Tag: Mangalore riots

  • ಮಂಗಳೂರು ಶಾಂತವಾಗಿದೆ, ಗಲಭೆ ಎಬ್ಬಿಸಬೇಡಿ – ಎಚ್‍ಡಿಕೆಗೆ ಶೋಭಾ ತಿರುಗೇಟು

    ಮಂಗಳೂರು ಶಾಂತವಾಗಿದೆ, ಗಲಭೆ ಎಬ್ಬಿಸಬೇಡಿ – ಎಚ್‍ಡಿಕೆಗೆ ಶೋಭಾ ತಿರುಗೇಟು

    ಚಿಕ್ಕಬಳ್ಳಾಪುರ: ನಮ್ಮ ಮಂಗಳೂರು ಶಾಂತವಾಗಿದೆ ಚೆನ್ನಾಗಿದೆ. ರಾಜ್ಯದಲ್ಲಿ ಗಲಭೆ ಎಬ್ಬಿಸುವ ಕೆಲಸ ಮಾಡಬೇಡಿ ಎಂದು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿಗೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ.

    ಚಿಕ್ಕಬಳ್ಳಾಪುರ ನಗರದಲ್ಲಿ ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ, ದಯಮಾಡಿ ಮಾಜಿ ಸಿಎಂ ಎಚ್‍ಡಿಕೆ ಸಿಡಿ ಬಿಡುಗಡೆ ಮಾಡಲಿ. ಆದರೆ ಸಿಡಿ ಅದ್ಯಾವ ಕಾರ್ಯಕರ್ತರು ಯಾವ ಪೊಲೀಸರು ಕೊಟ್ಟರು ಎಂಬುದು ಪತ್ತೆ ಆಗಬೇಕು. ಈಗಾಗಲೇ ಯಾರು ಕಲ್ಲು ತಂದ್ದರು ಯಾವ ಟೆಂಪೋ ಲಾರಿಯಲ್ಲಿ ತಂದರು. ಪೆಟ್ರೋಲ್ ಯಾರು ತಂದ್ದರು ಗೊತ್ತಾಗಿದೆ. ಈ ಸತ್ಯಾಂಶವನ್ನು ಹೇಳುವಂತಹ ಸಿಡಿಯನ್ನು ಎಚ್‍ಡಿಕೆ ಬಿಡುಗಡೆ ಮಾಡಲಿ ಎಂದರು. ಇದನ್ನು ಓದಿ: ಮಂಗ್ಳೂರನ್ನು ‘ಕಾಶ್ಮೀರ’ ಮಾಡಲು ಹೊರಟಿದೆ, ಇದನ್ನು ತೋರಿಸಲು 35 ವಿಡಿಯೋ ರಿಲೀಸ್ – ‘ಸಿಡಿ’ದ ಎಚ್‍ಡಿಕೆ

    ಎಚ್‍ಡಿಕೆ ಮತ್ತು ಜೆಡಿಎಸ್‍ನವರ ಅಸ್ತಿತ್ವ ಮಂಗಳೂರಲ್ಲಿ ಏನೂ ಇಲ್ಲ. ಮಂಗಳೂರಿನಲ್ಲಿ ಅಸ್ತಿತ್ವ ಪಡೆಯೋಕೆ ಆಗೋದು ಇಲ್ಲ. ಹೀಗಾಗಿ ರಾಜ್ಯದಲ್ಲಿ ಗಲಭೆ ಎಬ್ಬಿಸುವ ಪ್ರಯತ್ನ ಮಾಡಬೇಡಿ. ನಮ್ಮ ಮಂಗಳೂರು ಶಾಂತವಾಗಿದೆ ಚೆನ್ನಾಗಿದೆ. ಕೇರಳದಿಂದ ಬಂದು ಕಲ್ಲೆಸೆದು ಉದ್ದೇಶಪೂರ್ವಕವಾಗಿ ಗಲಭೆ ಮಾಡಿದವರ ಪತ್ತೆ ಮಾಡಲು ಎಚ್‍ಡಿಕೆ ಸಹಕಾರ ಕೊಡಲಿ ಎಂದು ಹೇಳಿದರು.

  • ತನಿಖೆ ದಾರಿ ತಪ್ಪಿಸಲು ಮಂಗಳೂರು ಗಲಭೆಯ ಆಯ್ದ ವಿಡಿಯೋಗಳನ್ನ ಬಿಡುಗಡೆ ಮಾಡಿದ್ದಾರೆ: ಸಿದ್ದು

    ತನಿಖೆ ದಾರಿ ತಪ್ಪಿಸಲು ಮಂಗಳೂರು ಗಲಭೆಯ ಆಯ್ದ ವಿಡಿಯೋಗಳನ್ನ ಬಿಡುಗಡೆ ಮಾಡಿದ್ದಾರೆ: ಸಿದ್ದು

    ಬೆಂಗಳೂರು: ಮಂಗಳೂರು ಪೊಲೀಸರು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಡಿಸೆಂಬರ್ 19ರಂದು ನಡೆದ ಪ್ರತಿಭಟನೆಯ ಫೋಟೋ ಮತ್ತು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಮಂಗಳೂರು ಪೊಲೀಸರು ಬಿಡುಗಡೆ ಮಾಡಿರುವ ವಿಡಿಯೋ, ಫೋಟೋಗಳ ಬಗ್ಗೆ ಭಾರಿ ಚರ್ಚೆ ಆರಂಭವಾಗಿದೆ.

    ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು ಮಂಗಳೂರು ಗಲಭೆಯ ಆಯ್ದ ವಿಡಿಯೋಗಳನ್ನು ಪೊಲೀಸರು ಸೋರಿಕೆ ಮಾಡಿ, ತನಿಖೆಯ ದಾರಿ ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ತಮ್ಮಲ್ಲಿರುವ ಸಾಕ್ಷ್ಯಗಳನ್ನು ಮೊದಲು ತನಿಖಾಧಿಕಾರಿಗಳಿಗೆ ಒಪ್ಪಿಸಬೇಕಿತ್ತು. ಈ ಕಾರಣಕ್ಕಾಗಿಯೇ ಸಿಐಡಿ ತನಿಖೆ ಒಂದು ನಾಟಕ ಎಂದು ಟ್ವಿಟ್ಟರ್ ನಲ್ಲಿ ಕಿಡಿಕಾರಿದ್ದಾರೆ.

    ಈ ವಿಚಾರವಾಗಿ ಎರಡು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮಂಗಳೂರು ಗಲಭೆಯ ಆಯ್ದ ವಿಡಿಯೋಗಳನ್ನು ಪೊಲೀಸರು ಸೋರಿಕೆ ಮಾಡಿ, ತನಿಖೆಯ ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ತಮ್ಮಲ್ಲಿರುವ ಸಾಕ್ಷ್ಯಗಳನ್ನು ಮೊದಲು ತನಿಖಾಧಿಕಾರಿಗಳಿಗೆ ಒಪ್ಪಿಸಬೇಕಿತ್ತು. ಈ ಕಾರಣಕ್ಕಾಗಿಯೇ ಸಿಐಡಿ ತನಿಖೆ ಒಂದು ನಾಟಕ, ಅದರ ಬದಲಿಗೆ  ನ್ಯಾಯಾಂಗ ತನಿಖೆ ಮಾಡಿ ಎಂದು ನಾನು ಒತ್ತಾಯಿಸಿದ್ದು ಎಂದು ಟ್ವೀಟ್ ಮಾಡಿದ್ದಾರೆ.

    ಇದರ ಜೊತೆಗೆ ಇನ್ನೊಂದು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮಂಗಳೂರು ಗಲಭೆಯ ತಪ್ಪಿತಸ್ಥರು ಯಾರೇ ಇರಲಿ, ತನಿಖೆ ನಡೆಸಿ ಅವರನ್ನು ಶಿಕ್ಷೆಗೊಳಪಡಿಸಬೇಕು. ಆದರೆ ಆಯ್ದ ವಿಡಿಯೋಗಳನ್ನು ಲೀಕ್ ಮಾಡಿ ಅದರ ಮೂಲಕ ಒಂದು ಧರ್ಮದ ಜನರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಸಲ್ಲದು. ಶಾಂತಿ-ಸೌಹಾರ್ದತೆ ಕಾಪಾಡಬೇಕಾಗಿರುವ ಪೊಲೀಸರೇ ಸೌಹಾರ್ದ ಕೆಡಿಸುವ ಕೆಲಸ ಮಾಡುತ್ತಿರುವುದು ಸರಿ ಅಲ್ಲ ಎಂದು ಹೇಳಿದ್ದಾರೆ.

    ಈಗಾಗಲೇ ಎನ್.ಆರ್.ಸಿ ಹಾಗೂ ಸಿಎಎ ಜಾರಿಯಿಂದ ಮಂಗಳೂರಿನಲ್ಲಿ ಆಗಿರುವ ಪ್ರತಿಭಟನೆ ಮತ್ತು ಗೋಲಿಬಾರ್ ಪ್ರಕರಣವನ್ನು ಮುಖ್ಯಮಂತ್ರಿಗಳು ಸಿಐಡಿ ತನಿಖೆಗೆ ಆದೇಶಿದ್ದಾರೆ. ಆದರೆ ಸಿದ್ದರಾಮಯ್ಯನವರು ಸಿಐಡಿ ತನಿಖೆಯನ್ನು ವಿರೋಧಿಸಿದ್ದು, ಸಿಐಡಿ ತನಿಖೆ ಎನ್ನುವುದು ನಾಟಕ ಅದರ ಬದಲು ನ್ಯಾಯಾಂಗ ತನಿಖೆ ಮಾಡಿ ಎಂದು ಅವರು ಒತ್ತಾಯಿಸಿದ್ದರು.

    ಈಗಾಗಲೇ ಪೋಲಿಸರು ವಿಡಿಯೋ ಬಿಡುಗಡೆ ಮಾಡಿರುವುದರ ಬಗ್ಗೆ ಪ್ರತಿಪಕ್ಷದ ನಾಯಕರು, ಶಾಸಕರು ಹೇಳಿಕೆ ನೀಡುತ್ತಿದ್ದು, ಈ ಕುರಿತು ಪ್ರಶ್ನೆ ಮಾಡ್ತಾ ಇದ್ದಾರೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಟ್ವೀಟ್ ಮಾಡಿ ಈ ವಿಡಿಯೋಗಳು ಮಂಗಳೂರು ಗಲಭೆಯೋ ಅಥವಾ ಯಾವ ಗಲಭೆ ವಿಡಿಯೋನೋ ಗೊತ್ತಿಲ್ಲ ಎಂದು ಪ್ರಶ್ನೆಗಳ ಸುರಿಮಳೆಯನ್ನು ಸುರಿಸಿದ್ದಾರೆ.