Tag: Mangalya chain

  • ಬಸ್ ನಿಲ್ದಾಣದಲ್ಲಿ ಕಳ್ಳನ ಕೈಚಳಕ – ಕುಳಿತಿದ್ದ ಮಹಿಳೆ ಮಾಂಗಲ್ಯ ಕಿತ್ತ ಖದೀಮ

    ಬಸ್ ನಿಲ್ದಾಣದಲ್ಲಿ ಕಳ್ಳನ ಕೈಚಳಕ – ಕುಳಿತಿದ್ದ ಮಹಿಳೆ ಮಾಂಗಲ್ಯ ಕಿತ್ತ ಖದೀಮ

    ವಿಜಯಪುರ: ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಾ ಕುಳಿತಿದ್ದ ಮಹಿಳೆ ಮಾಂಗಲ್ಯ ಸರ ಕಳ್ಳತನ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಮಹಿಳೆ ಪಕ್ಕದಲ್ಲಿಯೇ ಹೊಂಚು ಹಾಕಿ ನಿಂತು ಮಾಂಗಲ್ಯಸರ ಕಿತ್ತುಕೊಂಡು ಖದೀಮ ಓಡಿ ಹೋಗಿದ್ದಾನೆ.

    women chain

    ಕದೀಮನ ಕೃತ್ಯ ಬಸ್ ನಿಲ್ದಾಣದಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆ ಆಗಿದೆ. ಅಲ್ಲದೇ ಈ ಘಟನೆ ಸಪ್ಟೆಂಬರ್ 1 ರಂದು ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ. ಇದನ್ನೂ ಓದಿ: ರಸ್ತೆ ಅಪಘಾತ, ದೇವನಕಟ್ಟಿಯ ಯೋಧ ಮುಂಬೈನಲ್ಲಿ ಸಾವು- ಸ್ವಗ್ರಾಮದಲ್ಲಿ ಅಂತಿಮ ನಮನ

    women chain

    38 ಗ್ರಾಂ ಚಿನ್ನದ ಮಾಂಗಲ್ಯ ಸರ ಕಳೆದುಕೊಂಡವರು ರೇಣುಕಾ ಪಾಟೀಲ್ ಆಗಿದ್ದು, ಇವರು ತಾಳಿಕೋಟೆಯಿಂದ ಯಾದಗಿರಿಯ ದೋರಹಳ್ಳಿಗೆ ತೆರಳಲು ಬಸ್ ಗಾಗಿ ಕಾಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಸದ್ಯ ಈ ಸಂಬಂಧ ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ತಲೆ ಎತ್ತಿರುವ ಅಕ್ರಮ ಕ್ಯಾಸಿನೋ ಅಡ್ಡೆಗಳನ್ನು ಕೂಡಲೇ ನಿಲ್ಲಿಸಿ – ಕೆಜೆ ಜಾರ್ಜ್ ಪತ್ರ

  • ಬಸ್ಸಿನಲ್ಲೇ ಬಿಟ್ಟಿದ್ದ 2.5 ಲಕ್ಷ ಬೆಲೆಯ ಆಭರಣ ಮರಳಿಸಿ ಮಾನವೀಯತೆ ಮೆರೆದ ಚಾಲಕ, ನಿರ್ವಾಹಕ

    ಬಸ್ಸಿನಲ್ಲೇ ಬಿಟ್ಟಿದ್ದ 2.5 ಲಕ್ಷ ಬೆಲೆಯ ಆಭರಣ ಮರಳಿಸಿ ಮಾನವೀಯತೆ ಮೆರೆದ ಚಾಲಕ, ನಿರ್ವಾಹಕ

    ಹಾವೇರಿ: ಬಸ್ ನಲ್ಲಿ ಬಿಟ್ಟು ಹೋಗಿದ್ದ 2.5 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ಮರಳಿ ಪ್ರಯಾಣಿಕರಿಗೆ ನೀಡಿ ಚಾಲಕ ಮತ್ತು ನಿರ್ವಾಹಕರು ಮಾನವೀಯತೆ ಮೆರೆದಿದ್ದಾರೆ.

    ಜಿಲ್ಲೆಯ ಹಿರೇಕೆರೂರಿನಲ್ಲಿ ಘಟನೆ ನಡೆದಿದ್ದು, ಕೆಎಸ್‍ಆರ್ ಟಿಸಿ ಸ್ಲೀಪರ್ ಕೋಚ್ ಬಸ್ಸಿನಲ್ಲಿ ಬೆಂಗಳೂರಿನಿಂದ ಹಿರೇಕೆರೂರಿಗೆ ಪ್ರಯಾಣ ಮಾಡುವಾಗ ಹರಿಹರದ ಮಹಿಳೆಯೊಬ್ಬರು ಚಿನ್ನಾಭರಣವನ್ನ ಕಳೆದುಕೊಂಡಿದ್ದರು. ಆಭರಣವಿರುವ ಪರ್ಸ್ ನ್ನು ಬಸ್ಸಿನಲ್ಲಿ ಬಿಟ್ಟು ಹರಿಹರದಲ್ಲಿ ಇಳಿದಿದ್ದರು.

    ಹಿರೇಕೆರೂರಿನ ನಿಲ್ದಾಣಕ್ಕೆ ಬಸ್ ತಲುಪಿದ ನಂತರ ಮಹಿಳೆ ಇದ್ದ ಸೀಟಿನಲ್ಲಿ ಪರ್ಸ್ ಇರುವುದನ್ನು ಗಮನಿಸಿದರು. ಬಳಿಕ ನಿರ್ವಾಹಕರಾದ ಬಿ.ಪಿ.ಶೆಟ್ಟರ್, ಚಾಲಕ ಪ್ರಭು ಮರಿಗೌಡರ್ ಪಸ್ ಯಾರದಿರಬಹುದೆಂದು ಯೋಚಿಸಿ, ಪತ್ತೆ ಹಚ್ಚಲು ಮುಂದಾದರು. ನಂತರ ಹಿರೇಕೆರೂರಿನ ಬಸ್ ನಿಲ್ದಾಣಕ್ಕೆ ಪರ್ಸ್ ವಾರಸುದಾರರಾದ ಮಹಿಳೆಯನ್ನು ಕರೆಸಿ 2.50 ಲಕ್ಷ ರೂಪಾಯಿ ಬೆಲೆ ಬಾಳುವ 50 ಗ್ರಾಂ. ಚಿನ್ನದ ಮಾಂಗಲ್ಯ ಸರವನ್ನು ವಾಪಸ್ ನೀಡಿದ್ದಾರೆ.

    ಚಾಲಕ ಮತ್ತು ನಿರ್ವಾಹಕರ ಕಾರ್ಯಕ್ಕೆ ಸ್ಥಳೀಯರು ಹಾಗೂ ಸಾರ್ವಜನಿಕರು ಸೇರಿದಂತೆ ಸಾರಿಗೆ ನೌಕರರ ಮುಖಂಡ ಜಿ.ಎಸ್.ದೊಡ್ಡಗೌಡರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಧರ್ಮಸ್ಥಳದ ಹುಂಡಿ ಸೇರಬೇಕಿದ್ದ ಮಾಂಗಲ್ಯ ಸರ ಮತ್ತೆ ಮಹಿಳೆಯ ಕೊರಳು ಸೇರಿತು

    ಧರ್ಮಸ್ಥಳದ ಹುಂಡಿ ಸೇರಬೇಕಿದ್ದ ಮಾಂಗಲ್ಯ ಸರ ಮತ್ತೆ ಮಹಿಳೆಯ ಕೊರಳು ಸೇರಿತು

    ಚಿಕ್ಕಮಗಳೂರು: ಧರ್ಮಸ್ಥಳ ಮುಂಜುನಾಥನ ಹುಂಡಿಗೆ ಸೇರಬೇಕಿದ್ದ ಮಾಂಗಲ್ಯ ಸರ ಮತ್ತೆ ಮಹಿಳೆ ಕೊರಳು ಸೇರಿರುವ ಅಪರೂಪದ ಘಟನೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆದಿದೆ.

    ಫೆಬ್ರವರಿ 6ರಂದು ಶಿಕ್ಷಕಿ ಹೇಮಲತಾ ಪತಿ ಯೋಗೀಶ್ ಜೊತೆ ಆಟದ ಮೈದಾನವೊಂದರಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಮಾಂಗಲ್ಯ ಸರ ಕಳೆದುಕೊಂಡಿದ್ದರು. ನಂತರ ಮಾಂಗಲ್ಯ ಸರ ಯುವಕ ವಿನೋದ್ ಹಾಗೂ ರಾಘವೇಂದ್ರ ಎಂಬವರಿಗೆ ಸಿಕ್ಕಿದೆ. ಈ ವಿಚಾರವಾಗಿ ಇವರಿಬ್ಬರು ಮಾಂಗಲ್ಯ ಸರ ಸಿಕ್ಕಿದ್ದು, ಸರ ನಿಮ್ಮದೇ ಆಗಿದ್ದರೆ ಕರೆ ಮಾಡಿ ಸರ ಸ್ವೀಕರಿಸಿ ಎಂದು ಮೈದಾನದ ಸುತ್ತಾಮುತ್ತ ನಾಮಫಲಕಗಳನ್ನು ಹಾಕಿದ್ದರು.

    ಮಾಂಗಲ್ಯ ಸರ ಕಳೆದುಕೊಂಡ ದಂಪತಿ ಮನನೊಂದು ವಾಕ್ ಬರುವುದನ್ನೆ ನಿಲ್ಲಿಸಿದ್ದರು. ಒಮ್ಮೆ ಶನಿವಾರ ಯೋಗೀಶ್ ಮತ್ತೆ ವಾಕಿಂಗ್‍ಗೆಂದು ಬಂದಾಗ ಸರದ ಬಗೆಗೆ ಹಾಕಿದ್ದ ನಾಮಫಲಕವನ್ನು ನೋಡಿದ್ದಾರೆ. ಬಳಿಕ ಮೊಬೈಲ್ ತರದ ಕಾರಣ ಆ ನಾಮಫಲಕವನ್ನೇ ಕಿತ್ತುಕೊಂಡು ಮನೆಗೆ ಹೋಗಿ ಕರೆ ಮಾಡಿದ್ದಾರೆ. ಆಗ ವಿನೋದ್ ಧರ್ಮಸ್ಥಳ ಬಂದಿರುವುದಾಗಿ ತಿಳಿಸಿ, ನಾಳೆ ಬಂದು ನಿಮ್ಮ ಸರ ವಾಪಸ್ ಕೊಡುತ್ತೇವೆ ಎಂದು ಹೇಳಿದ್ದಾರೆ.

    ಅದೇ ರೀತಿ ಧರ್ಮಸ್ಥಳದಿಂದ ಹಿಂದಿರುಗಿದ ವಿನೋದ್ ಹಾಗೂ ರಾಘವೇಂದ್ರ ಸರದ ಮಾಲೀಕ ಪೇದೆ ಯೋಗೀಶ್ ಹಾಗೂ ಶಿಕ್ಷಕಿ ಹೇಮಲತ ಅವರಿಗೆ ಸರವನ್ನು ವಾಪಸ್ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಮಾಂಗಲ್ಯ ಸರ ಸುಮಾರು 11.500 ಗ್ರಾಂ ಇದ್ದು, ಅಂದಾಜು 60 ಸಾವಿರ ರೂ. ಆಗಿದೆ. ನೂರು ರೂಪಾಯಿ ಸಿಕ್ಕಿದರೂ ವಾಪಸ್ ಕೊಡದ ಈ ಕಾಲದಲ್ಲಿ 60 ಸಾವಿರ ಮೌಲ್ಯದ ಬಂಗಾರದ ಸರವನ್ನು ಹಿಂದಿರುಗಿಸಿದ ವಿನೋದ್ ಹಾಗೂ ರಾಘವೇಂದ್ರ ದಂಪತಿ ಅಭಿನಂದನೆ ಸಲ್ಲಿಸಿದ್ದಾರೆ.


    ಹುಂಡಿ ಸೇರುತ್ತಿದ್ದ ಸರ : ಏಳು ದಿನವಾದರೂ ಸರದ ಮಾಲೀಕರು ಯಾರೂ ಕೇಳದ, ಫೋನ್ ಮಾಡದ ಹಿನ್ನೆಲೆ ವಿನೋದ್ ಹಾಗೂ ರಾಘವೇಂದ್ರ ಅವರು ಮೂರ್ನಾಲ್ಕು ದಿನ ನೋಡಿ ಸರವನ್ನ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಹುಂಡಿಗೆ ಹಾಕಲು ತೀರ್ಮಾನಿಸಿದ್ದರು. ಆದರೆ, ಸರ ಕಳೆದುಕೊಂಡ ಹೇಮಲತಾ ಅವರ ಅದೃಷ್ಟ ಹಾಗೂ ಚೆನ್ನಾಗಿತ್ತು. ಇದರಿಂದ ಹೇಮಲತಾ ಕೂಡ ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ. ಶಾಲೆ, ಮನೆ, ಆಟದ ಮೈದಾನ ಎಲ್ಲಾ ಕಡೆ ಹುಡುಕಿದ್ದೆ. ಎಲ್ಲೂ ಸರ ಸಿಕ್ಕಿರಲಿಲ್ಲ. ಮಾಂಗಲ್ಯ ಸರ ಎಂದು ತುಂಬಾ ನೋವಾಗಿತ್ತು. ಸರ ಸಿಕ್ಕಿದ್ದು ತುಂಬಾ ಖುಷಿಯಾಯ್ತು ಎಂದಿದ್ದಾರೆ.

    ಮತ್ತೊಮ್ಮೆ ಮದುವೆ : ವಾರದಿಂದ ಹುಡುಕಾಡಿದ ಸರ ಸಿಕ್ಕ ಖುಷಿಯಲ್ಲಿ ಪೇದೆ ಯೋಗೀಶ್ ಹಾಗೂ ಶಿಕ್ಷಕಿ ಹೇಮಲತಾ ಪ್ರೇಮಿಗಳ ದಿನದಂದೇ ಮತ್ತೊಮ್ಮೆ ಮದುವೆಯಾಗಿದ್ದಾರೆ. ಸರ ಸಿಕ್ಕ ಖುಷಿಯಲ್ಲಿ ನಗರದ ಬೋಳರಾಮೇಶ್ವರ ದೇವಾಲಯದ ಮುಂಭಾಗ ಯೋಗೀಶ್ ಮತ್ತೊಮ್ಮೆ ಪತ್ನಿ ಕೊರಳಿಗೆ ಮಾಂಗಲ್ಯ ಸರವನ್ನ ಕಟ್ಟಿದ್ದಾರೆ.

    ಈ ವೇಳೆ, ಸರವನ್ನ ಹಿಂದಿರುಗಿಸಿದ ವಿನೋದ್, ರಾಘವೇಂದ್ರ ಹಾಗೂ ಅವರ ಪತ್ನಿ ಕೂಡ ಜೊತೆಗಿದ್ದರು. ದಾರಿಯಲ್ಲಿ ಸಿಕ್ಕ ಮಾಂಗಲ್ಯ ಸರವನ್ನ ವಾರಗಳ ಕಾಲ ಕಷ್ಟಪಟ್ಟು ವಿಭಿನ್ನ ಪ್ರಯತ್ನದ ಮೂಲಕ ನೊಂದ ಮಹಿಳೆಯ ಕೊರಳು ಸೇರಿಸಿದ ವಿನೋದ್ ಹಾಗೂ ರಾಘವೇಂದ್ರ ಅವರ ಕಾರ್ಯ ನಿಜಕ್ಕೂ ಶ್ಲಾಘನೀಯ. ಅವರ ಈ ಕಾರ್ಯಕ್ಕೆ ನಗರದ ಜನ ಕೂಡ ಮೆಚ್ಚುಗೆ ವ್ಯಕ್ತಪಡಿಸಿ, ಇದು ಮಾದರಿ ಹಾಗೂ ಎಲ್ಲರೂ ಈ ನಡೆಯನ್ನ ಬೆಳೆಸಿಕೊಳ್ಳಬೇಕು ಎಂದಿದ್ದಾರೆ.

  • ಕೃಷಿ ಸಾಲಕ್ಕೆ ಅಡವಿಟ್ಟ ಮಾಂಗಲ್ಯ ಸರವನ್ನೇ ಮಾರಿಕೊಂಡ ಬ್ಯಾಂಕ್

    ಕೃಷಿ ಸಾಲಕ್ಕೆ ಅಡವಿಟ್ಟ ಮಾಂಗಲ್ಯ ಸರವನ್ನೇ ಮಾರಿಕೊಂಡ ಬ್ಯಾಂಕ್

    ಬೆಳಗಾವಿ: ಕೃಷಿ ಸಾಲಕ್ಕೆ ಅಡವಿಟ್ಟ ಮಾಂಗಲ್ಯ ಸರವನ್ನೇ ಐಸಿಐಸಿಐ ಬ್ಯಾಂಕ್ ಮಾರಿಕೊಂಡಿರುವ ಘಟನೆ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದಿದೆ.

    ಕೃಷಿಗೆ ಸಂಬಂಧಿಸಿದಂತೆ ಸಾಲ ಪಡೆಯಲು 50 ಸಾವಿರ ರೂ.ಗೆ ಪತ್ನಿಯ 48 ಗ್ರಾಂ. ಚಿನ್ನದ ಮಾಂಗಲ್ಯ ಸರವನ್ನು ಹರೀಶ್ ಮಿರಜಕರ್ ನವೆಂಬರ್ 28, 2018 ರಂದು ಐಸಿಐಸಿಐ ಬ್ಯಾಂಕಿನಲ್ಲಿ ಅಡವಿಟ್ಟಿದ್ದರು. 10 ತಿಂಗಳವರೆಗೆ ಬಡ್ಡಿ ತುಂಬದಿದ್ದಕ್ಕೆ ಕಷ್ಟವಿದೆ ಎಂದು ಅಡವಿಟ್ಟಿದ್ದ ಮಾಂಗಲ್ಯ ಸರವನ್ನೇ ಬ್ಯಾಂಕ್ ಸಿಬ್ಬಂದಿ ಮಾರಿಕೊಂಡಿದ್ದಾರೆ.

    ಹರೀಶ್ ಮಿರಜಕರ್ ಕುಟುಂಬಕ್ಕೆ ಯಾವುದೇ ಮಾಹಿತಿ, ನೋಟಿಸ್ ನೀಡದೇ ಹರಾಜು ಮಾಡಿ ಬ್ಯಾಂಕಿನವರು ಮಾರಿಕೊಂಡಿದ್ದಾರೆ. 1,23,000 ಬ್ಯಾಂಕ್ ಅಧಿಕಾರಿಗಳು ಮಾರಿಕೊಂಡಿದ್ದಾರೆ. ತಮ್ಮ ಬಡ್ಡಿ ಹಣ ಅಸಲು ಕಟ್ ಮಾಡಿಕೊಂಡು ಉಳಿದ ಹಣವನ್ನು ಹರೀಶ್ ಖಾತೆಗೆ ಡಿಪಾಸಿಟ್ ಮಾಡಿದ್ದಾರೆ. ಹರೀಶ್ ತಂದೆ, ತಾಯಿ ಈ ಕುರಿತು ನೊಂದುಕೊಂಡಿದ್ದು, ನಮ್ಮ ಸೊಸೆಯ ಮಾಂಗಲ್ಯ ಸರವನ್ನು ಕೊಡಿ ಎಂದು ಬ್ಯಾಂಕ್ ಮುಂದೆ ಕಣ್ಣೀರು ಹಾಕುತ್ತಿದ್ದಾರೆ.

    ಬ್ಯಾಂಕಿನಲ್ಲಿ ಅಡವಿಟ್ಟ ಮಾಂಗಲ್ಯ ಸರಕ್ಕೆ ಒಂದು ವರ್ಷ ಅವಧಿ ಇದ್ದರೂ, ಒಂದು ವರ್ಷದೊಳಗೆಯೇ ಐಸಿಐಸಿಐ ಬ್ಯಾಂಕಿನವರು ಹರಾಜು ಹಾಕಿದ್ದಾರೆ. ನಮಗೆ ನಮ್ಮ ಸೊಸೆಯ ಮಾಂಗಲ್ಯ ಸರವನ್ನು ಕೊಡಿ ಎಂದು ಹರೀಶ್ ತಂದೆ, ತಾಯಿ ಬ್ಯಾಂಕಿಗೆ ಅಲೆದಾಡುತ್ತಿದ್ದಾರೆ. ಅಲ್ಲದೆ, ನಿತ್ಯ ಬ್ಯಾಂಕಿಗೆ ಬಂದು ವೃದ್ಧರು ಕಣ್ಣೀರಿಡುತ್ತಿದ್ದಾರೆ. ಆದರೆ ಈ ಕುರಿತು ಬ್ಯಾಂಕ್ ಅಧಿಕಾರಿಗಳು ನಾವೇನೂ ಮಾಡಲು ಸಾಧ್ಯವಿಲ್ಲ. ಅದನ್ನು ಮಾರಿಬಿಟ್ಟಿದ್ದೇವೆ ಎಂದು ಹೇಳುತ್ತಿದ್ದಾರೆ.

  • ಮಾಂಗಲ್ಯದ ಹವಳಗಳನ್ನು ಒಡೆಯುವ ಕಾರ್ಯಕ್ಕೆ ಕಿವಿಗೊಡಬೇಡಿ: ಸಚಿವೆ ಉಮಾಶ್ರೀ

    ಮಾಂಗಲ್ಯದ ಹವಳಗಳನ್ನು ಒಡೆಯುವ ಕಾರ್ಯಕ್ಕೆ ಕಿವಿಗೊಡಬೇಡಿ: ಸಚಿವೆ ಉಮಾಶ್ರೀ

    ಬೆಂಗಳೂರು: ಮಾಂಗಲ್ಯ ಸರದಲ್ಲಿನ ಹವಳವನ್ನ ಒಡೆಯುವ ಕಾರ್ಯಕ್ಕೆ ಮಹಿಳೆಯರು ಯಾರು ಕಿವಿಗೊಡಬೇಡಿ. ಇದನ್ನ ಯಾರೋ ದುರುದ್ದೇಶದಿಂದ ಅಪಪ್ರಚಾರ ಮಾಡ್ತಿದ್ದಾರೆ. ಇದರ ಹಿಂದೆ ಹುನ್ನಾರಗಳಿರಬಹುದು ಎಂದು ಕನ್ನಡ ಸಂಸೃತಿ ಇಲಾಖೆಯ ಸಚಿವೆ ಉಮಾಶ್ರೀ ಹೇಳಿದ್ದಾರೆ.

    ಆಷಾಡ ಮಾಸ ದೋಷ ಇದ್ದಿದ್ದೆ ಆಗಿದ್ರೆ, ಹವಳವನ್ನ ತೆಗೆದಿಡಿ, ಆಷಾಡ ಮಾಸ ಮುಗಿದ ಬಳಿಕ ಮತ್ತೆ ಹಾಕಿಕೊಳ್ಳಿ ಅಂತಾ ಹೇಳಬಹುದಿತ್ತು. ಹವಳವನ್ನ ಒಡೆದು ಹಾಕಿ ಅಂತಾ ಸುದ್ದಿ ಹರಿಬಿಡ್ತಿರುವ ಹಿನ್ನೆಲೆ ನೋಡಿದ್ರೆ ಇದನ್ನ ಬೇಕಂತಲೇ ಮಾಡ್ತಿದ್ದಾರೆ ಎಂದು ಸಚಿವೆ ಉಮಾಶ್ರೀ ಶಂಕೆ ವ್ಯಕ್ತಪಡಿಸಿದರು.

    ಈಗ ಮುಂದೆ ಯಾರೆಲ್ಲಾ ಮಾಂಗಲ್ಯ ಒಡೆದು ಹಾಕಬೇಕೆಂದಿದ್ದರೋ, ಅವರೆಲ್ಲ ಮಾಂಗಲ್ಯ ಹಾಕಿಕೊಳ್ಳಿ. ಏನೂ ಆಗೋಲ್ಲ. ನಾನು ಈಗಾಗಲೇ ಕೊಪ್ಪಳ, ಬಳ್ಳಾರಿ, ಚಿತ್ರದುರ್ಗದಲ್ಲಿ ಡಿಸಿಗಳ ಜೊತೆ ಮಾತನಾಡಿದ್ದೇನೆ. ಇಂತಹ ಪ್ರಕರಣಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕಾಗಿದೆ. ಅಧಿಕಾರಿಗಳು ಕಾನುನಾತ್ಮಕವಾಗಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ರು.