Tag: Mansore

  • ‘ದೂರ ತೀರ ಯಾನ’ ಚಿತ್ರದಲ್ಲಿ ಶ್ರುತಿ ಹರಿಹರನ್ ಗೆಸ್ಟ್

    ‘ದೂರ ತೀರ ಯಾನ’ ಚಿತ್ರದಲ್ಲಿ ಶ್ರುತಿ ಹರಿಹರನ್ ಗೆಸ್ಟ್

    ಮಂಸೋರೆ (MansoRe) ನಿರ್ದೇಶಿಸಿರುವ ‘ದೂರ ತೀರ ಯಾನ’ (Doora Theera Yaana) ಸಿನೆಮಾ ಇದೇ ಜುಲೈ 11 ರಂದು ರಾಜ್ಯದಾದ್ಯಂತ ತೆರೆಕಾಣುತ್ತಿದೆ. ಈಗಾಗಲೇ ಬಿಡುಗಡೆ ಆಗಿರುವ ಸಿನೆಮಾದ ಎರಡು ಹಾಡುಗಳು ಜನರ ಮನ್ನಣೆ ಗಳಿಸುತ್ತಿವೆ. ಸಿನೆಮಾ ಆರಂಭದಿಂದ ಇಲ್ಲಿಯವರೆಗೂ ನಾಯಕಿ ಮತ್ತು ನಾಯಕನ ಪಾತ್ರಗಳನ್ನು ಹೊರತುಪಡಿಸಿ ಉಳಿದ ತಾರಾಗಣದ ಪರಿಚಯ ಮಾಡಿಸದೇ ಬಂದಿದ್ದ ಸಿನೆಮಾ ತಂಡ ಈಗ ಉಳಿದ ಪಾತ್ರಗಳ ಪರಿಚಯ ಆರಂಭಿಸಿದ್ದಾರೆ. ಅದರಲ್ಲಿ ಮೊದಲ ಪಾತ್ರ ಗೌರಿ. ಈ ಪಾತ್ರದಲ್ಲಿ ನಟಿಸಿರುವವರು ಕನ್ನಡದ ಖ್ಯಾತ ನಟಿ ಶೃತಿ ಹರಿಹರನ್.

    ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಮೈಲಿಗಲ್ಲು ಸ್ಥಾಪಿಸಿದ ಸಿನೆಮಾ “ನಾತಿಚರಾಮಿ”. ಮಂಸೋರೆ ನಿರ್ದೇಶನ ಮಾಡಿದ್ದ ಈ ಸಿನೆಮಾ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಒಂದೇ ಸಿನೆಮಾಗೆ ಐದು ರಾಷ್ಟ್ರ ಪ್ರಶಸ್ತಿಗಳನ್ನು ಪಡೆಯುವ ಮೂಲಕ ಇತಿಹಾಸವನ್ನು ಸೃಷ್ಟಿಸಿತ್ತು. ಇದು ಕೇವಲ ಪ್ರಶಸ್ತಿಯ ಕಾರಣಕಷ್ಟೇ ಅಲ್ಲದೇ ಈ ಸಿನೆಮಾದ ಕಥಾ ವಸ್ತುವೂ ಹೆಚ್ಚು ಚರ್ಚಿತವಾಗಿ, ನೆಟ್ ಫ್ಲಿಕ್ಸ್ ಮೂಲಕ ದೇಶ ವಿದೇಶದ ಸಿನಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಈ ಸಿನೆಮಾದಲ್ಲಿ ಗೌರಿ ಪಾತ್ರ ಮಾಡಿದ್ದ ಶೃತಿ ಹರಿಹರನ್ (Sruthi Hariharan) ಮತ್ತೆ ಮಂಸೋರೆ ಅವರ ಹೊಸ ಸಿನೆಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ . ಅವರ ಪಾತ್ರ ಪರಿಚಯದ ವಿಡಿಯೋ ಒಂದನ್ನು ಚಿತ್ರತಂಡ ಬಿಡುಗಡೆಗೊಳಿಸಿದೆ.

    ನಾತಿಚರಾಮಿಯ ದಿಟ್ಟ ಮಹಿಳೆ ‘ಗೌರಿ’ ಕನ್ನಡ ಚಿತ್ರರಂಗದಲ್ಲೇ ಒಂದು ಐಕಾನಿಕ್ ಪಾತ್ರ . ಕನ್ನಡ ಸಿನೆಮಾಗಳಲ್ಲಿ ನಿರ್ದೇಶಕರು ತಮ್ಮದೇ ಸಿನೆಮಾದ ಪಾತ್ರಗಳನ್ನು ಮತ್ತೊಂದು ಸಿನೆಮಾದಲ್ಲಿ ತರುವುದರ ಮೂಲಕ ತಮ್ಮದೇ ಆದ ಸಿನೆಮಾ ಪ್ರಪಂಚವನ್ನು ಸೃಷ್ಟಿಸಿರುವುದು ಅಪರೂಪ. ಅಂತಹ ಅಪರೂಪದ ಜಗತ್ತನ್ನು ಮಂಸೋರೆಯವರು ತಮ್ಮ ದೂರ ತೀರ ಯಾನದಲ್ಲಿ ಸೃಷ್ಟಿರುವ ಪ್ರಯತ್ನವನ್ನು ಈ ವಿಡಿಯೋದಲ್ಲಿ ಕಾಣಬಹುದು. ಇಂತಹ ಅಚ್ಚರಿ ನೀಡಿರುವ ಮಂಸೋರೆ ಮತ್ತು ಗೌರಿ ಕಾಂಬಿನೇಶನ್ ತೆರೆಯ ಮೇಲೆ ಯಾವ ರೀತಿ ಮ್ಯಾಜಿಕ್ ಮಾಡಲಿದ್ದಾರೆ ಎಂಬ ಕುತೂಹಲ ಅವರ ಪ್ರೇಕ್ಷಕ ವರ್ಗದಲ್ಲಿ ದೂರ ತೀರ ಯಾನ ಸಿನೆಮಾದ ಬಗ್ಗೆ ಕುತೂಹಲ ಹೆಚ್ಚಿಸುವಂತೆ ಮಾಡಿದೆ.

    ದೂರ ತೀರ ಯಾನ ಸಿನೆಮಾ ಸೆನ್ಸಾರ್ ಪೂರ್ಣಗೊಳಿಸಿ ಯು/ಎ ಪ್ರಮಾಣ ಪತ್ರವನ್ನು ಪಡೆದಿದ್ದು ಪ್ರಚಾರ ಕಾರ್ಯಗಳಲ್ಲಿ ನಿರತವಾಗಿದೆ, ಕನ್ನಡದ ಖ್ಯಾತ ನಟರಾದ ಕಿಚ್ಚ ಸುದೀಪ್ ರವರು ಜೂನ್ 28 ಶನಿವಾರ, ಬೆಳಗ್ಗೆ 11 ಗಂಟೆಗೆ ಡಿಜಿಟಲ್ ಮೂಲಕ ಸಿನೆಮಾದ ಟ್ರೈಲರ್ ಅನಾವರಣಗೊಳಿಸಲಿದ್ದಾರೆ.

  • ಮೊದಲ ಹಂತದ ಶೂಟಿಂಗ್ ಮುಗಿಸಿದ ಮಂಸೋರೆ

    ಮೊದಲ ಹಂತದ ಶೂಟಿಂಗ್ ಮುಗಿಸಿದ ಮಂಸೋರೆ

    ಡಿ ಕ್ರಿಯೇಷನ್ಸ್ ಬ್ಯಾನರಿನ ಅಡಿಯಲ್ಲಿ ದೇವರಾಜ್ ಆರ್ ನಿರ್ಮಾಣದ ‘ದೂರ ತೀರ ಯಾನ’ (Doora Teera Yaana) ಸಿನೆಮಾದ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ದ್ವಿತೀಯ ಹಂತದ ಚಿತ್ರೀಕರಣ ಸಧ್ಯದಲ್ಲೇ ಆರಂಭವಾಗಲಿದೆ.

    ಮಂಸೋರೆ (Mansore) ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಹೊಸತಲೆಮಾರಿನ ಸಂಗೀತಮಯ ಪ್ರೇಮಕಥೆಯ ಈ ಸಿನೆಮಾದ ಮುಖ್ಯಪಾತ್ರದಲ್ಲಿ ವಿಜಯ್ ಕೃಷ್ಣ ಹಾಗೂ ಪ್ರಿಯಾಂಕ ಕುಮಾರ್ ನಟಿಸುತ್ತಿದ್ದು, ಶೇಖರ್ ಚಂದ್ರು ಅವರ ಛಾಯಾಗ್ರಹಣ, ಬಕ್ಕೇಶ್ ಮತ್ತು ಕಾರ್ತಿಕ್ ಸಂಗೀತ, ಜಯಂತ್ ಕಾಯ್ಕಿಣಿ, ಕವಿರಾಜ್, ಪ್ರಮೋದ್ ಮರವಂತೆ ಅವರ ಗೀತ ಸಾಹಿತ್ಯ, ನಾಗೇಂದ್ರ ಕೆ ಉಜ್ಜನಿ ಸಂಕಲನ, ಸರವಣ ಅವರ ಕಲಾ ನಿರ್ದೇಶನ ಹಾಗೂ ವಿವಿಡ್ ಐ ನಿರ್ಮಾಣ ವಿನ್ಯಾಸದ ಹೊಣೆ ಈ ಸಿನೆಮಾಕ್ಕಿದೆ.

     

    ಈ ಸಿನಿಮಾದಲ್ಲಿ ಮುಖ್ಯವಾದ ವಿಶೇಷ ಪಾತ್ರಗಳಲ್ಲಿ ಹಲವರು ಪ್ರಮುಖ ನಟಿ-ನಟರು ನಟಿಸಿದ್ದು ಅವರ ವಿವರಗಳನ್ನು ಸದ್ಯದಲ್ಲೆ ತಿಳಿಸುವುದಾಗಿ ಚಿತ್ರತಂಡ ಹೇಳಿದೆ.

  • ಮಂಸೋರೆ ಹೊಸ ಸಿನಿಮಾ: ‘ದೂರ ತೀರ ಯಾನಕ್ಕೆ’ ಹೊರಟ ನವ ಜೋಡಿ

    ಮಂಸೋರೆ ಹೊಸ ಸಿನಿಮಾ: ‘ದೂರ ತೀರ ಯಾನಕ್ಕೆ’ ಹೊರಟ ನವ ಜೋಡಿ

    ಡಿ.ಕ್ರಿಯೇಷನ್ಸ್ ಮೂಲಕ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ದೇವರಾಜ್ ಆರ್ (Devaraj R) ನಿರ್ಮಾಣದ ಹಾಗೂ ಹರಿವು, ನಾತಿಚರಾಮಿ, ಆಕ್ಟ್ 1978,  19.20.21 ನಂತಹ ಜನಮೆಚ್ಚುಗೆ ಪಡೆದ ಚಿತ್ರಗಳ ನಿರ್ದೇಶಕ ಮಂಸೋರೆ (Mansore) ನಿರ್ದೇಶಿಸುತ್ತಿರುವ ಮುಂದಿನ ಚಿತ್ರ ‘ದೂರ ತೀರ ಯಾನ (Doora Teera Yaana)’. ವಿಜಯ್ ಕೃಷ್ಣ ಹಾಗೂ ಪ್ರಿಯಾಂಕ ಕುಮಾರ್ ಈ ಚಿತ್ರದ ನಾಯಕ – ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೈಟಲ್ ಟೀಸರ್ ಅನಾವರಣ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

    ನನ್ನ ಹಿಂದಿನ ಚಿತ್ರಗಳನ್ನು ನೀವು ನೋಡಿದ್ದೀರಾ. ಅದನ್ನು ಮೀರಿಸುವ ಪ್ರಯತ್ನ “ದೂರ ತೀರ ಯಾನ” ಎಂದು ಮಾತನಾಡಿದ ನಿರ್ದೇಶಕ ಮಂಸೋರೆ, ಈಗ ಪ್ರೇಕ್ಷಕರ ಅಭಿರುಚಿ ಬದಲಾಗಿದೆ. ಅವರ ನಿರೀಕ್ಷೆಗಳು ಸಾಕಷ್ಟಿದೆ. ಹೀಗೆ ನಾವು ಬದಲಾದ ಪರಿಸ್ಥಿತಿಗೆ ಹೊಂದುಕೊಂಡು‌,‌ ಅವರಿಗೆ ಬೇಕಾದ ರೀತಿಯ ಸಿನಿಮಾ ಮಾಡಬೇಕು. ಆ ನಿಟ್ಟಿನಲ್ಲಿ‌ ಈಗ ನಾನು ಮಾಡಲು ಹೊರಟಿರುವ ಸಿನಿಮಾ “ದೂರ ತೀರ ಯಾನ”. ಇದೊಂದು ದಾರಿಯಲ್ಲಿ ಸಾಗುತ್ತಾ ನಡೆಯುವ ಪ್ರೇಮಕಥೆ. ಚಿತ್ರದ ಮೊದಲ ಹತ್ತು ನಿಮಿಷ ಮಾತ್ರ ಬೆಂಗಳೂರಿನಲ್ಲಿ ನಡೆಯುತ್ತದೆ. ಉಳಿದೆಲ್ಲಾ ದಾರಿಯಲ್ಲಿ ಸಾಗುತ್ತದೆ. ಬೆಂಗಳೂರಿನಿಂದ ಗೋವಾಕ್ಕೆ ಹೊರಟ ಹುಡುಗ – ಹುಡುಗಿ ಹೊಸರೀತಿಯ ಪ್ರೀತಿಯನ್ನು ಕಂಡುಕೊಳ್ಳುವ ಕಥೆಯೂ ಹೌದು. ಈಗಾಗಲೇ ಹಿಂದಿ ಸೇರಿದಂತೆ ಅನೇಕ ಭಾಷೆಗಳ ವೆಬ್ ಸಿರೀಸ್ ಗಳಲ್ಲಿ ಹಾಗೂ ನನ್ನ ನಿರ್ದೇಶನದ ” ಆಕ್ಟ್ 1978″ ಚಿತ್ರದಲ್ಲಿ ಸಣ್ಣ ಪಾತ್ರದ ಮೂಲಕ ಗುರುತಿಸಿಕೊಂಡಿದ್ದ ನನ್ನ ಕಾಲೇಜು ಗೆಳೆಯ ವಿಜಯ್ ಕೃಷ್ಣ ನಾಯಕನಾಗಿ, “ರುದ್ರ ಗರುಡ ಪುರಾಣ” ಚಿತ್ರದ ಖ್ಯಾತಿಯ ಪ್ರಿಯಾಂಕ ಕುಮಾರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಬೇರೆ ಪಾತ್ರಗಳು ಇರುತ್ತದೆ. ಮುಂದೆ ಅದರ ಬಗ್ಗೆ ತಿಳಿಸುತ್ತೇನೆ. “ದೂರ ತೀರ ಯಾನ” ದಲ್ಲಿ ಬಕೇಶ್ ಹಾಗೂ ಕಾರ್ತಿಕ್ ಸಂಗೀತ ಸಂಯೋಜಿಸುತ್ತಿರುವ ಆರು ಹಾಡುಗಳಿರುತ್ತದೆ‌. ಶೇಖರ್ ಚಂದ್ರ ಛಾಯಾಗ್ರಹಣ, ನಾಗೇಂದ್ರ ಕೆ ಉಜ್ಜನಿ ಸಂಕಲನವಿರುವ ಈ ಚಿತ್ರಕ್ಕೆ ಚೇತನ ತೀರ್ಥಹಳ್ಳಿ ಸಂಭಾಷಣೆ ಬರೆಯುತ್ತಿದ್ದಾರೆ. ಸೆಪ್ಟೆಂಬರ್ ನಿಂದ ಚಿತ್ರೀಕರಣ ಆರಂಭವಾಗಲಿದೆ.  ಟೈಟಲ್ ಟೀಸರ್ ಗೆ ಡಾಲಿ ಧನಂಜಯ ಧ್ವನಿ ನೀಡಿದ್ದಾರೆ ಎಂದು ತಿಳಿಸಿದರು.

    ತುಂಬಾ ದಿನಗಳಿಂದ ಒಳ್ಳೆಯ ಪಾತ್ರಕ್ಕಾಗಿ ಕಾಯುತ್ತಿದ್ದೆ. ಈಗ ಕಾಲ ಕೂಡಿ ಬಂದಿದೆ. ಗೆಳೆಯ ಮಂಸೋರೆ ಒಂದೊಳ್ಳೆ ಕಥೆ ಮಾಡಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದರು ನಾಯಕ ವಿಜಯಕೃಷ್ಣ. “ರುದ್ರ ಗರುಡ ಪುರಾಣ” ದ ನಂತರ ಒಳ್ಳೆಯ ಪಾತ್ರಕ್ಕಾಗಿ ಕಾಯುತ್ತಿದ್ದೆ. ಈ ಚಿತ್ರದಲ್ಲಿ ಆ ಪಾತ್ರ ಸಿಕ್ಕಿದೆ ಎಂದರು ನಾಯಕಿ ಪ್ರಿಯಾಂಕ ಕುಮಾರ್.

    ನಿರ್ಮಾಪಕ ದೇವರಾಜ್, ಸಂಗೀತ ನಿರ್ದೇಶಕರಾದ ಬಕೇಶ್ – ಕಾರ್ತಿಕ್, ಛಾಯಾಗ್ರಾಹಕ ಶೇಖರ್ ಚಂದ್ರ ಮುಂತಾದ ಚಿತ್ರತಂಡದ ಸದಸ್ಯರು ಹಾಗೂ ಸತ್ಯ ಹೆಗಡೆ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

  • ಜರ್ಮನ್ ಚಿತ್ರೋತ್ಸವದಲ್ಲಿ ಮಂಸೋರೆ ನಿರ್ದೇಶನ 19.20.21 ಸಿನಿಮಾ

    ಜರ್ಮನ್ ಚಿತ್ರೋತ್ಸವದಲ್ಲಿ ಮಂಸೋರೆ ನಿರ್ದೇಶನ 19.20.21 ಸಿನಿಮಾ

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ (Mansore) ಅವರ ’19.20.21’ ಸಿನಿಮಾ ಇಂಡೋಜರ್ಮನ್ ಫಿಲ್ಮ್ ವೀಕ್ 12ನೇ ಆವೃತ್ತಿಯ ಚಲನಚಿತ್ರೋತ್ಸವಕ್ಕೆ (Chirotsava) ಆಗಿಯಾಗಿದೆ. ಇದೇ ತಿಂಗಳ ಮೇ 29 ರಿಂದ ಜೂನ್ 07ನೇ ತಾರೀಖಿನವರೆಗೆ ಜರ್ಮನಿಯ (German) ಬರ್ಲಿನ್‌ನಲ್ಲಿರುವ ಐತಿಹಾಸಿಕ ಬ್ಯಾಬಿಲೋನ್ ಥಿಯೇಟರ್‌ನಲ್ಲಿ ಈ ಚಿತ್ರೋತ್ಸವ ನಡೆಯಲಿದೆ. ಈ ಚಿತ್ರೋತ್ಸವದಲ್ಲಿ ‘19.20.21’ ಸಿನೆಮಾ ಪ್ರದರ್ಶನವಾಗಲಿದೆ.

    ಇದು ನೈಜ ಘಟನೆ ಆಧರಿಸಿದ ಸಿನಿಮಾವಾಗಿದ್ದು, ಕರಾವಳಿಯಲ್ಲಿ ಎರಡು ದಶಕಗಳ ಕಾಲ ಒಂದು ಸಮುದಾಯ ಅನುಭವಿಸಿದ ನೋವು, ಆ ನೋವಿನ ವಿರುದ್ಧ ನಡೆಸಿದ ಹೋರಾಟ ಈ ಸಿನಿಮಾ ಮಾಡಲು ಸ್ಪೂರ್ತಿಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಕಳೆದ ಒಂಭತ್ತು ವರ್ಷದಿಂದ ಅಧ್ಯಯನ ಮಾಡಿ ಮಾಹಿತಿ ಕಲೆ ಸಿನಿಮಾ ಮಾಡಿದ್ದಾರೆ ನಿರ್ದೇಶಕರು. 2021ರಲ್ಲಿ ಘಟನೆಗೆ ಸಂಬಂಧಿಸಿದ ತೀರ್ಪು ಬಂದ ಮೇಲೆ ಸಿನಿಮಾ ಮಾಡಲು ನಿರ್ಧರಿಸಿದ್ದ ಟೀಮ್, ಈ ಘಟನೆಗೆ ಸಂಬಂಧಿಸಿದ ಮಾಹಿತಿ ಕಲೆ ಹಾಕಿ ಸ್ಕ್ರಿಪ್ಟ್ ಮಾಡಿದ್ದಾರೆ. ಸಮುದಾಯದ ಒಬ್ಬ ಹುಡುಗನ ಹೋರಾಟದ ಕಥೆ ಈ ಸಿನಿಮಾದ ಜೀವಾಳ. ಇದನ್ನೂ ಓದಿ:ರಸ್ತೆ ಅಪಘಾತ : ಕಿರುತೆರೆ ಖ್ಯಾತ ನಟಿ ವೈಭವಿ ಉಪಾಧ್ಯಾಯ ದುರ್ಮರಣ

    ರಂಗಭೂಮಿ ಕಲಾವಿದರರಾದ ಶೃಂಗ ಬಿ ವಿ (Shringa) ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಬಾಲಾಜಿ ಮನೋಹರ್, ಸಂಪತ್, ಎಂ.ಡಿ ಪಲ್ಲವಿ (MD Pallavi), ಮಹದೇವ್ ಹಡಪತ್, ಉಗ್ರಂ ಸಂದೀಪ್ ಒಳಗೊಂಡ ಪ್ರತಿಭಾನ್ವಿತರ ತಾರಾಗಣ ಚಿತ್ರದಲ್ಲಿದೆ. ಯಲ್ಲಾಪುರ, ಧಾರವಾಡ, ಮಂಗಳೂರು, ಕುಂದಾಪುರ ಸೇರಿದಂತೆ ಹಲವು ಕಡೆ ಚಿತ್ರವನ್ನು ಸೆರೆ ಹಿಡಿಯಲಾಗಿದೆ.

    ಶಿವು ಬಿ ಕೆ ಕುಮಾರ್ ಛಾಯಾಗ್ರಹಣ, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ, ಬಿಂದು ಮಾಲಿನಿ ಸಂಗೀತ ನಿರ್ದೇಶನ, ಸುರೇಶ್ ಆರ್ಮುಗಂ ಸಂಕಲನ, ವೀರೇಂದ್ರ ಮಲ್ಲಣ್ಣ (Virendra Mallanna) ಮತ್ತು ಅವಿನಾಶ್ ಜಿ  ಸಂಭಾಷಣೆ, ಮಂಸೋರೆ ಮತ್ತು ವೀರೇಂದ್ರ ಮಲ್ಲಣ್ಣ ಚಿತ್ರಕತೆ, ಕಿರಣ್ ಕಾವೇರಪ್ಪ ಸಾಹಿತ್ಯ ಚಿತ್ರಕ್ಕಿದೆ. ದೇವರಾಜ್ ಆರ್ (Devaraj.R) 19.20.21 ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

  • ಮಂಸೋರೆ ನಿರ್ದೇಶನದ ‘19.20.21’ ಚಿತ್ರದ ಟ್ರೈಲರ್ ರಿಲೀಸ್

    ಮಂಸೋರೆ ನಿರ್ದೇಶನದ ‘19.20.21’ ಚಿತ್ರದ ಟ್ರೈಲರ್ ರಿಲೀಸ್

    ನಿರ್ದೇಶಕ ಮಂಸೋರೆ ‘19.20.21’ ಸಿನಿಮಾ ಮೂಲಕ ಹೊಸ ಕ್ರಾಂತಿ ಸೃಷ್ಟಿಸಲು ಸಜ್ಜಾಗಿದ್ದಾರೆ. ಟೀಸರ್ ಮೂಲಕ ಬಹಳ ನಿರೀಕ್ಷೆ ಮೂಡಿಸಿರುವ ಈ ಚಿತ್ರ ಇದೀಗ  ಕುತೂಹಲ ಭರಿತ ಟ್ರೈಲರ್ ಬಿಡುಗಡೆ ಮಾಡಿದೆ. ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಹಾಗೂ ನಾದಬ್ರಹ್ಮ ಹಂಸಲೇಖ ಚಿತ್ರದ ಬಹು ನಿರೀಕ್ಷಿತ ಟ್ರೈಲರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

    ನಿರ್ದೇಶಕ ಮಂಸೋರೆ ಮಾತನಾಡಿ ನೈಜ ಘಟನೆ ಆಧರಿಸಿದ ಸಿನಿಮಾವಿದು. ಕರಾವಳಿಯಲ್ಲಿ ಎರಡು ದಶಕಗಳ ಕಾಲ ಒಂದು ಸಮುದಾಯ ಅನುಭವಿಸಿದ ನೋವು, ಆ ನೋವಿನ ವಿರುದ್ಧ ನಡೆಸಿದ ಹೋರಾಟ ಈ ಸಿನಿಮಾ ಮಾಡಲು ಸ್ಪೂರ್ತಿ. ಈ ಘಟನೆಗೆ ಸಂಬಂಧಿಸಿದಂತೆ ಕಳೆದ ಒಂಭತ್ತು ವರ್ಷದಿಂದ ಅಧ್ಯಯನ ಮಾಡಿ ಮಾಹಿತಿ ಕಲೆ ಹಾಕಿದ್ದೇನೆ. 2021ರಲ್ಲಿ ಘಟನೆಗೆ ಸಂಬಂಧಿಸಿದ ತೀರ್ಪು ಬಂದ ಮೇಲೆ ಸಿನಿಮಾ ಮಾಡಲು ನಿರ್ಧರಿಸಿದ್ವಿ. ನಾನು, ವೀರೇಂದ್ರ ಮಲ್ಲಣ್ಣ ಮತ್ತು ಸಂತೋಷ್ ಮೂರು ಜನ ಈ ಘಟನೆಗೆ ಸಂಬಂಧಿಸಿದ ಮಾಹಿತ ಕಲೆ ಹಾಕಿ ಸ್ಕ್ರಿಪ್ಟ್ ಮಾಡಿದ್ದೇವೆ. ಸಮುದಾಯದ ಒಬ್ಬ ಹುಡುಗನ ಹೋರಾಟದ ಕಥೆ ಇದು. ನಿರ್ಮಾಪಕರಾದ ದೇವರಾಜ್ ಹಾಗೂ ಸಹ ನಿರ್ಮಾಪಕರಾದ ಸತ್ಯ ಹೆಗ್ಡೆ ಕಥೆ ಕೇಳಿ ಸಿನಿಮಾ ನಿರ್ಮಾಣಕ್ಕೆ ಒಪ್ಪಿಕೊಂಡ್ರು. ಎಲ್ಲರೂ ಸಿನಿಮಾ ನೋಡಿ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

    ಸಹ ನಿರ್ಮಾಪಕರಾದ ಸತ್ಯ ಹೆಗ್ಡೆ ಮಾತನಾಡಿ ಚಿತ್ರದ ಸ್ಕ್ರಿಪ್ಟ್ ತುಂಬಾ ಇಷ್ಟ ಆಯ್ತು. ರೆಗ್ಯೂಲರ್ ಸಿನಿಮಾ ಬಿಟ್ಟು ನೈಜ ಘಟನೆ ಆಧಾರಿತ ಹಾಗೂ ಪ್ರಯೋಗಾತ್ಮಕ ಸಿನಿಮಾ ಮಾಡೋಣ ಎಂದು ನಿರ್ಧರಿಸಿದ್ವಿ. ಒಂದೊಳ್ಳೆ ಕಥೆಗೆ, ಚಿತ್ರತಂಡಕ್ಕೆ ಸಪೋರ್ಟ್ ಆಗಿ ಇದ್ದೇನೆ ಎಂದು ತಿಳಿಸಿದ್ರು. ಇದನ್ನೂ ಓದಿ:`ಬಿಗ್ ಬಾಸ್’ ಖ್ಯಾತಿಯ ಅಕ್ಷತಾ ಕುಕ್ಕಿ ಮದುವೆ ಡೇಟ್ ಫಿಕ್ಸ್

    ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಮಾತನಾಡಿ ಈ ಚಿತ್ರದ ಟ್ರೇಲರ್ ನೋಡಿದ ಮೇಲೆ ಸಮಾಜಕ್ಕೆ, ಸರ್ಕಾರಕ್ಕೆ, ವ್ಯವಸ್ಥೆಗೆ ಬೇಕಾಗಿರುವ ಸಿನಿಮಾವನ್ನು ಮಂಸೋರೆ ಹಾಗೂ ಅವರ ತಂಡ ನೀಡಿದೆ ಎನ್ನಿಸುತ್ತೆ. ಮಂಸೋರೆ ಅವರ ಬರವಣಿಗೆ, ಮಾಡುವ ಸಿನಿಮಾಗಳು ಸಮಾಜದಲ್ಲಿ ಬದಲಾವಣೆಗೆ ಸಾಕ್ಷಿಯಾಗಿವೆ. ಯುವ ಸಮೂಹಕ್ಕೆ, ಪ್ರಜ್ಞಾವಂತರಿಗೆ ಹಾಗೂ ಸಮಾಜದಲ್ಲಿ ಘಾತುಕ ಶಕ್ತಿಗಳಾಗಿ ಕೆಲಸ ಮಾಡಲು ಹೊರಡುತ್ತಿರುವವರು ಈ ಸಿನಿಮಾ ನೋಡಿದ ಮೇಲೆ ವಾಪಾಸ್ಸು ಸಾಮಾಜಿಕ ನ್ಯಾಯದ ಪರವಾಗಿ ಬರುದ ಸಾಧ್ಯತೆ ತುಂಬಾ ಇದೆ. ಎಲ್ಲರೂ ಸಿನಿಮಾ ನೋಡಿ ಚಿತ್ರತಂಡಕ್ಕೆ  ಬೆಂಬಲ ನೀಡಿ ಎಂದು ತಿಳಿಸಿದ್ರು.

    ನಾದಬ್ರಹ್ಮ ಹಂಸಲೇಖ ಮಾತನಾಡಿ ಸಂವಿಧಾನದ ಹಿನ್ನೆಲೆ ಇಟ್ಟುಕೊಂಡು ಟೈಟಲ್ ಇಟ್ಟಿರೋದು ಭಾರತೀಯ ಚಿತ್ರರಂಗದಲ್ಲಿ ಇದೆ ಮೊದಲು. ಇತ್ತೀಚೆಗೆ ಸಂವಿಧಾನವನ್ನು ರಕ್ಷಿಸಲು ಎಲ್ಲರೂ ಮುಂದೆ ನಿಂತಿದ್ದಾರೆ. ಇದೇ ಸಂದರ್ಭದಲ್ಲಿ ಸಿನಿಮಾ ಎಂಬ ಪ್ರಚಂಡ ಮಾಧ್ಯಮದ ಮೂಲಕ ಮಂಸೋರೆ ‘19.20.21’ ಚಿತ್ರದ ಮೂಲಕ ಪ್ರಜಾಪ್ರಭುತ್ವದ ರಕ್ಷಣೆಗೆ ನಿಂತಿದ್ದಾರೆ. ಇದೇ ರೀತಿಯ ಇನ್ನಷ್ಟು ಉತ್ತಮ ಸಿನಿಮಾಗಳನ್ನು ಮಂಸೋರೆ ಮಾಡಲಿ ಎಂದು ನಿರ್ದೇಶಕರಿಗೆ ಹಾಗೂ ಚಿತ್ರತಂಡಕ್ಕೆ ಶುಭ ಹಾರೈಸಿದ್ರು.

    ಚಿತ್ರದಲ್ಲಿ ರಂಗಭೂಮಿ ಕಲಾವಿದ ಶೃಂಗ ಬಿ. ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಬಾಲಾಜಿ ಮನೋಹರ್, ಸಂಪತ್, ಎಂ.ಡಿ ಪಲ್ಲವಿ, ವಿಶ್ವಕರ್ಣ, ಮಹದೇವ್ ಹಡಪದ್, ಉಗ್ರಂ ಸಂದೀಪ್ ಒಳಗೊಂಡ ಪ್ರತಿಭಾನ್ವಿತರ ತಾರಾಗಣ ಚಿತ್ರದಲ್ಲಿದೆ. ಶಿವು ಬಿ. ಕೆ. ಕುಮಾರ್ ಛಾಯಾಗ್ರಹಣ, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ ಚಿತ್ರಕ್ಕಿದ್ದು, ಬಿಂದು ಮಾಲಿನಿ ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಸುರೇಶ್ ಆರ್ಮುಗಂ ಸಂಕಲನ, ವೀರೇಂದ್ರ ಮಲ್ಲಣ್ಣ ಮತ್ತು ಅವಿನಾಶ್ ಜಿ ಸಂಭಾಷಣೆ, ಮಂಸೋರೆ ಮತ್ತು ವೀರೇಂದ್ರ ಮಲ್ಲಣ್ಣ ಚಿತ್ರಕಥೆ, ಕಿರಣ್ ಕಾವೇರಪ್ಪ ಸಾಹಿತ್ಯ ಚಿತ್ರಕ್ಕಿದೆ. ದೇವರಾಜ್ ಆರ್ ‘19.20.21’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜನವರಿ 27ಕ್ಕೆ ಮಂಸೋರೆ ನಿರ್ದೇಶನದ ‘19.20.21’ ಚಿತ್ರದ ಟ್ರೈಲರ್ ಬಿಡುಗಡೆ

    ಜನವರಿ 27ಕ್ಕೆ ಮಂಸೋರೆ ನಿರ್ದೇಶನದ ‘19.20.21’ ಚಿತ್ರದ ಟ್ರೈಲರ್ ಬಿಡುಗಡೆ

    ವಿಭಿನ್ನ ಶೈಲಿಯ ಸಿನಿಮಾ ಮೂಲಕ ಸಿನಿ ಪ್ರೇಕ್ಷಕರ ಮನಗೆದ್ದಿರುವ ರಾಷ್ಟ್ರ ಪ್ರಶಸ್ತಿ ವಿಜೇತ ಮಂಸೋರೆ (Mansore) ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ‘19.20.21’. ಟೈಟಲ್ ಮೂಲಕವೇ ಕ್ಯೂರಿಯಾಸಿಟಿ ಹುಟ್ಟಿಸಿರುವ ಈ ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು, ಟೀಸರ್ ಝಲಕ್ ಬಿಡುಗಡೆಯಾಗಿದ್ದು ಉತ್ತಮ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ.

    ‘19.20.21’ ಚಿತ್ರದ ಕ್ಯೂರಿಯಾಸಿಟಿ ಹೊತ್ತ ಟೀಸರ್ ಝಲಕ್ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ನಿರ್ದೇಶಕ ಮಂಸೋರೆ ಪ್ರೇಕ್ಷಕರಿಗೆ ಮತ್ತೊಂದು ಪ್ರಬಲವಾದ ವಿಚಾರವನ್ನು ತಮ್ಮದೇ ಆದ ಸಿನಿಮ್ಯಾಟಿಕ್ ಶೈಲಿಯಲ್ಲಿ ಹೇಳ ಹೊರಟಿದ್ದಾರೆ ಅನ್ನೋದಕ್ಕೆ ಟೀಸರ್ ಸಾಕ್ಷಿಯಾಗಿದೆ. ಪ್ರಾಮಿಸಿಂಗ್ ಆಗಿ ಮೂಡಿ ಬಂದಿರೋ ಟೀಸರ್ ಸಿನಿ ಪ್ರೇಕ್ಷಕರಿಂದಲೂ ಮೆಚ್ಚುಗೆಗೆ ಪಾತ್ರವಾಗಿದೆ. ಟೀಸರ್ ನೊಂದಿಗೆ ಟ್ರೇಲರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ರಿವೀಲ್ ಮಾಡಿದ್ದು ಇದೇ ತಿಂಗಳ 27ರಂದು ಟ್ರೇಲರ್ (trailer) ಬಿಡುಗಡೆಯಾಗುತ್ತಿದೆ.  ಇದನ್ನೂ ಓದಿ: ಪತಿ ಜೊತೆಗಿನ ರೊಮ್ಯಾಂಟಿಕ್ ಫೋಟೋ ಹಂಚಿಕೊಂಡ `ವಜ್ರಕಾಯ’ ನಟಿ ಶುಭ್ರ ಅಯ್ಯಪ್ಪ

    ನೈಜ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ಹೆಣೆದ ಕಥೆ ಚಿತ್ರದಲ್ಲಿದ್ದು, ಸೋಶಿಯಲ್ ಥ್ರಿಲ್ಲರ್ ಕಥಾಹಂದರವನ್ನು ಈ ಚಿತ್ರ ಒಳಗೊಂಡಿದೆ. ರಂಗಭೂಮಿ ಕಲಾವಿದ ಶೃಂಗ ಬಿ. ವಿ ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಉಳಿದಂತೆ ಬಾಲಾಜಿ ಮನೋಹರ್ (Balaji Manohar), ಸಂಪತ್, ಎಂ.ಡಿ ಪಲ್ಲವಿ (MD Pallavi), ಮಹದೇವ್ ಹಡಪದ್, ಉಗ್ರಂ ಸಂದೀಪ್ ಒಳಗೊಂಡ ಪ್ರತಿಭಾನ್ವಿತರ ತಾರಾಗಣ ಚಿತ್ರದಲ್ಲಿದೆ.

    19.20.21’ ಚಿತ್ರವನ್ನು ಯಲ್ಲಾಪುರ, ಧಾರವಾಡ, ಮಂಗಳೂರು, ಕುಂದಾಪುರದಲ್ಲಿ ಚಿತ್ರೀಕರಣ ಮಾಡಲಾಗಿದೆ. ಶಿವು ಬಿ. ಕೆ. ಕುಮಾರ್ ಛಾಯಾಗ್ರಹಣ, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ ಚಿತ್ರಕ್ಕಿದ್ದು, ಬಿಂದು ಮಾಲಿನಿ ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಸುರೇಶ್ ಆರ್ಮುಗಂ ಸಂಕಲನ, ವೀರೇಂದ್ರ ಮಲ್ಲಣ್ಣ ಮತ್ತು ಅವಿನಾಶ್ ಜಿ ಸಂಭಾಷಣೆ, ಮಂಸೋರೆ ಮತ್ತು ವೀರೇಂದ್ರ ಮಲ್ಲಣ್ಣ ಚಿತ್ರಕಥೆ, ಕಿರಣ್ ಕಾವೇರಪ್ಪ ಸಾಹಿತ್ಯ ಚಿತ್ರಕ್ಕಿದೆ. ದೇವರಾಜ್ ಆರ್ ‘19.20.21’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 19.20.21 ಸಿನಿಮಾ ಟೀಸರ್ ರಿಲೀಸ್ : ನಿರೀಕ್ಷೆ ಹೆಚ್ಚಿಸಿದ ನಿರ್ದೇಶಕ ಮಂಸೋರೆ

    19.20.21 ಸಿನಿಮಾ ಟೀಸರ್ ರಿಲೀಸ್ : ನಿರೀಕ್ಷೆ ಹೆಚ್ಚಿಸಿದ ನಿರ್ದೇಶಕ ಮಂಸೋರೆ

    ನಿನ್ನೆ ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಅವರ ’19.20.21’ ಹೆಸರಿನ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಸಮಾಜದ ಮತ್ತೊಂದು ಮುಖವನ್ನು ಅನಾವರಣಗೊಳಿಸಿರುವ ಈ ಟೀಸರ್ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡದಲ್ಲಿ ಮತ್ತೊಂದು ಭರವಸೆಯ ಸಿನಿಮಾ ಎಂದು ಹಲವರು ಹೊಗಳಿದ್ದಾರೆ. ಸಿನಿಮಾಟೋಗ್ರಫಿ, ಮ್ಯೂಸಿಕ್, ಪಾತ್ರಗಳ ಆಯ್ಕೆ ಹಾಗೂ ಚಿತ್ರಕಥೆಯ ತಾಕತ್ತಿನ ಬಗ್ಗೆ ಚರ್ಚೆಗಳು ನಡೆದಿವೆ.

    ನಾಗರೀಕ ಸಮಾಜದಲ್ಲಿನ ಅನಾಗರೀಕ ವರ್ತನೆಗೆ ಕನ್ನಡಿ ಹಿಡಿದಂತಿದೆ ಟೀಸರ್. ಶೋಷಿತ ಸಮುದಾಯದ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲು ಹೊರಟಿದ್ದಾರಾ ನಿರ್ದೇಶಕರು ಎನ್ನುವ ಪ್ರಶ್ನೆಯನ್ನೂ ಟೀಸರ್ ಮೂಡಿಸುತ್ತದೆ. ನಿರ್ದೇಶಕ ಮಂಸೋರೆ ಪ್ರತಿಭಾವಂತ ಮತ್ತು ಜೀವಪರ ನಿರ್ದೇಶಕರು. ಹಾಗಾಗಿ ಈವರೆಗೂ ಹೇಳದೇ ಇರುವಂತಹ ಘಟನೆಯನ್ನು ಈ ಸಿನಿಮಾಗಾಗಿ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

    75ನೇ ಸ್ವಾತಂತ್ರ ದಿನೋತ್ಸವ ಸಂದರ್ಭದಲ್ಲಿ ಚಿತ್ರದ ಪೋಸ್ಟರ್ ಅನ್ನು ರಿಲೀಸ್ ಮಾಡಿದ್ದರು ನಿರ್ದೇಶಕರು. ವ್ಯಕ್ತಿಯೊಬ್ಬರ ಬಾಯಿಗೆ ಬಟ್ಟೆ ಕಟ್ಟಿ, ಬೆನ್ನಿನಲ್ಲಿ ರಕ್ತ ಸುರಿಯುವಂತಹ ಆ ಪೋಸ್ಟರ್ ಅನೇಕ ವಿಷಯಗಳನ್ನು ಹೇಳುವಂತಿತ್ತು. 2018 ರಿಂದ 2022ರ ತನಕ ಯುಎಪಿಎ ಕಾಯ್ದೆ ಅಡಿಯಲ್ಲಿ ಬಂಧನಕ್ಕೆ ಒಳಗಾದ 4690ಜನರಲ್ಲಿ ಕೇವಲ 149 ಮಂದಿ ಮಾತ್ರ ಅಪರಾಧಿಗಳು ಎಂಬ ಮಾಹಿತಿಯನ್ನೂ ಅವರು ಹಂಚಿಕೊಂಡಿದ್ದರು. ಹೀಗಾಗಿ ಇದೊಂದು ವಿಶೇಷ ಸಿನಿಮಾ ಎನ್ನುವುದು ಖಾತರಿ ಆಗಿತ್ತು. ಇದನ್ನೂ ಓದಿ: ನಾಗತಿಹಳ್ಳಿ ಚಂದ್ರಶೇಖರ್ ಚಿತ್ರಕ್ಕೆ ನಟಿ ಶಾನ್ವಿ ಶ್ರೀವಾಸ್ತವ್ ನಾಯಕಿ

    ಸಿನಿಮಾದ ತಾರಾ ಬಳಗವೇ ವಿಶೇಷವಾಗಿದೆ ಖ್ಯಾತ ಗಾಯಕಿ ಎಂ.ಡಿ.ಪಲ್ಲವಿ, ಬಾಲಾಜಿ ಮನೋಹರ್, ಕೃಷ್ಣ ಹೆಬ್ಬಾಳೆ, ಸಂಪತ್ ಮೈತ್ರೇಯಾ, ಶೃಂಗ ಸೇರಿದಂತೆ ಪ್ರತಿಭಾವಂತ ಕಲಾವಿದರ ದಂಡೇ ಈ ಸಿನಿಮಾದಲ್ಲಿದೆ. ನಾತಿಚರಾಮಿ ಸಿನಿಮಾ ನಂತರ ಮತ್ತೆ ಈ ಚಿತ್ರಕ್ಕೆ ಬಿಂದು ಮಾಲಿನ ಸಂಗೀತ ನೀಡಿದ್ದಾರೆ. ನಾತಿಚರಾಮಿ ಚಿತ್ರಕ್ಕಾಗಿ ಬಿಂದು ಮಾಲಿನಿ ರಾಷ್ಟ್ರ ಪ್ರಶಸ್ತಿ ಕೂಡ ಪಡೆದಿದ್ದರು.

    ನಿರ್ದೇಶಕರ ಜೊತೆಗೂಡಿ ವೀರೇಂದ್ರ ಮಲ್ಲಣ್ಣ ಚಿತ್ರಕ್ಕೆ ಚಿತ್ರಕಥೆ ಬರೆದಿದ್ದು, ರೋಣದ ಬಕ್ಕೇಶ್ ಅವರ ಹಿನ್ನೆಲೆ ಸಂಗೀತ ವಿದೆ. ಶಿವು ಕುಮಾರ್ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನದಲ್ಲಿ ಈ ಸಿನಿಮಾ ಮೂಡಿ ಬಂದಿದೆ. ದೇವರಾಜ್ ಆರ್ ನಿರ್ಮಾಪಕರು.  ಈಗಾಗಲೇ ಬಹುತೇಕ ಶೂಟಿಂಗ್ ಕೂಡ ಮುಗಿದಿದ್ದು, ಬಿಡುಗಡೆಗೆ ಸಿದ‍್ಧವಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಾಳೆ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಹೊಸ ಸಿನಿಮಾದ ಟೀಸರ್ ರಿಲೀಸ್

    ನಾಳೆ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಹೊಸ ಸಿನಿಮಾದ ಟೀಸರ್ ರಿಲೀಸ್

    ನ್ನಡ ಸಿನಿಮಾ ರಂಗದ ಪ್ರತಿಭಾವಂತ ನಿರ್ದೇಶಕ, ರಾಷ್ಟ್ರ ಪ್ರಶಸ್ತಿ ಪಡೆದ ಮಂಸೋರೆ ಇದೀಗ ಹೊಸ ಸಿನಿಮಾವೊಂದನ್ನು ನಿರ್ದೇಶನ ಮಾಡಿದ್ದಾರೆ. 19.20.21 ಹೆಸರಿನಲ್ಲಿ ಮೂಡಿ ಬಂದಿರುವ ಈ ಚಿತ್ರದ ಟೀಸರ್ ನಾಳೆ ಸಂಜೆ 6 ಗಂಟೆಗೆ ಲಹರಿ ಮ್ಯೂಸಿಕ್ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಆಗುತ್ತಿದೆ. ಟೈಟಲ್ ನಿಂದಾಗಿಯೇ ಸಖತ್ ಕುತೂಹಲ ಮೂಡಿಸಿರುವ ಈ ಟೀಸರ್ ನಲ್ಲಿ ಹತ್ತು ಹಲವು ಚರ್ಚಿಸಬೇಕಾದ ವಿಷಯಗಳು ಇರಲಿವೆ ಎನ್ನಲಾಗುತ್ತಿದೆ.

    75ನೇ ಸ್ವಾತಂತ್ರ ದಿನೋತ್ಸವ ಸಂದರ್ಭದಲ್ಲಿ ಚಿತ್ರದ ಪೋಸ್ಟರ್ ಅನ್ನು ರಿಲೀಸ್ ಮಾಡಿದ್ದರು ನಿರ್ದೇಶಕರು. ವ್ಯಕ್ತಿಯೊಬ್ಬರ ಬಾಯಿಗೆ ಬಟ್ಟೆ ಕಟ್ಟಿ, ಬೆನ್ನಿನಲ್ಲಿ ರಕ್ತ ಸುರಿಯುವಂತಹ ಆ ಪೋಸ್ಟರ್ ಅನೇಕ ವಿಷಯಗಳನ್ನು ಹೇಳುವಂತಿತ್ತು. 2018 ರಿಂದ 2022ರ ತನಕ ಯುಎಪಿಎ ಕಾಯ್ದೆ ಅಡಿಯಲ್ಲಿ ಬಂಧನಕ್ಕೆ ಒಳಗಾದ 4690ಜನರಲ್ಲಿ ಕೇವಲ 149 ಮಂದಿ ಮಾತ್ರ ಅಪರಾಧಿಗಳು ಎಂಬ ಮಾಹಿತಿಯನ್ನೂ ಅವರು ಹಂಚಿಕೊಂಡಿದ್ದರು. ಹೀಗಾಗಿ ಇದೊಂದು ವಿಶೇಷ ಸಿನಿಮಾ ಎನ್ನುವುದು ಖಾತರಿ ಆಗಿತ್ತು.

    ಸಿನಿಮಾದ ತಾರಾ ಬಳಗವೇ ವಿಶೇಷವಾಗಿದೆ ಖ್ಯಾತ ಗಾಯಕಿ ಎಂ.ಡಿ.ಪಲ್ಲವಿ, ಬಾಲಾಜಿ ಮನೋಹರ್, ಕೃಷ್ಣ ಹೆಬ್ಬಾಳೆ, ಸಂಪತ್ ಮೈತ್ರೇಯಾ, ಶೃಂಗ ಸೇರಿದಂತೆ ಪ್ರತಿಭಾವಂತ ಕಲಾವಿದರ ದಂಡೇ ಈ ಸಿನಿಮಾದಲ್ಲಿದೆ. ನಾತಿಚರಾಮಿ ಸಿನಿಮಾ ನಂತರ ಮತ್ತೆ ಈ ಚಿತ್ರಕ್ಕೆ ಬಿಂದು ಮಾಲಿನ ಸಂಗೀತ ನೀಡಿದ್ದಾರೆ. ನಾತಿಚರಾಮಿ ಚಿತ್ರಕ್ಕಾಗಿ ಬಿಂದು ಮಾಲಿನಿ ರಾಷ್ಟ್ರ ಪ್ರಶಸ್ತಿ ಕೂಡ ಪಡೆದಿದ್ದರು. ಇದನ್ನೂ ಓದಿ: ವಿಜಯ್ ಕಿರಗಂದೂರು ಸೇರಿದಂತೆ ಮೂವರಿಗೆ ವಿಶೇಷ ಪ್ರಶಸ್ತಿ

    ನಿರ್ದೇಶಕರ ಜೊತೆಗೂಡಿ ವೀರೇಂದ್ರ ಮಲ್ಲಣ್ಣ ಚಿತ್ರಕ್ಕೆ ಚಿತ್ರಕಥೆ ಬರೆದಿದ್ದು, ರೋಣದ ಬಕ್ಕೇಶ್ ಅವರ ಹಿನ್ನೆಲೆ ಸಂಗೀತ ವಿದೆ. ಶಿವು ಕುಮಾರ್ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನದಲ್ಲಿ ಈ ಸಿನಿಮಾ ಮೂಡಿ ಬಂದಿದೆ. ದೇವರಾಜ್ ಆರ್ ನಿರ್ಮಾಪಕರು.  ಈಗಾಗಲೇ ಬಹುತೇಕ ಶೂಟಿಂಗ್ ಕೂಡ ಮುಗಿದಿದ್ದು, ಬಿಡುಗಡೆಗೆ ಸಿದ‍್ಧವಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಚೆನ್ನೈನ ಸೈಕ್ಲೋನ್ ಹೊಡೆತಕ್ಕೆ ಸಿಲುಕಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ

    ಚೆನ್ನೈನ ಸೈಕ್ಲೋನ್ ಹೊಡೆತಕ್ಕೆ ಸಿಲುಕಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ

    ಕನ್ನಡದ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಸೈಕ್ಲೋನ್ ಹೊಡೆತಕ್ಕೆ ಸಿಕ್ಕು ತತ್ತರಿಸಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ತಾವು ಎದುರಿಸಿದ ಸೈಕ್ಲೋನ್ ರಾಡಾರ್ ಸಿನಿಮಾದ ಸೈಕ್ಲೋನ್ ಸುತ್ತುವ ಮಧ್ಯ ಭಾಗದಲ್ಲಿ ಇದ್ದೇವೆ ಎನ್ನುವಂತೆ ಭಾಸವಾಯಿತು ಎಂದು ಅವರು ಬರೆದುಕೊಂಡಿದ್ದಾರೆ. ಜೊತೆಗೆ ಸಿನಿಮಾದ ನಿರ್ಮಾಪಕ ದೇವರಾಜ್.ಆರ್ ಕೂಡ ಇದ್ದರು ಎಂದು ಹೇಳಿದ್ದಾರೆ.

    ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿಅವರು, ‘ತುರ್ತು ಕೆಲಸದ ಮೇಲೆ ಚೆನ್ನೈಗೆ ಬಂದಿದ್ದೆ, ವಾಪಾಸ್ಸು ಬರಲು ಟಿಕೆಟ್ ಬುಕ್ ಆಗಿದ್ದ ವಿಮಾನ ರದ್ದಾದ ಕಾರಣ ನಾನು ನಮ್ಮ ನಿರ್ಮಾಪಕರು, ರಸ್ತೆಯ ಮೂಲಕ ಬೆಂಗಳೂರು ತಲುಪಲು ನಿರ್ಧರಿಸಿ ಚೆನ್ನೈ ಸಿಟಿಯಿಂದ ಒಂದು ಐವತ್ತು ಕಿಮೀ ಬಂದು ರಸ್ತೆ ಸಾಗಲು ಸಹ ತ್ರಾಸದಾಯಕವಾದ ಸೈಕ್ಲೋನ್ ನೋಡುತ್ತಾ ಕೂತಿರುವ ಕ್ಷಣ. ರಾಡಾರ್ ಚಿತ್ರದಲ್ಲಿ ಸೈಕ್ಲೋನ್ ಸುತ್ತುವ ಮಧ್ಯ ಭಾಗದಲ್ಲಿ ನಾವಿದ್ದೇವೆ ಎಂದು ತೋರಿಸುತ್ತಿದೆ’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಹುಡುಗಿಯ ಜೊತೆ ಸಲ್ಮಾನ್ ಖಾನ್‌ಗೆ ಪ್ಯಾರ್

    ಬರಹದ ಜೊತೆಗೆ ವಿಡಿಯೋ ಪೋಸ್ಟ್ ಮಾಡಿದ್ದು, ಅದನ್ನು ನೋಡಿದ ಹಲವರು ಇಂತಹ ಸಾಹಸವನ್ನು ಇನ್ನೊಮ್ಮೆ ಮಾಡಬೇಡಿ ಎಂದು ಪ್ರೀತಿಯಿಂದ ಗದರಿದ್ದಾರೆ. ಆ ಸೈಕ್ಲೋನ್ ನಿಂದ ಪಾರಾಗಿ ಬಂದಿರುವ ಮಂಸೋರೆ ಮತ್ತು ನಿರ್ಮಾಪಕರು ಸುರಕ್ಷಿತವಾಗಿ ಮನೆ ತಲುಪಿದ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ವಿಡಿಯೋ ವೀಕ್ಷಿಸಿದ ಹಲವರು ಆತಂಕವನ್ನು ವ್ಯಕ್ತಪಡಿಸುವ ಮೂಲಕ ಸುರಕ್ಷಿತವಾಗಿ ಮನೆ ತಲುಪಿ ಎಂದು ಹಾರೈಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಮಂಸೋರೆ ನಿರ್ದೇಶನದ ‘19.20.21’ ತೆರೆಗೆ ಬರಲು ಸಿದ್ಧ: ಡೇಟ್ ಅನೌನ್ಸ್ ಬಾಕಿ

    ಮಂಸೋರೆ ನಿರ್ದೇಶನದ ‘19.20.21’ ತೆರೆಗೆ ಬರಲು ಸಿದ್ಧ: ಡೇಟ್ ಅನೌನ್ಸ್ ಬಾಕಿ

    ‘ಹರಿವು’, ‘ನಾತಿಚರಾಮಿ’, ‘ಆಕ್ಟ್ 1978’ ಹೀಗೆ ತಮ್ಮ ವಿಭಿನ್ನ ಸಬ್ಜೆಕ್ಟ್ ಸಿನಿಮಾಗಳ ಮೂಲಕ ಕನ್ನಡ ಸಿನಿ ಪ್ರೇಕ್ಷಕರಿಗೆ ಮನರಂಜನೆ ನೀಡುತ್ತ ಬಂದಿರುವ ರಾಷ್ಟ್ರಪಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ. ವಿಶೇಷವಾದ, ಉತ್ತಮ ಸಂದೇಶವುಳ್ಳ ಕಥೆಗಳ ಮೂಲಕ ಪ್ರೇಕ್ಷಕರನ್ನು ಎದುರುಗೊಳ್ಳುವ ಮಂಸೋರೆ ಬಹು ನಿರೀಕ್ಷಿತ ಸಿನಿಮಾ ‘19.20.21’. ಶೀರ್ಷಿಕೆ ಮೂಲಕವೇ ಸಾಕಷ್ಟು ಕ್ಯೂರಿಯಾಸಿಟಿಯನ್ನು ಮೂಡಿಸಿರುವ ಈ ಸಿನಿಮಾ ಬಿಡುಗಡೆಯ ಬಾಗಿಲಿಗೆ ಬಂದು ನಿಂತಿದೆ.

    ಹೊಸ ಪೋಸ್ಟರ್ ಗಳ ಮೂಲಕ ಗಮನ ಸೆಳೆದಿರುವ ‘19.20.21’ ಪ್ರೇಕ್ಷಕರಲ್ಲಿ ಕುತೂಹಲವನ್ನೂ ಹುಟ್ಟು ಹಾಕಿದೆ. ಮಂಸೋರೆ (Mansore) ಅವರ ಹಿಂದಿನ ಸಿನಿಮಾಗಳಂತೆ ಈ ಚಿತ್ರ ಕೂಡ ಭಿನ್ನವಾಗಿರುತ್ತೆ ಅನ್ನೋದಕ್ಕೆ ಚಿತ್ರದ ಪೋಸ್ಟರ್ ಗಳು ಸಾಕ್ಷಿಯಾಗಿವೆ. ಪ್ರತಿ ಪೋಸ್ಟರ್ ಗಳು ಈ ಚಿತ್ರದ ಮೂಲಕ ನಿರ್ದೇಶಕರು ಸಮಾಜಕ್ಕೆ ಹೊಸದೊಂದು ಗಟ್ಟಿತನದ ಸಂದೇಶವನ್ನು ಹೇಳ ಹೊರಟಿದ್ದಾರೆ ಎನ್ನುವ ಸುಳಿವನ್ನು ನೀಡಿದೆ. ನೈಜ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ಹೆಣೆದ ಕಥೆ ಚಿತ್ರದಲ್ಲಿದ್ದು, ಸೋಶಿಯಲ್ ಥ್ರಿಲ್ಲರ್ ಕಥಾಹಂದರ ಒಳಗೊಂಡಿದೆ. ಚಿತ್ರೀಕರಣ ಮುಗಿಸಿ ಅಂತಿಮ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದೆ. ಸಿನಿಮಾ ಬಿಡುಗಡೆಗೂ ತಯಾರಿ ನಡೆಸುತ್ತಿದ್ದು ಶೀಘ್ರದಲ್ಲೇ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಲಿದೆ 19.20.21 ಚಿತ್ರತಂಡ. ಇದನ್ನೂ ಓದಿ:ಹಿಂದಿಯಲ್ಲಿ 50 ಕೋಟಿ ಗಳಿಸಿದ ‘ಕಾಂತಾರ’ ಸಿನಿಮಾ

    ರಂಗಭೂಮಿ ಕಲಾವಿದರರಾದ ಶೃಂಗ ಬಿ ವಿ ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಬಾಲಾಜಿ ಮನೋಹರ್, ಸಂಪತ್, ಎಂ.ಡಿ ಪಲ್ಲವಿ, ಮಹದೇವ್ ಹಡಪತ್, ಉಗ್ರಂ ಸಂದೀಪ್ ಒಳಗೊಂಡ ಪ್ರತಿಭಾನ್ವಿತರ ತಾರಾಗಣ ಚಿತ್ರದಲ್ಲಿದೆ. ಯಲ್ಲಾಪುರ, ಧಾರವಾಡ, ಮಂಗಳೂರು, ಕುಂದಾಪುರ ಸೇರಿದಂತೆ ಹಲವು ಕಡೆ ಚಿತ್ರವನ್ನು ಸೆರೆ ಹಿಡಿಯಲಾಗಿದೆ. ಶಿವು ಬಿ ಕೆ ಕುಮಾರ್ ಛಾಯಾಗ್ರಹಣ, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ, ಬಿಂದು ಮಾಲಿನಿ ಸಂಗೀತ ನಿರ್ದೇಶನ, ಸುರೇಶ್ ಆರ್ಮುಗಂ ಸಂಕಲನ, ವೀರೇಂದ್ರ ಮಲ್ಲಣ್ಣ (Virendra Mallanna) ಮತ್ತು ಅವಿನಾಶ್ ಜಿ  ಸಂಭಾಷಣೆ, ಮಂಸೋರೆ ಮತ್ತು ವೀರೇಂದ್ರ ಮಲ್ಲಣ್ಣ ಚಿತ್ರಕತೆ, ಕಿರಣ್ ಕಾವೇರಪ್ಪ ಸಾಹಿತ್ಯ ಚಿತ್ರಕ್ಕಿದೆ. ದೇವರಾಜ್ ಆರ್ (Devaraj.R) 19.20.21 ಚಿತ್ರವನ್ನು ನಿರ್ಮಾಣ ಮಾಡಿದ್ದು ಶ್ರೀಘ್ರದಲ್ಲೇ ಪ್ರೇಕ್ಷರನ್ನು ರಂಜಿಸಲು ಸಿನಿಮಾ ತೆರೆಗೆ ಬರ್ತಿದೆ.

    Live Tv
    [brid partner=56869869 player=32851 video=960834 autoplay=true]