Tag: Manobala

  • ಖ್ಯಾತ ನಟ, ನಿರ್ದೇಶಕ ಮನೋಬಾಲಾ ನಿಧನ

    ಖ್ಯಾತ ನಟ, ನಿರ್ದೇಶಕ ಮನೋಬಾಲಾ ನಿಧನ

    ಮಿಳಿನ (Tamil) ಖ್ಯಾತ ನಿರ್ದೇಶಕ (Director) ಹಾಗೂ ನಟ ಮನೋಬಾಲಾ (Manobala) ಇಂದು ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಚೆನ್ನೈನ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೆಲ ದಿನಗಳಿಂದ ಅವರು ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು.

    ಭಾರತಿರಾಜ ಅವರ ‘ಪುತಿಯ ವಾರ್ಪುಗಳ್’ ಚಿತ್ರದ ಮೂಲಕ ನಟರಾಗಿ ಸಿನಿಮಾ ರಂಗಕ್ಕೆ ಪದಾರ್ಪಣೆ ಮಾಡಿದ್ದ ಮನೋಬಾಲಾ, ಆನಂತರ ಭಾರತಿಪುರ ನಿರ್ದೇಶನದ ಚಿತ್ರಗಳಿಗೆ ಸಹಾಯ ನಿರ್ದೇಶಕರೂ ಆಗಿದ್ದರು. ಈವರೆಗೂ ನಾಲ್ಕು ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾದಲ್ಲಿ ಹಾಸ್ಯ ಕಲಾವಿದರಾಗಿ ಗುರುತಿಸಿಕೊಂಡಿದ್ದರು. ಇದನ್ನೂ ಓದಿ:ಮಾಲ್ಡೀವ್ಸ್‌ನಲ್ಲಿ ಮಲಯಾಳಿ ಸುಂದರಿ ಪ್ರಿಯಾ

    ಸಾಹಸ ಸಿಂಹ ವಿಷ್ಣುವರ್ಧನ್ ಅವರ ಡಿಸೆಂಬರ್ 31 ಸಿನಿಮಾಗೆ ಮನೋಬಾಲಾ ನಿರ್ದೇಶನ ಮಾಡಿದ್ದಾರೆ. ಹಾಗಾಗಿ ಕನ್ನಡದ ನಂಟು ಕೂಡ ಅವರಿಗಿತ್ತು. ಪತ್ನಿ ಉಷಾ ಮತ್ತು ಪುತ್ರ ಹರೀಶ್ ಅವರನ್ನು ಅಗಲಿರುವ ಮನೋಬಾಲಾಗೆ ದಕ್ಷಿಣದ ಸಿನಿಮಾ ರಂಗ ಕಂಬನಿ ಮಿಡಿದಿದೆ. ಅನೇಕ ಕಲಾವಿದರು ಹಾಗೂ ತಂತ್ರಜ್ಞರು ಅಂತಿಮ ದರ್ಶನ ಪಡೆದಿದ್ದಾರೆ.