Tag: Manish Tewari

  • ಚನ್ನಿ ಪ್ರಮಾಣ ವಚನ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಿರಲಿಲ್ಲ: ಎಎಪಿಗೆ ಧನ್ಯವಾದ ತಿಳಿಸಿದ ಮನಿಶ್‌ ತಿವಾರಿ

    ಚನ್ನಿ ಪ್ರಮಾಣ ವಚನ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಿರಲಿಲ್ಲ: ಎಎಪಿಗೆ ಧನ್ಯವಾದ ತಿಳಿಸಿದ ಮನಿಶ್‌ ತಿವಾರಿ

    ಚಂಡೀಗಢ: ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದ್ದಕ್ಕೆ ಪಂಜಾಬ್‌ ನೂತನ ಮುಖ್ಯಮಂತ್ರಿ ಭಗವಂತ್‌ ಮಾನ್‌ ಅವರಿಗೆ ಕಾಂಗ್ರೆಸ್‌ ಸಂಸದ ಮನಿಶ್‌ ತಿವಾರಿ ಧನ್ಯವಾದ ತಿಳಿಸಿದ್ದಾರೆ. ಇದೇ ವೇಳೆ ಅಚ್ಚರಿದಾಯಕ ವಿಚಾರವೊಂದನ್ನು ಹಂಚಿಕೊಂಡಿದ್ದಾರೆ.

    ಕಳೆದ ವರ್ಷ ಸೆಪ್ಟೆಂಬರ್‌ ತಿಂಗಳಲ್ಲಿ ತಮ್ಮ ಪಕ್ಷದವರೇ ಆದ ಚರಣ್‌ಜಿತ್‌ ಸಿಂಗ್‌ ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಿರಲಿಲ್ಲ ಎಂದು ಇದೇ ವೇಳೆ ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ಉಡ್ತಾ ಪಂಜಾಬ್‌ ಅಲ್ಲ, ಪ್ರಗತಿಪರ ಪಂಜಾಬ್‌: ಭಗವಂತ್‌ ಮಾನ್‌

    ಈ ಕುರಿತು ಟ್ವೀಟ್‌ ಮಾಡಿರುವ ತಿವಾರಿ, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಭಗವಂತ್ ಮಾನ್ ಅವರನ್ನು ನಾನು ಅಭಿನಂದಿಸುತ್ತೇನೆ. ಅವರ ಪ್ರಮಾಣ ವಚನಕ್ಕೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಧನ್ಯವಾದ ಅರ್ಪಿಸುತ್ತೇನೆ. ಚರಣ್‌ಜಿತ್‌ ಸಿಂಗ್‌ ಚನ್ನಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸದಿರುವುದು ವಿಪರ್ಯಾಸ ಎಂದು ತಿಳಿಸಿದ್ದಾರೆ. ಇದೇ ವೇಳೆ ಸಮಾರಂಭದ ಆಮಂತ್ರಣ ಪತ್ರವನ್ನೂ ಟ್ಟಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

    ಈಚೆಗೆ ನಡೆದ ಪಂಜಾಬ್‌ ವಿಧಾನಸಭಾ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ 92 ಸ್ಥಾನಗಳಲ್ಲಿ ಭರ್ಜರಿ ಜಯ ಸಾಧಿಸಿತು. ಆದರೆ ಕಾಂಗ್ರೆಸ್‌ ಪಕ್ಷ ಕೇವಲ 18 ಸ್ಥಾನಗಳನ್ನು ಮಾತ್ರ ಜಯಿಸಲು ಶಕ್ತವಾಯಿತು. ಇದನ್ನೂ ಓದಿ: ಪಂಜಾಬ್‍ನಲ್ಲಿ ಇಂದು ಭಗವಂತ್ ಮಾನ್‍ಗೆ ಪಟ್ಟಾಭಿಷೇಕ

    ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಭಗತ್ ಸಿಂಗ್ ಅವರ ಗ್ರಾಮವಾದ ಖಟ್ಕರ್ ಕಲಾನ್‌ನಲ್ಲಿ ಭಗವಂತ್ ಮಾನ್ ಅವರು ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆದರೆ ನಿರ್ಗಮಿತ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರನ್ನು ಆಹ್ವಾನಿಸಿರಲಿಲ್ಲ.

  • ನನ್ನನ್ನು ಹೊರತಳ್ಳುವವರೆಗೆ ಕಾಂಗ್ರೆಸ್ ತೊರೆಯಲ್ಲ: ಮನೀಶ್ ತಿವಾರಿ

    ನನ್ನನ್ನು ಹೊರತಳ್ಳುವವರೆಗೆ ಕಾಂಗ್ರೆಸ್ ತೊರೆಯಲ್ಲ: ಮನೀಶ್ ತಿವಾರಿ

    ನವದೆಹಲಿ: ನಾನು ಕಾಂಗ್ರೆಸ್‌ನ ಹಿಡುವಳಿದಾರನಲ್ಲ. ಬದಲಿಗೆ ಪಾಲುದಾರ. 40 ವರ್ಷಗಳಿಂದ ಕಾಂಗ್ರೆಸ್ ಜೊತೆಯಾಗಿದ್ದೇನೆ. ಯಾರಾದರೂ ನನ್ನನ್ನು ಹೊರತಳ್ಳುವವರೆಗೆ ಪಕ್ಷವನ್ನು ತೊರೆಯುವುದಿಲ್ಲ ಎಂದು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಮನೀಶ್ ತಿವಾರಿ ಹೇಳಿಕೆ ನೀಡಿದ್ದಾರೆ.

    ಒಬ್ಬ ಸಣ್ಣ ಕಾರ್ಯಕರ್ತನೂ ಕೂಡಾ ಪಕ್ಷವನ್ನು ತೊರೆದರೆ ಅದು ಕಾಂಗ್ರೆಸ್‌ಗೆ ನಷ್ಟ. ಹಿರಿಯ ನಾಯಕರು ಪಕ್ಷ ಬಿಟ್ಟರೆ ಆಗುವ ನಷ್ಟ ಬಹು ದೊಡ್ಡದು. ಹೀಗಾಗಿ ಯಾರಾದರೂ ಹೊರಗೆ ತಳ್ಳದ ಹೊರತು ನಾನು ಪಕ್ಷ ತೊರೆಯುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಮತಕ್ಕಾಗಿ ಕಾಂಗ್ರೆಸ್, ಪಂಜಾಬ್ ಸಿಎಂ ದೇಶವನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ: ಯೋಗಿ ಆದಿತ್ಯನಾಥ್

    ಪಂಜಾಬಿನ ಆನಂದಪುರ ಸಾಹಿಬ್‌ನ ಕಾಂಗ್ರೆಸ್ ಸಂಸದರಾಗಿರುವ ತಿವಾರಿ ಪಕ್ಷವನ್ನು ತೊರೆಯುತ್ತಾರೆ ಎಂಬ ಊಹಾಪೋಹದ ನಡುವೆ ಈ ಹೇಳಿಕೆ ನೀಡಿದ್ದಾರೆ. ಪಂಜಾಬ್ ಚುನಾವಣೆಗೆ ಕೆಲವೇ ದಿನಗಳಿಗೂ ಮುನ್ನ ಟ್ವೀಟ್ ಮಾಡಿದ ತಿವಾರಿ ನಾನು ಮಾತನಾಡಿದರೆ ಅದು ಯುದ್ಧ ಎಂದು ಗ್ರಹಿಸಲಾಗುತ್ತದೆ. ಸುಮ್ಮನಿದ್ದರೆ ಅಸಹಾಯಕನಾಗುತ್ತೇನೆ ಎಂದಿದ್ದರು. ಇದನ್ನೂ ಓದಿ: ಸ್ಮಾರ್ಟ್ ಕಾರ್ಡ್ ಆರ್ಮ್ಸ್ ಲೈಸೆನ್ಸ್ ಪರಿಚಯಿಸಿದ ದೆಹಲಿ ಪೊಲೀಸರು

  • ದೆಹಲಿ ಬಿಟ್ಟು ಗುಜರಾತ್ ನಲ್ಲಿ ಜಪಾನ್ ಪ್ರಧಾನಿಗೆ ರಾಜಾತಿಥ್ಯ ನೀಡಿದ್ದು ಯಾಕೆ: ಕಾಂಗ್ರೆಸ್ ಪ್ರಶ್ನೆ

    ದೆಹಲಿ ಬಿಟ್ಟು ಗುಜರಾತ್ ನಲ್ಲಿ ಜಪಾನ್ ಪ್ರಧಾನಿಗೆ ರಾಜಾತಿಥ್ಯ ನೀಡಿದ್ದು ಯಾಕೆ: ಕಾಂಗ್ರೆಸ್ ಪ್ರಶ್ನೆ

    ನವದೆಹಲಿ: ಜಪಾನ್ ಪ್ರಧಾನಿ ಅಬೆ ಜೊತೆಗಿನ ಎರಡು ದಿನಗಳ ಭಾರತದ ಭೇಟಿಯನ್ನು ಮೋದಿ ಸರ್ಕಾರವು ತನ್ನ ರಾಜಕೀಯ ಲಾಭವನ್ನು ಹೆಚ್ಚಿಸಿಕೊಳ್ಳಲು ಬಳಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

    ಕಾಂಗ್ರೆಸ್ ಪಕ್ಷದ ಮುಖಂಡ ಮನೀಷ್ ತಿವಾರಿ ಪ್ರತಿಕ್ರಿಯಿಸಿ, ಯಾವುದೇ ಪ್ರತಿಷ್ಟಿತ ದೇಶದ ಪ್ರಧಾನಿಗಳು ದೇಶಕ್ಕೆ ಆಗಮಿಸಿದರೆ ಅವರಿಗೆ ದೆಹಲಿಯಲ್ಲಿ ಅತಿಥ್ಯವನ್ನು ನೀಡಲಾಗುತ್ತದೆ. ಆದರೆ ಈ ಬಾರಿ ಗುಜರಾತ್ ನಲ್ಲಿ ರಾಜಾತಿಥ್ಯ ನೀಡಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

    ಜಪಾನ್ ಪ್ರಧಾನಿ ಅವರು ಗುಜರಾತ್‍ಗೆ ಭೇಟಿ ನೀಡಿದ ಬಗ್ಗೆ ನಮ್ಮ ಆಕ್ಷೇಪ ಇಲ್ಲ. ಅದರೆ ಮುಂದಿನ ದಿನಗಳಲ್ಲಿ ಗುಜರಾತ್ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ಪ್ರತಿಷ್ಠಿತ ದೇಶದ ಪ್ರಧಾನಿಗಳ ಜೊತೆ ರೋಡ್ ಶೋ ನಡೆಸುವ ಅಗತ್ಯತೆಯನ್ನು ಪ್ರಶ್ನಿಸುತ್ತಿದ್ದೇವೆ ಎಂದರು.

    ಬಿಜೆಪಿಯ ಈ ನಡೆಯು ಮುಂದಿನ ಚುನಾವಣೆಯಲ್ಲಿ ರಾಜಕೀಯ ಲಾಭವನ್ನು ಪಡೆಯುವ ಉದ್ದೇಶವನ್ನು ಹೊಂದಿರುವುದಿಲ್ಲ ಎಂದು ಆಶಿಸುತ್ತೇವೆ. ಜಪಾನ್ ಹಾಗೂ ಭಾರತದ ನಡುವೆ ಹಲವು ವರ್ಷಗಳಿಂದಲೂ ಉತ್ತಮ ಸ್ನೇಹ ಸಂಬಂಧವನ್ನು ಹೊಂದಿದ್ದು, ಹಲವು ಬಾರಿ ಜಪಾನ್ ನಮಗೇ ಸಹಾಯದ ಹಸ್ತವನ್ನು ಚಾಚಿದೆ. ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ವೇಳೆಯಲ್ಲೂ ಉತ್ತಮ ಸಂಬಂಧಗಳನ್ನು ಏರ್ಪಡಿಸಲಾಗಿತ್ತು ಎಂದು ಮನೀಷ್ ತಿವಾರಿ ತಿಳಿಸಿದರು.

    ರೋಹಿಂಗ್ಯಾ ಮುಸ್ಲಿಮ್ ನಿರಾಶ್ರಿತರ ವಿಚಾರದ ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಆಯೋಗದ ಟೀಕೆ ಭಾರತ ಒಳಗಾಗಬೇಕಾಯಿತು. ಸರ್ಕಾರದ ಈ ನಡೆಯು ಭಾರತೀಯ ಸಂಸ್ಕೃತಿಗೆ ಸಂಪೂರ್ಣ ವಿರುದ್ಧವಾಗಿದ್ದು. ನೆರೆಯ ದೇಶಗಳೊಂದಿಗೆ ಉತ್ತಮ ಸಂಬಂಧಗಳನ್ನು ಏರ್ಪಡಿಸಲು ಈ ಕ್ರಮಗಳು ಋಣಾತ್ಮಾಕ ಪರಿಣಾಮಗಳನ್ನು ಬೀರುತ್ತದೆ. ಭಾರತವು ಎಂದು ಈ ರೀತಿಯ ಪರಿಸ್ಥಿತಿಯನ್ನು ಎದುರಿಸಲಿಲ್ಲ ಎಂದರು.

    ಜಪಾನ್ ಪ್ರಧಾನಿ ಶಿಂಜೋ ಅಬೆ ಅವರು ತಮ್ಮ ಎರಡು ದಿನಗಳ ಪ್ರವಾಸಕ್ಕಾಗಿ ಭಾರತಕ್ಕೆ ಆಗಮಿಸಿದ್ದು, ಭಾರತ-ಜಪಾನ್ ಸಹಕಾರದ ಮೊದಲ ಬುಲೆಟ್ ಟ್ರೈನ್ ಯೋಜನೆಗೆ ಅಹಮದಾಬಾದ್ ನಲ್ಲಿ ಶಂಕುಸ್ಥಾಪನೆ ಮಾಡಿದರು.