Tag: mangalasutra

  • ದೇವರಿಗೆ ಕೈ ಮುಗಿದು ತಾಳಿ ಕದ್ದ – ಅಡವಿಡಲು ಹೋಗಿ ತಗ್ಲಾಕೊಂಡ

    ದೇವರಿಗೆ ಕೈ ಮುಗಿದು ತಾಳಿ ಕದ್ದ – ಅಡವಿಡಲು ಹೋಗಿ ತಗ್ಲಾಕೊಂಡ

    ಚಾಮರಾಜನಗರ: ದೇವರಿಗೆ ಕೈ ಮುಗಿದು ಚಿನ್ನದ ತಾಳಿ ಕದ್ದ ಖದೀಮನೋರ್ವ ಅದನ್ನು ಅಡವಿಡಲು ಹೋಗುವಾಗ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ‌.

    ಹನೂರು ತಾಲೂಕಿನ ರಾಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆಂಗದಾರಹಳ್ಳಿಯ ಗ್ರಾಮದೇವತೆ ರೋಡ್ ಮಾರಮ್ಮ ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಪಳನಿ ಮೇಡು ಗ್ರಾಮದ ನಿವಾಸಿ ಮುರುಗೇಶ್(42) ಬಂಧಿತ ಆರೋಪಿ. ಇದನ್ನೂ ಓದಿ: ಪ್ರೀತಿಸಿದವನೊಂದಿಗೆ ಮನೆಬಿಟ್ಟು ಹೋದ ಮಗಳು – ಮನನೊಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

    ಹನೂರು ತಾಲೂಕಿನ ರಾಮಪುರ ಪೊಲೀಸ್ ಠಾಣ ವ್ಯಾಪ್ತಿಯ ಚೆಂಗದಾರಹಳ್ಳಿ ಗ್ರಾಮದ ರೋಡ್ ಮಾರಿಯಮ್ಮ ದೇವಸ್ಥಾನದಲ್ಲಿ ಮೇ 19ರಂದು ದೇವರ ಕೊರಳಿಗೆ ಹಾಕಿದ್ದ 10 ಗ್ರಾಂ ಚಿನ್ನದ ತಾಳಿಯನ್ನು ಈತ ಕಳ್ಳತನ ಮಾಡಿದ್ದ. ಈ ಸಂಬಂಧ ಅರ್ಚಕ ರಾಮಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

    ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಕಳ್ಳನ ಪತ್ತೆಗೆ ಬಲೆ ಬೀಸಿ ಸಿಸಿಟಿವಿಗಳಲ್ಲಿ ಸೆರೆಯಾಗಿದ್ದ ಕಳ್ಳನ ಬೆನ್ನುಬಿದ್ದಿದ್ದರು.

    ಕೌದಳ್ಳಿಯ ಗಿರವಿ ಅಂಗಡಿಯಲ್ಲಿ ದೇವಸ್ಥಾನದ ಚಿನ್ನದ ತಾಳಿ ಮಾರಾಟ ಮಾಡಲು ನಿಂತಿದ್ದ ವೇಳೆ ಪೊಲೀಸರು ಆತನನ್ನು ವಶಕ್ಕೆ ಪಡೆದು ಹಿರಿಯ ಅಧಿಕಾರಿಗಳ ಮುಂದೆ ಹಾಜರುಪಡಿಸಿದ್ದಾರೆ. ಹೆಚ್ಚಿನ ವಿಚಾರಣೆಯ ನಂತರ ದೇವಸ್ಥಾನದ ಗರ್ಭಗುಡಿಯ ದೇವರ ಮೇಲಿದ್ದ 10 ಗ್ರಾಂ ಚಿನ್ನದ ತಾಳಿಯನ್ನು ಕದ್ದಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಅಡ್ರೆಸ್ ತಪ್ಪಾಗಿದ್ದಕ್ಕೆ ಗಲಾಟೆ – ಗ್ರಾಹಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಡೆಲಿವರಿ ಬಾಯ್!

  • ರೈಲ್ವೆ ಇಲಾಖೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರಕ್ಕೆ ನಿರ್ಬಂಧ ಬೇಡ: ಸೋಮಣ್ಣ ಸೂಚನೆ

    ರೈಲ್ವೆ ಇಲಾಖೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರಕ್ಕೆ ನಿರ್ಬಂಧ ಬೇಡ: ಸೋಮಣ್ಣ ಸೂಚನೆ

    ಮಂಗಳೂರು: ರಾಜ್ಯದಲ್ಲಿ ಜನಿವಾರ ವಿವಾದದ ಬೆನ್ನಲ್ಲೇ ಇದೀಗ ಮತ್ತೊಂದು ವಾರ್ ಶುರುವಾಗಿದೆ. ರೈಲ್ವೆ ಇಲಾಖೆ ಪರೀಕ್ಷೆಗೆ ಹಾಜರಾಗಲು ಜನಿವಾರ, ಮಂಗಳಸೂತ್ರಕ್ಕೆ ನಿರ್ಬಂಧ ವಿಧಿಸಿರುವ ವಿಚಾರವಾಗಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ರೈಲ್ವೆ ಸಚಿವ ವಿ.ಸೋಮಣ್ಣ (V Somanna) ಮಂಗಳಸೂತ್ರ ಹಾಗೂ ಜನಿವಾರ ತೆಗೆಸದಂತೆ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಮಂಗಳವಾರ ರೈಲ್ವೆ ಇಲಾಖೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆ ನಡೆಯಲ್ಲಿದ್ದು, ಈಗಾಗಲೇ ಪ್ರವೇಶ ಪತ್ರವು ಪರೀಕ್ಷಾರ್ಥಿಗಳ ಕೈ ಸೇರಿದೆ. ಪ್ರವೇಶ ಪತ್ರದಲ್ಲಿ ಜನಿವಾರ, ಮಂಗಳಸೂತ್ರ ತೆಗೆದು ಪರೀಕ್ಷೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಯುದ್ಧದ ಬಿಸಿಗೆ ಬೆದರಿ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರೆ ಪಾಕ್‌ ಸೈನಿಕರು!

    ಈ ವಿವಾದದ ಬೆನ್ನಲ್ಲೇ ರೈಲ್ವೆ ಇಲಾಖೆಯ ಪರೀಕ್ಷೆಯ ಪ್ರವೇಶಪತ್ರದಲ್ಲಿನ ಸೂಚನೆಗಳ ಬಗ್ಗೆ ಎಕ್ಸ್ ಖಾತೆಯಲ್ಲಿ ಟ್ವೀಟ್‌ನ ಮೂಲಕ ರೈಲ್ವೆ ಸಚಿವರಿಗೆ ದಕ್ಷಿಣ ಕನ್ನಡದ ಸಂಸದ ಕ್ಯಾ.ಬ್ರಿಜೇಶ್ ಚೌಟ (Brijesh Chowta) ಮಾಹಿತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಸಚಿವ ವಿ.ಸೋಮಣ್ಣ ಮಂಗಳಸೂತ್ರ ಹಾಗೂ ಜನಿವಾರ ತೆಗೆಸದಂತೆ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಯುವತಿಯರ ಜೊತೆ ರಾಸಲೀಲೆ – ಮೊಬೈಲ್‌ನಲ್ಲಿ ವಿಡಿಯೋ ಅಲ್ಬಂ ಓಪನ್‌ ಮಾಡಿದ್ದ ಕಾಮುಕ ಅರೆಸ್ಟ್

    ರೈಲ್ವೆ ಇಲಾಖೆಯ ಪರೀಕ್ಷೆಯ ಪ್ರವೇಶಪತ್ರದಲ್ಲಿನ ಸೂಚನೆಯು ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ರೈಲ್ವೆ ಇಲಾಖೆಯ ಈ ಸೂಚನೆಗೆ ವಿ.ಹೆಚ್.ಪಿ ಮುಖಂಡ ಶರಣ್ ಪಂಪುವೆಲ್ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದು, ಸೂಚನೆ ಕೈಬಿಡುವಂತೆ ಜಿಲ್ಲಾಧಿಕಾರಿ ಹಾಗೂ ಸಂಸದರಿಗೆ ಆಗ್ರಹಿಸಿದ್ದಾರೆ.

  • ಕೆಪಿಎಸ್‌ಸಿ ಪರೀಕ್ಷೆಯಲ್ಲಿ ತಾಳಿ, ಕಾಲುಂಗುರ ತೆಗೆಸಿದ್ದು ಅಕ್ಷಮ್ಯ: ಜೆಡಿಎಸ್ ಆಕ್ರೋಶ

    ಕೆಪಿಎಸ್‌ಸಿ ಪರೀಕ್ಷೆಯಲ್ಲಿ ತಾಳಿ, ಕಾಲುಂಗುರ ತೆಗೆಸಿದ್ದು ಅಕ್ಷಮ್ಯ: ಜೆಡಿಎಸ್ ಆಕ್ರೋಶ

    ಬೆಂಗಳೂರು: ಕೆಪಿಎಸ್‌ಸಿ ಪರೀಕ್ಷೆ (KPSC Exam) ವೇಳೆ ಮಹಿಳೆಯರ ತಾಳಿ, ಕಾಲುಂಗುರ ತೆಗೆಸಿರುವ ಪರೀಕ್ಷೆ ವ್ಯವಸ್ಥೆ ಮತ್ತು ಸರ್ಕಾರದ ವಿರುದ್ಧ ಜೆಡಿಎಸ್ ವಾಗ್ದಾಳಿ ನಡೆಸಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಸರಣಿ ಪೋಸ್ಟ್‌ಗಳನ್ನು ಮಾಡಿರುವ ಜೆಡಿಎಸ್ (JDS) ಇಂತಹ ಕೃತ್ಯ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದೆ.

    ಪೋಸ್ಟ್‌ನಲ್ಲೇನಿದೆ?
    ಗ್ರೂಪ್ ಸಿ ಹುದ್ದೆಗಳ ಪ್ರವೇಶ ಪರೀಕ್ಷೆಯ ವೇಳೆ ಮಹಿಳೆಯರ ಮಂಗಳಸೂತ್ರ (Mangalasutra), ಕಾಲುಂಗುರ ತೆಗೆಸಿರುವ ಘಟನೆ ಅಕ್ಷಮ್ಯ. ಇದು ಸ್ತ್ರೀಯರ ಹಕ್ಕುಗಳನ್ನು ಹತ್ತಿಕ್ಕುವ ಪ್ರಯತ್ನ. ನಾವು ಕರ್ನಾಟಕದಲ್ಲಿ ಇದ್ದೇವೆಯೋ? ಅಥವಾ ಇನ್ನೆಲ್ಲಾದರೂ ಇದ್ದೇವೆಯೋ?

    ಕಲಬುರಗಿಯಲ್ಲಿ (Kalaburagi) ಭಾನುವಾರ ನಡೆದ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಸ್ತ್ರೀಯರಿಗೆ ಘೋರ ಅಪಮಾನ ಎಸಗಿದ್ದು ಅತ್ಯಂತ ಖಂಡನೀಯ. ಇಂಡಿಯಾ ಎಂದು ಜಪಿಸುವ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಭಾರತದ ಸಂಸ್ಕೃತಿಗೆ ಸಿಕ್ಕ ಗೌರವ ಇದು. ನಮ್ಮ ಸಂಸ್ಕೃತಿ, ಪರಂಪರೆಯನ್ನು ನಿರ್ನಾಮ ಮಾಡುವ ಕುಕೃತ್ಯ ಅವರಿಂದ ಎಗ್ಗಿಲ್ಲದೆ ನಡೆಯುತ್ತಿದೆ. ಒಂದೆಡೆ ಗೃಹಲಕ್ಷ್ಮಿ ಎನ್ನುವ ರಾಜ್ಯ ಸರ್ಕಾರ, ಇನ್ನೊಂದೆಡೆ ಅದೇ ಗೃಹಲಕ್ಷ್ಮಿಯರ ಸೌಭಾಗ್ಯ ಮತ್ತು ಸಾಂಸ್ಕೃತಿಕ, ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಉಂಟು ಮಾಡುತ್ತಿದೆ. ಕರ್ನಾಟಕ ಮಾದರಿ ಎಂದರೆ ತಾಯಂದಿರ ಮುತ್ತೈದೆತನಕ್ಕೇ ಕುತ್ತು ತರುವುದಾ? ಇದನ್ನೂ ಓದಿ: ಪೇಜಾವರ ಶ್ರೀಗಳಿಗೆ ಪಿತೃ ವಿಯೋಗ

    ಇಷ್ಟಕ್ಕೂ ಪರೀಕ್ಷಾ ಸಿಬ್ಬಂದಿಗೆ ಮಹಿಳಾ ಅಭ್ಯರ್ಥಿಗಳ ತಾಳಿ, ಕಾಲುಂಗುರ ತೆಗೆಸುವಂತೆ ಆದೇಶ ಕೊಟ್ಟವರು ಯಾರು? ಅವರಿಗೆ ಅಷ್ಟೊಂದು ಸೂಕ್ಷ್ಮಪ್ರಜ್ಞೆಯ ಕೊರತೆಯೇ? ಪರೀಕ್ಷೆಗೆ ಮೊದಲೇ ಆ ಮಹಿಳೆಯರಿಗೆ ಅದೆಷ್ಟು ಮಾನಸಿಕ ಆಘಾತ ಉಂಟಾಗುತ್ತದೆ ಎಂಬ ಅರಿವು ಬೇಡವೇ? ಪರೀಕ್ಷಾ ನಿಯಮಗಳ ಪಟ್ಟಿಯಲ್ಲಿ ಕಾಲುಂಗುರ, ಮಂಗಳಸೂತ್ರ ತೆಗೆಯಬೇಕು ಎನ್ನುವ ಸೂಚನೆಯೇ ಇರಲಿಲ್ಲ ಎನ್ನುತ್ತಾರೆ ಪರೀಕ್ಷಾರ್ಥಿಗಳು. ಹಾಗಾದರೆ ಪರೀಕ್ಷಾ ಕೇಂದ್ರಕ್ಕೆ ಬಂದ ವಿವಾಹಿತ ಮಹಿಳಾ ಅಭ್ಯರ್ಥಿಗಳ ಮಂಗಳಸೂತ್ರ, ಕಾಲುಂಗುರವನ್ನು ಬಲವಂತವಾಗಿ ತೆಗೆಸಿದ್ದು ದುರ್ನಡತೆಯ ಪರಮಾವಧಿ.

    ಕೆಪಿಎಸ್‌ಸಿ ಹಾಗೂ ರಾಜ್ಯ ಸರ್ಕಾರ ಕೂಡಲೇ ನೊಂದ ಮಹಿಳೆಯರಿಗೆ ಕ್ಷಮೆ ಯಾಚಿಸಬೇಕು ಹಾಗೂ ಇಂತಹ ಆಘಾತಕಾರಿ ಘಟನೆಗೆ ಕಾರಣರಾದ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು. ಮತ್ತೆಂದೂ ಈ ರೀತಿಯ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಜೆಡಿಎಸ್ ಸರ್ಕಾರವನ್ನು ಆಗ್ರಹಿಸಿದೆ. ಇದನ್ನೂ ಓದಿ: ಬಾಗಿಲಿಲ್ಲದ ದೇವಾಲಯಕ್ಕೆ ನುಗ್ಗಿ ಕಾಣಿಕೆ ಡಬ್ಬಿ, 100 ಘಂಟೆಗಳನ್ನು ದೋಚಿದ ಕಳ್ಳರು

  • ಕೆಪಿಎಸ್‍ಸಿ ಪರೀಕ್ಷೆಗೆ ತಾಳಿ, ಕಾಲುಂಗುರ ತೆಗೆಸಿ ಸಿಬ್ಬಂದಿ ಯಡವಟ್ಟು – ಸುದ್ದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು

    ಕೆಪಿಎಸ್‍ಸಿ ಪರೀಕ್ಷೆಗೆ ತಾಳಿ, ಕಾಲುಂಗುರ ತೆಗೆಸಿ ಸಿಬ್ಬಂದಿ ಯಡವಟ್ಟು – ಸುದ್ದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು

    ಕಲಬುರಗಿ: ಕೆಪಿಎಸ್‍ಸಿ ಪರೀಕ್ಷಾ (KPSC Exam) ಅಕ್ರಮ ತಡೆಗಟ್ಟುವ ಕ್ರಮವಾಗಿ ತಾಳಿ (Mangalasutra) ಹಾಗೂ ಕಾಲುಂಗುರ ತೆಗೆಸಿ ಯಡವಟ್ಟು ಮಾಡಿದ ಅಧಿಕಾರಿಗಳು `ಪಬ್ಲಿಕ್ ಟಿವಿ’ಯಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡಿದ್ದಾರೆ. ಕೂಡಲೇ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ತಾಳಿ ಹಾಗೂ ಕಾಲುಂಗುರ ತೆಗೆಸದಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

    ಕಲಬುರಗಿಯ (Kalaburagi) ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ, ಗ್ರೂಪ್ ಸಿ ಹುದ್ದೆಗೆ ನಡೆಯುತ್ತಿರುವ ಪರೀಕ್ಷೆಯಲ್ಲಿ ಅಕ್ರಮ ತಡೆಯಲು ತಾಳಿ, ಕಾಲುಂಗುರ ಹಾಗೂ ಕಿವಿಯಲ್ಲಿದ್ದ ಓಲೆಗಳನ್ನು ಅಧಿಕಾರಿಗಳು ತೆಗೆಸಿದ್ದರು. ಈ ವೇಳೆ ತಾಳಿ ತೆಗೆಯಲು ಹಿಂದೇಟು ಹಾಕಿದ ಮಹಿಳೆಯರಿಗೆ ಪರೀಕ್ಷೆ ಬರೆಯಲು ಅಧಿಕಾರಿಗಳು ಅವಕಾಶ ನಿರಾಕರಿಸಿದ್ದರು. ಅಲ್ಲದೇ ಕಿವಿ ಓಲೆ ತೆಗೆಯಲು ಬರದಿದ್ದಾಗ ಚಿನ್ನದಂಗಡಿಗೆ ಹೋಗಿ ಮಹಿಳೆಯರು ತೆಗೆಸಿಕೊಂಡು ಬಂದಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಚಾಕು ಇರಿದು ಉಪನಿರ್ದೇಶಕಿಯ ಬರ್ಬರ ಹತ್ಯೆ

    ರಾಯಚೂರು ಮೂಲದ ಇಬ್ಬರು ಮಹಿಳೆಯರನ್ನು ಅಧಿಕಾರಿಗಳು ತೀವ್ರ ತಪಾಸಣೆ ಮಾಡಿ ತಾಳಿ ಹಾಗೂ ಕಾಲುಂಗುರ ತೆಗೆಯಲು ಹೇಳಿದ್ದರು. ಈ ವೇಳೆ ಅನಿವಾರ್ಯವಾಗಿ ಮಹಿಳೆಯರು ತೆಗೆದು ಸಂಬಂಧಿಕರ ಬಳಿ ನೀಡಿ ಪರೀಕ್ಷಾ ಹಾಲ್‍ಗೆ ತೆರಳಿದ್ದರು. ಈ ಸುದ್ದಿಯನ್ನು `ಪಬ್ಲಿಕ್ ಟಿವಿ’ ಪ್ರಸಾರ ಮಾಡಿತ್ತು.

    ಈ ಸುದ್ದಿ ಪ್ರಸಾರವಾಗುತ್ತಿದ್ದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಹಿರಿಯ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ತೆರಳಿ ತಾಳಿಯನ್ನು ವಾಪಸ್ ನೀಡುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಅರಣ್ಯ ಸಿಬ್ಬಂದಿ, ಬೇಟೆಗಾರರ ನಡುವೆ ಗುಂಡಿನ ಚಕಮಕಿ – ಓರ್ವ ಗುಂಡೇಟಿಗೆ ಬಲಿ

  • ಗಟ್ಟಿಮೇಳದ ವೇಳೆ ತಾಳಿ ನಾಪತ್ತೆ – ತಾಳಿ ಇಲ್ಲದೆ ವಧು ವರರು ಗಲಿಬಿಲಿ

    ಗಟ್ಟಿಮೇಳದ ವೇಳೆ ತಾಳಿ ನಾಪತ್ತೆ – ತಾಳಿ ಇಲ್ಲದೆ ವಧು ವರರು ಗಲಿಬಿಲಿ

    ಬೆಂಗಳೂರು: ಸಾಮೂಹಿಕ ವಿವಾಹ ನೆರವೇರುತ್ತಿದ್ದ ಸಂದರ್ಭದಲ್ಲಿ ಗಟ್ಟಿಮೇಳದ ವೇಳೆ ತಾಳಿ ನಾಪತ್ತೆಯಾಗಿ, ವಧು-ವರರು ಗಲಿಬಿಲಿಯಾದ ಘಟನೆ ನೆಲಮಂಗಲ ಸಮೀಪದ ಕಾಚೋಹಳ್ಳಿ ಕಲ್ಯಾಣ ಮಂಟಪದಲ್ಲಿ ಇಂದು ನಡೆದಿದೆ.

    ಪಟ್ಟನಾಯಕನಹಳ್ಳಿ ನಂಜಾವದೂತ ಸ್ವಾಮೀಜಿ ನೇತೃತ್ವದಲ್ಲಿ ಸಾಮೂಹಿಕ ವಿವಾಹ ಶುಭಕಾರ್ಯ ನಡೆಯುತ್ತಿತ್ತು. ಈ ಶುಭಸಮಾರಂಭದಲ್ಲಿ ಅಡಮಾರನಹಳ್ಳಿ ಗ್ರಾಮಸ್ಥರು 15 ಜೋಡಿಗಳ ಮದುವೆ ಮಾಡಿಸುತ್ತಿದ್ದರು. ಆದರೆ ಈ ಖುಷಿ ನಡುವೆ ಕಳ್ಳನೊಬ್ಬ ತಾಳಿಯನ್ನೇ ಕದ್ದು ಪರಾರಿ ಆಗಿದ್ದಾನೆ.

    ಕಳೆದ ನಾಲ್ಕು ವರ್ಷದಿಂದ ಗ್ರಾಮಸ್ಥರು ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಹಿಂದೆಂದು ಈ ರೀತಿ ಆಗಿರಲಿಲ್ಲ. ಆದರೆ ಮದುವೆ ಸಮಾರಂಭದಲ್ಲಿ ಎಲ್ಲರೂ ಬ್ಯುಸಿಯಾಗಿರುವಾಗ ಕ್ಷಣಾರ್ಧದಲ್ಲಿ ತಾಳಿ ಕದ್ದು ಕಲ್ಯಾಣ ಮಂಟಪದಿಂದ ಕಳ್ಳ ನಾಪತ್ತೆಯಾಗಿದ್ದಾನೆ. ಚಾಲಕಿ ಕಳ್ಳ ತನ್ನ ಕೈಚಳಕ ತೋರಿದ್ದು, ಶುಭ ಸಮಾರಂಭದಲ್ಲಿ ಹೀಗಾಯ್ತಲ್ಲಾ ಎಂದು ಕುಟುಂಬಸ್ಥರು ಹಾಗೂ ಸ್ಥಳದಲ್ಲಿದ್ದವರು ತಳಮಳಗೊಂಡಿದ್ದಾರೆ.

    ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

  • ರಾತ್ರೋರಾತ್ರಿ ಹಬ್ಬಿದ ಈ ವದಂತಿಗೆ ಮಾಂಗಲ್ಯದ ಹವಳ ಒಡೆದು ಹಾಕಿದ ಮಹಿಳೆಯರು!

    ರಾತ್ರೋರಾತ್ರಿ ಹಬ್ಬಿದ ಈ ವದಂತಿಗೆ ಮಾಂಗಲ್ಯದ ಹವಳ ಒಡೆದು ಹಾಕಿದ ಮಹಿಳೆಯರು!

    – ಕೊಪ್ಪಳ, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆಯಲ್ಲಿ ಹಬ್ಬಿದ ಗಾಳಿ ಸುದ್ದಿ

    ಕೊಪ್ಪಳ/ಬಳ್ಳಾರಿ/ಚಿತ್ರದುರ್ಗ: ಜನ ಮರಳೋ ಜಾತ್ರೆ ಮರುಳೋ ಅನ್ನೋ ಹಾಗೆ ಮಹಿಳೆಯರು ತಮ್ಮ ಮಾಂಗಲ್ಯ ಸರದಲ್ಲಿನ ಹವಳವನ್ನು ರಾತ್ರೋರಾತ್ರಿ ಒಡೆದು ಹಾಕಿರೋ ಘಟನೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಡೆದಿದೆ.

    ಕೊಪ್ಪಳ ಜಿಲ್ಲೆಯ ಮಹಿಳೆಯರು ಮಾಂಗಲ್ಯ ಸರದಲ್ಲಿರೋ ಹವಳ ಮುತ್ತು ಮಾತನಾಡಿ ಪತಿ ಮೃತಪಟ್ಟಿದ್ದಾರೆ ಎಂದು ಹಬ್ಬಿದ ಸುಳ್ಳು ವದಂತಿಗೆ ತಮ್ಮ ಮಾಂಗಲ್ಯ ಸರದಲ್ಲಿನ ಹವಳವನ್ನು ರಾತ್ರಿ ಒಡೆದು ಹಾಕಿದ್ದಾರೆ.

    ಮಂಗಳವಾರ ತಡರಾತ್ರಿ ಕೊಪ್ಪಳ ಜಿಲ್ಲೆಯಾದ್ಯಂತ ಹರಡಿದ ಈ ಸುಳ್ಳು ವದಂತಿಗೆ ಹೆದರಿದ ಮಹಿಳೆಯರು ಮಾಂಗಲ್ಯದಲ್ಲಿನ ಕೆಂಪು ಮುತ್ತು(ಹವಳ) ಒಡೆದು ಹಾಕಿದ್ದಾರೆ. ಕಿಡಗೇಡಿಗಳು ಹಬ್ಬಿಸಿದ ಸುಳ್ಳು ವದಂತಿಗೆ ಗಂಗಾವತಿ, ಕುಷ್ಟಗಿ, ಯಲಬುರ್ಗಾ ತಾಲೂಕಿನ ಬಹುತೇಕ ಗ್ರಾಮದ ಮಹಿಳೆಯರು ಮಾಂಗಲ್ಯ ಸರದಲ್ಲಿನ ಹವಳ ಒಡೆದಿದ್ದಾರೆ. ಅಲ್ದೆ ಈ ಸುಳ್ಳು ವದಂತಿ ಬಗ್ಗೆ ರಾತ್ರಿಯಿಡೀ ಮಹಿಳೆಯರು ಫೋನಾಯಿಸಿ ತಮ್ಮ ಸಂಬಂಧಿಕರಿಗೂ ಹೇಳಿದ್ದಾರೆ. ಇದ್ರಿಂದ ಸುಳ್ಳು ವದಂತಿ ಎಲ್ಲೆಡೆ ಹಬ್ಬಿದೆ.

    ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕು ಹಾಗೂ ದಾವಣಗೆರೆ ತಾಲೂಕಿನ ಕೆಲ ಹಳ್ಳಿಗಳಲ್ಲೂ ಕೂಡ ಇದೇ ರೀತಿಯ ವಿಚಿತ್ರ ಘಟನೆ ನಡೆದಿದೆ. ಮದುವೆಯಾದ ಹೆಣ್ಣು ಮಕ್ಕಳು ಹವಳ ಕುಟ್ಟಿ ಹಾಕದಿದ್ರೆ ಪತಿರಾಯ ಮೃತಪಡುತ್ತಾನೆ ಅನ್ನೋ ವದಂತಿ ಹಬ್ಬಿತ್ತು. ವದಂತಿಯಿಂದ ರಾತ್ರಿಯೆಲ್ಲ ನಿದ್ದೆಗೆಟ್ಟು ಬೆಳಗಿನ ಜಾವ ನಾಲ್ಕು ಗಂಟೆಗೆ ಮಹಿಳೆಯರು ತಾಳಿಗೆ ಪೂಜೆ ಮಾಡಿ ಹವಳ ಕುಟ್ಟಿ ಹಾಕಿದ್ದಾರೆ.

    ಬಳ್ಳಾರಿ ಜಿಲ್ಲೆಯಲ್ಲೂ ಕೂಡ ಮಹಿಳೆಯರು ತಾಳಿಯಲ್ಲಿರುವ ಮಣಿಯನ್ನು ಕುಟ್ಟಿ ಹಾಕಿದ್ದಾರೆ. ಬಳ್ಳಾರಿ, ಸಿರುಗುಪ್ಪ, ಸಂಡೂರು, ಕೂಡ್ಲಿಗಿ ತಾಲೂಕಿನಲ್ಲಿ ಮಹಿಳೆಯರು ತಾಳಿಯನ್ನು ಹರಿದು ತಾವೇ ಹವಳವನ್ನು ಕಲ್ಲಿನಿಂದ ಕುಟ್ಟಿದ್ದಾರೆ. ಹವಳ ಒಡೆಯದಿದ್ದರೆ ಗಂಡ ಮೃತಪಡುತ್ತಾರೆಂದು ನಂಬಿ ನಾನಾ ಗ್ರಾಮದ ತಮ್ಮ ಸಂಬಂಧಿಕರಿಗೂ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಹೀಗಾಗಿ ರಾತ್ರಿ ಒಂದು ಗಂಟೆಯಿಂದ ಮಹಿಳೆಯರು ತಾಳಿಯಲ್ಲಿನ ಹವಳವನ್ನ ಕುಟ್ಟಿ ಒಡೆದು ಹಾಕಿದ್ದಾರೆ.

    ಚಿತ್ರದುರ್ಗದಲ್ಲೂ ಕೂಡ ಸಮೂಹ ಸನ್ನಿಗೆ ಒಳಗಾದ ಮಹಿಳೆಯರು ತಮ್ಮ ಕತ್ತಿನ ತಾಳಿಯಲ್ಲಿರುವ ಹವಳದ ಮಣಿಗಳನ್ನು ಜಜ್ಜಿ ಪುಡಿ ಮಾಡಿ ಎಸೆಯುತ್ತಿದ್ದಾರೆ. ಯಾರ ಕೊರಳ ಮಣಿಗಳು ಮಾತನಾಡುತ್ತವೋ ಅವರು ಸಾಯುತ್ತಾರೆ ಎಂದು ಜಿಲ್ಲೆಯಾದ್ಯಂತ ಗಾಳಿ ಸುದ್ದಿ ಹಬ್ಬಿದೆ.