Tag: Mangaluru University

  • ಮಂಗಳೂರು ವಿವಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ – ಆಡಳಿತ ಸೌಧದ ಗಾಜು ಪುಡಿ

    ಮಂಗಳೂರು ವಿವಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ – ಆಡಳಿತ ಸೌಧದ ಗಾಜು ಪುಡಿ

    – ಅವೈಜ್ಞಾನಿಕ ಕಾಲೇಜು, ಪರೀಕ್ಷಾ ಶುಲ್ಕ ಹೆಚ್ಚಳ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ

    ಮಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಮಂಗಳೂರು ಹೊರವಲಯದ ಕೋಣಾಜೆಯ ಮಂಗಳೂರು ವಿಶ್ವವಿದ್ಯಾಲಯದ (Mangaluru University) ಆಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

    ಪರೀಕ್ಷಾ ಅಂಕಪಟ್ಟಿಯ ಸಮಸ್ಯೆ ಇದೆ. ಅವೈಜ್ಞಾನಿಕವಾಗಿ ಪರೀಕ್ಷಾ ಶುಲ್ಕಗಳ ಹೆಚ್ಚಳ ಮಾಡಲಾಗಿದೆ. ಹಾಸ್ಟೆಲ್ ಸಮಸ್ಯೆಗಳ ಪರಿಹಾರ ಆಗಬೇಕು ಎಂದು ವಿದ್ಯಾರ್ಥಿಗಳು ವಿವಿಧ ವಿಚಾರಗಳನ್ನು ಮುಂದಿಟ್ಟು ಪ್ರತಿಭಟಿಸಿದರು. ಇದನ್ನೂ ಓದಿ: 50 ಸಾವಿರ ಲಂಚ ಸ್ವೀಕಾರ – ಭಟ್ಕಳ ಪುರಸಭಾ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ

    ಕಚೇರಿಗೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರು ಕಚೇರಿ ಮುಂಭಾಗದ ಗಾಜನ್ನು ಒಡೆದು ಪುಡಿಗೈದರು. ಈ ವೇಳೆ ಓರ್ವ ವಿದ್ಯಾರ್ಥಿಗೆ ಒಡೆದ ಗಾಜಿನಿಂದ ಸಣ್ಣಪುಟ್ಟ ಗಾಯಗಳಾಗಿದೆ. ಪ್ರತಿಭಟನೆ ತೀವ್ರಗೊಂಡ ಹಿನ್ನಲೆಯಲ್ಲಿ ವಿವಿ ಉಪಕುಲಪತಿಗಳು, ಸಿಂಡಿಕೇಟ್ ಸದಸ್ಯರ ಜೊತೆ ಸ್ಥಳಕ್ಕಾಗಮಿಸಿ ಮನವಿ ಸ್ವೀಕರಿಸಿ ಸಮಸ್ಯೆ ಪರಿಹಾರಕ್ಕೆ ಭರವಸೆ ನೀಡಿದರು.

    ವಿದ್ಯಾರ್ಥಿಗಳು ಪ್ರತಿಭಟನೆಯ ವೇಳೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡೋದು ಸರಿಯಲ್ಲ ಎಂದ ಉಪಕುಲಪತಿ ಪಿ.ಎಲ್ ಧರ್ಮ, ಆದಷ್ಟು ಬೇಗ ಸರ್ಕಾರದ ಗಮನಕ್ಕೆ ತರೋದಾಗಿ ಹೇಳಿದರು. ತಮ್ಮ ಬೇಡಿಕೆ ಶೀಘ್ರದಲ್ಲಿ ಈಡೇರದೇ ಇದ್ದರೆ ಎಲ್ಲಾ ಕಾಲೇಜಿನ ಮುಂದೆ ಉಗ್ರ ಹೋರಾಟ ನಡೆಸುವುದಾಗಿ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: Waqf Land Row | ವಿವಾದಿತ ಜಮೀನಿನಲ್ಲಿ ಉಳುಮೆ – ರೈತರ ಮೇಲೆ ಕೇಸ್ ದಾಖಲು, ಟ್ರ್ಯಾಕ್ಟರ್ ಜಪ್ತಿ

  • ಕೋಚಿಮುಲ್ ನೇಮಕಾತಿ ಅಕ್ರಮದಲ್ಲಿ ಮಂಗಳೂರು ವಿವಿ ಭಾಗಿಯಾಗಿರುವ ಶಂಕೆ – ಇಡಿ ವಿಚಾರಣೆ

    ಕೋಚಿಮುಲ್ ನೇಮಕಾತಿ ಅಕ್ರಮದಲ್ಲಿ ಮಂಗಳೂರು ವಿವಿ ಭಾಗಿಯಾಗಿರುವ ಶಂಕೆ – ಇಡಿ ವಿಚಾರಣೆ

    – ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವದಲ್ಲೇ ಪ್ರಶ್ನೆಪತ್ರಿಕೆ ಮಾರಾಟವಾಗಿರುವ ಅನುಮಾನ
    – ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ರಾಜುಕೃಷ್ಣ ಚಲನ್ನವರ್ ವಿಚಾರಣೆ

    ಮಂಗಳೂರು: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನೇಮಕಾತಿ ಪರೀಕ್ಷೆ ಹಗರಣದಲ್ಲಿ ಮಂಗಳೂರು ವಿವಿ (Mangaluru University) ನೇರವಾಗಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

    ಪರೀಕ್ಷಾ ಪೂರ್ವದಲ್ಲೇ ಕೋಚಿಮುಲ್ (Kochimul) ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮಾರಾಟವಾಗಿದೆ ಅನ್ನೋ ಬಗ್ಗೆ ಸಂಶಯ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರ (ಜ.20) ಮಂಗಳೂರು ವಿವಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳ ತಂಡ ಭೇಟಿ ನೀಡಿ ತೀವ್ರ ವಿಚಾರಣೆ ನಡೆಸಿದೆ. ಇದನ್ನೂ ಓದಿ: ಶ್ರೀರಾಮನ ಪ್ರಾಣಪ್ರತಿಷ್ಠೆಗೆ ಮೋದಿ ಕಠಿಣ ವ್ರತ – ಪ್ರತಿದಿನ 1 ಗಂಟೆ ವಿಶೇಷ ಮಂತ್ರ ಪಠಣ

    ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳ ತಾಲೂಕಿನ ಕೊಣಾಜೆಯಲ್ಲಿರುವ ಮಂಗಳೂರು ವಿವಿಗೆ ಇ.ಡಿ ಅಧಿಕಾರಿಗಳ ತಂಡ ಭೇಟಿ ನೀಡಿದ್ದು, ಪರೀಕ್ಷಾಂಗ ಕುಲಸಚಿವ ಪ್ರೊ.ರಾಜುಕೃಷ್ಣ ಚಲನ್ನವರ್ ಅವರನ್ನ ವಿಚಾರಣೆ ನಡೆಸಿದೆ. ಇದನ್ನೂ ಓದಿ: ರಾಮಮಂದಿರದ ಮಂಡಲೋತ್ಸವ ಪೂಜೆಗೆ ರಾಯಚೂರಿನ ವೈದಿಕರಿಬ್ಬರು ಆಯ್ಕೆ

    ಕೋಚಿಮುಲ್ ನೇಮಕಾತಿ ಹಗರಣ ಸಂಬಂಧ ಈ ಹಿಂದೆಯೇ ವಿವಿ ಪರೀಕ್ಷಾಂಗ ಕುಲಸಚಿವರಿಗೆ ನೋಟಿಸ್ ನೀಡಲಾಗಿತ್ತು. ಶನಿವಾರ ವಿವಿಗೆ ಭೇಟಿ ನೀಡಿದ ಅಧಿಕಾರಿಗಳ ತಂಡ, ವಿವಿ ಅಧಿಕಾರಿಗಳೇ ಅಭ್ಯರ್ಥಿಗಳಿಗೆ ಲಕ್ಷಾಂತರ ರೂ.ಗಳಿಗೆ ಪ್ರಶ್ನೆಪತ್ರಿಕೆ ಮಾರಾಟ ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ. ಅಲ್ಲದೇ ವಿವಿ ಅಧಿಕಾರಿಗಳ ಇ-ಮೇಲ್, ದೂರವಾಣಿ ಕರೆಗಳ ವಿವರ ಹಾಗೂ ಬ್ಯಾಂಕಿಂಗ್ ವ್ಯವಹಾರಗಳ ಕುರಿತು ತೀವ್ರ ತಪಾಸಣೆ ನಡೆಸಿದೆ. ಇದನ್ನೂ ಓದಿ: ತಲೆಗೂದಲಿಗೆ ಹಗ್ಗ ಕಟ್ಟಿಕೊಂಡೇ ರಾಮರಥ ಎಳೆದ ಸ್ವಾಮೀಜಿ; ಅಯೋಧ್ಯೆ ಕಡೆಗೆ 566 ಕಿಮೀ ಯಾತ್ರೆ

  • ಮಂಗಳೂರು ವಿವಿ ಫಲಿತಾಂಶ 10 ದಿನದೊಳಗೆ ಪ್ರಕಟ – ಅಶ್ವಥ್ ನಾರಾಯಣ

    ಮಂಗಳೂರು ವಿವಿ ಫಲಿತಾಂಶ 10 ದಿನದೊಳಗೆ ಪ್ರಕಟ – ಅಶ್ವಥ್ ನಾರಾಯಣ

    ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ (Mangaluru University) ಪದವಿ ತರಗತಿಗಳ ಪ್ರಥಮ ಸೆಮಿಸ್ಟರ್ ಫಲಿತಾಂಶ ಇನ್ನು 10 ದಿನಗಳ ಒಳಗೆ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವಥ್ ನಾರಾಯಣ (CN Ashwath Narayan) ಹೇಳಿದರು.

    ವಿಧಾನಸಭೆ ಅಧಿವೇಶನದ (Belagavi Session) ಶೂನ್ಯ ವೇಳೆಯಲ್ಲಿ ಶಾಸಕ ಯು.ಟಿ. ಖಾದರ್ (UT Khader) ಅವರು ಪ್ರಸ್ತಾಪಿಸಿದ ವಿಷಯಕ್ಕೆ ಸಚಿವರು ಉತ್ತರಿಸಿದರು. ಇದನ್ನೂ ಓದಿ: `ಮಹಾ’ ಕ್ಯಾತೆಗೆ ವಿಧಾನಸಭೆಯಲ್ಲಿ ಸರ್ವಾನುಮತದ ಖಂಡನಾ ನಿರ್ಣಯ ಅಂಗೀಕಾರ

    ಮಂಗಳೂರು ವಿವಿಯ ಮೊದಲ ಸೆಮಿಸ್ಟರ್ ಫಲಿತಾಂಶ ಇದುವರೆಗೂ ಪ್ರಕಟವಾಗಿರುವುದಿಲ್ಲ. ವಿದ್ಯಾರ್ಥಿ ವೇತನ ಪಾವತಿಗೆ ಹಿಂದಿನ ವರ್ಷದ ಅಂಕಪಟ್ಟಿ ಕೇಳಲಾಗುತ್ತದೆ. ಹೀಗಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲೂ ಸಾಧ್ಯವಾಗುತ್ತಿಲ್ಲ ಎಂದು ಖಾದರ್ ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಹೊಸ ವರ್ಷ.. ಹಳೇ ವೈರಸ್‌; ಚೀನಾದಲ್ಲಿ ಮತ್ತೆ ಕೊರೊನಾ ಆರ್ಭಟ – ಭಾರತದ ಕಥೆ ಏನು?

    ಈ ಹಿಂದೆ ಮಂಗಳೂರು ವಿವಿಯು ನ್ಯಾಕ್ `ಎ’ ಗ್ರೇಡ್‌ನಲ್ಲಿತ್ತು. ಈಗ `ಬಿ’ ಗ್ರೇಡ್‌ಗೆ ಬಂದಿದೆ. ವಿಶ್ವವಿದ್ಯಾಲಯದ ಗುಣಮಟ್ಟ ಪುನಃ ಉತ್ತಮಪಡಿಸಲು ಕ್ರಮವಹಿಸಬೇಕು ಎಂದು ಶಾಸಕ ಯು.ಟಿ.ಖಾದರ್ ಒತ್ತಾಯಿಸಿದರು.

    Live Tv
    [brid partner=56869869 player=32851 video=960834 autoplay=true]

  • ವಿಚಾರ ನಪುಂಸಕರು ಪಠ್ಯ ಪರಿಷ್ಕರಣಾ ವಿವಾದ ಸೃಷ್ಟಿಸಿ ಮೈಕಾಸುರರಾಗಿದ್ದಾರೆ: ಪ್ರತಾಪ್ ಸಿಂಹ

    ವಿಚಾರ ನಪುಂಸಕರು ಪಠ್ಯ ಪರಿಷ್ಕರಣಾ ವಿವಾದ ಸೃಷ್ಟಿಸಿ ಮೈಕಾಸುರರಾಗಿದ್ದಾರೆ: ಪ್ರತಾಪ್ ಸಿಂಹ

    ಉಡುಪಿ: ಅನಗತ್ಯ ತಕರಾರು ಎತ್ತುವವರು ವಿಚಾರ ನಪುಂಸಕರು. ಇವರಲ್ಲಿ ವಿಚಾರ ಇಲ್ಲ ಬರೀ ಉಗುಳು ಮಾತ್ರ. ವಿಚಾರ ನಪುಂಸಕತೆ ಇರುವುದರಿಂದ ಬರವಣಿಗೆ ಬಿಟ್ಟು ಎಷ್ಟೋ ವರ್ಷಗಳಾದ್ದು, ಇದೀಗ ಇವರು ಮೈಕ್ ಮುಂದೆ ನಿಲ್ಲುವ ಮೈಕಾಸುರರಾಗಿದ್ದಾರೆ ಎಂದು ಪಠ್ಯಪುಸ್ತಕ ಪರಿಷ್ಕರಣೆ ಕುರಿತಾಗಿ ಎದ್ದಿರುವ ಚರ್ಚೆ ಕುರಿತಾಗಿ ಕೊಡಗು ಮೈಸೂರು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

    TEXTBOOK

    ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಠ್ಯಪುಸ್ತಕ ಪರಿಷ್ಕರಣೆಯ ಬಗ್ಗೆ ಶಿಕ್ಷಣ ಖಾತೆ ಸಚಿವ ಬಿ.ಸಿ.ನಾಗೇಶ್ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರೊಂದಿಗೆ ಬಹಿರಂಗ ಚರ್ಚೆಗೆ ಆಹ್ವಾನ ನೀಡಿದ್ದಾರೆ. ಚರ್ಚೆಗೆ ಬನ್ನಿ ಚರ್ಚೆಯಿಂದ ಯಾಕೆ ಪಲಾಯನ ಮಾಡಿತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ದೇಶಕ್ಕೆ ಕನ್ನಡಿಗರ ಕೊಡುಗೆ ಅಪಾರ: ಬೊಮ್ಮಾಯಿ

    ಸಮಾಜ ಮತ್ತು ಕನ್ನಡ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದೇವೆ. ಡಿಕೆಶಿ, ಸಿದ್ದರಾಮಯ್ಯ ಇಲ್ಲದ ಸಲ್ಲದ ಊಹಾಪೋಹ ಸೃಷ್ಟಿ ಮಾಡಿದ್ದಾರೆ. ಬರಗೂರು ರಾಮಚಂದ್ರಪ್ಪ, ದೇವನೂರು ಮಹಾದೇವ ಊಹಾಪೋಹ ಸೃಷ್ಟಿ ಮಾಡಿ ಸುದ್ದಿ ಹಬ್ಬಿಸಿದ್ದಾರೆ. ಅನುಮಾನ ಸೃಷ್ಟಿ ಮಾಡುವುದು, ಊಹಾಪೋಹ ಹಬ್ಬಿಸುವುದು ಇವರ ಉದ್ದೇಶ. ವಿಚಾರ ನಪುಂಸಕತೆ ಇಲ್ಲದಿದ್ದರೆ ಬಹಿರಂಗವಾಗಿ ಚರ್ಚೆಗೆ ಬನ್ನಿ. ಭಗತ್ ಸಿಂಗ್ ಪಠ್ಯ ಕೈಬಿಟ್ಟಿದ್ದಕ್ಕೆ ಸಾಕ್ಷ ತೋರಿಸಿ. ನಾರಾಯಣ ಗುರು ಪಠ್ಯವನ್ನು ಸಮಾಜದಿಂದ ಕನ್ನಡ ಪಾಠಕ್ಕೆ ವರ್ಗಾಯಿಸಲಾಗಿದೆ. ಏಳನೇ ತರಗತಿಯ ಪಠ್ಯದಲ್ಲೂ ನಾರಾಯಣ ಗುರುಗಳ ಪಾಠ ಇದೆ ಎಂದರು.

    ದೇವನೂರು ಮಹಾದೇವ ವಿರುದ್ಧ ಗುಡುಗು
    ದೇವನೂರು ಮಹಾದೇವ 2014, 2019ರಲ್ಲಿ ಮೈಸೂರಿನಲ್ಲಿ ಕಾಂಗ್ರೆಸ್ ಪರ ನನ್ನ ವಿರುದ್ಧ ಚುನಾವಣಾ ಪ್ರಚಾರ ಭಾಷಣ ಮಾಡಿದ್ದರು. ಆ ಭಾಗದಲ್ಲಿ ಜನ ಏನು ತೀರ್ಪು ಕೊಟ್ಟಿದ್ದಾರೆ ಎಂದು ಗೊತ್ತಿದೆ. ದೇವನೂರು ಮಹಾದೇವ ಅವರ ಬಗ್ಗೆ ವೈಯಕ್ತಿಕವಾಗಿ ಅಪಾರ ಗೌರವವಿದೆ. ದೇವನೂರು ಕುಸುಮಬಾಲೆ ಎಂಬ ಅದ್ಭುತ ಕೃತಿಯನ್ನು ಬರೆದವರು. ಕಾಂಗ್ರೆಸ್ ಪ್ರಚಾರ ಊಹಾಪೋಹಗಳನ್ನು ಬಿಟ್ಟು ಹಿಂದಿನ ಮಹಾದೇವರಾಗಿ, ಮತ್ತೆ ಪೆನ್ನನ್ನು ಕೈಗೆತ್ತಿಕೊಂಡು ಒಂದು ಅದ್ಭುತ ಕೃತಿಯನ್ನು ರಚನೆ ಮಾಡಿ. ನಾವು ಕೂಡ ದೇವನೂರು ಮಹಾದೇವರನ್ನು ಇಷ್ಟಪಡುತ್ತೇವೆ ಗೌರವಿಸುತ್ತೇವೆ. ಪೆನ್ನಿಗೆ ನಿವೃತ್ತಿ ಕೊಟ್ಟು ನೀವು ಮೈಕ್ ಮುಂದೆ ನಿಂತಿದ್ದೀರಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಾಟಕ್ಕೆ ಒಳಗಾದ ಮಹಿಳೆಗೆ ಚಾಟಿಯಿಂದ ಹೊಡೆದ ಪೂಜಾರಿ

    ನಾಡಗೀತೆಗೆ ರೋಹಿತ್ ಚಕ್ರತೀರ್ಥ ಅಪಮಾನ ಮಾಡಿದ್ದಾರೆ ಎಂಬ ಆರೋಪವನ್ನು ನಾನು ಕೂಡ ಗಮನಿಸಿದ್ದೇನೆ. ವಾಟ್ಸಪ್‍ನಲ್ಲಿ ಬಂದ ಸಂದೇಶ ಎಂದು ಫೇಸ್‍ಬುಕ್‍ನಲ್ಲಿ ಹಾಕಿದ್ದರು. ಅದನ್ನು ಯಾರೋ ವ್ಯಂಗ್ಯ ಮಾಡಿದ್ದರು, ಅದು ತಪ್ಪು. ಅದನ್ನು ರೋಹಿತ್ ಚಕ್ರತೀರ್ಥ ರಚನೆ ಮಾಡಿದ್ದಲ್ಲ. ಸಿದ್ದರಾಮಯ್ಯ ಸಿಎಂ ಆಗಿರುವಾಗ ಈ ಕುರಿತು ಕೇಸುದಾಖಲಾಗಿದೆ ಬಿ ರಿಪೋರ್ಟ್ ಆಗಿದೆ, ಅನಗತ್ಯವಾಗಿ ಒಬ್ಬ ವ್ಯಕ್ತಿಯನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕುವೆಂಪು ಮೈಸೂರಿನಲ್ಲಿ ನೆಲೆ ಇದ್ದಂತಹವರು, ನಾನು ಕುವೆಂಪು ಅಭಿಮಾನಿ ಅವರ ಮೇಲೆ ಅಪಾರ ಗೌರವವಿದೆ. ರೋಹಿತ್ ಚಕ್ರತೀರ್ಥ ಅವರನ್ನು ತುಳಿಯುವ, ತೇಜೋವಧೆ ಮಾಡುವ ಪ್ರಯತ್ನ ನಡೆಯುತ್ತಿದೆ. ವೈಯಕ್ತಿಕವಾಗಿ ಟಾರ್ಗೆಟ್ ಮಾಡುವುದು ಸರಿಯಲ್ಲ. ಬಹಿರಂಗ ಚರ್ಚೆಗೆ ಅವಕಾಶ ನೀಡಿದರೂ ಅವರು ಬರುತ್ತಿಲ್ಲ ಎಂದರು.

    ಹಿಜಬ್ ವಿವಾದ ಸಾಮಾನ್ಯ
    ಮಂಗಳೂರಿನ ಯೂನಿವರ್ಸಿಟಿ ಕಾಲೇಜ್‍ನಲ್ಲಿ ಹಿಜಬ್ ವಿವಾದಕ್ಕೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಜಗತ್ತಿನ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಇದೆ. ಸಮವಸ್ತ್ರ ಸಂಹಿತೆ ಜಾರಿ ಆಗಬೇಕು ಎಂಬ ಶಾಸಕ ರಘುಪತಿ ಭಟ್ ಹೋರಾಟ ಸರಿ ಇದೆ. ಸಮೂಹ ಸಂಹಿತೆ ಪಾಲಿಸಿ ಎಂದು ಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ. ಕೋರ್ಟ್ ತೀರ್ಪಿಗೆ ಗೌರವ ಕೊಡಿ, ಕೋರ್ಟ್ ತೀರ್ಪನ್ನು ಗೌರವಿಸುವ ಮನೋಭಾವನೆ ಬೆಳೆಸಿಕೊಳ್ಳಿ. ತಕರಾರು ಎತ್ತುವ ಕೋರ್ಟ್ ತೀರ್ಪು ಏನು ಎಂಬುದನ್ನು ತಿಳಿದುಕೊಳ್ಳಿ, ದೇಶ ಸಂವಿಧಾನಕ್ಕಿಂತ ನಮ್ಮ ಧರ್ಮವೇ ದೊಡ್ಡದು ಎಂದರೆ ಸಮಸ್ಯೆ ಇರುತ್ತದೆ ಎಂದು ಅಭಿಪ್ರಾಯಪಟ್ಟರು.