Tag: manipal hospital

  • ಬೆಂಗಳೂರಿನಲ್ಲಿ 97 ವರ್ಷದ ವ್ಯಕ್ತಿಗೆ ಕೊರೊನಾ ಲಸಿಕೆ

    ಬೆಂಗಳೂರಿನಲ್ಲಿ 97 ವರ್ಷದ ವ್ಯಕ್ತಿಗೆ ಕೊರೊನಾ ಲಸಿಕೆ

    ಬೆಂಗಳೂರು: ದೇಶಾದ್ಯಂತ ಇಂದಿನಿಂದ ಹಿರಿಯ ನಗರಿಗೆ ಕೋವಿಡ್ 19 ಲಸಿಕೆ ನೀಡಲಾಗುತ್ತಿದ್ದು, ಬೆಂಗಳೂರಿನಲ್ಲಿ 97 ವರ್ಷದ ವ್ಯಕ್ತಿ ಲಸಿಕೆಯನ್ನು ಪಡೆದಿದ್ದಾರೆ.

    ಮಣಿಪಾಲ್ ಆಸ್ಪತ್ರೆಯಲ್ಲಿ 97 ವರ್ಷದ ರಾಮಸ್ವಾಮಿ ಪಾರ್ಥಸಾರಥಿ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದಾರೆ. ವಿಶೇಷವೆಂದರೆ ಈ ಆಸ್ಪತ್ರೆಯಲ್ಲಿ ಲಸಿಕೆ ಪಡೆಯುತ್ತಿರುವ ಮೊದಲ ವ್ಯಕ್ತಿ ರಾಮಸ್ವಾಮಿ ಪಾರ್ಥಸಾರಥಿ ಆಗಿದ್ದಾರೆ.

    ಕೊರೊನಾ ಸೋಂಕನ್ನು ಹೊಗಲಾಡಿಸಲು ಭಾರತದಲ್ಲಿ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಗಳನ್ನು ಜನವರಿಯಿಂದ ನೀಡಲಾಗುತ್ತಿದೆ.

    ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿ ಏಮ್ಸ್‍ನಲ್ಲಿ ಭಾರತ್ ಬಯೋಟೆಕ್ ಸಂಸ್ಥೆಯ ಕೊರೊನಾ ಲಸಿಕೆ ಪಡೆದರು. ಹೀಗೆ ಇಂದು ದೇಶಾದ್ಯಂತ ಹಲವಾರು ಗಣ್ಯಾತಿಗಣ್ಯರು ಕೊರೊನಾ ಲಸಿಕೆ ಪಡೆದಿದ್ದಾರೆ.

  • ಬಸವಕಲ್ಯಾಣದ ಶಾಸಕ ನಾರಾಯಣ ರಾವ್ ಕೊರೊನಾದಿಂದ ನಿಧನ

    ಬಸವಕಲ್ಯಾಣದ ಶಾಸಕ ನಾರಾಯಣ ರಾವ್ ಕೊರೊನಾದಿಂದ ನಿಧನ

    ಬೆಂಗಳೂರು: ಬಸವಕಲ್ಯಾಣದ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಶಾಸಕ ನಾರಾಯಣ ರಾವ್ ಕೊರೊನಾದಿಂದ ಸಾವನ್ನಪ್ಪಿದ್ದಾರೆ.

    ಕೊರೊನಾ ವೈರಸ್ ತಗುಲಿದ ಕಾರಣ ನಾರಾಯಣ ರಾವ್ ಅವರನ್ನು ಸೆಪ್ಟೆಂಬರ್ 1ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇತ್ತೀಚೆಗೆ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿತ್ತು. ಇದರಿಂದ ಅವರಿಗೆ ಐಸಿಯುನಲ್ಲಿಟ್ಟು ಚಿಕಿತ್ಸೆ ಕೊಡಲಾಗುತ್ತಿತ್ತು. ಆದರೆ ಇಂದು ಮಧ್ಯಾಹ್ನ 3.55ಕ್ಕೆ ಅವರು ನಿಧಾನರಾಗಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆ ನಿರ್ದೇಶಕ ಡಾ. ಮನಿಷ್ ರೈ ತಿಳಿಸಿದ್ದಾರೆ.

    66 ವರ್ಷದ ನಾರಾಯಣರಾವ್‍ಗೆ ನ್ಯುಮೋನಿಯಾ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದ ಸಮಸ್ಯೆ ಇತ್ತು. ಆಸ್ಪತ್ರೆಗೆ ದಾಖಲಾದ ಎರಡೇ ದಿನಕ್ಕೆ ಅವರ ಸ್ಥಿತಿ ಗಂಭೀರವಾಗಿತ್ತು. ಅಂದಿನಿಂದ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಅವರಿಗೆ ಬಹುಅಂಗಾಂಗ ವೈಫಲ್ಯ ಕಾಣಿಸಿಕೊಂಡಿತ್ತು. ಇದರಿಂದ ಮಣಿಪಾಲ್‍ನ ವಿಶೇಷ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿತ್ತು. ಆದರೆ 24 ದಿನ ಕೊರೊನಾ ವಿರುದ್ಧ ಹೋರಾಡಿದ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

    ಮೊದಲು ಜನತಾ ಪಾರ್ಟಿಯಲ್ಲಿ ಗುರುತಿಸಿಕೊಂಡಿದ್ದ ಬಿ ನಾರಾಯಣರಾವ್, 1982 ಮೊದಲ ಬಾರಿಗೆ ಮಾಳೆಗಾಂವ್ ಜಿಲ್ಲಾ ಪಂಚಾಯ್ತಿ ಕ್ಷೇತ್ರಕ್ಕೆ ಆಯ್ಕೆ ಆಗಿದ್ದರು. ಬಳಿಕ ಕಾಂಗ್ರೆಸ್ ಪಕ್ಷ ಸೇರಿ ಎಸ್.ಎಂ ಕೃಷ್ಣ ಸರ್ಕಾರದಲ್ಲಿ 2 ವರ್ಷ ಸಾಕ್ಷರತಾ ಮಿಷನ್ ಅಧ್ಯಕ್ಷರಾಗಿದ್ದರು. 2013ರಲ್ಲಿ ಬಸವಕಲ್ಯಾಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಸೋಲು ಅನುಭವಿಸಿದ್ದರು.

    ಮಾಜಿ ಸಿಎಂಗಳಾದ ಡಿ.ದೇವರಾಜ್ ಅರಸ್, ಸಿದ್ದರಾಮಯ್ಯ ಮತ್ತು ಮಾಜಿ ಪ್ರಧಾನಿ ದೇವೇಗೌಡರು ಸೇರಿದಂತೆ ಹಲವು ರಾಜಕಾರಣಿಗಳ ಜೊತೆ ರಾವ್ ಗುರುತಿಸಿಕೊಂಡಿದ್ದರು. ಕೋಳಿ ಸಮಾಜದಲ್ಲಿ ಹುಟ್ಟಿದ ಅವರು ಬಿಎ ಪದವಿ ಪಡೆದಿದ್ದರು. ಮರಾಠಿ, ಹಿಂದೆ, ಇಂಗ್ಲಿಷ್, ತೆಲುಗು ಮತ್ತು ಕನ್ನಡ ಭಾಷೆಗಳನ್ನು ಮಾತನಾಡುತ್ತಿದ್ದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರಲ್ಲಿ ಅರಣ್ಯ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷರಾಗಿ ಕಾರ್ಯನಿರ್ವವಹಿಸಿದ್ದರು.

  • ಸಚಿವ ಗೋಪಾಲಯ್ಯಗೆ ಕೊರೊನಾ ಪಾಸಿಟಿವ್ – ಆಸ್ಪತ್ರೆಗೆ ದಾಖಲು

    ಸಚಿವ ಗೋಪಾಲಯ್ಯಗೆ ಕೊರೊನಾ ಪಾಸಿಟಿವ್ – ಆಸ್ಪತ್ರೆಗೆ ದಾಖಲು

    ಹಾಸನ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಮತ್ತು ಹಾಸನ ಉಸ್ತುವಾರಿ ಸಚಿವರಾದ ಗೋಪಾಲಯ್ಯ ಅವರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದೆ.

    ಇತ್ತೀಚೆಗಷ್ಟೇ ಜೆಡಿಎಸ್ ಶಾಸಕ ಹೆಚ್‍ಡಿ ರೇವಣ್ಣ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಈಗ ಗೋಪಾಲಯ್ಯ ಅವರಿಗೆ ಸೋಂಕು ತಗುಲಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಗೋಪಾಲಯ್ಯ, ನನ್ನ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ ಅಂತಾ ಹೇಳಿದ್ದಾರೆ.

    ನನಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಹಾಗೂ ಕ್ವಾರಂಟೈನ್‍ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ವಿನಂತಿಸಿಕೊಳ್ಳುತ್ತೇನೆ ಮನವಿ ಮಾಡಿದ್ದಾರೆ.

  • ಎರಡೂ ವರದಿ ನೆಗೆಟಿವ್- ಆಸ್ಪತ್ರೆಯಿಂದ ಸಿದ್ದರಾಮಯ್ಯ ಡಿಸ್ಚಾರ್ಜ್

    ಎರಡೂ ವರದಿ ನೆಗೆಟಿವ್- ಆಸ್ಪತ್ರೆಯಿಂದ ಸಿದ್ದರಾಮಯ್ಯ ಡಿಸ್ಚಾರ್ಜ್

    ಬೆಂಗಳೂರು: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ.

    ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದರಾಮಯ್ಯನವರಿಗೆ ಎರಡನೇ ಬಾರಿಗೆ ನಡೆದ ಪರೀಕ್ಷೆಯಲ್ಲೂ ನೆಗೆಟಿವ್ ಬಂದಿದ್ದು, ಈ ಹಿನ್ನೆಲೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

    ಮೂತ್ರ ಪಿಂಡದ ಸೋಂಕಿನ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಆಗಸ್ಟ್ 3ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು. ಹೀಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಹತ್ತು ದಿನಗಳಿಂದ ಮಣಿಪಾಲ್ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಇದೀಗ ಸಂಪೂರ್ಣ ಗುಣಮುಖರಾಗಿದ್ದು ಡಿಸ್ಚಾರ್ಜ್ ಆಗಿದ್ದಾರೆ.

    ಆಸ್ಪತ್ರೆಯಿಂದ ಹೊರಡುವ ಮುನ್ನ ಸಿಬ್ಬಂದಿಗೆ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಿದ್ದಾರೆ. ಅಲ್ಲದೆ ಇದೇ ವೇಳೆ ಆಸ್ಪತ್ರೆ ಸಿಬ್ಬಂದಿ ಸಹ ಸಿದ್ದರಾಮಯ್ಯನವರಿಗೆ ಹೀ ಗುಚ್ಚ ನೀಡಿ ಬೀಳ್ಕೊಟ್ಟಿದ್ದಾರೆ. ಸಿದ್ದರಾಮಯ್ಯ ಪುತ್ರ, ಶಾಸಕ ಯತೀಂದ್ರಗೂ ನೆಗೆಟಿವ್ ವರದಿ ಬಂದ ಹಿನ್ನೆಲೆ ಅವರೂ ಸಹ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ತಂದೆಯನ್ನು ಕರೆದುಕೊಂಡು ಮನೆಗೆ ಆಗಮಿಸಿದ್ದಾರೆ.

    ಇದೇ ವೇಳೆ ಗುಣಮುಖರಾಗುವಂತೆ ಹಾರೈಸಿದ ನಾಡಿನ ಜನತೆ ಸೇರಿದಂತೆ ಎಲ್ಲರಿಗೂ ಸಿದ್ದರಾಮಯ್ಯ ಧನ್ಯವಾದಗಳನ್ನು ತಿಳಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯ ಅವರು ಮನೆಯಲ್ಲಿ ಒಂದು ವಾರ ವಿಶ್ರಾಂತಿ ಪಡೆಯಲಿದ್ದಾರೆ. ಸಿದ್ದರಾಮಯ್ಯ ಡಿಸ್ಚಾರ್ಜ್ ಆಗುವ ಸುದ್ದಿ ತಿಳಿದ ಶಾಸಕ ಜಮೀರ್ ಅಹ್ಮದ್ ಖಾನ್ ಆಸ್ಪತ್ರೆಗೆ ತೆರಳಿದ್ದು, ಆಸ್ಪತ್ರೆಯಿಂದಲೇ ಸಿದ್ದರಾಮಯ್ಯ ಜೊತೆಗೆ ಮನೆಗೆ ತೆರಳಿದ್ದಾರೆ.

  • ಕೊರೊನಾ ಗೆದ್ದ ಬಿಎಸ್‌ವೈ  – ಮಣಿಪಾಲ ಆಸ್ಪತ್ರೆಯಿಂದ ಸಿಎಂ ಡಿಸ್ಚಾರ್ಜ್‌

    ಕೊರೊನಾ ಗೆದ್ದ ಬಿಎಸ್‌ವೈ – ಮಣಿಪಾಲ ಆಸ್ಪತ್ರೆಯಿಂದ ಸಿಎಂ ಡಿಸ್ಚಾರ್ಜ್‌

    ಬೆಂಗಳೂರು: ಕೊರೊನಾದಿಂದ ಸಿಎಂ ಯಡಿಯೂರಪ್ಪನವರು ಗುಣಮುಖರಾಗಿದ್ದು ಇಂದು ಸಂಜೆ ಮಣಿಪಾಲ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಆಸ್ಪತ್ರೆಗೆ ದಾಖಲಾದ ಬಳಿಕ ಮುಖ್ಯಮಂತ್ರಿಗಳು ಎರಡನೇ ಬಾರಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಇಂದು ಬೆಳಗ್ಗೆ ವರದಿ ನೆಗೆಟಿವ್ ಬಂದಿದೆ. ಮುಖ್ಯಮಂತ್ರಿಗಳ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ. ಯಡಿಯೂರಪ್ಪನವರು ಸಂಪೂರ್ಣವಾಗಿ ಗುಣಮುಖರಾಗಿದ್ದು, ಡಿಸ್ಚಾರ್ಜ್‌ ಮಾಡಬಹುದು ಎಂದು ವೈದ್ಯರು ತಿಳಿಸಿದ್ದರು.

    ಕೊರೊನಾ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಸಿಎಂ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತ ಇದೆ ಎಂಬ ಮಾಹಿತಿ ಮೊದಲು ಲಭ್ಯವಾಗಿತ್ತು. ಆದರೆ ಈಗ ಇಂದೇ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಡಿಸ್ಚಾರ್ಜ್‌ ಆದ ಬಿಎಸ್‌ವೈ ನೇರವಾಗಿ ಕಾವೇರಿ ನಿವಾಸಕ್ಕೆ ಆಗಮಿಸಿದ್ದಾರೆ.

    ಆ.16ರವರೆಗೆ ಹೋಂ ಕ್ವಾರಂಟೈನ್‌:
    ಬಿಬಿಎಂಪಿ, ಆರೋಗ್ಯ ಇಲಾಖಾ ಅಧಿಕಾರಿಗಳು ಆಗಸ್ಟ್‌ 4 ರಂದು ಸಿಎಂ ಕಚೇರಿ ಮತ್ತು ಮನೆಯ ಮುಂದೆ ಆ. 2 ರಿಂದ 16 ರವರೆಗೂ ಪ್ರವೇಶ ನಿರಾಕರಣೆ ಮಾಡಿ ಪೋಸ್ಟರ್‌ ಅಂಟಿಸಿದ್ದಾರೆ. ಆಗಸ್ಟ್ 16 ರವರೆಗೂ ಸಿಎಂ ಬಿಎಸ್ ಯಡಿಯೂರಪ್ಪ ಹೋಂ ಕ್ವಾರಂಟೈನ್ ಹಿನ್ನೆಲೆಯಲ್ಲಿ ಯಾರಿಗೂ ಪ್ರವೇಶವಿಲ್ಲ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ. ಇದನ್ನೂ ಓದಿ: ಸಿಎಂಗಾಗಿ ಹೋಮ್‌ ಕ್ವಾರಂಟೈನ್‌ ನಿಯಮ ಬದಲಾಗುತ್ತಾ?

  • ಮಾಜಿ ಸಿಎಂಗೆ ಕೊರೊನಾ – ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ

    ಮಾಜಿ ಸಿಎಂಗೆ ಕೊರೊನಾ – ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ

    ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ.

    ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೊರೊನಾ ಟೆಸ್ಟ್‌ ಮಾಡಿಸಿದ್ದು ಪಾಸಿಟಿವ್‌ ಬಂದಿದೆ.

    ಈ ಬಗ್ಗೆ ಟ್ವೀಟ್‌ ಮಾಡಿರುವ ಪುತ್ರ ಯತೀಂದ್ರ, ನಿನ್ನೆ ಬೆಳಿಗ್ಗೆಯಿಂದ ತಂದೆಯವರಿಗೆ ಜ್ವರ ಬಂದಿದ್ದು ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಆಂಟಿಜೆನ್‌ ಟೆಸ್ಟ್‌ ಮಾಡಲಾಗಿದ್ದು ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್‌ ಆಗಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.

    ರಾತ್ರಿ 11:30ಕ್ಕೆ ಮಣಿಪಾಲ್ ಆಸ್ಪತ್ರೆಗೆ ಸಿದ್ದರಾಮಯ್ಯ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ಮಗ ಡಾ.ಯತೀಂದ್ರ ಅವರು ಸಿದ್ದರಾಮಯ್ಯನವರನ್ನು ಈಗ ನೋಡಿಕೊಳ್ಳುತ್ತಿದ್ದಾರೆ.

    ಕೊರೊನಾ ಬಂದಿರುವ ಬಗ್ಗೆ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ

    ಯಡಿಯೂರಪ್ಪ ಕೂಡ ಇದೇ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಆರಂಭದಲ್ಲಿ ಸಿಎಂ ಆರೋಗ್ಯ ವಿಚಾರಿಸಲೆಂದೇ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದಾರೆ ಎನ್ನಲಾಗಿತ್ತು. ನಂತರ ತಮ್ಮ ಆರೋಗ್ಯ ಆರೋಗ್ಯ ತಪಾಸಣೆಗೆ ಬಂದಿರುವ ವಿಚಾರ ತಿಳಿದಿದೆ.

    ಆಸ್ಪತ್ರೆಗೆ ದಾಖಲಾಗುವ ಮುನ್ನ ಸಿಎಂ ಸಿದ್ದರಾಮಯ್ಯ ಸಿಎಂ ಆರೋಗ್ಯ ವಿಚಾರಿಸಿದರು. ಸದ್ಯ ಹಾಲಿ, ಮಾಜಿ ಸಿಎಂಗಳು ಸ್ಪೆಷಲ್‌ ವಾರ್ಡ್‌ನಲ್ಲಿದ್ದು ಆರೋಗ್ಯವಾಗಿದ್ದಾರೆ.

  • ಮಣಿಪಾಲ ಆಸ್ಪತ್ರೆಗೆ ಮಾಜಿ ಸಿಎಂ ಸಿದ್ದರಾಮಯ್ಯ ದಾಖಲು

    ಮಣಿಪಾಲ ಆಸ್ಪತ್ರೆಗೆ ಮಾಜಿ ಸಿಎಂ ಸಿದ್ದರಾಮಯ್ಯ ದಾಖಲು

    ಬೆಂಗಳೂರು: ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಮೂತ್ರದ ಸೋಂಕಿನಿಂದ ಕಾಣಿಸಿಕೊಂಡಿರುವ ಜ್ವರ ಇದಾಗಿದ್ದು, ಆತಂಕಪಡುವ ಅವಶ್ಯಕತೆಯಿಲ್ಲ ಎಂದ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ರಾತ್ರಿ ಆಸ್ಪತ್ರೆಯಲ್ಲೇ ಸಿದ್ದರಾಮಯ್ಯ ಉಳಿದುಕೊಂಡಿದ್ದಾರೆ. ರಾತ್ರಿ 11:30ಕ್ಕೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಲ್ಲಿ ಮಗ ಡಾ.ಯತೀಂದ್ರ ಅವರು ಸಿದ್ದರಾಮಯ್ಯನವರನ್ನು ಈಗ ನೋಡಿಕೊಳ್ಳುತ್ತಿದ್ದಾರೆ.

    ಯಡಿಯೂರಪ್ಪ ಕೂಡ ಇದೇ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಆರಂಭದಲ್ಲಿ ಸಿಎಂ ಆರೋಗ್ಯ ವಿಚಾರಿಸಲೆಂದೇ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದಾರೆ ಎನ್ನಲಾಗಿತ್ತು. ನಂತರ ತಮ್ಮ ಆರೋಗ್ಯ ಆರೋಗ್ಯ ತಪಾಸಣೆಗೆ ಬಂದಿರುವ ವಿಚಾರ ತಿಳಿದಿದೆ.

    ಆಸ್ಪತ್ರೆಯಲ್ಲಿ ದಾಖಲಾಗುವ ಮುನ್ನ ಸಿಎಂ ಸಿದ್ದರಾಮಯ್ಯ ಸಿಎಂ ಆರೋಗ್ಯ ವಿಚಾರಿಸಿದರು. ಇಂದು ಸಿದ್ದರಾಮಯ್ಯನವರು ಕೊರೊನಾ ಪರೀಕ್ಷೆಗೆ ಒಳಗಾಗುವ ಸಾಧ್ಯತೆಯಿದೆ. ಸದ್ಯ ಹಾಲಿ, ಮಾಜಿ ಸಿಎಂಗಳು ಸ್ಪೆಷಲ್‌ ವಾರ್ಡ್‌ನಲ್ಲಿದ್ದು ಆರೋಗ್ಯವಾಗಿದ್ದಾರೆ.

  • ಸಿಎಂ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರ – ಡಾ.ಸುದರ್ಶನ್ ಬಲ್ಲಾಳ್ ಸ್ಪಷ್ಟನೆ

    ಸಿಎಂ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರ – ಡಾ.ಸುದರ್ಶನ್ ಬಲ್ಲಾಳ್ ಸ್ಪಷ್ಟನೆ

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯ ಅಧ್ಯಕ್ಷರಾದ ಡಾ.ಸುದರ್ಶನ್ ಬಲ್ಲಾಳ್ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ:  ಆತಂಕ ಬೇಡ, ಆರೋಗ್ಯವಾಗಿದ್ದೇನೆ- ಆಸ್ಪತ್ರೆಯಿಂದ ಸಿಎಂ ವಿಡಿಯೋ ಸಂದೇಶ

    ಸಿಎಂ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ. ಆಗಸ್ಟ್ 2 ರಂದು ರಾತ್ರಿ 11 ಗಂಟೆಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ದಾಖಲಿಸಿಕೊಳ್ಳಲಾಗಿದೆ. ಅವರಿಗೆ ಕೊರೊನಾ ರೋಗ ಲಕ್ಷಣದ ತೀವ್ರತೆ ಕಡಿಮೆ ಇದೆ. ಸದ್ಯಕ್ಕೆ ಸಿಎಂ ಅವರ ಆರೋಗ್ಯ ಉತ್ತಮವಾಗಿದೆ ಎಂದು ತಿಳಿಸಿದ್ದಾರೆ.

    ಪ್ರೋಟೋಕಾಲ್‍ಗಳ ಪ್ರಕಾರ ಸೂಕ್ತ ಚಿಕಿತ್ಸೆಯನ್ನು ಪ್ರಾರಂಭಿಸಲಾಗಿದೆ. ನುರಿತ ವೈದ್ಯರ ತಂಡದಿಂದ ಸಿಎಂಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ತಂಡವು ಸಿಎಂ ಯಡಿಯೂರಪ್ಪ ಅವರ ಆರೋಗ್ಯದ ನಿಗಾ ವಹಿಸಲಾಗುತ್ತಿದೆ ಎಂದು ಡಾ.ಸುದರ್ಶನ್ ಬಲ್ಲಾಳ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿಎಂ ಯಡಿಯೂರಪ್ಪನವರು ಆಸ್ಪತ್ರೆಗೆ ದಾಖಲಾದ ಬಳಿಕ ಮೊದಲ ವಿಡಿಯೋ ಸಂದೇಶ ಕಳುಹಿಸಿದ್ದು, ಯಾರಿಗೂ ಆತಂಕ ಬೇಡ, ಆರೋಗ್ಯವಾಗಿದ್ದೇನೆ. ಬೇಗ ಗುಣಮುಖನಾಗುತ್ತೇನೆಂದು ವೈದ್ಯರು ಹೇಳಿರುವುದಾಗಿ ತಿಳಿಸಿದ್ದರು.

    ಸಿಎಂ ಯಡಿಯೂಪ್ಪನವರಿಗೆ ಕೊರೊನಾ ಪಾಸಿಟಿವ್ ಬಂದಿರುವ ಕುರಿತು ಭಾನುವಾರ ರಾತ್ರಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು. “ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ” ಎಂದು ಸಿಎಂ ಟ್ವೀಟ್ ಮಾಡಿದ್ದರು.

  • ಪ್ರತಿ ಭಾನುವಾರ ಸಿಎಂಗೆ ನಡೀತಿತ್ತು ಕೊರೊನಾ ಟೆಸ್ಟ್‌

    ಪ್ರತಿ ಭಾನುವಾರ ಸಿಎಂಗೆ ನಡೀತಿತ್ತು ಕೊರೊನಾ ಟೆಸ್ಟ್‌

    ಬೆಂಗಳೂರು: ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಯಡಿಯೂರಪ್ಪನವರು ಪ್ರತಿ ದಿನ ಕೊರೊನಾ ನಿಯಂತ್ರಣ ಸಂಬಂಧ ಅಧಿಕಾರಿಗಳು, ತಜ್ಞರ ಜೊತೆ ಸಭೆ ನಡೆಸುತ್ತಿದ್ದರು. ಅಷ್ಟೇ ಅಲ್ಲದೇ ಪ್ರತಿ ದಿನ ಸಿಎಂ ಭೇಟಿಗೆ ಗಣ್ಯರು ಸಹ ಆಗಮಿಸುತ್ತಿದ್ದರು. ಹೀಗಾಗಿ ಪ್ರತಿ ಭಾನುವಾರ ಸಿಎಂಗೆ ಕೋವಿಡ್‌ ಪರೀಕ್ಷೆ ನಡೆಯುತ್ತಿತ್ತು. ನಿನ್ನೆ ನಡೆದ ಪರೀಕ್ಷೆಯಲ್ಲಿ ಪಾಸಿಟಿವ್‌ ಬಂದಿದೆ.

    ಯಡಿಯೂರಪ್ಪನವರಿಗೆ ಯಾವುದೇ ರೋಗ ಲಕ್ಷಣಗಳಿಲ್ಲ. ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ಎಚ್‌ಎಎಲ್‌ ಬಳಿಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಯಡಿಯೂರಪ್ಪನವರ ಆರೋಗ್ಯ ಸ್ಥಿರವಾಗಿದು ತಮ್ಮ ವೈದ್ಯರ ತಂಡ ನಿಗಾ ಇರಿಸಿದೆ ಎಂದು ಮಣಿಪಾಲ ಆಸ್ಪತ್ರೆ ತನ್ನ ಮೀಡಿಯಾ ಬುಲೆಟಿನ್‌ನಲ್ಲಿ ತಿಳಿಸಿದೆ.

    ಭಾನುವಾರ ರಾತ್ರಿ ಟ್ವೀಟ್‌ ಮಾಡಿದ್ದ ಸಿಎಂ, ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಕೇಳಿಕೊಂಡಿದ್ದರು.

    ಕೋವಿಡ್‌ ಸೋಂಕಿಗೆ ಒಳಗಾದ ದೇಶದ ಎರಡನೇ ಮುಖ್ಯಮಂತ್ರಿ ಯಡಿಯೂರಪ್ಪ ಆಗಿದ್ದಾರೆ. ಈ ಮೊದಲು ಮಧ್ಯಪ್ರದೇಶದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ಸೋಂಕು ಬಂದಿತ್ತು.

    ಸಿಎಂ ಯಡಿಯೂರಪ್ಪನರಿಗೆ ಸೋಂಕು ತಿಳಿದ ವಿಚಾರ ಕೇಳಿ ಸಚಿವರಾದ ಸುಧಾಕರ್‌, ಅಶ್ವಥ್‌ ನಾರಾಯಣ್‌, ಮಾಜಿ ಸಿಎಂ ಸಿದ್ದರಾಮಯ್ಯ, ಬಿಎಲ್‌ ಸಂತೋಷ್‌ ಸೇರಿದಂತೆ ಹಲವು ಗಣ್ಯರು ಚೇತರಿಕೆಯಾಗಲಿ ಎಂದು ಹಾರೈಸಿದ್ದಾರೆ.

  • ಉಡುಪಿ ಅಪಘಾತ: ಸಾವಿನ ಸಂಖ್ಯೆ 9ಕ್ಕೆ ಏರಿಕೆ, 15 ಮಂದಿಗೆ ಗಾಯ, ಐವರು ಗಂಭೀರ

    ಉಡುಪಿ ಅಪಘಾತ: ಸಾವಿನ ಸಂಖ್ಯೆ 9ಕ್ಕೆ ಏರಿಕೆ, 15 ಮಂದಿಗೆ ಗಾಯ, ಐವರು ಗಂಭೀರ

    ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿ ಮಾಳ ಬಳಿಯ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆ ಆಗಿದೆ. ಸುಮಾರು 15 ಜನರು ಗಾಯಗೊಂಡಿದ್ದು, ಐವರು ಗಂಭೀರವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಬಸ್ ನಲ್ಲಿ ಸುಮಾರು 35 ಮಂದಿ ಪ್ರಯಾಣಿಸುತ್ತಿದ್ದರು. ಮೈಸೂರಿನಿಂದ ಮಂಗಳೂರಿಗೆ ತೆರಳುವಾಗ ಉಡುಪಿ-ಚಿಕ್ಕಮಗಳೂರು ಘಾಟಿ ರಸ್ತೆಯ ಎಸ್.ಕೆ.ಬಾರ್ಡರ್ ಸಮೀಪದ ಅಬ್ಬಾಸ್ ಕಟ್ಟಿಂಗ್ ಬಳಿ ಬಸ್ ಬಂಡೆಗೆ ಡಿಕ್ಕಿ ಹೊಡೆದಿದೆ. ಘಾಟಿಯ ರಸ್ತೆ ಅತಿ ಕಿರಿದಾಗಿದ್ದರಿಂದ ಮುಂದೆ ವಾಹನ ಬಂದಾಗ ಬಲಕ್ಕೆ ತಿರುವು ತೆಗೆದುಕೊಳ್ಳುವಾಗ ಆ್ಯಕ್ಸೆಲ್ ಕಟ್ ಆಗಿದ್ದರಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

    ಇನ್ನಿತರ ಘಾಟಿಗಳಿಗಿಂತ ಉಡುಪಿ-ಚಿಕ್ಕಮಗಳೂರು ತುಂಬಾ ಕಿರಿದಾಗಿದೆ. ಬಸ್ ಬಲಕ್ಕೆ ತಿರುಗಿದಾಗ ಸುಮಾರು 50 ರಿಂದ 60 ಮೀಟರ್ ವರೆಗೆ ಬಂಡೆಗೆ ಉಜ್ಜಿಕೊಂಡು ಮುಂದಕ್ಕೆ ಸಾಗಿದ್ದರಿಂದ ಬಲಭಾಗದಲ್ಲಿ ಕುಳಿತಿದ್ದ ಪ್ರಯಾಣಿಕರೇ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರೆಲ್ಲರನ್ನು ಮೈಸೂರಿನ ಮೂಲದವರೆಂದು ಹೇಳಲಾಗುತ್ತಿದ್ದು, ನಿಖರ ಮಾಹಿತಿ ಲಭ್ಯವಾಗಿಲ್ಲ. ಶವಗಳನ್ನು ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಗಾಯಾಳುಗಳನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.