Tag: Manikandan

  • ರಾಹುಲ್‌ಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರ ನಾಲಿಗೆ ಕತ್ತರಿಸ್ತೀನಿ – ಬೆದರಿಕೆ ಹಾಕಿದ ಕಾಂಗ್ರೆಸ್ ನಾಯಕನ ವಿರುದ್ಧ ಪ್ರಕರಣ ದಾಖಲು

    ರಾಹುಲ್‌ಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರ ನಾಲಿಗೆ ಕತ್ತರಿಸ್ತೀನಿ – ಬೆದರಿಕೆ ಹಾಕಿದ ಕಾಂಗ್ರೆಸ್ ನಾಯಕನ ವಿರುದ್ಧ ಪ್ರಕರಣ ದಾಖಲು

    ನವದೆಹಲಿ: 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ (Rahul Gandhi) ವಿರುದ್ಧ ತೀರ್ಪು ನೀಡಿದ ನ್ಯಾಯಾಧೀಶರ ನಾಲಿಗೆಯನ್ನು ಕತ್ತರಿಸುವುದಾಗಿ ಕಾಂಗ್ರೆಸ್ (Congress) ಮುಖಂಡರೊಬ್ಬರು ಬೆದರಿಕೆ ಹಾಕಿದ್ದಾರೆ. ಇದೀಗ ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

    ತಮಿಳುನಾಡಿನ (Tamil Nadu) ದಿಂಡಿಗಲ್ ಜಿಲ್ಲಾಧ್ಯಕ್ಷ ಮಣಿಕಂದನ್ (Manikandan) ವಿರುದ್ಧ ದಿಂಡಿಗಲ್ ಪೊಲೀಸರು ಶನಿವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅವರ ಹೇಳಿಕೆಗೆ ಐಪಿಸಿ ಸೆಕ್ಷನ್ 153ಬಿ ಸೇರಿದಂತೆ 3 ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಹಾಗೂ ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಏಪ್ರಿಲ್ 6 ರಂದು ತಮಿಳುನಾಡಿನ ದಿಂಡಿಗಲ್‌ನಲ್ಲಿ ರಾಹುಲ್ ಗಾಂಧಿ ಅವರ ಅನರ್ಹತೆಯ ವಿರುದ್ಧ ಪ್ರತಿಭಟನೆಯ ಸಂದರ್ಭದಲ್ಲಿ ಮಣಿಕಂದನ್ ಈ ಹೇಳಿಕೆಯನ್ನು ನೀಡಿದ್ದರು. ನಾವು ಅಧಿಕಾರಕ್ಕೆ ಬಂದರೆ ನಮ್ಮ ನಾಯಕ ರಾಹುಲ್ ಗಾಂಧಿಯನ್ನು ಜೈಲಿಗೆ ಕಳುಹಿಸಲು ತೀರ್ಪು ನೀಡಿದ ನ್ಯಾಯಾಧೀಶರ ನಾಲಿಗೆಯನ್ನು ಕತ್ತರಿಸುತ್ತೇವೆ ಎಂದು ಮಣಿಕಂದನ್ ಹೇಳಿದ್ದಾರೆ. ಇದನ್ನೂ ಓದಿ: ಕೊಡೇಕಲ್‌ನಲ್ಲಿ ಕಲ್ಲು ತೂರಾಟ ಪ್ರಕರಣ – ಸುರಪುರ ಕ್ಷೇತ್ರದಲ್ಲಿ ನಿಷೇಧಾಜ್ಞೆ ವಿಸ್ತರಣೆ

    2019ರ ಲೋಕಸಭೆ ಚುನಾವಣೆಗೆ ಮುನ್ನ ಕೋಲಾರದಲ್ಲಿ ಪ್ರಚಾರ ಕಾರ್ಯಕ್ರಮವನ್ನು ಉದ್ದೇಶಿಸಿ ರಾಗಾ ಮಾತನಾಡಿದ್ದ ವೇಳೆ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಕೋರ್ಟ್ ರಾಹುಲ್‌ರನ್ನು ದೋಷಿ ಎಂದು ತೀರ್ಪು ನೀಡಿ ಶಿಕ್ಷೆಯನ್ನು ವಿಧಿಸಿತ್ತು.

    2013ರ ಸುಪ್ರೀಂ ಕೋರ್ಟ್‌ನ ತೀರ್ಪಿನ ಪ್ರಕಾರ ಮಾರ್ಚ್ 24 ರಂದು ರಾಹುಲ್ ಅವರನ್ನು ಸಂಸದರಾಗಿ ಅನರ್ಹಗೊಳಿಸಲಾಯಿತು. ಯಾವುದೇ ಸಂಸದರು ಅಥವಾ ಶಾಸಕರು ತಪ್ಪಿತಸ್ಥರೆಂದು ಸಾಬೀತಾದರೆ ಮತ್ತು 2 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಶಿಕ್ಷೆಯಾದರೆ ಪ್ರಜಾ ಪ್ರತಿನಿಧಿ ಕಾಯ್ದೆಯ ಪ್ರಕಾರ ಶಾಸಕ/ ಸಂಸದರು ಅನರ್ಹರಾಗುತ್ತಾರೆ. ಇದನ್ನೂ ಓದಿ: ವಿಕಲಚೇತನ ಕಾರ್ಯಕರ್ತನೊಂದಿಗೆ ಸೆಲ್ಫಿ ಕ್ಲಿಕ್ಕಿಸಿದ ಮೋದಿ

  • ನಾಗರಹೊಳೆ ಅರಣ್ಯದಲ್ಲಿ ಆನೆ ದಾಳಿಗೆ ಮುಖ್ಯ ಅರಣ್ಯಾಧಿಕಾರಿ ಬಲಿ

    ನಾಗರಹೊಳೆ ಅರಣ್ಯದಲ್ಲಿ ಆನೆ ದಾಳಿಗೆ ಮುಖ್ಯ ಅರಣ್ಯಾಧಿಕಾರಿ ಬಲಿ

    ಮೈಸೂರು: ಆನೆ ದಾಳಿಗೆ ನಾಗರಹೊಳೆ ಹುಲಿ ಸಂರಕ್ಷಣಾ ಯೋಜನೆಯ ನಿರ್ದೇಶಕ ಮಣಿಕಂಠನ್ (45) ಮೃತಪಟ್ಟಿದ್ದಾರೆ.  ಹೆಚ್.ಡಿ.ಕೋಟೆ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ನಾಗರಹೊಳೆ ಅರಣ್ಯ ಪ್ರದೇಶದ ಡಿ.ಬಿ.ಕುಪ್ಪೆ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

    ಇಂದು ಫೈರ್ ಲೈನ್  ಗಾಗಿ ಅರಣ್ಯ ಇಲಾಖೆಯ ಸಿಬ್ಬಂದಿ ಸರ್ವೆ ನಡೆಸುತ್ತಿದ್ದರು. ಸ್ವತಃ ಸರ್ವೆ ನಡೆಸಲು ಸಿಎಫ್ ಮಣಿಕಂಠನ್ ಕಾಡಿನೊಳಗೆ ನುಗ್ಗಿದ್ದರು. ಈ ವೇಳೆ ಏಕಾಏಕಿ ಆನೆಯೊಂದು ಬಂದು ದಾಳಿ ನಡೆಸಿದೆ. ತಕ್ಷಣವೇ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮಣಿಕಂಠನ್ ಸಾವನ್ನಪ್ಪಿದ್ದಾರೆ.

    ತಮಿಳುನಾಡು ಮೂಲದ 2001 ಎಎಫ್‍ಎಸ್ ಬ್ಯಾಚ್ ಅಧಿಕಾರಿಯಾಗಿದ್ದ ಮಣಿಕಂಠನ್ ಈ ಹಿಂದೆ ಹಲವು ಜಿಲ್ಲೆಗಳಲ್ಲಿ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಎರಡು ವರ್ಷಗಳಿಂದ ನಾಗರಹೊಳೆ ಹುಲಿ ಸಂರಕ್ಷಣಾ ಯೋಜನೆ ನಿರ್ದೇಶಕರಾಗಿದ್ದರು.

    ಮಣಿಕಂಠನ್ ಕುಟುಂಬಸ್ಥರು ಬೆಂಗಳೂರಿನಲ್ಲಿ ನೆಲೆಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಪಾರ್ಥಿವ ಶರೀರ ತರಲಾಗಿದೆ.