ಸಾಮಾಜಿಕ ಜಾಲತಾಣಗಳಲ್ಲಿ ತಿಮರೋಡಿ ಗಡಿಪಾರು ವಿರುದ್ಧ ಪ್ರತಿಭಟನೆ ಅಂತಾ ಕರೆ ನೀಡಲಾಗಿತ್ತು. ಪೊಲೀಸರಿಂದ ಅನುಮತಿ ಸಿಗದೇ ಇದ್ದರೂ ಜನ ಸೇರುವಂತೆ ಕರೆ ಕೊಡಲಾಗಿತ್ತು. ಇದರಿಂದ ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗಲಿದೆ ಎಂದು ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದಾರೆ.
– ಸಿಎಂ ಆಗಿ ಮುಂದುವರಿಯುವುದರಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ
ಮಂಗಳೂರು/ಬೆಂಗಳೂರು: ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು (Hatred Speech) ಯಾರು ಮಾಡಿದರೂ ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.
ಕಲ್ಲಡ್ಕ ಪ್ರಭಾಕರ್ ಭಟ್ (Kalladka Prabhakar Bhat) ಅವರ ಭಾಷಣದ ಬಗ್ಗೆ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್‌ಐಆರ್ ದಾಖಲಾಗುತ್ತದೆ. ಅವರು ಭಾಷಣದಲ್ಲಿ ಮಹಿಳೆಯರಿಗೆ ಅಗೌರವವಾಗಿ ಮಾತನಾಡಿದ್ದಾರೆ ಎಂದರು. ಇದನ್ನೂ ಓದಿ: CJI ಗವಾಯಿ ಮೇಲೆ ಶೂ ಎಸೆದ ಕೇಸ್ – ಆರೋಪಿ ರಾಕೇಶ್‌ಗೆ ನೋಟಿಸ್ ನೀಡಲು ನಿರಾಕರಿಸಿದ ಸುಪ್ರೀಂ
ಧರ್ಮಸ್ಥಳ ಪ್ರಕರಣದ ಬಗ್ಗೆ ಎಸ್‌ಐಟಿ ವರದಿ ಸಲ್ಲಿಕೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಎಸ್‌ಐಟಿಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಈ ತಿಂಗಳಾಂತ್ಯದಲ್ಲಿ ಎಸ್‌ಐಟಿ ವರದಿಯ ಸಲ್ಲಿಕೆಯಾಗಲಿದೆ ಎಂದು ಎಸ್‌ಐಟಿ ಹೇಳಿದೆ ಎಂದು ಗೃಹಸಚಿವರು ತಿಳಿಸಿರುವುದಾಗಿ ಹೇಳಿದರು. ಇದನ್ನೂ ಓದಿ: ಡಿಕೆಶಿ, JDS ಟ್ರಂಕ್ ವಾರ್ – ಹೆಚ್‌ಡಿಕೆ ಸಾಧನೆ ಪಟ್ಟಿ ಬಿಡುಗಡೆ ಮಾಡಿ ಟಾಂಗ್
ವಾರ್ತಾ ಇಲಾಖೆಗೆ ವಾಹನ ಸೌಲಭ್ಯದ ಬಗ್ಗೆ ಪ್ರತಿಕ್ರಿಯೆ ನೀಡಿ, ಪತ್ರಕರ್ತರ ಅನುಕೂಲಕ್ಕಾಗಿ ವಾರ್ತಾ ಇಲಾಖೆ ವಾಹನ ಒದಗಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದರು. ಇದನ್ನೂ ಓದಿ: 21 ವರ್ಷದ ಬಳಿಕ ದೇಶಾದ್ಯಂತ ಎಸ್‌ಐಆರ್: ಚುನಾವಣಾ ಆಯೋಗ
ಹೈಕಮಾಂಡ್‌ನದ್ದೇ ಅಂತಿಮ ತೀರ್ಮಾನ:
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿವಿಧ ಸಚಿವರು ಹೇಳಿಕೆ ನೀಡುತ್ತಿರುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾ, ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್‌ಗೆ ಸೇರಿದ್ದಾಗಿದೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿಯೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ತಿಳಿಸಿದರು. ಇದನ್ನೂ ಓದಿ: ಬ್ರಿಮ್ಸ್ ವೈದ್ಯರಿಗೆ 9 ತಿಂಗಳಿಂದ ನೋ ಸ್ಯಾಲರಿ – ಇತ್ತ ನೋಟಿಸ್ ನೀಡದೇ 40 ವೈದ್ಯರು ಕೆಲಸದಿಂದ ವಜಾ
ಆಳ ಸಮುದ್ರದಲ್ಲಿ ಸ್ಟೇರಿಂಗ್ ಹಾಗೂ ಗೇರ್‌ನ ವೈಫಲ್ಯದಿಂದಾಗಿ ಮೀನುಗಾರಿಕಾ ಬೋಟ್ ಅಪಾಯಕ್ಕೆ ಸಿಲುಕಿತ್ತು. ಆಳ ಸಮುದ್ರದಲ್ಲಿ ತೂಫಾನ್ ನಡುವೆ ಸಿಲುಕಿ ಮೀನುಗಾರಿಕಾ ಬೋಟ್‌ನಲ್ಲಿದ್ದ 31 ಮೀನುಗಾರರು ಅಪಾಯದಲ್ಲಿದ್ದರು.
ಸಮುದ್ರ ತಟದಿಂದ 100 ನಾಟಿಕಲ್ ಮೈಲ್ಸ್ ದೂರುದಲ್ಲಿ ಬೋಟ್ ಅಪಾಯಕ್ಕೆ ಸಿಲುಕಿತ್ತು. ಆಳ ಸಮುದ್ರದಲ್ಲಿ ಅಪಾಯದಲ್ಲಿದ್ದ ಬೋಟನ್ನು ಕೋಸ್ಟ್ ಗಾರ್ಡ್‌ನ ಡೋನಿಯರ್ ಗಸ್ತು ವಿಮಾನ ಪತ್ತೆ ಮಾಡಿತ್ತು. ಮೀನುಗಾರಿಕಾ ಬೋಟ್ ಬಗ್ಗೆ ಕಡಲಲ್ಲಿ ಗಸ್ತು ತಿರುಗುತ್ತಿದ್ದ ICGS ಕಸ್ತೂರ ಬಾ ಗಾಂಧಿ ಹಡಗಿಗೆ ಮಾಹಿತಿ ರವಾನಿಸಿತು. ಇದನ್ನೂ ಓದಿ: ಗ್ಯಾರಂಟಿ ಭಾಗ್ಯ ಕೊಟ್ಟ ಸರ್ಕಾರದಿಂದ ಕತ್ತಲೆ ಭಾಗ್ಯ – ಸ್ಥಳೀಯರ ಆಕ್ರೋಶ
ಪ್ರತಿಕೂಲ ಹವಾಮಾನ ನಡುವೆ ಕಾರ್ಯಾಚರಣೆ ನಡೆಸಿದ ಭಾರತೀಯ ತಟ ರಕ್ಷಣಾ ಪಡೆಯ ಯೋಧರು, ಅಪಾಯದಲ್ಲಿ ಮೀನುಗಾರರನ್ನು ರಕ್ಷಿಸಿದರು. ಹಾನಿಗೊಂಡಿದ್ದ ಮೀನುಗಾರಿಕಾ ಬೋಟನ್ನು ಹೊನ್ನಾವರ ಮೀನುಗಾರಿಕಾ ಬಂದರಿಗೆ ಎಳೆತಂದು ನಿಲ್ಲಿಸಿದರು.
ಜು.20 ರಂದು ಎಸ್‌ಐಟಿ ರಚನೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿತ್ತು. ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣಗಳ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿತ್ತು. ಅದಾದ ಬಳಿಕ ತನಿಖೆಯ ಭಾಗವಾಗಿ ಸಾಕಷ್ಟು ಬೆಳವಣಿಗೆಗಳು ಕೂಡ ನಡೆದಿದ್ದವು. ತದನಂತರ ದೂರು ಕೊಟ್ಟವರೇ ಉಲ್ಟಾ ಹೊಡೆದು ಪ್ರಕರಣದ ತಿರುವನ್ನೇ ಬದಲಾಯಿಸಿದ್ದರು.
ಆದರೆ ಈಗ 100 ದಿನಗಳ ಬಳಿಕ ಎಸ್‌ಐಟಿ ವರದಿ ಕುತೂಹಲ ಹೆಚ್ಚಿದ್ದು, ಎಲ್ಲರ ಅಸಲಿಯತ್ತು ಬಯಲಾಗುತ್ತಾ ಕಾದುನೋಡಬೇಕಿದೆ.
– ಯುವಕನ ಡೆತ್‌ನೋಟ್‌ನಲ್ಲಿ ಬಯಲಾಯ್ತು ರಹಸ್ಯ
– ವಾಟ್ಸಪ್ ಗ್ರೂಪ್‌ನಲ್ಲಿ ವಿಡಿಯೋ ಹರಿಬಿಟ್ಟ ಬಳಿಕ ದೂರು
ಮಂಗಳೂರು: ಒಂದೇ ಮನೆಯಲ್ಲಿ ವಾಸವಿದ್ದ ಸಂದರ್ಭದಲ್ಲಿ, ಯುವತಿಯರಿಬ್ಬರ ಖಾಸಗಿ ವಿಡಿಯೊವನ್ನ ಇನ್ನೊಬ್ಬಾಕೆ ಚಿತ್ರೀಕರಿಸಿ, ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಆರೋಪದ ಮೇಲೆ ಯುವತಿಯೊಬ್ಬಳನ್ನ ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕಲಶದ ನಿರೀಕ್ಷಾ ಬಂಧಿತ ಯುವತಿ. ಮಂಗಳೂರಿನ ಕುದ್ಕೋರಿಗುಡ್ಡೆಯ ಬಾಡಿಗೆ ಮನೆಯೊಂದರಲ್ಲಿ ಗೆಳತಿ ಜೊತೆ ವಾಸವಿದ್ದ ನಿರೀಕ್ಷಾ ಉದ್ಯೋಗ ಮಾಡಿಕೊಂಡಿದ್ದಳು. ಈ ವೇಳೆ ಗೆಳತಿಯ ಖಾಸಗಿ ದೃಶ್ಯವನ್ನ ವಿಡಿಯೊ ಮಾಡಿಟ್ಟುಕೊಂಡಿದ್ದಳು. ಆ ವಿಡಿಯೊ ಈಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.
ಯುವತಿಯರು ಬಟ್ಟೆ ಬದಲಿಸುವ ವಿಡಿಯೋ ಮಾಡಿಟ್ಟುಕೊಂಡಿದ್ದ ಆರೋಪಿ ನಿರೀಕ್ಷಾ ಉಡುಪಿ ಜಿಲ್ಲೆಯ ಕಾರ್ಕಳ ನಿವಾಸಿ ಅಭಿಷೇಕ್ ಎಂಬಾತನಿಗೆ ಕಳುಹಿಸಿದ್ದಳಂತೆ. ಅಭಿಷೇಕ್ ಮಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಶಿಯನ್ ಆಗಿದ್ದ. ಆದ್ರೆ ಕಳೆದ ಅಕ್ಟೋಬರ್ 9ರಂದು ಕಾರ್ಕಳದಲ್ಲಿ ಅಭಿಷೇಕ್ ಸುಧೀರ್ಘ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ಡೆತ್‌ನೋಟ್‌ನಲ್ಲಿ ನಿರೀಕ್ಷಾ ಹಾಗೂ ಇತರರ ವಿರುದ್ಧ ಮೃತ ಅಭಿಷೇಕ್ ಹನಿಟ್ರ್ಯಾಪ್ ಆರೋಪ ಮಾಡಿದ್ದ.
ನಿರೀಕ್ಷಾ ತನ್ನ ರೂಮಿನಲ್ಲಿದ್ದ ಇಬ್ಬರು ಯುವತಿಯರ ವಿಡಿಯೋ ಮಾಡಿ ವೈರಲ್ ಮಾಡಿದ್ದ ಬಗ್ಗೆಯೂ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದ. ಸಾಯುವ ಮುನ್ನ truth group ಹೆಸರಿನ ವಾಟ್ಸಪ್ ಗ್ರೂಪ್ ಮಾಡಿ ಅದರಲ್ಲಿ ಕೆಲ ವಿಡಿಯೋಗಳನ್ನೂ ಹರಿಬಿಟ್ಟಿದ್ದ. ಅದರಲ್ಲಿ ಈ ಇಬ್ಬರ ಯುವತಿಯರ ವಿಡಿಯೋ ಕೂಡ ಇದ್ದ ಹಿನ್ನೆಲೆ ಕದ್ರಿ ಠಾಣೆಗೆ ಸಂತ್ರಸ್ತೆಯರು ದೂರು ನೀಡಿದ್ದರು.
ಒಂದು ವರ್ಷದ ಹಿಂದೆಯೇ ವಿಡಿಯೋ ಮಾಡಿರುವ ಸಾಧ್ಯತೆಗಳಿದೆ ಎನ್ನಲಾಗಿದೆ. ಸದ್ಯ ನಿರೀಕ್ಷಾಳನ್ನು ಬಂಧಿಸಿರುವ ಕದ್ರಿ ಪೊಲೀಸರು ಬಿಎನ್ ಎಸ್ 77, 78(2), 294(2)(ಚಿ) ಅಡಿ ದಾಖಲಾಗಿದ್ದ ಪ್ರಕರಣ ದಾಖಲಿಸಿದ್ದಾರೆ. ಅತ್ತ ಉಡುಪಿಯ ಕಾರ್ಕಳ ಪೊಲೀಸರು ಈಗಾಗಲೇ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಭಾಗವಹಿಸಿದ್ದ ʻಅಶೋಕ ಜನಮನ -2025ʼ ಹಾಗೂ ದೀಪಾವಳಿ ಪ್ರಯುಕ್ತ ವಸ್ತ್ರದಾನ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಸಂಭವಿಸಿ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮಹಿಳೆಯರು ಮಕ್ಕಳು ಸೇರಿ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.
ಹೌದು. ಪುತ್ತೂರು ಶಾಸಕ ಅಶೋಕ್ ರೈ (Ashok Rai) ಮಾಲೀಕತ್ವದ ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ʻಅಶೋಕ ಜನಮನ -2025ʼ ಹಾಗೂ ದೀಪಾವಳಿ ಪ್ರಯುಕ್ತ ವಸ್ತ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ದೀಪಾವಳಿ ಹಿನ್ನೆಲೆ ಸಾರ್ವಜನಿಕರಿಗೆ ತಟ್ಟೆ, ವಸ್ತ್ರ ಹಂಚುವ ಕಾರ್ಯಕ್ರಮ ಇದಾಗಿತ್ತು. ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕ್ರೀಡಾಂಗಣದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನ ಭಾಗಿಯಾಗಿದ್ದ ಹಿನ್ನೆಲೆ ನೂಕುನುಗ್ಗಲು ಉಂಟಾಗಿದೆ. ಈ ವೇಳೆ ಕೆಲವರಿಗೆ ಉಸಿರಾಟದಲ್ಲಿ ಸಮಸ್ಯೆ ಉಂಟಾಗಿದ್ದು, ಅಸ್ವಸ್ಥರಾಗಿದ್ದಾರೆ. ಪುಟ್ಟ ಪುಟ್ಟ ಮಕ್ಕಳನ್ನು ಕಂಕುಳಲ್ಲಿ ಹೊತ್ತುಬಂದಿದ್ದ ಕೆಲವರು ನೀರು ಸಿಗದೇ ಪರದಾಡಿದ್ದಾರೆ. ಇದರಿಂದ ಕೆಸರು ತುಂಬಿದ್ದ ಮೈದಾನದಲ್ಲಿ ಅವ್ಯವಸ್ಥೆ ಉಂಟಾಗಿದೆ.
ಸದ್ಯ ಅಸ್ವಸ್ಥರನ್ನ ಪುತ್ತೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತದೆ.
– ಯಾವ ಧರ್ಮವೂ ಇನ್ನೊಬ್ಬರನ್ನ ದ್ವೇಷ ಮಾಡಿ ಅಂತ ಹೇಳಲ್ಲ
– ಸೌಹಾರ್ದತೆಯ ಪಾಠ ಹೇಳಿದ ಸಿಎಂ
ಮಂಗಳೂರು: ಜಾತಿ, ಧರ್ಮದ ಹೆಸರಿನಲ್ಲಿ ಜಗಳ ಮಾಡೋದ್ರಲ್ಲಿ ನಿಮ್ಮ ಜಿಲ್ಲೆ ನಂ.1 ಇತ್ತು. ಈಗ ಅದಕ್ಕೆ ನಮ್ಮ ಸರ್ಕಾರ ಸಂಪೂರ್ಣ ಕಡಿವಾಣ ಹಾಕಿದೆ ಎಂದು ಪುತ್ತೂರು ತಾಲೂಕಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah,) ಹೇಳಿದರು.
ಪುತ್ತೂರು ಶಾಸಕ ಅಶೋಕ್ ರೈ (Ashok Rai) ಮಾಲೀಕತ್ವದ ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ʻಅಶೋಕ ಜನಮನ -2025ʼ ಹಾಗೂ ದೀಪಾವಳಿ ಪ್ರಯುಕ್ತ ವಸ್ತ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಿದ್ದರಾಮಯ್ಯ ಜನರಿಗೆ ಸೌಹಾರ್ದತೆಯ ಪಾಠ ಮಾಡಿದರು. ಇದನ್ನೂ ಓದಿ: ಮೊದಲ ದಿನ ಸಾಧ್ಯವಾಗದ ಹಾಸನಾಂಬೆ ದರ್ಶನ – ಇಂದು ಮತ್ತೆ ದೇವಾಲಯಕ್ಕೆ ಬಂದ ಸುಳ್ಯ ಶಾಸಕಿ
ಕೆಲವರು 5 ಗ್ಯಾರಂಟಿ ಯೋಜನೆ (Guarantee Scheme) ಟೀಕೆ ಮಾಡ್ತಾರೆ. ಸರ್ಕಾರದ ಬಳಿ ದುಡ್ಡಿಲ್ಲ ಅಂತ, ದುಡ್ಡಿಲ್ಲದಿದ್ದರೆ ಪುತ್ತೂರಿಗೆ ಮೆಡಿಕಲ್ ಕಾಲೇಜ್ ಕೊಡೋಕೆ ಆಗ್ತಿತ್ತಾ? ಜಾತಿ, ಧರ್ಮದ ಹೆಸರಿನಲ್ಲಿ ಜಗಳ ಮಾಡೋದ್ರಲ್ಲಿ ನಿಮ್ಮ ಜಿಲ್ಲೆ ನಂಬರ್ ವನ್ ಇತ್ತು. ಆದರೆ ಈಗ ಅದಕ್ಕೆ ನಮ್ಮ ಸರ್ಕಾರ ಸಂಪೂರ್ಣ ಕಡಿವಾಣ ಹಾಕಿದೆ. ಏಕೆಂದ್ರೆ ಎತ್ತಿಕಟ್ಟೋರ ಮಕ್ಕಳು ಯಾರೂ ಈ ಜಗಳದಲ್ಲಿ ಇರಲ್ಲ. ಮೇಲ್ಜಾತಿ, ಶ್ರೀಮಂತರ ಮಕ್ಕಳು ಯಾರೂ ಸಾಯಲ್ಲ. ನಾನು ಯಾರ ಮಾತನ್ನೂ ಕೇಳಿಲ್ಲ, ಕಮಿಷನರ್, ಎಸ್ಪಿ ದಕ್ಷರನ್ನ ನೇಮಕ ಮಾಡಿದೆ. ಈಗ ಸುಧಾರಣೆ ಆಗಿಲ್ವಾ? ದಕ್ಷ ಅಧಿಕಾರಿಗಳು ಇದ್ರೆ ಬದಲಾವಣೆ ಸಾಧ್ಯ. ಯಾವತ್ತಿಗೂ ನಾವು ಅಮಾಯಕರ ಮಕ್ಕಳನ್ನ ಸಾಯಿಸೋ ಕೆಲಸ ಮಾಡಬಾರದು. ಬೇರೆ ಧರ್ಮದವರನ್ನ ದ್ವೇಷ ಮಾಡೋ ಕೆಲಸ ಮಾಡಬಾರದು, ಹಾಗಾಗಿ ಪ್ರತಿಯೊಬ್ಬ ವ್ಯಕ್ತಿ ಮನುಷ್ಯರಾಗೋಕೆ ಪ್ರಯತ್ನ ಮಾಡಬೇಕು. ಕೋಮು ಸೌಹಾರ್ದತೆ ಇದ್ದರೆ ರಾಜ್ಯ, ಜಿಲ್ಲೆ ಅಭಿವೃದ್ಧಿಯಾಗುತ್ತೆ. ಅದಕ್ಕಾಗಿ ನಾವು ಕೋಮು ಸೌಹಾರ್ದ ಕಾಪಾಡಬೇಕಿದೆ. ದಕ್ಷಿಣ ಕನ್ನಡ ಜಿಲ್ಲೆ ಕೋಮು ಸೌಹಾರ್ದಕ್ಕೆ ವಿಶೇಷ ಗಮನ ಕೊಡಬೇಕು. ಸುಳ್ಳು ಹೇಳಿದ್ರೆ ಕಾನೂನು ತಂದು ಕೇಸ್ ಹಾಕ್ತೀವಿ. ಪ್ರಿಯಾಂಕ್ ಖರ್ಗೆ ಮತ್ತು ಹೆಚ್.ಕೆ ಪಾಟೀಲ್ ಆ ಕೆಲಸದಲ್ಲಿ ತೊಡಗಿದ್ದಾರೆ ಎಂದು ಎಚ್ಚರಿಕೆ ನೀಡಿದರು.
ಅಶೋಕ್ ರೈ ಶಾಸಕರಾಗಿ ಬಹಳ ಉತ್ತಮ ರೀತಿಯಲ್ಲಿ ಕೆಲಸ ಮಾಡ್ತಾ ಇದ್ದಾರೆ. ಜೊತೆಯಲ್ಲಿ ಟ್ರಸ್ಟ್ ವತಿಯಿಂದ ದೀಪಾವಳಿ ಸಂಧರ್ಭದಲ್ಲಿ ವಸ್ತ್ರದಾನ ಮಾಡ್ತಾ ಇದ್ದಾರೆ. ಸಣ್ಣ ಪ್ರಮಾಣದಲ್ಲಿ ಪ್ರಾರಂಭವಾಗಿ ಇವತ್ತು ಒಂದು ಲಕ್ಷ ಜನರಿಗೆ ದಾನ ಮಾಡ್ತಾ ಇದ್ದಾರೆ. ಅಶೋಕ್ ರೈ ಸಮಾಜದ ಶ್ರೀಮಂತ ಜನರಿಗೆ ಮಾರ್ಗದರ್ಶಕರಾಗಲಿ, ಮನುಷ್ಯ ತಾನು ಗಳಿಸಿದ್ದನ್ನ ನಿರ್ಗತಿಕರಿಗೆ ಹಂಚುವುದು ಬಹಳ ಒಳ್ಳೆಯ ಕೆಲಸ. ಸಮಾಜದಲ್ಲಿ ಶ್ರೀಮಂತರು, ಬಡವರು, ಮೇಲ್ಜಾತಿ, ಕೆಳ ಜಾತಿ ಎಲ್ಲರೂ ಇದ್ದಾರೆ. ಸಮಾನತೆಯ ಸಮ ಸಮಾಜ ನಿರ್ಮಾಣವಾಗಲು ಉಳ್ಳವರು ಇಲ್ಲದೇ ಇರೋರಿಗೆ ಸಹಾಯ ಮಾಡಬೇಕು. ಬಸವಣ್ಣ ಕೂಡ ಕಾಯಕ ಮತ್ತು ದಾಸೋಹದ ಬಗ್ಗೆ ಹೇಳಿದ್ದಾರೆ. ನಮ್ಮಲ್ಲಿ ಅಸಮಾನತೆ, ತಾರತಮ್ಯ ಇದೆ, ಇಲ್ಲಿ ಸಮ ಸಮಾಜ ನಿರ್ಮಾಣ ಆಗಬೇಕು. ನಾನು ಎಲ್ಲಾ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆ ಓದಿಸ್ತಾ ಇದ್ದೇನೆ. ಸಂವಿಧಾನ ಅರಿಯದೇ ಇದ್ದರೆ ಸಮ ಸಮಾಜ ನಿರ್ಮಾಣ ಅಸಾಧ್ಯ ಎಂದು ತಿಳಿಸಿದರು. ಇದನ್ನೂ ಓದಿ: ದೇವಿರಮ್ಮ ಬೆಟ್ಟ ಏರುವಾಗ ಇಬ್ಬರು ಅಸ್ವಸ್ಥ – ಬೆಟ್ಟದಿಂದ ಹೊತ್ತುತಂದ ಅಗ್ನಿಶಾಮಕ ಸಿಬ್ಬಂದಿ
ಯಾವ ಧರ್ಮವೂ ದ್ವೇಷಿಸಿ ಅನ್ನಲ್ಲ
ನಮ್ಮ ಸಮಾಜದಲ್ಲಿ ಅನೇಕ ಜಾತಿ ಮತ್ತು ಧರ್ಮಗಳಿವೆ. ಯಾವ ಧರ್ಮವೂ ದ್ವೇಷ ಮಾಡಿ ಅಂತ ಯಾರಿಗೂ ಹೇಳಲ್ಲ. ಪ್ರತಿಯೊಬ್ಬನ ಪ್ರೀತಿಸಿ ಅಂತ ಹೇಳುತ್ತೆ, ವೈವಿಧ್ಯತೆಯಲ್ಲಿ ಏಕತೆ ಮಾಡಿಕೊಳ್ಳಬೇಕು. ಧರ್ಮದ ತತ್ವ, ಆದರ್ಶ ಪಾಲನೆ ಮಾಡಲಿ, ಸರ್ವ ಜನಾಂಗದ ಶಾಂತಿಯ ತೋಟದ ಬದಲು ದ್ವೇಷ, ಕಚ್ಚಾಟ ಇರಬಾರದು ಎಂದು ಹೇಳಿದರು.
ಮಂಗಳೂರು: ಯುವತಿಯರು ಬಟ್ಟೆ ಬದಲಿಸುವ ವೀಡಿಯೋ ಮಾಡಿ ವೈರಲ್ ಮಾಡಿದ್ದ ಆರೋಪದಡಿ ರೂಮ್ ಮೇಟ್ ಆಗಿದ್ದ ಮತ್ತೊಬ್ಬ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕಲಶದ ಯುವತಿ ಬಂಧಿತ ಆರೋಪಿ. ಮಂಗಳೂರಿನ ಕದ್ರಿ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.
ಮಂಗಳೂರಿನ ಕುದ್ಕೋರಿಗುಡ್ಡೆಯ ಮನೆಯೊಂದರಲ್ಲಿ ಯುವತಿಯರು ಬಾಡಿಗೆಗಿದ್ದರು. ಮಂಗಳೂರಿನಲ್ಲಿ ಉದ್ಯೋಗ ಮಾಡಿಕೊಂಡು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಈ ವೇಳೆ ಯುವತಿಯರಿಬ್ಬರ ಬಟ್ಟೆ ಬದಲಿಸುವ ವಿಡಿಯೋವನ್ನು ಆರೋಪಿ ಯುವತಿ ಮಾಡಿದ್ದಳು. ವಿಡಿಯೋ ಮಾಡಿ ಉಡುಪಿ ಜಿಲ್ಲೆಯ ಕಾರ್ಕಳ ನಿವಾಸಿಯೊಬ್ಬನಿಗೆ ಕಳುಹಿಸಿದ್ದ ಆರೋಪ ಈಕೆ ಮೇಲಿದೆ.
ಕಳೆದ ಅ.9 ರಂದು ಕಾರ್ಕಳದಲ್ಲಿ ಆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದ. ಸುದೀರ್ಘ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ. ಡೆತ್‌ನೋಟ್‌ನಲ್ಲಿ ಯುವತಿ ಹಾಗೂ ಇತರರ ವಿರುದ್ಧ ಹನಿಟ್ರ‍್ಯಾಪ್ ಆರೋಪ ಮಾಡಿದ್ದ. ಅಲ್ಲದೇ ಯುವತಿ ತನ್ನ ರೂಮ್‌ನಲ್ಲಿದ್ದ ಇಬ್ಬರು ಯುವತಿಯರ ವಿಡಿಯೋ ಮಾಡಿ ವೈರಲ್ ಮಾಡಿದ್ದ ಬಗ್ಗೆಯೂ ಡೆತ್‌ನೋಟ್‌ನಲ್ಲಿ ಉಲ್ಲೇಖ ಮಾಡಿದ್ದ. ಜೊತೆಗೆ ಸಾಯುವ ಮುನ್ನ ವಾಟ್ಸಪ್ ಗ್ರೂಪ್ ಮಾಡಿ ಅದರಲ್ಲಿ ಕೆಲ ವಿಡಿಯೋ ಹರಿಬಿಟ್ಟಿದ್ದ. ಅದರಲ್ಲಿ ಈ ಇಬ್ಬರ ಯುವತಿಯರ ವಿಡಿಯೋ ಕೂಡ ಇದ್ದ ಹಿನ್ನೆಲೆ ಕದ್ರಿ ಠಾಣೆಗೆ ಯುವತಿಯರು ದೂರು ದಾಖಲಿಸಿದ್ದರು.
ಸದ್ಯ ಪ್ರಕರಣ ದಾಖಲಿಸಿಕೊಂಡು ಯುವತಿಯನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಬಿಎನ್‌ಎಸ್ 77, 78(2), 294(2)(ಚಿ) ಅಡಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಆರ್‌ಎಸ್‌ಎಸ್ (RSS), ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಯಾಕೆ ಲಾಠಿ, ಗನ್ ಟ್ರೈನಿಂಗ್ ಕೊಡ್ತಿಲ್ಲ ಎಂದು ಶಾಸಕ ಮಂಜುನಾಥ ಭಂಡಾರಿ (Manjunath Bhandary) ಪ್ರಶ್ನಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ (BJP) ಒಂದು ಪಾಕಿಸ್ತಾನ, ಇನ್ನೊಂದು ಮುಸ್ಲಿಂ ಇವೆರಡು ಬಿಟ್ರೆ ಏನೂ ಗೊತ್ತಿಲ್ಲ. ಬಿಜೆಪಿ 10 ವರ್ಷಗಳಲ್ಲಿ ನಡೆಸಿರುವ ಆಡಳಿತದಲ್ಲಿ ಯಾವುದನ್ನು ಹಿಡ್ಕೊಂಡು ಮತ ಕೇಳಿದ್ರಿ? ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೆಸ್ಸೆಸ್ ಬಗ್ಗೆ ಮಾತಾಡಿದ್ರೆ ದೇಶದ್ರೋಹಿ ಪಟ್ಟ ಕಟ್ಟುತ್ತೀರಿ. ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ರಲ್ಲಿ ಏನು ತಪ್ಪಿದೆ? ಆರೆಸ್ಸೆಸ್ ಹಿಂದುಳಿದ ವರ್ಗದ ಮಕ್ಕಳನ್ನು ಲಾಠಿ, ಗನ್ನು ಕೊಟ್ಟು ಕೊಡ್ತಾ ಇರೋ ತರಬೇತಿ ಏನು? ಸರ್ಕಾರ ಹೇಳಿದ್ದು ಆರೆಸ್ಸೆಸ್ ಸಹಿತ ಖಾಸಗಿ ಸಂಘಟನೆಗಳಿಗೆ ಸರ್ಕಾರಿ ಮೈದಾನ, ರಸ್ತೆ, ಶಾಲೆಗಳಲ್ಲಿ ಕಾರ್ಯಚಟುವಟಿಕೆ ನಡೆಸಲು ಅನುಮತಿ ಬೇಕು ಎಂದು ಅಷ್ಟೇ. ನಿಮಗೆ ಅನುಮತಿ ಪಡೆಯಲು ಏನು ಸಮಸ್ಯೆಯಿದೆ? ಆರೆಸ್ಸೆಸ್ ಸಂಘಟನೆಗೆ 100 ವರ್ಷಗಳು ಆಯ್ತು ಅಂತ ದೇಶಾದ್ಯಂತ ಪಥಸಂಚಲನ ನಡೆಸ್ತೀರಿ. ಇಷ್ಟು ವರ್ಷಗಳಲ್ಲಿ ಯಾಕೆ ಸಂಘಟನೆಯನ್ನು ನೋಂದಣಿ ಮಾಡಿಸಿಕೊಂಡಿಲ್ಲ? ನೋಂದಣಿ ಮಾಡಿಸಿಕೊಳ್ಳದ ಸಂಘಟನೆಗೆ ಎಲ್ಲಿಂದ ಹಣ ಬರುತ್ತದೆ? ಖಾತೆಯಲ್ಲಿ ಎಷ್ಟು ಹಣ ಇದೆ? ಇದರ ತರಬೇತಿ ಯಾವ ರೀತಿ ನಡೆಯುತ್ತೆ? ಅಂತ ಸಂವಿಧಾನದಲ್ಲಿ ಯಾಕೆ ಕೇಳಬಾರದು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಈದ್ಗಾ ಮೈದಾನ ಬಳಿ ರಸ್ತೆಯಲ್ಲೇ ನಮಾಜ್ ಮಾಡ್ತಾರಪ್ಪ, ಪರ್ಮಿಷನ್ ತಗೋತಾರ ಅವ್ರು?: ಕೆ.ಎನ್.ರಾಜಣ್ಣ
ಆರೆಸ್ಸೆಸ್ ಒಂದು ಸಂಘಟನೆಯೇ ಅಲ್ಲ. ಅದೊಂದು ಸಂಘಟನೆ ಆಗಿದ್ದರೆ ಅದಕ್ಕೆ ಕೆಲವೊಂದು ಮಾನದಂಡಗಳಿವೆ. ಮುಖ್ಯವಾಗಿ ನೋಂದಣಿ ಮಾಡಿರಬೇಕು. ಅದ್ಯಾವುದೂ ಇಲ್ಲದ ಆರೆಸ್ಸೆಸ್ ಮತ್ತು ಇತರ ಖಾಸಗಿ ಸಂಘಟನೆಗಳಿಗೆ ಸಾರ್ವಜನಿಕ ಕಾರ್ಯಕ್ರಮ ನಡೆಸಲು ಸರ್ಕಾರ ನಿಷೇಧ ಹೇರಿದೆ. ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯರ ಈ ನಿರ್ಧಾರ ಸರಿಯಾಗಿಯೇ ಇದೆ. ಅದನ್ನು ನಾನು ಸಹಿತ ಜಿಲ್ಲೆಯ ಎಲ್ಲ ಕಾಂಗ್ರೆಸ್ ನಾಯಕರು ಒಪ್ಪಿಕೊಳ್ಳುತ್ತೇವೆ ಎಂದರು.
ವಿದ್ಯಾರ್ಥಿ ಜೀವನದಿಂದಲೇ ನಾನು ಆರೆಸ್ಸೆಸ್ ಬಿಜೆಪಿ ವಿರುದ್ಧ ಹೋರಾಟ ಮಾಡಿದವನು. ಯಡಿಯೂರಪ್ಪ ವಿರುದ್ಧ ಮಾತಾಡಿ ಎದುರು ಹಾಕಿಕೊಂಡವನು ನಾನು. ನಾವು ಕರಾವಳಿ ಕಾಂಗ್ರೆಸ್ಸಿಗರು ಪ್ರತಿಯೊಬ್ಬರೂ ಖರ್ಗೆ ಅವರ ಜೊತೆಗಿದ್ದೇವೆ. ಇಲ್ಲಿ ಆರೆಸ್ಸೆಸ್ ಬ್ಯಾನ್ ಆಗಿದೆ ಎಂದು ಬೊಬ್ಬೆ ಹೊಡೆಯುವವರು ಜನಸಾಮಾನ್ಯರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಇಲ್ಲಿ ಆರೆಸ್ಸೆಸ್ ಮಾತ್ರವಲ್ಲ ಯಾವುದೇ ಖಾಸಗಿ ಸಂಘಟನೆಗಳಿಗೆ ಸರ್ಕಾರಿ ಜಾಗ ಬಳಸುವುದಕ್ಕೆ ಅನುಮತಿ ಪಡೆಯಲೇಬೇಕಾಗಿದೆ. ಮಡಿಕೇರಿಯಲ್ಲಿ ಮಕ್ಕಳಿಗೆ ಗನ್ ತರಬೇತಿ ಕೊಟ್ಟಿದ್ದು, ನಾವೆಲ್ಲರೂ ನೋಡಿದ್ದೇವೆ. ಬಿಜೆಪಿ ಆರೆಸ್ಸೆಸ್ ನಾಯಕರು ತಮ್ಮ ಮಕ್ಕಳನ್ನು ವಿದೇಶದಲ್ಲಿ ಶಿಕ್ಷಣಕ್ಕೆ ಉದ್ಯೋಗಕ್ಕೆ ಕಳುಹಿಸಿ ಇಲ್ಲಿ ಹಿಂದುಳಿದ ವರ್ಗಗಳ ಮಕ್ಕಳಿಗೆ ಶಸ್ತ್ರ ಕೊಟ್ಟು ಪ್ರಚೋದನೆ ಮಾಡುವುದು ಎಲ್ಲಿಯ ನ್ಯಾಯ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನಾಳೆ RSS ಪಥ ಸಂಚಲನ – ಚಿತ್ತಾಪುರದಲ್ಲಿ ಹಾಕಿದ್ದ ಬ್ಯಾನರ್, ಬಂಟಿಂಗ್ ತೆರವು
ದಿನೇಶ್ ಅಮೀನ್ ಮಟ್ಟು ಆರೋಪ ಮಾಡಿರುವಂತೆ ನಮ್ಮ ಕಾಲೇಜಿನಲ್ಲಿ ಆರೆಸ್ಸೆಸ್‌ನ ಯಾವುದೇ ರೀತಿಯ ಕಾರ್ಯಕ್ರಮ ಇಲ್ಲಿನವರೆಗೆ ನಡೆದಿಲ್ಲ. ಸೃಷ್ಟಿ ಅಂತ ಒಂದು ಪ್ರಾಜೆಕ್ಟ್ ಕಾರ್ಯಕ್ರಮ ನಡೆದಿತ್ತು. ಅದು ರಾಜ್ಯದ ಎಲ್ಲ ಇಂಜಿನಿಯರಿಂಗ್ ಕಾಲೇಜುಗಳ ಒಟ್ಟು ಸೇರುವಿಕೆಯಲ್ಲಿ ನಡೆದಿದ್ದ ವಿಜ್ಞಾನ ಮಾಡೆಲ್ ಕಾರ್ಯಕ್ರಮ. ಅದರಲ್ಲಿ ಎಬಿವಿಪಿ ಕೂಡ ಪಾಲು ಪಡೆದಿತ್ತು. ಅಂದಿನ ಮುಖ್ಯಮಂತ್ರಿ ಸದಾನಂದ ಗೌಡ ಅದರಲ್ಲಿ ಪಾಲ್ಗೊಂಡ ಕಾರಣ ನಾನು ಭಾಗವಹಿಸಿದ್ದೆ. ಎಬಿವಿಪಿ ಸಮ್ಮೇಳನ, ಬೈಠಕ್ ನಡೆದಿದೆ ಎನ್ನುವವರು ಅದಕ್ಕೆ ಆಧಾರ ತೋರಿಸಲಿ. ಹೀಗೆ ಹೇಳುವವರು ಯಾವ ನೈತಿಕ ಆಧಾರದಲ್ಲಿ ಕಾಂಗ್ರೆಸ್ ಟಿಕೆಟ್ ಕೇಳಿದ್ರು? ಇಂದಿರಾ ಗಾಂಧಿ ಬಗ್ಗೆ ಬರೆದ್ರು, ರಾಜೀವ್ ಗಾಂಧಿ ಬಗ್ಗೆ ಬರೆದ್ರು ಆದ್ರೂ ಸಿದ್ಧಾಂತ ಗೊತ್ತಿಲ್ಲದೇ ಎಂಎಲ್‌ಸಿ ಟಿಕೆಟ್ ಕೊಡಿ ಅಂತ ಕೇಳಿದ್ರು? ಮುಂದೆ ಇಂತಹ ಆರೋಪ ಮಾಡಿದರೆ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮಹಿಳಾ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ, ವಿಕಾಸ್ ಶೆಟ್ಟಿ, ನೀರಜ್ ಪಾಲ್, ಆರ್.ಪದ್ಮರಾಜ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
ಮಂಗಳೂರು: ಧರ್ಮಸ್ಥಳದಲ್ಲಿ (Dharmasthala) ನೂರಾರು ಶವ ಹೂತಿಟ್ಟ ಪ್ರಕರಣದ ತನಿಖೆ ಮುಂದುವರೆದಿದೆ. ಆರೋಪಿ ಚಿನ್ನಯ್ಯ ನ್ಯಾಯಾಲಯದಲ್ಲಿ ಹೊಸ ಕಥೆ ಬಿಚ್ಚಿಟ್ಟಿದ್ದು, ಎಸ್‌ಐಟಿ (SIT) ಅಧಿಕಾರಿಗಳನ್ನೇ ತಬ್ಬಿಬ್ಬಾಗಿಸಿದೆ.
ಶವ ಹೂತ ರಹಸ್ಯವನ್ನು ಚಿನ್ನಯ್ಯ ನ್ಯಾಯಾಲಯದಲ್ಲಿ ತಪ್ಪೊಪ್ಪಿಗೆ ಹೇಳಿಕೆ ನೀಡುವ ವೇಳೆ ಬಾಯಿಬಿಟ್ಟಿದ್ದಾನೆ ಎನ್ನಲಾಗಿದೆ. ಬೆಳ್ತಂಗಡಿ ನ್ಯಾಯಾಲಯದಲ್ಲಿ ಚಿನ್ನಯ್ಯ ಹೇಳಿಕೆ ನೀಡುವ ವೇಳೆ ಒಂದೇ ಜಾಗದಲ್ಲಿ ಹತ್ತು ಹೆಣಗಳನ್ನು ಹೂತಿದ್ದಾಗಿ ಹೊಸ ಕಥೆಯನ್ನು ಹೇಳಿದ್ದಾನೆ. ಎಸ್‌ಐಟಿ ವಿಚಾರಣೆ ವೇಳೆ ಈ ಮಾಹಿತಿಯನ್ನು ನೀಡದೆ ಇರುವುದು ಅಧಿಕಾರಿಗಳಿಗೆ ಆಶ್ಚರ್ಯ ತಂದಿದೆ. ಚಿನ್ನಯ್ಯನ ಈ ಹೊಸ ಹೇಳಿಕೆ ಕೇಳಿ ಎಸ್‌ಐಟಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ.ಇದನ್ನೂ ಓದಿ: ಕಾಲ್‌ಸೆಂಟರ್ ಹೆಸರಲ್ಲಿ ಡಿಜಿಟಲ್ ಅರೆಸ್ಟ್ – ಹೊರರಾಜ್ಯದವರನ್ನೇ ಟಾರ್ಗೆಟ್ ಮಾಡ್ತಿದ್ದ 16 ಜನರ ಗ್ಯಾಂಗ್ ಬಂಧನ
ಮೊದಲ ದಿನದಿಂದಲೇ ಇಡೀ ಪ್ರಕರಣದ ಹಾದಿ ತಪ್ಪಿಸುವ ರೀತಿಯಲ್ಲೇ ಹೇಳಿಕೆ ಕೊಟ್ಟುಕೊಂಡು ಬಂದಿದ್ದ ಚಿನ್ನಯ್ಯ ಇದೀಗ ಮತ್ತೆ ವರಸೆ ಬದಲಿಸಿದ್ದಾನೆ. ಬೆಳ್ತಂಗಡಿ ಕೋರ್ಟ್‌ನಲ್ಲಿ ಬಿಎನ್‌ಎಸ್ಸೆಸ್ 183 ಅಡಿ ಹೇಳಿಕೆ ದಾಖಲಿಸಿದ್ದ ವೇಳೆ ಶವ ರಹಸ್ಯದ ಹೊಸ ಕಥೆ ಹೇಳಿದ್ದಾನೆ. ಅಂದರೆ ಒಂದೇ ಜಾಗದಲ್ಲಿ ಹತ್ತು ಹೆಣ ಹೂತ್ತಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆದರೆ ನಿರ್ದಿಷ್ಟವಾಗಿ ಹತ್ತು ಶವಗಳನ್ನು ಯಾವಾಗ ಮತ್ತು ಎಲ್ಲಿ ಹೂತಿದ್ದು ಎಂಬುದರ ಬಗ್ಗೆ ಚಿನ್ನಯ್ಯ ಸ್ಪಷ್ಟ ಮಾಹಿತಿ ನೀಡಿಲ್ಲ. ಹಾಗಾಗಿ ಈ ಬಗ್ಗೆ ಆಳವಾದ ವಿಚಾರಣೆ ನಡೆಸಲು ಎಸ್‌ಐಟಿ ಸಿದ್ಧತೆ ನಡೆಸಿದೆ.
ಚಿನ್ನಯ್ಯ ಸದ್ಯ ಶಿವಮೊಗ್ಗ ಜೈಲಿನಲ್ಲಿರುವುದರಿಂದ ಅಲ್ಲಿಯೇ ವಿಚಾರಣೆ ನಡೆಸಲು ಎಸ್‌ಐಟಿ ತಯಾರಿ ನಡೆಸಿದೆ. ಈ ಹೇಳಿಕೆಯ ಸತ್ಯಾಸತ್ಯತೆ ಮತ್ತು ಈ ಹಿಂದೆ ನೀಡಿದ ಹೇಳಿಕೆಗೂ ಇದಕ್ಕೂ ಇರುವ ವ್ಯತ್ಯಾಸಗಳ ಬಗ್ಗೆ ಎಸ್‌ಐಟಿ ತನಿಖೆ ಮುಂದುವರಿಸಿದೆ.