Tag: Mandya Farmers

  • ಕೆಆರ್‌ಎಸ್ ಡ್ಯಾಂನ ಹಳೆಯ ಕ್ರಸ್ಟ್‌ಗೇಟ್‌ ಮಾರಾಟ ಮಾಡಲು ಹುನ್ನಾರ

    ಕೆಆರ್‌ಎಸ್ ಡ್ಯಾಂನ ಹಳೆಯ ಕ್ರಸ್ಟ್‌ಗೇಟ್‌ ಮಾರಾಟ ಮಾಡಲು ಹುನ್ನಾರ

    ಮಂಡ್ಯ: ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ನಿರ್ಮಾಣವಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನ (KRS Dam) 150 ಕ್ರಸ್ಟ್ ಗೇಟ್‌ಗಳನ್ನು (Crust Gate) ಬದಲು ಮಾಡಲಾಗಿದೆ. ಇದೀಗ ಈ ಹಳೆಯ ಗೇಟ್‌ಗಳನ್ನು ತೂಕದ ಲೆಕ್ಕದಲ್ಲಿ ಮಾರಾಟ ಮಾಡುವ ಹುನ್ನಾರ ಸದ್ದಿಲ್ಲದೆ ನಡೆಯುತ್ತಿದೆ.

    ಈ 150 ಕ್ರಸ್ಟ್ ಗೇಟ್‌ಗಳ ಪೈಕಿ ಒಂದೊಂದು ಗೇಟ್‌ಗಳು ಸುಮಾರು 650 ಟನ್ ತೂಕ ಬರುತ್ತವೆ. ಇದೀಗ ಒಂದು ಕೆಜಿಗೆ 6 ರೂ.ನಂತೆ 36 ಗೇಟ್‌ಗಳನ್ನು 36 ಲಕ್ಷ ರೂ.ಗೆ ಮಾರಾಟ ಮಾಡುವ ಪ್ರಯತ್ನ ನಡೆದಿದೆ. ಆದ್ರೆ ಈ 36 ಗೇಟ್‌ಗಳ ಮೌಲ್ಯ ಸುಮಾರು 3 ಕೋಟಿ ರೂ.ಗಳಷ್ಟಾಗಲಿದೆ ಎಂದು ಅಂದಾಜಿಸಲಾಗಿದೆ. ಹಾಗಾಗಿ 90 ವರ್ಷದ ಹಳೆಯ ಗೇಟ್‌ಗಳನ್ನು ಮಾರಿ ಕೋಟ್ಯಂತರ ರೂ.ಗಳನ್ನ ಗುಳಂ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ ಎಂಬ ಸ್ಥಳೀಯರು ಹಾಗೂ ರೈತರಿಂದ (Farmers) ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ದಶಕಗಳ ಬಳಿಕ ಅಪ್ಪಳಿಸಿದ ಭೀಕರ ಪ್ರವಾಹಕ್ಕೆ ಸ್ಪೇನ್‌ ತತ್ತರ – ಸಾವಿನ ಸಂಖ್ಯೆ 205ಕ್ಕೆ ಏರಿಕೆ

    ಹಲವು ಕಡೆ ಮೊದಲು ಡ್ಯಾಂನ ಗೇಟ್‌ಗಳು ಸೋರಿಕೆಯಾಗುತ್ತಿದ್ದ ಕಾರಣ ಕಳೆದ ಬಿಜೆಪಿ‌ ಸರ್ಕಾರ ಸಂಪೂರ್ಣವಾಗಿ 150 ಕ್ರಸ್ಟ್‌ ಗೇಟ್‌ಗಳನ್ನು ಬದಲು ಮಾಡಲು ಮುಂದಾಗಿತ್ತು. ಸದ್ಯ ಹೀಗಾಗಲೇ ಈ ಕಾಮಗಾರಿ ಮುಕ್ತಾಯದ ಅಂಚಿನಲ್ಲಿ ಇದ್ದು, ಹಳೆ‌ಯ ಗೇಟ್‌ಗಳನ್ನು ಮಾರುವ ಹುನ್ನಾರ ಮಾಡಲಾಗುತ್ತಿದೆ.‌ ಇದಕ್ಕೆ ರೈತರು ಹಾಗೂ ಪ್ರಗತಿಪರರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ದರ್ಶನ್ ಎಡಗಾಲಿಗೂ ಸಮಸ್ಯೆ – ಫಿಜಿಯೋಥೆರಪಿನಾ? ಆಪರೇಷನ್‌ನಾ?

    ಹಳೆಯ ಗೇಟ್‌ಗಳನ್ನು ಮಾರಾಟ ಮಾಡುವ ಬದಲು ಬೃಂದಾವನದ ವ್ಯಾಪ್ತಿಯಲ್ಲಿ ಒಂದು ಮ್ಯೂಸಿಯಂ ಮಾಡಬೇಕು. ಆ ಮ್ಯೂಸಿಯಂನಲ್ಲಿ ಕನ್ನಂಬಾಡಿ ಕಟ್ಟೆ ಕಟ್ಟಿದ ಬಗೆ ಹಾಗೂ ಆ ಸಂದರ್ಭದಲ್ಲಿ ನಡೆದ ಘಟನಾವಳಿಗಳನ್ನು ವಿವರಿಸಬೇಕು. ಜೊತೆಗೆ ಈ 150 ಕ್ರಸ್ಟ್‌ಗಳನ್ನು ಅಲ್ಲಿಟ್ಟು, ಇಷ್ಟೊಂದು ಬೃಹತ್ ಗೇಟ್‌ಗಳನ್ನು ಯಂತ್ರಗಳ ಸಹಾಯವಿಲ್ಲದೇ ಹೇಗೆ ನಿರ್ಮಾಣ ಮಾಡಿದರು ಎಂಬುದನ್ನು ಜನರಿಗೆ ತೋರಿಸಬೇಕು. ಒಂದು ವೇಳೆ ವಿರೋಧದ ನಡೆವೆಯೇ ಗೇಟ್‌ಗಳನ್ನು ಮಾರಾಟ ಮಾಡಲು ಮುಂದಾದರೆ ರೈತ ಸಂಘ ಹೋರಾಟ ಮಾಡುವುದಾಗಿ ರೈತ ಸಂಘದ ಕೆಂಪೂಗೌಡ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ರಾಯಚೂರು| ಪಟಾಕಿ ಕಿಡಿ ತಗುಲಿ ಅಂಗಡಿಗೆ ಬೆಂಕಿ – ಅಂಗಡಿಯಲ್ಲಿದ್ದ ವಸ್ತುಗಳು ಭಸ್ಮ

  • ರೈತರ ಹೊಟ್ಟೆ ಉರಿಯುತ್ತಿದೆ ಅಂತ ಹಸಿರು ಮೆಣಸಿನಕಾಯಿ ತಿಂದು ಆಕ್ರೋಶ

    ರೈತರ ಹೊಟ್ಟೆ ಉರಿಯುತ್ತಿದೆ ಅಂತ ಹಸಿರು ಮೆಣಸಿನಕಾಯಿ ತಿಂದು ಆಕ್ರೋಶ

    ಮಂಡ್ಯ: ಅಕ್ಟೋಬರ್ 15ರ ವರೆಗೆ ಪ್ರತಿನಿತ್ಯ 3,000 ಕ್ಯೂಸೆಕ್ ಕಾವೇರಿ ನೀರನ್ನ (Cauvery Water) ತಮಿಳುನಾಡಿಗೆ ಹರಿಸಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಇದರಿಂದ ಮಂಡ್ಯದ ರೈತರ (Mandya Farmers) ಆಕ್ರೋಶ ಕಟ್ಟೆಯೊಡೆದಿದೆ.

    ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಆದೇಶ ಖಂಡಿಸಿ ರಸ್ತೆಯಲ್ಲೇ ವಿನೂತನ ಪ್ರತಿಭಟನೆ ನಡೆಸಿದ ರೈತರು ಹಸಿರು ಮೆಣಸಿನಕಾಯಿ ತಿಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಕೆಆರ್‌ಎಸ್, ಕಬಿನಿಯಿಂದ ಇಂದು ತಮಿಳುನಾಡಿಗೆ 6,075 ಕ್ಯೂಸೆಕ್ ನೀರು

    ಈ ಕುರಿತು ಮಾತನಾಡಿದ ರೈತಮುಖಂಡರು, ಇಂದು ಮಂಡ್ಯದ ರೈತರಿಗೆ ಸಿಹಿ ಸುದ್ದಿ ಸಿಗುತ್ತೆ ಅಂತಾ ಭಾವಿಸಿದ್ದೆವು. ಆದ್ರೆ ಕಹಿ ಮತ್ತು ಖಾರವಾದ ಸುದ್ದಿ ಬಂದಿದೆ. ಈಗ ನಿಜವಾಗಿಯೂ ಹೊಟ್ಟೆ ಉರಿಯುತ್ತಿದೆ. ಇನ್ನೂ ಈ ರಾಜ್ಯದ ರೈತರಿಗೆ ಎಷ್ಟು ಹೊಟ್ಟೆ ಉರಿಬೇಕು? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕಾವೇರಿ ಹೋರಾಟದ ಕಿಚ್ಚು; ಬಾಯಿಗೆ ಮಣ್ಣು ಹಾಕಿಕೊಂಡು ಸರ್ಕಾರದ ವಿರುದ್ಧ ರೈತರ ಆಕ್ರೋಶ

    ಕಾವೇರಿ ಕೊಳ್ಳ ಪ್ರದೇಶದ ಜನರಿಗೆ ಕಾವೇರಿ ಪ್ರಾಧಿಕಾರ ನೀಡಿರುವ ಆದೇಶ ಹೊಟ್ಟೆ ಉರಿಯುವಂತೆ ಮಾಡಿದೆ. ಆದ್ದರಿಂದ ಈ ಭ್ರಷ್ಟ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಖಾರವಾದ ಸಂದೇಶ ನೀಡಲು ಮೆಣಸಿನಕಾಯಿ ತಿಂದು ಆಕ್ರೋಶ ಹೊರಹಾಕಿದ್ದೇವೆ. ಇನ್ನಾದರೂ ಎಚ್ಚೆತ್ತುಕೊಂಡು ಕಾವೇರಿಯನ್ನ ಉಳಿಸಿಕೊಳ್ಳುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾವೇರಿ ಹೋರಾಟದ ಕಿಚ್ಚು; ಬಾಯಿಗೆ ಮಣ್ಣು ಹಾಕಿಕೊಂಡು ಸರ್ಕಾರದ ವಿರುದ್ಧ ರೈತರ ಆಕ್ರೋಶ

    ಕಾವೇರಿ ಹೋರಾಟದ ಕಿಚ್ಚು; ಬಾಯಿಗೆ ಮಣ್ಣು ಹಾಕಿಕೊಂಡು ಸರ್ಕಾರದ ವಿರುದ್ಧ ರೈತರ ಆಕ್ರೋಶ

    ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು (TamilNadu Cauvery Water) ಹರಿಸದಂತೆ ಆಗ್ರಹಿಸಿ ಮಂಡ್ಯದಲ್ಲಿ ಆರಂಭಿಸಿರುವ ರೈತರ ಹೋರಾಟದ ಕಿಚ್ಚು ಕಟ್ಟೆಯೊಡೆದಿದೆ.

    ಮಂಡ್ಯ ಬಂದ್ (Mandya Bandh) ಹಿನ್ನೆಲೆಯಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ರೈತರು (Farmers), ಕನ್ನಡಪರ ಹಾಗೂ ಪ್ರಗತಿ ಪರ ಸಂಘನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ. ಬಿಜೆಪಿ, ಜೆಡಿಎಸ್ ಕಾರ್ಯಕರ್ತರೂ ಸಹ ಪ್ರತಿಭಟನೆಗೆ ಧುಮುಕಿದ್ದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಕಾವೇರಿ ನದಿ ನೀರಿನ ವಿಷಯದಲ್ಲಿ ನಾವು ಮೇಲ್ಮನವಿ ಸಲ್ಲಿಸಬೇಕು: ಬಿಎಸ್‍ವೈ

    ಈ ವೇಳೆ ಮಂಡ್ಯದಲ್ಲಿ ಕೆಲ ರೈತರು ತಾವೇ ಬಾಯಿಗೆ ಮಣ್ಣು ಹಾಕಿಕೊಂಡು ಆಕ್ರೋಶ ಹೊರಹಾಕಿದ್ದಾರೆ. ಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರುಬಿಟ್ಟು ರೈತರ ಬಾಯಿಗೆ ಮಣ್ಣುಹಾಕಿದೆ ಎಂದು ಹೇಳಿ ತಾವೇ ಬಾಯಿಗೆ ಮಣ್ಣು ಹಾಕಿಕೊಂಡು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಇಂದು ಮಂಡ್ಯ, ಮದ್ದೂರ್ ಬಂದ್- ಪೊಲೀಸ್ ಬಿಗಿ ಭದ್ರತೆ

    ಸಿದ್ದರಾಮಯ್ಯ (Siddaramaiah) ಬರಗಾಲದ ಸಿಎಂ, ಬರಗಾಲದ ಮುಖ್ಯಮಂತ್ರಿ ಬಂದ್ರೆ ಬರಗಾಲವೇ ಉಂಟಾಗುತ್ತೆ. ಜಲಸಂಪನ್ಮೂಲ ಸಚಿವರು ಮಂಡ್ಯ ಬಂದ್ ಮಾಡಿದ್ರೇ ಏನೂ ಆಗಲ್ಲ ಅಂತಾರೆ ಇವರಿಗೆ ಮಾನವೀಯತೆ ಇದೆಯಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಭುಗಿಲೆದ್ದ ಆಕ್ರೋಶದ ನಡುವೆಯೂ ತಮಿಳುನಾಡಿಗೆ ನೀರು; KRS ನೀರಿನ ಮಟ್ಟ 96 ಅಡಿಗೆ ಕುಸಿತ

    ಸಿದ್ದರಾಮಯ್ಯ ಅವರ ಭ್ರಷ್ಟ ಸರ್ಕಾರ ರೈತರ ಬಾಯಿಗೆ ಮಣ್ಣು ಹಾಕಿದೆ. ನಾವು ಹೆಂಡತಿಯ ತಾಳಿ ಅಡವಿಟ್ಟು ಬೋರ್‌ವೆಲ್ ಕೊರೆಸಿದ್ದೇವೆ. ಆದ್ರೆ ನೀರು ಬಾರದೇ ಬೆಳೆಗಳು ಹಾಳಾಗುತ್ತಿವೆ. ಈ ಸರ್ಕಾರ ಇಡೀ ಮಂಡ್ಯ ಜಿಲ್ಲೆಯ ರೈತರು ಮಣ್ಣು ತಿನ್ನುವಂತೆ ಮಾಡಿದೆ. ಅದಕ್ಕಾಗಿ ನಾವೇ ಮಣ್ಣು ಹಾಕಿಕೊಳ್ತಿದ್ದೇವೆ ಎಂದು ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]