Tag: Mansoor Khan

  • ಐಎಂಎ ಬಹುಕೋಟಿ ವಂಚನೆ ಪ್ರಕರಣ – ಮಾಜಿ ಸಚಿವ ಜಮೀರ್ ಗೆ ಭರ್ತಿ 10 ಗಂಟೆ ಡ್ರಿಲ್

    ಐಎಂಎ ಬಹುಕೋಟಿ ವಂಚನೆ ಪ್ರಕರಣ – ಮಾಜಿ ಸಚಿವ ಜಮೀರ್ ಗೆ ಭರ್ತಿ 10 ಗಂಟೆ ಡ್ರಿಲ್

    ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಬುಧವಾರ ಇಡೀ ದಿನ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್‍ರನ್ನ ಎಸ್‍ಐಟಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ಬೆಳಗ್ಗೆ 11 ರಿಂದ ರಾತ್ರಿ 8.30ರವರೆಗೆ ತನಿಖೆ ವಿಚಾರಣೆ ನಡೆಸಿದ ಎಸ್‍ಐಟಿ ಅಧಿಕಾರಿಗಳು, ಜಮೀರ್ ಅವರಿಂದ ಸಾಕಷ್ಟು ಉತ್ತರ ಪಡೆದುಕೊಂಡಿದ್ದಾರೆ. ವಿಚಾರಣೆಯ ಕೆಲ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದ್ದು, ಅದು ಈ ಕೆಳಗಿನಂತಿದೆ.

    ಎಸ್‍ಐಟಿ: ನಿಮ್ಮನ್ನ ವಿಚಾರಣೆಗೆ ಕರೀತೀವಿ ಅಂತ ಅನ್ಕೊಂಡಿದ್ರಾ?
    ಜಮೀರ್: ಇ.ಡಿ. ಯವರು ನೋಟಿಸ್ ಕೊಟ್ಟಾಗಲೇ ನೀವು ಕರೀತೀರಾ ಅಂತ ಗೊತ್ತಿತ್ತು.

    ಎಸ್‍ಐಟಿ: ನಿಮಗೂ ಮನ್ಸೂರ್ ಖಾನ್‍ಗೂ ಯಾವ ರೀತಿಯ ಸಂಬಂಧ ಇತ್ತು?
    ಜಮೀರ್: ನಮ್ಮಿಬ್ಬರ ನಡುವೆ ಯಾವುದೇ ವೈಯಕ್ತಿಕ ಸಂಬಂಧಗಳಿಲ್ಲ. ಇಫ್ತಿಯಾರ್ ಕೂಟದ ಸಮಯದಲ್ಲಿ ಸಿಕ್ತಿದ್ರು.

    ಎಸ್‍ಐಟಿ: ಮನ್ಸೂರ್ ನಿಂದ ನೀವು ಹಣ ಪಡೆದಿದ್ದೀರಂತಲ್ಲ?
    ಜಮೀರ್: ಎಸ್‍ಐಟಿ ರಚನೆ ಮಾಡಿ ಅಂತ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದೇ ನಾನು. ನಾನ್ಯಾಕೆ ಮನ್ಸೂರ್ ನಿಂದ ಹಣ ಪಡೆಯಲಿ

    ಎಸ್‍ಐಟಿ: ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆಗೆ ಮನ್ಸೂರ್ ಗೆ ನಿವೇಶನ ಮಾರಿದ್ಯಾಕೆ?
    ಜಮೀರ್: ರಿಚ್ಮಂಡ್ ಟೌನ್‍ನ ಸರ್ಫೆಂಟೈನ್ ರಸ್ತೆಯಲ್ಲಿರೋ ನಿವೇಶನವನ್ನು ಸೇಲ್‍ಡೀಡ್ ಮಾಡಿ 9 ಕೋಟಿ ಹಣ ಪಡೆದಿದ್ದೇನೆ. ಈಗ ನನಗೂ ಕಡಿಮೆ ಬೆಲೆಗೆ ಮಾರಿದ್ದೀನಿ ಅನ್ನಿಸ್ತಿದೆ.

    ಎಸ್‍ಐಟಿ: ನಿಮ್ಮ ಶಿಷ್ಯ ಮುಜಾಹಿದ್ ಅಲಿಯಾಸ್ ಖರ್ಚೀಫ್ ಮಜ್ಜು, ಮನ್ಸೂರ್ ನಿಂದ ಹಣ ಪಡೆದಿದ್ದಾನಲ್ಲ?
    ಜಮೀರ್: ಅದಕ್ಕೂ ನನಗೂ ಸಂಬಂಧವಿಲ್ಲ.

    ಎಸ್‍ಐಟಿ: ರಾಜಕಾರಣಿಗಳಲ್ಲಿ ಮನ್ಸೂರ್ ನಿಮಗೂ ಹಣ ತಲುಪಿಸಿದ್ದಾನಂತಲ್ಲ?
    ಜಮೀರ್: ಇದೆಲ್ಲಾ ಸುಳ್ಳು. ಬಡ ಜನರ ದುಡ್ಡು ವಾಪಸ್ ಕೊಡು ನಿನ್ನ ಬೆಂಬಲಕ್ಕೆ ಇರ್ತೀನಿ ಅಂತಾ ಹೇಳಿದ್ದು ನಿಜ. ಅವನಿಂದ ಯಾವುದೇ ದುಡ್ಡು ಪಡೆದಿಲ್ಲ.

    ಎಸ್‍ಐಟಿ: ಮೌಲ್ವಿ ಹನೀಫ್ ಅಪ್ಸರ್ ಅಜೀಜ್‍ಗೂ ನಿಮಗೂ ಏನು ಸಂಬಂಧ?
    ಜಮೀರ್: ಯಾವುದೇ ಸಂಬಂಧ ಇಲ್ಲ. ನೀವು ಅರೆಸ್ಟ್ ಮಾಡಿದಾಗಲೇ ಆತ ಮೌಲ್ವಿ ಅಂತ ಗೊತ್ತಾಗಿದ್ದು. ಐಎಂಎನಲ್ಲಿ ಹಣ ಹಾಕಿ ಅಂತ ಮೌಲ್ವಿ ಜನರಿಗೆ ಹೇಳಬಾರದಿತ್ತು.

    ಎಸ್‍ಐಟಿ: ಪ್ರತ್ಯಕ್ಷವಾಗಿ ಅಲ್ಲದಿದ್ರೂ ನಿಮ್ಮ ಪಾತ್ರ ಪರೋಕ್ಷವಾಗಿ ಇದ್ದಂತಿದೆ. ಮನ್ಸೂರ್ ನನ್ನ ವಶಕ್ಕೆ ಪಡೆದ ನಂತರ ನೀವು ಮತ್ತೆ ವಿಚಾರಣೆಗೆ ಬರಬೇಕಾಗುತ್ತೆ.
    ಜಮೀರ್: ನೀವು ಯಾವಾಗ ಕರೆದ್ರೂ ಬರ್ತೀನಿ.

  • ತೀವ್ರಗೊಂಡ ಮನ್ಸೂರ್ ವಿಚಾರಣೆ – ಜಮೀರ್, ಬೇಗ್‍ಗೆ ಎಸ್‍ಐಟಿ ನೋಟಿಸ್ ಜಾರಿ

    ತೀವ್ರಗೊಂಡ ಮನ್ಸೂರ್ ವಿಚಾರಣೆ – ಜಮೀರ್, ಬೇಗ್‍ಗೆ ಎಸ್‍ಐಟಿ ನೋಟಿಸ್ ಜಾರಿ

    ಬೆಂಗಳೂರು: ಬಹುಕೋಟಿ ವಂಚಕ ಮನ್ಸೂರ್ ಖಾನ್ ವಿಚಾರಣೆ ಇಡಿ ತೀವ್ರಗೊಳಿಸಿದ್ದರೆ ಇತ್ತ ವಿಶೇಷ ತನಿಖಾ ತಂಡ(ಎಸ್‍ಐ) ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಮಾಜಿ ಸಚಿವ ಜಮೀರ್ ಅಹ್ಮದ್ ಹಾಗೂ ಶಾಸಕ ರೋಷನ್ ಬೇಗ್‍ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ. ಈ ತಿಂಗಳ 29ರಂದು ವಿಚಾರಣೆಗೆ ಹಾಜರಾಗುವಂತೆ ತನಿಖಾಧಿಕಾರಿಗಳು ಸೂಚಿಸಿದ್ದಾರೆ.

    ದಿನೇ ದಿನೇ ಐಎಂಎ ಪ್ರಕರಣ ವಿಚಾರಣೆಯನ್ನು ಇಡಿ ಅಧಿಕಾರಿಗಳು ತೀವ್ರಗೊಳಿಸುತ್ತಿದ್ದು, ಇಡಿ ಅಧಿಕಾರಿಗಳು ಹಾಕುತ್ತಿರುವ ಪ್ರಶ್ನೆಗಳಿಗೆ ಆರೋಪಿ ಮನ್ಸೂರ್ ಖಾನ್ ತಬ್ಬಿಬ್ಬಾಗಿ ಪ್ರಕರಣದ ಹಿಂದೆ ಇರುವ ಕಾಣದ ಕೈಗಳ ಹೆಸರನ್ನು ಬಾಯಿಬಿಟ್ಟಿದ್ದಾನೆ.

    ಮನ್ಸೂರ್ ಖಾನ್ ಜೊತೆ ಇಬ್ಬರೂ ವ್ಯವಹಾರ ನಡೆಸಿರುವುದು ತನಿಖೆಯಿಂದ ತಿಳಿದುಬಂದಿದೆ. ಈ ಮಧ್ಯೆ ಐಎಂಎ ಕಂಪನಿಯ ಲೆಕ್ಕ ಪರಿಶೋಧಕ ಇಕ್ಬಾಲ್ ಖಾನ್‍ರನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಆದಾಯ ತೆರಿಗೆ ಇಲಾಖೆ ಮತ್ತು ಕಂಪನಿಗಳ ರಿಜಿಸ್ಟ್ರಾರ್ ಗೆ ತಪ್ಪು ಮಾಹಿತಿ ನೀಡಿದ ಆರೋಪ ಆಡಿಟರ್ ಮೇಲಿದೆ.

    ಈ ಹಿಂದೆ ವಿಚಾರಣೆ ವೇಳೆ ಮನ್ಸೂರ್ 1000ಕ್ಕೂ ಹೆಚ್ಚು ಕೋಟಿ ಮೌಲ್ಯದ ವ್ಯವಹಾರದ ರಹಸ್ಯ ವಿವರವನ್ನು ಇಡಿ ಅಧಿಕಾರಿಗಳಿಗೆ ತಿಳಿಸಿದ್ದನು. ಅಲ್ಲದೆ ಕೆಲ ಪ್ರಭಾವಿಗಳ ಹೆಸರುಗಳನ್ನು ಕೂಡ ಮನ್ಸೂರ್ ಪ್ರಸ್ತಾಪಿಸಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿತ್ತು.

    ಪ್ರಭಾವಿಗಳ ಜೊತೆಗಿನ ನಂಟು ಹಾಗೂ ಪ್ರಭಾವಿಗಳಿಗೆ ಹಂಚಿಕೆಯಾಗಿರುವ ಐಎಂಎನ ಲಾಭಾಂಶದ ಕುರಿತು ಮನ್ಸೂರ್ ಬಾಯ್ಬಿಟ್ಟಿದ್ದನು. ಮನ್ಸೂರ್ ಗೆ ಜೀವ ಬೆದರಿಕೆ ಇರುವ ಹಿನ್ನೆಲೆ ಆತನಿಗೆ ಹೈ ಸೆಕ್ಯುರಿಟಿ ನೀಡಲಾಗಿದ್ದು, ಖಾನ್ ಗೆ ರಾತ್ರಿಯಿಡಿ ಬಿಗಿ ಭದ್ರತೆ ಒದಗಿಸಲಾಗುತ್ತಿದೆ.

  • ವಿಕ್ಟೋರಿಯಾ ಆಸ್ಪತ್ರೆಗೆ ಮಾನ್ಸೂರ್ ಖಾನ್ ದಾಖಲು

    ವಿಕ್ಟೋರಿಯಾ ಆಸ್ಪತ್ರೆಗೆ ಮಾನ್ಸೂರ್ ಖಾನ್ ದಾಖಲು

    ಬೆಂಗಳೂರು: ಅನಾರೋಗ್ಯದ ಹಿನ್ನೆಲೆ ಐಎಂಎ ಪ್ರಕರಣದ ಆರೋಪಿ ಮಾನ್ಸೂರ್ ಖಾನ್ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾನೆ.

    ಸದ್ಯ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಮನ್ಸೂರ್ ನನ್ನು ವಿಚಾರಣೆ ನಡೆಸುತ್ತಿದ್ದು, ಇಡಿ ಕಚೇರಿಯಲ್ಲಿಯೇ ಆತನನ್ನು ಇರಿಸಲಾಗಿದೆ. ಮನ್ಸೂರ್ ಭಾನುವಾರ ಎದೆ ನೋವು ಎಂದು ಹೇಳಿದ ಹಿನ್ನೆಲೆಯಲ್ಲಿ ಆತನನ್ನು ಜಯದೇವ ಆಸ್ಪತ್ರೆಯಲ್ಲಿ ಇಡಿ ಅಧಿಕಾರಿಗಳು ಚಿಕಿತ್ಸೆ ಕೊಡಿಸಿದ್ದರು. ಬಳಿಕ ಶಾಂತಿನಗರದ ಇಡಿ ಕಚೇರಿಗೆ ವಾಪಸ್ ಕರೆತಂದಿದ್ದರು. ಆದರೆ ಇಡಿ ಕಚೇರಿಗೆ ಬಂದ ಒಂದು ಗಂಟೆ ನಂತರ ಮಾನ್ಸೂರ್ ಗೆ ಮತ್ತೆ ಎದೆನೋವು ಕಾಣಿಸಿಕೊಂಡಿದ್ದು, ತಡರಾತ್ರಿ ವಿಕ್ಟೋರಿಯಾ ಆಸ್ಪತ್ರೆಗೆ ಆತನನ್ನು ದಾಖಲಿಸಲಾಗಿದೆ.

    ಈ ಹಿಂದೆ ವಿಚಾರಣೆ ವೇಳೆ ಮನ್ಸೂರ್ 1000ಕ್ಕೂ ಹೆಚ್ಚು ಕೋಟಿ ಮೌಲ್ಯದ ವ್ಯವಹಾರದ ರಹಸ್ಯ ವಿವರವನ್ನು ಇಡಿ ಅಧಿಕಾರಿಗಳಿಗೆ ತಿಳಿಸಿದ್ದನು. ಅಲ್ಲದೆ ಕೆಲ ಪ್ರಭಾವಿಗಳ ಹೆಸರುಗಳನ್ನು ಕೂಡ ಮನ್ಸೂರ್ ಪ್ರಸ್ತಾಪಿಸಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿತ್ತು.

    ಪ್ರಭಾವಿಗಳ ಜೊತೆಗಿನ ನಂಟು ಹಾಗೂ ಪ್ರಭಾವಿಗಳಿಗೆ ಹಂಚಿಕೆಯಾಗಿರುವ ಐಎಂಎನ ಲಾಭಾಂಶದ ಕುರಿತು ಮನ್ಸೂರ್ ಬಾಯ್ಬಿಟ್ಟಿದ್ದನು. ಮನ್ಸೂರ್ ಗೆ  ಜೀವ ಬೆದರಿಕೆ ಇರುವ ಹಿನ್ನೆಲೆ ಆತನಿಗೆ ಹೈ ಸೆಕ್ಯುರಿಟಿ ನೀಡಲಾಗಿದ್ದು, ಖಾನ್ ಗೆ ರಾತ್ರಿಯಿಡಿ ಬಿಗಿ ಭದ್ರತೆ ಒದಗಿಸಲಾಗುತ್ತಿದೆ.

    ಶನಿವಾರ ಬೆಂಗಳೂರಿನ ಶಾಂತಿ ನಗರದಲ್ಲಿರುವ ಇಡಿ ಕಚೇರಿಗೆ ಕರೆತಂದ ಬಳಿಕ ಸಿವಿಲ್ ಕೋರ್ಟ್ ಗೆ ಇಡಿ ಅಧಿಕಾರಿಗಳು ಹಾಜರುಪಡಿಸಿದ್ದರು. ಹಲವು ವಿಷಯಗಳ ಕುರಿತು ವಿಚಾರಣೆ ನಡೆಸಬೇಕಿದೆ. ಆದ್ದರಿಂದ 15 ದಿನಗಳ ಕಾಲ ವಶಕ್ಕೆ ನೀಡಿ ಅಂತ ಇಡಿ ಕೇಳಿತು. ಆದರೆ, ಕೇವಲ 3 ದಿನಗಳಿಗೆ ಮಾತ್ರ ನೀಡೋದಾಗಿ ಜಡ್ಜ್ ಆದೇಶಿಸಿದರು. ಹೀಗಾಗಿ ಖಾನ್‍ ನನ್ನು 3 ದಿನಗಳ ಅವಧಿಗೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಲಾಗಿದೆ.

    ಐಎಂಎ ಕಚೇರಿ ಸೇರಿದಂತೆ ಮನ್ಸೂರ್ ಖಾನ್ ಮನೆ ಮೇಲೆ ದಾಳಿ ನಡೆಸಿದ ವೇಳೆ ಲಭ್ಯವಾದ ಆಸ್ತಿಪಾಸ್ತಿ, ಚಿನ್ನಾಭರಣಗಳು, ದಾಖಲೆಗಳ ಕುರಿತು ಇಡಿ ವಿಚಾರಣೆ ನಡೆಸುತ್ತಿದೆ. ಇನ್ನೊಂದೆಡೆ, ಎಸ್‍ಐಟಿ ಹಾಗೂ ತೆಲಂಗಾಣ ಪೊಲೀಸರು ಕೂಡ ಮನ್ಸೂರ್ ನನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದ್ದಾರೆ.

    ವಂಚನೆ ಎಸಗಿ ಮನ್ಸೂರ್ ಖಾನ್ ದುಬೈಗೆ ತೆರಳಿದ್ದ. ಈತನ ಚಲನವಲನಗಳ ಕಣ್ಣಿಟ್ಟಿತ್ತ ಎಸ್‍ಐಟಿ ಭಾರತಕ್ಕೆ ಬರುವಂತೆ ಹೇಳಿತ್ತು. ಅಲ್ಲದೇ ರಕ್ಷಣೆ ನೀಡಲಾಗುವುದು ಎಂದು ಎಸ್‍ಐಟಿ ತಿಳಿಸಿತ್ತು. ದುಬೈನಿಂದ ದೆಹಲಿಗೆ ಬಂದಿಳಿದ ಮನ್ಸೂರ್ ಖಾನ್‍ ನನ್ನು ಗುರುವಾರ ಮಧ್ಯರಾತ್ರಿ 1:50ರ ಸುಮಾರಿಗೆ ಬಂಧಿಸಲಾಗಿತ್ತು. ಮನ್ಸೂರ್ ಖಾನ್‍ ನನ್ನು ಇ.ಡಿ ಅಧಿಕಾರಿಗಳು ವಿಚಾರಣೆ ಪೂರ್ಣಗೊಳಿಸಿದ ಬಳಿಕ ಎಸ್‍ಐಟಿ ಅಧಿಕಾರಿಗಳಿಗೆ ಹಸ್ತಾಂತರಿಸಲಿದ್ದಾರೆ.

  • ಇಡಿ ಕಸ್ಟಡಿಗೆ ಐಎಂಎ ಕಿಂಗ್‍ಪಿನ್ ಮನ್ಸೂರ್ ಖಾನ್

    ಇಡಿ ಕಸ್ಟಡಿಗೆ ಐಎಂಎ ಕಿಂಗ್‍ಪಿನ್ ಮನ್ಸೂರ್ ಖಾನ್

    ಬೆಂಗಳೂರು: 50 ಸಾವಿರಕ್ಕೂ ಹೆಚ್ಚು ಪಾಲುದಾರರಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ಐಎಂಎ ಕಿಂಗ್ ಪಿನ್ ಮನ್ಸೂರ್ ಅಲಿ ಖಾನ್‍ನನ್ನು 3 ದಿನಗಳ ಅವಧಿಗೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಲಾಗಿದೆ.

    ದೆಹಲಿಯ ವಿಮಾನ ನಿಲ್ದಾಣದಲ್ಲಿ ನಿನ್ನೆ ಮನ್ಸೂರ್‍ನನ್ನು ಬಂಧಿಸಲಾಗಿತ್ತು. ಇವತ್ತು ಬೆಂಗಳೂರಿನ ಶಾಂತಿ ನಗರದಲ್ಲಿರುವ ಇ.ಡಿ. ಕಚೇರಿಗೆ ಕರೆತಂದಿದ್ದರು. ಬಳಿಕ ಸಿವಿಲ್ ಕೋರ್ಟ್‍ಗೆ ಹಾಜರುಪಡಿಸಿದ್ದರು. ಹಲವು ವಿಷಯಗಳ ಕುರಿತು ವಿಚಾರಣೆ ನಡೆಸಬೇಕಿದೆ. ಆದ್ದರಿಂದ 15 ದಿನಗಳ ಕಾಲ ವಶಕ್ಕೆ ನೀಡಿ ಅಂತ ಇಡಿ ಕೇಳಿತು. ಆದರೆ, ಕೇವಲ 3 ದಿನಗಳಿಗೆ ಮಾತ್ರ ನೀಡೋದಾಗಿ ಜರ್ಡ್ ಆದೇಶಿಸಿದರು.

    ಐಎಂಎ ಕಚೇರಿ ಸೇರಿದಂತೆ ಮನ್ಸೂರ್ ಖಾನ್ ಮನೆ ಮೇಲೆ ದಾಳಿ ನಡೆಸಿದ ವೇಳೆ ಲಭ್ಯವಾದ ಆಸ್ತಿಪಾಸ್ತಿ, ಚಿನ್ನಾಭರಣಗಳು, ದಾಖಲೆಗಳ ಕುರಿತು ಇ.ಡಿ. ವಿಚಾರಣೆ ನಡೆಸಲಿದೆ. ಇನ್ನೊಂದೆಡೆ, ಎಸ್‍ಐಟಿ ಹಾಗೂ ತೆಲಂಗಾಣ ಪೊಲೀಸರು ಕೂಡ ಮನ್ಸೂರ್ ನನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದ್ದರು.

  • ಮನ್ಸೂರ್ ಖಾನ್ ನೋಡಲು ಹರಿದು ಬಂದ ಜನಸಾಗರ

    ಮನ್ಸೂರ್ ಖಾನ್ ನೋಡಲು ಹರಿದು ಬಂದ ಜನಸಾಗರ

    – ಐಎಂಎ ಮಾಲೀಕ 4 ದಿನ ಇಡಿ ವಶಕ್ಕೆ

    ಬೆಂಗಳೂರು: ಬಹುಕೋಟಿ ವಂಚಕ ಐಎಂಎ ಮಾಲೀಕ ಮನ್ಸೂರ್ ಖಾನ್ ಕೋರ್ಟಿನ ಕಟಕಟೆಯಲ್ಲಿರುವ ಹಿನ್ನೆಲೆಯಲ್ಲಿ 1ನೇ ಸಿಸಿಎಚ್ ಕೋರ್ಟ್ ಮುಂದೆ ಜನರು ಕಿಕ್ಕಿರಿದು ಸೇರಿದ್ದಾರೆ.

    ಇಂದು ಬೆಳಗ್ಗೆ ಇಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದೆಹಲಿಯಿಂದ ಮನ್ಸೂರ್ ಖಾನ್ ನನ್ನು ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ. ಇಂದು ಕೋರ್ಟ್ ಮುಂದೆ ಹಾಜರು ಪಡಿಸಿದ್ದು, ಕೋರ್ಟಿನಲ್ಲಿ ವಿಚಾರಣೆ ನಡೆದಿದೆ. ಇದೇ ವೇಳೆ  ಪೊಲೀಸರು ನಮ್ಮ ವಶಕ್ಕೆ ಕೊಡಿ ಎನ್ನುತ್ತಿದ್ದರು.

    ಇನ್ನೊಂದೆಡೆ ಎಸ್‍ಐಟಿ ಅವರು ಕೂಡ ನಮ್ಮ ವಶಕ್ಕೆ ಕೊಡಿ ಎಂದು ಮನವಿ ಮಾಡಿಕೊಂಡಿದ್ದರು. ಮತ್ತೊಂದೆಡೆ ತೆಲಂಗಾಣ ಪೊಲೀಸರಿಂದಲೂ ನಮ್ಮ ವಶಕ್ಕೆ ನೀಡಿ ಎಂದು ಅರ್ಜಿ ಸಲ್ಲಿಸಿದ್ದರು. ಕೊನೆಗೆ ವಿಚಾರಣೆ ಮಾಡಿ ನಾಲ್ಕು ದಿನಗಳವರೆಗೆ ಮನ್ಸೂರ್ ಖಾನ್‍ನನ್ನು ಇಡಿ ವಶಕ್ಕೆ ಒಪ್ಪಿಸುವಂತೆ ಕೋರ್ಟ್ ಆದೇಶ ನೀಡಿದೆ.

    ಮನ್ಸೂರ್ ಖಾನ್ ಇಡಿ ಕಚೇರಿಯಲ್ಲಿ ಇರುವ ಹಿನ್ನೆಲೆಯಲ್ಲಿ ಕಚೇರಿಗೆ ಹೂಡಿಕೆದಾರರು ಆಗಮಿಸುತ್ತಿದ್ದರು. ಮನ್ಸೂರ್ ಬಳಿ ಪ್ರಶ್ನೆ ಮಾಡಲು ರಸ್ತೆಯಲ್ಲಿ ಜನ ಕಾದುಕುಳಿತ್ತಿದ್ದರು. ಕೋರ್ಟ್ ಆವರಣದಲ್ಲಿ ಮೋಸಹೋದ ಜನರು ಕ್ಕಿಕ್ಕಿರಿದು ನಿಂತಿದ್ದರು. ಹೀಗಾಗಿ ಜನರು ಮನ್ಸೂರ್ ಖಾನ್ ಗೆ ಮುತ್ತಿಗೆ ಹಾಕಬಹುದೆಂದು ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತು ಒದಗಿಸಲಾಗಿತ್ತು.

    ಮನ್ಸೂರ್ ಖಾನ್‍ನನ್ನು ಇಡಿ ಅಧಿಕಾರಿಗಳು ಶುಕ್ರವಾರ ರಾತ್ರಿ ದೆಹಲಿ ಕೋರ್ಟ್ ಎದುರು ಹಾಜರು ಪಡಿಸಲಾಗಿತ್ತು. ಇಂದು ಬೆಳಗ್ಗೆ ದೆಹಲಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದರು.

  • ಬೆಂಗ್ಳೂರಿಗೆ ವಂಚಕ ಮನ್ಸೂರ್ ಖಾನ್

    ಬೆಂಗ್ಳೂರಿಗೆ ವಂಚಕ ಮನ್ಸೂರ್ ಖಾನ್

    ಬೆಂಗಳೂರು: ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ಐಎಂಎ ಜ್ಯುವೆಲ್ಸ್ ಮಾಲೀಕ ಮನ್ಸೂರ್ ಖಾನ್‍ನನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬೆಂಗಳೂರಿಗೆ ಕರೆದುಕೊಂಡು ಬರುತ್ತಿದ್ದಾರೆ.

    ಮನ್ಸೂರ್ ಖಾನ್‍ನನ್ನು ಇಡಿ ಅಧಿಕಾರಿಗಳು ಶುಕ್ರವಾರ ರಾತ್ರಿ ದೆಹಲಿ ಕೋರ್ಟ್ ಎದುರು ಹಾಜರು ಪಡಿಸಲಾಗಿತ್ತು. ಇಂದು ದೆಹಲಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಕರೆದುಕೊಂಡು ಬರಲಾಗಿದೆ.

    ಸದ್ಯಕ್ಕೆ ಬಳ್ಳಾರಿಯ ಕಾವೇರಿ ಜಂಕ್ಷನ್ ಬಳಿ ಕಾರಿನಲ್ಲಿ ಖಾನ್‍ನನ್ನು ಇಡಿ ಅಧಿಕಾರಿಗಳು ಕರೆದುಕೊಂಡು ಬರುತ್ತಿದ್ದಾರೆ. ಬೆಳಗ್ಗೆ 11 ಗಂಟೆಗೆ ಶಾಂತಿನಗರದ ಇಡಿ ವಿಶೇಷ ಕೋರ್ಟ್ ಎದುರು ಅಧಿಕಾರಿಗಳು ಮನ್ಸೂರ್ ಖಾನ್‍ನನ್ನು ಹಾಜರು ಪಡಿಸಲಿದ್ದಾರೆ. ಈ ವೇಳೆ ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಸಲ್ಲಿಸುವ ಸಾಧ್ಯತೆ ಇದೆ. ಪೊಲೀಸರು ಜೊತೆಗೆ ಎಸ್‍ಐಟಿ ಇಲಾಖೆಯವರು ಕೂಡ ತಮ್ಮ ವಶಕ್ಕೆ ನೀಡುವಂತೆ ಕೇಳುವ ಸಾಧ್ಯತೆ ಇದೆ.

    ಮನ್ಸೂರ್ ಖಾನ್ ಸಾವಿರಾರು ರೂಪಾಯಿ ಹಣವನ್ನು ತೆಗೆದುಕೊಂಡು ಸುಮಾರು ಒಂದು ತಿಂಗಳ ಹಿಂದೆ ಪರಾರಿಯಾಗಿದ್ದನು. ಈಗಾಗಲೇ ಮನ್ಸೂರ್ ಖಾನ್‍ನ ಸುಮಾರು 200 ಕೋಟಿ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ. ಈತ ಬರುವ ಸುದ್ದಿ ಕೇಳಿ ಇಡಿ ಕೋರ್ಟ್ ಬಳಿ ಸಾವಿರಾರು ಜನರು ಬರುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇಡಿ ಕೋರ್ಟ್ ಬಳಿ ಪೊಲೀಸರನ್ನು ನಿಯೋಜಿಸಲಾಗುತ್ತಿದೆ.

    ವಂಚನೆ ಹೇಗೆ?
    ಐಎಂಎ ಜ್ಯುವೆಲ್ಸ್ ಚಿನ್ನ ಖರೀದಿಸುವ ಗ್ರಾಹಕರಿಗೆ ಮೇಕಿಂಗ್ ಹಾಗೂ ವೇಸ್ಟೇಜ್ ಶುಲ್ಕ ವಿಧಿಸುತ್ತಿರಲಿಲ್ಲ. ಈ ಪ್ರಕಟಣೆ ನೋಡಿ ಜನ ಚಿನ್ನ ಖರೀದಿ ಮಾಡುತ್ತಿದ್ದರು. ಖರೀದಿಗೆ ಬಂದ ಗ್ರಾಹಕರಿಗೆ ಕಂಪನಿಯಲ್ಲಿ ಹಣ ಹೂಡುವಂತೆ ಸಿಬ್ಬಂದಿ ಪುಸಲಾಯಿಸುತ್ತಿದ್ದರು. ಜ್ಯುವೆಲ್ಸ್ ಸಿಬ್ಬಂದಿಯ ಮಾತಿಗೆ ಮರುಳಾದ ಜನ ತಮ್ಮಲ್ಲಿದ್ದ ಹಣವನ್ನು ಹೂಡಿಕೆ ಮಾಡುತ್ತಿದ್ದರು. 1 ಲಕ್ಷ ರೂ. 3 ಸಾವಿರ ರೂ. ನಂತೆ ಕಂಪನಿ ಬಡ್ಡಿ ನೀಡುತಿತ್ತು. ಕಂಪನಿ ಸರಿಯಾದ ಸಮಯದಲ್ಲಿ ಲಾಭಾಂಶ ನೀಡುತ್ತಿದ್ದ ಕಾರಣ ವಿಶ್ವಾಸಾರ್ಹತೆ ಗಳಿಸಿಕೊಂಡಿತ್ತು. ಲಾಭಾಂಶ ಪಡೆದ ಗ್ರಾಹಕರು ಸ್ನೇಹಿತರಿಗೆ ಹೇಳುತ್ತಿದ್ದ ಕಾರಣ ಅವರು ಹೂಡಿಕೆ ಮಾಡತೊಡಗಿದರು. ಭಾರೀ ಪ್ರಚಾರ ಸಿಕ್ಕಿದ ಪರಿಣಾಮ ಹೂಡಿಕೆ ಹೆಚ್ಚಾಯಿತು. ಆದರೆ ಕಳೆದ 2-3 ತಿಂಗಳಿನಿಂದ ಸಂಸ್ಥೆ ಬಡ್ಡಿ ನೀಡಿರಲಿಲ್ಲ. ಈ ನಡುವೆ ಜೂನ್ 10 ರಂದು ಸಂಪೂರ್ಣ ಹಣ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಜೂ.9 ರಂದು ಮಾಲೀಕ ಮನ್ಸೂರ್ ಅಲಿ ಖಾನ್ ಆತ್ಮಹತ್ಯೆಯ ವಿಡಿಯೋ ವೈರಲ್ ಆದ ಬಳಿಕ ಮಳಿಗೆಯ ಮುಂದೆ ಜನರು ಜಮಾಯಿಸಿ ಹೂಡಿದ್ದ ಹಣವನ್ನು ಕೇಳಲು ಆರಂಭಿಸಿದರು.

  • ದುಬೈಗೆ ಓಡೋಗಿದ್ದ ಮನ್ಸೂರ್ ವಾಪಸ್- ದೆಹಲಿಗೆ ಬರುತ್ತಿದ್ದಂತೆ ಲಾಕ್ ಮಾಡಿದ ಖಾಕಿಪಡೆ

    ದುಬೈಗೆ ಓಡೋಗಿದ್ದ ಮನ್ಸೂರ್ ವಾಪಸ್- ದೆಹಲಿಗೆ ಬರುತ್ತಿದ್ದಂತೆ ಲಾಕ್ ಮಾಡಿದ ಖಾಕಿಪಡೆ

    ಬೆಂಗಳೂರು: ಐಎಂಎ ಸಾವಿರಾರು ಕೋಟಿ ರೂಪಾಯಿ ವಂಚನೆ ಕೇಸ್ ಸಂಬಂಧ ದುಬೈಗೆ ಓಡಿ ಹೋಗಿದ್ದ ವಂಚಕ ಮನ್ಸೂರ್ ಖಾನ್‍ನನ್ನು ಬಂಧಿಸಲಾಗಿದೆ.

    ಮಧ್ಯರಾತ್ರಿ 1.30ರ ಸುಮಾರಿಗೆ ದುಬೈನಿಂದ ದೆಹಲಿಗೆ ಬಂದಿಳಿದ ಮನ್ಸೂರ್ ಖಾನ್‍ನನ್ನು ಎಸ್‍ಐಟಿ(ವಿಶೇಷ ತನಿಖಾ ತಂಡ) ಪೊಲೀಸರು ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲೇ ಬಂಧಿಸಿದ್ದಾರೆ. ಇಂದು ಆತನನ್ನು ಎಸ್‍ಐಟಿ ಪೊಲೀಸರು ಬೆಂಗಳೂರಿಗೆ ಕರೆತರಲಿದ್ದಾರೆ.

    ಅನಾರೋಗ್ಯದ ಕಾರಣ ನೀಡಿ ಭಾರತಕ್ಕೆ ಮರಳುತ್ತಿದ್ದೇನೆ ತಮಗೆ ಜೀವ ಭಯ ಇದ್ದು, ಪೊಲೀಸರು ರಕ್ಷಣೆ ಕೊಡಬೇಕು ಎಂದು ಕೋರಿ ಸೋಮವಾರ ವಿಡಿಯೋ ಒಂದನ್ನು ರಿಲೀಸ್ ಮಾಡಿದ್ದನು. ಆದರೆ 24 ಗಂಟೆಗಳಲ್ಲಿ ಮನ್ಸೂರ್ ವಾಪಸ್ ಬರಲಿಲ್ಲ. ರಾತ್ರಿ ದೆಹಲಿಗೆ ಬಂದು ಎಸ್‍ಐಟಿ ಖೆಡ್ಡಾಗೆ ಬಿದ್ದಿದ್ದಾನೆ.

    ಸುಮಾರು 60 ಸಾವಿರ ಮಂದಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಜೂನ್ 8 ರಂದು ರಾತ್ರೋರಾತ್ರಿ ದುಬೈಗೆ ಎಸ್ಕೇಪ್ ಆಗಿದ್ದನು. ವಿಷಯ ತಿಳಿದ ಹೂಡಿಕೆದಾರರು ಎಸ್‍ಐಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು. ಮನ್ಸೂರ್ ಖಾನ್ ಬಂಧನ ಬೆನ್ನಲ್ಲೇ ಹಲವರಿಗೆ ನಡುಕ ಶುರುವಾಗಿದೆ. ಈ ನಡುವೆ ಬನ್ನೇರುಘಟ್ಟ ರಸ್ತೆಯಲ್ಲಿ ಶಾಲೆಯೊಂದನ್ನು ನಡೆಸುತ್ತಿದ್ದ ಮೌಲ್ವಿ ಉಮರ್ ಬಶೀರ್ ಎಂಬವರನ್ನು ಎಸ್‍ಐಟಿ ಬಂಧಿಸಿದೆ.

    ಐಎಂಎನಲ್ಲಿ ಹೂಡಿಕೆ ಮಾಡುವಂತೆ ಮೌಲ್ವಿ ಬಶೀರ್ ಮಸೀದಿಗಳಲ್ಲಿ ಪ್ರಚಾರ ಮಾಡಿದ್ದನು. ಇದಕ್ಕೆ ಪ್ರತಿಯಾಗಿ ಐಎಂಎ ಮಾಲೀಕನಿಂದ ಬಶೀರ್, 60 ಲಕ್ಷ ಹಣ ಮತ್ತು 15 ಲಕ್ಷ ಮೌಲ್ಯದ ವಾಹನವೊಂದನ್ನು ಪಡೆದಿದ್ದ ಎನ್ನಲಾಗಿದೆ.

    ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಎಸ್‍ಐಟಿಗೆ ವಹಿಸಿತ್ತು. ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಮನ್ಸೂರ್ ವಿರುದ್ಧ 40 ಸಾವಿರ ದೂರು ದಾಖಲಾಗಿತ್ತು. ಹೀಗಾಗಿ ಮನ್ಸೂರ್‍ಗಾಗಿ ಎಸ್‍ಐಟಿ ಮತ್ತು ಇಡಿ ತಂಡ ಕಾಯುತ್ತಿದ್ದು, ಇದೀಗ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

  • ಪೊಲೀಸರು ರಕ್ಷಣೆ ಕೊಟ್ಟರೆ 24 ಗಂಟೆಯೊಳಗೆ ಭಾರತಕ್ಕೆ ಬರುತ್ತೇನೆ : ಮನ್ಸೂರ್ ಖಾನ್

    ಪೊಲೀಸರು ರಕ್ಷಣೆ ಕೊಟ್ಟರೆ 24 ಗಂಟೆಯೊಳಗೆ ಭಾರತಕ್ಕೆ ಬರುತ್ತೇನೆ : ಮನ್ಸೂರ್ ಖಾನ್

    – ಭಾರತದಿಂದಲೇ ವಿಡಿಯೋ ಅಪ್ಲೋಡ್

    ಬೆಂಗಳೂರು: ಶೀಘ್ರದಲ್ಲೇ ನಾನು ಭಾರತಕ್ಕೆ ಮರಳಲು ಪ್ರಯತ್ನಿಸುತ್ತಿದ್ದೇನೆ. ಆದರೆ ನನ್ನ ಆರೋಗ್ಯದ ಸಮಸ್ಯೆ (ಕಾರ್ಡಿಯಾಕ್, ಸಕ್ಕರೆ ಕಾಯಿಲೆ) ಕಾರಣ 1 ತಿಂಗಳಿಂದ ಬೆಡ್ ರೆಸ್ಟ್ ನಲ್ಲಿದ್ದೇನೆ. ಈಗ ಹುಷಾರಾಗಿದ್ದು, ಪೊಲೀಸರು ರಕ್ಷಣೆ ನೀಡಿದರೆ 24 ಗಂಟೆಯ ಒಳಗಡೆ ಭಾರತಕ್ಕೆ ಬರುತ್ತೇನೆ ಎಂದು ಐಎಂಎ ವಂಚಕ ಮನ್ಸೂರ್ ಖಾನ್ ಹೇಳಿದ್ದಾನೆ.

    ವಿಡಿಯೋ ಬಿಡುಗಡೆ ಮಾಡಿ ಮಾತನಾಡಿರುವ ಮನ್ಸೂರ್, ಕಳೆದ ವಿಡಿಯೋದಲ್ಲಿ ನಾನು ಆದಷ್ಟು ಬೇಗ ವಾಪಸ್ ಬರುವುದಾಗಿ ಹೇಳಿದ್ದೆ. ಆದರೆ ಹೃದಯದ ಆರೋಗ್ಯದ ಸಮಸ್ಯೆ ಇರುವ ಹಿನ್ನೆಲೆಯಲ್ಲಿ ಬರಲು ಆಗುತ್ತಿಲ್ಲ. ಭಾರತೀಯ ನ್ಯಾಯಾಂಗದ ಮೇಲೆ ನನಗೆ ನಂಬಿಕೆ ಇದೆ. ದೇಶಕ್ಕೆ ಮರಳಿ ಬರಲು ಸೂಕ್ತ ಭದ್ರತೆ ಪಡೆಯಲು ಯತ್ನಿಸುತ್ತಿದ್ದೇನೆ. ಭದ್ರತೆ ನೀಡುತ್ತಾರೆ ಎಂಬ ವಿಶ್ವಾಸವಿದೆ. ನಾನು ಭಾರತ ಬಿಟ್ಟು ಹೋಗಿದ್ದು, ನನ್ನ ದೊಡ್ಡ ತಪ್ಪಾಗಿದ್ದು, ನಾನು ದೇಶ ಬಿಟ್ಟು ಈ ರೀತಿ ಬರಲು ರಾಜಕಾರಣಿಗಳ ಒತ್ತಡ ಕಾರಣವಾಗಿತ್ತು ಎಂದಿದ್ದಾನೆ.

    ಬಹು ಸಮಯದಿಂದ ಅನಾರೋಗ್ಯದ ಕಾರಣ ಬೆಡ್ ರೆಸ್ಟ್ ನಲ್ಲಿದ್ದೇನೆ, ಈಗ ನಾನು ಹುಷಾರಿರುವ ಕಾರಣ ವಿಡಿಯೋ ಮಾಡುತ್ತಿದ್ದೇನೆ. ನಾನು ದೇಶ ಬಿಟ್ಟು ಬಂದಿದ್ದು, ತಪ್ಪು, ಈಗಲೂ ನನಗೆ ನನ್ನ ಫ್ಯಾಮಿಲಿ ಎಲ್ಲಿದೆ? ಹೇಗಿದ್ದಾರೆ ಗೊತ್ತಿಲ್ಲ. ನಾನು ಒಂದಷ್ಟು ಲಿಸ್ಟ್ ಮಾಡಿದ್ದು, ಯಾರಿಂದ ಹಣ ಹಿಂಪಡೆಯಬಹುದು ಮಾಡಬಹುದು ಎಂಬುವುದು ಪಟ್ಟಿಯಲ್ಲಿದೆ. ಅಲ್ಲದೇ ಪ್ರಕರಣದ ತನಿಖೆಗೆ ಬೇಕಾದ ಎಲ್ಲಾ ದಾಖಲೆಗಳನ್ನು ನಾನು ಅಧಿಕಾರಿಗಳಿಗೆ ಕೊಡುತ್ತೇನೆ. ನಾನು ಮತ್ತೆ ವಾಪಸ್ ಬರುತ್ತಿರುವುದು ಹಣ ವಾಪಾಸ್ ಕೊಡಲಿಕ್ಕೆ ಎಂದು ಅಳುತ್ತಾ ಹೇಳಿದ್ದಾನೆ.

    ಭಾರತದಿಂದಲೇ ವಿಡಿಯೋ ಅಪ್ಲೋಡ್: ಸದ್ಯ ಬಿಡುಗಡೆಯಾಗಿರುವ ವಿಡಿಯೋ ಭಾರತದಿಂದಲೇ ಅಪ್ ಲೋಡ್ ಆಗಿದೆ ಎನ್ನುವುದರ ಬಗ್ಗೆ ಎಸ್‍ಐಟಿ ಪೊಲೀಸರು ತನಿಖೆ ನಡೆಸಿದ್ದಾರೆ. ಆಪ್ತರಿಗೆ ವಿಡಿಯೋ ಕಳುಹಿಸಿ ಅಪ್ಲೋಡ್ ಮಾಡಿರುವ ಸಾಧ್ಯತೆ ಇದ್ದು, ಯಾರ ಮುಖಾಂತರ ವಿಡಿಯೋ ಬಿಡುಗಡೆ ಆಗಿದೆ ಎಂಬ ಬಗ್ಗೆ ತನಿಖೆ ಆರಂಭವಾಗಿದೆ. ಮನ್ಸೂರ್ ಸುಖಾ ಸುಮ್ಮನೆ ವಿಡಿಯೋ ಬಿಡುಗಡೆ ಮಾಡಿದ್ದು, ಭಾರತಕ್ಕೆ ಮರಳುವ ನಾಟಕ ಮಾಡುತ್ತಿದ್ದಾನೆ. ಈ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ಎಂದು ಎಸ್‍ಐಟಿ ಮೂಲಗಳು ತಿಳಿಸಿವೆ.

  • ಮನ್ಸೂರ್ ಖಾನ್ ಭಾರತಕ್ಕೆ ಹಿಂದಿರುಗಲೆಂದು ಪ್ರಾರ್ಥಿಸಿ: ಹಜ್ ಯಾತ್ರಿಕರಿಗೆ ಜಮೀರ್ ಮನವಿ

    ಮನ್ಸೂರ್ ಖಾನ್ ಭಾರತಕ್ಕೆ ಹಿಂದಿರುಗಲೆಂದು ಪ್ರಾರ್ಥಿಸಿ: ಹಜ್ ಯಾತ್ರಿಕರಿಗೆ ಜಮೀರ್ ಮನವಿ

    ಬೆಂಗಳೂರು: ಐಎಂಎ ಪ್ರಕರಣ ಆರೋಪಿ ಮನ್ಸೂರ್ ಖಾನ್ ಭಾರತಕ್ಕೆ ಹಿಂದಿರುಗಲಿ ಅಂತ ಪ್ರಾರ್ಥಿಸಿ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಹಜ್ ಯಾತ್ರಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ನಾಗವಾರದ ತಿರುಮೇನಹಳ್ಳಿಯ ಹಜ್ ಭವನದಲ್ಲಿ ನಡೆದ ಕಾರ್ಯಕ್ರಮಕ್ಕೆ ಸಚಿವರು ಆಗಮಿಸಿದ್ದರು. ಮಾಜಿ ಸಚಿವ ರೋಷನ್ ಬೇಗ್ ಅವರು ಕೂಡ ಆಗಮಿಸಿ, ಕಾರ್ಯಕ್ರಮ ಉದ್ಘಾಟನೆ ಮಾಡಿದರು.

    ಈ ವೇಳೆ ಮಾತನಾಡಿದ ಜಮೀರ್ ಅಹ್ಮದ್ ಖಾನ್ ಅವರು, ಮನ್ಸೂರ್ ಖಾನ್ ನೀವು ಭಾರತಕ್ಕೆ ಬನ್ನಿ. ನಿಮ್ಮ ಜೊತೆ ಸರ್ಕಾರವಿದೆ. ನಾನು ಕೂಡ ನಿಮ್ಮೊಂದಿಗೆ ಇದ್ದೇನೆ. ಅದು ಬಡವರ ಹಣ. ಬಡವರು ಕಷ್ಟು ಪಟ್ಟು ಕೂಡಿಟ್ಟ ಹಣವನ್ನು ನಿಮಗೆ ಕೊಟ್ಟಿದ್ದಾರೆ. ಕೂಡಲೇ ನೀವು ಭಾರತಕ್ಕೆ ಬನ್ನಿ ಎಂದು ಕರೆ ನೀಡಿದರು. ಕಾರ್ಯಕ್ರಮದ ಬಳಿಕ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಮಾಜಿ ಸಚಿವ ರೋಷನ್ ಬೇಗ್ ಅವರು ಮಾಧ್ಯಮಗಳೊಂದಿಗೆ ಮಾತನಾಡಲು ನಿರಾಕರಿಸಿದರು.

    ಈ ಮಧ್ಯೆ ಮಾಧ್ಯಮಗಳ ವಿರುದ್ಧ ಕಿಡಿಕಾರಿದ ಸಚಿವರು, ಕೇವಲ ರಾಜಕೀಯ ಸುದ್ದಿಗಳನ್ನು ತೋರಿಸುವುದಲ್ಲ ಹಜ್ ಭವನದ ಸಮಸ್ಯೆ, ಭವನಗಳ ಬಗ್ಗೆಯೂ ಸುದ್ದಿ ಮಾಡಿ. ಎಲ್ಲೆಲ್ಲಿ ಸಮಸ್ಯೆ ಇದೆ ಅದನ್ನು ತೋರಿಸಿ. ಅದು ಬಿಟ್ಟು ಕೇವಲ ರಾಜಕೀಯ ಸುದ್ದಿನೇ ತೋರಿಸಬೇಡಿ ಎಂದ ಅವರು, ಸಮ್ಮಿಶ್ರ ಸರ್ಕಾರಕ್ಕೆ ಏನು ಆಗಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  • ಐಎಂಎ ವಂಚನೆ ಪ್ರಕರಣ: ಕಂದಾಯ ಇಲಾಖೆ ಎಸಿ ಎಲ್.ಸಿ.ನಾಗರಾಜ್ ಅರೆಸ್ಟ್

    ಐಎಂಎ ವಂಚನೆ ಪ್ರಕರಣ: ಕಂದಾಯ ಇಲಾಖೆ ಎಸಿ ಎಲ್.ಸಿ.ನಾಗರಾಜ್ ಅರೆಸ್ಟ್

    ಬೆಂಗಳೂರು: ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆಯ ಉತ್ತರ ವಿಭಾಗದ ಸಹಾಯಕ ಆಯುಕ್ತರನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

    ಎ.ಸಿ.ನಾಗರಾಜ್ ಬಂಧಿಯ ಅಧಿಕಾರಿ. ಐಎಂಎ ಪರ ಎನ್‍ಓಸಿ ನೀಡಲು 4.5 ಕೋಟಿ ಲಂಚ ಪಡೆದಿದ್ದ ಆರೋಪದ ಮೇಲೆ ಸಹಾಯಕ ಆಯುಕ್ತ ಎ.ಸಿ.ನಾಗರಾಜ್ ಬಂಧನವಾಗಿದೆ. ತನಿಖೆ ನಡೆಸುವಾಗಲೂ ತಪ್ಪು ಮಾಹಿತಿ ನೀಡಿ ನಾಗರಾಜ್ ಸರ್ಕಾರಕ್ಕೆ ವಂಚನೆ ಮಾಡಿರುವ ಮಾಹಿತಿ ಲಭ್ಯವಾಗಿದೆ.

    ಸರ್ಕಾರದಿಂದ ಎನ್‍ಓಸಿ ನೀಡುವ ಮೊದಲು 10 ಕೋಟಿ ರೂ. ಕೇಳಿದ್ದು, ಸಚಿವರೊಬ್ಬರ ಆದೇಶದ ಮೇರೆಗೆ ಹಣ ಸ್ವೀಕರಿಸಿದ್ದ ನಾಗರಾಜ್ ಕುರಿತು ಮನ್ಸೂರ್ ಖಾನ್ ಬಿಡುಗಡೆ ಮಾಡಿದ್ದ ವಿಡಿಯೋದಲ್ಲಿ ಸಹ ಹೇಳಿಕೊಂಡಿದ್ದನು. ಹಣ ನೀಡಲು ತಡವಾಗಿತ್ತು ಎಂದು ವಿಡಿಯೋದಲ್ಲಿ ಮನ್ಸೂರ್ ಖಾನ್ ಹೇಳಿದ್ದಾನೆ.

    ಐಎಂಎ ವಂಚನೆ ಪ್ರಕರಣದ ಕರಿತು ಎಸ್‍ಐಟಿ ತಂಡ ಈಗಾಗಲೇ ವಜ್ರ, ಚಿನ್ನ, ಬೆಳ್ಳಿ, ಸೇರಿದಂತೆ ಐಎಂಎನ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಐಎಂಎ ಒಡೆತನದ ಫ್ರಂಟ್ ಲೈನ್ ಫಾರ್ಮಸಿಯ ನೀಲಸಂದ್ರ ಹಾಗೂ ವಿಜಯನಗರದ ಔಷಧಿ ಮಳಿಗೆಗಳ ಮೆಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 60 ಸಾವಿರ ನಗದು ಹಾಗೂ 40 ಲಕ್ಷ ರೂ. ಮೌಲ್ಯದ ಔಷಧಿ ಹಾಗೂ ವಿದ್ಯುನ್ಮಾನ ಉಪಕರಣಗಳು ಪತ್ತೆಯಾಗಿದ್ದು, ವಶಪಡಿಸಿಕೊಳ್ಳಲಾಗಿದೆ.