Tag: Manikanth Rathod

  • ಹಲ್ಲೆ ಪ್ರಕರಣ ಮುಚ್ಚಿ ಹಾಕಲು ಪ್ರಿಯಾಂಕ್ ಖರ್ಗೆ ಯತ್ನ – ಸುಳ್ಳು ಕೇಸ್‌ಗಳಿಗೆ ನಾವು ಭಯಪಡಲ್ಲ: ಮಣಿಕಂಠ್ ರಾಠೋಡ್

    ಹಲ್ಲೆ ಪ್ರಕರಣ ಮುಚ್ಚಿ ಹಾಕಲು ಪ್ರಿಯಾಂಕ್ ಖರ್ಗೆ ಯತ್ನ – ಸುಳ್ಳು ಕೇಸ್‌ಗಳಿಗೆ ನಾವು ಭಯಪಡಲ್ಲ: ಮಣಿಕಂಠ್ ರಾಠೋಡ್

    ಕಲಬುರಗಿ: ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ನನ್ನ ಮೇಲೆ ಸುಳ್ಳು ಕೇಸ್‌ಗಳನ್ನು ಹಾಕಿಸಿ, ನನ್ನ ಮೇಲೆ ಆಗಿರುವ ಹಲ್ಲೆ ಪ್ರಕರಣವನ್ನು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಒತ್ತಾಯಿಸಿ, ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಮಣಿಕಂಠ್ ರಾಠೋಡ್ (Manikanth Rathod) ಆರೋಪಿಸಿದ್ದಾರೆ.

    ಗುರುವಾರ ಬೆಳಗ್ಗೆ ಪೊಲೀಸರ ವಶವಾಗುವುದಕ್ಕೂ ಮುನ್ನ ಸುದ್ದಿ ಪ್ರಕಟಣೆ ಹೊರಡಿಸಿದ ಅವರು, ನನ್ನ ಮೇಲೆ ಹಲ್ಲೆ ನಡೆದ ಪ್ರಕರಣವನ್ನು ತಾವು ಮುಚ್ಚಿ ಹಾಕಿದರು. ನಾವು ಎದೆಗುಂದುವುದಿಲ್ಲ. ಸತ್ಯಕ್ಕಾಗಿ ನ್ಯಾಯಾಲಯದಲ್ಲಿ ನ್ಯಾಯದ ಪರ ನನ್ನ ಹೋರಾಟ ಹೀಗೆ ಮುಂದುವರಿಸುತ್ತೇನೆ. ನಮಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಮೇಲೆ ಸಂಪೂರ್ಣ ಭರವಸೆ ಇದೆ ಎಂದರು.

    ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನಿನ್ನೆ ಬೆಳಗಾವಿಯಲ್ಲಿ ನನಗೆ ಥರ್ಡ್ ಕ್ಲಾಸ್ ವ್ಯಕ್ತಿ ಎಂದು ಟೀಕೆ ಮಾಡಿದ್ದಾರೆ. ಆದರೆ ಮಿಸ್ಟರ್ ಪ್ರಿಯಾಂಕ್ ಖರ್ಗೆ ಅವರೇ, ನಿಮಗೆ ಒಂದು ಮಾತು ಹೇಳಲು ಇಷ್ಟ ಪಡುತ್ತೇನೆ. ನಾವು ಥರ್ಡ್ ಕ್ಲಾಸ್ ಆಗಿದ್ದು ನಿಮ್ಮ ತಂದೆ ಮಲ್ಲಿಕಾರ್ಜುನ ಖರ್ಗೆ ಅವರ ದೊಡ್ಡ ಕೊಡುಗೆಯಾಗಿದೆ. ನಿಮ್ಮ ತಂದೆ 7 ಬಾರಿ ಗುರುಮಿಠಕಲ್ ಕ್ಷೇತ್ರದಿಂದ ಜನಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ. ನಾನು ಸಹ ಅದೇ ಗುರುಮಿಠಕಲ್ ಕ್ಷೇತ್ರದವನೇ ಎಂಬುದು ತಮ್ಮ ಗಮನಕ್ಕೆ ಇರಲಿ ಎಂದು ಹೇಳಿದರು. ಇದನ್ನೂ ಓದಿ: ಸುದ್ದಿಗೋಷ್ಠಿಗೆ ಮುನ್ನವೇ ಮಣಿಕಂಠ್ ರಾಠೋಡ್‌ನ ವಶಕ್ಕೆ ಪಡೆದ ಕಲಬುರಗಿ ಪೊಲೀಸರು

    ನೀವು ಕರ್ನಾಟಕ ರಾಜ್ಯದ ಒಬ್ಬ ಮಂತ್ರಿಯಾಗಿ, ತಮ್ಮದೇ ಚಿತ್ತಾಪುರ ಕ್ಷೇತ್ರದಲ್ಲಿ ಗುಂಡಗುರ್ತಿ ಗ್ರಾಮದ ಶಾಲಾ ಮಕ್ಕಳಿಗೆ ಸರಿಯಾದ ಆಹಾರ ಸಿಗುತ್ತಿಲ್ಲ ಎಂದು ತಮ್ಮದೇ ಕಾಂಗ್ರೆಸ್ ಪಕ್ಷದ ನಾಯಕರು ಟೀಕೆ ಮಾಡುತ್ತಿದ್ದಾರೆ. ಅದರಂತೆ ಎಂಎಸ್‌ಪಿಸಿ ಯೋಜನೆಯಡಿ ಆಹಾರ ಧಾನ್ಯಗಳ ವಿತರಣೆಯಲ್ಲಿ ನಿಮ್ಮ ಕಾರ್ಯಕರ್ತರನ್ನೇ ಲೂಟಿ ಹೊಡೆಯಲು ಬಿಟ್ಟಿದ್ದೀರಾ. ಹೀಗಾಗಿ ತಾವು ರಾಜ್ಯದ ಜನರ ಸೇವೆ ಮಾಡಿ ಯಶಸ್ವಿಯಾಗಿ. ತದನಂತರ ಬೇರೆಯವರಿಗೆ ಟೀಕೆ ಮಾಡಲು ಮುಂದೆ ಬನ್ನಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ನಿಮ್ಮ ಕ್ಷೇತ್ರದಲ್ಲಿ ನಿಮ್ಮ ಎದುರಾಳಿಯಾಗಿ ನಾನು ಬೆಳೆಯುತ್ತಿರುವುದು ನಿಮಗೆ ಸಹಿಸಲಾಗದ ಕಾರಣಕ್ಕೆ ಭಯ ಉಂಟಾಗಿದೆ. ಹೀಗಾಗಿ ಮಣಿಕಂಠ್ ರಾಠೋಡ್ ಎದುರಾಳಿಯಾಗಿ ಬೆಳೆಯಬಾರದು ಎಂಬ ಕಾರಣಕ್ಕಾಗಿ ನಮ್ಮ ಮೇಲೆ ಸುಳ್ಳು ಕೇಸ್ ಹಾಕಿಸುತ್ತಿದ್ದೀರಾ. ನಮಗೆ ನೀತಿ ಪಾಠ ಹೇಳುವುದನ್ನು ಬಿಟ್ಟು, ಪಂಚ ರಾಜ್ಯಗಳ ಚುನಾವಣೆಯಲ್ಲಿ ನಿಮ್ಮ ಪಕ್ಷ ಪಾತಾಳಕ್ಕೆ ಕುಸಿದಿರುವ ಬಗ್ಗೆ ಚಿಂತನೆ ಮಾಡಿ ಎಂದು ಟಾಂಗ್ ನೀಡಿದರು. ಇದನ್ನೂ ಓದಿ: ಪ್ರಮಾಣವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ಪ್ರಮುಖ ಭರವಸೆ ಈಡೇರಿಸಿದ ಸಿಎಂ ರೇವಂತ್ ರೆಡ್ಡಿ

  • ಸುದ್ದಿಗೋಷ್ಠಿಗೆ ಮುನ್ನವೇ ಮಣಿಕಂಠ್ ರಾಠೋಡ್‌ನ ವಶಕ್ಕೆ ಪಡೆದ ಕಲಬುರಗಿ ಪೊಲೀಸರು

    ಸುದ್ದಿಗೋಷ್ಠಿಗೆ ಮುನ್ನವೇ ಮಣಿಕಂಠ್ ರಾಠೋಡ್‌ನ ವಶಕ್ಕೆ ಪಡೆದ ಕಲಬುರಗಿ ಪೊಲೀಸರು

    ಕಲಬುರಗಿ: ತನ್ನ ಮೇಲೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹಲ್ಲೆ ಮಾಡಿಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿದ್ದ ಬಿಜೆಪಿ ಮುಖಂಡ ಮಣಿಕಂಠ್ ರಾಠೋಡ್ (Manikanth Rathod) ಅವರನ್ನು ಕಲಬುರಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಪ್ರಿಯಾಂಕ್ ಖರ್ಗೆ ಮೇಲೆ ಆರೋಪ ಮಾಡಿರುವುದಕ್ಕೆ ಸಂಬಂಧಿಸಿದಂತೆ ಸಾಕ್ಷಿ ಬಿಡುಗಡೆ ಮಾಡಲು ಮಣಿಕಂಠ್ ರಾಠೋಡ್ ಸುದ್ದಿಗೋಷ್ಠಿ ಕರೆದಿದ್ದರು. ಆದರೆ ಸುದ್ದಿಗೋಷ್ಠಿಗೆ ಆಗಮಿಸುವ ಮುನ್ನವೇ ಮಣಿಕಂಠ್ ರಾಠೋಡ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಈ ಹಿಂದೆ ಮಣಿಕಂಠ್ ರಾಠೋಡ್ ಶಹಾಬಾದ್ ಬಳಿ ತನ್ನ ಮೇಲೆ ಪ್ರಿಯಾಂಕ್ ಖರ್ಗೆ ಹಲ್ಲೆ ಮಾಡಿಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು. ಆದರೆ ಇದೆಲ್ಲ ಕಟ್ಟುಕಥೆ, ಹಲ್ಲೆಯಾಗಿಲ್ಲ, ಕಾರ್ ಅಪಘಾತವನ್ನು ಹಲ್ಲೆ ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆ ಎಂದು ಕಲಬುರಗಿ ಪೊಲೀಸರ ತನಿಖೆಯಲ್ಲಿ ದೃಢಪಟ್ಟಿತ್ತು. ಇದನ್ನೂ ಓದಿ: ಮುಸ್ಲಿಮರ ಮೇಲೆ ಅಷ್ಟೊಂದು ಪ್ರೀತಿ ಇದ್ರೆ ನಿಮ್ಮ ಆಸ್ತಿ ಮಾರಿ ಹಣ ಕೊಡಿ: ಸಿಎಂ ವಿರುದ್ಧ ರೇಣುಕಾ ವಾಗ್ದಾಳಿ

    ಪೊಲೀಸರ ತನಿಖೆ ವರದಿ ಸುಳ್ಳು ಎಂದಿರುವ ಮಣಿಕಂಠ ರಾಠೋಡ್ ತನ್ನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸಾಕ್ಷಿ ಬಿಡುಗಡೆ ಮಾಡಲು ಇಂದು ಸುದ್ದಿಗೋಷ್ಠಿ ಕರೆದಿದ್ದರು. ಆದರೆ ಸುದ್ದಿಗೋಷ್ಠಿಗೆ ಆಗಮಿಸುವ ಮುನ್ನವೇ ಕಲಬುರಗಿ ನಗರದ ಚೌಕ್ ಠಾಣೆ ಪೊಲೀಸರು ಭಾರತ್ ಫ್ರೈಡ್ ಅಪಾರ್ಟ್ಮೆಂಟ್‌ನಲ್ಲಿರುವ ಅವರ ಮನೆಗೆ ತೆರಳಿ ರಾಠೋಡ್‌ರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಸಿಎಂ ತವರಿಗೆ ಶೀಘ್ರವೇ ಅಂಗನವಾಡಿ ಕಟ್ಟಡದ ಭರವಸೆ

  • ಕಲಬುರಗಿಯಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಬಂಧನ

    ಕಲಬುರಗಿಯಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಬಂಧನ

    ಕಲಬುರಗಿ: ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣದಲ್ಲಿ ಬಿಜೆಪಿ (BJP) ಮುಖಂಡ ಮಣಿಕಂಠ ರಾಠೋಡ್‌ನನ್ನು (Manikanth Rathod) ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿರುವ ಘಟನೆ ನಡೆದಿದೆ.

    ಚುನಾವಣಾ ಸಂದರ್ಭದಲ್ಲಿನ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಚಿತ್ತಾಪುರ ಪೊಲೀಸರು ಬಂಧಿಸಿದ್ದರು. ರಾತ್ರಿಯೇ ಸ್ಟೇಷನ್ ಬೇಲ್‌ ಮೇಲೆ ಮಣಿಕಂಠ ರಾಠೋಡ್‌ ಹೊರಬಂದಿದ್ದಾರೆ. ಇದನ್ನೂ ಓದಿ: ಅಂಗಡಿಯಲ್ಲಿ ಯಾರೂ ಇಲ್ಲದ್ದನ್ನ ಗಮನಿಸಿ ಕ್ಯಾಶ್‌ ಕೌಂಟರ್‌ನಿಂದ ಹಣ ಎತ್ಕೊಂಡು ಎಸ್ಕೇಪ್‌ ಆದ ಕಳ್ಳ

    ಇನ್ನೊಂದೆಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಕೊಲೆ ಬೆದರಿಕೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕು ಗೊಳಿಸಿದ್ದಾರೆ. ಖರ್ಗೆ ಕುಟುಂಬ ಸಾಫ್ ಮಾಡುವುದಾಗಿ ಮಣಿಕಂಠ ಹೇಳಿದ್ದ ಎನ್ನಲಾದ ಆಡಿಯೋ ಚುನಾವಣೆ ಸಂದರ್ಭದಲ್ಲಿ ತೀವ್ರ ಸಂಚಲನ ಸೃಷ್ಟಿಸಿತ್ತು.

    ಇದೀಗ ಚಿತ್ತಾಪುರ ಪೊಲೀಸರು ಈ ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ. ಈ ಪ್ರಕರಣದಲ್ಲಿ ರಾಠೋಡ್‌ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಅದಾಗ್ಯೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಕಂಠ ರಾಠೋಡ್‌ಗೆ ಪೊಲೀಸರು ನೋಟಿಸ್‌ ನೀಡಿದ್ದಾರೆ. ಇದನ್ನೂ ಓದಿ: ಟೆಸ್ಟಿಂಗ್‌ ವೇಳೆ ರಾಕೆಟ್‌ ಎಂಜಿನ್‌ ಸ್ಫೋಟ – ಜಪಾನ್‌ ಬಾಹ್ಯಾಕಾಶ ಸಂಸ್ಥೆಗೆ ಮತ್ತೆ ನಿರಾಸೆ

    ಈಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರಿಯಾಂಕ್‌ ಖರ್ಗೆ ವಿರುದ್ಧ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ರಾಠೋಡ್‌ ಸೋತಿದ್ದರು. ಪ್ರಿಯಾಂಕ್ ಖರ್ಗೆ ವಿರುದ್ಧ ತೊಡೆತಟ್ಟಿದ್ದ ಮಣಿಕಂಠ ರಾಠೋಡಗೆ ಇದೀಗ ಸಂಕಷ್ಟ ಎದುರಾಗಿದೆ. ಚಿತ್ತಾಪುರದಲ್ಲಿ ಪ್ರಿಯಾಂಕ್ ವರ್ಸಸ್ ಮಣಿಕಂಠ ಪೊಲಿಟಿಕಲ್‌ ಫೈಟ್ ವಾರ್ ಶುರುವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]