Tag: Manasa Sarovara

  • ಮಾನಸ ಸರೋವರ ಯಾತ್ರೆಯಲ್ಲಿದ್ದ ಕನ್ನಡಿಗರು ಸುರಕ್ಷಿತ!

    ಮಾನಸ ಸರೋವರ ಯಾತ್ರೆಯಲ್ಲಿದ್ದ ಕನ್ನಡಿಗರು ಸುರಕ್ಷಿತ!

    ಬೆಂಗಳೂರು: ಹಿಮಾಲಯ ಪರ್ವತ ಪ್ರದೇಶಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ, ಕೈಲಾಸ ಮಾನಸ ಸರೋವರ ಯಾತ್ರೆ ವೇಳೆ ಸಿಲುಕಿದ್ದ 299 ಕನ್ನಡಿಗರು ಸುರಕ್ಷಿತವಾಗಿದ್ದಾರೆ.

    ನೇಪಾಳದ ಸಿಮಿಕೋಟ್ ಮತ್ತು ನೇಪಾಳ್ ಗಂಜ್‍ನಲ್ಲಿರುವ ಕರ್ನಾಟಕದ ಪ್ರವಾಸಿಗರ ಜೊತೆಗೆ ಭಾರತೀಯ ರಾಯಭಾರ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಅವರೆಲ್ಲಾ ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದೆ. ಆದರೆ ಸದ್ಯದ ಹವಾಮಾನ ವೈಪರೀತ್ಯದಿಂದಾಗಿ ಅವರನ್ನು ತಕ್ಷಣಕ್ಕೆ ಕರೆದುಕೊಂಡು ಬರುವುದು ಸಾಧ್ಯವಿಲ್ಲ ಎಂದು ರಾಯಭಾರ ಕಚೇರಿ ತಿಳಿಸಿದೆ.

    ಮಾನಸ ಸರೋವರ ಯಾತ್ರೆಯಲ್ಲಿ ಕರ್ನಾಟಕದ ಯಾತ್ರಾರ್ಥಿಗಳು ಸಂಕಷ್ಟದಲ್ಲಿ ಸಿಲುಕಿದ್ದರಿಂದ ರಾಜ್ಯ ಸರ್ಕಾರ ಕಠ್ಮಂಡುವಿನಲ್ಲಿರುವ ಭಾರತೀಯ ರಾಯಭಾರ ಕಚೇರಿ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಕೇಂದ್ರ ಗೃಹ ಸಚಿವ ರಾಜ್‍ನಾಥ್ ಸಿಂಗ್‍ರ ನೆರವನ್ನು ಕೋರಿತ್ತು. ಅಲ್ಲದೇ ದೆಹಲಿಯಲ್ಲಿರುವ ಕರ್ನಾಟಕದ ಸ್ಥಾನಿಕ ನಿರ್ದೇಶಕರಿಗೆ ಅಗತ್ಯ ಪರಿಹಾರ ಕ್ರಮಕೈಗೊಳ್ಳುವಂತೆ ಸಿಎಂ ಕುಮಾರಸ್ವಾಮಿ ಸೂಚಿಸಿದ್ದರು.

    ಹಾಸನದಿಂದ ಹೊರಟ್ಟಿದ್ದ 43 ಮಂದಿ ಸುರಕ್ಷಿತವಾಗಿದ್ದಾರೆ. ಮಂಡ್ಯ, ಮೈಸೂರು, ರಾಮನಗರದವರು ಕೂಡಾ ಯಾತ್ರೆಗೆ ಹೋಗಿದ್ದರು. ಇವರಲ್ಲಿ ಕುಮಾರಸ್ವಾಮಿಯವರ ಕ್ಷೇತ್ರವಾದ ಚನ್ನಪಟ್ಟಣ ತಾಲೂಕಿನ ನಾಗವಾರದ ರಂಗಸ್ವಾಮಿ, ಬೇವೂರಿನ ರಾಮಕೃಷ್ಣ, ರಾಂಪುರದ ಮಲ್ಲೇಶ್, ಕೋಟೆಯ ಶಿವರಾಮು 15 ದಿನಗಳ ಹಿಂದೆ ಯಾತ್ರೆ ಹೊರಟ್ಟಿದ್ದರು. ಆದರೆ ನಾಲ್ಕು ದಿನಗಳಿಂದ ಸಂಪರ್ಕಕ್ಕೆ ಸಿಗುತ್ತಿಲ್ಲವೆಂದು ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

    ಯಾತ್ರಾರ್ಥಿಗಳ ಸಂಬಂಧಿಕರು ಯಾವುದೇ ಮಾಹಿತಿಗಾಗಿ ರಾಯಭಾರ ಕಚೇರಿಯ ಅಧಿಕಾರಿ ಪ್ರಣವ್ ಮಹೇಶ್‍ರನ್ನು ಸಂಪರ್ಕಿಸಬಹುದು ಎಂದು ತಿಳಿಸಿದೆ. ಅವರ ದೂರವಾಣಿ ಸಂಖ್ಯೆ – 977 985-1107006 ಗೆ ಕರೆಮಾಡಿ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

  • ಕಿರುತೆರೆಗೆ ಬರ್ತಿದೆ ಮಾನಸ ಸರೋವರ – 38 ವರ್ಷದ ಬಳಿಕ ಮತ್ತೆ ಒಂದಾದ ಶ್ರೀನಾಥ್, ಪದ್ಮವಾಸಂತಿ, ರಾಮಕೃಷ್ಣ

    ಕಿರುತೆರೆಗೆ ಬರ್ತಿದೆ ಮಾನಸ ಸರೋವರ – 38 ವರ್ಷದ ಬಳಿಕ ಮತ್ತೆ ಒಂದಾದ ಶ್ರೀನಾಥ್, ಪದ್ಮವಾಸಂತಿ, ರಾಮಕೃಷ್ಣ

    ಬೆಂಗಳೂರು: ಚಂದನವನದ 80ರ ದಶಕದ ಚೆಂದದ, ಮುದ್ದಾದ ಜೋಡಿ ಮತ್ತೆ ಒಂದಾಗಲಿದೆ. ಅಂದು ಬೆಳ್ಳಿತೆರೆಯಲ್ಲಿ ಮೋಡಿ ಮಾಡಿದ್ದ ಜೋಡಿ ಈಗ ಕಿರುತೆರೆಯಲ್ಲಿ ಕಮಾಲ್ ಮಾಡಲು ಬರುತ್ತಿದ್ದಾರೆ.

    35 ವರ್ಷದ ಹಿಂದೆ ಚಂದನವನದ ಬೆಳ್ಳಿತೆರೆಯ ಭಾವ ಶಿಲ್ಪಿ, ಎಸ್.ಆರ್.ಪುಟ್ಟಣ್ಣ ಕಣಗಾಲ್ ನಿರ್ದೇಶನದ ಸೂಪರ್ ಹಿಟ್ ಸಿನಿಮಾ ಮಾನಸ ಸರೋವರ ಮಗದೊಮ್ಮೆ ಬರಲಿದೆ. ಆದ್ರೆ ಸ್ಮಾಲ್ ಚೈಂಜ್ ಏನು ಅಂದ್ರೆ ಬಿಗ್ ಸ್ಕ್ರೀನ್ ನಿಂದ ಸ್ಮಾಲ್ ಸ್ಕ್ರೀನ್‍ಗೆ ಮಾನಸ ಸರೋವರ ಹರಿಯಲಿದೆ.

    ಸ್ಯಾಂಡಲ್‍ವುಡ್ ಮಾಸ್ ಲೀಡರ್, ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದು, ಫಸ್ಟ್ ಟೈಮ್ ಕಿರುತೆರೆಯಲ್ಲಿ ಧಾರಾವಾಹಿ ನಿರ್ಮಾಣಕ್ಕೆ ಮುಂದಾಗಿದ್ದಾರೆ. ತಮ್ಮದೆಯಾದ ಶ್ರೀ ಮುತ್ತು ಸಿನಿ ಸರ್ವಿಸ್ ಬ್ಯಾನರ್ ಅಡಿ ಧಾರಾವಾಹಿ ನಿರ್ಮಾಣಕ್ಕೆ ಸಜ್ಜಾಗಿದ್ದಾರೆ.

    ಈ ಧಾರಾವಾಹಿಯ ಹೆಸರು `ಮಾನಸ ಸರೋವರ’. ಇಂದು ಬೆಂಗಳೂರಿನ ಕಂಠಿರವ ಸ್ಟೂಡಿಯೋದಲ್ಲಿ ಈ ಧಾರಾಹಿಯ ಮುಹೂರ್ತ ನೆರವೇರಿತು. ದೊಡ್ಮನೆಯ ಮಕ್ಕಳಾದ ಶಿವರಾಜ್‍ಕಮಾರ್, ಪುನೀತ್ ರಾಜ್‍ಕುಮಾರ್ ಹಾಗೂ ವಿನಯ್ ರಾಜ್‍ಕುಮಾರ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಮುಹೂರ್ತಕ್ಕೆ ಸಾಕ್ಷಿಯಾದರು. ಸಿರಿಯಲ್ ಕಥೆ ಮಾನಸ ಸರೋವರದ ಮುಂದುವರೆದ ಭಾಗವಾಗಿದೆ. ಪ್ರಣಯ ರಾಜ ಶ್ರೀನಾಥ್, ಪದ್ಮವಸಂತಿ ಹಾಗೂ ರಾಮಕೃಷ್ಣ ನಟರು ಈ ಧಾರಾವಾಹಿಯಲ್ಲಿ ಮತ್ತೊಮ್ಮೆ ಜೊತೆಯಾಗಿ ಬಣ್ಣಹಚ್ಚುತ್ತಿದ್ದಾರೆ. ಶಿವಣ್ಣರ ದ್ವಿತಿಯ ಪುತ್ರಿ ನಿವೇದಿತಾ ಮಾನಸ ಸರೋವರಕ್ಕೆ ನಿರ್ಮಾಪಕಿಯಾಗಿದ್ದಾರೆ.

  • ಕರ್ನಾಟಕದಲ್ಲಿ ದೇವರ ದರ್ಶನಕ್ಕೆ ಆಧಾರ್ ಕಡ್ಡಾಯ!

    ಕರ್ನಾಟಕದಲ್ಲಿ ದೇವರ ದರ್ಶನಕ್ಕೆ ಆಧಾರ್ ಕಡ್ಡಾಯ!

    ಬೆಂಗಳೂರು: ಉತ್ತರಾಖಂಡ್‍ನ ಬದ್ರಿನಾಥ್, ಕೇದಾರ್‍ನಾಥ್, ಗಂಗೋತ್ರಿ ಮತ್ತು ಯಮುನೋತ್ರಿ ತೀರ್ಥ ಯಾತ್ರೆಗೆ ಹೋಗುವ ಯಾತ್ರಿಗಳಿಗೆ ಕರ್ನಾಟಕ ಸರ್ಕಾರ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದೆ. ಯಾತ್ರಿಗಳಿಗೆಂದು ನೀಡಲಾಗುವ 20,000 ರೂ. ಸಹಾಯಧನದ ದುರ್ಬಳಕೆ ಆಗದೇ ಇರಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.

    ಆಗಸ್ಟ್ 17 ರಂದು ಚಾರ್ ಧಾಮ್ ಯಾತ್ರಿಗಳಿಗೆ ನೀಡಲಾಗುವ ಸಬ್ಸಿಡಿ ಬಗ್ಗೆ ಮಾರ್ಗಸೂಚಿಯನ್ನು ಸರ್ಕಾರ ಬಿಡುಗಡೆಗೊಳಿಸಿದ್ದು, ಮಾರ್ಗಸೂಚಿಯಲ್ಲಿ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿರುವ ಅಂಶವನ್ನು ಸೇರಿಸಲಾಗಿದೆ.

    ಪ್ರತಿ ವರ್ಷ 1000-1500 ರಾಜ್ಯದ ನಿವಾಸಿಗಳು ಸಬ್ಸಿಡಿ ಪಡೆದುಕೊಳುತ್ತಿದ್ದಾರೆ. ಆದರೆ ಈ ವರ್ಷ ಯಾತ್ರಿಕರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಸಬ್ಸಿಡಿಯ ಹಣವನ್ನು ದುರ್ಬಳಕೆಯನ್ನು ತಡೆಗಟ್ಟಲು ಆಧಾರ್ ಕಾರ್ಡ್ ಕಡ್ಡಾಯಗೊಳಿಸಲಾಗಿದೆ ಎಂದು ಮುಜರಾಯಿ ಇಲಾಖೆಯ ಹಿರಿಯ ಅಧಿಕಾರಿ ಹೇಳಿದ್ದಾರೆ.

    2014ರಲ್ಲಿ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಮಧ್ಯಮ ವರ್ಗ ಮತ್ತು ಬಡವರಿಗೆ ಸಹಾಯವಾಗಲೆಂದು ಈ ಸಬ್ಸಿಡಿಯನ್ನು ತಂದಿತ್ತು. ಈ ಹಿಂದೆ ಬಿಜೆಪಿ ಸರ್ಕಾರ ಮಾನಸ ಸರೋವರ ಯಾತ್ರಿಗಳಿಗೆ 30,000 ಸಬ್ಸಿಡಿಯನ್ನು ಘೋಷಿಸಿತ್ತು.

    ಇದನ್ನೂ ಓದಿ: ಜಸ್ಟ್ 1 ನಿಮಿಷದಲ್ಲಿ ಪಾನ್ ಕಾರ್ಡ್ ಗೆ ಆಧಾರ್ ನಂಬರ್ ಸೇರಿಸುವುದು ಹೇಗೆ?