Tag: Mangaladevi

  • ಹುಲಿವೇಷ ಕುಣಿತದ ವೇಳೆ ಆಯತಪ್ಪಿ ಬಿದ್ದು ಯುವಕನಿಗೆ ಗಾಯ

    ಹುಲಿವೇಷ ಕುಣಿತದ ವೇಳೆ ಆಯತಪ್ಪಿ ಬಿದ್ದು ಯುವಕನಿಗೆ ಗಾಯ

    ಮಂಗಳೂರು: ಹುಲಿವೇಷ ಕುಣಿತದ ವೇಳೆ ಆಯತಪ್ಪಿ ಬಿದ್ದು ಯುವಕನೊಬ್ಬನ ಕತ್ತಿಗೆ ಏಟು ಬಿದ್ದ ಘಟನೆಯೊಂದು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ನಡೆದಿದೆ.

    ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ (Mangaladevi Temple) ದೇವರ ಎದುರು ಹುಲಿವೇಷ ಧರಿಸಿ ಪ್ರದರ್ಶನದ ವೇಳೆ ಈ ಅವಘಡ ಸಂಭವಿಸಿದೆ. ಮುಳಿಹಿತ್ಲು ಎಂಬಲ್ಲಿನ ಹುಲಿವೇಷ ತಂಡದ ಕುಣಿತದ ವೇಳೆ ಹುಲಿವೇಷಧಾರಿಯೊಬ್ಬ ರಿವರ್ಸ್ ಪಲ್ಟಿ ಹೊಡೆಯುತ್ತಿದ್ದರು. ಈ ವೇಳೆ ಆಯತಪ್ಪಿ ತಲೆ ನೆಲಕ್ಕೆ ಬಡಿದು ಕತ್ತು ಉಳುಕಿದೆ.

    ತಕ್ಷಣ ಆಸ್ಪತ್ರೆಗೆ ದಾಖಲಿಸಿ ಯುವಕನಿಗೆ ಚಿಕಿತ್ಸೆ ನೀಡಲಾಗಿದೆ. ಸದ್ಯ ಸಣ್ಣ ಗಾಯಗಳೊಂದಿಗೆ ಯುವಕ ಅಪಾಯದಿಂದ ಪಾರಾಗಿದ್ದಾರೆ. ನಿರಂತರ ಅಭ್ಯಾಸದ ಜೊತೆಗೆ ಹಲವು ವರ್ಷಗಳಿಂದ ಹುಲಿವೇಷ ಕಸರತ್ತು ನಡೆಸುತ್ತಿದ್ದರು. ಇದನ್ನೂ ಓದಿ: ಕಾಗೇರಿಗೊಂದು ನ್ಯಾಯ ಹೆಬ್ಬಾರ್‌ಗೊಂದು ನ್ಯಾಯ- ಸಿಡಿದೆದ್ದ ಹೆಬ್ಬಾರ್ ಅಭಿಮಾನಿಗಳು?

    ಇದೀಗ ನವರಾತ್ರಿ ಹಿನ್ನೆಲೆ ಹುಲಿವೇಷ ಧರಿಸಿ ಕುಣಿತ ಮತ್ತು ಕಸರತ್ತು ಪ್ರದರ್ಶಿಸುವ ಸಂಪ್ರದಾಯವಿದೆ. ಅಂತೆಯೇ ಮಂಗಳಾದೇವಿ ದೇವರ ಎದುರು ಕಸರತ್ತು ನಡೆಸುತ್ತಿದ್ದ ವೇಳೆ ಭಾರೀ ಅವಘಡದಿಂದ ಪಾರಾಗಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಿಂದೂಗಳ ಅಂಗಡಿಗಳಲ್ಲೇ ವ್ಯಾಪಾರ ಮಾಡಿ- ವಿಹಿಂಪ, ಬಜರಂಗದಳ ಮನವಿ

    ಹಿಂದೂಗಳ ಅಂಗಡಿಗಳಲ್ಲೇ ವ್ಯಾಪಾರ ಮಾಡಿ- ವಿಹಿಂಪ, ಬಜರಂಗದಳ ಮನವಿ

    – ಹಿಂದೂ ಅಂಗಡಿಗಳ ಮುಂದೆ ಭಗವಾಧ್ವಜ

    ಮಂಗಳೂರು: ಮಂಗಳಾದೇವಿ ದೇವಸ್ಥಾನದ (Mangaladevi Temple) ನವರಾತ್ರಿ ಉತ್ಸವದಲ್ಲಿ ಧರ್ಮ ದಂಗಲ್ ಆರಂಭವಾಗಿದೆ.

    ಹಿಂದೂ ಸಂಘಟನೆಗಳ ವಿರೋಧದ ನಡುವೆಯೂ ಮುಸ್ಲಿಂ ವ್ಯಾಪಾರಿಗಳಿಗೆ ದ.ಕ ಜಿಲ್ಲಾಡಳಿತ ಅವಕಾಶ ನೀಡಿದೆ. ಹೀಗಾಗಿ ಹಿಂದೂಗಳ ಅಂಗಡಿಗಳಲ್ಲೇ ವ್ಯಾಪಾರ ಮಾಡುವಂತೆ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಹಿಂದೂ ಸಂಘಟನೆಗಳು ಮನವಿ ಮಾಡಿವೆ. ಇದನ್ನೂ ಓದಿ: ಒರಿಜಿನಲ್ ಅಂತ ಸಿಎಂ ಇಬ್ರಾಹಿಂ ಬೋರ್ಡ್ ಹಾಕಿಕೊಳ್ಳಲಿ: ಹೆಚ್‍ಡಿಕೆ

    ಜಾತ್ರೋತ್ಸವದಲ್ಲಿ ವಿಶ್ವಹಿಂದೂಪರಿಷತ್-ಬಜರಂಗದಳ ಕಾರ್ಯಕರ್ತರು ಹಿಂದೂ ವ್ಯಾಪಾರಿಗಳ ಅಂಗಡಿಗಳ ಮುಂದೆ ಭಗವಾಧ್ವಜ ಅಳವಡಿಸಿದ್ದಾರೆ. ವಿಎಚ್‍ಪಿ ಮುಖಂಡ ಶರಣ್ ಪಂಪ್‍ವೆಲ್ ನೇತೃತ್ವದಲ್ಲಿ ಹಿಂದೂ ವ್ಯಾಪಾರಿಗಳ ಅಂಗಡಿ ಗುರುತುಗಾಗಿ ಭಗವಾಧ್ವಜ ಹಾಕಿದ್ದಾರೆ.

    ದೇವಸ್ಥಾನದ ಆಸು-ಪಾಸಿನಲ್ಲಿ ಹಿಂದೂಗಳಿಗೆ ಅವಕಾಶ ನೀಡಬೇಕು. ಹಿಂದೂ ದೇವರನ್ನು ನಂಬದ, ಮೂರ್ತಿ ಪೂಜೆ ವಿರೋಧಿಗಳಿಗೆ ನಮ್ಮ ಉತ್ಸವದಲ್ಲಿ ಅವಕಾಶ ಇಲ್ಲ. ನಮ್ಮ ದೇವಸ್ಥಾನದಲ್ಲಿ ವ್ಯಾಪಾರ ಮಾಡೋದು ಹಿಂದೂ ವ್ಯಾಪಾರಿಗಳ ಹಕ್ಕು. ಮುಸ್ಲಿಂ ವ್ಯಾಪಾರಿಗಳೂ ಈಗ ಕೈಗೆ ನೂಲು, ಶಾಲು ಹಾಕಿ ವ್ಯಾಪಾರ ಮಾಡುತ್ತಾರೆ. ಅದಕ್ಕಾಗಿ ಗುರುತಿಗಾಗಿ ಹಿಂದೂ ವ್ಯಾಪಾರಸ್ಥರ ಅಂಗಡಿಗಳ ಮುಂದೆ ಭಗವಾಧ್ವಜ ಹಾಕಿದ್ದೇವೆ ಎಂದು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಡಹಳ್ಳಿ ಸೋಲಿಸುವುದೇ ನನ್ನ ಗುರಿ-ಬಿಜೆಪಿ ಟಿಕೆಟ್ ವಂಚಿತೆ ಮಂಗಳಾದೇವಿ

    ನಡಹಳ್ಳಿ ಸೋಲಿಸುವುದೇ ನನ್ನ ಗುರಿ-ಬಿಜೆಪಿ ಟಿಕೆಟ್ ವಂಚಿತೆ ಮಂಗಳಾದೇವಿ

    ವಿಜಯಪುರ: ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ವಲಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಂಗಳಾದೇವಿಯವರು ಪಕ್ಷದ ನಾಯಕರ ವಿರುದ್ಧ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

    ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‍ವೈ ಅವರು ತಮಗೇ ಕೊಟ್ಟ ಮಾತನ್ನು ತಪ್ಪಿದ್ದಾರೆ. ಜಿಲ್ಲೆಗೆ ಒಬ್ಬ ಮಹಿಳಾ ಅಭ್ಯರ್ಥಿಗೆ ಚುನಾವಣೆಯಲ್ಲಿ ಟಿಕೆಟ್ ನೀಡುವುದಾಗಿ ತಿಳಿಸಿದ್ದರು. ಅವರ ಆಶ್ವಾಸನೆ ಮೇರೆಗೆ 2004 ರಿಂದಲೂ ಸತತವಾಗಿ ದುಡಿದು ಪಕ್ಷವನ್ನು ಬಲಪಡಿಸಿದ್ದೇವೆ ಎಂದರು.

    ಕೇವಲ ಚುನಾವಣೆಯಲ್ಲಿ ಗೆಲುವಿನ ಒಂದೇ ಕಾರಣಕ್ಕಾಗಿ ಬೇರೆ ಕ್ಷೇತ್ರದ ವ್ಯಕ್ತಿಗೆ ಟಿಕೆಟ್ ನೀಡಿದ್ದಾರೆ. ಪಕ್ಷದ ಸಿದ್ಧಾಂತಗಳೇ ಗೊತ್ತಿಲ್ಲದ ಅಭ್ಯರ್ಥಿಗೆ ಟಿಕೆಟ್ ನೀಡಿ ವಂಚನೆ ಮಾಡಿದ್ದಾರೆ. ಪಕ್ಷಕ್ಕಾಗಿ ಸರ್ಕಾರಿ ನೌಕರಿ ಹಾಗೂ ತನ್ನ ಮಗನ ಜೀವನವನ್ನು ಬಲಿ ಕೊಟ್ಟು ಪಕ್ಷದ ಬೆಳವಣಿಗೆ ಮಾಡಿದವರಿಗೆ ಮೋಸ ಮಾಡಿದ್ದಾರೆ. ಸದ್ಯ ತಮ್ಮ ರಾಜಕೀಯ ಜೀವನ ಮುಕ್ತಾಯಗೊಳಿಸಲು ಚಿಂತನೆ ನಡೆಸಿದ ನಡಹಳ್ಳಿ ಸೋಲಿಸುವುದು ನನ್ನ ಗುರಿಯಾಗಿದೆ. ಕ್ಷೇತ್ರದಲ್ಲಿ ನಡಹಳ್ಳಿ ಠೇವಣಿ ಕಳೆದುಕೊಳ್ಳಲಿದ್ದಾರೆ. ತಮ್ಮ ರಾಜಕೀಯ ವೃತ್ತಿ ಜೀವನದ ಮುಂದಿನ ನಡೆಯನ್ನು ತಮ್ಮ ಕಾರ್ಯಕರ್ತರೊಂದಿಗೆ ಚರ್ಚಿಸಿ ಇನ್ನೆರಡು ದಿನದಲ್ಲಿ ಸ್ಪಷ್ಟಪಡಿಸುತ್ತೇನೆ ಎಂದು ತಿಳಿಸಿದರು.