Tag: mangoes

  • 2.5 ಲಕ್ಷ ಮೆಟ್ರಿಕ್ ಟನ್ ಮಾವು ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ

    2.5 ಲಕ್ಷ ಮೆಟ್ರಿಕ್ ಟನ್ ಮಾವು ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ

    – ಮಾವು ಮಾರುಕಟ್ಟೆ ಮಧ್ಯಪ್ರವೇಶ; ಬೆಲೆ ವ್ಯತ್ಯಾಸ ಪಾವತಿಗೆ ಸರ್ಕಾರದ ಒಪ್ಪಿಗೆ: ಚಲುವರಾಯಸ್ವಾಮಿ

    ಬೆಂಗಳೂರು: ನಿರಂತರ ಬೆಲೆ ಕುಸಿತದಿಂದ ಕಂಗೆಟ್ಟಿದ್ದ ಮಾವು ಬೆಳೆಗಾರರ ನೆರವಿಗೆ ಸರ್ಕಾರ ದಾವಿಸಿದೆ. ರಾಜ್ಯದಲ್ಲಿ ಮಾವಿನ‌ (Mangoes) ಬೆಲೆ ಕುಸಿತದ ಹಿನ್ನೆಲೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ನೆರವಾಗುವಂತೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರವೂ ಸಕಾರಾತ್ಮಕ ಸಮ್ಮತಿ ನೀಡಿದೆ.

    ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರೆಡೂ ಪ್ರತಿ ಕೆ.ಜಿ.ಗೆ ಎರೆಡೆರೆಡು ರೂ. ಗಳಂತೆ ಒಟ್ಟು‌ 4 ರೂ. ವ್ಯತ್ಯಾಸ ಪಾವತಿಸಿ ಮಾರುಕಟ್ಟೆ ಚೈತನ್ಯಕ್ಕೆ ಕ್ರಮಕೈಗೊಳ್ಳಲು ಸಿದ್ಧತೆ ನಡೆಸಿವೆ. ಇಂದು ರಾಜ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ (Chaluvaraya Swamy) ವಿಡಿಯೋ‌ ಸಂವಾದದ ಮೂಲಕ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮಾವು ಬೆಳೆಗಾರರ ಪರಿಸ್ಥಿತಿ ಮನವರಿಕೆ ಮಾಡಿಕೊಟ್ಟರು. ಇದನ್ನೂ ಓದಿ: ಹೆಲ್ಪ್‌ಲೈನ್‌ ಹೆಸರಲ್ಲಿ ವಂಚನೆ ಆರೋಪ – ಬೆಂಗಳೂರಿನ ಸಂಧ್ಯಾ ಪವಿತ್ರ ವಿರುದ್ಧ ಎಫ್‌ಐಆರ್

    2025-26ನೇ ಸಾಲಿನ ಮಾರುಕಟ್ಟೆ ಋತುವಿನಲ್ಲಿ ಮಾವಿಗೆ PDPS ಯೋಜನೆಯ ಅನುಷ್ಠಾನಕ್ಕೆ ಸಚಿವ ಚಲುವರಾಯಸ್ವಾಮಿ ಮಾಡಿದ ಮನವಿಗೆ ಕೇಂದ್ರ ಕೃಷಿ ಸಚಿವರೂ ಸಹ ಸಮ್ಮತಿ ನೀಡಿದರು.

    2.5 ಲಕ್ಷ ಮೆಟ್ರಿಕ್ ಟನ್ ಮಾವು ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಸೋಮವಾರ ಈ‌ ಬಗ್ಗೆ ಅಧಿಕೃತ ಆದೇಶ ಹೊರಬೀಳುವ ನಿರೀಕ್ಷೆ ‌ಇದೆ. ಈ‌ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೃಷಿ ಮತ್ತು ತೋಟಗಾರಿಕೆ ಇಲಾಖೆ‌ ಅಧಿಕಾರಿಗಳು ಹಾಜರಿದ್ದರು. ಇದನ್ನೂ ಓದಿ: ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಶೀಘ್ರದಲ್ಲೇ ಸರ್ಕಾರಿ ಉದ್ಯೋಗ: ಸಚಿವ ವೆಂಕಟೇಶ್

    ಮಾವು ಕರ್ನಾಟಕದ ಪ್ರಮುಖ ತೋಟಗಾರಿಕಾ ಬೆಳೆಗಳಲ್ಲೊಂದಾಗಿದೆ. 2025-26ನೇ ಋತುವಿನಲ್ಲಿ 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ. ಈ ಬಾರಿ ಅಂದಾಜು 8 ರಿಂದ 10 ಲಕ್ಷ ಟನ್ ಮಾವು ಉತ್ಪಾದನೆಯಾಗಿದೆ. ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರಮುಖ ಮಾವು ಬೆಳೆ ಪ್ರದೇಶಗಳಾಗಿವೆ. ಕರ್ನಾಟಕದಲ್ಲಿ, ಮಾವಿನ ಕೊಯ್ಲು ಮೇ ನಿಂದ ಜುಲೈ ವರೆಗೆ ನಡೆಯುತ್ತದೆ. ಈ ಅವಧಿಯಲ್ಲಿ, ಮಾರುಕಟ್ಟೆ ಬೆಲೆಗಳಲ್ಲಿ ಗಮನಾರ್ಹ ಏರಿಳಿತಗಳನ್ನು ಗಮನಿಸಲಾಗಿದೆ.

    2025ರ ಮೇ ತಿಂಗಳಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಮಾವಿನ ಹಣ್ಣಿನ ಮಾದರಿ ಬೆಲೆಗಳು ಕ್ವಿಂಟಾಲ್‌ಗೆ 1,200 ರೂ. ನಿಂದ 2,500 ರೂ. ವರೆಗೆ ಇತ್ತು. ಶ್ರೀನಿವಾಸಪುರ ಮಾರುಕಟ್ಟೆಯಲ್ಲಿ ತೋತಾಪುರಿ ವರಿಟೆಯ ಚಾಲ್ತಿಯಲ್ಲಿರುವ ಮಾರುಕಟ್ಟೆ ಬೆಲೆಗಳು ಪ್ರತಿ ಕ್ವಿಂಟಾಲ್‌ಗೆ 450-550 ರೂ.ಗೆ ಕುಸಿದಿದೆ. ಕರ್ನಾಟಕ ಕೃಷಿ ಬೆಲೆ ಆಯೋಗವು ಮಾವಿನ A1 + FL ಕೃಷಿ ವೆಚ್ಚವನ್ನು ಕ್ವಿಂಟಲ್‌ಗೆ 3,460 ರೂ. ಮತ್ತು C-3 ವೆಚ್ಚಕ್ಕೆ 5,466 ರೂ. ಎಂದು ಶಿಫಾರಸು ಮಾಡಿದೆ. ಈ ನಿಟ್ಟಿನಲ್ಲಿ ಜೂ.11 ರಂದು ಭಾರತ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಯಿತು. ಜೂ.13 ರಂದು ಸ್ಪಷ್ಟೀಕರಣಗಳಿಗೆ ಉತ್ತರವನ್ನು ನೀಡಲಾಯಿತು. ತೋಟಗಾರಿಕೆ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕ ಮಾವು ಅಭಿವೃದ್ಧಿ ಮಂಡಳಿಯನ್ನು PDPS ಅನುಷ್ಠಾನಕ್ಕಾಗಿ ರಾಜ್ಯ ಮಟ್ಟದ ಸಂಸ್ಥೆಯಾಗಿ ಗೊತ್ತುಪಡಿಸಲಾಗಿದೆ.

  • ಮಾವಿಗೆ ಬಿಸಿಲಿನ ಶಾಪ – ಬರೋಬ್ಬರಿ 400 ಕೋಟಿ ಮೌಲ್ಯದ ಮಾವು ನಷ್ಟ

    ಮಾವಿಗೆ ಬಿಸಿಲಿನ ಶಾಪ – ಬರೋಬ್ಬರಿ 400 ಕೋಟಿ ಮೌಲ್ಯದ ಮಾವು ನಷ್ಟ

    ರಾಮನಗರ: ಭೀಕರ ಬರಗಾಲದಿಂದ ಹಣ್ಣುಗಳ ರಾಜ ಎನಿಸಿಕೊಂಡಿರುವ ಮಾವು (Mangoes) ಬೆಳೆ ಸಂಪೂರ್ಣ ನೆಲ ಕಚ್ಚಿದ್ದು, ರೈತರಿಗೆ ಸಂಕಷ್ಟ ಎದುರಾಗಿದೆ. ಜಿಲ್ಲೆಯಲ್ಲಿ ಬರೋಬ್ಬರಿ 400ಕೋಟಿ ರೂ. ಮೌಲ್ಯದ ಬೆಳೆ ನಾಶವಾಗಿದೆ. ಇತ್ತ ಹಾಕಿದ ಬಂಡವಾಳವೂ ಇಲ್ಲದೇ, ಹತ್ತಾರು ವರ್ಷಗಳಿಂದ ಬೆಳೆದಿದ್ದ ಮರಗಳೂ ಉಳಿಯದೇ ರೈತರ ಬದುಕು ಶೋಚನೀಯ ಸ್ಥಿತಿಗೆ ತಲುಪಿದೆ.

    ರೇಷ್ಮೆನಗರಿ ಎಂದು ಬಿರುದು ಪಡೆದ ರಾಮನಗರ (Ramanagar) ಹಣ್ಣಿನ ರಾಜ ಮಾವು ಬೆಳೆಯುವಲ್ಲೂ ಹೆಸರು ಮಾಡಿದೆ. ರಾಜ್ಯದಲ್ಲಿ ಮಾವಿನ ಸೀಸನ್ ಶುರುವಾಗೋದು ಇಲ್ಲಿಂದಲೇ. ಅತ್ಯಂತ ಉತ್ಕೃಷ್ಟ ಹಾಗೂ ವಿವಿಧ ತಳಿಯ ಮಾವನ್ನು ವಿದೇಶಕ್ಕೆ ರಫ್ತು ಮಾಡುವ ಇತಿಹಾಸ ಈ ಜಿಲ್ಲೆಗಿದೆ. ಈ ಬಾರಿ ಮಾವು ಬೆಳೆಯ ಇತಿಹಾಸದಲ್ಲೇ ಕಂಡು ಕೇಳರಿಯದ ಬರದಿಂದ ಮಾವು ಬೆಳೆ ನೆಲಕಚ್ಚಿದೆ. ಇದನ್ನೂ ಓದಿ: ಇಂಡಿಯಾ ಒಕ್ಕೂಟ ಗೆದ್ದರೇ ಮರುದಿನವೇ ಜೈಲಿನಿಂದ ಹೊರಬರುವೆ: ಕೇಜ್ರಿವಾಲ್

    ಸೀಸನ್‍ನಲ್ಲಿ ಸುಮಾರು 2 ಲಕ್ಷದ 50 ಸಾವಿರ ಮೆಟ್ರಿಕ್ ಟನ್ ಮಾವು ಉತ್ಪಾದನೆ ಆಗುತ್ತಿದ್ದ ಮಾವು ಈ ಬಾರಿ ಕೆಲವೇ ಕೆಲವು ಟನ್‍ಗಳಿಗೆ ಮಾತ್ರ ಸೀಮಿತವಾಗಿದೆ. ಮಾವು ಬೆಳೆದ ರೈತರ ಲೆಕ್ಕಾಚಾರ ಸಂಪೂರ್ಣ ಉಲ್ಟಾ ಆಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

    ತಾಪಮಾನ ಏರಿಕೆಯಿಂದಾಗಿ ಮರದಲ್ಲಿ ಕಾಯಿಗಟ್ಟ ಬೇಕಿದ್ದ ಹೂಗಳು, ಸಣ್ಣ ಕಾಯಿಗಳು ಬಿಸಿಲಿನ ಝಳಕ್ಕೆ ಉದುರಿ ಹೋಗುತ್ತಿವೆ. ಜೊತೆಗೆ ಕೀಟಗಳ ಸಮಸ್ಯೆ ಸಹ ಮಾವಿಗೆ ಆವರಿಸಿದೆ.

    ಜಿಲ್ಲೆಯಲ್ಲಿ ಒಟ್ಟು 30 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಜಮೀನಿನಲ್ಲಿ ಮಾವು ಬೆಳೆಯಲಾಗುತ್ತಿದೆ. ಫೆಬ್ರವರಿ, ಮಾರ್ಚ್ ಹಾಗೂ ಏಪ್ರಿಲ್ ತಿಂಗಳಿನಲ್ಲಿನ ತೀವ್ರ ತಾಪಮಾನದಿಂದ ಹೂಗಳೆಲ್ಲ ಉದುರಿ 90% ಇಳುವರಿ ಕುಸಿದಿದ್ದು 10% ರಷ್ಟು ಮಾತ್ರ ಇಳುವರಿಯಾಗಿದೆ. ಅದೂ ಕೂಡಾ ಬಿಸಿಲಿಗೆ ಒಣಗಿ ಗುಣಮಟ್ಟ ಕಳೆದುಕೊಂಡಿದ್ದು, ಮಾರುಕಟ್ಟೆಯಲ್ಲೂ ಕೊಂಡುಕೊಳ್ಳುವವರಿಲ್ಲದೇ ಬೇಡಿಕೆ ಕುಸಿತ ಕಂಡಿದೆ. ಈ ಬಗ್ಗೆ ಸಮೀಕ್ಷೆ ಮಾಡಿರುವ ಜಿಲ್ಲಾಡಳಿತ 400ಕೋಟಿ ರೂ. ಮೌಲ್ಯದ ಮಾವು ಬೆಳೆ ನಾಶ ಆಗಿರುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿದೆ.

    ಇನ್ನೂ ಮಾವು ಬೆಳೆಗೆ ವಿಮೆ ನೀಡಲು ವಿಮಾ ಕಂಪನಿಗಳು ಹಿಂದೇಟು ಹಾಕಿವೆ. ಉಷ್ಣಾಂಶದಿಂದ ಬೆಳೆ ನಾಶವಾಗಿರೋದಕ್ಕೆ ವಿಮೆ ಅನ್ವಯವಾಗುವುದಿಲ್ಲ ಎಂದು ಹೇಳುತ್ತಿರುವುದು ಮಾವು ಬೆಳೆಗಾರರ ಆತಂಕಕ್ಕೆ ಕಾರಣವಾಗಿದೆ. ಕೂಡಲೇ ಸರ್ಕಾರ ಈ ಬಗ್ಗೆ ಗಮನಹರಿಸಿ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ರೈತರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸಂತ್ರಸ್ತೆಯ ಅಪಹರಣ ಕೇಸ್- ಹೆಚ್‌ಡಿ ರೇವಣ್ಣಗೆ ಜಾಮೀನು ಮಂಜೂರು

  • ಮಾವಿನ ಹಣ್ಣಿಗಾಗಿ ನಡೆದ ಗಲಾಟೆ- ಸಹೋದರರನ್ನು ಬಡಿದು ಕೊಂದ ದುಷ್ಕರ್ಮಿಗಳು

    ಮಾವಿನ ಹಣ್ಣಿಗಾಗಿ ನಡೆದ ಗಲಾಟೆ- ಸಹೋದರರನ್ನು ಬಡಿದು ಕೊಂದ ದುಷ್ಕರ್ಮಿಗಳು

    ರಾಂಚಿ: ಮಾವಿನ ಹಣ್ಣುಗಳನ್ನು (Mangoes) ಕೀಳುವ ವಿಚಾರವಾಗಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಸಹೋದರರಿಬ್ಬರು ಕೊಲೆಗೀಡಾದ ಘಟನೆ ಜಾರ್ಖಂಡ್‌ನ (Jharkhand) ಪಾಕುರ್‌ನಲ್ಲಿ ನಡೆದಿದೆ.

    ಮೃತರನ್ನು ಡೇವಿಧನ್ ಮುರ್ಮು ಮತ್ತು ವಕೀಲ ಮುರ್ಮು ಎಂದು ಗುರುತಿಸಲಾಗಿದೆ. ಗಣೇಶಪುರ ಗ್ರಾಮದಲ್ಲಿ ರಾತ್ರಿ ಹಣ್ಣನ್ನು ಕೀಳುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಪರಸ್ಪರ ಹೊಡೆದಾಡಿಕೊಂಡಿದ್ದು, ಇಬ್ಬರೂ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಆಸ್ತಿ ವಿವಾದ ವ್ಯಕ್ತಿಗೆ ಚಾಕು ಇರಿತ – 10 ದಿನಗಳ ಕಾಲ ಒದ್ದಾಡಿ ಪ್ರಾಣಬಿಟ್ಟ

    ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಗಲಾಟೆಯಲ್ಲಿ ಭಾಗಿಯಾದ ಹೆಚ್ಚಿನ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಉಳಿದ ಆರೋಪಿಗಳನ್ನು ಬಂಧಿಸಲು ಬಲೆ ಬೀಸಲಾಗಿದೆ. ಅಲ್ಲದೇ ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ (Law And Order) ಕಾಪಾಡಲು ಪೊಲೀಸರನ್ನು (Police) ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಭಾರೀ ಅನಾಹುತದಿಂದ ಮಹಾರಾಷ್ಟ್ರ ಸಚಿವರು ಜಸ್ಟ್ ಮಿಸ್

  • ದೀದಿಗೆ 600 KG ಮಾವಿನ ಹಣ್ಣು ಗಿಫ್ಟ್‌ ಕಳುಹಿಸಿದ ಬಾಂಗ್ಲಾದೇಶದ ಪ್ರಧಾನಿ

    ದೀದಿಗೆ 600 KG ಮಾವಿನ ಹಣ್ಣು ಗಿಫ್ಟ್‌ ಕಳುಹಿಸಿದ ಬಾಂಗ್ಲಾದೇಶದ ಪ್ರಧಾನಿ

    ಕೋಲ್ಕತ್ತಾ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ (Sheikh Hasina) ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Sheikh Hasina) ಅವರಿಗೆ 600 ಕೆಜಿ ಮಾವಿನ ಹಣ್ಣುಗಳನ್ನು ಉಡುಗೊರೆಯಾಗಿ ಕಳುಹಿಸಿದ್ದಾರೆ.

    ʻಹಿಂಸಾಗರ್ʼ ಹಾಗೂ ʻಲಂಗ್ರಾʼ ತಳಿಯ ಮಾವಿನ ಹಣ್ಣುಗಳನ್ನು (Mangoes) ಉಡುಗೊರೆಯಾಗಿ ಕಳುಹಿಸಿಕೊಟ್ಟಿದ್ದಾರೆ. ಕಳೆದ ವರ್ಷ ಸಹ ಮಾವಿನ ಹಣ್ಣುಗಳನ್ನು ಕಳುಹಿಸಿಕೊಡಲಾಗಿತ್ತು ಎಂದು ಬಾಂಗ್ಲಾದೇಶದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಹಸೀನಾ ಅವರು ಈಶಾನ್ಯದ ಎಲ್ಲಾ ಮುಖ್ಯಮಂತ್ರಿಗಳಿಗೂ ಮಾವಿನ ಹಣ್ಣುಗಳನ್ನು ಕಳುಹಿಸಿದ್ದಾರೆ. ಕಳೆದ ವರ್ಷ ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಪಶ್ಚಿಮ ಬಂಗಾಳ, ತ್ರಿಪುರಾ ಮತ್ತು ಅಸ್ಸಾಂ ಮುಖ್ಯಮಂತ್ರಿಗಳಿಗೆ ಮಾವಿನ ಹಣ್ಣುಗಳನ್ನು ಉಡುಗೊರೆಯಾಗಿ ಕಳುಹಿಸಿದ್ದರು. ಇದನ್ನೂ ಓದಿ: ಟ್ವಿಟ್ಟರ್ ಕಂಪನಿ ಮುಚ್ಚುತ್ತೇವೆ, ಉದ್ಯೋಗಿಗಳ ಮೇಲೆ ದಾಳಿ: ಭಾರತದಿಂದ ಬೆದರಿಕೆ ಬಂದಿತ್ತು ಎಂದ ಡಾರ್ಸಿ

    ರಾಜತಾಂತ್ರಿಕ ಪ್ರಯತ್ನಗಳ ಭಾಗವಾಗಿ ಬಾಂಗ್ಲಾದೇಶದ ಪ್ರಧಾನಿ ಮಮತಾ ಬ್ಯಾನರ್ಜಿಗೆ ಮಾವಿನ ಹಣ್ಣುಗಳನ್ನು ಕಳುಹಿಸಿದ್ದಾರೆ. ಇದನ್ನೂ ಓದಿ: Cyclone Biparjoy – ಬೀಸಲಿದೆ 150 ಕಿ.ಮೀ ವೇಗದಲ್ಲಿ ಬಿರುಗಾಳಿ, ಈಗಾಗಲೇ 7,500 ಮಂದಿ ಸ್ಥಳಾಂತರ

  • ಜಸ್ಟ್ 1 ಮಾವಿನ ಹಣ್ಣಿನ ಬೆಲೆ 1 ಸಾವಿರ – ಈಗಲೇ ಮುಂಗಡ ಬುಕ್ಕಿಂಗ್

    ಜಸ್ಟ್ 1 ಮಾವಿನ ಹಣ್ಣಿನ ಬೆಲೆ 1 ಸಾವಿರ – ಈಗಲೇ ಮುಂಗಡ ಬುಕ್ಕಿಂಗ್

    ಭೋಪಾಲ್: ಮಾವಿನ ಹಣ್ಣಿನ ಸೀಸನ್ ಮುಗಿಯುತ್ತಾ ಬಂತು ಹೀಗಿರುವಾಗ ಮಧ್ಯಪ್ರದೇಶದಲ್ಲಿನ ವಿಶಿಷ್ಟ ತಳಿಯ ಮಾವಿನ ಮರ ಈಗ ಫಸಲು ನೀಡಲು ಆರಂಭಿಸಿದೆ. ಆದರೆ ಒಂದು ಮಾವಿನಹಣ್ಣಿ ಬೆಲೆಯನ್ನು ಕೇಳಿದರೆ ಖಂಡಿತ ಆಶರ್ಯವಾಗಲಿದೆ.

    ಗುಜರಾತ್ ಗಡಿಯಲ್ಲಿರುವ ಅಲಿರಜ್‍ಪುರ ಜಿಲ್ಲೆಯ ಕಥ್ಥಿವಾಡ ಪ್ರದೇಶದಲ್ಲಿ ಮಾತ್ರ ಬೆಳೆಯವ ಈ ಫಸಲು ನೂರ್ ಜಹಾನ್ ಮಾವಿನಕಾಯಿ ಎಂದೇ ಪ್ರಸಿದ್ಧವಾಗಿದೆ. ಒಂದು ಡಜನ್ ಮಾವಿನಹಣ್ಣು ಖರಿದೀಸುವ ಹಣದಲ್ಲಿ ಒಂದೇ ನೂರ್ ಜಹಾನ್ ಹಣ್ಣು ಮಾರಾಟವಾಗುತ್ತಿದೆ. ಒಂದು ಹಣ್ಣಿಗೆ 500 ರಿಂದ 1ಸಾವಿರ ರೂಪಾಯಿಗಳವರೆಗೆ ಹಣ್ಣು ಮಾರಾಟವಾಗುತ್ತದೆ. ಇದನ್ನೂ ಓದಿ: ರಶ್ಮಿಕಾ ಬಗ್ಗೆ ಕಮೆಂಟ್ ಮಾಡಿದವರ ಚಳಿ ಬಿಡಿಸಿದ ರಕ್ಷಿತ್ ಶೆಟ್ಟಿ

    ಹಣ್ಣಿನ ಗಾತ್ರ ಉಳಿದ ಮಾವಿನಹಣ್ಣುಗಳಿಗೆ ಹೊಲಿಸಿದರೆ ತುಂಬಾ ದೊಡ್ಡದ್ದಾಗಿರುತ್ತದೆ. ಒಂದು ಅಡಿಗೂ ಹೆಚ್ಚು ಉದ್ದ ಬೆಳೆಯವ ಈ ಮಾವಿನಹಣ್ಣು 2 ರಿಂದ 3.5 ಕೆಜಿಗಳಷ್ಟು ತೂಕ ಹೊಂದಿರುತ್ತದೆ.

    ನನ್ನ ತೋಟದಲ್ಲಿರುವ ಮೂರು ನೂರ್ ಜಹಾನ್ ಮಾವಿನಮರಗಳಲ್ಲಿ 250 ಹಣ್ಣುಗಳು ಬೆಳದಿವೆ. ಸಾಮಾನ್ಯವಾಗಿ ಜನವರಿ-ಫೆಬ್ರುವರಿಯಲ್ಲಿ ಹೂವು ಬಿಡಲು ಆರಂಭಿಸಿ, ಜೂನ್ ತಿಂಗಳು ಶುರುವಾದಂತೆ ಹಣ್ಣು ನೀಡುತ್ತವೆ. ಈ ಹಣ್ಣುಗಳಿಗಾಗಿ ಮುಂಗಡ ಬುಕಿಂಗ್ ಆಗಲೇ ಆರಂಭವಾಗಿದೆ. ಮಧ್ಯಪ್ರದೇಶ ಮತ್ತು ಗುಜರಾತ್ ಜನರೇ ಈ ಹಣ್ಣಿಗೆ ಬೇಡಿಕೆ ಇದೆ ಎಂದು ಕತ್ಥಿವಾಡದ ರೈತ ಶುವರಾಜ್ ಸಿಂಗ್ ಜಾಧವ್ ಹೇಳಿದ್ದಾರೆ.

    ಕಳೆದ ಬಾರಿಗಿಂತ ಈ ವರ್ಷ ಫಸಲು ಚೆನ್ನಾಗಿ ಬಂದಿದ್ದರೂ, ಕೊರೊನಾದಿಂದಾಗಿ ವ್ಯಪಾರಕ್ಕೆ ಹೊಡೆತ ಬೀಳಬಹುದು. 2019ರಲ್ಲಿ ನಮ್ಮ ತೋಟದಲ್ಲಿ ಒಂದೊಂದು ನೂರ್ ಜಹಾನ್ ಮಾವಿನಹಣ್ಣು ಸರಿಸುಮಾರು 2.75 ಕೆಜಿ ಬೆಳೆದಿದ್ದವು. ಒಂದು ಮಾವಿನ ಹಣ್ಣಿಗೆ 1,200 ರೂಪಾಯಿಗೆ ಮಾರಾಟ ಮಾಡಿದ್ದೇನೆ ಎಂದು ಮತ್ತೊಬ್ಬ ನೂರ್ ಜಹಾನ್ ಹಣ್ಣಿನ ಬೆಳೆಗಾರರು ಹೇಳಿದ್ದಾರೆ.