Tag: Manjula Purushottam

  • ಸೌಂದರ್ಯ ಜಗದೀಶ್ ಕುಟುಂಬದಿಂದ ಹಲ್ಲೆ ಪ್ರಕರಣ – ಇಬ್ಬರ ಹೆಸರು ಕೈಬಿಡುವಂತೆ ದೂರುದಾರೆ ಮನವಿ

    ಸೌಂದರ್ಯ ಜಗದೀಶ್ ಕುಟುಂಬದಿಂದ ಹಲ್ಲೆ ಪ್ರಕರಣ – ಇಬ್ಬರ ಹೆಸರು ಕೈಬಿಡುವಂತೆ ದೂರುದಾರೆ ಮನವಿ

    ಬೆಂಗಳೂರು: ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ, ಪತ್ನಿ, ಬೌನ್ಸರ್‍ ಗಳ ಗೂಂಡಾಗಿರಿ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದೆ. ರಾತ್ರೋ ರಾತ್ರಿ ಇಬ್ಬರ ಹೆಸರನ್ನು ಕೈ ಬಿಡಿ ಎಂದು ದೂರುದಾರೆ ಮನವಿ ಮಾಡಿದ್ದಾರೆ.

    ರಾತ್ರೋ ರಾತ್ರಿ ಮುಚ್ಚಿದ ಲಕೋಟೆಯಲ್ಲಿ ಮನವಿಯೊಂದಿಗೆ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಗೆ ಬಂದ ದೂರುದಾರೆ ಅನುರಾಧೆ, ಎಫ್ ಐಆರ್ ನಲ್ಲಿ ಎರಡು ಹೆಸರು ಮಿಸ್ ಆಗಿ ಸೇರಿದೆ ಅದನ್ನ ಬಿಟ್ಟು ಬಿಡಿ ಎಂದು ಹೇಳಿದ್ದಾರೆ. ಆದರೆ ಪೊಲೀಸರು ಮಾತ್ರ, ಈಗಾಗಲೇ ಪ್ರಕರಣ ಸಂಬಂಧ ಎಫ್‍ಐಆರ್ ಆಗಿದೆ, ಕೋರ್ಟಿಗೂ ಕಳುಹಿಸಿ ಆಗಿದೆ. ಎಫ್‍ಐಆರ್ ನಿಂದ ಹೆಸರು ಕೈಬಿಡಲು ಆಗಲ್ಲ ಎಂದು ದೂರುದಾರೆಗೆ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಡಿಕೆ ಶಿವಕುಮಾರ್ ಆಪ್ತನ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ

    ಇತ್ತ ಕೇಸ್ ದಾಖಲಾಗಿ 6 ದಿನವಾದರೂ ಆರೋಪಿಗಳು ಇನ್ನೂ ಪೊಲೀಸರಿಗೆ ಸಿಕ್ಕಿಲ್ಲ. ಸ್ಟಾರ್ ನಟ, ಪ್ರಭಾವಿ ನಿರ್ಮಾಪಕ ಸಂಧಾನ ಹಿನ್ನೆಲೆಯಲ್ಲಿ ಅನುರಾಧೆ ಅವರು ವಾಪಸ್‍ಗೆ ನಿರ್ಧಾರ ಮಾಡಿದ್ದಾರೆ ಎನ್ನಲಾಗುತ್ತಿದೆ. ಮಂಜುಳ ಪುರುಷೋತ್ತಮ ದೂರುದಾರೆ ಅನುರಾಧೆ ಅವರ ಮಾಲಕಿ. ಇದನ್ನೂ ಓದಿ:ಟಿ-20 ವಿಶ್ವಕಪ್‍ನಲ್ಲಿ ಪಾಕ್ ಗೆಲುವು ಆಚರಿಸೋರು ದೇಶದ್ರೋಹ ಆರೋಪ ಎದುರಿಸ್ಬೇಕಾಗಿರುತ್ತೆ: ಯೋಗಿ ಆದಿತ್ಯನಾಥ್

    ಒಟ್ಟಿನಲ್ಲಿ ಕೊನೆಗೂ ದೊಡ್ಡ ನಿರ್ಮಾಪಕ ಮತ್ತು ಸ್ಟಾರ್ ನಟನ ಮಾತಿಗೆ ಮಂಜುಳಾ ಪುರುಷೋತ್ತಮ್ ಮಣಿದ್ರಾ ಎಂಬ ಪ್ರಶ್ನೆ ಎದ್ದಿದ್ದು, ರಹಸ್ಯ ಸ್ಥಳದಲ್ಲಿ ಸ್ಟಾರ್ ನಿರ್ಮಾಪಕ ಮತ್ತು ನಟನಿಂದ ರಾಜೀ ಸಂಧಾನ ನಡೆದಿದೆ ಎನ್ನಲಾಗಿದೆ.

  • ಠಾಣೆ ಮೆಟ್ಟಿಲೇರಿದ ಕಸ ಫೈಟ್ – ಪ್ರೊಡ್ಯೂಸರ್ ಪುತ್ರ, ಪತ್ನಿ ವಿರುದ್ಧ FIR

    ಠಾಣೆ ಮೆಟ್ಟಿಲೇರಿದ ಕಸ ಫೈಟ್ – ಪ್ರೊಡ್ಯೂಸರ್ ಪುತ್ರ, ಪತ್ನಿ ವಿರುದ್ಧ FIR

    ಬೆಂಗಳೂರು: ಕಸ ಹಾಕುವ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದ್ದು, ಸ್ಯಾಂಡಲ್‍ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ಪತ್ನಿ ರೇಖಾ ಜಗದೀಶ್ ಹಾಗೂ ಪುತ್ರ ಸ್ನೇಹಿತ್ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.

    ಸೌಂದರ್ಯ ಜಗದೀಶ್ ಮತ್ತು ಮಾಜಿ ಮೇಯರ್ ಪುತ್ರಿ ಮಂಜುಳಾ ಪುರುಷೋತ್ತಮ ನಡುವೆ ಗಲಾಟೆ ನಡೆದಿದ್ದು, ಮಂಜುಳಾ ಪುರುಷೋತ್ತಮ್ ಅವರ ಮನೆ ಕೆಲಸದ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಸೌಂದರ್ಯ ಜಗದೀಶ್ ಕುಟುಂಬಸ್ಥರು, ಬೌನ್ಸರ್ ಸೇರಿ ಹಲ್ಲೆ ಮಾಡಿರುವುದಾಗಿ ಮಂಜುಳಾ ಪುರುಷೋತ್ತಮ್ ತಿಳಿಸಿದ್ದಾರೆ. ಇಷ್ಟೇ ಅಲ್ಲದೇ ಸೌಂದರ್ಯ ಜಗದೀಶ್ ಮತ್ತು ಮಂಜುಳಾ ಪುರುಷೋತ್ತಮ್ ನಡುವೆ ಈ ಹಿಂದೆಯೂ ಹಲವು ಬಾರಿ ಜಗಳ ನಡೆದಿತ್ತು ಎನ್ನಲಾಗಿದ್ದು, ಸದ್ಯ ಕಸ ಗಲಾಟೆ ಸಂಬಂಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ನಾಳೆಯಿಂದ 1 ರಿಂದ 5ನೇ ತರಗತಿ ಮಕ್ಕಳಿಗೆ ಸ್ಕೂಲ್ ಓಪನ್ – ಶಾಲೆಗಳಲ್ಲಿ ಸಕಲ ಸಿದ್ಧತೆ

    ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ರೇಖಾ ಜಗದೀಶ್, ಇದು ಉದ್ದೇಶಪೂರ್ವಕವಾಗಿ ಮಾಡಿರುವ ಗಲಾಟೆ ಎಂದಿದ್ದಾರೆ. ನಾವು ಬೆಳೆಯುತ್ತಿರುವುದನ್ನು ಸಹಿಸಿಕೊಳ್ಳಲಾಗದೇ ಈ ರೀತಿ ಮಾಡಿದ್ದಾರೆ. ನನ್ನ ಮಕ್ಕಳು ದೇವರಿದ್ದಂತೆ ಎಂದು ಸಮರ್ಥಿಸಿಕೊಂಡಿದ್ದಾರೆ. ಸೋಮವಾರ ಕೂತು ಮಾತಾಡೋಣ ಎಂದಿದ್ದೆ. ಆದರೆ ಬೇಕು ಅಂತಲೇ ಹೀಗೆಲ್ಲ ಮಾಡಿದ್ದಾರೆ ಎಂದು ಮಂಜುಳಾ ಪುರುಷೋತ್ತಮ್ ವಿರುದ್ಧ ಆರೋಪಿಸಿದ್ದಾರೆ. ಇದನ್ನೂ ಓದಿ: 14 ವರ್ಷದ ಬಳಿಕ ಬೆಂಕಿಪೊಟ್ಟಣದ ಬೆಲೆ ಏರಿಕೆ

    ಸೌಂದರ್ಯ ಜಗದೀಶ್ ಸ್ಯಾಂಡಲ್‍ವುಡ್‍ನ ಖ್ಯಾತ ನಿರ್ಮಾಪಕರಾಗಿದ್ದು, ಇವರ ಪುತ್ರ ಸ್ನೇಹಿತ್ ಅಭಿನಯಿಸಿದ್ದ ಅಪ್ಪು, ಪಪ್ಪು ಹಾಗೂ ಸ್ನೇಹಿತರು ಸಿನಿಮಾ ಸಖತ್ ಫೇಮಸ್ ಆಗಿತ್ತು.