Tag: Mangalore

  • ಮೋಹನ ಮುರಳಿಗೆ ಮನಸೋತ ಕನಸು ಕಂಗಳ ಚೆಲುವೆ ಸ್ವಪ್ನ ಶೆಟ್ಟಿಗಾರ್

    ಮೋಹನ ಮುರಳಿಗೆ ಮನಸೋತ ಕನಸು ಕಂಗಳ ಚೆಲುವೆ ಸ್ವಪ್ನ ಶೆಟ್ಟಿಗಾರ್

    ನ್ನಡ ಚಿತ್ರರಂಗದಲ್ಲಿ ಬಣ್ಣದ ಕನಸು ಹೊತ್ತು ಬಂದ ನಟಿ ಮಣಿಗಳ ಪೈಕಿ ಸ್ವಪ್ನ ಶೆಟ್ಟಿಗಾರ್  (Swapna Shettigar) ಕೂಡ ಒಬ್ಬರು. ಎಲ್ಲ ಯುವ ನಟಿಯರಂತೆ ಸ್ವಪ್ನ ಶೆಟ್ಟಿಗಾರ್ ಕೂಡ ಬೆಟ್ಟದಷ್ಟು ಕನಸು, ಆಸೆ-ಆಕಾಂಕ್ಷೆ ಹೊತ್ತು ಬಂದವರು. ಸ್ಯಾಂಡಲ್ ವುಡ್ ನಲ್ಲಿ ತಾನು ಗಟ್ಟಿ ನೆಲೆ ಕಾಣಬೇಕು ಅಂತ ಕನಸು ಕಂಡವರು. ತಮ್ಮ ಕನಸು ನನಸು ಮಾಡಿಕೊಳ್ಳಲು ತಯಾರಿ ಕೂಡ ನಡೆಸಿದವರು. ಇಷ್ಟಕ್ಕೂ ಈ ಯುವ ನಟಿ  ಬಗ್ಗೆ ಇಷ್ಟೊಂದು ಪೀಠಿಕೆ ಹಾಕೋಕೆ ಕಾರಣ, ಅವರು ಅಭಿನಯಿಸಿರುವ ಎರಡು ಸಿನಿಮಾಗಳು ಸದ್ಯ ಬಿಡುಗಡೆಯ ಹೊಸ್ತಿಲಲ್ಲಿ ಇರುವುದು. ತಮ್ಮ ನಿರೀಕ್ಷೆಯ ಸಿನಿಮಾಗಳೆರೆಡು ರಿಲೀಸ್ ಆಗುತ್ತಿರುವ ಖುಷಿ ಒಂದು ಕಡೆಯಾದರೆ, ಇದೀಗ ತಮ್ಮ ಹಟ್ಟು ಹಬ್ಬದ ಸಂಭ್ರಮದಲ್ಲಿ ಹೊಸ ಸಿನಿಮಾವೊಂದಕ್ಕೆ‌ ಸಹಿ ಮಾಡುವ ಸಂತಸ ಮತ್ತೊಂದು ಕಡೆ. ಸ್ವಪ್ನ  ನಾಳೆ (ಆಗಸ್ಟ್ 13) ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಹುಟ್ಟುಹಬ್ಬದ ದಿನವೇ ಹೆಸರಿಡದ ಸಿನಿಮಾವೊಂದರಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಅತ್ತ ಪರಭಾಷೆಯಿಂದಲೂ ಅವರಿಗೆ ಅವಕಾಶ ಬಂದಿದೆ. ತಮಿಳು ಸಿನಿಮಾವೊಂದರ‌ ಮಾತುಕತೆ ನಡೆಯುತ್ತಿದ್ದು, ಅದು ಅಂತಿಮವಾಗುವ ಸಾಧ್ಯತೆ ಇದೆ ಎಂಬುದು ಅವರ ಮಾತು.

    ಹಾಗೆ ನೋಡಿದರೆ, ಸ್ವಪ್ನ  ಕನ್ನಡಕ್ಕೆ ಹೊಸ ಮುಖವೇನಲ್ಲ. ಈಗಾಗಲೇ ಒಂದಷ್ಟು ಸಿನಿಮಾಗಳಲ್ಲಿ  ಗಮನ ಸೆಳೆಯುವ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಬೆರಳೆಣಿಕೆ ಸಿನಿಮಾಗಳಲ್ಲಿ ನಟಿಸಿದರೂ,  ಅವರು ಆಯ್ಕೆಯಲ್ಲಿ ಎಚ್ಚರ ತಪ್ಪಿಲ್ಲ. ಇದುವರೆಗೂ ಮಾಡಿದ ಸಿನಿಮಾಗಳ ಪಾತ್ರಗಳ ಮೇಲೆ ಸ್ವಪ್ನ ಅವರಿಗೆ ಖುಷಿ ಇದೆ. ಅವರೀಗ ನಾಯಕಿಯಾಗಿ ನಟಿಸಿರುವ ಆರೇಳು  ಸಿನಿಮಾಗಳ ಪೈಕಿ ಎರಡು ಸಿನಿಮಾಗಳು ಬಿಡುಗಡೆಯ ಹೊಸ್ತಿಲಲ್ಲಿವೆ ಎಂಬುದು ಅವರ ಖುಷಿಗೆ ಕಾರಣ.  ನಾಯಕಿಯಾಗಿ ಅಭಿನಯಿಸಿರುವ ‘ಯಾವ ಮೋಹನ ಮುರಳಿ ಕರೆಯಿತು’ ಸಿನಿಮಾ ಈಗ ಬಿಡುಗಡೆಯಾಗಲು ಸಜ್ಜಾಗಿದೆ. ಈಗ ಆಡಿಯೋ ರಿಲೀಸ್ ಗೆ ಚಿತ್ರತಂಡ ಮುಂದಾಗಿದ್ದು, ಚಿತ್ರದುರ್ಗದ ಚಳ್ಳಕೆರೆಯಲ್ಲಿ ಇವೆಂಟ್ ನಡೆಸಲು ತಯಾರಿ ನಡೆಸಿದೆ. ಈಗಾಗಲೇ ಚಿತ್ರದ ಟೀಸರ್ ರಿಲೀಸ್ ಆಗಿ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಈ ಸಿನಿಮಾ ಬಗ್ಗೆ ಸ್ವಪ್ನ  ಅವರಿಗೆ ಅತೀವ ವಿಶ್ವಾಸ. ಕಾರಣ ಸಿನಿಮಾ ಕಥೆ ಹಾಗೂ ಗಟ್ಟಿ ಪಾತ್ರ. ಈ ಕುರಿತು  ಸಪ್ನ ಹೇಳುವುದಿಷ್ಟು.

    ‘ನಾನು ಮೂಲತಃ ಮಂಗಳೂರಿನ ಹುಡುಗಿ. ತಂದೆ ಮಂಗಳೂರಿನವರು. ತಾಯಿ  ಉತ್ತರ ಕರ್ನಾಟಕದವರು. ಹುಬ್ಬಳ್ಳಿ ಸಮೀಪದ ನವಲಗುಂದದಲ್ಲೇ ಹೆಚ್ಚು  ಆಡಿ, ಓದಿ‌ ಬೆಳೆದವಳು. ನನಗೆ ಸಿನಿಮಾಗೆ  ಬರಬೇಕು ಎಂಬ ಯಾವ ಯೋಚನೆಯೂ ಇರಲಿಲ್ಲ. ಆದರೆ, ಸಿನಿಮಾ ವಿಚಾರದಲ್ಲೇ ಒಬ್ಬರು ಮನ ನೋಯಿಸಿದ್ದರು.  ಆ ಕಾರಣಕ್ಕೆ ನಾನೇಕೆ ಇಲ್ಲಿ ಬಂದು ನಿಲ್ಲಬಾರದು ಅಂತ ಚಾಲೆಂಜ್ ಮಾಡಿ ಒಬ್ಬ ನಟಿಗೆ ಬೇಕಾದ ನಟನಾ ತರಬೇತಿ ಸೇರಿದಂತೆ ಸಿನಿಮಾಗೆ ಇರಬೇಕಾದ ಒಂದಷ್ಟು ಅರ್ಹತೆ ಪಡೆದು ಸಿನಿಮಾ ರಂಗ ಪ್ರವೇಶಿಸಿದೆ.  ಆರಂಭದಲ್ಲಿ ನಾನು ಮಂಗಳೂರಿನ ಕಂಪೆನಿಯೊಂದರಲ್ಲಿ ಕೆಲಸ ಮಾಡುವಾಗಲೇ ತುಳು ಸಿನಿಮಾವೊಂದರಲ್ಲಿ ನಟಿಸುವ ಅವಕಾಶ ಸಿಕ್ತು. ಆದರೆ, ಆ ಸಿನಿಮಾ ನಿಂತು ಹೋಯ್ತು. ಅಲ್ಲೊಂದಷ್ಟು ಅವಮಾನಗಳೂ ಆದವು. ಕೊನೆಗೆ ನಾನು ನಟಿ ಆಗಲೇಬೇಕು ಅಂತ ಡಿಸೈಡ್ ಮಾಡಿದೆ. ಕನ್ನಡ ಚಿತ್ರರಂಗದಲ್ಲಿ ಅವಕಾಶ ಹುಡುಕಿ ಬಂತು. ಮೊದಲು ‘ನಾನು ನನ್ನ ಹುಡುಗಿ’ ಎಂಬ ಸಿನಿಮಾದಲ್ಲಿ ನಟಿಸೋ ಚಾನ್ಸ್ ಸಿಕ್ತು. ಆದರೆ, ಆ ಸಿನಿಮಾನೂ  ನಿಂತು ಹೋಯ್ತು. ಅದೇ ಸಿನಿಮಾ ನಿರ್ದೇಶಕರು ಮತ್ತೊಂದು ಸಿನಿಮಾ ಮಾಡಿದ್ರು. ಅಲ್ಲಿ  ನಟಿಸೋ ಅವಕಾಶ ಸಿಕ್ತು. ಅಲ್ಲಿಂದ ನನ್ನ ಸಿನಿಮಾ ಜರ್ನಿ ಶುರುವಾಯ್ತು ಎಂಬುದು ಸ್ವಪ್ನ ಶೆಟ್ಟಿಗಾರ್ ಮಾತು.

    ಈ ಸಿನಿಮಾರಂಗಕ್ಕೆ ಬಂದಿದ್ದು ಖುಷಿ ಇದೆ. ಕಲರ್ ಫುಲ್ ಜಗತ್ತು ಇದು. ಕಲರ್ ಫುಲ್ ಆಗಿಯೇ ಬದುಕು ಕಟ್ಟಿಕೊಳ್ಳಬೇಕು ಎಂಬ ಅದಮ್ಯ ಆಸೆ ಇದೆ. ಆರು ವರ್ಷಗಳ ಈ ಜರ್ನಿಯಲ್ಲಿ ಸಿನಿಮಾ ಸಾಕಷ್ಟು ಕಲಿಸಿಕೊಟ್ಟಿದೆ. ಒಳ್ಳೆಯ ಮತ್ತು ಕೆಟ್ಟ ಅನುಭವವೂ ಆಗಿದೆ. ಇಲ್ಲೀಗ ಗಟ್ಟಿನೆಲೆ ಕಾಣಬೇಕು ಅಂತ ನಿರ್ಧರಿಸಿದ್ದೇನೆ. ಈ ನಿಟ್ಟಿನಲ್ಲಿ ಒಳ್ಳೊಳ್ಳೆಯ ಕಥೆ ಮತ್ತು ಪಾತ್ರಗಳನ್ನು ಎದುರು ನೋಡುತ್ತಿದ್ದೇನೆ.  ಆರಂಭದಲ್ಲಿ ಸಿಕ್ಕ ಪಾತ್ರಗಳನ್ನು ಮಾಡುತ್ತಿದ್ದೆ. ಹೀರೋಯಿನ್ ಆಗುವ ತುಡಿತ ಇತ್ತು. ಆದರೆ, ಕೆಲ ನಿರ್ದೇಶಕರ ದೃಷ್ಟಿಯಲ್ಲಿ ನಾನು ಹೀರೋಯಿನ್ ಮೆಟೀರಿಯಲ್ ಆಗಿರಲಿಲ್ಲ. ಆಮೇಲೆ ಹೀರೋಯಿನ್ ಆಗಲೇಬೇಕು ಅಂತ ವರ್ಕೌಟ್ ಶುರು ಮಾಡಿದೆ. ಸಿನಿಮಾ ನಾಯಕಿ ಆಗುವ ಎಲ್ಲ ಅರ್ಹತೆ ಪಡದುಕೊಂಡೆ. ಅಲ್ಲಿಂದ ಮೂರ್ನಾಲ್ಕು ಸಿನಿಮಾಗಳಿಗೆ ನಾಯಕಿ ಅದೆ. ಒಮ್ಮೊಮ್ಮೆ ನನಗೆ ಈ ಇಂಡಸ್ಟ್ರಿ ಬೇಸರ ತರಿಸಿದ್ದು ನಿಜ. ಅವಕಾಶ ಮಿಸ್ ಆದಾಗೆಲ್ಲ ಬೇಜಾರು ಆಗುತ್ತಿತ್ತು. ಆದರೂ, ತಾಳ್ಮೆಯಿಂದಲೇ ಅವಕಾಶ ಪಡೆದೆ. 19 ಸಿನಿಮಾಗಳಲ್ಲಿ ಗಮನಿಸುವ ಪಾತ್ರಗಳನ್ನು ಮಾಡುತ್ತ ಅನುಭವ ಪಡೆದೆ. ಈಗ ಆರು ಸಿನಿಮಾಗಳಲ್ಲಿ ನಾಯಕಿಯಾಗಿದ್ದೇನೆ. ‘ಡವ್ ಮಾಸ್ಟರ್’ ಸಿನಿಮಾ ಪಾತ್ರ ಚೆನ್ನಾಗಿದೆ. ಅಲ್ಲಿ ಕಥೆಯೇ ಹೈಲೆಟ್. ಇದು ಕೂಡ ರಿಲೀಸ್ ಗೆ ರೆಡಿಯಾಗುತ್ತಿದೆ. ಇನ್ನು, ‘ಯಾವ ಮೋಹನ ಮುರಳಿ ಕರೆಯಿತು’ ಸಿನಿಮಾ ಬಗ್ಗೆ ಹೇಳಲೇಬೇಕು. ಇದು ನನಗೆ ಮಾತ್ರವಲ್ಲ, ಇಡೀ ತಂಡಕ್ಕೆ ಒಳ್ಳೆಯ ಹೆಸರು ತಂದುಕೊಡುತ್ತೆ ಎಂಬ ಭವ್ಯ ಭರವಸೆ ಇದೆ.

    ‘ಯಾವ ಮೋಹನ‌ ಮುರಳಿ ಕರೆಯಿತು’ (Yaava Mohana Murali Kareyitu) ಚಿತ್ರ ಇಷ್ಟ ಆಗೋಕೆ ಕಾರಣ ಕಥೆ ಮತ್ತು ಪಾತ್ರ. ಅಲ್ಲಿ ಎಮೋಷನ್ಸ್ ಇದೆ, ಭಾವನೆಗಳಿವೆ, ಭಾವುಕತೆ ಇದೆ, ಸಂಬಂಧಗಳ ಮೌಲ್ಯವಿದೆ. ಎಲ್ಲಕ್ಕಿಂತ ಮಿಗಿಲಾಗಿ ಮಾನವೀಯತೆಯ ಗುಣ ಇದೆ. ನಾನಿಲ್ಲಿ ವಿಕಲಚೇತನ ಮಗಳ ತಾಯಿಯಾಗಿ ನಟಿಸಿದ್ದೇನೆ. ಅದೊಂದು ತೂಕದ ಪಾತ್ರ. ಇಡೀ ಸಿನಿಮಾದಲ್ಲಿ ಬದುಕಿನ ಅರ್ಥವಿದೆ. ಭಾವನೆಗಳ ಗುಚ್ಛವಿದೆ. ಅ ಕಾರಣಕ್ಕೆ ಈ ಸಿನಿಮಾ ಒಪ್ಪಿಕೊಂಡೆ. ಸದ್ಯ ಸಿನಿಮಾದ ಟೀಸರ್ ಮತ್ತು ಲಿರಿಕಲ್ ಸಾಂಗ್ ಗ್ಲಿಂಪ್ಸ್ ರಿಲೀಸ್ ಆಗಿದ್ದು, ಉತ್ತಮ ಪ್ರತಿಕ್ರಿಯೆ ದೊರೆತಿದೆ. ಇಷ್ಟರಲ್ಲೇ ಆಡಿಯೋ ರಿಲೀಸ್ ಆಗಲಿದೆ. ಚಿತ್ರದುರ್ಗದಲ್ಲಿ ಆಡಿಯೋ ಕಾರ್ಯಕ್ರಮ ಕೂಡ ನಡೆಯಲಿದೆ.  ‘ಯಾವ ಮೋಹನ ಮುರಳಿ ಕರೆಯಿತು’ ಸಿನಿಮಾದ ಸ್ಪೆಷಲ್ ಅಂದರೆ ರಾಕಿ. ಇಡೀ ಚಿತ್ರದ ಕೇಂದ್ರ ಬಿಂದು ರಾಕಿ. ರಾಕಿ ಅಂದರೆ ಶ್ವಾನದ ಹೆಸರು. ನನ್ನ ಮಗಳು ಮತ್ತು ರಾಕಿ ನಡುವಿನ ಸಂಬಂಧ ಮತ್ತು ಅವರಿಬ್ಬರ ಬದುಕಿನ ಉತ್ಸಾಹವೇ ಜೀವಾಳ. ಶೂಟಿಂಗ್ ವೇಳೆ ನಾವುಗಳು ಟೇಕ್ ತೆಗೆದುಕೊಂಡರೆ, ರಾಕಿ ಮಾತ್ರ ಒಂದೇ ಟೇಕ್ ಓಕೆ ಮಾಡುತ್ತಿದ್ದ. ಸೋ ಆ ಕ್ಷಣಗಳೇ ಮರೆಯದ ಅನುಭವ. ಸಿನಿಮಾ ಶೂಟಿಂಗ್ ಅನಿಸಲಿಲ್ಲ ಫ್ಯಾಮಿಲಿ ಟ್ರಿಪ್ ಥರಾ ಇತ್ತು. ಅದಕ್ಕೆ ಕಾರಣ ಟೀಮ್ ಮತ್ತು ಪ್ರೊಡಕ್ಷನ್ ಹೌಸ್. ನಿರ್ಮಾಪಕ ಶರಣಪ್ಪ ಹಾಗೂ ನಿರ್ದೇಶಕ ವಿಶ್ವಾಸ್ ಕೊಟ್ಟ ಸಹಕಾರ ಪ್ರೋತ್ಸಾಹದಿಂದ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ.

    ನನಗೆ ಬಾಲಿವುಡ್ ನಟಿ ರೇಖಾ ಅವರು ರೋಲ್ ಮಾಡೆಲ್. ಇನ್ನು ನನಗೆ ಚಾಲೆಂಜ್ ಎನಿಸುವ ಪಾತ್ರ ಮಾಡುವಾಸೆ. ಅದರಲ್ಲೂ ವಿಲನ್ ಇದ್ದರಂತೂ ಓಕೆ. ಈಗಾಗಲೇ ಕ್ಲಾಂತ ಎಂಬ ಸಿನಿಮಾದಲ್ಲಿ ನಾನು ವಿಲನ್ ಪಾತ್ರ ಮಾಡಿದ್ದೇನೆ. ನಾಯಕಿಯಷ್ಟೇ ಪ್ರಬಲ ಪಾತ್ರವದು. ಕನ್ನಡ ಮಾತ್ರವಲ್ಲ, ಪರಭಾಷೆ ಸಿನಿಮಾದಲ್ಲಿ ಒಳ್ಳೆಯ ಪಾತ್ರ ಕಂಟೆಂಟ್ ಇದ್ದರೆ ಅಲ್ಲೂ ಹೋಗೋಕೆ ರೆಡಿ. ಇನ್ನು, ನಟನೆ ಜೊತೆ ನಾನು ಹಾಡ್ತೀನಿ ಕೂಡ. ಅದರಲ್ಲೂ ಜನಪದ ಮಾತ್ರ. ಜೊತೆಗೆ ನಿರ್ದೇಶನದ ಮೇಲೂ ಒಲವಿದೆ. ಒಂದೆರೆಡು ಕಥೆ ಕೂಡ ಬರೆದಿಟ್ಟುಕೊಂಡಿದ್ದೇನೆ. ಆ  ಟೈಮ್ ಗಾಗಿ ಕಾಯುತ್ತಿದ್ದೇನೆ.  ಈಗ ರಿಲೀಸ್ ಗೆ ಏಳು ಸಿನಿಮಾಗಳಿವೆ. ಅದಕ್ಕೂ ಮುನ್ನ ಎರಡು ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿವೆ. ಒಂದಷ್ಟು ಕಥೆ ಕೇಳುತ್ತಿದ್ದೇನೆ. ತಮಿಳು ಸಿನಿಮಾದ ಕಥೆಯೊಂದು ಇಷ್ಟವಾಗಿದೆ. ಇನ್ನು ‘ಶಂಭೋ ಶಿವಶಂಕರ’ ಸಿನಿಮಾ ನಿರ್ದೇಶಕ ಶಂಕರ್ ಕೋನಮಾನಹಳ್ಳಿ ಅವರ ‘ಬಿಂಗೋ’ (Bingo)ಸಿನಿಮಾದಲ್ಲೂ ನಟಿಸುತ್ತಿದ್ದೇನೆ. ಅದು ಹಾರರ್ ಕಮ್ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ. ಕನ್ನಡ ಇಂಡಸ್ಟ್ರಿ ಈಗ ಯಾವುದರಲ್ಲೂ ಕಮ್ಮಿ ಇಲ್ಲ. ಒಳ್ಳೆಯ ಕಥಾಹಂದರ ಇರುವ ಸಿನಿಮಾಗಳು ಬರುತ್ತಿವೆ. ನಾನು ಗಟ್ಟಿ ಪಾತ್ರ, ಕಥೆ ಇರುವ ಸಿನಿಮಾ ಎದುರು ನೋಡುತ್ತಿದ್ದೇನೆ. ಯಾವುದೇ ಸಿನಿಮಾ ಬ್ಯಾಗ್ರೌಂಡ್ ಇರದ‌ ನನಗೆ ನನ್ನ ಮೇಲೆ ವಿಶ್ವಾಸವಿದೆ. ಒಳ್ಳೆಯ ಸಿನಿಮಾ ಕೊಟ್ಟರೆ ಕನ್ನಡಿಗರು ಖಂಡಿತ ಬಿಟ್ಟು ಕೊಡಲ್ಲ ಎಂಬ ನಂಬಿಕೆ ನನಗಿದೆ ಎನ್ನುತ್ತಾರೆ ಸ್ವಪ್ನ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೊಂಕಣಿ ಭಾಷಿಗರೇ ಶಾಸಕರಾಗಿರುವ ಮಂಗಳೂರು ದಕ್ಷಿಣದಲ್ಲಿ ಈ ಬಾರಿ ಗೆಲ್ಲೋದ್ಯಾರು?

    ಕೊಂಕಣಿ ಭಾಷಿಗರೇ ಶಾಸಕರಾಗಿರುವ ಮಂಗಳೂರು ದಕ್ಷಿಣದಲ್ಲಿ ಈ ಬಾರಿ ಗೆಲ್ಲೋದ್ಯಾರು?

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆಯ ಕೇಂದ್ರಬಿಂದುವಾಗಿರುವ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ (Mangalore South Assembly Constituency) 1994ರಿಂದ ಬಿಜೆಪಿಯ ಭದ್ರಕೋಟೆಯಾಗಿತ್ತು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರವನ್ನು 2013ರ ಚುನಾವಣೆಯಲ್ಲಿ ಕಾಂಗ್ರೆಸ್ (Congress) ತನ್ನ ಕೈವಶ ಮಾಡಿಕೊಂಡಿತ್ತು. ಇದಾದ ಬಳಿಕ 2018ರ ಚುನಾವಣೆಯಲ್ಲಿ ವೇದವ್ಯಾಸ್ ಕಾಮತ್ (Vedyasa Kamath) ಗೆಲುವಿನ ಮೂಲಕ ಕಮಲ ಪಾಳಯ ಮತ್ತೆ ಗೆದ್ದಿದೆಯಾದರೂ, ಈ ಬಾರಿಯ ಚುನಾವಣೆ ಅಷ್ಟು ಸುಲಭವಿಲ್ಲ. ಕಾಂಗ್ರೆಸ್ ಹಾಗೂ ಬಿಜೆಪಿ (BJP) ಮಧ್ಯೆ ಈ ಬಾರಿ ಟಫ್ ಫೈಟ್ ಇರೋದಂತೂ ಪಕ್ಕಾ.

    ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ 1957ರಿಂದ 2013ರ ವರೆಗೆ ನಡೆದ 14 ವಿಧಾನಸಭೆ ಚುನಾವಣೆಯಲ್ಲಿ ಒಂದು ಬಾರಿ ಜೈನ ಸಮುದಾಯದ ಧನಂಜಯ ಕುಮಾರ್ (1983) ಬಿಜೆಪಿಯಿಂದ ಗೆದ್ದದ್ದು ಬಿಟ್ಟರೆ ಉಳಿದೆಲ್ಲ ಚುನಾವಣೆಯಲ್ಲಿ ಕೊಂಕಣಿ ಭಾಷಿಗರೇ ಶಾಸಕರಾಗಿ ಆಯ್ಕೆಯಾಗಿರುವುದು ವಿಶೇಷ.

    ಕಾಂಗ್ರೆಸ್‌ನಿಂದ ಆಯ್ಕೆಯಾದ ವೈಕುಂಠ ಬಾಳಿಗ (1957), ಎಂ. ಶ್ರೀನಿವಾಸ ನಾಯಕ್ (1962), ಎಂ.ಎಸ್. ನಾಯಕ್ (1967) ಹಾಗೂ ನಾಲ್ಕು ಬಾರಿ ನಿರಂತರವಾಗಿ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಬಿಜೆಪಿಯ ಎನ್. ಯೋಗೀಶ್ ಭಟ್ (1994, 1999, 2004, 2008) ಹಾಗೂ ಡಿ. ವೇದವ್ಯಾಸ್ ಕಾಮತ್ (2018) ಜಿಎಸ್‌ಬಿ ಸಮುದಾಯದ ಮುಖಂಡರಾಗಿದ್ದು, ಕೊಂಕಣಿ ಭಾಷಿಗರು. ಕಾಂಗ್ರೆಸ್‌ನಿಂದ ಆಯ್ಕೆಯಾದ ಎಲ್.ಸಿ. ಪಾಯಸ್ಸ್ (1952), ಎಡ್ಡಿ ಸಲ್ಡಾನ್ಹಾ (1972), ಪಿ.ಎಫ್. ರೊಡ್ರಿಗಸ್ (1978), ಬ್ಲೇಸಿಯಸ್ ಎಂ. ಡಿ’ಸೋಜಾ (1985, 1989), ಜೆ.ಆರ್. ಲೋಬೋ (2013) ಕ್ರೈಸ್ತ ಸಮುದಾಯದ ಮುಖಂಡರಾಗಿದ್ದು, ಅವರು ಕೂಡ ಕೊಂಕಣಿ ಭಾಷಿಗರು. ಇದನ್ನೂ ಓದಿ: ಅವಘಡ ತಪ್ಪಿಸಲು ರೈಲನ್ನೇ ನಿಲ್ಲಿಸಿದ ದಿಟ್ಟ ಮಹಿಳೆ!

    ಈ ಕ್ಷೇತ್ರವು ಕೊಂಕಣಿ ಭಾಷೆ ಮಾತನಾಡುವ ಕ್ರೈಸ್ತ ಸಮುದಾಯ ಹಾಗೂ ಗೌಡ ಸಾರಸ್ವತ ಬ್ರಾಹ್ಮಣ (GSB) ಸಮುದಾಯದ ಅತೀ ಹೆಚ್ಚು ಮತದಾರರನ್ನು ಹೊಂದಿದ್ದು ಈ ಕಾರಣದಿಂದಾಗಿಯೇ ರಾಜಕೀಯ ಪಕ್ಷಗಳು ಕೂಡ ಟಿಕೆಟ್ ಹಂಚಿಕೆ ವೇಳೆ ಇಲ್ಲಿ ಕೊಂಕಣಿ ಸಮುದಾಯದ ಅಭ್ಯರ್ಥಿಗಳಿಗೆ ಮೊದಲ ಪ್ರಾಶಸ್ತ್ಯ ನೀಡುತ್ತಾ ಬಂದಿವೆ.

    ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ 1994ರಿಂದ ಸತತ ನಾಲ್ಕು ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವಿನ ನಗೆ ಬೀರಿದ್ದ ಹಿರಿಯ ನಾಯಕ ಎನ್.ಯೋಗೀಶ್ ಭಟ್‌ಗೆ 2013ರ ಚುನಾವಣೆಯಲ್ಲಿ ಕಾಂಗ್ರೆಸ್ ಆಘಾತ ನೀಡಿತ್ತು. ಕಾಂಗ್ರೆಸ್ ಅಭ್ಯರ್ಥಿ ಜಾನ್ ರಿಚರ್ಡ್ ಲೋಬೋ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇದು ಬಿಜೆಪಿಗೆ ಭಾರೀ ಮುಜುಗರ ಉಂಟು ಮಾಡಿತ್ತು. ಆದರೆ ಈ ಸೋಲಿನಿಂದ ಪಾಠ ಕಲಿತು ಎಚ್ಚೆತ್ತ ಕಮಲಪಾಳಯ 2018ರ ಚುನಾವಣೆಯಲ್ಲಿ ತನ್ನ ಅಭ್ಯರ್ಥಿಯನ್ನು ಬದಲಾಯಿಸಿ ಅದೃಷ್ಟ ಪರೀಕ್ಷೆಗಿಳಿದಿತ್ತು. ನೂತನ ಅಭ್ಯರ್ಥಿ ವೇದವ್ಯಾಸ್ ಕಾಮತ್‌ರನ್ನು ಕಣಕ್ಕಿಳಿಸಿದ್ದ ಬಿಜೆಪಿ ಮಂಗಳೂರು ದಕ್ಷಿಣ ಕ್ಷೇತ್ರವನ್ನು ಮರಳಿ ಪಡೆದಿತ್ತು.

    ಬಿಜೆಪಿ ಈ ಬಾರಿ ತನ್ನ ಅಭ್ಯರ್ಥಿ ಬದಲಾಯಿಸುವ ಸಾಹಸಕ್ಕೆ ಕೈಹಾಕುವ ಸಾಧ್ಯತೆ ಇಲ್ಲ. ಈ ಬಾರಿಯೂ ಮಂಗಳೂರು ದಕ್ಷಿಣ ಕ್ಷೇತ್ರದ ಹಾಲಿ ಶಾಸಕ ವೇದವ್ಯಾಸ್ ಕಾಮತ್ ಬಿಜೆಪಿ ಟಿಕೆಟ್ ಪಡೆಯುವುದು ಬಹುತೇಕ ಖಚಿತ. ಅಲ್ಲದೇ ಬಿಜೆಪಿಯಿಂದಲೂ ಜಿಎಸ್‌ಬಿ ಬ್ರಾಹ್ಮಣರು ಅಂದರೆ ಗೌಡ ಸಾರಸತ್ವ ಬ್ರಾಹ್ಮಣರಿಗೆ ಒಂದು ಕ್ಷೇತ್ರ ಮೀಸಲಿಡಲಾಗುತ್ತದೆ. ಇದು ಬಹುತೇಕ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರವಾಗಿರುತ್ತದೆ. ವೇದವ್ಯಾಸ್ ಕಾಮತ್ ಕೂಡಾ ಅದೇ ಸಮುದಾಯದವರು. ಅಲ್ಲದೇ ಕ್ಷೇತ್ರದಲ್ಲಿ ಉತ್ತಮ ಹೆಸರು ಗಳಿಸಿದ್ದಾರೆ, ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಾರೆ ಹೀಗಿರುವಾಗ ಬಿಜೆಪಿಗೆ ವೇದವ್ಯಾಸ್ ಕಾಮತ್‌ಗಿಂತ ಉತ್ತಮ ಆಯ್ಕೆ ಬೇರೊಂದಿಲ್ಲ ಎನ್ನೋದು ಪಕ್ಷದೊಳಗಿನ ಲೆಕ್ಕಾಚಾರ.

    ದಕ್ಷಿಣ ಕನ್ನಡದಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಪರದಾಡುತ್ತಿರುವ ಕಾಂಗ್ರೆಸ್‌ನಲ್ಲಿ ಈ ಕ್ಷೇತ್ರದಿಂದ ಕಣಕ್ಕಿಳಿಯಲು ಇಬ್ಬರು ಆಕಾಂಕ್ಷಿಗಳಿದ್ದಾರೆ. ಈ ಇಬ್ಬರು ಅಭ್ಯರ್ಥಿಗಳು ಒಂದೇ ಸಮುದಾಯದವರು ಎಂಬುವುದು ಮತ್ತೊಂದು ವಿಶೇಷ. ಕಾಂಗ್ರೆಸ್‌ನಲ್ಲಿ ಎರಡು ಟಿಕೆಟ್‌ಗಳನ್ನು ಕ್ರಿಶ್ಚಿಯನ್ ಸಮುದಾಯದ ನಾಯಕರಿಗೆಂದೇ ಮೀಸಲಿಡುತ್ತಾರೆ. ಅದರಲ್ಲಿ ಮಂಗಳೂರು ದಕ್ಷಿಣ ಕೂಡಾ ಒಂದು. ಈ ಕಾರಣಕ್ಕಾಗಿಯೇ ಕ್ರಿಶ್ಚಿಯನ್ ಸಮುದಾಯದವರಿಗೆ ಇಲ್ಲಿ ಟಿಕೆಟ್ ಸಿಗುತ್ತೆ. ಆದರೆ ಈ ಬಾರಿ ಅಭ್ಯರ್ಥಿಗಳ ಆಯ್ಕೆಯೇ ಕಾಂಗ್ರೆಸ್‌ಗೆ ಕಗ್ಗಂಟಾಗಿದೆ. ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜಾ ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿಯಾಗಿದ್ದಾರೆ. ಈ ಹಿಂದೆ 2008ರಲ್ಲಿ ಅವರು ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. 2013ರಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ಈ ಕ್ಷೇತ್ರದಲ್ಲಿ ಗೆದ್ದಿದ್ದ ಹಿರಿಯ ನಾಯಕ ಜಾನ್ ರಿಚರ್ಡ್ ಲೋಬೋ ಕೂಡಾ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ತಮ್ಮ ಮೌನ ಕಾರ್ಯಶೈಲಿಯಿಂದಲೇ ಗುರುತಿಸಿಕೊಂಡಿರುವ ಲೋಬೋ ಕಾಂಗ್ರೆಸ್ ಟಿಕೆಟ್ ಗಿಟ್ಟಿಸಿಕೊಳ್ಳುತ್ತಾರಾ ಕಾದು ನೋಡಬೇಕಿದೆ. ಈ ನಡುವೆ ಕಾಂಗ್ರೆಸ್ ನಿಂದ ಬಿಲ್ಲವ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂಬ ಒತ್ತಾಯ ಕೇಳಿ ಬಂದಿದ್ದು,ಬಿಲ್ಲವ ಮುಖಂಡ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಖಜಾಂಚಿ ಯುವ ವಕೀಲ ಪದ್ಮರಾಜ್ ಆರ್ ಅವರ ಹೆಸರು ಕೇಳಿ ಬಂದಿದೆ. ಈ ಬಾರಿ ಕ್ರೈಸ್ತ ಅಭ್ಯರ್ಥಿಯನ್ನು ಕೈ ಬಿಟ್ಟು ಬಿಲ್ಲವ ಅಭ್ಯರ್ಥಿ ಪದ್ಮರಾಜ್ ಅವರನ್ನು ಕಣಕ್ಕಿಳಿಸುವ ಬಗ್ಗೆಯೂ ಕಾಂಗ್ರೆಸ್ ಆಂತರಿಕ ಸಮೀಕ್ಷೆಯಲ್ಲಿ ರಿಸಲ್ಟ್ ಸಿಕ್ಕಿದೆ.

    ಇನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಶಕ್ತಿಯೇ ಇಲ್ಲ. ಎಸ್‌ಡಿಪಿಐಗೆ ಇಲ್ಲಿ ಗೆಲ್ಲುವಂತಹ ಸಾಮರ್ಥ್ಯ ಇಲ್ಲ. ಆದರೆ ಸೋಲಿಸುವ ಹಾಗೂ ಫಲಿತಾಂಶ ಬದಲಾಯಿಸುವ ತಾಕತ್ತು ಹೊಂದಿದೆ ಎಂಬುವುದು ಉಲ್ಲೇಖನೀಯ. ಹೀಗಾಗಿ ಎಸ್‌ಡಿಪಿಐ ಸ್ಪರ್ಧೆ ಇತರ ಪಕ್ಷಗಳಿಗೆ ಅದರಲ್ಲೂ ಕಾಂಗ್ರೆಸ್‌ಗೆ ಹೊಡೆತ ನೀಡುವುದರಲ್ಲಿ ಅನುಮಾನವಿಲ್ಲ. ಹೀಗಾಗಿ ಈ ಬಾರಿ ಯಾರು ಈ ಕ್ಷೇತ್ರದಿಂದ ಆರಿಸಿ ಬರ್ತಾರೆ ಎನ್ನುವುದು ಕುತೂಹಲದ ಯಕ್ಷಪ್ರಶ್ನೆಯಾಗಿದೆ.

  • ಪೊಲೀಸ್ ಹೆಸರಿನಲ್ಲಿ ನಟಿಯ ತಾಯಿ ಬಳಿ ಹಣ ಪೀಕಿದ ವ್ಯಕ್ತಿ

    ಪೊಲೀಸ್ ಹೆಸರಿನಲ್ಲಿ ನಟಿಯ ತಾಯಿ ಬಳಿ ಹಣ ಪೀಕಿದ ವ್ಯಕ್ತಿ

    ಮಂಗಳೂರು (Mangalore) ಮೂಲದ ನಟಿಯೊಬ್ಬರ (Actress) ತಾಯಿ (Mother) ಬಳಿ ವ್ಯಕ್ತಿಯೊಬ್ಬ ಹಣ ಪೀಕಿದ ಘಟನೆ ಮಂಗಳೂರಿನ ಪಾಂಡೇಶ್ವರ (Pandeshwar) ಮಹಿಳಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸ್ ಯೂನಿಫಾರಂನಲ್ಲೇ ಬಂದಿದ್ದ ವ್ಯಕ್ತಿಯೊಬ್ಬ ‘ತಾನು ಪೊಲೀಸ್. ನೀವು ಹಣ ಕೊಡದೇ ಇದ್ದರೆ ನಿಮ್ಮ ಮನೆಯ ಮೇಲೆ ದಾಳಿ ಮಾಡಲಾಗುತ್ತದೆ’ ಎಂದು ನಟಿಯ ತಾಯಿಗೆ ಹೆದರಿಸಿ ಅವರಿಂದ 38 ಸಾವಿರ ರೂಪಾಯಿ ವಸೂಲಿ ಮಾಡಿಕೊಂಡಿದ್ದಾನೆ. ಈ ಕುರಿತು ನಟಿಯ ತಾಯಿ ದೂರು ಕೂಡ ನೀಡಿದ್ದಾರೆ.

    ನಟಿಯ ತಾಯಿಯ ಮನೆಗೆ ಬಂದಿದ್ದ ವ್ಯಕ್ತಿಯು ತನ್ನನ್ನು ತಾನು ಮಹಿಳಾ ಠಾಣೆ ಪೊಲೀಸ್ ಶಿವರಾಜ್ ದೇವಾಡಿಗ ಅಂತ ಪರಿಚಯ ಮಾಡಿಕೊಂಡಿದ್ದಾನೆ. ಸಾಹೇಬ್ರು ಈಗ ರೈಡ್ ಮಾಡ್ತಾರೆ. ಗೂಗಲ್ ಪೇ ಮಾಡಿದ್ರೆ ರೈಡ್ ಮಾಡಲ್ಲ ಎಂದು ಬೆದರಿಕೆ ಹಾಕಿದ್ದಾನೆ. ತನ್ನ ನಂಬರಿನಿಂದ ಕರೆ ಮಾಡಿ ಅದೇ ನಂಬರ್ ಗೆ ಆನ್ ಲೈನ್ ಹಣ ಹಾಕಿಸಿಕೊಂಡಿದ್ದಾನೆ. ಸಾಹೇಬ್ರ ಜೊತೆ ಸಹಕರಿಸಿದ್ರೆ ದಂಧೆಗೆ ತೊಂದರೆ ಆಗಲ್ಲ ಅಂತಾ ಹೇಳಿದ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ ನಟಿಯ ತಾಯಿ. ಇದನ್ನೂ ಓದಿಮತ್ತೆಂದೂ ಮದುವೆಯಾಗಲಾರೆ ಎಂದು ಘೋಷಿಸಿದ ನಟಿ ರಾಖಿ ಸಾವಂತ್

    ‘ಬಂದವನು ಖಾಕಿ ಪ್ಯಾಂಟ್, ಖಾಕಿ ಶೂ ಹಾಕಿದ್ದ. ಅವನು ಪೊಲೀಸ್ ಹೌದಾ ಅಥವಾ ಅಲ್ಲವೊ ಅನ್ನೋದು ಇನ್ನು ಗೊತ್ತಾಗಿಲ್ಲ. ಆದ್ರೆ ಬಂದವನು ಪೊಲೀಸ್ ಹಾಗೆ ಇದ್ದ. ಹೊಸ ಕಮಿಷನರ್ ಬಂದಿದ್ದಾರೆ ಅವರ ಟೇಬಲ್ ಮೇಲೆ ಫೈಲ್ ಇದೆ, ಸಿಸಿಟಿವಿ ಆಫ್ ಮಾಡಿಸಿ ಫೈಲ್ ತಗಿಯೋಕೆ 10 ಸಾವಿರ ಸಿಬ್ಬಂದಿಗೆ ಕೊಡಬೇಕು. ಕಮಿಷನರ್ ಕಚೇರಿಯ 22 ಸಿಬ್ಬಂದಿಗೆ ಹಣ ನೀಡಬೇಕೆಂದು ಹೇಳಿದ’ ಎಂದಿದ್ದಾರೆ ಆ ಮಹಿಳೆ.

  • ಬೆಕ್ಕು ಕಿಡ್ನ್ಯಾಪ್ ಮಾಡಿ ಮಂಗಳೂರಿಗೆ ಕಳುಹಿಸಿದ್ದರು: ಪತ್ತೆಯಾಯ್ತು ದೀಪಿಕಾ ದಾಸ್ ಶ್ಯಾಡೋ

    ಬೆಕ್ಕು ಕಿಡ್ನ್ಯಾಪ್ ಮಾಡಿ ಮಂಗಳೂರಿಗೆ ಕಳುಹಿಸಿದ್ದರು: ಪತ್ತೆಯಾಯ್ತು ದೀಪಿಕಾ ದಾಸ್ ಶ್ಯಾಡೋ

    ಕಿರುತೆರೆ ನಟಿಯ, ಬಿಗ್ ಬಾಸ್ ಸ್ಪರ್ಧಿ ದೀಪಿಕಾ ದಾಸ್ (Deepika Das) ಮೊನ್ನೆಯಷ್ಟೇ ತಮ್ಮ ಮನೆಯ ಬೆಕ್ಕು (cat) ಶ್ಯಾಡೋ (Shadow) ಕಾಣಿಯಾಗಿದ್ದರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ಬೆಕ್ಕನ್ನು ಹುಡುಕಿಕೊಟ್ಟವರಿಗೆ ಬಹುಮಾನ ಕೊಡುವುದಾಗಿ ಪ್ರಕಟಿಸಿದ್ದರು. ಇದೀಗ ಬೆಕ್ಕು ಪತ್ತೆಯಾಗಿದೆ. ಅದು ಮಂಗಳೂರಿನಲ್ಲಿ (Mangalore) ಎನ್ನುವುದು ವಿಶೇಷ. ಬೆಂಗಳೂರಿನಿಂದ ಮಂಗಳೂರಿಗೆ ಅದು ಹೇಗೆ ಹೋಯಿತು? ಸದ್ಯಕ್ಕೆ ಸಸ್ಪೆನ್ಸ್.

    ತಮ್ಮ ಶ್ಯಾಡೋ ಅನ್ನು ಬೆಂಗಳೂರಿನಲ್ಲಿ ಕಿಡ್ನ್ಯಾಪ್ (Kidnap) ಮಾಡಿ ಮಂಗಳೂರಿಗೆ ಕಳುಹಿಸಿದ್ದರ ಬಗ್ಗೆ ಸ್ವತಃ ದೀಪಿಕಾ ಅವರೇ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅದನ್ನು ಕದ್ದವರು ಯಾರು? ಮಂಗಳೂರಿಗೆ ಹೋಗಿದ್ದು ಹೇಗೆ? ಅದನ್ನು ಹುಡುಕಿದ ಕಥೆ ಏನು? ಹೀಗೆ ಎಲ್ಲವನ್ನೂ ಮುಂದಿನ ದಿನಗಳಲ್ಲಿ ಹೇಳಲಿದ್ದಾರಂತೆ ದೀಪಿಕಾ ದಾಸ್. ಸದ್ಯಕ್ಕೆ ಬೆಕ್ಕು ಸಿಕ್ಕಿದೆ. ಹಾಗಾಗಿ ಬಹುಮಾನ ಅವರಲ್ಲೇ ಉಳಿದಿದೆ. ಇದನ್ನೂ ಓದಿ: ಸೀರೆಯುಟ್ಟು ಮಿಂಚಿದ `ವಜ್ರಕಾಯ’ ನಟಿ ನಭಾ ನಟೇಶ್

    ದೀಪಿಕಾ ದಾಸ್ ಅವರಿಗೆ ಬೆಕ್ಕು ಮತ್ತು ಶ್ವಾನ ಎಂದರೆ ತುಂಬಾ ಇಷ್ಟ. ಅವರ ಮನೆಯಲ್ಲಿ ಪ್ರಾಣಿಗಳು ಕೂಡ ಕುಟುಂಬದ ಸದಸ್ಯರಾಗಿದ್ದಾರೆ. ಮನೆಯವರಿಗೆ ಕೊಡುವಷ್ಟೇ ಪ್ರೀತಿಯನ್ನು ಬೆಕ್ಕಿ-ಶ್ವಾನಕ್ಕೆ ಕೊಡುತ್ತಿದ್ದಾರೆ. ಕುಟುಂಬದ ಸದಸ್ಯರಲ್ಲಿ ಒಬ್ಬರಾಗಿದ್ದ ಶ್ಯಾಡೋ (Shadow) ಕಾಣೆಯಾಗಿದ್ದರ ಬಗ್ಗೆ ಅವರು ತುಂಬಾನೇ ನೊಂದುಕೊಂಡಿದ್ದರು.

     ಫೆ.18ರಂದು ರಾತ್ರಿಯಿಂದ ವಿಶ್ವೇಶ್ವರಯ್ಯ ಲೇಔಟ್, 3ನೇ ಬ್ಲಾಕ್, ಉಲ್ಲಾಳು, ಬೆಂಗಳೂರಿನಲ್ಲಿ  ಶ್ಯಾಡೋ ಕಾಣೆಯಾಗಿತ್ತು ಎಂದು ನಟಿ ಅಳಲು ತೊಡಿಕೊಂಡಿದ್ದರು. ಈ ಕುರಿತು ಮಾಹಿತಿಯನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದರು. ಶ್ಯಾಡೋ ಅನ್ನು ಹುಡುಕಿ ಕೊಟ್ಟವರಿಗೆ ಬಹುಮಾನ ಕೊಡಲಾಗುವುದು ಎಂದು ಹತ್ತು ಸಾವಿರದಿಂದ ಹದಿನೈದು ಸಾವಿರ ರೂಪಾಯಿವರೆಗೂ  ಹಣವನ್ನು ಘೋಷಣೆ ಮಾಡಿದ್ದರು.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಜನಿಕಾಂತ್ ಸಿನಿಮಾದಲ್ಲಿ ಸಾಧು ಕೋಕಿಲಾ: ಮಂಗಳೂರಿನಲ್ಲಿ ಶೂಟಿಂಗ್

    ರಜನಿಕಾಂತ್ ಸಿನಿಮಾದಲ್ಲಿ ಸಾಧು ಕೋಕಿಲಾ: ಮಂಗಳೂರಿನಲ್ಲಿ ಶೂಟಿಂಗ್

    ಮಿಳಿನ ಜೈಲರ್ (Jailer) ಸಿನಿಮಾದ ಶೂಟಿಂಗ್ ಮಂಗಳೂರಿನಲ್ಲಿ (Mangalore) ನಡೆಯುತ್ತಿದ್ದು, ಸಿನಿಮಾದ ನಾಯಕ ರಜನಿಕಾಂತ್ ಈಗಾಗಲೇ ಮೂರು ದಿನಗಳಿಂದ ಮಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ. ಕನ್ನಡದ ಹೆಸರಾಂತ ನಟ ಶಿವರಾಜ್ ಕುಮಾರ್ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಕನ್ನಡದಿಂದ ಕೇವಲ ಶಿವರಾಜ್ ಕುಮಾರ್ ಮಾತ್ರವಲ್ಲ, ಸಾಧು ಕೋಕಿಲಾ ಕೂಡ ಪಾತ್ರ ಮಾಡುತ್ತಿರುವುದು ವಿಶೇಷ.

    ಸಿನಿಮಾದ ಶೂಟಿಂಗ್ ಮಂಗಳೂರಿನ ಪಿಲಿಕುಳದ (Pilikula) ಗುತ್ತಿನ ಮನೆಯಲ್ಲಿ ನಡೆಯುತ್ತಿದ್ದು, ರಜನಿಕಾಂತ್ (Rajinikanth), ಶಿವರಾಜ್ ಕುಮಾರ್ (Shivraj Kumar) ಜೊತೆ ಸಾಧು ಕೋಕಿಲಾ (Sadhu Kokila) ಕೂಡ ಭಾಗಿಯಾಗಿದ್ದಾರೆ. ಪಿಲಿಕುಳದಲ್ಲಿ ಕರಾವಳಿಯನ್ನು ಬಿಂಬಿಸುವಂತಹ ದೃಶ್ಯಗಳನ್ನು ಇಲ್ಲಿ ಸೆರೆ ಹಿಡಿಯಲಾಗುತ್ತಿದೆ. ಮಾಹಿತಿಯ ಪ್ರಕಾರ ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ ನೆಗೆಟಿವ್ ಶೇಡ್ ಇರುವಂತಹ ಪಾತ್ರವನ್ನು ನಿರ್ವಹಿಸುತ್ತಿದ್ದಾರಂತೆ.

    ಪಿಲಿಕುಳದ ಗುತ್ತಿನ ಮನೆಯು ಮಂಗಳೂರು ಹೊರವಲಯದಲ್ಲಿದ್ದು,  ಇಲ್ಲಿ ಜೈಲರ್ ಸಿನಿಮಾಗಾಗಿಯೇ ವಿಶೇಷ ಸೆಟ್ ಅನ್ನು ಹಾಕಲಾಗಿದೆ. ಹಳ್ಳಿಯ ವಾತಾವರಣವನ್ನು ಬಿಂಬಿಸುವಂತಹ ಮತ್ತು ಕುಸ್ತಿ ಅಖಾಡವನ್ನು ಕೂಡ ಮನೆ ಒಳಗೆ ಸೃಷ್ಟಿ ಮಾಡಲಾಗಿದೆ. ಎತ್ತಿನ ಗಾಡಿ ಸೇರಿದಂತೆ ಹಲವು ಹಳ್ಳಿ ಸಂಸ್ಕೃತಿಯನ್ನು ಬಿಂಬಿಸುವಂತಹ ವಾತಾವರಣವನ್ನು ನಿರ್ಮಾಣ ಮಾಡಲಾಗಿದೆ. ಇದನ್ನೂ ಓದಿ: ಮದುವೆಯ ಬಳಿಕ ಸಿಹಿ ಸುದ್ದಿ ನೀಡಿದ ಸಿದ್-ಕಿಯಾರಾ ಜೋಡಿ

    ಇದೇ ಸ್ಥಳದಲ್ಲೇ ಎರಡು ದಿನಗಳ ಕಾಲ ಜೈಲರ್ ಸಿನಿಮಾದ ಚಿತ್ರೀಕರಣ ನಡೆಯಲಿದೆ. ಕುಸ್ತಿ ದೃಶ್ಯ ಸೇರಿದಂತೆ ಮಹತ್ವದ ಹಲವು ಸನ್ನಿವೇಶಗಳನ್ನು ಪಿಲಿಕುಳದ ಗುತ್ತಿನ ಮನೆಯ ಆವರಣದಲ್ಲೇ ಚಿತ್ರೀಕರಣ ಮಾಡಲಾಗುತ್ತದೆ. ಎರಡು ದಿನಗಳ ಹಿಂದೆಯೇ ಶಿವರಾಜ್ ಕುಮಾರ್ ಕೂಡ ರಜನಿಕಾಂತ್ ಅವರ ಟೀಮ್ ಸೇರಿಕೊಂಡಿದ್ದಾರೆ. ರಜನಿ ಜೊತೆಗೆ ಹರಟೆ ಹೊಡೆಯುತ್ತಿರುವ ಫೋಟೋ ಈಗಾಗಲೇ ಭಾರೀ ವೈರಲ್ ಆಗಿದೆ.

    ಇದು ರಜನಿಕಾಂತ್ ನಟನೆಯ 169ನೇ ಸಿನಿಮಾವಾಗಿದ್ದು, ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದಲ್ಲಿ ಚಿತ್ರ ಮೂಡಿ ಬರಲಿದೆ. ತಮನ್ನಾ ನಾಯಕಿಯಾಗಿ ನಟಿಸುತ್ತಿದ್ದರೆ, ಶಿವರಾಜ್ ಕುಮಾರ್ ಸೇರಿದಂತೆ ಇನ್ನೂ ಹಲವು ಚಿತ್ರರಂಗದ ದಿಗ್ಗಜರು ಈ ಸಿನಿಮಾಗಾಗಿ ಒಂದಾಗಿದ್ದಾರೆ. ಅನಿರುದ್ಧ ರವಿಚಂದ್ರನ್ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬರಲಿವೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Exclusive- ಮಂಗಳೂರಿನಲ್ಲಿ ರಜನಿಕಾಂತ್ : ಚಿತ್ರೀಕರಣ ಸ್ಥಳ,  ದೃಶ್ಯದ ಎಕ್ಸ್ ಕ್ಲೂಸಿವ್ ಮಾಹಿತಿ

    Exclusive- ಮಂಗಳೂರಿನಲ್ಲಿ ರಜನಿಕಾಂತ್ : ಚಿತ್ರೀಕರಣ ಸ್ಥಳ, ದೃಶ್ಯದ ಎಕ್ಸ್ ಕ್ಲೂಸಿವ್ ಮಾಹಿತಿ

    ರಡು ದಿನಗಳ ಹಿಂದೆಯೇ ರಜನಿಕಾಂತ್ ಮಂಗಳೂರಿನಲ್ಲಿ (Mangalore) ಬೀಡುಬಿಟ್ಟಿದ್ದಾರೆ. ರಜನಿಕಾಂತ್ (Rajinikanth) ಮತ್ತು ಶಿವರಾಜ್ ಕುಮಾರ್ (Shivraj Kumar) ಕಾಂಬಿನೇಷನ್ ನ ‘ಜೈಲರ್’ (Jailer) ಸಿನಿಮಾದ ಶೂಟಿಂಗ್ ಮಂಗಳೂರಿನ ಪಿಲಿಕುಳದ (Pilikula) ಗುತ್ತಿನ ಮನೆಯಲ್ಲಿ ನಡೆಯುತ್ತಿದ್ದು, ಕರಾವಳಿಯನ್ನು ಬಿಂಬಿಸುವಂತಹ ದೃಶ್ಯಗಳನ್ನು ಇಲ್ಲಿ ಸೆರೆ ಹಿಡಿಯಲಾಗುತ್ತಿದೆ. ಮಾಹಿತಿಯ ಪ್ರಕಾರ ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ ನೆಗೆಟಿವ್ ಶೇಡ್ ಇರುವಂತಹ ಪಾತ್ರವನ್ನು ನಿರ್ವಹಿಸುತ್ತಿದ್ದಾರಂತೆ.

    ಪಿಲಿಕುಳದ ಗುತ್ತಿನ ಮನೆಯು ಮಂಗಳೂರು ಹೊರವಲಯದಲ್ಲಿದ್ದು,  ಇಲ್ಲಿ ಜೈಲರ್ ಸಿನಿಮಾಗಾಗಿಯೇ ವಿಶೇಷ ಸೆಟ್ ಅನ್ನು ಹಾಕಲಾಗಿದೆ. ಹಳ್ಳಿಯ ವಾತಾವರಣವನ್ನು ಬಿಂಬಿಸುವಂತಹ ಮತ್ತು ಕುಸ್ತಿ ಅಖಾಡವನ್ನು ಕೂಡ ಮನೆ ಒಳಗೆ ಸೃಷ್ಟಿ ಮಾಡಲಾಗಿದೆ. ಎತ್ತಿನ ಗಾಡಿ ಸೇರಿದಂತೆ ಹಲವು ಹಳ್ಳಿ ಸಂಸ್ಕೃತಿಯನ್ನು ಬಿಂಬಿಸುವಂತಹ ವಾತಾವರಣವನ್ನು ನಿರ್ಮಾಣ ಮಾಡಲಾಗಿದೆ. ಇದನ್ನೂ ಓದಿ: ಸಾಗರ ಜಾತ್ರೆ ಸುತ್ತಾಡಿದ `ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಉರುಡುಗ

    ಇದೇ ಸ್ಥಳದಲ್ಲೇ ಎರಡು ದಿನಗಳ ಕಾಲ ಜೈಲರ್ ಸಿನಿಮಾದ ಚಿತ್ರೀಕರಣ ನಡೆಯಲಿದೆ. ಕುಸ್ತಿ ದೃಶ್ಯ ಸೇರಿದಂತೆ ಮಹತ್ವದ ಹಲವು ಸನ್ನಿವೇಶಗಳನ್ನು ಪಿಲಿಕುಳದ ಗುತ್ತಿನ ಮನೆಯ ಆವರಣದಲ್ಲೇ ಚಿತ್ರೀಕರಣ ಮಾಡಲಾಗುತ್ತದೆ. ಎರಡು ದಿನಗಳ ಹಿಂದೆಯೇ ಶಿವರಾಜ್ ಕುಮಾರ್ ಕೂಡ ರಜನಿಕಾಂತ್ ಅವರ ಟೀಮ್ ಸೇರಿಕೊಂಡಿದ್ದಾರೆ. ರಜನಿ ಜೊತೆಗೆ ಹರಟೆ ಹೊಡೆಯುತ್ತಿರುವ ಫೋಟೋ ಈಗಾಗಲೇ ಭಾರೀ ವೈರಲ್ ಆಗಿದೆ.

    ಇದು ರಜನಿಕಾಂತ್ ನಟನೆಯ 169ನೇ ಸಿನಿಮಾವಾಗಿದ್ದು, ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದಲ್ಲಿ ಚಿತ್ರ ಮೂಡಿ ಬರಲಿದೆ. ತಮನ್ನಾ ನಾಯಕಿಯಾಗಿ ನಟಿಸುತ್ತಿದ್ದರೆ, ಶಿವರಾಜ್ ಕುಮಾರ್ ಸೇರಿದಂತೆ ಇನ್ನೂ ಹಲವು ಚಿತ್ರರಂಗದ ದಿಗ್ಗಜರು ಈ ಸಿನಿಮಾಗಾಗಿ ಒಂದಾಗಿದ್ದಾರೆ. ಅನಿರುದ್ಧ ರವಿಚಂದ್ರನ್ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬರಲಿವೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಂಗಳೂರಿನಲ್ಲಿ ರಜನಿ ಜೊತೆ ಶಿವರಾಜ್ ಕುಮಾರ್: ಫೋಟೋ ಲೀಕ್

    ಮಂಗಳೂರಿನಲ್ಲಿ ರಜನಿ ಜೊತೆ ಶಿವರಾಜ್ ಕುಮಾರ್: ಫೋಟೋ ಲೀಕ್

    ನಿನ್ನೆಯಷ್ಟೇ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಮಂಗಳೂರಿಗೆ ಬಂದಿಳಿದಿದ್ದಾರೆ. ಎರಡು ದಿನಗಳ ಕಾಲ ರಜನಿಕಾಂತ್ ನಟನೆಯ ಜೈಲರ್ ಸಿನಿಮಾ ಚಿತ್ರೀಕರಣಗೊಳ್ಳುತ್ತಿದ್ದು, ಕನ್ನಡದ ಹೆಸರಾಂತ ನಟ ಶಿವರಾಜ್ ಕುಮಾರ್ ಕೂಡ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ನಿನ್ನೆಯಿಂದಲೇ ಮಂಗಳೂರಿನಲ್ಲಿ ಜೈಲರ್ ಸಿನಿಮಾದ ಶೂಟಿಂಗ್ ನಡೆದಿದೆ. ರಜನಿ ಜೊತೆ ಶಿವರಾಜ್ ಕುಮಾರ್ ಇರುವ ಫೋಟೋ ವೈರಲ್ ಕೂಡ ಆಗಿದೆ.

    ಮೊನ್ನೆ ರಜನಿಕಾಂತ್ ಮಂಗಳೂರು ಏರ್ ಪೋರ್ಟಿಗೆ ಬಂದಾಗ  ಅಸಂಖ್ಯಾತ ಅಭಿಮಾನಿಗಳು ಅವರಿಗಾಗಿ ಕಾಯುತ್ತಿದ್ದರು. ಅಭಿಮಾನಿಗಳತ್ತ ಕೈ ಬೀಸಿ ಕಾರಿನಲ್ಲಿ ರಜನಿ ಅಜ್ಞಾತ ಸ್ಥಳಕ್ಕೆ ತೆರಳಿದ್ದರು. ರಜನಿಕಾಂತ್ ನಟನೆಯ ಜೈಲರ್ ಸಿನಿಮಾದ ಶೂಟಿಂಗ್ ಗಾಗಿ ಅವರು ಮಂಗಳೂರಿಗೆ ಬಂದಿದ್ದು, ಜೊತೆಗೆ ಮಂಗಳೂರಿನ ಹಲವು ದೇವಸ್ಥಾನಗಳಿಗೂ ಅವರು ಭೇಟಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಬೆಸ್ಟ್ ಫ್ರೆಂಡ್ ಪತಿಯನ್ನೇ ಪಟಾಯಿಸಿದಳು ಎಂದವರಿಗೆ ನಟಿ ಹನ್ಸಿಕಾ ಸ್ಪಷ್ಟನೆ

    ರಜನಿಕಾಂತ್ ಜೊತೆ ಕನ್ನಡದ ಹೆಸರಾಂತ ನಟ ಶಿವರಾಜ್ ಕುಮಾರ್ ಕೂಡ ಭಾಗಿಯಾಗಿದ್ದು, ಇದೇ ಮೊದಲ ಬಾರಿಗೆ ಶಿವರಾಜ್ ಕುಮಾರ್, ಈ ಸಿನಿಮಾದಲ್ಲಿ ತೆರೆಹಂಚಿಕೊಳ್ಳುತ್ತಿದ್ದಾರೆ. ರಜನಿ ಮತ್ತು ಶಿವಣ್ಣ ಭಾಗದ ಚಿತ್ರೀಕರಣ ಇದೀಗ ಮಂಗಳೂರಿನಲ್ಲಿ ನಡೆಯುತ್ತಿದೆ. ಭದ್ರತೆಯ ದೃಷ್ಟಿಯಿಂದ ಚಿತ್ರತಂಡ ಯಾವುದೇ ಮಾಹಿತಿಯನ್ನು ಹಂಚಿಕೊಂಡಿರಲಿಲ್ಲ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಂಗಳೂರಿಗೆ ಬಂದಿಳಿದ ಸೂಪರ್ ಸ್ಟಾರ್ ರಜನಿಕಾಂತ್

    ಮಂಗಳೂರಿಗೆ ಬಂದಿಳಿದ ಸೂಪರ್ ಸ್ಟಾರ್ ರಜನಿಕಾಂತ್

    ಮಿಳು ಸೂಪರ್ ಸ್ಟಾರ್ ರಜನಿಕಾಂತ್ ನಿನ್ನೆ ರಾತ್ರಿ ಮಂಗಳೂರಿಗೆ ಬಂದಿಳಿದಿದ್ದಾರೆ. ಖಾಸಗಿ ಕಾರ್ಯಕ್ರಮ ಮತ್ತು ಸಿನಿಮಾದ ಶೂಟಿಂಗ್ ಗಾಗಿ ಅವರು ಮಂಗಳೂರಿಗೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ನಿನ್ನೆ ರಾತ್ರಿ ಮಂಗಳೂರು ಏರ್ ಪೋರ್ಟಿಗೆ ಬಂದಾಗ  ಅಸಂಖ್ಯಾತ ಅಭಿಮಾನಿಗಳು ಅವರಿಗಾಗಿ ಕಾಯುತ್ತಿದ್ದರು. ಅಭಿಮಾನಿಗಳತ್ತ ಕೈ ಬೀಸಿ ಕಾರಿನಲ್ಲಿ ರಜನಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.

    ರಜನಿಕಾಂತ್ ನಟನೆಯ ಜೈಲು ಸಿನಿಮಾದ ಶೂಟಿಂಗ್ ಗಾಗಿ ಅವರು ಮಂಗಳೂರಿಗೆ ಬಂದಿದ್ದು, ಜೊತೆಗೆ ಮಂಗಳೂರಿನ ಹಲವು ದೇವಸ್ಥಾನಗಳಿಗೂ ಅವರು ಭೇಟಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಮಂಗಳೂರಿಗೆ ಸಿನಿಮಾ ಚಿತ್ರೀಕರಣ ನಡೆಯಲಿದೆ. ಈ ಶೂಟಿಂಗ್ ಮಧ್ಯೆಯೂ ಅವರು ಮಂಗಳೂರಿನ ಪ್ರಮುಖ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಇದನ್ನೂ ಓದಿ: ಆರೋಗ್ಯದ ಬಗ್ಗೆ ಅಪ್‌ಡೇಟ್ ನೀಡಿದ ನಟಿ ಸಮಂತಾ

    ರಜನಿಕಾಂತ್ ಜೊತೆ ಕನ್ನಡದ ಹೆಸರಾಂತ ನಟ ಶಿವರಾಜ್ ಕುಮಾರ್ ಕೂಡ ಭಾಗಿಯಾಗಲಿದ್ದು, ಇದೇ ಮೊದಲ ಬಾರಿಗೆ ಶಿವರಾಜ್ ಕುಮಾರ್, ಈ ಸಿನಿಮಾದಲ್ಲಿ ತೆರೆಹಂಚಿಕೊಳ್ಳುತ್ತಿದ್ದಾರೆ. ಇಂದು ಶಿವರಾಜ್ ಕುಮಾರ್ ಕೂಡ ಮಂಗಳೂರಿಗೆ ತೆರಳಿದ್ದಾರೆ. ರಜನಿ ಮತ್ತು ಶಿವಣ್ಣ ಭಾಗದ ಚಿತ್ರೀಕರಣದಲ್ಲಿ ಮಂಗಳೂರಿನಲ್ಲಿ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಭದ್ರತೆಯ ದೃಷ್ಟಿಯಿಂದ ಚಿತ್ರತಂಡ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಂಗಳೂರಿಗೆ ಬಂದಿಳಿದ ತಲೈವಾ ರಜನಿಕಾಂತ್ : ಕರಾವಳಿಯಲ್ಲಿ ‘ಜೈಲರ್’ ಶೂಟಿಂಗ್

    ಮಂಗಳೂರಿಗೆ ಬಂದಿಳಿದ ತಲೈವಾ ರಜನಿಕಾಂತ್ : ಕರಾವಳಿಯಲ್ಲಿ ‘ಜೈಲರ್’ ಶೂಟಿಂಗ್

    ಮಿಳಿನ ಖ್ಯಾತ ನಟ ರಜನಿಕಾಂತ್ (Rajinikanth) ಇಂದು ಬೆಳಗ್ಗೆ ಮಂಗಳೂರಿಗೆ (Mangalore) ಬಂದಿಳಿದಿದ್ದಾರೆ. ಅವರ ಮುಖ್ಯಭೂಮಿಕೆಯ ಜೈಲರ್ ಸಿನಿಮಾದ ಶೂಟಿಂಗ್ (Shooting) ಎರಡು ದಿನಗಳ ಕಾಲ ಮಂಗಳೂರಿನಲ್ಲಿ ನಡೆಯಲಿದ್ದು, ಈ ಭಾಗದ ಚಿತ್ರೀಕರಣಕ್ಕಾಗಿ ಅವರು ತಮ್ಮ ತಂಡದೊಂದಿಗೆ ಕರಾವಳಿಗೆ ಪಾದ ಬೆಳೆಸಿದ್ದಾರೆ. ಕರಾವಳಿಯ ಹಲವು ಭಾಗಗಳಲ್ಲಿ ‘ಜೈಲರ್’ (Jailer) ಸಿನಿಮಾದ ಕೆಲ ದೃಶ್ಯಗಳನ್ನು ಸೆರೆ ಹಿಡಿಯಲಾಗುತ್ತಿದೆ ಎನ್ನುವುದು ಸದ್ಯಕ್ಕೆ ಸಿಕ್ಕಿರುವ ಮಾಹಿತಿ.

    ಈ ಸನ್ನಿವೇಶದಲ್ಲಿ ನಟ ಶಿವರಾಜ್ ಕುಮಾರ್ (Shivraj Kumar) ಕೂಡ ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಜೈಲರ್ ಸಿನಿಮಾದಲ್ಲಿ ರಜನಿಕಾಂತ್ ಜೊತೆ ಶಿವರಾಜ್ ಕುಮಾರ್ ಕೂಡ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದು, ಮಂಗಳೂರಿನಲ್ಲಿ ನಡೆಯುವ ಚಿತ್ರೀಕರಣದಲ್ಲಿ ಈ ಜೋಡಿ ಜೊತೆಯಾಗಿ ಕ್ಯಾಮೆರಾ ಎದುರಿಸಲಿದೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆಯೇ ಅಭಿಮಾನಿಗಳ ದಂಡೇ ನಟನನ್ನು ಸುತ್ತುವರೆದಿದೆ. ಹೀಗಾಗಿ ಶೂಟಿಂಗ್ ನಡೆಯುವ ಸ್ಥಳಗಳಲ್ಲಿ ಭಾರೀ ಬಿಗಿಭದ್ರತೆ ಕಲ್ಪಿಸಲಾಗುತ್ತಿದೆ. ಇದನ್ನೂ ಓದಿ: ದುಶ್ಚಟಗಳಿಗೆ ದಾಸನಾಗಿದ್ದ ನನ್ನನ್ನು ಸರಿದಾರಿಗೆ ತಂದಿದ್ದು ನನ್ನ ಪತ್ನಿ: ರಜನಿಕಾಂತ್

    ರಜನಿಕಾಂತ್ ನಟನೆಯ 169ನೇ ಸಿನಿಮಾ ಇದಾಗಿದ್ದು, ಇದೇ ಮೊದಲ ಬಾರಿಗೆ ರಜನಿ ಮತ್ತು ಶಿವರಾಜ್ ಕುಮಾರ್ ಜೊತೆಯಾಗಿದ್ದಾರೆ. ಹಾಗಾಗಿ ಸಹಜವಾಗಿಯೇ ಸಿನಿಮಾ ಬಗ್ಗೆ ಈಗಿನಿಂದಲೇ ಕುತೂಹಲ ಹೆಚ್ಚಾಗಿದೆ. ಸಾಕಷ್ಟು ಅಚ್ಚರಿಗಳನ್ನು ಈ ಸಿನಿಮಾ ಹೊತ್ತು ತರಲಿದ್ದು, ಹೆಸರಾಂತ ತಾರಾಬಳಗವನ್ನೇ ಸಿನಿಮಾ ಹೊಂದಿದೆ. ಐಶ್ವರ್ಯ ರೈ ಕೂಡ ಈ ಸಿನಿಮಾದಲ್ಲಿ ಮಹತ್ವದ ಪಾತ್ರವನ್ನು ಮಾಡಲಿದ್ದಾರಂತೆ.

    ಸಿನಿಮಾದಲ್ಲಿ ಒಟ್ಟು ನಾಲ್ವರು ನಾಯಕಿಯರು ಇರಲಿದ್ದು, ನೆಲ್ಸನ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದೆ. ಮಾಸ್ಟರ್ ಅನಿರುದ್ಧ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬರಲಿದ್ದು, ರಮ್ಯಾ ಕೃಷ್ಣ, ತಮನ್ನಾ ಸೇರಿದಂತೆ ಹಲವು ಕಲಾವಿದರು ತಾರಾಗಣದಲ್ಲಿ ಇರಲಿದ್ದಾರೆ. ಸನ್ ಪಿಕ್ಚರ್ಸ್ ಬ್ಯಾನರ್ ನಲ್ಲಿ ಚಿತ್ರ ತಯಾರಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಂಗಳೂರು ಬೆಡಗಿಗೆ ಒಲಿಯುತ್ತಾ ಭುವನ ಸುಂದರಿ ಕಿರೀಟ?

    ಮಂಗಳೂರು ಬೆಡಗಿಗೆ ಒಲಿಯುತ್ತಾ ಭುವನ ಸುಂದರಿ ಕಿರೀಟ?

    ಕ್ಷಿಣ ಅಮೆರಿಕಾ ಲೌಸಿಯಾನಾ ರಾಜ್ಯದ ನ್ಯೂ ಆರಿಲಿನ್ಸ್ ನಗರದ ಎರ್ನೆಸ್ಟ್ ಎನ್ ಮೋರಿಯಲ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು ಭಾರತೀಯ ಕಾಲಮಾನ ಪ್ರಕಾರ ಬೆಳಗ್ಗೆ 6.30ಕ್ಕೆ 71ನೇ ಭುವನ ಸುಂದರಿ ಸ್ಪರ್ಧೆಯು ನಡೆಯುತ್ತಿದೆ. ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ನಾನಾ ದೇಶಗಳ 86 ಸುಂದರಿಯರು ಭಾಗಿ ಆಗಿದ್ದು, ಭಾರತದಿಂದ ಮಂಗಳೂರು ಮೂಲದ ದಿವಿತಾ ರೈ ಕೂಡ ಭಾಗಿಯಾಗಿದ್ದಾರೆ. ಈ ಬಾರಿಯ ಭುವನ ಸುಂದರಿ ಕಿರೀಟ ದಿವಿತಾಗೆ ಬರಲಿ ಎಂದು ಅಸಂಖ್ಯಾತ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

    ಈಗಾಗಲೇ ಹಲವು ಸುತ್ತುಗಳಲ್ಲಿ ದಿವಿತಾ ಭಾಗಿಯಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಅಂತಿಮ ಸುತ್ತಿನವರೆಗೂ ಅವರು ಬಂದು ಭುವನ ಸುಂದರಿ ಆಗುತ್ತಾರಾ ಎನ್ನುವ ಕಾತುರ ಎಲ್ಲರದ್ದು. ಈಗಾಗಲೇ ಹಲವು ಟೈಟಲ್ ಗಳನ್ನು ಇವರು ಗೆದ್ದಿರುವುದರಿಂದ ಆಯ್ಕೆ ಸುಲಭವಾಗಬಹುದು ಎಂದು ಹೇಳಲಾಗುತ್ತಿದೆ. ಹಾಗಾಗಿ ಎಲ್ಲರ ಚಿತ್ತ ದಿವಿತಾ ಧರಿಸುವ ಕಿರೀಟದ ಮೇಲಿದೆ. ಇದನ್ನೂ ಓದಿ: ಸಂಕ್ರಾಂತಿ ಸಂಭ್ರಮಕ್ಕಾಗಿ ಮತ್ತೆ ಜೊತೆಯಾದ ಬಿಗ್ ಬಾಸ್ ಸ್ಪರ್ಧಿಗಳು

    ಈಗಾಗಲೇ 2022ರಲ್ಲಿ ‘ದಿವಾ ಮಿಸ್ ಯೂನಿವರ್ಸ್’ ಟೈಟಲ್ ಅನ್ನು ಗೆದ್ದಿರುವ ದಿವಿತಾ ರೈ ಮತ್ತು ಕುಟುಂಬ ನೆಲೆಸಿರುವುದು ಮುಂಬೈನಲ್ಲಿ. ಹಾಗಾಗಿ ಮುಂಬೈನಲ್ಲಿ ಇವರು ವಿದ್ಯಾಭ್ಯಾಸ ಮುಗಿಸಿದ್ದಾರೆ. ಜೆಜೆ ಕಾಲೇಜ್ ಆಫ್ ಇಂಜಿನಿಯರಿಂಗ್ ನಲ್ಲಿ ಆರ್ಕಿಟೆಕ್ಚರ್ ಪದವಿಯನ್ನು ಪೂರೈಸಿರುವ ಇವರು ಹತ್ತಾರು ಹವ್ಯಾಸಗಳನ್ನು ಹೊಂದಿದ್ದಾರೆ. ಅವರೇ ಹೇಳಿಕೊಂಡಂತೆ ಬ್ಯಾಡ್ ಮಿಂಟನ್ ಆಟಗಾರ್ತಿ, ಚಿತ್ರಕಲೆಯಲ್ಲೂ ಆಸಕ್ತಿ ಹೊಂದಿದ್ದಾರೆ. ಮಾಡೆಲಿಂಗ್ ಅನ್ನು ವೃತ್ತಿಯನ್ನಾಗಿ ಸ್ವೀಕರಿಸಿದ್ದಾರೆ.

    2021ರಲ್ಲಿ ಭುವನ ಸುಂದರಿ ಟೈಟಲ್ ಅನ್ನು ಭಾರತದವರೇ ಆದ ಹರ್ನಾಜ್ ಸಂಧು ಗೆದ್ದಿದ್ದರು. ಈ ಬಾರಿ ದಿವಿತಾ ರೈ ಗೆ ಅಂಥದ್ದೊಂದು ಕಿರೀಟ ಗೆಲ್ಲುವ ಅವಕಾಶ ಸಿಕ್ಕಿದೆ. ಈ ಬಾರಿಯ ಭುವನ ಸುಂದರಿ ಕಿರೀಟ ಯಾರ ಪಾಲಾಗುತ್ತದೆಯೋ ಕಾದು ನೋಡಬೇಕು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k