Tag: Manoj Tiwari

  • ಎಲ್ಲಾ ಮಾದರಿಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ಸಚಿವ ಮನೋಜ್ ತಿವಾರಿ

    ಎಲ್ಲಾ ಮಾದರಿಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ಸಚಿವ ಮನೋಜ್ ತಿವಾರಿ

    ನವದೆಹಲಿ: ಟೀಂ ಇಂಡಿಯಾ (Team India) ಆಟಗಾರ ಮನೋಜ್ ತಿವಾರಿ (Manoj Tiwari) ಎಲ್ಲಾ ಮಾದರಿಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದಾರೆ.

    2008 ರಲ್ಲಿ ಬ್ರಿಸ್ಬೇನ್‍ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ (Cricket) ಪದಾರ್ಪಣೆ ಮಾಡಿದ್ದರು. ಈ ವರ್ಷ ರಣಜಿ ಟೂರ್ನಿಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದ 37 ವರ್ಷದ ಮನೋಜ್ ತಿವಾರಿ ಕ್ರಿಕೆಟ್ ವೃತ್ತಿ ಬದುಕಿದೆ ಗುಡ್‍ಬೈ ಹೇಳಿದ್ದಾರೆ. ಇದನ್ನೂ ಓದಿ: `ಮಹಿ’ಯಂತೆ ಸಕ್ಸಸ್‌ಫುಲ್ ಕ್ಯಾಪ್ಟನ್ ಆಗ್ತಾರಾ `ಪಾಂಡ್ಯ’?

    ಮನೋಜ್ ತಿವಾರಿ ಕ್ರಿಕೆಟ್ ಜೊತೆಗೆ ರಾಜಕೀಯದಲ್ಲೂ ಹೊಸ ಇನಿಂಗ್ಸ್ ಆರಂಭಿಸಿದ್ದರು. ಅದರಂತೆ ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಅಲ್ಲದೇ ಪ್ರಸ್ತುತ ಪಶ್ಚಿಮ ಬಂಗಾಳದ ಯುವ ಸಬಲೀಕರಣ ಮತ್ತು ಕ್ರೀಡಾ (West Bengal Sports Minsiter) ಸಚಿವರಾಗಿದ್ದಾರೆ.

    2015ರಲ್ಲಿ ಕೊನೆಯ ಬಾರಿಗೆ ಟೀಂ ಇಂಡಿಯಾ ಪರ ಕಣಕ್ಕಿಳಿದಿದ್ದ ತಿವಾರಿ 12 ಏಕದಿನ ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದರು. ಇದರಲ್ಲಿ ಒಂದು ಅರ್ಧ ಶತಕ, ಒಂದು ಶತಕ ಸೇರಿದಂತೆ ಒಟ್ಟು 287 ರನ್ ಕಲೆಹಾಕಿದ್ದಾರೆ.

    ತಮ್ಮ ಕ್ರಿಕೆಟ್ ವೃತ್ತಿ ಜೀವನದುದ್ದಕ್ಕೂ ಬೆಂಬಲ ನೀಡಿದ್ದ ಪತ್ನಿ ಮತ್ತು ಮಾಜಿ ಸಹ ಆಟಗಾರರಿಗೆ ಧನ್ಯವಾದ ಅರ್ಪಿಸಿದ್ದಾರೆ. ಅಲ್ಲದೇ ಅವರ ಕೋಚ್ ಮನಬೇಂದ್ರ ಘೋಷ್ ಅವರಿಗೆ ಗೌರವ ಸಮರ್ಪಿಸಿದ್ದಾರೆ.

    ಐಪಿಎಲ್‍ನಲ್ಲಿ ಮನೋಜ್ ತಿವಾರಿ ಕೊಲ್ಕತ್ತಾ ನೈಟ್ ರೈಡರ್ಸ್, ರೈಸಿಂಗ್ ಪುಣೆ ಸೂಪರ್‍ಜೈಂಟ್ಸ್ ಪರ ಕಣಕ್ಕಿಳಿದಿದ್ದರು. ಈ ವೇಳೆ ಒಟ್ಟು 98 ಪಂದ್ಯಗಳನ್ನಾಡಿರುವ ಅವರು ಒಟ್ಟು 1,686 ರನ್ ಬಾರಿಸಿದ್ದಾರೆ. ಇದರಲ್ಲಿ 7 ಅರ್ಧಶತಕಗಳೂ ಸೇರಿವೆ. ಇದನ್ನೂ ಓದಿ: ಐಷಾರಾಮಿ ಬೇಡ, ಕನಿಷ್ಠ ಸೌಲಭ್ಯವನ್ನು ವೆಸ್ಟ್ ಇಂಡೀಸ್ ಮಾಡಿಲ್ಲ – ಹಾರ್ದಿಕ್ ಪಾಂಡ್ಯ ಗರಂ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಿ ಕೇರಳ ಸ್ಟೋರಿಯಲ್ಲಿ ಸಮಸ್ಯೆಯಿದ್ದರೆ ನಾಸಿರುದ್ದೀನ್ ಕೋರ್ಟ್ ಗೆ ಹೋಗಲಿ : ಮನೋಜ್ ತಿವಾರಿ

    ದಿ ಕೇರಳ ಸ್ಟೋರಿಯಲ್ಲಿ ಸಮಸ್ಯೆಯಿದ್ದರೆ ನಾಸಿರುದ್ದೀನ್ ಕೋರ್ಟ್ ಗೆ ಹೋಗಲಿ : ಮನೋಜ್ ತಿವಾರಿ

    ಭಾರತೀಯ ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿರುವ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಬಗ್ಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದರು. ಹಾಗೆಯೇ ಬಾಲಿವುಡ್ ನಟ ನಾಸಿರುದ್ದೀನ್ ಶಾ ಕೂಡ ವಿರೋಧಿಸಿದ್ದರು. ನಾಸಿರುದ್ದೀನ್ (Naseeruddin Shah) ಮಾತಿಗೆ ನಟ, ರಾಜಕಾರಣಿ ಮನೋಜ್ ತಿವಾರಿ (Manoj Tiwari) ಎದುರೇಟು ಕೊಟ್ಟಿದ್ದಾರೆ. ನಾಸಿರುದ್ದೀನ್ ಅವರಿಗೆ ಸಿನಿಮಾ ಬಗ್ಗೆ ತಕರಾರುಗಳಿದ್ದರೆ ನೇರವಾಗಿ ಅವರು ಕೋರ್ಟಿಗೆ ಹೋಗಬಹುದು ಎಂದಿದ್ದಾರೆ.

    ‘ದಿ ಕೇರಳ ಸ್ಟೋರಿ’ ಬಗ್ಗೆ ಕಾಮೆಂಟ್ ಮಾಡಿದ್ದ ನಾಸಿರುದ್ದೀನ್  ಈ ಸಿನಿಮಾವನ್ನು ತಾವು ಯಾವತ್ತೂ ನೋಡುವುದಿಲ್ಲ ಎಂದಿದ್ದರು.  ಸಿನಿಮಾ ಗೆದ್ದಿದೆ ಎಂದ ಮಾತ್ರಕ್ಕೆ ಅದು ಒಳ್ಳೆಯ ಗೆಲುವಲ್ಲ. ಅದೊಂದು ಕೆಟ್ಟ ಟ್ರೆಂಡಿನ ಗೆಲುವು ಎಂದು ಪ್ರತಿಕ್ರಿಯಿಸಿದ್ದಾರೆ. ದ್ವೇಷವನ್ನು ಹಂಚುತ್ತಿರುವ ಕುರಿತು ಅವರು ಕಳವಳವನ್ನು  ವ್ಯಕ್ತಪಡಿಸಿದ್ದು, ಸಮಾಜದಲ್ಲಿ ಇನ್ನೆಷ್ಟು ದಿನ ಈ ದ್ವೇಷವನ್ನು ಹಂಚುತ್ತೀರಿ ಎಂದು ಪ್ರಶ್ನೆ ಮಾಡಿದ್ದರು. ಇದನ್ನೂ ಓದಿ:ನೀನು ಮುಸ್ಲಿಂ ಸಮುದಾಯಕ್ಕೆ ಕಳಂಕ ಎಂದವರಿಗೆ ನಟಿ ಸಾರಾ ಹೇಳಿದ್ದೇನು?

    ಬಾಕ್ಸ್ ಆಫೀಸಿನಲ್ಲಿ ಇನ್ನೂರಕ್ಕೂ ಹೆಚ್ಚು ಕೋಟಿ ರೂಪಾಯಿ ಕಲೆಕ್ಷನ್ ಮಾಡಿ, ಇನ್ನೂ ಹಲವಾರು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ದಿ ಕೇರಳ ಸ್ಟೋರಿ ಬಗ್ಗೆ ಈ ಹಿಂದೆ ಕಮಲ್ ಹಾಸನ್ (Kamal Haasan) ಕೂಡ ಮಾತನಾಡಿದ್ದರು. ಅದೊಂದು ಪ್ರೊಪಗಾಂಡ ಸಿನಿಮಾ ಎಂದು ಟೀಕಿಸಿದ್ದರು. ಸತ್ಯವನ್ನು ಹೇಳದೇ ಅಸತ್ಯವನ್ನೇ ತುಂಬಿರುವಂತಹ ಚಿತ್ರವದು ಎಂದು ಮಾತನಾಡಿದ್ದರು.

     

    ಅಬುಧಾಬಿಯಲ್ಲಿ ನಡೆದ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿದ್ದ ಕಮಲ್ ಹಾಸನ್,  ಈ ಸಂದರ್ಭದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ‘ನಾನು ದಿ ಕೇರಳ ಸ್ಟೋರಿ ಸಿನಿಮಾವನ್ನು ವಿರೋಧಿಸುತ್ತಲೇ ಬಂದಿದ್ದೇನೆ. ಅದಕ್ಕಾಗಿ ನನ್ನನ್ನೂ ವಿರೋಧಿಸಿದ್ದಾರೆ. ಸಿನಿಮಾದಲ್ಲಿ ಸತ್ಯ ಘಟನೆ ಆಧರಿಸಿದ ಸಿನಿಮಾ ಎಂದು ಹೇಳಿದರೆ ಸಾಲದು. ಅದರಲ್ಲಿ ಸತ್ಯ ಇರಬೇಕು’ ಎಂದು ಪ್ರತಿಕ್ರಿಯಿಸಿದ್ದರು.

  • ದೆಹಲಿ ಸಿಎಂ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಸಂಚು – ಮನೀಶ್ ಸಿಸೋಡಿಯಾ ಆರೋಪ

    ದೆಹಲಿ ಸಿಎಂ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಸಂಚು – ಮನೀಶ್ ಸಿಸೋಡಿಯಾ ಆರೋಪ

    ನವದೆಹಲಿ: ಗುಜರಾತ್ ವಿಧಾನಸಭಾ ಚುನಾವಣೆ (Gujarat Assembly Election) ಹಾಗೂ ದೆಹಲಿಯ ಮಹಾನಗರಪಾಲಿಕೆ (MCD) ಚುನಾವಣಾ ಸೋಲಿನ ಭೀತಿಯಿಂದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಹತ್ಯೆಗೆ ಬಿಜೆಪಿ ಸಂಚು ರೂಪಿಸಿದೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಗಂಭೀರ ಆರೋಪ ಮಾಡಿದ್ದಾರೆ.

    ಕೇಜ್ರಿವಾಲ್ ಹತ್ಯೆಗೆ ಸಂಚು ರೂಪಿಸಿದ್ದು, ದೆಹಲಿ ಸಂಸದ ಮನೋಜ್ ತಿವಾರಿ (Manoj Tiwari) ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಮನೋಜ್ ತಿವಾರಿ ಕೇಜ್ರಿವಾಲ್ ಭದ್ರತೆಯ ಬಗ್ಗೆ ಕಳಕಳಿ ವ್ಯಕ್ತಪಡಿಸಿದ ಮರು ದಿವಸ ಸಿಸೋಡಿಯಾ ಬಿಜೆಪಿ (BJP) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ತಿಹಾರ್ ಜೈಲಿನ ಬಳಿಯೇ ಕೈ ನಾಯಕಿಯ ಕಾರು ಕಳ್ಳತನ – ವೀಡಿಯೋ ಪೋಸ್ಟ್ ಮಾಡಿ ಪಂಖೂರಿ ಪಾಠಕ್ ಕಿಡಿ

    ಅರವಿಂದ್ ಕೇಜ್ರಿವಾಲ್ ಅವರನ್ನ ಹತ್ಯೆ ಮಾಡಲು ಬಿಜೆಪಿ ಸಂಚು ರೂಪಿಸಿದೆ. ಸಂಸದ ಮನೋಜ್ ತಿವಾರಿ ಬಹಿರಂಗವಾಗಿಯೇ ತಮ್ಮ ಗುಂಡಾಗಳಿಗೆ ದಾಳಿ ಮಾಡುವಂತೆ ಹೇಳುತ್ತಿದ್ದಾರೆ. ಇದಕ್ಕೆ ಸಂಪೂರ್ಣ ಯೋಜನೆ ರೂಪಿಸಿದ್ದಾರೆ. ಆದರೆ ಎಎಪಿ ಇಂತಹ ನೀಚ ರಾಜಕಾರಣಕ್ಕೆ ಹೆದರೋದಿಲ್ಲ. ಗೂಂಡಾಗಿರಿ ಮಾಡುವ ಜನರಿಗೆ ಅವರದ್ದೇ ರೀತಿಯಲ್ಲಿ ತಕ್ಕ ಉತ್ತರ ಕೊಡುತ್ತದೆ ಎಂದು ಸಿಸೋಡಿಯಾ ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮಹಿಳಾ ನಾಯಕಿ ವಿರುದ್ಧ ಅಶ್ಲೀಲ ಟೀಕೆ ಆಡಿಯೋ ವೈರಲ್‌ – ಬಿಜೆಪಿ ನಾಯಕ ಸಸ್ಪೆಂಡ್

    ಅರವಿಂದ್ ಕೇಜ್ರಿವಾಲ್ ಅವರ ಭದ್ರತೆಯ ಬಗ್ಗೆ ನಾನು ಕಳಕಳಿ ವ್ಯಕ್ತಪಡಿಸುತ್ತೇನೆ. ಏಕೆಂದರೆ ನಿರಂತರ ಭ್ರಷ್ಟಾಚಾರ, ಎಂಸಿಡಿ ಚುನಾವಣೆಯಲ್ಲಿ ಟಿಕೆಟ್ ಮಾರಾಟ, ಅತ್ಯಾಚಾರಿಗಳೊಂದಿಗೆ ಸ್ನೇಹ ಹಾಗೂ ಜೈಲಿನಲ್ಲಿ ಮಸಾಜ್ ಇಂತಹ ಹಲವು ಘಟನೆಗಳಿಂದ ಎಎಪಿ ಸ್ವಯಂ ಸೇವಕರು ಕೋಪಗೊಂಡಿದ್ದಾರೆ. ಅಲ್ಲದೇ ಕೆಲವು ಶಾಸಕರಿಗೂ ಥಳಿಸಿದ್ದಾರೆ. ದೆಹಲಿಯ ಮುಖ್ಯಮಂತ್ರಿಗಳಿಗೆ ಹೀಗೆ ಆಗಬಾರದು ಎಂದು ಹಿಂದಿಯಲ್ಲಿ ಮನೋಜ್ ತಿವಾರಿ ಟ್ವೀಟ್ ಮಾಡಿದ್ದರು.

    Live Tv
    [brid partner=56869869 player=32851 video=960834 autoplay=true]

  • 51ನೇ ವಯಸ್ಸಿನಲ್ಲಿ ಮೂರನೇ ಮಗುವಿನ ನಿರೀಕ್ಷೆಯಲ್ಲಿರುವ ಮನೋಜ್ ತಿವಾರಿ

    51ನೇ ವಯಸ್ಸಿನಲ್ಲಿ ಮೂರನೇ ಮಗುವಿನ ನಿರೀಕ್ಷೆಯಲ್ಲಿರುವ ಮನೋಜ್ ತಿವಾರಿ

    ಟ ಕಮ್ ರಾಜಕಾರಣಿ (Actor & Politician) ಮನೋಜ್ ತಿವಾರಿ (Manoj Tiwari) ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. 51ನೇ ವಯಸ್ಸಿನಲ್ಲಿ ತಂದೆಯಾಗುತ್ತಿದ್ದಾರೆ. ಸದ್ಯ ಪತ್ನಿ ಸುರಭಿ ತಿವಾರಿ ಬೇಬಿ ಶವರ್ ವೀಡಿಯೋ ಹಂಚಿಕೊಳ್ಳುವ ಮೂಲಕ ಮನೋಜ್ ತಿವಾರಿ ಸದ್ದು ಮಾಡ್ತಿದ್ದಾರೆ.

    ಚಿತ್ರರಂಗದಲ್ಲಿ ನಟ, ಗಾಯಕ, ರಾಜಕಾರಣಿಯಾಗಿ ಗುರುತಿಸಿ ಸೈ ಎನಿಸಿಕೊಂಡಿರುವ ಮನೋಜ್ ತಿವಾರಿ ತಂದೆಯಾಗುತ್ತಿರುವ ಸಂಭ್ರಮದಲ್ಲಿದ್ದಾರೆ. ಮನೋಜ್ ಮತ್ತು ಸುರಭಿ ದಂಪತಿಗೆ ಈಗಾಗಲೇ ಇಬ್ಬರು ಮಕ್ಕಳಿದ್ದಾರೆ. ಈಗ ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇತ್ತೀಚೆಗೆ ನಡೆದ ಪತ್ನಿ ಬೇಬಿ ಶವರ್ ಕಾರ್ಯಕ್ರಮದ ವೀಡಿಯೋವನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: EXCLUSIVE:ಆಗಿದ್ದು ಎಂಗೇಜ್‌ಮೆಂಟ್ ಅಲ್ಲ, ನಾನಿನ್ನೂ ಒಪ್ಪಿಲ್ಲ: ವೈಷ್ಣವಿ

    View this post on Instagram

     

    A post shared by Manoj Tiwari (@manojtiwari.mp)

    ಎರಡನೇ ಪತ್ನಿಯ ಬೇಬಿ ಶವರ್ ಕಾರ್ಯಕ್ರಮ ತುಂಬಾ ಗ್ರಾö್ಯಂಡ್ ಆಗಿ ನಡೆದಿದ್ದು, ಸುರಭಿ ತಿವಾರಿ ಕೆಂಪು ಡ್ರೆಸ್‌ನಲ್ಲಿ ಮಿಂಚಿದ್ದರೆ, ಮನೋಜ್ ಬೀಜ್ ಕುರ್ತಾದಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಬೇಬಿ ಶವರ್ ವೀಡಿಯೋ ಸಂಭ್ರಮದ ಮೂಲಕ ಸದ್ದು ಮಾಡ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹೆಲ್ಮೆಟ್ ಧರಿಸದೇ ಬೈಕ್ ರ‍್ಯಾಲಿ ನಡೆಸಿದ್ದ ಬಿಜೆಪಿಗೆ ಸಂಸದನಿಗೆ ಬಿತ್ತು 20 ಸಾವಿರ ರೂ. ದಂಡ

    ಹೆಲ್ಮೆಟ್ ಧರಿಸದೇ ಬೈಕ್ ರ‍್ಯಾಲಿ ನಡೆಸಿದ್ದ ಬಿಜೆಪಿಗೆ ಸಂಸದನಿಗೆ ಬಿತ್ತು 20 ಸಾವಿರ ರೂ. ದಂಡ

    ನವದೆಹಲಿ: ಹೆಲ್ಮೆಟ್ ಧರಿಸದೇ ರ‍್ಯಾಲಿಯಲ್ಲಿ ಭಾಗವಿಸಿದ್ದ ಬಿಜೆಪಿ ಸಂಸದನಿಗೆ ದೆಹಲಿ ಸಂಚಾರಿ ಪೊಲೀಸರು 20 ಸಾವಿರ ರೂ. ದಂಡವನ್ನು ವಿಧಿಸಿದ್ದಾರೆ.

    ದೆಹಲಿ ಕೆಂಪುಕೋಟೆ ಪ್ರದೇಶದಲ್ಲಿ ಕೇಂದ್ರ ಸರ್ಕಾರ ಆಯೋಜಿಸುವ ಹರ್ ಘರ್ ತಿರಂಗ ಬೈಕ್ ರ‍್ಯಾಲಿ ವೇಳೆ ಬಿಜೆಪಿ ಸಂಸದ ಮನೋಜ್ ತಿವಾರಿ ಅವರು ಭಾಗಿ ಆಗಿದ್ದರು. ಈ ವೇಳೆ ಹೆಲ್ಮೆಟ್ ಇಲ್ಲದೇ ಬೈಕ್ ಚಲಿಸಿದ್ದಾರೆ. ಇದನ್ನು ಗಮನಿಸಿದ ದೆಹಲಿ ಸಂಚಾರ ಪೊಲೀಸರು 20,000ರೂ. ದಂಡವನ್ನು ವಿಧಿಸಿದ್ದಾರೆ.

    ಇದಾದ ಬಳಿಕೆ ಸಂಸದ ಮನೋಜ್ ತಿವಾರಿ ಟ್ವೀಟ್ ಮಾಡಿ ಹೆಲ್ಮೆಟ್ ರಹಿತ ಸಂಚಾರಕ್ಕೆ ಕ್ಷಮೆಯಾಚಿಸಿದ್ದಾರೆ. ಇದರ ಜೊತೆಗೆ ದಂಡವನ್ನು ಪಾವತಿಸುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಮಲೇಷ್ಯಾಗೆ 18 ತೇಜಸ್‌ ವಿಮಾನ – ಅಮೆರಿಕ ಸೇರಿದಂತೆ 6 ರಾಷ್ಟ್ರಗಳಿಂದ ಖರೀದಿಗೆ ಆಸಕ್ತಿ

    ಬಿಜೆಪಿ ಸಂಸದರು ಹೆಲ್ಮೆಟ್‍ವೊಂದೇ ಅಲ್ಲದೇ ಪರವಾನಗಿ, ಮಾಲಿನ್ಯ ನಿಯಂತ್ರಣ ಪತ್ರ ಇಲ್ಲದೇ ಬೈಕ್ ಚಲಾಯಿಸುತ್ತಿದ್ದರಿಂದ ಪೊಲೀಸರು 20 ಸಾವಿರ ದಂಡವನ್ನು ವಿಧಿಸಿದ್ದಾರೆ. ಇದನ್ನೂ ಓದಿ: ನಗರಾಭಿವೃದ್ಧಿ ಕಚೇರಿಗೆ ಅಕ್ರಮವಾಗಿ ನುಗ್ಗಿದವರ ಮೇಲೆ ಕ್ರಮ ತೆಗೆದುಕೊಳ್ತೀವಿ: ಮುನಿರತ್ನ

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿ ನಾಯಕ ಮನೋಜ್ ತಿವಾರಿಗೆ ಕೊರೊನಾ ಪಾಸಿಟಿವ್

    ಬಿಜೆಪಿ ನಾಯಕ ಮನೋಜ್ ತಿವಾರಿಗೆ ಕೊರೊನಾ ಪಾಸಿಟಿವ್

    ನವದೆಹಲಿ: ಬಿಜೆಪಿ ಲೋಕಸಭಾ ಸಂಸದ ಮನೋಜ್ ತಿವಾರಿ ಅವರು ತಮಗೆ ಕೋವಿಡ್-19 ದೃಢಪಟ್ಟಿರುವುದಾಗಿ ತಿಳಿಸಿದ್ದಾರೆ.

    ಈ ಕುರಿತಂತೆ ಮನೋಜ್ ತಿವಾರಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದು, ಇದೀಗ ಕ್ವಾರಂಟೈನ್‍ನಲ್ಲಿ ಇರುವುದಾಗಿ ತಿಳಿಸಿದ್ದಾರೆ. ನನಗೆ ಕೆಲವು ದಿನಗಳಿಂದ ಅನಾರೋಗ್ಯ ಸಮಸ್ಯೆ ಕಾಡುತ್ತಿತ್ತು. ಕೊಂಚ ಜ್ವರ ಮತ್ತು ಶೀತದಿಂದ ಇದ್ದಿದ್ದರಿಂದ ನಿನ್ನೆ ಉತ್ತರಖಂಡದ ರುದ್ರಪುರದ ಪ್ರಚಾರಕ್ಕೆ ಹೋಗಲಿಲ್ಲ. ಆದರೆ ಇಂದು ಕೊರೊನಾ ಪಾಸಿಟಿವ್ ಬಂದಿದ್ದು, ಮುನ್ನಚ್ಚರಿಕೆಯಿಂದ ಕ್ವಾರಂಟೈನ್‍ನಲ್ಲಿದ್ದೇನೆ. ದಯವಿಟ್ಟು ನಿಮ್ಮ ಮತ್ತು ನಿಮ್ಮ ಕುಟುಂಬದವರ ಬಗ್ಗೆ ಕಾಳಜಿ ವಹಿಸಿ ಎಂದು ಟ್ವೀಟ್ ಮಾಡಿದ್ದಾರೆ.

    ಭಾನುವಾರದಿಂದ ಮನೋಜ್ ತಿವಾರಿ ಅವರು ಅನಾರೋಗ್ಯಕ್ಕೆ ಒಳಗಾಗಿದ್ದು, ಉತ್ತರಖಂಡ ರುದ್ರಪುರದ ಪಕ್ಷದ ಪ್ರಚಾರಕ್ಕೆ ಹೋಗಲಿಲ್ಲ. ಇದೀಗ ಕೋವಿಡ್ ರಿಪೋರ್ಟ್ ಪಡೆದುಕೊಂಡಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‍ಗೆ ಕೊರೊನಾ

    ಮತ್ತೊಂದೆಡೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೂ ಇಂದು ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಅರವಿಂದ್ ಕೇಜ್ರಿವಾಲ್ ಅವರು, ನಾನು ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ಅದರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ನನಗೆ ಸೋಂಕಿನ ಗುಣಲಕ್ಷಣಗಳು ಕಡಿಮೆಯಿದ್ದು, ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತೇನೆ. ಕಳೆದ ಕೆಲವು ದಿನಗಳಲ್ಲಿ ನನ್ನನ್ನು ಯಾರ್ಯಾರು ಭೇಟಿ ಮಾಡಿದ್ದಿರೋ ಅವರೆಲ್ಲರೂ ದಯವಿಟ್ಟು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ. ಜೊತೆಗೆ ತಮ್ಮನ್ನು ತಾವು ಕ್ವಾರಂಟೈನ್ ಮಾಡಿಕೊಳ್ಳಿ ಎಂದು ಟ್ವೀಟ್ ಮಾಡಿದ್ದರು.

    ದೆಹಲಿ ವಿಪತ್ತು ನಿರ್ವಹಣಾ ಸಮಿತಿಯು ಮಂಗಳವಾರ ಸಭೆ ನಡೆಸಿ ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ -19 ಪರಿಸ್ಥಿತಿಯನ್ನು ಪರಿಶೀಲಿಸಿದೆ. ಸೋಮವಾರ ದೆಹಲಿಯಲ್ಲಿ ಪಾಸಿಟಿವ್ ದರವು ಶೇ.6.46ರಷ್ಟು ದಾಖಲಾಗಿದೆ. ನೆಗೆಟಿವ್ ದರವು ಎರಡು ದಿನಗಳಿಗಿಂತ ಶೇ.5ರಷ್ಟು ಹೆಚ್ಚಾಗಿದೆ. ದೆಹಲಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾದರೆ ಸರ್ಕಾರ ರೆಡ್ ಅಲರ್ಟ್ ಘೋಷಿಸಿ, ಕಠಿಣ ನಿರ್ಬಂಧಗಳನ್ನು ವಿಧಿಸಬಹುದಾಗಿದೆ. ಇದನ್ನೂ ಓದಿ: ದೇಶಾದ್ಯಂತ ಮೊದಲ ದಿನ 40 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಲಸಿಕೆ

  • ಮಗಳು ಹೇಳಿದ್ದಕ್ಕೆ ಎರಡನೇ ಮದುವೆಯಾದ ಮನೋಜ್ ತಿವಾರಿ

    ಮಗಳು ಹೇಳಿದ್ದಕ್ಕೆ ಎರಡನೇ ಮದುವೆಯಾದ ಮನೋಜ್ ತಿವಾರಿ

    ನವದೆಹಲಿ: ಮಗಳು ಹೇಳಿದಲೆಂಬ ಕಾರಣಕ್ಕಾಗಿ ಎರಡನೇ ಮದುವೆಯಾಗಿರುವುದಾಗಿ ಹೇಳಿಕೆ ಕೊಡುವುದರ ಮೂಲಕ ತಮ್ಮ ಸಂಸಾರದ ಗುಟ್ಟನ್ನು ಬಿಚ್ಚಿದ್ದಾರೆ ಭೋಜ್‍ಪುರಿ ಗಾಯಕ, ಬಿಜೆಪಿ ಸಂಸದ ಮನೋಜ್ ತಿವಾರಿ.

    ಇತ್ತಿಚೇಗೆ ಮನೋಜ್ ತಿವಾರಿ ತಮ್ಮ ಎರಡನೇ ಮದುವೆಯಾಗಿ ಮಗು ಪಡೆದ ಕಾರಣಕ್ಕಾಗಿ ಕೆಲವು ಊಹಪೋಹಗಳಿಗೆ ಗುರಿಯಾಗಿದ್ದರು. ಅದರೆ ಇದಕ್ಕೆಲ್ಲ ಸ್ವತ ಅವರೇ ಉತ್ತರ ಕೊಡುವುದರೊಂದಿಗೆ ತಮ್ಮ ಮೇಲಿದ್ದ ಊಹಪೋಹಗಳಿಗೆ ತೆರೆ ಎಳೆದಿದ್ದಾರೆ.

    ಮೊದಲು ರಾಣಿ ಎಂಬವರನ್ನು ಮದುವೆಯಾಗಿದ್ದ ಮನೋಜ್ ತಿವಾರಿ ಅವರಿಗೆ ವಿಚ್ಛೇದನ ನೀಡಿ ಗಾಯಕಿ ಸುರಭಿ ಅವರನ್ನು ಎರಡನೇ ಮದುವೆಯಾಗಿದ್ದರು. ಇವರಿಗೆ ಮಗು ಕೂಡ ಇದೆ. ಈ ಕುರಿತು ಮಾತಾನಾಡಿರುವ ತಿವಾರಿ, ನಾನು ನನ್ನ ಮೊದಲ ಹೆಂಡತಿಗೆ ವಿಚ್ಛೇದನ ಕೊಟ್ಟಿದ್ದರು. ಈಗಲೂ ಸಂಪರ್ಕದಲ್ಲಿದ್ದೇನೆ ನಮ್ಮಿಬ್ಬರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. 10 ವರ್ಷಗಳ ಹಿಂದೆ ನಡೆದ ಘಟನೆಯಿಂದಾಗಿ ಬೇರೆಯಾಗಿದ್ದೇವೆ ಎಂದು ತಿಳಿಸಿದರು.

    ಮೊದಲ ಹೆಂಡತಿಯಿಂದ ಬೇರೆಯಾಗಿದ್ದ ನಾನೂ ಒಂಟಿಯಾಗಿದ್ದೆ. ಈ ವೇಳೆ ಗಾಯಕಿ ಸುರಭಿಯ ಪರಿಚಯವಾಗಿತ್ತು. ಸುರಭಿ ನನ್ನ ಮೊದಲ ಹೆಂಡತಿಯ ಮಗಳು ಜಿಯಾಳ ಪರಿಚಯವಿತ್ತು. ಹಾಗಾಗಿ ಜಿಯಾ ಸಲಹೆಯಂತೆ ಸುರಭಿಯನ್ನು ಮದುವೆಯಾಗಿರುವುದಾಗಿ ಹೇಳಿದ್ದಾರೆ. ಸುರಭಿಯ ಬಗ್ಗೆ ಅಭಿಮಾನವಿದ್ದ ಕಾರಣಕ್ಕಾಗಿ ನನ್ನ ಮಗಳು ತಿಳಿಸಿದಂತೆ ಮದುವೆಗೆ ಒಪ್ಪಿದ್ದೇನೆ ಎಂದು ತಮ್ಮ ಸಂಸಾರದ ಗಾಳಿ ಸುದ್ದಿಗೆ ಪೂರ್ಣ ವಿರಾಮ ಹಾಕಿದ್ದಾರೆ.

  • ಬಿಜೆಪಿಯ ಮೂವರು ರಾಜ್ಯಾಧ್ಯಕ್ಷರು ಬದಲು- – ದೆಹಲಿ ಘಟಕಾಧ್ಯಕ್ಷ ಮನೋಜ್ ತಿವಾರಿಗೆ ಕೊಕ್

    ಬಿಜೆಪಿಯ ಮೂವರು ರಾಜ್ಯಾಧ್ಯಕ್ಷರು ಬದಲು- – ದೆಹಲಿ ಘಟಕಾಧ್ಯಕ್ಷ ಮನೋಜ್ ತಿವಾರಿಗೆ ಕೊಕ್

    ನವದೆಹಲಿ: ಕೊರೊನಾ ಸಂಕಷ್ಟದ ನಡುವೆ ರಾಜಕೀಯ ಚಟುವಟಿಕೆಗಳನ್ನು ಚುರುಕುಗೊಳಿಸಿರುವ ಭಾರತೀಯ ಜನತಾ ಪಾರ್ಟಿ ತನ್ನ ಮೂವರು ರಾಜ್ಯಾಧ್ಯಕ್ಷರನ್ನು ಬದಲು ಮಾಡಿದೆ. ದೆಹಲಿ, ಮಣಿಪುರ ಹಾಗೂ ಛತ್ತೀಸ್‍ಗಢ ರಾಜ್ಯಾಧ್ಯಕ್ಷರನ್ನು ಬದಲಾಯಿಸಲಾಗಿದೆ.

    ದೆಹಲಿ ಘಟಕದ ಅಧ್ಯಕ್ಷ ಸ್ಥಾನದಿಂದ ಮನೋಜ್ ತಿವಾರಿ ಅವರನ್ನು ತೆರವುಗೊಳಿಸಿ ನೂತನ ಅಧ್ಯಕ್ಷರಾಗಿ ಆದೇಶ್ ಕುಮಾರ್ ಗುಪ್ತಾ ಅವರನ್ನು ನೇಮಿಸಲಾಗಿದೆ. ಆದೇಶ್ ಕುಮಾರ್ ಗುಪ್ತಾ ಉತ್ತರ ದೆಹಲಿ ಪುರಸಭೆಯ ಮಾಜಿ ಮೇಯರ್ ಆಗಿದ್ದಾರೆ. ಮನೋಜ್ ತಿವಾರಿ ಅವರು 2016ರಲ್ಲಿ ಬಿಜೆಪಿಯ ದೆಹಲಿ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.

    ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲಾದ ಬಳಿಕ ತಿವಾರಿ ಅವರನ್ನು ಅಧ್ಯಕ್ಷ ಸ್ಥಾನದಿಂದ ತೆರವುಗೊಳಿಸಲು ಸೂಕ್ತ ಸಮಯ ಎಂದು ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆಯಾಗಿತ್ತು.

    ಕೆಲವು ಮೂಲಗಳ ಪ್ರಕಾರ, ವಿಧಾನಸಭೆ ಚುನಾವಣೆ ಸೋಲಿನ ಬೆನ್ನಲ್ಲೇ ತಿವಾರಿ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಪಕ್ಷದ ಮುಂದೆ ಬೇರೆ ಆಯ್ಕೆಗಳಿಲ್ಲದಿರುವುದರಿಂದ ಅವರನ್ನು ಸ್ಥಾನದಲ್ಲಿ ಮುಂದುವರಿಸಲಾಗಿತ್ತು. ಇತ್ತೀಚೆಗೆ ಲಾಕ್‍ಡೌನ್ ನಿಯಮಗಳನ್ನು ಉಲ್ಲಂಘಿಸಿ ಹರಿಯಾಣದ ಕ್ರಿಕೆಟ್ ಅಕಾಡೆಮಿಯಲ್ಲಿ ಆಟವಾಡಿದ್ದು, ವಿವಾದಕ್ಕೆ ಗ್ರಾಸವಾದ ಬಳಿಕ ಅವರನ್ನು ಬದಲಾಯಿಸಲಾಗಿದೆ.

    ಇನ್ನು ಛತ್ತೀಸ್‍ಗಢ ರಾಜ್ಯಾಧ್ಯಕ್ಷರಾಗಿ ಕೇಂದ್ರದ ಮಾಜಿ ಸಚಿವ ವಿಷ್ಣುದೇವ್ ಸಾಯ, ಮಣಿಪುರ ರಾಜ್ಯಾಧ್ಯಕ್ಷರಾಗಿ ಪ್ರೊ.ಎಸ್ ಟಿಕೇಂದ್ರ ಸಿಂಗ್ ಅವರನ್ನು ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶ ಹೊರಡಿಸಿದ್ದಾರೆ.

  • ಲಾಕ್‍ಡೌನ್ ನಿಯಮವನ್ನ ಗಾಳಿಗೆ ತೂರಿದ ಬಿಜೆಪಿ ನಾಯಕ

    ಲಾಕ್‍ಡೌನ್ ನಿಯಮವನ್ನ ಗಾಳಿಗೆ ತೂರಿದ ಬಿಜೆಪಿ ನಾಯಕ

    – ಮಾಸ್ಕ್ ಧರಿಸದೇ ಕ್ರಿಕೆಟ್ ಆಡಿದ ಮನೋಜ್ ತಿವಾರಿ

    ನವದೆಹಲಿ: ಕೇಂದ್ರ ಸರ್ಕಾರದ ಲಾಕ್‍ಡೌನ್, ಸಾಮಾಜಿಕ ಅಂತರ ನಿಯಮವನ್ನು ಉಲ್ಲಂಘಿಸಿ ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ ಕ್ರಿಕೆಟ್ ಆಡಿದ್ದಾರೆ.

    ಮನೋಜ್ ತಿವಾರಿ ಅವರು ಇತ್ತೀಚೆಗೆ ಹರ್ಯಾಣದ ಸೋನಿಪತ್‍ಗೆ ಭೇಟಿ ನೀಡಿದ್ದರು. ಈ ವೇಳೆ ಕ್ರಿಕೆಟ್ ಆಡಿದ್ದು, ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ನಾಯಕರ ನಡೆಯ ಬಗ್ಗೆ ನೆಟ್ಟಿಗರು ಅಸಮಾಧಾನ ಹೊರ ಹಾಕಿದ್ದಾರೆ.

    ಕೊರೊನಾ ವೈರಸ್‍ನಿಂದಾಗಿ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದೆ. ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಗಳನ್ನು ಕಡ್ಡಾಯವಾಗಿ ಧರಿಸಬೇಕು ಎಂದು ಸೂಚನೆ ನೀಡಲಾಗಿದೆ. ಲಾಕ್‍ಡೌನ್ ಮಧ್ಯೆ ಕ್ರಿಕೆಟ್ ಆಡಿದ್ದಲ್ಲದೆ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸದೆ ಮನೋಜ್ ತಿವಾರಿ ಅವರು ಬೇಜವಾಬ್ದಾರಿ ಮೆರೆದಿದ್ದಾರೆ ಎಂದು ಕೆಲ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಫೋಟೋ ಒಂದಲ್ಲಿ ಮನೋಜ್ ತಿವಾರಿ ಅವರು ಒಂದು ಸಣ್ಣ ಗುಂಪಿನ ಬಳಿ ನಿಂತು ಹಾಡನ್ನು ಹಾಡುವ ಮೂಲಕ ಆಟಗಾರರನ್ನು ರಂಜಿಸುತ್ತಿದ್ದರು. ಮತ್ತೊಂದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಪೆವಿಲಿಯನ್‍ನಲ್ಲಿ ಕುಳಿತಿದ್ದನ್ನು ಕಾಣಬಹುದಾಗಿದೆ.

    ಈ ಘಟನೆಯ ವಿಡಿಯೋವನ್ನು ಸ್ವತಃ ಮನೋಜ್ ತಿವಾರಿ ಅವರೇ ತಮ್ಮ ಟ್ವೀಟ್ ಮಾಡಿದ್ದಾರೆ. ಇದರಿಂದಾಗಿ ಸಾರ್ವಜನಿಕರು ಹಾಗೂ ನೆಟ್ಟಿಗರು ಸೋನಿಪತ್ ಅಧಿಕಾರಿಗಳ ಕಾರ್ಯವೈಖರಿಯನ್ನು ಪ್ರಶ್ನಿಸಿದ್ದಾರೆ

    ಕೊರೊನಾ ದೇಶಾದ್ಯಂತ ವೇಗವಾಗಿ ಹೆಚ್ಚುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 6,977 ಮಂದಿಕೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 138,845ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.