Tag: Mandya Ganesh Idol Procession

  • ಮದ್ದೂರು ಗಣೇಶ ಮೆರವಣಿಗೆಗೆ ಕಲ್ಲು ತೂರಿದ ಕೇಸ್‌ – ಪಾತ್ರವೇ ಇಲ್ಲದ ಪೊಲೀಸ್‌ ಅಧಿಕಾರಿ ವರ್ಗಾವಣೆ

    ಮದ್ದೂರು ಗಣೇಶ ಮೆರವಣಿಗೆಗೆ ಕಲ್ಲು ತೂರಿದ ಕೇಸ್‌ – ಪಾತ್ರವೇ ಇಲ್ಲದ ಪೊಲೀಸ್‌ ಅಧಿಕಾರಿ ವರ್ಗಾವಣೆ

    ಮಂಡ್ಯ: ಮದ್ದೂರು ಗಣೇಶ ಮೆರವಣಿಗೆಗೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾತ್ರವೇ ಇಲ್ಲದ ಪೊಲೀಸ್‌ ಅಧಿಕಾರಿಯನ್ನು ಸರ್ಕಾರ ವರ್ಗಾವಣೆ ಮಾಡಿದೆ.

    ಅಡಿಷನಲ್ ಎಸ್ಪಿ ತಿಮ್ಮಯ್ಯ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಗೃಹ ಇಲಾಖೆ ವರ್ಗಾವಣೆ ಮಾಡಿ ಇನ್ನೂ ಜಾಗ ತೋರಿಸಿಲ್ಲ.

    ಮದ್ದೂರು ಪ್ರಕರಣದಲ್ಲಿ ತಿಮ್ಮಯ್ಯಗೆ ಹೆಚ್ಚುವರಿ ಜವಾಬ್ದಾರಿ ನೀಡಿಯೇ ಇರಲಿಲ್ಲ. ಹೀಗಿದ್ದರೂ ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಲಾಗಿದೆ. ಕಲ್ಲು ತೂರಾಟ ತಡೆಯಬೇಕಿದ್ದು ಮದ್ದೂರು ಇನ್‌ಸ್ಪೆಕ್ಟರ್‌ ಹಾಗೂ ಇತರ ಪೊಲೀಸರ ಕರ್ತವ್ಯವಾಗಿತ್ತು. ಸೋಮವಾರ ಪ್ರತಿಭಟನೆ ಬಂದೋಬಸ್ತ್ ನೇತೃತ್ವ ವಹಿಸಿದ್ದು ಎಸ್ಪಿ. ಕೇವಲ ಸ್ಥಳದಲ್ಲಿ ಬಂದೋಬಸ್ತ್ ಕೆಲಸ ಮಾಡುತ್ತಿದ್ದವರು ತಿಮ್ಮಯ್ಯ. ಹೀಗಿದ್ದರೂ ಸಹ ಅಮಾಯಕ ಅಧಿಕಾರಿಯನ್ನು ಸರ್ಕಾರ ಬಲಿಪಶು ಮಾಡಿದೆ ಎಂಬ ದೂಷಣೆ ಕೇಳಿಬಂದಿದೆ.

  • ಮಂಡ್ಯದಲ್ಲಿ ಗಣೇಶ ವಿಸರ್ಜನೆ ವೇಳೆ ಚಾಕು ಇರಿತ

    ಮಂಡ್ಯದಲ್ಲಿ ಗಣೇಶ ವಿಸರ್ಜನೆ ವೇಳೆ ಚಾಕು ಇರಿತ

    ಮಂಡ್ಯ: ಹಳೇ ದ್ವೇಷ ಹಿನ್ನೆಲೆ ಗಣೇಶ ವಿಸರ್ಜನೆ ಮೆರವಣಿಗೆ (Ganesh Idol Procession) ವೇಳೆ ಡ್ಯಾನ್ಸ್ ಮಾಡುತ್ತಿದ್ದ ಯುವಕನಿಗೆ ಚಾಕು ಇರಿತವಾಗಿರುವ ಘಟನೆ ಮಂಡ್ಯದ (Mandya) ಮಾಚಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಜರುಗಿದೆ.

    ಮಾಚಹಳ್ಳಿ ಗ್ರಾಮದ ಸಚ್ಚಿನ್ (24) ಎಂಬಾತನ ಕೈ ಹಾಗೂ ಹೊಟ್ಟೆ ಭಾಗಕ್ಕೆ ಚಾಕು ಇರಿತವಾಗಿದ್ದು, ನಂಜುಂಡಸ್ವಾಮಿ (26) ಎಂಬಾತನಿಗೆ ತಲೆ ಹಾಗೂ ಕಣ್ಣಿ ಭಾಗಕ್ಕೆ ಕಲ್ಲಿನಿಂದ ಹಲ್ಲೆ ಮಾಡಲಾಗಿದೆ. ಇದನ್ನೂ ಓದಿ: ಕಂಟೇನರ್ ಡಿಕ್ಕಿ ಹೊಡೆದು ಈರುಳ್ಳಿ ಟೆಂಪೋ ಪಲ್ಟಿ – ಓರ್ವ ಸಾವು

    ದರ್ಶನ್, ಲೋಕೇಶ್, ಪ್ರಜ್ವಲ್ ಸೇರಿದಂತೆ ಹಲವರಿಂದ ಈ ಕೃತ್ಯ ನಡೆದಿದೆ. ನಿನ್ನೆ ರಾತ್ರಿ ಗ್ರಾಮದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಸ್ನೇಹಿತರೊಂದಿಗೆ ಸಚ್ಚಿನ್ ಹಾಗೂ ನಂಜುಂಡಸ್ವಾಮಿ ಡ್ಯಾನ್ಸ್ ಮಾಡುತ್ತಿದ್ದರು. ಈ ವೇಳೆ ದರ್ಶನ್ & ಗ್ಯಾಂಗ್‌ನಿಂದ ಏಕಾಏಕಿ ಹಳೇ ದ್ವೇಷದಿಂದ ಗಲಾಟೆ ಆಗಿದೆ. ಬಳಿಕ ಇವರು ಚಾಕು ಇರಿದಿದ್ದು, ಕಲ್ಲಿನಿಂದಲೂ‌ ಹಲ್ಲೆ ಮಾಡಿದ್ದಾರೆ.

    ಕಳೆದ 3 ವರ್ಷದಿಂದ ಗಾಯಾಳು ಸಚ್ಚಿನ್ ಹಾಗೂ ಆರೋಪಿ ದರ್ಶನ್ ನಡುವೆ ಸಣ್ಣಪುಟ್ಟ ವಿಚಾರಗಳಿಗೆ ಆಗಾಗ್ಗೆ ಕಿರಿಕ್ ಆಗುತ್ತಿತ್ತು. 5 ಇಬ್ಬರ ನಡುವೆ ದೊಡ್ಡ ಗಲಾಟೆ ನಡೆದು ಪೊಲೀಸ್ ಠಾಣೆಯಲ್ಲಿ ರಾಜಿಯಾಗಿತ್ತು. ನಿನ್ನೆ ಮತ್ತೆ ಗಲಾಟೆ ನಡೆದು ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಗಾಯಾಳುಗಳಿಗೆ ಮಂಡ್ಯ ಮಿಮ್ಸ್‌ನಲ್ಲಿ ಚಿಕಿತ್ಸೆ ನೀಡುತ್ತಿದ್ದು, ಈ‌ ಬಗ್ಗೆ ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತ – 4 ದಿನಗಳಲ್ಲಿ 4 ಸಾವು

  • ತಪ್ಪಿತಸ್ಥರ ವಿರುದ್ಧ ಕ್ರಮ, ಬಂಧನ ಆಗುತ್ತೆ: ಗಣೇಶ ವಿಸರ್ಜನೆ ಗಲಾಟೆ ಬಗ್ಗೆ ಚಲುವರಾಯಸ್ವಾಮಿ ಪ್ರತಿಕ್ರಿಯೆ

    ತಪ್ಪಿತಸ್ಥರ ವಿರುದ್ಧ ಕ್ರಮ, ಬಂಧನ ಆಗುತ್ತೆ: ಗಣೇಶ ವಿಸರ್ಜನೆ ಗಲಾಟೆ ಬಗ್ಗೆ ಚಲುವರಾಯಸ್ವಾಮಿ ಪ್ರತಿಕ್ರಿಯೆ

    ಮಂಡ್ಯ: ತಪ್ಪು ಮಾಡಿರುವವರ ವಿರುದ್ಧ ಕ್ರಮ ಆಗುತ್ತದೆ. ಪೊಲೀಸರು ಪ್ರಕರಣ ತನಿಖೆ ನಡೆಸಿ ಆರೋಪಿಗಳ ಬಂಧನ ಮಾಡ್ತಾರೆ ಎಂದು ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದರು.

    ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಆದ ಗಲಾಟ ಕುರಿತು ಮಾತನಾಡಿ, ಪರಿಸ್ಥಿತಿ ಈ ಪೂರ್ಣ ಪ್ರಮಾಣದಲ್ಲಿ ನಿಯಂತ್ರಣಕ್ಕೆ ಬಂದಿದೆ. 144 ಸೆಕ್ಷನ್‌ ಕೂಡ ಜಾರಿಯಲ್ಲಿದೆ. ಯಾವುದೇ ಆಸ್ತಿ ನಷ್ಟ, ಪ್ರಾಣಹಾನಿಯಾಗದಂತೆ ನೋಡಿಕೊಳ್ಳಿ. ಪರಿಸ್ಥಿತಿ ನಿಯಂತ್ರಣಕ್ಕೆ ಸೂಚನೆ ಕೊಟ್ಟಿದ್ದೇವೆ. ಆ ಕೆಲಸ ಆಗ್ತಿದೆ ಎಂದು ಸಚಿವರು ತಿಳಿಸಿದರು.

    ನಾನು 40 ವರ್ಷಗಳಿಂದ ಶಾಸಕನಾಗಿದ್ದೇನೆ. ಹಿಂದೆ ಬೇರೆ ಕಾರಣಕ್ಕೆ ಹಿಂದೂ-ಮುಸ್ಲಿಂ ಗಲಾಟೆ ಆಗಿತ್ತು. ಆದರೆ ಈ ರೀತಿ ಘಟನೆ ಆಗಿರಲಿಲ್ಲ. ಬಹಳ ವರ್ಷಗಳಿಂದ ಹೀಗಾಗಿರಲಿಲ್ಲ. ದುರದೃಷ್ಟವಶಾತ್‌ ಈ ಘಟನೆ ಆಗಿದೆ. ಪ್ರಕರಣ ನಿಯಂತ್ರಣಕ್ಕೆ ತರುವ ಕೆಲಸ ಆಗುತ್ತಿದೆ. ಯಾವುದೇ ಅನಾಹುತ ಆಗದಂತೆ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಕ್ರಮವಹಿಸಲಿದೆ ಎಂದರು.

  • ಸರ್ಕಾರ ಒಂದು ಗುಂಪನ್ನು ಓಲೈಸುತ್ತಿರೋದ್ರಿಂದ ಇಂಥ ಉದ್ಧಟತನ ಆಗ್ತಿದೆ: ಮಂಡ್ಯ ಗಣೇಶ ವಿಸರ್ಜನೆ ಗಲಾಟೆಗೆ ಹೆಚ್‌ಡಿಕೆ ಬೇಸರ

    ಸರ್ಕಾರ ಒಂದು ಗುಂಪನ್ನು ಓಲೈಸುತ್ತಿರೋದ್ರಿಂದ ಇಂಥ ಉದ್ಧಟತನ ಆಗ್ತಿದೆ: ಮಂಡ್ಯ ಗಣೇಶ ವಿಸರ್ಜನೆ ಗಲಾಟೆಗೆ ಹೆಚ್‌ಡಿಕೆ ಬೇಸರ

    ಮಂಡ್ಯ: ಸರ್ಕಾರ ಒಂದು ಗುಂಪನ್ನು ಓಲೈಸುತ್ತಿರುವುದರಿಂದ ಈ ರೀತಿಯ ಉದ್ಧಟತನ ಪ್ರಾರಂಭವಾಗಿದೆ ಎಂದು ಮಂಡ್ಯದಲ್ಲಿ ಗಣೇಶ ವಿಸರ್ಜನೆ ಗಲಾಟೆ ಕುರಿತು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

    ಮಂಡ್ಯ ಗಲಾಟೆ ಪ್ರಕರಣ ಸಂಬಂಧ ಎಸ್‌ಪಿ ಜೊತೆ ಮಾತನಾಡಿದ್ದೇನೆ. ಸಾಯಂಕಾಲ ನಡೆದ ಮೆರವಣಿಗೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಆಗಿದೆ ಎಂದರು. ಇದು ಉಲ್ಬಣ ಆಗದಂತೆ ನೋಡಿಕೊಳ್ಳಿ. ಕಠಿಣ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

    ನಾನು ದೆಹಲಿಯಿಂದ ಬಂದ ತಕ್ಷಣ ಸ್ಥಳ ಪರಿಶೀಲನೆ ಮಾಡ್ತೀನಿ. ಇದನ್ನು ಇಲ್ಲಿಗೆ ನಿಲ್ಲಿಸುವುದು ಒಳ್ಳೆಯದು. ಬೇರೆ ರೀತಿಯಲ್ಲಿ ತೆಗೆದುಕೊಂಡು ಹೋಗಿ ಜನರಲ್ಲಿ ಅಶಾಂತಿ ಉಂಟು ಮಾಡಬಾರದು. ಅಮಾಯಕರ ಸಾವು-ನೋವಾಗಬಾರದು ಎಂದು ಎರಡೂ ಗುಂಪುಗಳಲ್ಲಿ ನಾನು ಮನವಿ ಮಾಡುತ್ತೇನೆ ಎಂದರು.

    ಸರ್ಕಾರ ಯಾವುದೋ ಒಂದು ಗುಂಪು ಓಲೈಸಿಕೊಂಡು ಹೋಗುವ ಕೆಲಸ ಮಾಡುತ್ತಿದೆ. ಇದರಿಂದಲೇ ಅವರಲ್ಲಿ ಒಂದು ರೀತಿಯ ಉದ್ಧಟತನ ಪ್ರಾರಂಭವಾಗಿದೆ. ಇಂತಹ ಘಟನೆಗಳ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಒಂದು ಗುಂಪನ್ನು ಓಲೈಸಿದರೆ, ನಾವು ಏನು ಮಾಡಿದರೂ ಸರ್ಕಾರ ನಮ್ಮ ರಕ್ಷಣೆಗಿದೆ ಎಂಬ ಭಾವನೆ ಬರುತ್ತದೆ. ಹೀಗಾಗಿ ಇಂತಹ ಘಟನೆಗಳಿಗೆ ಅವಕಾಶ ಕೊಡಬಾರದು ಎಂದು ಒತ್ತಾಯಿಸಿದರು.

    ಇಂತಹ ಪ್ರಕರಣಗಳಿಂದ ಅಮಾಯಕರು ತೊಂದರೆ ಒಳಗಾಗುತ್ತಾರೆ. ಆದರೆ ಅಪರಾಧಿಗಳಿಗೆ ಏನೂ ಆಗಲ್ಲ. ತಕ್ಷಣ ಇದನ್ನು ತಹಬದಿಗೆ ತಂದು, ಪ್ರಕರಣದ ಹಿಂದೆ ಇರುವವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದರು.