Tag: Mango fruit

  • ಹಾಪ್‌ಕಾಮ್ಸ್‌ನಲ್ಲಿ ಇಂದಿನಿಂದ ಮಾವು ಮೇಳ – ಸಚಿವ ಮುನಿರತ್ನ ಚಾಲನೆ

    ಹಾಪ್‌ಕಾಮ್ಸ್‌ನಲ್ಲಿ ಇಂದಿನಿಂದ ಮಾವು ಮೇಳ – ಸಚಿವ ಮುನಿರತ್ನ ಚಾಲನೆ

    ಬೆಂಗಳೂರು: ಒಂದು ಕಡೆ ಬಗೆಬಗೆಯ ಮಾವು, ಮತ್ತೊಂದು ಕಡೆ ಹಣ್ಣುಗಳ ರಾಜ ಹಲಸಿನ ಹಣ್ಣು, ರೈತರಿಂದ ನೇರವಾಗಿ ಗ್ರಾಹಕರ ಕೈಗೆ ತಲುಪಿಸಲು ಹಾಪ್‌ಕಾಮ್ಸ್ ಮತ್ತೆ ಈ ವರ್ಷ ಮಾವು ಮತ್ತು ಹಲಸಿನ ಮೇಳಕ್ಕೆ ಚಾಲನೆ ನೀಡಿದೆ.

    MUNIRATHNA (1

    ಹಾಪ್‌ಕಾಮ್ಸ್ ನಲ್ಲಿ ಇಂದಿನಿಂದ ನಡೆಯುವ ಮಾವು ಮತ್ತು ಹಲಸು ಮೇಳಕ್ಕೆ ತೋಟಾಗಾರಿಕೆ ಸಚಿವ ಮುನಿರತ್ನ ಚಾಲನೆ ನೀಡಿದ್ದು, ಸೀಸನ್ ಮುಗಿಯುವವರೆಗೆ ಗ್ರಾಹಕರಿಗೆ ಮಾವು ಮತ್ತು ಹಲಸಿನ ಹಣ್ಣುಗಳು ರಿಯಾಯಿತಿ ದರದಲ್ಲಿ ಲಭ್ಯವಾಗಲಿದೆ. ಈ ಬಾರಿ ಅಕಾಲಿಕ ಮಳೆಯಿಂದಾಗಿ ಮಾವು ಬೆಳೆ ನಷ್ಟವಾಗಿದ್ದು, ಶೇ.30 ರಷ್ಟು ಮಾತ್ರ ಪಸಲು ಬಂದಿದೆ. ಆದರೂ, ಬಗೆಬಗೆಯ 14 ಬಗೆಯ ಮಾವಿನ ಹಣ್ಣು ಮೇಳದಲ್ಲಿ ಗ್ರಾಹಕರಿಗೆ ಲಭ್ಯವಾಗುತ್ತಿವೆ. ಇದನ್ನೂ ಓದಿ: KPCC ಸಭೆಗೆ ಶಾಸಕಿ ಹೆಬ್ಬಾಳ್ಕರ್, ನಿಂಬಾಳ್ಕರ್ ಗೈರು

    Mango

    ಮಾವು ಮೇಳದಲ್ಲಿ ಬಾದಾಮಿ, ಮಲ್ಲಿಕಾ, ರಸಪೂರಿ, ಬೈಗಂಪಲ್ಲಿ, ಸೇಂದೂರ, ತೋತಾಪುರಿ, ದಶಹರಿ, ಮಲಗೋವಾ, ಹಿಮಾಮ್ ಪಸಂದ್, ಕಾಲಾಪಾಡ್, ಕೇಸರ್, ಸಕ್ಕರೆಗುತ್ತಿ ಮಾವಿನ ಹಣ್ಣುಗಳನ್ನು ರೈತರಿಂದ ಹಾಪ್‌ಕಾಮ್ಸ್ ನೇರವಾಗಿ ಖರೀದಿಸಿ ಮಾರಾಟ ಮಾಡುತ್ತಿವೆ. ಯಾವುದೇ ರಾಸಾಯನಿಕ ಬಳಕೆ ಮಾಡದೇ ನೈಸರ್ಗಿಕವಾಗಿ ಬೆಳೆದ ಹಣ್ಣುಗಳನ್ನು ಇಲ್ಲಿ ಮಾರಾಟ ಮಾಡಲಾಗ್ತಿದೆ. ಜೊತೆಗೆ 7 ಬಗೆಯ ಹಲಸಿನ ಹಣ್ಣುಗಳೂ ದೊರೆಯುತ್ತಿವೆ. ಇದನ್ನೂ ಓದಿ: ನಮ್ಮಲ್ಲಿ ಯಾವುದೇ ಬಣ ಇಲ್ಲ, ಹೈಕಮಾಂಡ್‌ ಹೇಳಿದ್ದೇ ಅಂತಿಮ: ಪರಿಷತ್‌ ಟಿಕೆಟ್‌ ಬಗ್ಗೆ ಡಿಕೆಶಿ ಮಾತು

    ವಿವಿಧ ಬಗೆಯ ಮಾವಿನ ಹಣ್ಣು ಕೆಜಿಗೆ 32 ರಿಂದ 215 ರೂಪಾಯಿ ವರೆಗೆ, ಹಲಸಿನ ಹಣ್ಣು ಪ್ರತಿ ಕೆಜಿಗೆ 25ರೂ. ನಿಗದಿಯಾಗಿದೆ.

  • ಇಲ್ಲಿ 1 ಮಾವಿನ ಹಣ್ಣಿಗೆ 2 ಸಾವಿರ – ತಿಂಗಳಿಗೆ ಮುಂಚೆಯೇ ಶುರುವಾಗಿದೆ ಬುಕ್ಕಿಂಗ್

    ಇಲ್ಲಿ 1 ಮಾವಿನ ಹಣ್ಣಿಗೆ 2 ಸಾವಿರ – ತಿಂಗಳಿಗೆ ಮುಂಚೆಯೇ ಶುರುವಾಗಿದೆ ಬುಕ್ಕಿಂಗ್

    ಇಂಧೋರ್: ಸಾಮಾನ್ಯವಾಗಿ ರೈತರು ಬೆಳೆಯುವ ಮಾವಿನ ಹಣ್ಣುಗಳು 100 ರಿಂದ 300 ಗ್ರಾಂ ಇರುತ್ತವೆ. ಹೆಚ್ಚೆಂದರೆ 500 ಗ್ರಾಂ ಬರಬಹುದು. ಆದರೆ, ಮಧ್ಯಪ್ರದೇಶದ ಜಿಲ್ಲೆಯೊಂದರಲ್ಲಿ ಬೆಳೆಯುವ ಮಾವಿನ ಹಣ್ಣು ಬರೋಬ್ಬರಿ 4 ಕೆಜಿ ವರೆಗೂ ಬರಲಿದ್ದು, ತಿಂಗಳಿಗೆ ಮುಂಚೆಯೇ ಬುಕ್ಕಿಂಗ್ ಶುರುವಾಗಿದೆ.

    ಮಧ್ಯಪ್ರದೇಶದ ಕಥ್ಥಿವಾಡ ಪ್ರದೇಶದಲ್ಲಿ ಬೆಳೆಯಲಾಗುವ ಈ ವಿಶೇಷ ತಳಿಯ ಮಾವಿನ ಹಣ್ಣು ಗರಿಷ್ಠ 4 ಕೆಜಿ ವರೆಗೂ ಇರಲಿದೆ. ಅತ್ಯಂತ ಸಿಹಿಯಾಗಿರುವ ಈ ಮಾವಿನ ಹಣ್ಣು ಗಾತ್ರದಷ್ಟೇ ದುಬಾರಿ ದರವೂ ಹೊಂದಿದ್ದು, 1 ರಿಂದ 2 ಸಾವಿರ ರೂ. ವರೆಗೆ ಮಾರಾಟವಾಗುತ್ತದೆ. ಇದನ್ನೂ ಓದಿ: ಸ್ವಾಮೀಜಿಗಳ ಪಲ್ಲಕ್ಕಿ ಉತ್ಸವಕ್ಕೆ ಬ್ರೇಕ್ – ನಿರ್ಬಂಧ ಹೇರಿದ್ರೆ ನಾನೇ ಪಲ್ಲಕ್ಕಿ ಹೊರುತ್ತೇನೆಂದ ಅಣ್ಣಾಮಲೈ

    MANGO

    ಹೌದು ಅಫ್ಘಾನಿಸ್ತಾನ ಮೂಲದ ನೂರ್‌ಜಹಾನ್ ಎಂಬ ಮಾವಿನ ತಳಿಯ ಹಣ್ಣು 1 ಅಡಿ ಉದ್ದ ಮತ್ತು 4 ಕೆಜಿ ತೂಕವಿರಲಿದೆ. ಜನವರಿ-ಫೆಬ್ರವರಿ ವೇಳೆ ಈ ಮರಗಳಲ್ಲಿ ಹೂವು ಬಿಡಲು ಪ್ರಾರಂಭವಾಗುತ್ತವೆ. ಜೂನ್ ಮೊದಲ ವಾರದ ವರೆಗೆ ಹಣ್ಣು ಬಲಿತು ಮಾರುಕಟ್ಟೆಗೆ ಬರಲು ಸಿದ್ಧವಾಗುತ್ತವೆ. ಆದರೆ, ದುಬಾರಿ ಹವಾಮಾನ ವೈಪರಿತ್ಯದಿಂದಾಗಿ ಮರಗಳಲ್ಲಿ ಈ ಬಾರಿ ಕಾಯಿ ಕಡಿಮೆಯಾಗಿದೆ. ಹಣ್ಣಾಗುವ ಮೊದಲೇ ಹೂವು ಉದುರಿಹೋಗಿದ್ದು, ಮೂರೇ ಮರಗಳಲ್ಲಿನ 250 ಕಾಯಿಗಳು ಉಳಿದಿವೆ. ಇದನ್ನೂ ಓದಿ: ನೀವು ಮಮತಾ ಬ್ಯಾನರ್ಜಿ ಏಜೆಂಟ್‌, ಇಲ್ಲಿಂದ ತೊಲಗಿ: ಚಿದಂಬರಂ ವಿರುದ್ಧ ಕಾಂಗ್ರೆಸ್‌ ಮುಖಂಡರು, ವಕೀಲರ ಆಕ್ರೋಶ

    MP Mango 3
    ಸಾಂರ್ಭಿಕ ಚಿತ್ರ

    ಕಳೆದ ವರ್ಷ ಪ್ರತಿ ಹಣ್ಣನ್ನು 500 ರಿಂದ 1,500ಕ್ಕೆ ಮಾರಾಟ ಮಾಡಲಾಗುತ್ತಿತ್ತು. ಈ ವರ್ಷ 2 ಸಾವಿರ ರೂ. ವರೆಗೆ ಮಾರಾಟ ಮಾಡಲು ನಿರ್ಧರಿಸಲಾಗಿದೆ. ಜೂನ್ ತಿಂಗಳ ವೇಳೆ ಹಣ್ಣುಗಳು ಮಾರುಕಟ್ಟೆಗೆ ಲಗ್ಗೆಯಿಡಲಿವೆ. ಇದಕ್ಕೆ ಆಕರ್ಷಿತರಾಗಿರುವ ಮಾವು ಪ್ರಿಯರು ತಿಂಗಳಿಗೆ ಮುಂಚಿತವಾಗಿಗೆ ಬುಕ್ಕಿಂಗ್ ಮಾಡಿಕೊಳ್ಳಲು ಪ್ರಾರಂಭಿಸಿದ್ದಾರೆ ಎಂದು ಮಾವು ಬೆಳೆಗಾರ ಶಿವರಾಜ್ ಸಿಂಗ್ ಜಾದವ್ ಹೇಳಿದ್ದಾರೆಂದು ಸುದ್ದಿಸಂಸ್ಥೆ ವರದಿ ಮಾಡಿವೆ.


  • ದೀಪಿಕಾರಿಂದ ಮಾವಿನ ಕಾಯಿ ಫೋಟೋ ಪೋಸ್ಟ್ – ಗರ್ಭಿಣಿನಾ ಎಂದು ಫ್ಯಾನ್ಸ್ ಪ್ರಶ್ನೆ

    ದೀಪಿಕಾರಿಂದ ಮಾವಿನ ಕಾಯಿ ಫೋಟೋ ಪೋಸ್ಟ್ – ಗರ್ಭಿಣಿನಾ ಎಂದು ಫ್ಯಾನ್ಸ್ ಪ್ರಶ್ನೆ

    ಮುಂಬೈ: ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಅಪ್ಲೋಡ್ ಮಾಡಿರುವ ಫೋಟೋ ನೋಡಿ ಅಭಿಮಾನಿಗಳು ನೀವು ಗರ್ಭಿಣಿನಾ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

    ದೀಪಿಕಾ ಪಡುಕೋಣೆ ಮತ್ತು ನಟ ರಣ್‍ವೀರ್ ಸಿಂಗ್ ಮದುವೆ ಆದ ಕೆಲವು ದಿನಗಳ ನಂತರ ದೀಪಿಕಾ ಗರ್ಭಿಣಿ ಆಗಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ವದಂತಿಗಳು ಹರಿದಾಡುತ್ತಿದ್ದವು. ಈ ಬಗ್ಗೆ ದೀಪಿಕಾ ಕೂಡ ಸ್ಪಷ್ಟಪಡಿಸಿದ್ದರು. ಆದರೆ ಇದೀಗ ಲಾಕ್‍ಡೌನ್ ಸಮಯದಲ್ಲಿ ದೀಪಿಕಾ ಸಿಹಿ ಸುದ್ದಿ ನೀಡಿದ್ದಾರ ಎಂಬ ಅನುಮಾನ ಮೂಡಿದೆ. ಯಾಕೆಂದರೆ ದೀಪಿಕಾ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿರುವ ಫೋಟೋ ನೋಡಿ ಅಭಿಮಾನಿಗಳು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

    ದೀಪಿಕಾ ಕಟ್ ಮಾಡಿರುವ ಮಾವಿನ ಕಾಯಿ ಪೀಸ್‍ಗಳನ್ನು ಒಂದು ಪ್ಲೇಟಿನಲ್ಲಿ ಹಾಕಿದ್ದಾರೆ. ಅದಕ್ಕೆ ಉಪ್ಪು, ಖಾರ ಹಾಕಿದ್ದು, ಆ ಫೋಟೋವನ್ನು ಶೇರ್ ಮಾಡಿದ್ದಾರೆ. ದೀಪಿಕಾ ಈ ಫೋಟೋ ಶೇರ್ ಮಾಡುತ್ತಿದ್ದಂತೆ ಅಭಿಮಾನಿಗಳು ನೀವು ಗರ್ಭಿಣಿಯೇ?, ಏನಾದರು ಒಳ್ಳೆಯ ಸುದ್ದಿ ಇದಿಯಾ? ಎಂದು ಕಮೆಂಟ್ ಮಾಡುವ ಮೂಲಕ ಪ್ರಶ್ನೆ ಮಾಡುತ್ತಿದ್ದಾರೆ.

    ಸಾಮಾನ್ಯವಾಗಿ ಗರ್ಭಿಣಿಯಾದವರು ಮಾವಿನ ಕಾಯಿ ತಿಂದು ಬಯಕೆ ಈಡೇರಿಸಿಕೊಳ್ಳುತ್ತಾರೆ. ಈಗ ದೀಪಿಕಾ ಕೂಡ ಮಾವಿನ ಕಾಯಿ ಫೋಟೋ ಪೋಸ್ಟ್ ಮಾಡಿರುವುದರಿಂದ ದೀಪಿಕಾ ಸಹ ಮಾವಿನ ಕಾಯಿ ತಿಂದು ಬಯಕೆ ಈಡೇರಿಕೊಳ್ಳುತ್ತಿದ್ದಾರಾ ಎಂದು ಅಭಿಮಾನಿಗಳಲ್ಲಿ ಅನುಮಾನ ಮೂಡಿಸಿದೆ. ಆದರೆ ದೀಪಿಕಾ ಮಾತ್ರ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಿಲ್ಲ.

    ಇತ್ತೀಚೆಗೆ ದೀಪಿಕಾ ಲಾಕ್‍ಡೌನ್ ಸಮಯದಲ್ಲಿ ತಮ್ಮ ಬಾಲ್ಯದ ನೆನಪುಗಳನ್ನು ನೆನೆದು ಪೋಸ್ಟ್ ಮಾಡಿದ್ದರು. ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಬಾಲ್ಯದ ಫೋಟೋಗಳನ್ನು ದೀಪಿಕಾ ಹಂಚಿಕೊಂಡಿದ್ದರು. ಅದಕ್ಕೆ ‘ಬಾಲ್ಯದಲ್ಲೇ ಆರಂಭಿಸಿದ್ದೆ’ ಎಂದು ಕ್ಯಾಪ್ಷನ್ ಹಾಕಿ ಸ್ಟೇಜ್ ಮೇಲೆ ಕ್ಯೂಟ್ ಪೋಸ್ ಕೊಡುತ್ತಾ ನಿಂತಿರುವ ಫೋಟೋವನ್ನು ಶೇರ್ ಮಾಡಿಕೊಂಡಿದ್ದರು. ಹಾಗೆಯೇ ಇನ್ನೊಂದು ಪೋಸ್ಟ್ ನಲ್ಲಿ ಸ್ನೇಹಿತರ ಜೊತೆ ಆಟವಾಡುತ್ತಾ, ಪರಾಟ ತಿನ್ನುತ್ತಿರುವ ಬಾಲ್ಯದ ಫೋಟೋವನ್ನು ಹಂಚಿಕೊಂಡು ಖುಷಿಯನ್ನು ವ್ಯಕ್ತಪಡಿಸಿದ್ದರು.

    ಬಾಲಿವುಡ್‍ನ ನಟಿ ದೀಪಿಕಾ ಪಡುಕೋಣೆ ಮತ್ತು ನಟ ರಣ್‍ವೀರ್ ಸಿಂಗ್ 2018ರ ನವೆಂಬರ್ 14 ಮತ್ತು 15ರಂದು ಇಟಲಿಯ ಕೊಮೊ ಸಿಟಿಯಲ್ಲಿ ಮದುವೆಯಾಗಿದ್ದರು. ನವೆಂಬರ್ 14ರಂದು ಕೊಂಕಣಿ ಹಾಗೂ ನವೆಂಬರ್ 15ರಂದು ಸಿಂಧ್ ಸಂಪ್ರದಾಯದಲ್ಲಿ ದೀಪ್‍ವೀರ್ ವಿವಾಹವಾಗಿದ್ದರು.

    https://www.instagram.com/p/B_t33A_DmF9/?igshid=1wax1sbopplwg