Tag: Mane

  • ಕಾಣೆಯಾದ ನಟಿ ಊರ್ವಶಿ ರೌಟೇಲ್ ಖರೀದಿಸಿದ ₹190 ಕೋಟಿ ಬಂಗ್ಲೆ

    ಕಾಣೆಯಾದ ನಟಿ ಊರ್ವಶಿ ರೌಟೇಲ್ ಖರೀದಿಸಿದ ₹190 ಕೋಟಿ ಬಂಗ್ಲೆ

    ಬಾಲಿವುಡ್ ನಟಿ ಊರ್ವಶಿ ರೌಟೇಲ್ (Urvashi Rautela) ಮುಂಬೈನಲ್ಲಿ (Mumbai) 190 ಕೋಟಿ ರೂಪಾಯಿ ಬೆಲೆ ಬಾಳುವ ಬಂಗ್ಲೆ ಖರೀದಿಸಿದ್ದಾರೆ ಎನ್ನುವ ಸುದ್ದಿ ಬಿಟೌನ್ ನಲ್ಲಿ ಭಾರೀ ಸದ್ದು ಮಾಡಿತ್ತು. ದುಬಾರಿ ಬೆಲೆಯ ಬಂಗ್ಲೆಯನ್ನು ನಟಿಗೆ ಖರೀದಿಸಲು ಹೇಗೆ ಸಾಧ್ಯವಾಯಿತು ಎಂದು ಜನರು ಮಾತನಾಡಿಕೊಂಡರು. ಅದರಲ್ಲೂ ಪ್ರತಿಷ್ಠಿತ ಏರಿಯಾದಲ್ಲಿ ಬಂಗ್ಲೆ ಹೇಗೆ ಸಿಕ್ಕಿತು ಎನ್ನುವ ಮಾತು ಕೇಳಿ ಬಂತು. ಇದೆಲ್ಲದಕ್ಕೂ ಊರ್ವಶಿ ತಾಯಿ ಮೀರಾ ರೌಟೇಲ್ (Meera Rautela) ಉತ್ತರಿಸಿದ್ದಾರೆ.

    ನನ್ನ ಮಗಳು 190 ಕೋಟಿ ರೂಪಾಯಿ ಬಂಗ್ಲೆ ಖರೀದಿಸಿದ್ದಾರೆ ಎನ್ನುವ ಸುದ್ದಿ ಕೇಳಿ ಅಚ್ಚರಿ ಆಯಿತು. ದಯವಿಟ್ಟು ಆ ಮನೆ ಎಲ್ಲಿದೆ ಎಂದು ಹುಡುಕಿಕೊಡಿ. ಅಲ್ಲದೇ, ನನ್ನ ಮಗಳು ಅಷ್ಟು ದುಬಾರಿ ಮನೆ ಖರೀದಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದು ಕಪೋಕಲ್ಪಿತ ಸುದ್ದಿ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ. ಇದನ್ನೂ ಓದಿ:ವರುಣ್‌ ತೇಜ್-‌ ನಟಿ ಲಾವಣ್ಯ ಎಂಗೇಜ್‌ಮೇಟ್ ಡೇಟ್ ಫಿಕ್ಸ್

    ಮುಂಬೈನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಜುಹು ಪ್ರದೇಶದಲ್ಲಿ ಊರ್ವಶಿ ಮನೆ ಖರೀದಿಸಿದ್ದಾರೆ ಎಂದು ಮಾಧ್ಯಮಗಳು ಸುದ್ದಿ ಮಾಡಿದ್ದವು. ಅದರಲ್ಲೂ ಖ್ಯಾತ ನಿರ್ಮಾಪಕ ಯಶ್ ಚೋಪ್ರಾ (Yash Chopra) ಅವರ ಮನೆಯ ಹಿಂದೆಯೇ ಆ ಬಂಗ್ಲೆ ಇದೆ ಎಂದು ಸುದ್ದಿ ಹರಿಬಿಡಲಾಗಿತ್ತು. ಆ ಮನೆಗೆ ದುಬಾರಿ ಬೆಲೆಯನ್ನೂ ನಿಗದಿ ಮಾಡಲಾಗಿತ್ತು. ಇದೆಲ್ಲವೂ ಸುಳ್ಳು ಸುದ್ದಿ ಎಂದು ಊರ್ವಶಿ ತಾಯಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

  • ನಟ ಡಾ. ವಿಷ್ಣುವರ್ಧನ್ ಮನೆ ಹೇಗಿದೆ? ‘ವಲ್ಮೀಕ’ ವಿಶೇಷ

    ನಟ ಡಾ. ವಿಷ್ಣುವರ್ಧನ್ ಮನೆ ಹೇಗಿದೆ? ‘ವಲ್ಮೀಕ’ ವಿಶೇಷ

    ಡಾ.ವಿಷ್ಣುವರ್ಧನ್ ಅವರ ಕನಸಿನ ಮನೆಗೆ ಇಂದು‌ ಗೃಹಪ್ರವೇಶ.  ಜಯನಗರದಲ್ಲಿ ನಿರ್ಮಾಣವಾಗಿರುವ ಆ‌ ಭವ್ಯ ಮನೆಯಲ್ಲಿ ಹಳೆಯ ನೆನಪುಗಳನ್ನೇ ಉಳಿಸಿಕೊಂಡು ಹೊಸ ಮನೆಯನ್ನು ನಿರ್ಮಾಣ ಮಾಡಿದ್ದಾರೆ ವಿಷ್ಣುವರ್ಧನ್ ಪತ್ನಿ ಭಾರತಿ ವಿಷ್ಣುವರ್ಧನ್. ಸಿಂಹ ನೆಲೆಸಿದ್ದ ಆ ಮನೆಯನ್ನು ಅವರ ಕುಟುಂಬ ಇದೀಗ ಹೊಸ ರೀತಿಯಲ್ಲಿ ಕಟ್ಟಿಸಲಾಗಿದೆ.

    ನವ ಗೃಹಕ್ಕೆ ಪ್ರವೇಶಿಸುವುದು ಹಲವರ ಕನಸು. ಇಂದು ಚಂದನವನದ ಮೇರುನಟ ದಿ. ವಿಷ್ಣುವರ್ಧನ್ ಅವರ ಕುಟುಂಬ ಇಂತಹದ್ದೇ ಸಂತಸದಲ್ಲಿದೆ. ಈ ಶುಭ ದಿನದಂದು ವಿಷ್ಣು ಅವರ ನೂತನ ನಿವಾಸದ ಗೃಹಪ್ರವೇಶಕ್ಕೆ ಸಜ್ಜಾಗಿದ್ದು, ವಿಷ್ಣು ಅವರು ಆಸೆ ಪಟ್ಟಂತೆಯೇ ಪತ್ನಿ ಭಾರತಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ಮನೆ ಗೃಹಪ್ರವೇಶ ನಡೆದಿದೆ‌. ಇದನ್ನೂ ಓದಿ: `ಗಾಲ್ವಾನ್ ಹಾಯ್’ ಎಂದ ನಟಿಗೆ ಚಳಿ ಬಿಡಿಸಿದ ಸಚಿವ – ಕಾನೂನು ಕ್ರಮಕ್ಕೆ ಚಿಂತನೆ

    ಸಾಹಸಸಿಂಹ ವಿಷ್ಣುವರ್ಧನ್ ಅವರ ಕನಸಿನ ಮನೆ ಇರುವುದು ಜಯನಗರದ ಟಿ ಬ್ಲಾಕ್ ನಲ್ಲಿ 90/90 ಚದರಡಿಯಲ್ಲಿ ಭವ್ಯವಾಗಿ ಈ ಮನೆ ನಿರ್ಮಾಣ ಮಾಡಲಾಗಿದೆ. ‘ವಲ್ಮೀಕ’ ಹೆಸರಿನಲ್ಲಿ, ಗೇಟ ಮೇಲೆ ಸಿಂಹದ ಮುಖದೊಂದಿಗೆ ವಿನ್ಯಾಸಗೊಳಿಸಲಾಗಿದೆ. ಇಂತಹ ಮನೆಗೆ ಇಂದು ವಿಷ್ಣು ಕುಟುಂಬ ಗೃಹ ಪ್ರವೇಶ ಮಾಡಿದ್ದು, ಸಿಎಂ‌ ಬಸವರಾಜ ಬೊಮ್ಮಾಯಿ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಆಗಮಿಸಿ ಶುಭ ಹಾರೈಸಿದ್ದಾರೆ.

    ವಲ್ಮೀಕ ಎಂದರೆ ಹಾವಿನ ಹುತ್ತ ಎಂದರ್ಥ. ನಾಗರಹಾವು ಚಿತ್ರದ ಯಶಸ್ಸಿನ‌ ನಂತರ ಇಲ್ಲೆ ಇದ್ದ ವಿಷ್ಣುವರ್ಧನ್ ಹಳೆಮನೆಗೆ ವಲ್ಮೀಕ ಎಂದು ಹೆಸರಿಟ್ಟಿದ್ದರು. 1976 ರಲ್ಲಿ ವಿಷ್ಣುವರ್ಧನ್ ಈ ಜಾಗ ಖರೀದಿ ಮಾಡಿದ್ದರಂತೆ. ಆದರೆ, ಇದು ನಮ್ಮ ಜಾಗ ಅಂತ ಅದರ ಮಾಲಿಕರು ಆಗ ಬಂದಿದ್ದರು. ವಿಷ್ಣುವರ್ಧನ್ ಇದನ್ನು ಇಷ್ಟ ಪಟ್ಟಿದ್ದಾರೆ ಅಂತ ಆ ಜಾಗದಲ್ಲಿ ಅರ್ಧ ಜಾಗ ಹಾಗೆಯೇ ಕೊಟ್ಟಿದ್ದರಂತೆ ಮಾಲೀಕರು. 6 ಬೆಡ್ ರೂಂನ ಈ ಮನೆ ಮುಂಭಾಗ‌ ಒಂದು ಕೃಷ್ಣನ ವಿಗ್ರಹವಿದೆ. ಅದನ್ನ ವಿಷ್ಣು ಅವ್ರೆ ಇಲ್ಲಿ‌ ಸ್ಥಾಪಿಸಿದ್ದರಂತೆ. ಅದನ್ನ ಹಾಗೆಯೆ ಇಟ್ಟು‌‌ ಕಲ್ಲಿನ ಮಂಟಪ ಮಾಡಿ ಮತ್ತೆ ಪ್ರತಿಷ್ಠಾಪನೆ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಬಾಳಿ ಬದುಕಿದ್ದ ಮನೆಯನ್ನೇ ಖಾಲಿ ಮಾಡಿದ ಕ್ರೇಜಿಸ್ಟಾರ್ ರವಿಚಂದ್ರನ್

    ಬಾಳಿ ಬದುಕಿದ್ದ ಮನೆಯನ್ನೇ ಖಾಲಿ ಮಾಡಿದ ಕ್ರೇಜಿಸ್ಟಾರ್ ರವಿಚಂದ್ರನ್

    ಬೆಂಗಳೂರಿನ ರಾಜಾಜಿನಗರದ (Rajajinagar) ಡಾ.ರಾಜ್ ಕುಮಾರ್ ರಸ್ತೆ ಅಂದಾಕ್ಷಣ ಅಲ್ಲಿ ರವಿಚಂದ್ರನ್ ಮನೆ ನೆನಪಾಗುತ್ತದೆ. ಖ್ಯಾತ ನಿರ್ಮಾಪಕರೂ, ರವಿಚಂದ್ರನ್ ಅವರ ತಂದೆಯವರೂ ಆದ ವೀರಸ್ವಾಮಿ (Veeraswamy) ಅವರಿಂದ ರವಿಚಂದ್ರನ್ ಪುತ್ರರ ತನಕ ಈ ಮನೆಯೇ ಕುಟುಂಬಕ್ಕೆ ನೆರಳಾಗಿದೆ. ಒಂದು ಕಾಲದಲ್ಲಿ ಅದು ಸಿನಿಮಾ ಇಂಡಸ್ಟ್ರಿಯ ಪ್ರಮುಖ ಸ್ಥಳವೂ ಆಗಿತ್ತು. ಅನೇಕ ಸಿನಿದಿಗ್ಗಜರು ಆ ಮನೆಗೆ ಬಂದಿದ್ದೂ ಇದೆ. ಇಂತಹ ಮನೆಯನ್ನು ರವಿಚಂದ್ರನ್ ತೊರೆದಿದ್ದಾರೆ.

    ರವಿಚಂದ್ರನ್ (Ravichandran) ಆ ಮನೆಯಲ್ಲಿ ಇಲ್ಲ ಎಂಬ ವಿಷಯ ವಾರದಿಂದ ಗಾಂಧಿನಗರದಲ್ಲಿ ಗಿರಿಕಿ ಹೊಡೆಯುತ್ತಿತ್ತು. ಕೆಲವರು ಆ ಮನೆಯನ್ನು ಮಾರಿದರು ಎಂದು ಹೇಳಿದರೆ, ಇನ್ನೂ ಕೆಲವರು ವಾಸ್ತು ಕಾರಣಕ್ಕಾಗಿ ಬಿಟ್ಟಿದ್ದಾರೆ ಎಂದೂ ಮಾತನಾಡಿಕೊಳ್ಳುತ್ತಿದ್ದರು. ರಿಪೇರಿ ಕಾರಣಕ್ಕಾಗಿ ಬೇರೆ ಮನೆಗೆ ಶಿಫ್ಟ್ ಆಗಿದ್ದಾರೆ ಎಂದೂ ಹೇಳಲಾಗಿತ್ತು. ಆದರೆ, ರವಿಚಂದ್ರನ್ ಅವರೇ ನಿನ್ನೆ ಬನಾರಸ್ ಸಿನಿಮಾದ ಟೀಸರ್ ಬಿಡುಗಡೆಗೂ ಮುನ್ನ, ಕೆಲ ಮಾಧ್ಯಮ ಸ್ನೇಹಿತರ ಮುಂದೆ ವಾಸ್ತವ ತೆರೆದಿಟ್ಟಿದ್ದಾರೆ.

    ಅಸಲಿಯಾಗಿ ರವಿಚಂದ್ರನ್ ಸಂಪೂರ್ಣವಾಗಿ ಮನೆ ತೊರೆದಿಲ್ಲ. ಆದರೆ, ಹೊಸ ಮನೆಗೆ ಶಿಫ್ಟ್ ಆಗಿದ್ದು ನಿಜ ಎಂದಿದ್ದಾರೆ. ಮಗನ ಮದುವೆಯ ನಂತರ ಹೊಸ ಮನೆಗೆ ಹೋಗುವುದು ಎಂದು ಮೊದಲೇ ನಿರ್ಧಾರವಾಗಿತ್ತು. ಹಾಗಾಗಿ ಹೊಸ ಮನೆಗೆ ಹೋಗಿದ್ದೇವೆ. ಹಳೆ ಮನೆಯಲ್ಲೂ ನಾನು ಇರುತ್ತೇನೆ. ಸಿನಿಮಾ ಸಂಬಂಧಿ  ಕೆಲಸಗಳನ್ನು ಇಲ್ಲಿಯೇ ಮಾಡುತ್ತಿದ್ದೇನೆ. ಹೊಸಕೆರೆ ಹಳ್ಳಿಯಲ್ಲಿರುವ ಅಪಾರ್ಟ್ಮೆಂಟ್ ನಲ್ಲಿ ಸದ್ಯ ರವಿಚಂದ್ರನ್ ವಾಸವಾಗಿದ್ದಾರೆ.

    ಹೊಸ ಮನೆಗೆ ಶಿಫ್ಟ್ ಆಗಬೇಕು ಎನ್ನುವುದು ಹಲವು ವರ್ಷಗಳಿಂದ ನಡೆಯುತ್ತಲೇ ಇತ್ತು. ಅಮ್ಮನಿಗಾಗಿ ಹಳೆ ಮನೆಯಲ್ಲೇ ಇದ್ದೆವು. ಮನೋರಂಜನ್ (Manoranjan) ಮದುವೆ ನಂತರ ಹೋಗುವ ಕುರಿತು ಪ್ಲ್ಯಾನ್ ಮಾಡಲಾಗಿತ್ತು. ಅದರಂತೆಯೇ ಇದೀಗ ಹೊಸ ಮನೆಗೆ ಶಿಫ್ಟ್ ಆಗಿರುವುದಾಗಿ ರವಿಚಂದ್ರನ್ ತಿಳಿಸಿದ್ದಾರೆ. ಈ ಮೂಲಕ ಹರಡಿರುವ ಗಾಸಿಪ್ ಗೆ ತೆರೆ ಎಳೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸೂಪರ್ ಸ್ಟಾರ್ ರಜನಿಕಾಂತ್ ಮನೆ ಪಕ್ಕದಲ್ಲೇ ನಯನತಾರಾ ಮನೆ ಖರೀದಿ

    ಸೂಪರ್ ಸ್ಟಾರ್ ರಜನಿಕಾಂತ್ ಮನೆ ಪಕ್ಕದಲ್ಲೇ ನಯನತಾರಾ ಮನೆ ಖರೀದಿ

    ಯನತಾರಾ ಮದುವೆ ಆಗುತ್ತಿದ್ದಂತೆಯೇ ಅವರ ಬದುಕಿನಲ್ಲಿ ನಾನಾ ಸಂಭ್ರಮಗಳು ಒಂದುಗೂಡುತ್ತಿವೆ. ಈಗಾಗಲೇ ನಯನತಾರಾ ಮತ್ತು ವಿಘ್ನೇಶ್ ಶಿವನ್ ಹಲವು ಆಸ್ತಿಗಳನ್ನು ಹೊಂದಿದ್ದಾರೆ. ಇದೀಗ ಮತ್ತೊಂದು ಮನೆಯನ್ನು ಖರೀದಿಸುವ ಪ್ಲ್ಯಾನ್ ಮಾಡುತ್ತಿದ್ದಾರೆ. ಆ ಮನೆಯ ಕಾರಣದಿಂದಾಗಿಯೇ ನಯನತಾರಾ ಸುದ್ದಿ ಆಗಿದ್ದಾರೆ. ಅಲ್ಲದೇ, ತಮ್ಮ ನೆಚ್ಚಿನ ನಟನ ಮನೆಯ ಪಕ್ಕದಲ್ಲೇ ಆ ಮನೆ ಇರುವುದರು ಅವರ ಸಂಭ್ರಮಕ್ಕೆ ಮತ್ತಷ್ಟು ಕಾರಣವಾಗಿದೆ.

    ರಜನಿಕಾಂತ್ ಅವರ ಸಿನಿಮಾಗಳನ್ನು ನೋಡುತ್ತಾ ಬೆಳೆದವರು ನಯನತಾರಾ, ಅವರೊಂದಿಗೆ ನಟಿಸಲು ಅವಕಾಶ ಸಿಕ್ಕಾಗ ಜೀವಮಾನ ಸಾಧನೆ ಅಂದುಕೊಂಡಿದ್ದರು. ರಜನಿಕಾಂತ್ ಅವರನ್ನು ದಿನವೂ ನೋಡಬೇಕು ಎಂದು ಇಷ್ಟಪಟ್ಟರು. ಇದೀಗ ಆ ಆಸೆಯನ್ನು ಅವರ ಮನೆಯ ಪಕ್ಕದಲ್ಲೇ ಮನೆಯನ್ನು ಖರೀದಿಸುವ ಮೂಲಕ ಈಡೇರಿಸಿಕೊಳ್ಳುತ್ತಿದ್ದಾರಂತೆ ನಯನತಾರ. ಮದುವೆಯ ನಂತರ ಪತಿಯು ಅವರಿಗೆ ಕೊಡುತ್ತಿರುವ ದುಬಾರಿ ಗಿಫ್ಟ್ ಇದಾಗಿದೆಯಂತೆ. ಇದನ್ನೂ ಓದಿ:ತೆಲುಗಿನ ಮಹೇಶ್ ಬಾಬುಗೆ ತಂದೆಯಾಗಿ ನಟಿಸ್ತಾರಾ ರಿಯಲ್ ಸ್ಟಾರ್ ಉಪೇಂದ್ರ

    ರಜನಿಕಾಂತ್ ಮನೆಯ ಪಕ್ಕದಲ್ಲೇ ನಯನತಾರಾ ಮನೆಯನ್ನು ಖರೀದಿಸುತ್ತಿದ್ದಾರೆ ಎನ್ನುವುದು ತಮಿಳು ಸಿನಿಮಾ ರಂಗದಲ್ಲಿ ಸಖತ್ ಸುದ್ದಿ ಆಗಿದೆ. ಆ ಮನೆ ಯಾವುದು ಎನ್ನುವುದು ಇನ್ನೂ ನಿಕ್ಕಿ ಆಗದೇ ಹೋದರೂ, ಯಾವ ಮನೆಯನ್ನು ಅವರು ಖರೀದಿಸಲಿದ್ದಾರೆ ಎನ್ನುವ ಕುತೂಹಲ ಕೂಡ ಮೂಡಿದೆ. ಹಾಗಂತ ರಜನಿಕಾಂತ್ ಅವರ ಪಕ್ಕದ ಮನೆಯವರು ಮನೆ ಮಾರಾಟಕ್ಕೆ ಇಟ್ಟಿದ್ದಾರಾ ಎನ್ನುವ ಪ್ರಶ್ನೆ ಕೂಡ ಇದೀಗ ಎದುರಾಗಿದೆ.

    Live Tv
    [brid partner=56869869 player=32851 video=960834 autoplay=true]