಸದಲ್ಲಿ ಯಾಕೆ ಹನಿಮೂನ್ ಬೇರೆ ಟೈಂ ಇರಲಿಲ್ಲವಾ ಅಂತಾ ಪ್ರಶ್ನೆ ಮಾಡಿದ್ದಾರೆ.
ವೈಷ್ಣವಿ ಗೌಡ ಮನಾಲಿ, ಉತ್ತರಾಖಂಡ್‌ನ ಶಿವಪುರಿ ಹಾಗೂ ಮುಂತಾದ ಜಾಗಗಳಿಗೆ ಪತಿ ಅನುಕೂಲ್ ಮಿಶ್ರಾ ಜೊತೆ ಭೇಟಿ ನೀಡಿದ್ದಾರೆ. ಅಲ್ಲಿನ ಸುಂದರ ಕ್ಷಣಗಳನ್ನ ಸೆರೆಹಿಡಿದು ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಶಿಮ್ಲಾ: ಪ್ಯಾರಾಗ್ಲೈಡರ್ (Paraglider) ನಿಯಂತ್ರಣ ಕಳೆದುಕೊಂಡು ಪರ್ವತಕ್ಕೆ ಅಪ್ಪಳಿಸಿದ ಪರಿಣಾಮ ಜೆಕ್‌ನ ಪ್ರವಾಸಿಗರೊಬ್ಬರು ಮೃತಪಟ್ಟ ಘಟನೆ ಹಿಮಾಚಲ ಪ್ರದೇಶದ (Himachal Pradesh) ಮನಾಲಿಯಲ್ಲಿ (Manali) ನಡೆದಿದೆ.
ಮೃತರನ್ನು ಡಿಟಾ ಮಿಸುರ್ಕೋವಾ (43) ಎಂದು ಗುರುತಿಸಲಾಗಿದೆ. ಅವರು ಹಾರಾಡುತ್ತಿದ್ದ ಪ್ಯಾರಾಗ್ಲೈಡರ್ ಮನಾಲಿಯ ಮರ್ಹಿ ಬಳಿ ಪರ್ವತಕ್ಕೆ ಅಪ್ಪಳಿಸಿತು. ಬಲವಾದ ಗಾಳಿಯಿಂದಾಗಿ ಅವರು ಗ್ಲೈಡರ್ ಮೇಲೆ ನಿಯಂತ್ರಣವನ್ನು ಕಳೆದುಕೊಂಡರು ಎಂದು ತಿಳಿದು ಬಂದಿದೆ.
ಪ್ಯಾರಾಗ್ಲೈಡರ್‌ನ್ನು ತಕ್ಷಣವೇ ಮನಾಲಿಯ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಮಿಸುರ್ಕೋವಾ ಕಳೆದ ಆರು ವರ್ಷಗಳಿಂದ ಪ್ಯಾರಾಗ್ಲೈಡಿಂಗ್ ಮಾಡುತ್ತಿದ್ದರು.
ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯನ್ನು ಪ್ಯಾರಾಗ್ಲೈಡಿಂಗ್ ಸ್ವರ್ಗ ಎಂದು ಕರೆಯಲಾಗುತ್ತದೆ. ಬಿರ್ ಬಿಲ್ಲಿಂಗ್‌ನಲ್ಲಿ ನವೆಂಬರ್ 2 ರಂದು ಪ್ಯಾರಾಗ್ಲೈಡಿಂಗ್ ವಿಶ್ವಕಪ್ 2024 ಪ್ರಾರಂಭವಾಗಲಿದೆ. ಅದಕ್ಕೂ ಮೊದಲು, ಹಿಮಾಚಲ ಪ್ರದೇಶದಲ್ಲಿ ಎರಡು ದಿನದಲ್ಲಿ ಇಬ್ಬರು ಪ್ಯಾರಾಗ್ಲೈಡರ್‌ಗಳು ಸಾವನ್ನಪ್ಪಿದ್ದಾರೆ.
ಮಂಗಳವಾರ ಬಿರ್-ಬಿಲ್ಲಿಂಗ್‌ನಲ್ಲಿ ಪ್ಯಾರಾಗ್ಲೈಡರ್ ಒಬ್ಬರು ಮತ್ತೊಂದು ಗ್ಲೈಡರ್‌ಗೆ ಗಾಳಿಯಲ್ಲಿ ಡಿಕ್ಕಿ ಹೊಡೆದ ಪರಿಣಾಮ ಬೆಲ್ಜಿಯಂ ಪ್ಯಾರಾಗ್ಲೈಡರ್ ಸಾವನ್ನಪ್ಪಿದ್ದರು. ಅಪಘಾತದ ನಂತರ ಅವರ ಪ್ಯಾರಾಚೂಟ್ ತೆರೆಯಲು ವಿಫಲವಾಗಿತ್ತು.
ಮೈಸೂರು: ಪ್ಯಾಕೇಜ್ ಟೂರ್‌ನಲ್ಲಿ (Package Tour) ಕುಲು ಮನಾಲಿ (Manali) ಪ್ರವಾಸಕ್ಕೆಂದು (Tour) ತೆರಳಿದ್ದ ಮೈಸೂರಿನ (Mysuru) ನಾಲ್ವರು ಪ್ರವಾಸಿಗರು ನಾಪತ್ತೆಯಾಗಿದ್ದಾರೆ.
ಶ್ರೀನಿಧಿ, ನವ್ಯ, ವೀರ್ ಹಾಗೂ ಅವರ ಪತ್ನಿ ಮೈಸೂರಿನ ನಿವಾಸಿಗಳಾಗಿದ್ದು, ಕುಲು ಮನಾಲಿ ಪ್ರವಾಸಕ್ಕೆಂದು ಕಳೆದ ಗುರುವಾರ ಮೈಸೂರಿನಿಂದ ಹೊರಟಿದ್ದರು. ಪ್ರವಾಸಕ್ಕೆ ಹೋದ ಮೇಲೆ ಭಾನುವಾರ ಕೊನೆಯ ಬಾರಿ ಸಂಪರ್ಕಕ್ಕೆ ಸಿಕ್ಕಿದ್ದು, ಮಳೆ ಜಾಸ್ತಿ ಇದೆ, ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ. ನಾವು ಕೊಠಡಿಯಲ್ಲಿ ಸುರಕ್ಷಿತವಾಗಿದ್ದೇವೆ ಎಂದು ಕುಟುಂಬಸ್ಥರಿಗೆ ತಿಳಿಸಿದ್ದರು. ಇದನ್ನೂ ಓದಿ: ಒಂದೇ ಕುಣಿಕೆಗೆ ಕೊರಳೊಡ್ಡಿದ ತಾಯಿ-ಮಗಳು!
ಅದಾದ ಬಳಿಕ ಇದುವರೆಗೂ ಯಾರೊಬ್ಬರ ಬಗ್ಗೆಯೂ ಮಾಹಿತಿ ಇಲ್ಲ. ಈ ಬಗ್ಗೆ ಮನೆಯವರು ಆತಂಕಗೊಂಡಿದ್ದು, ಕುಟುಂಬಸ್ಥರ ಬಗ್ಗೆ ಮಾಹಿತಿ ನೀಡಿ ಸುರಕ್ಷಿತವಾಗಿ ಕರೆತರುವಂತೆ ಮನವಿ ಮಾಡಿದ್ದಾರೆ. ಇವರೊಂದಿಗೆ ರಾಜ್ಯಾದ್ಯಂತ 50ಕ್ಕೂ ಹೆಚ್ಚು ಮಂದಿ ಪ್ರವಾಸಕ್ಕೆ ತೆರಳಿದ್ದು, ಯಾವ ಟ್ರ್ಯಾವಲ್ಸ್ ಎಂಬ ಬಗ್ಗೆ ಸಂಬಂಧಿಕರಿಗೆ ಸಮರ್ಪಕ ಮಾಹಿತಿ ಇಲ್ಲ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮನೆಯ ವಸ್ತುಗಳನ್ನು ಮಾರಿ ಕುಡಿದು ಮಜಾ ಮಾಡ್ತಿದ್ದ ಮಗನನ್ನು ಕೊಂದ ತಂದೆ!
ಕನ್ನಡದ ಹೆಸರಾಂತ ನಟ ಸತೀಶ್ ನೀನಾಸಂ (Satish Ninasam) ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರ ನಟನೆಯ ಸಾಲು ಸಾಲು ಚಿತ್ರಗಳು ಹಿಟ್ ಆಗುತ್ತಿದ್ದಂತೆಯೇ ಬಹುಬೇಡಿಕೆಯ ನಟರಾಗಿದ್ದಾರೆ. ಹಾಗಾಗಿ ಅವರ ಕೈಲಿ ಇದೀಗ ನಾಲ್ಕೈದು ಚಿತ್ರಗಳು ಇವೆ. ಒಂದೊಂದೇ ಶೂಟಿಂಗ್ ಮುಗಿಸುತ್ತಿದ್ದಾರೆ. ಸದ್ಯ ಮ್ಯಾಟ್ನಿ (Matney) ಸಿನಿಮಾದ ಹಾಡಿನ ಚಿತ್ರೀಕರಣದಲ್ಲಿ ಅವರು ಬ್ಯುಸಿಯಾಗಿದ್ದು ಶೂಟಿಂಗ್ ಗಾಗಿ ಮನಾಲಿಗೆ (Manali) ಪ್ರಯಾಣ ಬೆಳೆಸಿದ್ದಾರೆ.
ಸದ್ಯ ಮನಾಲಿಯಲ್ಲಿ ಮ್ಯಾಟ್ನಿ ಸಿನಿಮಾದ ಹಾಡೊಂದರ ಚಿತ್ರೀಕರಣ ನಡೆಯುತ್ತಿದ್ದು, ಈ ಹಾಡಿನಲ್ಲಿ ಸತೀಶ್ ಜೊತೆ ಅದಿತಿ ಪ್ರಭುದೇವ್ (Aditi Prabhudev) ಹೆಜ್ಜೆ ಹಾಕುತ್ತಿದ್ದಾರೆ. ಇದೊಂದು ರೋಮ್ಯಾಂಟಿಕ್ ಗೀತೆಯಾಗಿದ್ದು, ಕೊರವ ಚಳಿಯಲ್ಲಿ ಹಾಡಿನ ಚಿತ್ರೀಕರಣ ನಡೆಯುತ್ತಿದೆ. ಹಿಮದ ಮಧ್ಯೆ ಈ ಜೋಡಿ ಹಾಡಿಗೆ ಹೆಜ್ಜೆ ಹಾಕುತ್ತಿದೆ. ಇದನ್ನೂ ಓದಿ: ಆಗ ಭಾಯ್, ಈಗ ಪತಿ: ಟ್ರೋಲ್ ಆಯ್ತು ನಟಿ ಸ್ವರಾ ಭಾಸ್ಕರ್ ಪೋಸ್ಟ್
ಶೂಟಿಂಗ್ ಕುರಿತಾಗಿ ಮಾತನಾಡಿರುವ ಸತೀಶ್, ‘ಈ ಸಿನಿಮಾದ ಅಷ್ಟೂ ಹಾಡುಗಳು ವಿಶೇಷವಾಗಿ ಮೂಡಿ ಬಂದಿವೆ. ರಚಿತಾ (Rachita Ram) ಮತ್ತು ನಾನು ಈ ಹಿಂದೆ ಒಂದು ಹಾಡಿನಲ್ಲಿ ಕಾಣಿಸಿಕೊಂಡಿದ್ದೆವು. ಆ ಹಾಡು ಕೂಡ ಅದ್ಧೂರಿಯಾಗಿ ಮೂಡಿ ಬಂದಿದೆ. ಇದೀಗ ಅದಿತಿ ಜೊತೆ ಮತ್ತೊಂದು ಹಾಡಿಗೆ ಹೆಜ್ಜೆ ಹಾಕಿರುವೆ. ಮನಾಲಿಯಲ್ಲಿ ಈವರೆಗೂ ಯಾರೂ ಹೋಗಿರದೇ ಇರುವಂಥ ಸ್ಥಳದಲ್ಲಿ ಶೂಟ್ ಮಾಡಲಾಗಿದೆ. ಮೈನಸ್ ಚಳಿ ಇತ್ತು. ಹಿಮ ಬೀಳುತ್ತಿತ್ತು. ಅದೊಂದು ಅದ್ಭುತ ಅನುಭವ’ ಎನ್ನುತ್ತಾರೆ.
ಈ ಸಿನಿಮಾದ ಮತ್ತೊಂದು ಹಾಡಿದ್ದು, ಆ ಹಾಡಿನ ಚಿತ್ರೀಕರಣದ ನಂತರ ಮ್ಯಾಟ್ನಿ ಸಂಪೂರ್ಣ ಶೂಟಿಂಗ್ ಮುಗಿಸಲಿದೆ. ಈ ಸಿನಿಮಾವನ್ನು ಮನೋಹರ್ ಕಾಂಪಲ್ಲಿ ನಿರ್ದೇಶನ ಮಾಡುತ್ತಿದ್ದು, ಪಾರ್ವತಿ ನಿರ್ಮಾಪಕರು. ಪೂರ್ಣ ಚಂದ್ರ ತೇಜಸ್ವಿ ಅವರ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬಂದಿದೆ. ಶಿವರಾಜ್ ಕೆ.ಆರ್ ಪೇಟೆ ಸೇರಿದಂತೆ ನುರಿತ ಕಲಾವಿದರೇ ತಾರಾಗಣದಲ್ಲಿ ಇದ್ದಾರೆ.
LIVE TV
[brid partner=56869869 player=32851 video=960834 autoplay=true]
ಬಾಲಿವುಡ್ ಕಂಟ್ರಾವರ್ಷಿಯಲ್ ಕ್ವೀನ್ ಕಂಗನಾ ರಣಾವತ್ ಅವರ `ಧಾಕಡ್’ ಚಿತ್ರದ ಸೋಲಿನ ನಂತರ ಇದೀಗ ಕಂಗನಾ ಹೊಸ ಮನೆಯನ್ನ ಖರೀದಿಸಿದ್ದಾರೆ. ತಮ್ಮ ಹೊಸ ಮನೆಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅವರು ತಮ್ಮ ಇನ್ಸ್ಟಾಗ್ರಾಂ ಪೇಜ್‌ನಲ್ಲಿ ಮನಾಲಿಯಲ್ಲಿರುವ ಅವರ ಹೊಸ ಮನೆಯ ಬಹಳಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.
ಬಾಕ್ಸಾಫೀಸ್‌ನಲ್ಲಿ ಕಂಗನಾ ನಟನೆಯ `ಧಾಕಡ್’ ಚಿತ್ರ ಮಕಾಡೆ ಮಲಗಿದ ನಂತರ ಹೊಸ ಮನೆ ಖರೀದಿ ಮಾಡಿ, ಸುದ್ದಿಯಲ್ಲಿದ್ದಾರೆ. ಈ ಬಾರಿ ತಮ್ಮ ಮನೆಯನ್ನು ವಿಭಿನ್ನವಾಗಿ ವಿನ್ಯಾಸಗೊಳಿಸಲಾಗಿದೆ. ಮನಾಲಿಯಲ್ಲಿರುವ ಕಂಗನಾ ರಣಾವತ್ ಅವರ ಹೊಸ ಮನೆಯ ಕೆಲವು ಅತ್ಯುತ್ತಮ ಫೋಟೋಗಳು ಇಂಟರ್‌ನೆಟ್‌ನಲ್ಲಿ ಹರಿದಾಡುತ್ತಿವೆ. ಇದನ್ನೂ ಓದಿ: ಕೊನೆಗೂ ರಿವೀಲ್ ಆಯಿತು ನಯನತಾರಾ ಮತ್ತು ವಿಘ್ನೇಶ್ ಶಿವನ್ ಮದುವೆ ಫೋಟೋ
ನಾನು ಹೊಸ ಮನೆಯನ್ನು ನಿರ್ಮಿಸಿರುವ ಕುರಿತು ಹೇಳಿಕೊಂಡಿದ್ದಾರೆ. ತನ್ನ ಹೊಸ ಮನೆ ವಿಸ್ತರಣೆಯಾಗಿದೆ ಆದರೆ ಈ ಮನೆಗೆ ಸಾಂಪ್ರದಾಯಿಕ ಲುಕ್ ಕುರಿತು ಕಂಗನಾ ರಣಾವತ್ ತಮ್ಮ ಪೋಸ್ಟ್ನಲ್ಲಿ ಹೇಳಿದ್ದಾರೆ. ಕಂಗನಾ ರಣಾವತ್ ಅವರ ಈ ಮನೆಯಲ್ಲಿ, ದೊಡ್ಡ ಗೋಡೆಯ ಮೇಲೆ ಹಲವು ರೀತಿಯ ಪೇಂಟಿಂಗ್‌ಗಳನ್ನು ಅಳವಡಿಸಲಾಗಿದೆ. ಈ ಗೋಡೆಯು ವಿಶೇಷವಾಗಿದೆ ಮತ್ತು ಹಿಮಾಚಲದ ವಿವಿಧ ಸಂಪ್ರದಾಯಗಳನ್ನು ಅದರ ಮೇಲೆ ತೋರಿಸಲಾಗಿದೆ. ಮನಾಲಿಯ ಸುಂದರ ಪ್ರದೇಶದ ಮಧ್ಯೆ ಕಂಗನಾ ಚೆಂದದ ಮನೆ ಖರೀದಿಸಿದ್ದು, ನಟಿಯ ಅಭಿರುಚಿಗೆ ಮತ್ತು ಅವರ ಹೊಸ ಮನೆಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸುವುದರ ಜತೆಗೆ ಶುಭಹಾರೈಸಿದ್ದಾರೆ.ಮನಾಲಿ
ಶಿಮ್ಲಾ: ವಿಶ್ವದ ಅತೀ ಎತ್ತರ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ 9.2 ಕಿ.ಮೀ ಉದ್ದದ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದ್ದಾರೆ.
ಇಂದು ಬೆಳಗ್ಗೆ ಚಂಡೀಗಢ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿಯವರು, ಬೆಳಗ್ಗೆ 10.15ರ ಸುಮಾರಿಗೆ ಹಿಮಾಚಲಪ್ರದೇಶದ ರೋಹ್ಟಂಗ್ ನಲ್ಲಿರುವ ಸುರಂಗ ಮಾರ್ಗವನ್ನು ಉದ್ಘಾಟನೆ ಮಾಡಿದರು. ಪ್ರಧಾನಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತಿತರ ಗಣ್ಯರು ಈ ವೇಳೆ ಸಾಥ್ ನೀಡಿದರು. ಮನಾಲಿ- ಲೇಹ್ ನಡುವೆ ಈ ಸುರಂಗ ಮಾರ್ಗ ಇದಾಗಿದ್ದು, ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೊರೊನಾ ಮುನ್ನೆಚ್ಚರಿಕೆಯಾಗಿ ವೇದಿಕೆಯ ಸುತ್ತಮುತ್ತ ಸ್ಯಾನಿಟೈಸ್ ಮಾಡಲಾಗಿತ್ತು. ಅಲ್ಲದೆ ಸ್ಥಳದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.
Himachal Pradesh: Prime Minister Narendra Modi inaugurates Atal Tunnel at Rohtang. pic.twitter.com/A7bXMs6WSR
ಮನಾಲಿಯ ದಕ್ಷಿಣ ತುದಿಯಲ್ಲಿರುವ ಈ ಅಟಲ್ ಸುರಂಗ ಹೆದ್ದಾರಿಯೂ ವಿಶ್ವದಲ್ಲಿಯೇ ಅತಿ ಉದ್ದದ ಹೆದ್ದಾರಿ ಮಾರ್ಗವಾಗಿದ್ದು, 9.02 ಕಿ.ಮೀ ಉದ್ದದ ಈ ಸುರಂಗ ಮನಾಲಿಯಿಂದ ಲಹೌಲ್ ಸ್ಪಿತಿ ಕಣಿಯನ್ನು ವರ್ಷವಿಡೀ ಸಂಪರ್ಕಿಸಲಿದೆ. ಇದಕ್ಕೂ ಮುನ್ನ ಭಾರೀ ಹಿಮಪಾತದ ಕಾರಣ 6 ತಿಂಗಳುಗಳ ಕಾಲ ಮಾತ್ರ ಕಣಿವೆಯ ಸಂಪರ್ಕ ಕಡಿತವಾಗುತ್ತಿತ್ತು. ಈ ಸುರಂಗ ಮಾರ್ಗವು ಮನಾಲಿ ಮತ್ತು ಲೆಹ್ ನಡುವಿನ ಅಂತರವನ್ನು 46 ಕಿ.ಮೀ. ತಗ್ಗಿಸಲಿದ್ದು, 4ರಿಂದ 5 ಗಂಟೆಗಳ ಸಮಯ ಉಳಿತಾಯವಾಗಲಿದೆ.
ಹಿಮಾಲಯದ ಪಿರ್ ಪಂಜಾಲ್ ಶ್ರೇಣಿಯಲ್ಲಿ ಅತ್ಯಾಧುನಿಕ ವಿಶೇಷಣ (ಅಲ್ಟ್ರಾ ಮಾಡರ್ನ್ ಸ್ಪೆಸಿಫಿಕೇಷನ್ಸ್) ಗಳೊಂದಿಗೆ ನಿರ್ಮಿಸಲಾಗಿದ್ದು, ಇದನ್ನು ಸಮುದ್ರ ಮಟ್ಟದಿಂದ ಸರಾಸರಿ 3,000 ಮೀಟರ್ (10,000 ಅಡಿ) ಎತ್ತರದಲ್ಲಿ ನಿರ್ಮಿಸಲಾಗಿದೆ. ಅಟಲ್ ಸುರಂಗದ ದಕ್ಷಿಣ ಭಾಗದಲ್ಲಿ ಮನಾಲಿಯಿಂದ 25 ಕಿ.ಮೀ. ದೂರದಲ್ಲಿ, 3,060 ಮೀಟರ್ ಎತ್ತರದಲ್ಲಿದೆ. ಉತ್ತರದ ಭಾಗದ ಸುರಂಗವು ಲಹೌಲ್ ಕಣಿವೆಯ ಸಿಸ್ಸು, ತೆಲಿಂಗ್ ಗ್ರಾಮದ ಬಳಿಯಿದ್ದು, 3,071 ಮೀಟರ್ ಎತ್ತರದಲ್ಲಿದೆ. ಇದು ಕುದುರೆಯ ಲಾಳದ ಆಕಾರದಲ್ಲಿರುವ, ದ್ವಿಪಥ ಮಾರ್ಗದ ಸುರಂಗವಾಗಿದ್ದು, 8 ಮೀಟರ್ ರಸ್ತೆ ಮಾರ್ಗವನ್ನು ಒಳಗೊಂಡಿದೆ.
Himachal Pradesh: Chief of Defence Staff General Bipin Rawat and Army Chief General MM Naravane at Atal Tunnel, Rohtang pic.twitter.com/txyLkdyeJR
ಸುರಂಗದಲ್ಲಿ 5.525 ಮೀಟರ್ ಎತ್ತರದವರೆಗಿನ ವಾಹನಗಳ ಓಡಾಟಕ್ಕೆ ಅವಕಾಶವಿದೆ. ಸುರಂಗ 10.5 ಮೀಟರ್ ಅಗಲವಿದ್ದು, ಮುಖ್ಯ ಸುರಂಗದಲ್ಲಿ 3.6 x 2.25 ಮೀಟರ್ ಅಗ್ನಿನಿರೋಧಕ ತುರ್ತು ನಿರ್ಗಮನದ ಸುರಂಗವನ್ನೂ ಒಳಗೊಂಡಿದೆ. ಈ ಮಾರ್ಗದಲ್ಲಿ ನಿತ್ಯ 3,000 ಕಾರುಗಳು ಮತ್ತು 1,500 ಟ್ರಕ್ ಗಳು ಗರಿಷ್ಠ ಗಂಟೆಗೆ 80 ಕಿ.ಮೀ. ವೇಗದಲ್ಲಿ ಸಂಚಾರ ನಡೆಸಲು ಅವಕಾಶವಿರುವಂತೆ ನಿರ್ಮಾಣ ಮಾಡಲಾಗಿದೆ.
ಸುರಂಗ ಮಾರ್ಗವೂ ಸುಸಜ್ಜಿತ ಎಲೆಕ್ಟ್ರೋ ಮೆಕ್ಯಾನಿಕಲ್ ವ್ಯವಸ್ಥೆ ಹೊಂದಿದ್ದು, ಇದರಲ್ಲಿ ಸೆಮಿ ಟ್ರಾನ್ಸ್ ವರ್ಸ್ ವಾತಾಯಣ ವ್ಯವಸ್ಥೆ, ಎಸ್.ಸಿ.ಎ.ಡಿ.ಎ. ನಿಯಂತ್ರಿತ ಅಗ್ನಿಶಾಮಕ ಹೋರಾಟ ವ್ಯವಸ್ಥೆ, ಪ್ರಕಾಶಮಾನ ಬೆಳಕು ಮತ್ತು ಸಿಸಿಟಿವಿ ನಿಗಾ ವ್ಯವಸ್ಥೆಯೂ ಸೇರಿದೆ.
ಅಟಲ್ ಸುರಂಗ ವೈಶಿಷ್ಟ್ಯಗಳು:
ಸುರಂಗದ ಎರಡೂ ಬದಿಗಳಲ್ಲಿ ಪ್ರವೇಶ ನಿರ್ಬಂಧ. ತುರ್ತು ಸಂವಹನಕ್ಕಾಗಿ ಪ್ರತಿ 150 ಮೀಟರಿಗೊಂದರಂತೆ ದೂರವಾಣಿ ಸಂಪರ್ಕ ಸೇವೆ. ಪ್ರತಿ 60 ಮೀಟರಿಗೊಂದರಂತೆ ಅಗ್ನಿಶಾಮಕ ವ್ಯವಸ್ಥೆ. ಪ್ರತಿ 250 ಮೀಟರ್ ಗೆ ಒಂದರಂತೆ ಸಿಸಿಟಿವಿ ಕ್ಯಾಮೆರಾಗಳೊಂದಿಗೆ ಘಟನೆಯ ಸ್ವಯಂ ಪತ್ತೆ ವ್ಯವಸ್ಥೆ. ಪ್ರತಿ 1 ಕಿ.ಮೀನಲ್ಲಿ ವಾಯು ಗುಣಮಟ್ಟದ ನಿಗಾ. ಪ್ರತಿ 25 ಮೀಟರ್ ನಲ್ಲಿ ಸ್ಥಳಾಂತರಿಸಬಹುದಾದ ದೀಪ/ನಿರ್ಗಮನ ಚಿಹ್ನೆಗಳು. ಸುರಂಗದುದ್ದಕ್ಕೂ ಬೆಳಕಿನ ವ್ಯವಸ್ಥೆ. ಪ್ರತಿ 50 ಮೀಟರ್ ನಲ್ಲಿ ಫೈರ್ ರೇಟೆಡ್ ಡ್ಯಾಂಪರ್ ಗಳು. ಪ್ರತಿ 60 ಮೀಟರ್ ಗೆ ಒಂದು ಕ್ಯಾಮೆರಾ ಹೊಂದಿದೆ.
Himachal Pradesh: Prime Minister Narendra Modi arrives at Manali for the inauguration of #AtalTunnel, the longest highway tunnel in the world built at an altitude of 3000 meters pic.twitter.com/xd0vY6th31
2000ರ ಜೂನ್ 03 ರಂದು ದಿವಂಗತ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಸುರಂಗ ಮಾರ್ಗ ನಿರ್ಮಿಸುವ ಯೋಜನೆ ಮಾಡಲಾಗಿತ್ತು. ಇದರಂತೆ 2002ರ ಮೇ 26ರಂದು ಸುರಂಗದ ದಕ್ಷಿಣ ಭಾಗದ ಪ್ರವೇಶ ರಸ್ತೆಗೆ ಅಡಿಪಾಯ ಹಾಕಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ 2019ರ ಡಿಸೆಂಬರ್ 24ರಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ರೋಹ್ಟಂಗ್ ಸುರಂಗಕ್ಕೆ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು ಹೆಸರು ನೀಡಿ ಅವರಿಗೆ ಗೌರವ ಸಲ್ಲಿಸಲು ನಿರ್ಧರಿಸಲಾಯಿತು.
ಶಿಮ್ಲಾ: ವಿಶ್ವದ ಅತೀ ಎತ್ತರ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ 8.8 ಕಿ.ಮೀ ಉದ್ದದ ಸುರಂಗ ಮಾರ್ಗವನ್ನು ಅಕ್ಟೋಬರ್ 3ರ ಶನಿವಾರದಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ಮನಾಲಿಯ ದಕ್ಷಿಣ ತುದಿಯಲ್ಲಿ ಅಟಲ್ ಸುರಂಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು ಭಾಗಿಯಾಗಲಿದ್ದಾರೆ.
ಅಟಲ್ ಸುರಂಗ ಹೆದ್ದಾರಿಯೂ ವಿಶ್ವದಲ್ಲಿಯೇ ಅತಿ ಉದ್ದದ ಹೆದ್ದಾರಿ ಮಾರ್ಗವಾಗಿದ್ದು, 9.02 ಕಿ.ಮೀ ಉದ್ದದ ಈ ಸುರಂಗ ಮನಾಲಿಯಿಂದ ಲಹೌಲ್ ಸ್ಪಿತಿ ಕಣಿಯನ್ನು ವರ್ಷವಿಡೀ ಸಂಪರ್ಕಿಸಲಿದೆ. ಇದಕ್ಕೂ ಮುನ್ನ ಭಾರೀ ಹಿಮಪಾತದ ಕಾರಣ 6 ತಿಂಗಳುಗಳ ಕಾಲ ಮಾತ್ರ ಕಣಿವೆಯ ಸಂಪರ್ಕ ಕಡಿತವಾಗುತ್ತಿತ್ತು. ಈ ಸುರಂಗ ಮಾರ್ಗವು ಮನಾಲಿ ಮತ್ತು ಲೆಹ್ ನಡುವಿನ ಅಂತರವನ್ನು 46 ಕಿ.ಮೀ. ತಗ್ಗಿಸಲಿದ್ದು, 4ರಿಂದ 5 ಗಂಟೆಗಳ ಸಮಯ ಉಳಿತಾಯವಾಗಲಿದೆ.
ಹಿಮಾಲಯದ ಪಿರ್ ಪಂಜಾಲ್ ಶ್ರೇಣಿಯಲ್ಲಿ ಅತ್ಯಾಧುನಿಕ ವಿಶೇಷಣ (ಅಲ್ಟ್ರಾ ಮಾಡರ್ನ್ ಸ್ಪೆಸಿಫಿಕೇಶನ್) ಗಳೊಂದಿಗೆ ನಿರ್ಮಿಸಲಾಗಿದ್ದು, ಇದನ್ನು ಸಮುದ್ರ ಮಟ್ಟದಿಂದ ಸರಾಸರಿ 3,000 ಮೀಟರ್ (10,000 ಅಡಿ) ಎತ್ತರದಲ್ಲಿ ನಿರ್ಮಿಸಲಾಗಿದೆ.
ಅಟಲ್ ಸುರಂಗದ ದಕ್ಷಿಣ ಭಾಗದಲ್ಲಿ ಮನಾಲಿಯಿಂದ 25 ಕಿ.ಮೀ. ದೂರದಲ್ಲಿ, 3,060 ಮೀಟರ್ ಎತ್ತರದಲ್ಲಿದೆ. ಉತ್ತರದ ಭಾಗದ ಸುರಂಗವು ಲಹೌಲ್ ಕಣಿವೆಯ ಸಿಸ್ಸು, ತೆಲಿಂಗ್ ಗ್ರಾಮದ ಬಳಿಯಿದ್ದು, 3,071 ಮೀಟರ್ ಎತ್ತರದಲ್ಲಿದೆ. ಇದು ಕುದುರೆಯ ಲಾಳದ ಆಕಾರದಲ್ಲಿರುವ, ದ್ವಿಪಥ ಮಾರ್ಗದ ಸುರಂಗವಾಗಿದ್ದು, 8 ಮೀಟರ್ ರಸ್ತೆ ಮಾರ್ಗವನ್ನು ಒಳಗೊಂಡಿದೆ.
ಸುರಂಗದಲ್ಲಿ 5.525 ಮೀಟರ್ ಎತ್ತರದವರೆಗಿನ ವಾಹನಗಳ ಓಡಾಟಕ್ಕೆ ಅವಕಾಶವಿದೆ. ಸುರಂಗ 10.5 ಮೀಟರ್ ಅಗಲವಿದ್ದು, ಮುಖ್ಯ ಸುರಂಗದಲ್ಲಿ 3.6 x 2.25 ಮೀಟರ್ ಅಗ್ನಿನಿರೋಧಕ ತುರ್ತು ನಿರ್ಗಮನದ ಸುರಂಗವನ್ನೂ ಒಳಗೊಂಡಿದೆ. ಈ ಮಾರ್ಗದಲ್ಲಿ ನಿತ್ಯ 3,000 ಕಾರುಗಳು ಮತ್ತು 1,500 ಟ್ರಕ್ ಗಳು ಗರಿಷ್ಠ ಗಂಟೆಗೆ 80 ಕಿ.ಮೀ. ವೇಗದಲ್ಲಿ ಸಂಚಾರ ನಡೆಸಲು ಅವಕಾಶವಿರುವಂತೆ ನಿರ್ಮಾಣ ಮಾಡಲಾಗಿದೆ.
ಸುರಂಗ ಮಾರ್ಗವೂ ಸುಸಜ್ಜಿತ ಎಲೆಕ್ಟ್ರೋ ಮೆಕ್ಯಾನಿಕಲ್ ವ್ಯವಸ್ಥೆ ಹೊಂದಿದ್ದು, ಇದರಲ್ಲಿ ಸೆಮಿ ಟ್ರಾನ್ಸ್ ವರ್ಸ್ ವಾತಾಯಣ ವ್ಯವಸ್ಥೆ, ಎಸ್.ಸಿ.ಎ.ಡಿ.ಎ. ನಿಯಂತ್ರಿತ ಅಗ್ನಿಶಾಮಕ ಹೋರಾಟ ವ್ಯವಸ್ಥೆ, ಪ್ರಕಾಶಮಾನ ಬೆಳಕು ಮತ್ತು ಸಿಸಿಟಿವಿ ನಿಗಾ ವ್ಯವಸ್ಥೆಯೂ ಸೇರಿದೆ.
ಅಟಲ್ ಸುರಂಗ ವೈಶಿಷ್ಟ್ಯಗಳು:
ಸುರಂಗದ ಎರಡೂ ಬದಿಗಳಲ್ಲಿ ಪ್ರವೇಶ ನಿರ್ಬಂಧ. ತುರ್ತು ಸಂವಹನಕ್ಕಾಗಿ ಪ್ರತಿ 150 ಮೀಟರಿಗೊಂದರಂತೆ ದೂರವಾಣಿ ಸಂಪರ್ಕ ಸೇವೆ. ಪ್ರತಿ 60 ಮೀಟರಿಗೊಂದರಂತೆ ಅಗ್ನಿಶಾಮಕ ವ್ಯವಸ್ಥೆ. ಪ್ರತಿ 250 ಮೀಟರ್ ಗೆ ಒಂದರಂತೆ ಸಿಸಿಟಿವಿ ಕ್ಯಾಮೆರಾಗಳೊಂದಿಗೆ ಘಟನೆಯ ಸ್ವಯಂ ಪತ್ತೆ ವ್ಯವಸ್ಥೆ. ಪ್ರತಿ 1 ಕಿ.ಮೀನಲ್ಲಿ ವಾಯು ಗುಣಮಟ್ಟದ ನಿಗಾ. ಪ್ರತಿ 25 ಮೀಟರ್ ನಲ್ಲಿ ಸ್ಥಳಾಂತರಿಸಬಹುದಾದ ದೀಪ/ನಿರ್ಗಮನ ಚಿಹ್ನೆಗಳು. ಸುರಂಗದುದ್ದಕ್ಕೂ ಬೆಳಕಿನ ವ್ಯವಸ್ಥೆ. ಪ್ರತಿ 50 ಮೀಟರ್ ನಲ್ಲಿ ಫೈರ್ ರೇಟೆಡ್ ಡ್ಯಾಂಪರ್ ಗಳು. ಪ್ರತಿ 60 ಮೀಟರ್ ಗೆ ಒಂದು ಕ್ಯಾಮೆರಾ ಹೊಂದಿದೆ.
2000ರ ಜೂನ್ 03 ರಂದು ದಿವಂಗತ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಸುರಂಗ ಮಾರ್ಗ ನಿರ್ಮಿಸುವ ಯೋಜನೆ ಮಾಡಲಾಗಿತ್ತು. ಇದರಂತೆ 2002ರ ಮೇ 26ರಂದು ಸುರಂಗದ ದಕ್ಷಿಣ ಭಾಗದ ಪ್ರವೇಶ ರಸ್ತೆಗೆ ಅಡಿಪಾಯ ಹಾಕಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ 2019ರ ಡಿಸೆಂಬರ್ 24ರಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ರೋಹ್ಟಂಗ್ ಸುರಂಗಕ್ಕೆ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು ಹೆಸರು ನೀಡಿ ಅವರಿಗೆ ಗೌರವ ಸಲ್ಲಿಸಲು ನಿರ್ಧರಿಸಲಾಯಿತು.
Prime Minister, @narendramodi to inaugurate the Atal Tunnel.
ದಾವಣಗೆರೆ: ಮಾನಸಿಕ ಅಸ್ವಸ್ಥತೆಯುಳ್ಳ ಕರ್ನಾಟಕದ ವೃದ್ಧೆಯೊಬ್ಬರು ನಾಪತ್ತೆಯಾಗಿದ್ದು, ಇದೀಗ ದೂರದ ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಪತ್ತೆಯಾಗಿದ್ದಾರೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಉಕ್ಕಡಗಾತ್ರಿ ಮೂಲದ ಸುಶೀಲಮ್ಮ (50) ಮಾನಸಿಕ ಅಸ್ವಸ್ಥೆಯಾಗಿದ್ದು, ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ ಕರ್ನಾಟಕ ಬಿಟ್ಟು 2014ರಲ್ಲಿ ಹಿಮಾಚಲಪ್ರದೇಶಕ್ಕೆ ಹೋಗಿದ್ದರು.
ಸುಶೀಲಮ್ಮನಿಗೆ ಮಕ್ಕಳಾಗದ ಕಾರಣ ಆಕೆಯ ಪತಿ ಮೂರನೇ ಮದುವೆ ಮಾಡಿಕೊಂಡು ಈಕೆಯನ್ನು ಹೊರ ಹಾಕಿದ್ದರು. ನಂತರ ಅಲ್ಲಿ ಇಲ್ಲಿ ಕೆಲಸ ಮಾಡಿಕೊಂಡು ರೈಲಿನ ಮೂಲಕ ಹಿಮಾಚಲ ಪ್ರದೇಶ ಸೇರಿ ಕೆಲಕಾಲ ಗಾರೆ ಕೆಲಸ ಸೇರಿದಂತೆ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಮಾನಸಿಕ ಅಸ್ವಸ್ಥೆಯಾಗಿದ್ದರು.ಸ್ಥಳೀಯ ಪೊಲೀಸರು ಹಿಮಾಚಲ ಪ್ರದೇಶದ ಮಾನಸಿಕ ಅಸ್ವಸ್ಥರ ಪುನರ್ ಚೇತರಿಕಾ ಕೇಂದ್ರಕ್ಕೆ ಸೇರಿಸಿದ್ದರು.
ಹಿಮಾಚಲ ಪ್ರದೇಶದ ಪ್ರಯಾಸ್ ಎನ್ನುವ ಎನ್‍ಜಿಒ ಮಾನಸಿಕ ಅಸ್ವಸ್ಥರ ಪುನರ್ ಚೇತರಿಕಾ ಕೇಂದ್ರದಲ್ಲಿ 21 ದಿನಗಳ ಕಾಲ ಶಿಬಿರವನ್ನು ಹಮ್ಮಿಕೊಂಡಾಗ ಸುಶೀಲಮ್ಮನ ಬಗ್ಗೆ ಮಾಹಿತಿ ಗೊತ್ತಾಯಿತು. ಕೂಡಲೇ ಎನ್‍ಜಿಒದಲ್ಲಿರುವ ವೈದ್ಯರು ವೃದ್ಧೆಗೆ ಚಿಕಿತ್ಸೆ ನೀಡಿ ತವರೂರಿಗೆ ಕರೆದೊಯ್ಯಲು ಸ್ಥಳೀಯ ಆಡಳಿತದ ಜೊತೆ ಮಾತನಾಡಲು ಮುಂದಾಗಿದ್ದಾರೆ.
ದಾವಣಗೆರೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಬೆಂಗಳೂರಿನ ಮಾನಸಿಕ ಅಸ್ವಸ್ಥ ಕೇಂದ್ರದ ಸಿಬ್ಬಂದಿ ಜೊತೆ ಮಾತನಾಡಿದ್ದು ಕೂಡಲೇ ಸುಶೀಲಮ್ಮನವರನ್ನು ಕರೆತರುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ ತವರೂರಿಗೆ ಬರಲು ಮಾನಸಿಕ ಅಸ್ವಸ್ಥೆ ಸುಶೀಲಮ್ಮ ರೆಡಿಯಾಗಿದ್ದು, ಸ್ಥಳೀಯ ಅಡಳಿತ ಸರ್ಕಾರ ಹಾಗೂ ಕರ್ನಾಟಕ ಸರ್ಕಾರ ಕೂಡಲೇ ಅವರನ್ನು ತವರೂರಿಗೆ ಕರೆತಂದು ಸೂಕ್ತ ಚಿಕಿತ್ಸೆ ಕೊಡಿಸಬೇಕಾಗಿದೆ.
ನವದೆಹಲಿ: ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಪ್ರವಾಸಿಗರ ವೋಲ್ವೋ ಬಸ್ ಒಂದು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಹಿಮಾಚಲ ಪ್ರದೇಶದ ಮನಾಲಿಯಲ್ಲಿ ನಡೆದಿದೆ.
ಬಸ್ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದೃಷ್ಟವಶಾತ್ ಘಟನೆ ವೇಳೆ ಬಸ್ಸಿನಲ್ಲಿ ಯಾರು ಇರಲಿಲ್ಲ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಹಿಮಾಚಲ ಪ್ರದೇಶದ ಕುಲು ಜಿಲ್ಲೆಯ ಮನಾಲಿ ಪ್ರದೇಶ ಸೇರಿದಂತೆ ರಾಜ್ಯದ ಹಲವೆಡೆ ಕಳೆದ 24 ಗಂಟೆಗಳ ಅವಧಿಯಲ್ಲಿ 127.4 ಮಿ.ಮೀ ಮಳೆಯಾಗಿದೆ. ನೈರುತ್ಯ ಮಾನ್ಸೂನ್ ಅಧಿಕ ಪ್ರಮಾಣದಲ್ಲಿ ಸುರಿಯುತ್ತಿರುವುದರಿಂದ ಅಧಿಕ ಪ್ರಮಾಣದಲ್ಲಿ ಗುಡ್ಡ ಕುಸಿತ ನಡೆದಿದ್ದು, ಹಲವೆಡೆ ರಾಷ್ಟ್ರೀಯ ಹೆದ್ದಾರಿಗಳು ಬಂದ್ ಆಗಿದೆ.
Five people feared missing after a car was washed away in Manali: Sub-Divisional Magistrate Raman Gharsangi #HimachalRains
ಹಿಮಾಚಲ ಪ್ರದೇಶದ ನದಿಗಳ ಹರಿವಿನ ಪ್ರಮಾಣ ಹೆಚ್ಚಾಗಿದ್ದು, ಚಂಡೀಗಢ-ಮನಾಲಿ ನಡುವಿನ ರಾಷ್ಟ್ರೀಯ ಹೆದ್ದಾರಿ ಮೇಲೆ ಬಿಯಸ್ ನದಿ ನೀರು ಹರಿಯುತ್ತಿದೆ. ಪ್ರವಾಹದಿಂದಾಗಿ ಸುಮಾರು ಹಲವೆಡೆ ಸಂಪರ್ಕ ಕಡಿತಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ 3ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಮತ್ತೊಂದು ವಿಡಿಯೋದಲ್ಲಿ ಟ್ರಕ್ ಒಂದು ನೀರಿನಲ್ಲಿ ಕೊಚ್ಚಿಹೋಗಿದೆ. ಭಾರೀ ಮಳೆಗೆ ಹಿಮಾಚಲ ಪ್ರದೇಶದ ಶಿಮ್ಲಾ ಸೇರಿದಂತೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೇ ಹಲವು ಪ್ರದೇಶಗಳಲ್ಲಿ ಪ್ರವಾಹ ನಡುವೆ ಸಿಲುಕಿದ್ದ 20ಕ್ಕೂ ಹೆಚ್ಚು ಮಂದಿಯನ್ನ ರಕ್ಷಣೆ ಮಾಡಲಾಗಿದೆ.
ಉಳಿದಂತೆ ಕುಲು ಮನಾಲಿಯಲ್ಲಿ ತಮಿಳು ಚಿತ್ರನಟ ಕಾರ್ತಿ ಅವರ ದೇವ್ ಸಿನಿಮಾ ಚಿತ್ರೀಕರಣಕ್ಕಾಗಿ ತೆರಳಿದ್ದ ತಂಡ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದು, ಭಾರೀ ಮಳೆಯಿಂದ ಚಿತ್ರತಂಡಕ್ಕೆ ಸುಮಾರು 1.5 ಕೋಟಿ ರೂ. ನಷ್ಟ ಉಂಟಾಗಿದೆ. ಚಿತ್ರದ ಶೂಟಿಂಗ್‍ಗಾಗಿ ಚೆನ್ನೈನಿಂದ 140 ಮಂದಿಯ ಚಿತ್ರತಂಡ ಮನಾಲಿಗೆ ತೆರಳಿತ್ತು ಎಂದು ವರದಿಯಾಗಿದೆ.