Tag: Mandya Traffic Police

  • ಮಂಡ್ಯ | ಟ್ರಾಫಿಕ್‌ ಪೊಲೀಸರ ಯಡವಟ್ಟಿನಿಂದ ಪ್ರಾಣಬಿಟ್ಟ ಮಗು – ಮೂವರು ASI ಸಸ್ಪೆಂಡ್‌

    ಮಂಡ್ಯ | ಟ್ರಾಫಿಕ್‌ ಪೊಲೀಸರ ಯಡವಟ್ಟಿನಿಂದ ಪ್ರಾಣಬಿಟ್ಟ ಮಗು – ಮೂವರು ASI ಸಸ್ಪೆಂಡ್‌

    ಮಂಡ್ಯ: ನಗರದ ಸ್ವರ್ಣಸಂದ್ರ ಬಳಿ ಟ್ರಾಫಿಕ್ ಪೊಲೀಸರ (Mandya Traffic Police) ಯಡವಟ್ಟಿನಿಂದ ಮೂರುವರೆ ವರ್ಷದ ಮಗು ಪ್ರಾಣಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್‌ಐಗಳ (ASI) ತಲೆದಂಡವಾಗಿದೆ.

    ಘಟನಾ ಸ್ಥಳದಲ್ಲಿ ಹೆಲ್ಮೆಟ್‌ ತಪಾಸಣೆ ಮಾಡುತ್ತಿದ್ದ ಎಎಸ್‌ಐಗಳಾದ ನಾಗರಾಜು, ಜಯರಾಂ, ಗುರುದೇವ್‌ ಅವರನ್ನು ಅಮಾನತುಗೊಳಿಸಿರುವುದಾಗಿ ಮಂಡ್ಯ ಎಸ್ಪಿ (Mandya SP) ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಂಡ್ಯ | ಬೈಕ್ ಅಡ್ಡಗಟ್ಟಿದ ಪೊಲೀಸ್ರು – ಆಯತಪ್ಪಿ ಬಿದ್ದು ತಾಯಿ ಮಡಿಲಲ್ಲೇ ಪ್ರಾಣಬಿಟ್ಟ ಮಗು

    ಈ ಕುರಿತು ಮಾತನಾಡಿರುವ ಮಂಡ್ಯ ಎಸ್ಪಿ, ಸುರಕ್ಷಿತ ನಿಯಮ ಪಾಲಿಸದೇ ಪೊಲೀಸರು ತಪಾಸಣೆ ನಡೆಸಿದ್ದಾರೆ. ಈ ವೇಳೆ ಮಗು ಬರುತ್ತಿದ್ದ ವಾಹನವನ್ನ ಪೊಲೀಸರು ತಡೆದಿದ್ದಾರೆ. ಈ ವೇಳೆ ಹಿಂಭಾಗದಿಂದ ಬಂದ ವಾಹನ ಡಿಕ್ಕಿಯಾಗಿದೆ. ಈ ವೇಳೆ ಮಗು ಕೆಳಗೆ ಬಿದ್ದಿದೆ, ಆ ಸಂಧರ್ಭದಲ್ಲಿ ಹಿಂದೆ ಬರುತ್ತಿದ್ದ ವಾಹನ ಮಗುಮೇಲೆ ಹತ್ತಿದೆ. ಈ ಕಾರಣದಿಂದ ಮಗು ಸಾವನಪ್ಪಿದೆ. ಇದನ್ನೂ ಓದಿ: ಮೈಸೂರು ರಾಜಮನೆತನಕ್ಕೆ ಟಿಡಿಆರ್ ನೀಡಲು ಸುಪ್ರೀಂ ಆದೇಶ – ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರದಿಂದ ಅರ್ಜಿ

    ಸಿಸಿಟಿವಿ ಪರಿಶೀಲನೆ ನಂತರ ಘಟನೆಗೆ ನಿಖರ ಕಾರಣ ತಿಳಿಯಲಿದೆ. ಮಗುವಿನ ಮೇಲೆ ವಾಹನ ಹತ್ತಿದೆಯಾ ಅಥವಾ ಪೊಲೀಸರು ತಡೆದು ಬೀಳಿಸಿದ್ದಾರಾ ಎಲ್ಲೌೂ ಗೊತ್ತಾಗಬೇಕಿದೆ. ಇದು ಹಳೆಯ ರಾಷ್ಟ್ರೀಯ ಹೆದ್ದಾರಿಯಾಗಿದೆ. ಹೆದ್ದಾರಿ ನಗರದ ಒಳಗೆ ಹೋಗುವ ಕಾರಣದಿಂದ ಇಲ್ಲಿ ತಪಾಸಣೆ ಮಾಡಲಾಗಿದೆ. ತಪಾಸಣೆ ವೇಳೆ ಸುರಕ್ಷಿತ ಕ್ರಮ ಕೈಗೊಂಡಿಲ್ಲದ ಕಾರಣ ಮೂವರು ಎಎಸ್‌ಐಗಳನ್ನ ಅಮಾನತು ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

    ಘಟನೆ ಬಳಿಕ ಮಂಡ್ಯ ಮಿಮ್ಸ್ ಶವಗಾರಕ್ಕೆ ಡಿಸಿ ಡಾ.ಕುಮಾರ್, ಜಿಪಂ ಸಿಇಓ ಕೆ.ಆರ್.ನಂದಿನಿ ಭೇಟಿ ನೀಡಿದ್ದು ಮೃತ ಬಾಲಕಿ ಅಂತಿಮ ದರ್ಶನ ಪಡೆದು, ಮೃತ ಬಾಲಕಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

  • Mandya | ಬಸ್ ಪಲ್ಟಿಯಾಗಿ 30 ಜನರಿಗೆ ಗಾಯ

    Mandya | ಬಸ್ ಪಲ್ಟಿಯಾಗಿ 30 ಜನರಿಗೆ ಗಾಯ

    ಮಂಡ್ಯ: ಚಾಮರಾಜನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ (KSRTC Bus) ಮದ್ದೂರಿನ ರುದ್ರಾಕ್ಷಿಪುರದ ಬಳಿ ಚಾಲಕನ ಅಜಾಗರೂಕತೆಯಿಂದ ಅಪಘಾತಕ್ಕೀಡಾಗಿದೆ. ಬಸ್‌ ಪಲ್ಟಿಯಾಗಿ (Bus Overturn) ಸುಮಾರು 33 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

    ಇಂದು (ಜ.20) ಬೆಳಗ್ಗೆ 10 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಬಸ್‌ ಚಲಿಸುತ್ತಿದ್ದ ವೇಳೆ ಚಾಲಕ ಅಚಾನಕ್ಕಾಗಿ ಹಿಂಬದಿ ತಿರುಗಿನೋಡಿದ್ದು, ಈ ವೇಳೆ ಚಕ್ರ ಡಿವೈಡರ್‌ ಮೇಲೆ ಹತ್ತಿದೆ. ಹೀಗಾಗಿ ಬಸ್ ಪಲ್ಟಿ ಹೊಡೆದಿದೆ. ಇದರಿಂದ ಬಸ್‌ನಲ್ಲಿದ್ದ ಪ್ರಯಾಣಿಕರ ಪೈಕಿ 30 ಮಂದಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಪಾನೀಯದಲ್ಲಿ ವಿಷ ಬೆರೆಸಿ ಬಾಯ್‌ಫ್ರೆಂಡ್‌ ಕೊಲೆ ಮಾಡಿದ್ದ ಕೇರಳದ ಮಹಿಳೆಗೆ ಮರಣದಂಡನೆ

    ಗಾಯಗೊಂಡಿರುವ ಪ್ರಯಾಣಿಕರಿಗೆ ಮದ್ದೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾಧಿಕಾರಿ ಡಾ. ಕುಮಾರ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ, ಬಳಿಕ ಆಸ್ಪತ್ರೆಗೂ ಭೇಟಿ ನೀಡಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: ಕೋಲ್ಕತ್ತಾ ಟ್ರೈನಿ ವೈದ್ಯೆ ಅತ್ಯಾಚಾರ & ಕೊಲೆ ಕೇಸ್‌ – ಅಪರಾಧಿ ಸಂಜಯ್‌ ರಾಯ್‌ಗೆ ಜೀವಾವಧಿ ಶಿಕ್ಷೆ

    ಗಾಯಾಳುಗಳಿಗೆ ಹೆಚ್ಚುವರಿ ಚಿಕಿತ್ಸೆಯ ಅಗತ್ಯ ಬಿದ್ದರೆ ಮಿಮ್ಸ್‌ ಅಥವಾ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ಕೊಡಿಸುವಂತೆ ಸೂಚನೆ ನೀಡಿದ್ದಾರೆ. ಒಂದು ವೇಳೆ ಗಾಯಾಳುಗಳನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೆ, ಅದರ ಖರ್ಚು ವೆಚ್ಚವನ್ನು ಕೆಎಸ್‌ಆರ್‌ಟಿಸಿ ವತಿಯಿಂದ ಭರಿಸುವಂತೆ ನೋಡಿಕೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ಗೋಮೂತ್ರದ ಔಷಧೀಯ ಗುಣಗಳನ್ನ ಪರಿಗಣಿಸಬೇಕು – ಐಐಟಿ ಮದ್ರಾಸ್‌ ನಿರ್ದೇಶಕ