Tag: Mangaluru Express

  • ವಿಜಯಪುರ-ಮಂಗಳೂರು ರೈಲು ಯಲಿವಿಗಿಯಲ್ಲಿ ನಿಲುಗಡೆ – ರೈಲ್ವೆಗೆ ಬೊಮ್ಮಾಯಿ ಥ್ಯಾಂಕ್ಸ್

    ವಿಜಯಪುರ-ಮಂಗಳೂರು ರೈಲು ಯಲಿವಿಗಿಯಲ್ಲಿ ನಿಲುಗಡೆ – ರೈಲ್ವೆಗೆ ಬೊಮ್ಮಾಯಿ ಥ್ಯಾಂಕ್ಸ್

    ಹಾವೇರಿ: ವಿಜಯಪುರ-ಮಂಗಳೂರು (Vijayapura-Mangaluru) ನಡುವೆ ಸಂಚರಿಸುವ ಮಂಗಳೂರು ಎಕ್ಸ್‌ಪ್ರೆಸ್‌ ರೈಲನ್ನು ಯಲವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡಲು ಅವಕಾಶ ಕಲ್ಪಿಸಿರುವ ಕೇಂದ್ರ ರೈಲ್ವೆ ಸಚಿವರು ಹಾಗೂ ಅಧಿಕಾರಿಗಳಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಧನ್ಯವಾದ ತಿಳಿಸಿದ್ದಾರೆ.ಇದನ್ನೂ ಓದಿ:ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಭಾವೈಕ್ಯತೆ ಮೆರೆದ ಮುಸ್ಲಿಂ ಯುವಕ

    ಈ ಕುರಿತು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಅವರು, ವಿಜಯಪುರ-ಮಂಗಳೂರು ರೈಲಿನ ಮೂಲಕ ಸಂಚರಿಸುವ ಪ್ರಯಾಣಿಕರಿಗೆ ಯಲವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ರಾಜ್ಯದ ಪ್ರಮುಖ ದೇವಸ್ಥಾನಗಳಾದ ಶ್ರೀ ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳ ಕ್ಷೇತ್ರಗಳಿಗೆ ಭೇಟಿ ನೀಡಲು ಅನುಕೂಲವಾಗಲಿದೆ. ಬಂದರು ನಗರಿ ಮಂಗಳೂರು ನಗರಕ್ಕೆ ಈ ರೈಲು ನೇರ ಸಂಪರ್ಕವನ್ನು ಒದಗಿಸಲಿದ್ದು, ಇದರ ಸದುಪಯೋಗವನ್ನು ಪಡೆಯಬೇಕೆಂದು ಜನತೆಗೆ ಮನವಿ ಮಾಡಿದ್ದಾರೆ. ನನ್ನ ಕೋರಿಕೆಗೆ ಸ್ಪಂದಿಸಿ ಯಲವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡಲು ಅವಕಾಶ ಕಲ್ಪಿಸಿದ ರೈಲ್ವೆ ಇಲಾಖೆಗೆ ಧನ್ಯವಾದಗಳು ಎಂದು ಪೋಸ್ಟ್ ಹಾಕಿಕೊಂಡಿದ್ದಾರೆ.

    ಯಲವಿಗಿ ರೈಲು ನಿಲ್ದಾಣದಲ್ಲಿ ವಿಜಯಪುರ – ಮಂಗಳೂರು ಎಕ್ಸ್‌ಪ್ರೆಸ್‌ ರೈಲು ಪ್ರತಿದಿನ ರಾತ್ರಿ 9:49 ಗಂಟೆಗೆ ನಿಲುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಮಾದಪ್ಪನ ಬೆಟ್ಟಕ್ಕೆ ಹೋಗುತ್ತಿದ್ದಾಗ ಕೆರೆಗೆ ಉರುಳಿದ ಕಾರು – ಇಬ್ಬರು ಸಾವು

  • ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸೋಂಕಿತನ ಪ್ರಯಾಣ – ಬೋಗಿಯಲ್ಲಿದ್ದ ಪ್ರಯಾಣಿಕರು ಕೂಡಲೇ ಕರೆ ಮಾಡಿ

    ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸೋಂಕಿತನ ಪ್ರಯಾಣ – ಬೋಗಿಯಲ್ಲಿದ್ದ ಪ್ರಯಾಣಿಕರು ಕೂಡಲೇ ಕರೆ ಮಾಡಿ

    ಬೆಂಗಳೂರು: ಕರ್ನಾಟಕದಲ್ಲಿ ಯಾರ ಸಂಪರ್ಕಕ್ಕೆ ಬಾರದ ವ್ಯಕ್ತಿಗೆ ಕೊರೊನಾ ಬಂದಿರುವುದರ ಜೊತೆ ಈಗ ಮತ್ತೊಂದು ಆತಂಕ ಎದುರಾಗಿದೆ. ಕೊರೊನಾ ಪೀಡಿತ ವ್ಯಕ್ತಿಯೊಬ್ಬರು ರೈಲಿನಲ್ಲಿ ಸಂಚರಿಸಿದ್ದು, ಈಗ ಸರ್ಕಾರ ಈ ರೈಲಿನ ಬೋಗಿಯಲ್ಲಿದ್ದ ಪ್ರಯಾಣಿಕರು ಕೂಡಲೇ ಪರೀಕ್ಷೆಗೆ ಹಾಜರಾಗಬೇಕೆಂದು ಸೂಚಿಸಿದೆ.

    ಉತ್ತರ ಕನ್ನಡ ಜಿಲ್ಲೆಯ 65 ವರ್ಷದ ವ್ಯಕ್ತಿಯೊಬ್ಬರು ದುಬೈಗೆ ಪ್ರಯಾಣ ಬೆಳೆಸಿ ಮಾರ್ಚ್ 17ಕ್ಕೆ ಮುಂಬೈ ಮೂಲಕ ಭಾರತಕ್ಕೆ ಬಂದಿದ್ದಾರೆ. ಅಂದು ಅವರು ಮಂಗಳೂರು ಎಕ್ಸ್‌ಪ್ರೆಸ್ ರೈಲಿನ ಎಸ್3 ಕೋಚ್ ಲೋಯರ್ ಬರ್ತ್ ನಲ್ಲಿ ಮುಂಬೈನಿಂದ ಭಟ್ಕಳಕ್ಕೆ ಮಾರ್ಚ್ 18 ರಂದು ಮರಳಿದ್ದಾರೆ.

    ಕೊರೊನಾ ಈಗ ಮೂರನೇ ವ್ಯಕ್ತಿಗಳಿಗೂ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ಬೋಗಿಯಲ್ಲಿನ ಪ್ರಯಾಣಿಸಿದ ಎಲ್ಲ ಪ್ರಯಾಣಿಕರು ದಯವಿಟ್ಟು ಈ ಕೂಡಲೇ ಶುಲ್ಕ ರಹಿತ 104, 080-4684600 ಅಥವಾ 080 66692000 ನಂಬರಿಗೆ ಕರೆ ಮಾಡಬೇಕು ಎಂದು ಸರ್ಕಾರ ಕೇಳಿಕೊಂಡಿದೆ.

    ಇಲ್ಲಿಯವರೆಗೆ ಕರ್ನಾಟಕದಲ್ಲಿ ವಿದೇಶಕ್ಕೆ ತೆರಳಿದದವರಿಗೆ ಮತ್ತು ಅವರ ಜೊತೆ ಸಂಪರ್ಕಕ್ಕೆ ಬಂದ ವ್ಯಕ್ತಿಗಳಿಗೆ ಕೊರೊನಾ ಬಂದಿತ್ತು. ಆದರೆ ಈಗ ಯಾರ ಸಂಪರ್ಕಕ್ಕೆ ಸಿಗದ ವ್ಯಕ್ತಿಗೆ ಕೊರೊನಾ ಬಂದಿದೆ. ಇಂದು ಮಧ್ಯಾಹ್ನ ಸರ್ಕಾರ ಬಿಡುಗಡೆ ಮಾಡಿದ ವರದಿ ಪ್ರಕಾರ 4 ಜನರಲ್ಲಿ ಹೊಸದಾಗಿ ಕೊರೊನಾ ಪತ್ತೆಯಾಗಿದೆ. ಈ ಪೈಕಿ ರೋಗಿ 52 ಪ್ರಕರಣ ಶಾಕಿಂಗ್ ಆಗಿದ್ದು, ಈ ವ್ಯಕ್ತಿ ಯಾವೊಬ್ಬ ಕೊರೊನಾ ಪೀಡಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದಿಲ್ಲ. ಆದರೂ ಈ ವ್ಯಕ್ತಿಗೆ ಕೊರೊನಾ ಬಂದಿದ್ದು ಹೇಗೆ ಎನ್ನುವ ಪ್ರಶ್ನೆ ಎದ್ದಿದೆ. ಇಂದು 4 ಹೊಸ ಪ್ರಕರಣದಿಂದಾಗಿ ಕರ್ನಾಟಕದಲ್ಲಿ ಕೊರೊನಾ ಪೀಡಿತರ ಸಂಖ್ಯೆ 55ಕ್ಕೆ ಏರಿಕೆಯಾಗಿದೆ.

    ಮೈಸೂರು ಜಿಲ್ಲೆಯ 35 ವರ್ಷದ ಪುರುಷನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ವ್ಯಕ್ತಿ ಯಾವುದೇ ಹೊರಗಿನ ಪ್ರದೇಶಕ್ಕೆ ತೆರಳಿಲ್ಲ. ಜೊತೆಗೆ ಕೊರೊನಾ ಸೋಂಕು ಪಾಸಿಟಿವ್ ಇರುವ ವ್ಯಕ್ತಿಗಳ ಜೊತೆ ಸಂಪರ್ಕಕ್ಕೆ ಬಂದಿಲ್ಲ. ಈ ವ್ಯಕ್ತಿ ನಂಜನಗೂಡಿನಲ್ಲಿರುವ ಒಂದು ಔಷಧ ಉತ್ಪಾದನಾ ಕೈಗಾರಿಕೆಯ ಗುಣ ನಿಯಂತ್ರಣ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಂದರ್ಭದಲ್ಲಿ ಅನೇಕ ವೈದ್ಯಕೀಯ ತಂತ್ರಜ್ಞರೊಂದಿಗೆ ಸಂಪರ್ಕಕ್ಕೆ ಬಂದಿದ್ದಾರೆ. ಅವರ ವಿವರದ ಬಗ್ಗೆ ವೈದ್ಯಕೀಯ ತನಿಖೆ ನಡೆಯುತ್ತಿದೆ. ಇಲ್ಲಿಯವರೆಗೆ ಏಳು ಜನ ಪ್ರಾಥಮಿಕ ಸಂಪರ್ಕ ವ್ಯಕ್ತಿಗಳನ್ನು ಪತ್ತೆ ಮಾಡಿದ್ದು, ಅವರನ್ನು ಮನೆಯಲ್ಲಿಯೇ ಕ್ವಾರಂಟೈನ್‍ನಲ್ಲಿ ಇಡಲಾಗಿದೆ.