ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆಯ ಫಲಿತಾಂಶವೂ (Haryana Election Result) ಇಂದೇ (ಅಕ್ಟೋಬರ್ 8) ಪ್ರಕಟವಾಗಲಿದ್ದು, ಮತ ಎಣಿಕೆ ಕಾರ್ಯ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. ಹರಿಯಾಣದಲ್ಲಿ 90 ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರ ಬೀಳಲಿದ್ದು, ಅಧಿಕಾರದ ಗದ್ದುಗೆ ಯಾರ ಪಾಲಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
2019ರ ಅಸೆಂಬ್ಲಿ ಚುನಾವಣೆಯಲ್ಲಿ ರಾಜ್ಯದ 90 ಸ್ಥಾನಗಳಲ್ಲಿ ಬಿಜೆಪಿ 40, ಕಾಂಗ್ರೆಸ್ (Congress) 31 ಮತ್ತು ಜನನಾಯಕ ಜನತಾ ಪಕ್ಷ (BJP) 10 ಸ್ಥಾನಗಳನ್ನು ಗೆದ್ದಿದ್ದವು. ಜೆಜೆಪಿ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚಿಸಿತ್ತು. ದುಶ್ಯಂತ್ ಚೌಟಾಲಾ ಉಪಮುಖ್ಯಮಂತ್ರಿಯಾದರು. ಮಾರ್ಚ್‌ನಲ್ಲಿ ಬಿಜೆಪಿ ಮನೋಹರ್ ಲಾಲ್ ಖಟ್ಟರ್ ಬದಲಿಗೆ ನಯಾಬ್ ಸಿಂಗ್ ಸೈನಿ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಿದ ನಂತರ ಮೈತ್ರಿ ಕೊನೆಗೊಂಡಿತ್ತು. ಇದೀಗ ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ಬಿಜೆಪಿ ಅಧಿಕಾರದ ಗದ್ದುಗೆ ಏರುವ ವಿಶ್ವಾಸದಲ್ಲಿದ್ದರೆ, ಕಾಂಗ್ರೆಸ್ ಅಧಿಕಾರ ಹಿಡಿಯಲು ಪ್ರಯತ್ನಿಸಿದೆ. ಈ ಗೆಲುವಿಗೆ ಪಕ್ಷದ ಪ್ರಣಾಳಿಕೆಗಳೂ ಮಹತ್ವದ ಪಾತ್ರ ವಹಿಸುತ್ತವೆಯೇ ಎಂಬುದನ್ನು ಕಾದುನೋಡಬೇಕಿದೆ. ಯಾವ ಪಕ್ಷದ ಪ್ರಣಾಳಿಕೆ ಹೇಗಿದೆ? ಎಂಬುದನ್ನು ನೋಡುವುದಾದರೆ…
ಹರಿಯಾಣಕ್ಕೆ ಕಾಂಗ್ರೆಸ್ ಸಪ್ತ ಗ್ಯಾರಂಟಿ!
1. 300 ಯೂನಿಟ್ ವರೆಗೆ ಉಚಿತ ವಿದ್ಯುತ್ ಮತ್ತು 25 ಲಕ್ಷ ರೂ.ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು.
2. 18 ರಿಂದ 60 ವರ್ಷದೊಳಗಿನ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ. ನೀಡುವ ಜೊತೆಗೆ 500 ರೂ.ಗೆ ಎಲ್‌ಪಿಜಿ ಸಿಲಿಂಡರ್ ನೀಡಲಾಗುವುದು.
3. 2 ಲಕ್ಷ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಡ್ರಗ್ ಮುಕ್ತ ಹರಿಯಾಣ ಮಾಡುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು
4. ವೃದ್ಧಾಪ್ಯ, ಅಂಗವಿಕಲ ಮತ್ತು ವಿಧವಾ ಪಿಂಚಣಿ 6,000 ರೂ. ಹಾಗೂ ಹಳೆಯ ಪಿಂಚಣಿ ಯೋಜನೆ (OPS) ಮರುಸ್ಥಾಪಿಸಲಾಗುವುದು.
5. ಜಾತಿ ಗಣತಿ ನಡೆಸಲಾಗುವುದು, ಕೆನೆ ಪದರದ ಮಿತಿಯನ್ನು 10 ಲಕ್ಷ ರೂ.ಗೆ ಹೆಚ್ಚಿಸಲಾಗುವುದು.
6. ಕನಿಷ್ಠ ಬೆಂಬಲ ಬೆಲೆ (MSP) ಕಾನೂನುಬದ್ಧವಾಗಿ ಖಾತರಿಪಡಿಸುತ್ತದೆ. ಬೆಳೆ ಪರಿಹಾರ ತಕ್ಷಣ ದೊರೆಯಲಿದೆ.
7. ಬಡ ಕುಟುಂಬಗಳಿಗೆ 100 ಚದರ ಅಡಿಯ ನಿವೇಶನ, 3.5 ಲಕ್ಷ ವೆಚ್ಚದ 2 ಕೋಣೆಗಳ ಮನೆ
ಬಿಜೆಪಿ ಗ್ಯಾರಂಟಿಗಳೇನು?
* ಲಡೋ ಲಕ್ಷ್ಮಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಮಾಸಿಕ 2,100 ರೂಪಾಯಿ ಭತ್ಯೆ ನೀಡುವುದಾಗಿ ಬಿಜೆಪಿ ಭರವಸೆ
* 10 ಕೈಗಾರಿಕಾ ನಗರಗಳನ್ನು ನಿರ್ಮಿಸಲು ಯೋಜನೆ ಈ ಮೂಲಕ ಸ್ಥಳೀಯ ಯುವಕರಿಗೆ 50,000 ಉದ್ಯೋಗಗಳನ್ನು ಸೃಷ್ಟಿ
* ಚಿರಾಯು-ಆಯುಷ್ಮಾನ್ ಯೋಜನೆಯು ಪ್ರತಿ ಕುಟುಂಬಕ್ಕೆ ರೂ 10 ಲಕ್ಷದವರೆಗೆ ಉಚಿತ ಚಿಕಿತ್ಸೆ ಮತ್ತು 70 ವರ್ಷಕ್ಕಿಂತ ಮೇಲ್ಪಟ್ಟ ವೃದ್ಧರಿಗೆ ಹೆಚ್ಚುವರಿ ರೂ 5 ಲಕ್ಷವನ್ನು ನೀಡುತ್ತದೆ
* ಕನಿಷ್ಠ ಬೆಂಬಲ ಬೆಲೆಯಲ್ಲಿ 24 ಬೆಳೆಗಳ ಖರೀದಿಯನ್ನು ಖಾತರಿಪಡಿಸಲಾಗಿದೆ
* 200,000 ಸರ್ಕಾರಿ ಉದ್ಯೋಗ ಭರವಸೆ ನೀಡಲಾಗಿದೆ
* ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 500,000 ಮನೆಗಳನ್ನು ನಿರ್ಮಾಣ
* ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಡಯಾಲಿಸಿಸ್, ಜೊತೆಗೆ ಎಲ್ಲಾ ಆಸ್ಪತ್ರೆಗಳಲ್ಲಿ ಉಚಿತ ರೋಗನಿರ್ಣಯ ಸೇವೆಗಳು
* ಪ್ರತಿ ಜಿಲ್ಲೆಗೂ ಒಲಂಪಿಕ್ ಗೇಮ್ಸ್ ನರ್ಸರಿ
* ಹರ್ ಘರ್ ಗೃಹನಿ ಯೋಜನೆ ಅಡಿಯಲ್ಲಿ ಸಿಲಿಂಡರ್‌ಗಳನ್ನು ರೂ 500 ಕ್ಕೆ ನೀಡಲಾಗುತ್ತದೆ
* ಆವಲ್ ಬಾಲಿಕಾ ಯೋಜನೆಯು ಗ್ರಾಮೀಣ ಪ್ರದೇಶದ ಪ್ರತಿ ಕಾಲೇಜಿಗೆ ಹೋಗುವ ವಿದ್ಯಾರ್ಥಿಗೆ ಸ್ಕೂಟರ್ ಅನ್ನು ಖಾತರಿಪಡಿಸುತ್ತದೆ
* ಪ್ರತಿಯೊಬ್ಬ ಹರ್ಯಾನ್ವಿ ಅಗ್ನಿವೀರ್‌ಗೆ ಸರ್ಕಾರಿ ಉದ್ಯೋಗದ ಭರವಸೆ ನೀಡಲಾಗುವುದು
ನವದೆಹಲಿ: ಜಮ್ಮು- ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು (ಅಕ್ಟೋಬರ್ 8) ಪ್ರಕಟವಾಗಲಿದ್ದು, ಮತ ಎಣಿಕೆ ಕಾರ್ಯ ಬೆಳಗ್ಗೆ 8 ಗಂಟೆಗೆ ಶುರುವಾಗಲಿದೆ. ಲೋಕಸಭೆ ಚುನಾವಣೆ ನಡೆದ ಬಳಿಕ ನಡೆದ ಹೈವೋಲ್ಟೇಜ್ ಚುನಾವಣೆ ಇದಾಗಿದ್ದು, ಜಮ್ಮು-ಕಾಶ್ಮೀರದ ಚುನಾವಣೆ ಬಹಳ ಮಹತ್ವ ಪಡೆದುಕೊಂಡಿದೆ. ಜಮ್ಮು ಮತ್ತು ಕಾಶ್ಮೀರ, ಹರಿಯಾಣದಲ್ಲಿ 90 ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರ ಬೀಳಲಿದೆ.
ಅದೇ ರೀತಿ ಹರಿಯಾಣದಲ್ಲೂ ಹ್ಯಾಟ್ರಿಕ್ ಕನಸು ಕಂಡಿರುವ ಬಿಜೆಪಿಗೆ ಸೆಡ್ಡು ಹೊಡೆದು, ಕಾಂಗ್ರೆಸ್ ಪಕ್ಷ ಅಧಿಕಾರ ಪಡೆಯಲು ಪ್ರಯತ್ನಿಸಿದೆ. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತಕ್ಕೆ ಒಳಪಟ್ಟ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿರುವ ಕಾರಣ ದೇಶದ ಗಮನಸೆಳೆದಿದೆ. ಈ ಫಲಿತಾಂಶವು ಈ ವರ್ಷ ಕೊನೆಗೆ ವಿಧಾನಸಭೆ ಚುನಾವಣೆ ನಡೆಯಲಿರುವ ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜಕೀಯದ ಮೇಲೂ ಪರಿಣಾಮ ಬೀರಬಹುದು ಎಂಬುದು ರಾಜಕೀಯ ಪರಿಣತರ ಲೆಕ್ಕಾಚಾರ.
ಈ ಚುನಾವಣೆ ಗದ್ದುಗೆ ಹಿಡಿಯಲು ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಡಿಯಾ ಮೈತ್ರಿ ಕೂಟ ಹಾಗೂ ಬಿಜೆಪಿ ಪಕ್ಷಗಳ ಪ್ರಣಾಳಿಕೆ ಪರಿಣಾಮಕಾರಿಯಾಗಲಿದೆಯೇ ಹಾಗಿದ್ದರೆ, ಪಕ್ಷಗಳ ಪ್ರಣಾಳಿಕೆಯಲ್ಲಿ ಏನಿದೆ ಎಂಬುದನ್ನು ತಿಳಿಯಲು ಮುಂದೆ ಓದಿ…
ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೇಸ್ ಪ್ರಣಾಳಿಕೆ:
* ಜಮ್ಮು ಮತ್ತು ಕಾಶ್ಮೀರದ ಅರ್ಹ ನಿರುದ್ಯೋಗಿ ಯುವಕರಿಗೆ 1 ವರ್ಷದವರೆಗೆ ಪ್ರತಿ ತಿಂಗಳು 3,500 ರೂ.ವರೆಗೆ ನಿರುದ್ಯೋಗ ಭತ್ಯೆ ನೀಡುವ ಭರವಸೆ
* 30 ದಿನಗಳಲ್ಲಿ ಉದ್ಯೋಗ ಕ್ಯಾಲೆಂಡರ್ ನೀಡುವ ಮೂಲಕ ಖಾಲಿ ಇರುವ 1 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ
* ಪೊಲೀಸ್, ಅಗ್ನಿಶಾಮಕ ದಳ ಮತ್ತು ಅರಣ್ಯ ಸಂರಕ್ಷಣಾ ಪಡೆಗಳಿಗೆ ವಿಶೇಷ ಗಡಿ ನೇಮಕಾತಿಯನ್ನು ಪುನರುಜ್ಜೀವನಗೊಳಿಸುವ ಭರವಸೆ
* ಭೂರಹಿತರು, ಹಿಡುವಳಿದಾರರು ಮತ್ತು ಜಮೀನು ಹೊಂದಿರುವ ಕೃಷಿಕ ಕುಟುಂಬಗಳಿಗೆ ರೂ 4,000 ಹೆಚ್ಚುವರಿ ಆರ್ಥಿಕ ಬೆಂಬಲ
* ನಿರುದ್ಯೋಗಿ ಇಂಜಿನಿಯರುಗಳ ಗುಂಪುಗಳಿಗೆ ಶೇ.30 ರಷ್ಟು ನಿರ್ಮಾಣ ಕಾಮಗಾರಿ ಸಂಬಂಧಿತ ಗುತ್ತಿಗೆಗಳನ್ನು ಹಂಚಿಕೆ ಮಾಡುವ ಯೋಜನೆಯನ್ನು ಪುನಶ್ಚೇತನಗೊಳಿಸುವುದಾಗಿ ಭರವಸೆ
* ಮಹಿಳಾ ಸಮ್ಮಾನ್ ಕಾರ್ಯಕ್ರಮದಡಿ ಕುಟುಂಬದ ಮಹಿಳೆಗೆ ಮಾಸಿಕ 3000 ರೂ.ಗಳ ನೆರವು ನೀಡುವುದಾಗಿ ಭರವಸೆ
ನ್ಯಾಷನಲ್ ಕಾನ್ಫರೆನ್ಸ್ (NC)
* ಎನ್‌ಸಿ ಪ್ರಣಾಳಿಕೆಯು ವಿಶೇಷ ಸ್ಥಾನಮಾನ ಕುರಿತಾದ 370ನೇ ವಿಧಿಯನ್ನು ಮರಳಿ ಸ್ಥಾಪಿಸುವುದಾಗಿ ಭರವಸೆ
* ಎನ್ ಸಿ ಅಧಿಕಾರಕ್ಕೆ ಬಂದರೆ ಎಲ್ಲಾ ರಾಜಕೀಯ ಕೈದಿಗಳಿಗೆ ಕ್ಷಮಾದಾನ
* ಕಾಶ್ಮೀರಿ ಪಂಡಿತರನ್ನು ಕಣಿವೆಗೆ ಘನತೆಯಿಂದ ಹಿಂದಿರುಗಿಸುವುದಾಗಿ ಭರವಸೆ
* 200 ಯೂನಿಟ್ ಉಚಿತ ವಿದ್ಯುತ್, ವಿದ್ಯುತ್ ಮತ್ತು ನೀರಿನ ಬಿಕ್ಕಟ್ಟಿಗೆ ಪರಿಹಾರ
* ಜಮ್ಮು ಮತ್ತು ಕಾಶ್ಮೀರಕ್ಕೆ ಜಲ-ವಿದ್ಯುತ್ ವಿದ್ಯುತ್ ಯೋಜನೆಗಳ ವರ್ಗಾವಣೆ
* ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಪ್ರತಿ ವರ್ಷ 12 ಎಲ್‌ಪಿಜಿ ಸಿಲಿಂಡರ್‌ಗಳನ್ನು ಉಚಿತ
ಪಿಡಿಪಿ
* ಮಸೀದಿ, ಮಂದಿರಾ ಗುರುದ್ವಾರಗಳಿಗೆ ಉಚಿತ ವಿದ್ಯುತ್
* ಗುತ್ತಿಗೆ ಶಿಕ್ಷಕರ ಗೌರವ ಧನ ಹೆಚ್ಚಳ
* ಜೈಲು ಖೈದಿಗಳಿಗೆ ಉಚಿತ ಕಾನೂನು ಸಲಹೆ
* ರಾಜ್ಯದ ವಿಶೇಷ ಸ್ಥಾನಮಾನ ಮರು ಸ್ಥಾಪನೆ
* ಆರ್ಥಿಕ ಸ್ಥಿತಿ ಮರುಸ್ಥಾಪನೆ
* 60,000 ದಿನಗೂಲಿಗಳನ್ನು ಕ್ರಮಬದ್ಧಗೊಳಿಸುವುದು
* ಹಳೆಯ ಪಿಂಚಣಿ ಯೋಜನೆ ಜಾರಿ
* J&K ಪೊಲೀಸರಿಗೆ ತೊಂದರೆಗೊಳಗಾಗದ ಪ್ರದೇಶ ಭತ್ಯೆ
ಬಿಜೆಪಿ
* ಯುವಕರಿಗೆ 5 ಲಕ್ಷ ಉದ್ಯೋಗಾವಕಾಶ ಕಲ್ಪಿಸಿ, ನ್ಯಾಯಯುತ ಮತ್ತು ಪಾರದರ್ಶಕ ನೇಮಕಾತಿ ಪ್ರಕ್ರಿಯೆ ಖಚಿತಪಡಿಸಿಕೊಳ್ಳಿ
* ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ 10,000 ರೂ.
* ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ದರದಲ್ಲಿ 50% ಕಡಿತ
* ಮಾ ಸಮ್ಮಾನ್ ಯೋಜನೆ ಅಡಿಯಲ್ಲಿ ಪ್ರತಿ ಮನೆಯ ಹಿರಿಯ ಮಹಿಳೆಗೆ ವಾರ್ಷಿಕ 18,000 ರೂ.
* ಉಜ್ವಲ ಫಲಾನುಭವಿಗಳಿಗೆ ವರ್ಷಕ್ಕೆ 2 ಉಚಿತ ಸಿಲಿಂಡರ್
* ಅಟಲ್ ವಸತಿ ಯೋಜನೆಯಡಿ ಭೂರಹಿತ ಫಲಾನುಭವಿಗಳಿಗೆ ಉಚಿತ ಭೂಮಿ ಹಂಚಿಕೆ.
* ವೃದ್ಧಾಪ್ಯ, ವಿಧವೆ ಮತ್ತು ಅಂಗವಿಕಲರಿಗೆ ಪಿಂಚಣಿ ಮೂರು ಪಟ್ಟು ಹೆಚ್ಚಳ
* ಪ್ರಗತಿ ಶಿಕ್ಷಾ ಯೋಜನೆಯಡಿ ಕಾಲೇಜು ವಿದ್ಯಾರ್ಥಿಗಳಿಗೆ ವರ್ಷಕ್ಕೆ 3,000 ರೂ. ಪ್ರಯಾಣ ಭತ್ಯೆ.
* 1,000 ಹೊಸ ವೈದ್ಯಕೀಯ ಕಾಲೇಜು ಸೀಟುಗಳನ್ನು ಸೇರಿಸಿ
* ಶ್ರೀನಗರದಲ್ಲಿ ಮೆಟ್ರೋ ಆರಂಭ, ಭಯೋತ್ಪಾದನೆ ನಿಗ್ರಹ
ನವದೆಹಲಿ: ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಣಾಳಿಕೆಗಳಲ್ಲಿನ (Manifesto) ಭರವಸೆಗಳನ್ನು ಈಡೇರಿಸುವಾಗ ಅದು ಸಾರ್ವಜನಿಕರಿಗೆ ನೇರ ಅಥವಾ ಪರೋಕ್ಷ ಆರ್ಥಿಕ ಸಹಾಯಕ್ಕೆ ಕಾರಣವಾಗಬಹುದು. ಆದರೆ ಅದು ಪ್ರಜಾಪ್ರತಿನಿಧಿ ಕಾಯ್ದೆಯಡಿಯಲ್ಲಿ ಭ್ರಷ್ಟಾಚಾರವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಹೇಳಿದೆ.
ರಾಜಕೀಯ ಪಕ್ಷವು ತನ್ನ ಪ್ರಣಾಳಿಕೆಯಲ್ಲಿನ ಭರವಸೆಗಳನ್ನು ಈಡೇರಿಸುವಾಗ ಸಾರ್ವಜನಿಕರಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಆರ್ಥಿಕ ಸಹಾಯಕ್ಕೆ ಕಾರಣವಾಗುತ್ತವೆ. ಹಾಗಂತ ಅದು ಆ ಪಕ್ಷದ ಅಭ್ಯರ್ಥಿಯ ಭ್ರಷ್ಟಾಚಾರಕ್ಕೆ ಕಾರಣವಾಗುತ್ತದೆ ಎಂಬ ವಾದವನ್ನು ನಾವು ಒಪ್ಪಲು ಸಾಧ್ಯವಿಲ್ಲ ಎಂದು ತನ್ನ ಆದೇಶದಲ್ಲಿ ಸುಪ್ರೀಂ ಕೋರ್ಟ್ ತಿಳಿಸಿದೆ. ಇದನ್ನೂ ಓದಿ: ನಕ್ಸಲರಿಂದ ನಿರಂತರ ಬೆದರಿಕೆ- ಪದ್ಮಶ್ರೀ ಹಿಂದಿರುಗಿಸಲು ಹೇಮಚಂದ್ ಮಾಂಝಿ ನಿರ್ಧಾರ
2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆಗಳು ಸಾರ್ವಜನಿಕರಿಗೆ ನೇರ ಮತ್ತು ಪರೋಕ್ಷ ಆರ್ಥಿಕ ಸಹಾಯವಾಗಿದ್ದು, ಇದು ಭ್ರಷ್ಟ ಚುನಾವಣಾ ಅಭ್ಯಾಸವಾಗಿದೆ ಎಂದು ಶಶಾಂಕ್ ಜೆ ಶೀಧರ್ ಮೊದಲು ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್‌ನಲ್ಲಿ ಅರ್ಜಿ ವಜಾ ಆದ ಬಳಿಕ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇದನ್ನೂ ಓದಿ: ಇವಿಎಂ ಯಂತ್ರಗಳು ಏನು ಆಗದೇ ಹೋದರೆ ಸರಿ, ಜನ ನಮ್ಮ ಪರವಾಗಿದ್ದಾರೆ: ಡಿಕೆಶಿ
ಕಲಬುರಗಿ: ಬಿಜೆಪಿ ಪ್ರಣಾಳಿಕೆ (BJP Manifesto) ಘೋಷಣೆಗಳ ಪುಸ್ತಕದಂತಿದ್ದು, ಮೋದಿ (Narendra Modi) ಫೋಟೋ ಆಲ್ಬಮ್ ತರ ಇದೆ. ಅವರ ಪಿಕ್‌ನಿಕ್‌ನ ವಿಭಿನ್ನ ಫೋಟೋಗಳು ಬಿಟ್ಟರೆ ಯುವಕರಿಗೆ, ಮಹಿಳೆಯರಿಗೆ, ರೈತರಿಗೆ, ಬಡವರಿಗೆ, ಶ್ರಮಿಕರಿಗೆ, ನಿರ್ಗತಿಕರಿಗೆ ಉಪಯೋಗವಾಗುವಂತಹ ಯಾವುದೇ ಅಂಶಗಳಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kahrge) ತೀವ್ರ ವಾಗ್ದಾಳಿ ನಡೆಸಿದರು.
ಕಲಬುರಗಿ (Kalaburagi) ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪ್ರಣಾಳಿಕೆ ಈ ಹಿಂದಿನ ಅಚ್ಛೇದಿನ್‌ನಿಂದ ಹಿಡಿದು ಈಗಿನ ಮೋದಿ ಕೀ ಗ್ಯಾರಂಟಿವರೆಗೆ ಬಂದಿದೆ. ಈ ಹಿಂದಿನ ಹತ್ತು ವರ್ಷಗಳ ಗ್ಯಾರಂಟಿಗಳು ಯಾರ ಗ್ಯಾರಂಟಿಗಳಾಗಿದ್ದವು? ಅವರದೇ ಗ್ಯಾರಂಟಿಗಳಾದ ಅಚ್ಛೇದಿನ್, ಸ್ಕಿಲ್ ಇಂಡಿಯಾ, ಮೇಕ್ ಇನ್ ಇಂಡಿಯಾ, 100 ಸ್ಮಾರ್ಟ್ ಸಿಟಿಗಳು, 2 ಕೋಟಿ ಉದ್ಯೋಗ ಸೃಷ್ಟಿಯ ಗ್ಯಾರಂಟಿಗಳು ಏನಾದವು? ಯಾವ ಗ್ಯಾರಂಟಿಗಳು ಅನುಷ್ಠಾನಗೊಂಡಿವೆ? ಅವರ ಗ್ಯಾರಂಟಿಗಳಿಗೆ ವಾರೆಂಟಿಯೇ ಇಲ್ಲ. ಹಾಗಾಗಿ ಜನರು ಅವರ ಗ್ಯಾರಂಟಿಗಳನ್ನು ನಂಬುವುದಿಲ್ಲ. ನಮ್ಮ ಸರ್ಕಾರದ ಗ್ಯಾರಂಟಿಗಳನ್ನೇ ಅವರು ಕಾಪಿ ಮಾಡಿಕೊಂಡಿದ್ದಾರೆ. ಯಾಕೆಂದರೆ ನಮ್ಮ ಗ್ಯಾರಂಟಿಗಳಿಗೆ ಖರ್ಗೆ ಸಾಹೇಬರ, ಸಿದ್ದರಾಮಯ್ಯನವರ ಹಾಗೂ ಡಿಕೆ ಶಿವಕುಮಾರ್ ಅವರ ಸಾಕ್ಷಿ ಇದೆ ಎಂದರು. ಇದನ್ನೂ ಓದಿ: ಭಾರತದಲ್ಲಿ ದಾಖಲೆ – ಚುನಾವಣೆ ನಡೆಯುವ ಮೊದಲೇ ನಗದು, ಮದ್ಯ ಸೇರಿ ಒಟ್ಟು 4,658 ಕೋಟಿ ಮೌಲ್ಯದ ವಸ್ತುಗಳು ವಶ
ಯುವಕರ ಬಗ್ಗೆ ಮೋದಿಯ ಗ್ಯಾರಂಟಿಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಾಯಿದೆ ತರಲಾಗುವುದು ಎಂದಿದೆ. ಅವರದೇ ಪಕ್ಷ ಇಲ್ಲಿ ಅಧಿಕಾರದಲ್ಲಿದ್ದಾಗ ಪರೀಕ್ಷೆಗಳಲ್ಲಿ ಅವಾಂತರ ನಡೆದಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಪರೀಕ್ಷೆಗಳ ಅಕ್ರಮ ತಡೆಗೆ ಬಿಲ್ ಪಾಸ್ ಮಾಡಿ ಅದನ್ನು ರಾಜ್ಯಪಾಲರ ಸಹಿಗೆ ಕಳುಹಿಸಲಾಗಿತ್ತು. ಆದರೆ ಬಿಲ್ ವಾಪಸ್ ಬಂದಿದೆ ಎಂದು ಹೇಳಿದರು. ಇದನ್ನೂ ಓದಿ: ಮಿಸ್ಟರ್ ಕುಮಾರಸ್ವಾಮಿ ನೀನು ಚುನಾವಣೆಯಲ್ಲಿ ಗೆಲ್ಲಲ್ಲ – ಏಕವಚನದಲ್ಲೇ ಹರಿಹಾಯ್ದ ಡಿಕೆಶಿ
ಕೇಂದ್ರದ ಅಂಕಿ ಅಂಶಗಳ ಪ್ರಕಾರ, ಕೇಂದ್ರ ಸರ್ಕಾರದಲ್ಲಿ 30 ಲಕ್ಷ ಕೇಂದ್ರದ ಹುದ್ದೆಗಳು ಖಾಲಿ ಇವೆ. ಅವುಗಳಲ್ಲಿ 9.64 ಲಕ್ಷ ಹುದ್ದೆಗಳು ಹಣಕಾಸು ಇಲಾಖೆಯಲ್ಲಿ, 3 ಲಕ್ಷ ಹುದ್ದೆಗಳು ರೈಲ್ವೆ ಇಲಾಖೆಯಲ್ಲಿ, 2.2 ಲಕ್ಷ ಹುದ್ದೆಗಳು ಸೇನೆಯ ಸಿವಿಲ್ ವಿಭಾಗದಲ್ಲಿ, 1.20 ಲಕ್ಷ ಹುದ್ದೆಗಳು ಅಂಚೆ ಇಲಾಖೆಯಲ್ಲಿ, 74,000 ಹುದ್ದೆಗಳು ಕಂದಾಯ ಇಲಾಖೆಯಲ್ಲಿ ಖಾಲಿ ಇವೆ. ಈ ಎಲ್ಲಾ ಹುದ್ದೆ ತುಂಬಲು ಯಾವ ಕ್ರಮ ಕೈಗೊಳ್ಳಲಾಗುವುದು ಎನ್ನುವ ಕುರಿತು ಬಿಜೆಪಿ ಪ್ರಣಾಳಿಕೆಯಲ್ಲಿ ಇಲ್ಲ. ಐಒಎಲ್ ವರದಿ ಪ್ರಕಾರ 83% ಯುವಕರು ನಿರುದ್ಯೋಗಿಗಳಾಗಿದ್ದಾರೆ. ಲೋಕನೀತಿ ಸರ್ವೆ ಪ್ರಕಾರ, 79% ಯುವಕರಿಗೆ ಉದ್ಯೋಗ ಅವಕಾಶಗಳು ಸಿಗುತ್ತಿಲ್ಲ. ಈ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ಸಮಾವೇಶ ನಡೆದ ಜಾಗದಲ್ಲಿ ಕಸ ತೆಗೆದ ಯದುವೀರ್ ಒಡೆಯರ್
ಬಿಜೆಪಿಯವರು ಸ್ಕಿಲ್ ಇಂಡಿಯಾ ಯೋಜನೆಯಡಿಯಲ್ಲಿ 2022ರ ಒಳಗಾಗಿ 40 ಕೋಟಿ ಯುವಕರಿಗೆ ತರಬೇತಿ ನೀಡುವುದಾಗಿ ಹೇಳಿದ್ದು, ಈ ಗುರಿಯಲ್ಲಿ ಇದುವರೆಗೆ ಕೇವಲ 3.51% (1.40 ಕೋಟಿ) ಜನರಿಗೆ ತರಬೇತಿ ನೀಡಿದ್ದಾರೆ ಹೊರತು ಉದ್ಯೋಗ ನೀಡಿಲ್ಲ. ಈ 3.51% ರಲ್ಲಿ 80% ಯುವಕರಿಗೆ ಉದ್ಯೋಗ ಸಿಕ್ಕಿಲ್ಲ. 20% ಯುವಕರು ಈ ಯೋಜನೆ ಉಪಯೋಗ ಇಲ್ಲ ಎಂದು ಬಿಟ್ಟು ಹೋಗಿದ್ದಾರೆ ಎಂದು ಅಂಕಿ ಅಂಶ ನೀಡಿ ವಿವರಿಸಿದರು. ಇದನ್ನೂ ಓದಿ: ಮಹಿಳೆಯರನ್ನ ಅವಮಾನಿಸಿಲ್ಲ – ಹೆಣ್ಣುಮಕ್ಕಳ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ ಕುಮಾರಸ್ವಾಮಿ
ಕಳೆದ ಸಲ ಬಂದಾಗ ಮೈಸೂರು, ಹಂಪಿ, ಅಂಜನಾದ್ರಿ ಅಭಿವೃದ್ಧಿ ಮಾಡುವುದಾಗಿ ಮೋದಿ ಹೇಳಿದ್ದರು. ಅವೆಲ್ಲ ಏನಾಯ್ತು? ಈಗ ಮತ್ತೆ ಭಾನುವಾರ ಅದೇ ಮಾತನ್ನೇ ಹೇಳಿದ್ದಾರೆ. ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾಗಿದ್ದ ಬರ ಪರಿಹಾರ, ತೆರಿಗೆ ಪರಿಹಾರ ಕುರಿತು ಮಾತೇ ಆಡಿಲ್ಲ. ದೇವೇಗೌಡ, ಕುಮಾರಸ್ವಾಮಿ, ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರನ್ನು ಪಕ್ಕ ಕೂರಿಸಿಕೊಂಡು ಕಾಂಗ್ರೆಸ್ ಪಕ್ಷದ ಕುಟುಂಬ ರಾಜಕಾರಣ ಹಾಗೂ ಭ್ರಷ್ಟಚಾರದ ಬಗ್ಗೆ ಮಾತನಾಡುತ್ತಾರೆ. ಯಡಿಯೂರಪ್ಪ ಭ್ರಷ್ಟಾಚಾರ ಮಾಡಿದ್ದಾರೆ ಎಂದು ತಾನೆ ಅವರನ್ನು ಸಿಎಂ ಸ್ಥಾನದಿಂದ ಇಳಿಸಿದ್ದು? ಯಡಿಯೂರಪ್ಪ ವಿಜಯೇಂದ್ರ ಅವರದ್ದು ಕುಟುಂಬ ರಾಜಕಾರಣವಲ್ಲವೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: `ಲೋಕ’ ಅಖಾಡದಲ್ಲಿ ಮತ್ತೆ ಮೋದಿ-ಗೌಡರ ಜೋಡಿ ಕಮಾಲ್ – ಏ.20ಕ್ಕೆ ದೇವನಹಳ್ಳಿಯಲ್ಲಿ ಬೃಹತ್ ಮೈತ್ರಿ ಸಮಾವೇಶ
ಮಹಿಳೆಯರಿಗೆ ಅನುಕೂಲವಾಗಲೆಂದು ನಮ್ಮ ಸರ್ಕಾರ ಶಕ್ತಿ, ಗೃಹಲಕ್ಷ್ಮಿ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ, ಬಿಜೆಪಿಯ ಮಿತ್ರ ಪಕ್ಷ ಜೆಡಿಎಸ್‌ನ ಕುಮಾರಸ್ವಾಮಿ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಹಗುರವಾಗಿ ಮಾತನಾಡಿದ್ದಾರೆ. ಈ ಬಗ್ಗೆ ಮೋದಿ, ವಿಜಯೇಂದ್ರ, ಅಶೋಕ್ ಸ್ಪಷ್ಟನೆ ನೀಡಲಿ. ಕುಮಾರಸ್ವಾಮಿ ವೆಸ್ಟೆಂಡ್‌ನಲ್ಲಿ ಹಾಗೂ ತೋಟದ ಮನೆಯಲ್ಲಿ ಇದ್ದರೆ ಜನರ ಕಷ್ಟ ಅರ್ಥವಾಗುವುದಿಲ್ಲ. ಹೊರಗಡೆ ಬಂದು ನೋಡಲಿ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಮೋದಿ ಬಂದರೂ ಪ್ರತಿಷ್ಠೆ ಬಿಡದ ಪ್ರೀತಂಗೌಡ, ಪ್ರಜ್ವಲ್!
2019ರ ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡುತ್ತಿರುವ ನರೇಂದ್ರ ಮೋದಿ, ಅಮಿತ್ ಶಾ
ಯುಪಿಎ ಸರ್ಕಾರ ಇದ್ದಾಗ 34% ಮಹಿಳೆಯರು ಉದ್ಯೋಗದಲ್ಲಿ ತೊಡಗಿಸಿಕೊಂಡಿದ್ದರೆ, ಈಗ ಕೇವಲ 24% ಮಹಿಳೆಯರು ಉದ್ಯೋಗದಲ್ಲಿ ತೊಡಗಿಸಿಕೊಂಡಿದ್ದಾರೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಮಹಿಳೆಯರು ಹೆಚ್ಚು ತೊಡಗಿಸಿಕೊಂಡಿದ್ದಾರೆ. ಅದಕ್ಕಾಗಿಯೇ ರಾಜ್ಯದಲಿ ಇದುವರೆಗೆ 4,000 ಕೂಸಿನ ಮನೆಗಳನ್ನು ಸ್ಥಾಪಿಸಲಾಗಿದೆ ಎಂದರು. ಇದನ್ನೂ ಓದಿ: ಗಡಿ ದಾಟುವ ಮೊದಲೇ ಇರಾನ್ ಕ್ಷಿಪಣಿಗಳನ್ನಹೊಡೆದುರುಳಿಸಿದ ಇಸ್ರೇಲ್ – ಅರಬ್ ರಾಷ್ಟ್ರಗಳಿಂದಲೂ ತಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ನೀಡಿರುವ ಅವಹೇಳನಕಾರಿ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಖರ್ಗೆ, ಬಿಜೆಪಿಯವರು ಇನ್ನೂ ಚಾತುರ್ವರ್ಣದಲ್ಲಿದ್ದಾರೆ. ಮಹಿಳೆಯರು ಮುಖ್ಯವಾಹಿನಿಗೆ ಬರುವುದು ಅವರಿಗೆ ಇಷ್ಟವಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಇಸ್ರೆಲ್, ಇರಾನ್ ಉದ್ವಿಗ್ನತೆ – ಟೆಲ್ ಅವೀವ್‍ಗೆ ಏರ್ ಇಂಡಿಯಾ ಹಾರಾಟ ಸ್ಥಗಿತ
ಅಬ್ ಕೀ ಬಾರ್ ಚಾರ್ ಸೌ ಪಾರ್ ಅಲ್ಲ, ಅಬ್ ಕೀ ಬಾರ್ ಬಿಜೆಪಿ ಸಂಸತ್ ಕೇ ಬಾಹರ್ ಆಗುತ್ತದೆ. ಕರ್ನಾಟಕದಿಂದ ನೂರು ಕೋಟಿ ಹಣ ದೇಶದ ಚುನಾವಣೆಗೆ ಬಳಕೆಯಾಗುತ್ತಿದೆ ಎಂದು ಪ್ರಧಾನಿ ಹೇಳಿರುವುದು ಹಾಸ್ಯಾಸ್ಪದ. ಕೇಂದ್ರದ ತನಿಖಾ ಸಂಸ್ಥೆಗಳು ಅವರ ಕೈಯಲ್ಲೇ ಇವೆ. ತನಿಖೆ ನಡೆಸಲಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಬಿಜೆಪಿ ಪ್ರಣಾಳಿಕೆ ಸುಳ್ಳಿನಿಂದ ತುಂಬಿದೆ, ವಿಶ್ವಾಸಾರ್ಹವಲ್ಲ: ಕಾಂಗ್ರೆಸ್ ಆರೋಪ
ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ್ ಪಕ್ಷ ಸೇರ್ಪಡೆ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಗುತ್ತೇದಾರ್ ಅವರು ಕೆಪಿಸಿಸಿ ಅಧ್ಯಕ್ಷರನ್ನು ಭೇಟಿಯಾಗಿ ಬಂದಿದ್ದಾರೆ. ಆದರೆ ಅಂತಹ ಯಾವುದೇ ಪ್ರಸ್ತಾವನೆ ಸದ್ಯ ಪಕ್ಷದ ಮುಂದಿಲ್ಲ. ಆದರೂ ಪಕ್ಷ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ತಮ್ಮ ಕುಟುಂಬ ಬದ್ಧವಾಗಿರುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: 3 ಕೋಟಿ ಬಡವರಿಗೆ ಮನೆ, ದೇಶದ 4 ದಿಕ್ಕುಗಳಿಗೂ ಬುಲೆಟ್ ಟ್ರೈನ್: ಮೋದಿ ಗ್ಯಾರಂಟಿ
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯ (Lok Sabha Election) ಹಿನ್ನೆಲೆ ಬಿಜೆಪಿ (BJP) ಬಿಡುಗಡೆ ಮಾಡಿದ ಪ್ರಣಾಳಿಕೆಗೆ (Manifesto) ಕಾಂಗ್ರೆಸ್ (Congress) ಆಕ್ಷೇಪ ವ್ಯಕ್ತಪಡಿಸಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾದ ಭರವಸೆಗಳು ‘ಸುಳ್ಳಿನಿಂದ ತುಂಬಿವೆ’ ಮತ್ತು ‘ವಿಶ್ವಾಸಾರ್ಹವಲ್ಲ’ ಎಂದು ಆರೋಪಿಸಿದೆ.
ಬಿಜೆಪಿ ಪಕ್ಷವು ಪ್ರಣಾಳಿಕೆಯಲ್ಲಿ ನಿರುದ್ಯೋಗ ಮತ್ತು ಹಣದುಬ್ಬರವನ್ನು ನಿರ್ಲಕ್ಷಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಪ್ರಣಾಳಿಕೆ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹಣದುಬ್ಬರ ಮತ್ತು ನಿರುದ್ಯೋಗ ಬಿಜೆಪಿಯ ಪ್ರಣಾಳಿಕೆಯಿಂದ ಕಾಣೆಯಾಗಿದೆ ಎಂದು ಹೇಳಿದ್ದಾರೆ. ಜನರ ಜೀವನಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ಚರ್ಚಿಸಲು ಸಹ ಬಿಜೆಪಿ ಬಯಸುವುದಿಲ್ಲ. ಆದರೆ ಈ ಬಾರಿ ಯುವಕರು ಪ್ರಧಾನಿ ಮೋದಿಯವರ (Narendra Modi) ಬಲೆಗೆ ಬೀಳುವುದಿಲ್ಲ. ಅವರು ಈಗ ಕಾಂಗ್ರೆಸ್‌ನ ಕೈಗಳನ್ನು ಬಲಪಡಿಸುತ್ತಾರೆ ಮತ್ತು ದೇಶದಲ್ಲಿ ‘ಉದ್ಯೋಗ ಕ್ರಾಂತಿ’ ತರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಮೋದಿ ಸಮಾವೇಶಕ್ಕೆ ಬರಲ್ಲ: ಬಿಎಸ್‌ವೈ ಮನವಿ ನಿರಾಕರಿಸಿದ ಸಂಸದ ಶ್ರೀನಿವಾಸ್ ಪ್ರಸಾದ್
ಬಿಜೆಪಿಯ ಸಂಕಲ್ಪ ಪತ್ರ ಕೇವಲ ತೋರ್ಪಡಿಕೆ. ಅವರ ನಿಜವಾದ ಪ್ರಣಾಳಿಕೆ ‘ಸಂವಿಧಾನ್ ಬದ್ಲೋ ಪತ್ರ’ (ಸಂವಿಧಾನ ಬದಲಿಸಿ ಪತ್ರ) ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದರು. ಬಿಜೆಪಿಯವರು ದೇಶ, ಸಮಾಜ, ಪ್ರಜಾಪ್ರಭುತ್ವದ ವಿರುದ್ಧ ಈ ಎಲ್ಲ ಷಡ್ಯಂತ್ರಗಳನ್ನು ತಳಮಟ್ಟದಿಂದ ಪ್ರಾರಂಭಿಸುತ್ತಾರೆ. ಆರಂಭದಲ್ಲಿ ಉನ್ನತ ನಾಯಕರು ಜನರ ಮುಂದೆ ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಆದರೆ ರಾತ್ರಿಯಲ್ಲಿ ಅವರು ಸಂವಿಧಾನವನ್ನು ನಾಶಮಾಡಲು ಸ್ಕ್ರಿಪ್ಟ್ ಬರೆಯುತ್ತಾರೆ. ನಂತರ ಸಂಪೂರ್ಣ ಅಧಿಕಾರ ಸಿಕ್ಕ ನಂತರ ಸಂವಿಧಾನದ ಮೇಲೆ ದಾಳಿ ನಡೆಸುತ್ತಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: 10 ವರ್ಷಗಳಲ್ಲಿ ಬಿಜೆಪಿಗರು ಕೊಟ್ಟ ಭರವಸೆ ಈಡೇರಿಸಿದ್ದಾರಾ? – ಬಿಜೆಪಿ ಪ್ರಣಾಳಿಕೆಗೆ ಸಿಎಂ ವ್ಯಂಗ್ಯ
ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವು ‘ಭಾರತದ ಆತ್ಮ’ ಎಂದು ಹೇಳಿದ ಅವರು, ಬಿಜೆಪಿಯನ್ನು ಸೋಲಿಸಲು ಎಲ್ಲಾ ವಿರೋಧ ಪಕ್ಷಗಳು ಒಂದಾಗಬೇಕು. ಇಂದು ನಾವೆಲ್ಲರೂ ಒಗ್ಗೂಡಿ ಬಿಜೆಪಿಯ ‘ಸಂವಿಧಾನ ಬದಲಾವಣೆ ಮಿಷನ್’ ಅನ್ನು ತಿರಸ್ಕರಿಸಬೇಕಾಗಿದೆ. ದೇಶವನ್ನು ಸಂವಿಧಾನದಿಂದ ನಡೆಸಲಾಗುವುದು ಮತ್ತು ಸಂವಿಧಾನವನ್ನು ಬದಲಾಯಿಸುವ ಉದ್ದೇಶ ಹೊಂದಿರುವವರನ್ನು ನಾವು ಒಟ್ಟಾಗಿ ಸೋಲಿಸುತ್ತೇವೆ ಎಂದು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಐತಿಹಾಸಿಕ ಬೆಂಗಳೂರು ಕರಗಕ್ಕೆ ನಾಳೆ ಚಾಲನೆ – ಯಾವ್ಯಾವ ದಿನ ಏನು ಕಾರ್ಯಕ್ರಮ?
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಮಾಜದ ಎಲ್ಲಾ ವರ್ಗಗಳಿಗೆ ಅನುಕೂಲವಾಗುವ ಯಾವುದೇ ಕೆಲಸವನ್ನು ಅವರು ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಬಿಜೆಪಿಯ ಪ್ರಣಾಳಿಕೆಯನ್ನು ನಂಬಲು ಸಾಧ್ಯವಿಲ್ಲ ಎಂದು ಹೇಳಿದರು. ಪಿಎಂ ನರೇಂದ್ರ ಮೋದಿ ಅವರು ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಹೇಳಿದ್ದರು. ಅವರು ಎಂಎಸ್‌ಪಿ ಹೆಚ್ಚಿಸುವುದಾಗಿ ಮತ್ತು ಕಾನೂನುಬದ್ಧ ಗ್ಯಾರಂಟಿ ನೀಡುವುದಾಗಿ ಹೇಳಿದ್ದರು. ತಮ್ಮ ಅಧಿಕಾರಾವಧಿಯಲ್ಲಿ ಅಂತಹ ಯಾವುದೇ ದೊಡ್ಡ ಕೆಲಸವನ್ನು ಮಾಡಲಿಲ್ಲ ಎಂದು ಹೇಳಿದರು. ಇದನ್ನೂ ಓದಿ: 3 ಕೋಟಿ ಬಡವರಿಗೆ ಮನೆ, ದೇಶದ 4 ದಿಕ್ಕುಗಳಿಗೂ ಬುಲೆಟ್ ಟ್ರೈನ್: ಮೋದಿ ಗ್ಯಾರಂಟಿ
ಅಸ್ಸಾಂ: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯು ಪಾಕಿಸ್ತಾನದ ಚುನಾವಣೆಗೆ ಹೆಚ್ಚು ಸೂಕ್ತವಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ (Himanta Biswa Sarma) ವಾಗ್ದಾಳಿ ನಡೆಸಿದ್ದಾರೆ.
ಜೋರ್ಹತ್ ಕ್ಷೇತ್ರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಾಂಗ್ರೆಸ್ ಪ್ರಣಾಳಿಕೆ (Congress Manifesto) ಬಗ್ಗೆ ಪ್ರತಿಕ್ರಿಯಿಸಿದರು. ಭಾರತಕ್ಕಿಂತ ಪಾಕಿಸ್ತಾನದಲ್ಲಿ (Pakistan) ನಡೆಯುವ ಚುನಾವಣೆಗಳಿಗೆ ಹೆಚ್ಚು ಸೂಕ್ತವೆಂದು ಆರೋಪಿಸಿದ್ದಾರೆ. ಪ್ರಣಾಳಿಕೆಯು ಅಧಿಕಾರಕ್ಕೆ ಬರಲು ಸಮಾಜವನ್ನು ಒಡೆಯುವ ಗುರಿಯನ್ನು ಹೊಂದಿದೆ ಎಂದು ಅವರು ಕಿಡಿಕಾರಿದರು.
ಇದೇ ವೇಳೆ ಬಿಜೆಪಿಯು ರಾಜ್ಯದ ಎಲ್ಲಾ 14 ಲೋಕಸಭಾ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಶರ್ಮಾ, ಬಿಜೆಪಿಯು ದೇಶವನ್ನು ‘ವಿಶ್ವ ಗುರು ‘ (ವಿಶ್ವ ನಾಯಕ) ಮಾಡುವ ‘ಆಂದೋಲನ ‘ (ಆಂದೋಲನ) ರೂಪವನ್ನು ತೆಗೆದುಕೊಂಡಿದೆ ಎಂದು ಹೇಳಿದರು .
ಅಸ್ಸಾಂನಲ್ಲಿ ಏಪ್ರಿಲ್ 19, ಏಪ್ರಿಲ್ 26 ಮತ್ತು ಮೇ 7 ರಂದು ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ಮತಗಳ ಎಣಿಕೆ ನಡೆಯಲಿದೆ.
ಹೈದರಾಬಾದ್: ಯಾವುದೇ ರಾಜಕೀಯ ಪಕ್ಷಕ್ಕೆ ಅದರ ಬೆಂಬಲಿಗರು ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿರುತ್ತಾರೆ. ತಮ್ಮ ಪಕ್ಷದ ರಕ್ಷಣೆಗಾಗಿ ಇತರರೊಂದಿಗೆ ಹೋರಾಡಲು ಸಹ ಸಿದ್ಧರಾಗಿರುವ ಇಂತಹ ಅನೇಕ ಬೆಂಬಲಿಗರನ್ನು ನೀವು ಇಲ್ಲಿಯವರೆಗೆ ನೋಡಿರಬೇಕು. ಆದರೆ ಆಂಧ್ರಪ್ರದೇಶದ (Andhrapradesh) ವ್ಯಕ್ತಿಯೊಬ್ಬರು ತಮ್ಮ ನೆಚ್ಚಿನ ಪಕ್ಷದ ಬಗ್ಗೆ ಅಂತಹ ಉತ್ಸಾಹವನ್ನು ತೋರುವ ಮೂಲಕ ಇದೀಗ ಭಾರೀ ಸುದ್ದಿಯಾಗಿದ್ದಾರೆ.
#WATCH | Kakinada, Andhra Pradesh: The Manifesto of Jana Sena Party was printed on a wedding card of a resident of Andhra Pradesh's Kakinada. The person is a supporter of party leader Pawan Kalyan and he urges invitees to vote for Pawan Kalyan in Pithapuram. pic.twitter.com/LIAQ7O5qRc
ಆಂಧ್ರಪ್ರದೇಶದ ಕಾಕಿನಾಡ ನಿವಾಸಿಯೊಬ್ಬರ ಮದುವೆ ಕಾರ್ಡ್‌ನಲ್ಲಿ ಜನಸೇನಾ ಪಕ್ಷದ (Janasena Party) ಪ್ರಣಾಳಿಕೆಯನ್ನು ಮುದ್ರಿಸಲಾಗಿದೆ. ವ್ಯಕ್ತಿ ಪಕ್ಷದ ನಾಯಕ ಪವನ್ ಕಲ್ಯಾಣ್ (Pawan Kalyan) ಅವರ ಬೆಂಬಲಿಗರಾಗಿದ್ದು, ಪಿಠಾಪುರಂನಲ್ಲಿ ಪವನ್ ಕಲ್ಯಾಣ್ ಅವರಿಗೆ ಮತ ನೀಡುವಂತೆ ಆಹ್ವಾನಿತರನ್ನು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಸಲೂನ್‌ನಲ್ಲಿ ಜನರಿಗೆ ಕ್ಷೌರ ಮಾಡಿ ಮತಯಾಚನೆ- ಗಮನ ಸೆಳೆದ ಅಭ್ಯರ್ಥಿಯ ಚುನಾವಣಾ ಪ್ರಚಾರ
ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ವ್ಯಕ್ತಿ ಜನರಿಗೆ ಮದುವೆ ಕಾರ್ಡ್‌ಗಳನ್ನು ವಿತರಿಸುತ್ತಿರುವುದನ್ನು ಕಾಣಬಹುದಾಗಿದೆ.
ಬಿಜೆಪಿ-ಟಿಡಿಪಿ ಜೊತೆ ಮೈತ್ರಿ: ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ಜನಸೇನಾ ಪಕ್ಷವನ್ನೂ ಕಟ್ಟಿದ್ದಾರೆ ಎಂಬುದು ಗಮನಾರ್ಹ. ಇತ್ತೀಚಿನ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಅವರ ಪಕ್ಷವು ಎನ್‌ಡಿಎ ಮೈತ್ರಿಕೂಟದ ಭಾಗವಾಗಿತ್ತು. ಪಕ್ಷವು ಮುಂಬರುವ ಲೋಕಸಭಾ ಮತ್ತು ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ-ಟಿಡಿಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಿದೆ.
ನವದೆಹಲಿ: ಲೋಕಸಭೆ ಚುನಾವಣೆ (Lok Sabha Election) ಹಿನ್ನಲೆಯಲ್ಲಿ ಕಾಂಗ್ರೆಸ್ (Congress) ತನ್ನ ಪ್ರಣಾಳಿಕೆಯನ್ನು ದೇಶದ ಜನರ ಮುಂದೆ ಇಟ್ಟಿದ್ದು ಭರಪೂರ ಕೊಡುಗೆಗಳನ್ನು ಘೋಷಣೆ ಮಾಡಿದೆ. ಈ ನಡುವೆ ಬಿಜೆಪಿಯ ಪ್ರಣಾಳಿಕೆ (Manifesto) ಬಿಡುಗಡೆ ಯಾವಾಗ ಎಂಬ ಕುತೂಹಲ ಹೆಚ್ಚಿದ್ದು ಅದಕ್ಕೆ ಪ್ರಣಾಳಿಕೆ ಸಮಿತಿ ಅಧ್ಯಕ್ಷ ರಾಜನಾಥ್ ಸಿಂಗ್ (Rajnath Singh) ಉತ್ತರವನ್ನು ಕೊಟ್ಟಿದ್ದಾರೆ.
ಸುದ್ದಿ ವಾಹಿನಿವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ರಾಜನಾಥ್ ಸಿಂಗ್ ಇನ್ನು ಏಳೆಂಟು ದಿನದಲ್ಲಿ ಪ್ರಣಾಳಿಕೆ ಬಿಡುಗಡೆಯಾಗಲಿದೆ. ಈಗಾಗಲೇ ಬಹುತೇಕ ಕೆಲಸ ಮುಗಿದಿದ್ದು ಅಂತಿಮ ಹಂತದ ಪರಿಶೀಲನೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೇ ಪ್ರಣಾಳಿಕೆ ಜಾರಿಗೆ ಯೋಗ್ಯವಾಗಿರಬೇಕು, ಭರವಸೆ ನೀಡಿದ ಮೇಲೆ ಈಡೇರಿಸುವಂತಿರಬೇಕು ಆ ದೃಷ್ಟಿಕೋನದಲ್ಲಿ ನಾವು ತಯಾರಿ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಮಾಜವಾದಿ ಪಕ್ಷದ ಅಭ್ಯರ್ಥಿ ನಾಮಪತ್ರ ತಿರಸ್ಕೃತ – ನ್ಯಾಯಾಂಗ ತನಿಖೆಗೆ ಒತ್ತಾಯ
ಪ್ರಣಾಳಿಕೆಯಲ್ಲಿ ಏನೆಲ್ಲ ಅಂಶಗಳಿದೆ ಎನ್ನುವ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಅವರು ಸಣ್ಣದಾದ ಸುಳಿವು ಮಾತ್ರ ಬಿಟ್ಟುಕೊಟ್ಟಿದ್ದಾರೆ. ಒಂದು ದೇಶ, ಒಂದು ಚುನಾವಣೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಪ್ರಣಾಳಿಕೆಯಲ್ಲಿ ಏನಿದೆ ಎಂದು ನೇರವಾಗಿ ಹೇಳಲು ಸಾಧ್ಯವಿಲ್ಲ. ಒಂದು ದೇಶ ಒಂದು ಚುನಾವಣೆ ನಡೆಯಬೇಕು ಎನ್ನುವುದು ಎಲ್ಲರ ಅಭಿಪ್ರಾಯ. ಬಹಳಷ್ಟು ಜನರ ಇದರ ಪರವಾಗಿ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ. ಈ ಮೂಲಕ ಪ್ರಣಾಳಿಕೆಯಲ್ಲಿ ಒಂದು ದೇಶ ಒಂದು ಚುನಾವಣೆ ಉಲ್ಲೇಖವಿರುವ ಸುಳಿವು ನೀಡಿದ್ದಾರೆ. ಇದನ್ನೂ ಓದಿ: ಯಾವ ಬಿಜೆಪಿ ಕಾರ್ಯಕರ್ತನೂ ಇಂತಹ ರಾಷ್ಟ್ರ ವಿರೋಧಿ ಕೃತ್ಯದಲ್ಲಿ ಭಾಗಿಯಾಗಲಾರ: ಆರಗ ಜ್ಞಾನೇಂದ್ರ
ಆರ್ಥಿಕ ಸ್ಥಿರತೆ ಕಾಯ್ದುಕೊಳ್ಳುವುದು, ವಿಶ್ವದ ಮೂರನೇ ಬಲಿಷ್ಠ ಆರ್ಥಿಕತೆಯನ್ನಾಗಿ ಮಾಡುವುದು, ಮೂಲ ಸೌಕರ್ಯಗಳ ಅಭಿವೃದ್ದಿಗೆ ಇನ್ನಷ್ಟು ಒತ್ತು ಸೇರಿ ಹಲವು ಗ್ಯಾರಂಟಿಯನ್ನು ಪ್ರಧಾನಿ ಮೋದಿ ಕೊಡಬಹುದು ಎನ್ನಲಾಗುತ್ತಿದೆ.
ನವದೆಹಲಿ: ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಜೊತೆಗೆ ತಮ್ಮ ಮುಂದಿನ ಗುರಿಯ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೇಳಿದ್ದಾರೆ.
This election is about those who are trying to destroy the Constitution and destroy democracy in this country vs. those who are trying to protect the constitution and protect democracy in this country.
ಪ್ರಣಾಳಿಕೆ ಬಿಡುಗಡೆಯ ಬಳಿಕ ಮಾತನಾಡಿದ ಅವರು, ವಿಪಕ್ಷ ನಾಯಕರನ್ನ ಜೈಲಿನಲ್ಲಿಟ್ಟು ಚುನಾವಣೆ ಮಾಡಲಾಗುತ್ತಿದೆ. ನಮ್ಮ ಪಕ್ಷದ ಖಾತೆಯನ್ನೇ ಸಂಪೂರ್ಣ ಮುಟ್ಟುಗೋಲು ಹಾಕಲಾಗಿದೆ. ಮಾಧ್ಯಮ ಸಂಸ್ಥೆಗಳನ್ನ ನಿಯಂತ್ರಿಸಲಾಗುತ್ತಿದೆ. ಹೀಗಾಗಿ ಮೋದಿಯನ್ನ (Narendra Modi) ತೆಗೆದು ಹಾಕುವುದೇ ನಮ್ಮ ಮುಂದಿರುವ ಗುರಿಯಾಗಿದೆ. ಯಾರಾದ್ರು ಭಯಪಡುತ್ತಿದ್ದಾರೆ ಎಂದರೆ ಅವರು ತಪ್ಪು ಮಾಡಿದ್ದಾರೆ ಅಂತ ಅರ್ಥ. ಆದರೆ ನಮಗೆ ಯಾವುದೇ ಭಯವಿಲ್ಲ ಎಂದರು.
ಪ್ರಣಾಳಿಕೆ ಬಗ್ಗೆ: ಬಡವರಿಗಾಗಿ ನಮ್ಮ ಪ್ರಣಾಳಿಕೆಯನ್ನ (Congress Manifesto) ಅರ್ಪಣೆ ಮಾಡುತ್ತಿದ್ದೇವೆ. 16 ಸದಸ್ಯರ ಪ್ರಣಾಳಿಕೆ ಸಮಿತಿ ರಚನೆ ಮಾಡಿ ಪ್ರಣಾಳಿಕೆ ತಯಾರಿಸಲಾಗಿದೆ. ಭಾರತ ಜೋಡೊ ಯಾತ್ರೆಯಲ್ಲಿ 6 ನ್ಯಾಯಗಳ ಬಗ್ಗೆ ನಾವು ಪ್ರಸ್ತಾಪ ಮಾಡಿದ್ದೇವೆ. ಅದರಂತೆ ನಮ್ಮ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಯುವ ನ್ಯಾಯಕ್ಕಾಗಿ ಒಬ್ಬ ಯುವಕನಿಗೆ ಒಂದು ಲಕ್ಷ, ನಾರಿ ನ್ಯಾಯದಿಂದ ವರ್ಷಕ್ಕೆ ಒಂದು ಲಕ್ಷ ನೀಡಲಾಗುವುದು. ಕಿಸಾನ್ ನ್ಯಾಯದ ಮೂಲಕ ರೈತರ ಸಾಲಮನ್ನಾ ಮತ್ತು ಎಂಎಸ್ ಸಿ, ಗರೀಬ್ ನ್ಯಾಯದ ಮೂಲಕ ಮನರೇಗಾ ಮೂಲಕ ಕೂಲಿಯನ್ನ 400 ರೂ. ಗೆ ಏರಿಕೆ ಮಾಡಲಾಗುವುದು ಎಂದರು.
#WATCH | Delhi: On the Congress manifesto, party president Mallikarjun Kharge says, "This manifesto of ours will be remembered as 'Nyay ka dastavez' in the political history of the country. The Bharat Jodo Nyaya Yatra, which was run under the leadership of Rahul Gandhi, focused… pic.twitter.com/3JfrYkvrZ0
ಹಿಸ್ಸೆದಾರಿ ನ್ಯಾಯದ ಮೂಲಕ ಎಲ್ಲಾ ಜಾತಿಯ ಪ್ರತಿವ್ಯಕ್ತಿಗೆ ಸಹಕಾರಿ, ದೇಶದಲ್ಲಿ ಎಲ್ಲಾ ಕಡೆ ಜಾತಿಜನಗಣತಿ ಮಾಡಲಾಗುವುದು. ನಾವು ಕೊಟ್ಟಿರೋ ಗ್ಯಾರಂಟಿಗಳನ್ನ ಮಾಡಿ ತೋರಿಸಿದ್ದೇವೆ. ಕರ್ನಾಟಕದಲ್ಲಿ, ಹಿಮಾಚಲ ಪ್ರದೇಶ, ತೆಲಂಗಾಣ ಮತ್ತು ರಾಜಸ್ಥಾನದಲ್ಲಿ ಮಾಡಿ ತೋರಿಸಿದ್ದೇವೆ. ನಮಗೆ ಎಷ್ಟೇ ನಷ್ಟವಾದರೂ ಬಡ ಜನರಿಗಾಗಿ ಮಾಡಿ ತೊರಿಸಿದ್ದೇವೆ ಎಂದು ಖರ್ಗೆ ತಿಳಿಸಿದರು.
ಜೈಪುರ: ರಾಜಸ್ಥಾನ (Rajasthan) ವಿಧಾನಸಭಾ ಚುನಾವಣೆಗೆ (Assembly Elections) ಬಿಜೆಪಿ (BJP) ಗುರುವಾರ ತನ್ನ ಪ್ರಣಾಳಿಕೆಯನ್ನು (Manifesto) ಬಿಡುಗಡೆ ಮಾಡಿದ್ದು, ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಪ್ರತಿ ಎಲ್‌ಪಿಜಿ (LPG) ಸಿಲಿಂಡರ್‌ಗೆ 450 ರೂ. ಸಬ್ಸಿಡಿ ಮತ್ತು 2.5 ಲಕ್ಷ ಸರ್ಕಾರಿ ಉದ್ಯೋಗಗಳ ಭರವಸೆ ನೀಡಿದೆ.
‘ಸಂಕಲ್ಪ ಪತ್ರ’ ಬಿಡುಗಡೆ ಮಾಡಿದ ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ (JP Nadda), ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ (Congress) ಸರ್ಕಾರದ ಕಾಗದ ಸೋರಿಕೆ ಮತ್ತು ಇತರ ಆರೋಪಗಳ ಹಗರಣಗಳ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಭೂಮಿಗೆ ಬಿತ್ತು ಚಂದ್ರಯಾನ-3 ರಾಕೆಟ್ ಅವಶೇಷ
ಹೆಣ್ಣುಮಕ್ಕಳು ಮತ್ತು ಮಹಿಳೆಯರಿಗಾಗಿ ಹಲವಾರು ಯೋಜನೆಗಳನ್ನು ಘೋಷಿಸಿದ ಅವರು, ಪ್ರತಿ ಜಿಲ್ಲೆಯಲ್ಲಿ ‘ಮಹಿಳಾ ಠಾಣೆ’ ಮತ್ತು ಪ್ರತಿ ಪೊಲೀಸ್ ಠಾಣೆಯಲ್ಲಿ ‘ಮಹಿಳಾ ಡೆಸ್ಕ್’ ಮತ್ತು ಪ್ರತಿ ನಗರದಲ್ಲಿ ‘ಆ್ಯಂಟಿ ರೋಮಿಯೋ ಸ್ಕ್ವಾಡ್’ ಅನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಕನ್ನಡ ಬೆಳೆಯಬೇಕಾದರೆ ಜನಮನದಲ್ಲಿ ವ್ಯಾಪಕ ಬದಲಾವಣೆಯಾಗಬೇಕು: ಕುಮಾರಿ ಸುದೀತಿ ಅಂಬಳೆ