Tag: Manohar Naidu

  • ಉಪೇಂದ್ರ ನಿರ್ದೇಶಿಸಿ, ನಟಿಸಲಿರುವ ಹೊಸ ಸಿನಿಮಾದ ಶೂಟಿಂಗ್ ಶುರು

    ಉಪೇಂದ್ರ ನಿರ್ದೇಶಿಸಿ, ನಟಿಸಲಿರುವ ಹೊಸ ಸಿನಿಮಾದ ಶೂಟಿಂಗ್ ಶುರು

    ನ್ನಡ ಸಿನಿಮಾ ರಂಗಕ್ಕೆ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ನಿರ್ದೇಶಕ ಉಪೇಂದ್ರ ‘ಉಪ್ಪಿ ೨’ ಚಿತ್ರದ ನಂತರ ಯಾವುದೇ ಚಿತ್ರ ನಿರ್ದೇಶನ ಮಾಡಿರಲಿಲ್ಲ. ಉಪೇಂದ್ರ ನಿರ್ದೇಶನದ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಆ ಶುಭಘಳಿಗೆ ಈಗ ಬಂದಿದೆ.‌ ಉಪೇಂದ್ರ ನಿರ್ದೇಶಿಸಿ, ನಾಯಕರಾಗೂ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಬಂಡೆಮಹಾಕಾಳಿ ದೇವಸ್ಥಾನದಲ್ಲಿ ನಡೆಯಿತು. ಚಿತ್ರದ ಮೊದಲ ಸನ್ನಿವೇಶಕ್ಕೆ  ಸುದೀಪ್ ಆರಂಭ ಫಲಕ ತೋರಿದರೆ,  ಶಿವರಾಜಕುಮಾರ್ ಕ್ಯಾಮೆರಾ ಚಾಲನೆ ನೀಡಿದರು. ಈ ಸಮಾರಂಭಕ್ಕೆ ಗೀತಾ ಶಿವರಾಜಕುಮಾರ್, ಡಾಲಿ ಧನಂಜಯ, ವಸಿಷ್ಠ ಸಿಂಹ ಮುಖ್ಯ ಅತಿಥಿಗಳಾಗಿ ಆಗಮಿಸಿ ಶುಭ ಕೋರಿದರು.

    ಲಹರಿ ಫಿಲಂಸ್ ಹಾಗೂ VENUS entertainers ಲಾಂಛನದಲ್ಲಿ ಜಿ.ಮನೋಹರನ್ ಹಾಗೂ ಕೆ.ಪಿ.ಶ್ರೀಕಾಂತ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶನದೊಂದಿಗೆ ಉಪೇಂದ್ರ ನಾಯಕರಾಗೂ ನಟಿಸುತ್ತಿದ್ದಾರೆ. ಮೂರುನಾಮದ ಚಿಹ್ನೆಯೊಂದು ಈ ಚಿತ್ರದ ಶೀರ್ಷಿಕೆಯಾಗಿದೆ. ಇದನ್ನು ಕೆಲವರು ಮೂರು ನಾಮ ಅಂದುಕೊಂಡರೆ, ಮತ್ತೆ ಕೆಲವರು ಯು ಮತ್ತು ಐ ಅಂದುಕೊಳ್ಳುತ್ತಾರೆ. ನಾನು ಮತ್ತು ನೀನು ಎಂಬ ಅರ್ಥ ಬರುವ ಹಾಗಿದೆ ಆ ಚಿಹ್ನೆ. ಇದನ್ನೂ ಓದಿ : Exclusive : ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಮೊದಲ ವರ್ಷದ ಪುಣ್ಯಸ್ಮರಣೆ : ಪುತ್ಥಳಿ ಅನಾವರಣ

    ಒಟ್ಟಿನಲ್ಲಿ ತಮ್ಮ ಹಿಂದಿನ ಚಿತ್ರಗಳಲ್ಲಿ ವಿಭಿನ್ನ ಶೀರ್ಷೆಕೆಯಿಟ್ಟು ಎಲ್ಲರ ತಲೆಗೆ ಕೆಲಸ ಕೊಡುತ್ತಿದ್ದ ಉಪೇಂದ್ರ ಅವರು ಈ ಚಿತ್ರದಲ್ಲೂ ಹಾಗೆ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಉಪೇಂದ್ರ, “ಇಂದಿನಿಂದ ಚಿತ್ರೀಕರಣ ಆರಂಭಿಸಿದ್ದೇವೆ. ಲಹರಿ ಸಂಸ್ಥೆಯವರು ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಾಣ ಮಾಡುತ್ತಿದ್ದಾರೆ. ವಿಭಿನ್ನ ಶೀರ್ಷಿಕೆ ಯಿಟ್ಟಿದ್ದೀನಿ. ನಿಮಗೆಲ್ಲಾ ಏನು ಅನಿಸುತ್ತದಯೋ, ಅದೇ ಶೀರ್ಷಿಕೆ ಆಗಿರುತ್ತದೆ. ನಾನು ಕಥೆ ಸಿದ್ದಮಾಡಿಕೊಂಡಿರುತ್ತೇನೆ. ಮತ್ತೆ ಬೇರೆ ಅಲೋಚನೆ ಬಂದರೆ, ಬದಲಿಸುತ್ತೀನಿ. ಚಿತ್ರದ ಶೀರ್ಷಿಕೆ ಹಾಗೂ ಕುದುರೆ ಪೋಸ್ಟರ್ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿದೆ. ಅದರ ಬಗ್ಗೆ ಒಬ್ಬೊಬ್ಬರ ಮನಸ್ಸಿನಲ್ಲಿ ಒಂದೊಂದು ಹೊಳೆಯುತ್ತಿದೆ. ನಿಮ್ಮಗೆಲ್ಲಾ ಏನು ಅನಿಸುವುದೊ, ಅದು ಚಿತ್ರದಲ್ಲಿ ಇರುತ್ತದೆ. ನಾನು ನನ್ನ ನಿರ್ದೇಶಕರ ತಂಡ ಹಾಗೂ ಇನ್ನೂ ಕೆಲವರ ಬಳಿ ಕಥೆಯ ಬಗ್ಗೆ ಹೇಳಿರುತ್ತೇನೆ. ಅವರಿಗೆ ಅದನ್ನು ಹೇಳಲು ಬರುವುದಿಲ್ಲ ಎಂದ ಉಪೇಂದ್ರ ಅವರು ಒಟ್ಟಿನಲ್ಲಿ ಉತ್ತಮ ಚಿತ್ರವೊಂದನ್ನು ನಿಮ್ಮ ಮುಂದೆ ಇಡುತ್ತೇನೆ” ಎಂದಿದ್ದಾರೆ.

    ಕಲಾವಿದರು ಹಾಗೂ ತಾಂತ್ರಿಕವರ್ಗದ ಕುರಿತು ಮಾಹಿತಿಯನ್ನು ಮುಂದಿನ ದಿನಗಳಲ್ಲಿ ನೀಡುವುದಾಗಿ ಉಪೇಂದ್ರ ಹೇಳಿದರು.ಉಪೇಂದ್ರ ಅವರು ನಿರ್ದೇಶನಕ್ಕೆ ಒಪ್ಪಿರುವುದು ಖುಷಿಯಾಗಿದೆ. ಶಿವಣ್ಣ ಹಾಗೂ ಗೀತಕ್ಕ ಅವರ ಆಶೀರ್ವಾದದಿಂದ ಮೂರನೇ ಚಿತ್ರ ನಿರ್ಮಾಣ ಮಾಡುತ್ತಿದ್ದೇವೆ. ಖ್ಯಾತ ಲಹರಿ ಫಿಲಂಸ್ ನವರು ನಾವು ಜಂಟಿಯಾಗಿ ಸಿನಿಮಾ ನಿರ್ಮಾಣ ಮಾಡುತ್ತಿದ್ದೇವೆ. ನಿಮ್ಮ ಹಾರೈಕೆ ಇರಲಿ ಎಂದರು ಕೆ.ಪಿ.ಶ್ರೀಕಾಂತ್. ಇದನ್ನೂ ಓದಿ : ಹಾಸ್ಯನಟ ನರಸಿಂಹರಾಜು ಹಿರಿಯ ಪುತ್ರಿ, ನಿರ್ದೇಶಕ ಅರವಿಂದ್ ತಾಯಿ ಧರ್ಮವತಿ ನಿಧನ

    ನಾನು ಹಾಗೂ ಉಪೇಂದ್ರ ಅವರು ಸಹಪಾಠಿಗಳು. ತುಂಬಾ ವರ್ಷಗಳಿಂದ ಅವರು ಪರಿಚಯ. ಅವರೊಂದಿಗೆ ಸಿನಿಮಾ ಮಾಡುತ್ತಿರುವುದು ಸಂತೋಷವೆಂದರು ಲಹರಿ ವೇಲು. ಲಹರಿ ಸಂಸ್ಥೆಯ ಮನೋಹರ್ ನಾಯ್ಡು, ನವೀನ್, ಕಾಕ್ರೋಜ್ ಸುಧಿ, ನಟಿ ತ್ರಿವೇಣಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

  • ಉಪೇಂದ್ರ ಹೊಸ ಸಿನಿಮಾ ಮುಹೂರ್ತ : ಸುದೀಪ್, ಶಿವಣ್ಣ, ಧನಂಜಯ್ ಮತ್ತು ವಸಿಷ್ಠ ಸಿಂಹ ಹೇಳಿದ್ದೇನು?

    ಉಪೇಂದ್ರ ಹೊಸ ಸಿನಿಮಾ ಮುಹೂರ್ತ : ಸುದೀಪ್, ಶಿವಣ್ಣ, ಧನಂಜಯ್ ಮತ್ತು ವಸಿಷ್ಠ ಸಿಂಹ ಹೇಳಿದ್ದೇನು?

    ಪೇಂದ್ರ ನಟಿಸಿ, ನಿರ್ದೇಶನದ ಮಾಡುತ್ತಿರುವ ಹೊಸ ಸಿನಿಮಾ ಮುಹೂರ್ತ ಬೆಂಗಳೂರಿನ ಬಂಡೆಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಈ ಸಮಾರಂಭಕ್ಕೆ ಅತಿಥಿಗಳಾಗಿ ಹಿರಿಯ ನಟರಾದ ಶಿವರಾಜ್ ಕುಮಾರ್, ಕಿಚ್ಚ ಸುದೀಪ್, ಡಾಲಿ ಧನಂಜಯ್ ಮತ್ತು ವಸಿಷ್ಠ ಸಿಂಹ ಆಗಮಿಸಿದ್ದರು. ಸಿನಿಮಾ ಮತ್ತು ಉಪೇಂದ್ರ ಕುರಿತಾಗಿ ಅತಿಥಿಗಳು ಮನದುಂಬಿ ಹಾರೈಸಿದರು. ಇದನ್ನೂ ಓದಿ : ನಿತ್ಯಾನಂದ ಕುರಿತು ಸಾಕ್ಷ್ಯಚಿತ್ರ : ದೇವಮಾನವನ ನಿಜಬಣ್ಣ ಬಟಾಬಯಲು

    ಶಿವರಾಜ್ ಕುಮಾರ್ ಮಾತನಾಡಿ, “ನಾನು ಉಪ್ಪಿಯನ್ನು ಸಾಕಷ್ಟು ದಿನದಿಂದ ನೋಡಿದ್ದೀನಿ. ಉಪೇಂದ್ರ ಮತ್ತು ನಾನು ಒಂದು ರೀತಿಯಲ್ಲಿ ಬಾಯ್ ಫ್ರೆಂಡ್ ತರಹ. ಉಪೇಂದ್ರ ನಿರ್ದೇಶನದ ನಾನು ನಟಿಸಿರುವ ಓಂ ಸಿನಿಮಾ ನನ್ನ ವೃತ್ತಿ ಬದುಕಿಗೆ ಟರ್ನಿಂಗ್ ಪಾಯಿಂಟ್. ಏಳು ವರ್ಷದ ನಂತರ ಅವರು ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಹಾಗಾಗಿ ಸಿನಿಮಾ ವಿಭಿನ್ನವಾಗಿಯೇ ಇರಲಿದೆ’ ಎಂದರು. ಇದನ್ನೂ ಓದಿ : ಉಪೇಂದ್ರ ನಿರ್ದೇಶಿಸಿ, ನಟಿಸಲಿರುವ ಸಿನಿಮಾಗೆ ಮುಹೂರ್ತ : ಹಣೆ ಮೇಲೆ ಟೈಟಲ್ ಹಾಕಿಕೊಂಡು ಬಂದ ಚಿತ್ರತಂಡ

    “ನಾನು ಇವತ್ತು ವೇದಿಕೆಯ ಮೇಲೆ  ಉಪ್ಪಿ ಅಭಿಮಾನಿಯಾಗಿ ಕೂತಿದ್ದೇನೆ. ಉಪೇಂದ್ರ ಅವರು ಸಿನಿಮಾ ನಿರ್ದೇಶನ ಮಾಡುತ್ತಿರುವುದು ಖುಷಿಯಾಗಿದೆ. ಅದರಲ್ಲೂ ಕುದುರೆ ಆಯ್ಕೆ ಮಾಡಿಕೊಂಡಿದ್ದಾರೆ. ಇನ್ಮೆಲೆ ಕುದುರೆ ಓಟು ಶುರು. ಆದಷ್ಟು ಬೇಗ ಸಿನಿಮಾ ಮುಗಿಸಿ, ನಾನಂತೂ ನೋಡಲು ಕಾಯುತ್ತಿದ್ದೇನೆ’ ಎಂದು ಕಿಚ್ಚ ಸುದೀಪ್. ಇದನ್ನೂ ಓದಿ : ಕನ್ನಡದ ಬಹುತೇಕ ದಿಗ್ಗಜರ ಜೊತೆ ನಟಿಸಿರುವ ನಟ ಉದಯ್ ಹುತ್ತಿನಗದ್ದೆ ನಿಧನ

    ‘ಉಪೇಂದ್ರ ಅವರು ಕಾಮಾನ್ ಮ್ಯಾನ್ ಪರವಾಗಿ ಸಿನಿಮಾ ಮಾಡುತ್ತಲೇ ಅವರನ್ನು ಎಚ್ಚರಿಸುತ್ತಾರೆ. ಈ ಪೋಸ್ಟರ್ ನಲ್ಲಿ ಎವಲ್ಯೂಷನ್ ಥಿಯೇರಿ ಇದೆ. ಅಲ್ಲಿಂದಲೇ ಕತೆ ಶುರುವಾಗುತ್ತೆ ಅನಿಸತ್ತೆ. ಒಳ್ಳೆಯ ಸಿನಿಮಾ ಬರಲಿದೆ’ ಎಂದು ಡಾಲಿ ಧನಂಜಯ್. ಇದನ್ನೂ ಓದಿ : ಕ್ಯಾಪ್ ತೊಟ್ಟು ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಮಿಂಚಿದ ಪ್ರಣಿತಾ

    ಉಪೇಂದ್ರ ಅವರು ಸಿನಿಮಾಗಳನ್ನು ನೋಡುತ್ತಲೇ ಬಂದವನು ನಾನು. ಬ್ಲಾಕ್ ಟಿಕೆಟ್ ತಗೊಂಡು ಸಿನಿಮಾ ನೋಡುತ್ತಿದ್ದೆ ಎಂದು ಉಪ್ಪಿ ಮೇಲಿನ ಅಭಿಮಾನವನ್ನು ಹೇಳಿಕೊಂಡರು ವಸಿಷ್ಠ ಸಿಂಹ. ಈ ಕಾರ್ಯಕ್ರಮದಲ್ಲಿ ನಿರ್ಮಾಪಕರಾದ ಮನೋಹರ್ ನಾಯ್ಡು, ಲಹರಿ ವೇಲು, ಕೆ.ಪಿ. ಶ್ರೀಕಾಂತ್ ಸೇರಿದಂತೆ ಹಲವರು ಹಾಜರಿದ್ದರು.

  • ಉಪೇಂದ್ರ ನಿರ್ದೇಶಿಸಿ, ನಟಿಸಲಿರುವ ಸಿನಿಮಾಗೆ ಮುಹೂರ್ತ : ಹಣೆ ಮೇಲೆ ಟೈಟಲ್ ಹಾಕಿಕೊಂಡು ಬಂದ ಚಿತ್ರತಂಡ

    ಉಪೇಂದ್ರ ನಿರ್ದೇಶಿಸಿ, ನಟಿಸಲಿರುವ ಸಿನಿಮಾಗೆ ಮುಹೂರ್ತ : ಹಣೆ ಮೇಲೆ ಟೈಟಲ್ ಹಾಕಿಕೊಂಡು ಬಂದ ಚಿತ್ರತಂಡ

    ಇಂದು ಬೆಳಗ್ಗೆ ಉಪೇಂದ್ರ ನಟಿಸಿ, ನಿರ್ದೇಶನದ ಮಾಡುತ್ತಿರುವ ಹೊಸ ಸಿನಿಮಾ ಮುಹೂರ್ತ ಬೆಂಗಳೂರಿನ ಬಂಡೆಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಈ ಸಮಾರಂಭಕ್ಕೆ ನಟ ಉಪೇಂದ್ರ, ನಿರ್ಮಾಪಕರಾದ ಜಿ.ಮನೋಹರನ್ ಮತ್ತು ಕೆ.ಪಿ. ಶ್ರೀಕಾಂತ್, ಲಹರಿ ವೇಲು ಮತ್ತು ಸಹ ನಿರ್ಮಾಪಕರಾದ ನವೀನ್ ಮನೋಹರನ್ ಸೇರಿದಂತೆ ಸಿನಿಮಾದ ತಂಡದ ಬಹುತೇಕರು ತಮ್ಮ ಸಿನಿಮಾದ ಟೈಟಲ್ ಅನ್ನು ಹಣೆ ಮೇಲೆ ಹಾಕಿಕೊಂಡು ಆಗಮಿಸಿದ್ದರು.

    ಬೆಳಗ್ಗೆ ಎಂಟು ಗಂಟೆಗೆ ಸ್ಪೆಷಲ್ ಗೆಟಪ್ ನಲ್ಲಿ ಉಪೇಂದ್ರ ಮತ್ತು ಟೀಮ್ ಎಂಟ್ರಿ ಕೊಟ್ಟು ಕುತೂಹಲಕ್ಕೆ ಕಾರಣವಾದರು. ಇದೇ ಸಂದರ್ಭದಲ್ಲಿ ದೇವಸ್ಥಾನದ ಮುಂದೆ ಉಪ್ಪಿ ಅಭಿಮಾನಿಗಳು ಸೇರಿಕೊಂಡು, ಅವರು ಕೂಡ ತಮ್ಮ ನೆಚ್ಚಿನ ನಟನ ಸಿನಿಮಾ ಟೈಟಲ್ ಅನ್ನು ಹಣೆ ಮೇಲೆ ಹಾಕಿಕೊಂಡು ಉಪೇಂದ್ರ ಅವರಿಗೆ ಜೈಕಾರ ಹಾಕುತ್ತಿದ್ದರು. ಇದನ್ನೂ ಓದಿ :  ಪಠ್ಯಪುಸ್ತಕದಲ್ಲಿ ನಮ್ಮ ರಾಜರ ಬಗ್ಗೆ 2 ಸಾಲು, ಮೊಘಲರ ಬಗ್ಗೆ ಜಾಸ್ತಿ ಉಲ್ಲೇಖ: ಅಕ್ಷಯ್ ಕುಮಾರ್

    ಈ ಚಿತ್ರಕ್ಕೆ ವಿಚಿತ್ರ ರೀತಿಯಲ್ಲಿ ಟೈಟಲ್ ಇಟ್ಟಿದ್ದಾರೆ ಉಪೇಂದ್ರ. ಅದನ್ನು ಧಾರ್ಮಿಕ ಚಿಹ್ನೆ (ನಾಮ) ಎಂದಾದರೂ, ಕರೆಯಬಹುದು ‘ಯು’ ಮತ್ತು ‘ಐ’ ಎಂದಾದರು ಅಂದುಕೊಳ್ಳಬಹುದು. ನೀನು ಮತ್ತು ನಾನು ಅಂತಾದರೂ ಊಹಿಸಿಕೊಳ್ಳಬಹುದು. ಈ ಚಿತ್ರಕ್ಕೆ ಏನೆಂದು ಕರೆಯಬಹುದು ಎನ್ನುವುದಕ್ಕೆ ಪ್ರೇಕ್ಷಕರಿಗೆ ಬಿಟ್ಟು ತಮ್ಮ ಪಾಡಿಗೆ ತಾವು ಇಂದು ಚಿತ್ರಕ್ಕೆ ಮುಹೂರ್ತ ಮಾಡಿದ್ದಾರೆ ನಿರ್ದೇಶಕರು.  ಇದನ್ನೂ ಓದಿ : ಪತ್ನಿ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಗೆದ್ದ ಹಾಲಿವುಡ್ ಸ್ಟಾರ್ ನಟ ಜಾನಿ ಡೆಪ್ : ನೂರಾರು ಕೋಟಿ ಪರಿಹಾರ

    ಈ ಸಮಾರಂಭಕ್ಕೆ ಹಿರಿಯ ನಟ ಶಿವರಾಜ್ ಕುಮಾರ್, ಕಿಚ್ಚ ಸುದೀಪ್, ಡಾಲಿ ಧನಂಜಯ್ ಮತ್ತು ವಸಿಷ್ಠ ಸಿಂಹ ಅತಿಥಿಗಳಾಗಿ ಆಗಮಿಸಿದ್ದರು. ನೆಚ್ಚಿನ ನಟ ಉಪೇಂದ್ರ ಅವರ ಬಗ್ಗೆ ಅತಿಥಿಗಳೆಲ್ಲ ಮಾತನಾಡಿದರು.

  • ಲಹರಿಗೆ 48 ವರುಷ : ಇಬ್ಬರ ಸಾಧನೆಗೆ ಮುಖ್ಯಮಂತ್ರಿಗಳು ಸೇರಿದಂತೆ ಅನೇಕ ಗಣ್ಯರಿಂದ ಅಭಿನಂದನೆ

    ಲಹರಿಗೆ 48 ವರುಷ : ಇಬ್ಬರ ಸಾಧನೆಗೆ ಮುಖ್ಯಮಂತ್ರಿಗಳು ಸೇರಿದಂತೆ ಅನೇಕ ಗಣ್ಯರಿಂದ ಅಭಿನಂದನೆ

    ಸಂಗೀತ ಕ್ಷೇತ್ರದಲ್ಲಿ ತನ್ನದೇ ಆದ ಹೆಸರು ಮಾಡಿರುವ ಲಹರಿ ಸಂಸ್ಥೆ ಆರಂಭವಾಗಿ ನಲವತ್ತೆಂಟು ವರ್ಷಗಳು ಕಳೆದಿದೆ. ಈಗ ಮತ್ತೊಂದು ವಿಶೇಷವೆಂದರೆ ಈ ಸಂಸ್ಥೆಯ ಮೂಲಕ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿಕೇಜ್ ನೇತೃತ್ವದಲ್ಲಿ  “ಡಿವೈನ್ ಟೈಡ್ಸ್” ಎಂಬ ಅದ್ಭುತ ಆಲ್ಬಂ ಮೂಡಿಬಂದಿದೆ. ಈ ಆಲ್ಬಂ ಗಾಗಿ ರಿಕ್ಕಿಕೇಜ್ ಪ್ರತಿಷ್ಠಿತ ಗ್ರ್ಯಾಮಿ ಅವಾರ್ಡ್ ಪಡೆದುಕೊಂಡಿದ್ದಾರೆ. ರಿಕ್ಕಿಕೇಜ್ ಅವರಿಗೆ ಗ್ರ್ಯಾಮಿ ಅವಾರ್ಡ್ ಬಂದಿರುವುದು ಇದು ಎರಡನೇ ಬಾರಿ. ಈ ಸಂತಸ ಹಂಚಿಕೊಳ್ಳಲು ಲಹರಿ ಸಂಸ್ಥೆ ಆತ್ಮೀಯ ಸಮಾರಂಭ ಏರ್ಪಡಿಸಿತ್ತು. ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವರಾದ ಸುಧಾಕರ್, ಪಬ್ಲಿಕ್ ಟಿವಿ ಮುಖ್ಯಸ್ಥರಾದ ರಂಗನಾಥ್, ಕ್ರೇಜಿಸ್ಟಾರ್ ರವಿಚಂದ್ರನ್, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಾಜೇಂದ್ರ ಸಿಂಗ್ ಬಾಬು,  ವಸಿಷ್ಠ ಸಿಂಹ, ಗುರುಕಿರಣ್, ಉದಯ್ ಕೆ ಮೆಹ್ತಾ, ಕೆ.ಪಿ. ಶ್ರೀಕಾಂತ್ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ : ಚಲಿಸುವ ಬೋಟ್ ನಲ್ಲಿ ಚೆಲುವೆ ರಾಧಿಕಾ ಕುಮಾರಸ್ವಾಮಿ

    ನಾನು ಲಹರಿ ಸಂಸ್ಥೆಯ ಮನೋಹರ್ ನಾಯ್ಡು ಹಾಗೂ ವೇಲು ಅವರನ್ನು ಮೊದಲಿನಿಂದಲೂ ಬಲ್ಲೆ. ನಮ್ಮ ಪಕ್ಕದ ಮನೆಯವರು ಅವರು. ಲಹರಿ ಸಂಸ್ಥೆ ಈ ಎತ್ತರಕ್ಕೆ ಬೆಳೆದಿರುವುದು ಖುಷಿ ತಂದಿದೆ. ಇಲ್ಲಿಗೆ ಬಂದಾಗ ಈ ಆಲ್ಬಂ ನ ಒಂದು ಹಾಡು ನೋಡಿ ತುಂಬಾ ಸಂತೋಷವಾಯಿತು. ಗ್ರ್ಯಾಮಿ ಬಗ್ಗೆ ಅಷ್ಟು ಗೊತ್ತಿರಲಿಲ್ಲ. ಅದರ ಬಗ್ಗೆ ತಿಳಿದು ಆಶ್ಚರ್ಯವಾಯಿತು. ರಿಕ್ಕಿಕೇಜ್ ಎರಡು ಸಲ ಈ ಪ್ರಶಸ್ತಿ ಪಡೆದಿರುವುದು ನಿಜಕ್ಕೂ ಅಭಿನಂದನಾರ್ಹ. ಅವರ ಸಾಧನೆ ಇಡೀ ಕನ್ನಡಿಗರು ಹೆಮ್ಮೆ ಪಡುವಂತದು. ಅವರಿಂದ ಇನ್ನಷ್ಟು ಈ ರೀತಿಯ ಸಾಧನೆಯಾಗಲಿ. ಅದು ಎಲ್ಲರಿಗೂ ಸ್ಪೂರ್ತಿಯಾಗಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು. ಇದನ್ನೂ ಓದಿ: ಗ್ರ್ಯಾಮಿ ಅವಾರ್ಡ್ ಮ್ಯೂಸಿಕ್ ಕೇಳಿದಾಗ ಬಹಳ ಖುಷಿ ಆಯ್ತು: ಸಿಎಂ ಬೊಮ್ಮಾಯಿ

    ನನಗೆ ಇದು ಕುಟುಂಬದ ಸಮಾರಂಭ ಇದ್ದ ಹಾಗೆ. ಕಳೆದವರ್ಷ ಕೊರೋನ ದಿಂದ ಅನೇಕ ಜನ ಹತ್ತಿರದವರನ್ನು ಕಳೆದುಕೊಂಡಿದ್ದೀವಿ. ಕೆಟ್ಟಸಮಯ ಹೋದ ಮೇಲೆ ಒಳ್ಳೆಯ ಸಮಯ ಬರುತ್ತದೆ ಎನ್ನುತ್ತಾರೆ. ಈಗ ಒಳ್ಳೆಯ ಸಮಯ ಬಂದಿದೆ. ಕೆ.ಜಿ.ಎಫ್ ೨  ಚಿತ್ರ ಪ್ರಚಂಡ ಜಯಭೇರಿ ಬಾರಿಸುತ್ತಿದೆ.  ರಿಕ್ಕಿಕೇಜ್ ಗೆ ಗ್ರ್ಯಾಮಿ ಬಂದಿದೆ. ಇನ್ನೂ ಲಹರಿ ಸಂಸ್ಥೆ ಜೊತೆ ನನ್ನ ಸ್ನೇಹ ಬಹಳ ವರ್ಷಗಳದು. ನನ್ನ ಪ್ರೇಮಲೋಕ ಸೇರಿದಂತೆ ಅನೇಕ ಚಿತ್ರಗಳ ಹಾಡುಗಳು ಈ ಸಂಸ್ಥೆ ಮೂಲಕ ಬಿಡುಗಡೆಯಾಗಿದೆ ಅಂದರು ಕ್ರೇಜಿಸ್ಟಾರ್ ರವಿಚಂದ್ರನ್. ಇದನ್ನೂ ಓದಿ: ಪ್ರಧಾನಿ ಭೇಟಿ ಮಾಡಿ ಸಂಭ್ರಮಿಸಿದ ಗ್ರ್ಯಾಮಿ ಅವಾರ್ಡ್ ವಿಜೇತ ರಿಕಿ ಕೇಜ್

    ನಿಜಕ್ಕೂ ಇದೊಂದು ಆತ್ಮೀಯ ಸಮಾರಂಭ. “ಮನ ಮೆಚ್ಚಿದ ಹುಡುಗಿ” ಸೇರಿದಂತೆ ನಮ್ಮ ಸಂಸ್ಥೆಯ ಅನೇಕ ಚಿತ್ರಗಳು ಲಹರಿ ಮೂಲಕ ಬಿಡುಗಡೆಯಾಗಿದೆ. ಈಗ ಅವರ ಸಂಸ್ಥೆಯ ನಿರ್ಮಾಣದ ಆಲ್ಬಂ ಸಾಂಗ್ ಗಾಗಿ  ರಿಕ್ಕಿಕೇಜ್ ಗ್ರ್ಯಾಮಿ ಅವಾರ್ಡ್ ಪಡೆದುಕೊಂಡಿದ್ದಾರೆ. ಇಬ್ಬರಿಗೂ ಶುಭಾಶಯ ಎಂದರು ಶಿವರಾಜಕುಮಾರ್. ಇದನ್ನೂ ಓದಿ: ಜಾನ್ವಿ ಕಪೂರ್ ಡ್ಯಾನ್ಸ್‌ಗೆ ಫ್ಯಾನ್ಸ್ ಫಿದಾ: ಶ್ರೀದೇವಿಗೆ ಹೋಲಿಸಿದ ಅಭಿಮಾನಿಗಳು

    ಕೇವಲ ಐನ್ನೂರು ರೂಪಾಯಿಯಿಂದ ಆರಂಭವಾದ ಈ ಸಂಸ್ಥೆ ಈ ಮಟ್ಟಕ್ಕೆ ಬರಲು ಕಾರಣರಾದ ಪ್ರತಿಯೊಬ್ಬರಿಗೂ ಧನ್ಯವಾದ. ಇದರಲ್ಲಿ ಅಣ್ಣ ಮನೋಹರ್ ನಾಯ್ಡು ಅವರ ಪರಿಶ್ರಮ ಸಾಕಷ್ಟಿದೆ. ಲಹರಿ ನಿರ್ಮಾಣದ ಆಲ್ಬಂ ಗಾಗಿ ರಿಕ್ಕಿಕೇಜ್ ಅವರಿಗೆ ಗ್ರ್ಯಾಮಿ ಪ್ರಶಸ್ತಿ ಬಂದಿರುವುದು ಸಂತೋಷ. ಅದಕ್ಕಾಗಿ ರಿಕ್ಕಿಕೇಜ್ ಅವರಿಗೆ ಧನ್ಯವಾದ ಎಂದರು ಲಹರಿ ವೇಲು. ಲಹರಿ ಜೊತೆಗಿನ ಸಂಬಂಧ ಹಾಗೂ ಈ ಆಲ್ಬಂ ಸಾಂಗ್ ಬಗ್ಗೆ ಎಳೆಎಳೆಯಾಗಿ ಬಿಡಿಸಿಟ್ಟ ರಿಕ್ಕಿಕೇಜ್ ಎಲ್ಲರಿಗೂ ಧನ್ಯವಾದ ಅರ್ಪಿಸಿದರು. ಪಬ್ಲಿಕ್‌ ಟಿ ವಿ ಮುಖ್ಯಸ್ಥ ರಂಗನಾಥ್ ಅವರು ಸೇರಿದಂತೆ ಸಮಾರಂಭಕ್ಕೆ ಆಗಮಿಸಿದ್ದ ಗಣ್ಯರು ಲಹರಿ ಸಂಸ್ಥೆ ಹಾಗೂ ರಿಕ್ಕಿಕೇಜ್ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು.